Author: kannadanewsnow07

ಸಾಮಾನ್ಯ ಜನರಿಗೆ ಹತ್ತು ಬಾರಿ ಪ್ರಯತ್ನಿಸಿದರೆ ಒಮ್ಮೆ ಯಶಸ್ಸು ಸಿಗುತ್ತದೆ. ಜೀವನದಲ್ಲಿ ಬಹಳ ಬೇಗ ಪ್ರಗತಿ ಹೊಂದಲು. ಜೀವನದಲ್ಲಿ ಸೋಲು ಇರಬಾರದು. ಖ್ಯಾತಿಯ ಉತ್ತುಂಗಕ್ಕೆ ಹೋಗಲು. ಫೇಮಸ್ ಆಗಬೇಕು ಎನ್ನುವವರು ಹತ್ತು ಬಾರಿ ಪ್ರಯತ್ನಿಸಿದರೆ ಎಂಟು ಬಾರಿಯಾದರೂ ಯಶಸ್ವಿಯಾಗಬೇಕು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ…

Read More

ಮಡಿಕೇರಿ :-ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ (ಸಿಎಆರ್ ಮತ್ತು ಡಿಎಆರ್) (ಪುರುಷ ಮತ್ತು ತೃತೀಯ ಲಿಂಗ ಪುರುಷ) 3064 ಹುದ್ದೆಗಳಿಗೆ ಲಿಖಿತ ಪರೀಕ್ಷೆಯು ಜನವರಿ, 28 ರಂದು ಬೆಳಗ್ಗೆ 11 ಗಂಟೆಯಿಂದ 12.30 ಗಂಟೆ ವರೆಗೆ ರಾಜ್ಯಾದ್ಯಂತ ನಡೆಯಲಿದೆ. ಆದ್ದರಿಂದ ಈ ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಕರೆಪತ್ರದ ಬಗ್ಗೆ ಮುಂಬರುವ ದಿನಗಳಲ್ಲಿ ಎಸ್‍ಎಂಎಸ್ ಮೂಲಕ ಮಾಹಿತಿಯನ್ನು ನೀಡಲಾಗುವುದು ಹಾಗೂ ಕರೆಪತ್ರದ ಲಿಂಕ್ ಅನ್ನು ಸಹ ಕಳುಹಿಸಲಾಗುವುದು. ಅಭ್ಯರ್ಥಿಗಳು ಕರೆಪತ್ರವನ್ನು ಡೌನ್‍ಲೋಡ್ ಮಾಡಿಕೊಂಡು ನಿಗದಿಪಡಿಸಿದ ದಿನಾಂಕದಂದು ಲಿಖಿತ ಪರೀಕ್ಷೆಗೆ ಹಾಜರಾಗುವಂತೆ ಬೆಂಗಳೂರು ಡೈರೆಕ್ಟರ್ ಜನರಲ್ ಆಫ್ ಪೊಲೀಸ್, ಎ.ಪಿ.ಸಿ. ನೇಮಕಾತಿ ಸಮಿತಿಯ ಡಿಐಜಿಪಿ ನೇಮಕಾತಿ ಹಾಗೂ ಸಮನ್ವಯಾಧಿಕಾರಿ ಯಡಾ ಮಾರ್ಟನ್ ಮಾರ್ಬನ್ಯಾಂಗ್ ಅವರು ತಿಳಿಸಿದ್ದಾರೆ.

Read More

ಬೆಂಗಳೂರು: ಜನವರಿ 18 ರಿಂದ 28 ರವರೆಗೆ ವಿಶ್ವ ಗುರು ಬಸವಣ್ಣ ಮತ್ತು ವಚನ ಸಾಹಿತ್ಯಾಧಾರಿತ ಗಣರಾಜ್ಯೋತ್ಸವ 215ನೇ ಫಲಪುಪ್ಪ ಪ್ರದಶನವನ್ನು ಲಾಲ್‍ಬಾಗ್‍ನ ಗಾಜಿನಮನೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಕಾರ್ಯದರ್ಶಿಗಳಾದ ಡಾ. ಶಮ್ಲಾ ಇಕ್ಫಾಲ್ ಅವರು ತಿಳಿಸಿದರು. ಮಂಗಳವಾರ  ತೋಟಗಾರಿಕೆ ಇಲಾಖೆಯ ಮಾಹಿತಿ ಕೇಂದ್ರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಾರ್ಯಕ್ರಮವನ್ನು ಲಾಲ್‍ಬಾಗ್‍ನ ಗಾಜಿನ ಮನೆಯಲ್ಲಿ ಜನವರಿ 18 ರಂದು ಗುರುವಾರ ಸಂಜೆ 6.00 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉಪಮುಖ್ಯಮಂತ್ರಿಗಳು, ಬೃಹತ್ ಮತ್ತು ಮಧ್ಯಮ ನೀರಾವರಿ ಹಾಗೂ ಬೆಂಗಳೂರು ನಗರ ಅಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್, ಗಣಿ ಮತ್ತು ಭೂವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ, ಖ್ಯಾತ ವಿದ್ವಾಂಸರಾದ ನಾಡೋಜ ಡಾ.ಗೊ.ರು.ಚನ್ನಬಸಪ್ಪ ಅವರು ಆಗಮಿಸಲಿದ್ದಾರೆ. ಅಧ್ಯಕ್ಷತೆಯನ್ನು ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಉದಯ್ ಬಿ. ಗರುಡಾಚಾರ್ ಅವರು ವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು…

Read More

ಬೆಂಗಳೂರು: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಜನವರಿ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ ಕಾರ್ಡ್‍ಗೆ 21 ಕೆ.ಜಿ ಅಕ್ಕಿ ಮತ್ತು 14 ರಾಗಿ, ಆದ್ಯತಾ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆÉ 3 ಕೆ.ಜಿ ಅಕ್ಕಿ ಮತ್ತು ಪ್ರತಿ ಸದಸ್ಯರಿಗೆ 2ಕೆ.ಜಿ ರಾಗಿ ಉಚಿತವಾಗಿ ವಿತರಿಸಲಾಗುತ್ತದೆ. ಹಾಗೂ ಪ್ರತಿ ಕೆ.ಜಿ ಗೆ ರೂ.15ರಂತೆ ಒಪ್ಪಿಗೆ ನೀಡಿದ ಎ.ಪಿ.ಎಲ್ ಏಕ ಸದಸ್ಯ ಪಡಿತರ ಚೀಟಿದಾರರಿಗೆ 5 ಕೆ.ಜಿ, ಎರಡು ಮತ್ತು ಹೆಚ್ಚಿನ ಸದಸ್ಯರನ್ನು ಹೊಂದಿರುವವರಿಗೆ 10 ಕೆ.ಜಿ ಅಕ್ಕಿಯನ್ನು ವಿತರಿಸಲಾಗುವುದು. ಸರ್ಕಾರದ ಗ್ಯಾರಂಟಿ ಯೋಜನೆಯಡಿ 5 ಕೆ.ಜಿ ಅಕ್ಕಿ ಬದಲಾಗಿ ಪಡಿತರ ಚೀಟಿದಾರರಿಗೆ ನೇರ ನಗದು ವರ್ಗಾವಣೆ ಮಾಡುತ್ತಿದ್ದು, ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಹರಿಸಿಕೊಳ್ಳಬಹುದೆಂದು ತ

Read More

ಬೆಂಗಳೂರು: ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯದ ಪ್ರಕರಣಗಳಿಗೆ ಸಂಪೂರ್ಣ ಕಡಿವಾಣ ಹಾಕಲು ಸೂಕ್ತ ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ಸಂಬಂಧಪಟ್ಟ ಉಪ ಪೊಲೀಸ್ ಆಯುಕ್ತರುಗಳನ್ನೇ ವೈಫಲ್ಯಕ್ಕೆ ಹೊಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಗರದ ನೃಪತುಂಗ ರಸ್ತೆಯಲ್ಲಿರುವ ರಾಜ್ಯ ಪೆÇಲೀಸ್ ಮಹಾನಿರ್ದೇಶಕರ ಪ್ರಧಾನ ಕಚೇರಿಯಲ್ಲಿ ನಡೆದ ಹಿರಿಯ ಪೆÇಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಹಿರಿಯ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಶೋಷಣೆಗೆ ಒಳಗಾದವರಿಗೆ ವ್ಯವಸ್ಥೆ ಮೇಲೆ ನಂಬಿಕೆ ಬರಬೇಕಾದರೆ ದೌರ್ಜನ್ಯ ಪ್ರಕರಣಗಳ ತನಿಖೆಯ ಗುಣಮಟ್ಡ ಹೆಚ್ಚಾಗಬೇಕು. ವೈಜ್ಞಾನಿಕವಾಗಿ ಸಮರ್ಥ ಆರೋಪ ಪಟ್ಟಿ ಸಲ್ಲಿಕೆಯಾಗಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು. ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣದಲ್ಲಿ ರಾಜ್ಯದ ಸಾಧನೆ ತೃಪ್ತಿಕರವಾಗಿಲ್ಲ. ಈ ಬಗ್ಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು. ಪೆÇಲೀಸರಿಗೆ ನಮ್ಮ ಸರ್ಕಾರ ಸಂಪೂರ್ಣ ಸಹಕಾರ ನೀಡುತ್ತದೆ. ಪೆÇಲೀಸರ ಕೆಲಸದಲ್ಲಿ ಮೂಗು ತೂರಿಸಬಾರದು ಎನ್ನುವುದು ನನ್ನ ಬದ್ಧತೆ. ಆದರೆ ನಾವು ಬೆಂಬಲವನ್ನು ಕೊಟ್ಟಿದ್ದು ಅದನ್ನು ದುರುಪಯೋಗ ಪಡಿಸಿಕೊಳ್ಳದೇ ಜನರಿಗೆ ಅನುಕೂಲವಾಗುವ…

Read More

ಬೆಂಗಳೂರು: ರಾಜ್ಯದಲ್ಲಿ ಕಳೆದ ಆರು ತಿಂಗಳ ಅವಧಿಯಲ್ಲಿ ಪೊಲೀಸರು 27 ಕೋಟಿ ರೂ. ಮೌಲ್ಯದ 4,484 ಕೆ.ಜಿ ಗಾಂಜಾ ಹಾಗೂ 23 ಕೆಜಿ ರಾಸಾಯನಿಕ ಪದಾರ್ಥಗಳ ಮಾದಕ ವಸ್ತುಗಳನ್ನು ವಶÀಪಡಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಮಂಗಳವಾರ  ಪೊಲೀಸ್ ಪ್ರಧಾನ ಕಚೇರಿಯ ಸಮ್ಮೇಳನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶದ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ವಶಪಡಿಸಿಕೊಂಡಿರುವ ಮಾದಕ ವಸ್ತುಗಳನ್ನು ಫೆಬ್ರವರಿ ಮಾಹೆಯ ಮೊದಲ ವಾರದಲ್ಲಿ ನಾಶಮಾಡಲು ಪೊಲೀಸ್ ಇಲಾಖೆಗೆ ಸರ್ಕಾರ ಪರವಾನಗಿ ನೀಡಿದೆ. ಯುವಕ ಯುವತಿಯರು ಮಾದಕ ವ್ಯಸನಿಗಳಾಗಿ ಅವರ ಭವಿಷ್ಯವನ್ನೇ ಹಾಳು ಮಾಡಿಕೊಳ್ಳುತ್ತಿರುವುದರಿಂದ ಕರ್ನಾಟಕ ರಾಜ್ಯವನ್ನು ಮಾದಕಮುಕ್ತ ರಾಜ್ಯವನ್ನಾಗಿಸಲು ಕಟ್ಟು ನಿಟ್ಟಿನ ಕ್ರಮಕೈಗೊಳ್ಳುವಂತೆ ಇಂದು ಹಮ್ಮಿಕೊಂಡಿದ್ದ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶದಲ್ಲಿ ಸೂಚಿಸಲಾಗಿದೆ ಎಂದರು. ರಾಜ್ಯದಲ್ಲಿ ಕಾನೂನಿನ ಸುವ್ಯವಸ್ಥೆ ಚೆನ್ನಾಗಿರಬೇಕು. ಕಾನೂನಿನ ಸುವ್ಯವಸ್ಥೆ ಚೆನ್ನಾಗಿದ್ದರೆ ರಾಜ್ಯದ ಅಭಿವೃದ್ಧಿಯಾಗುತ್ತದೆ. ಕಾನೂನು ಸುವ್ಯವಸ್ಥೆಗೂ, ಬಂಡವಾಳ ಹೂಡಿಕೆಗೂ ಸಂಬಂಧವಿದೆ. ಕಾನೂನು ಸುವ್ಯವಸ್ಥೆ ಚೆನ್ನಾಗಿರುವ…

Read More

ಬೆಂಗಳೂರು: 7 ನೇ ವೇತನ ಆಯೋಗದ ಅಂತಿಮ ವರದಿ ಬಂದ ನಂತರ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಅವರ ನೇತೃತ್ವದ ನಿಯೋಗವು ಇಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಸಂದರ್ಭದಲ್ಲಿ ಅವರು ಮಾತನಾಡಿದರು. ಏಳನೇ ವೇತನ ಆಯೋಗ ರಚನೆಯಾಗಿ 12 ತಿಂಗಳಾಗಿದೆ. ಮಾರ್ಚ್ ವರೆಗೆ ಕಾಲಾವಧಿ ವಿಸ್ತರಣೆ ಯಾಗಿದ್ದು, ಚುನಾವಣಾ ನೀತಿ ಸಂಹಿತೆ ಘೋಷಣೆಯಾಗುವ ಮೊದಲೇ ವೇತನ ಪರಿಷ್ಕರಣೆ ಮಾಡಿ ಘೋಷಣೆ ಮಾಡುವಂತೆ ನಿಯೋಗ ಮನವಿ ಮಾಡಿತು. ಹೊಸ ಪಿಂಚಣಿ ಯೋಜನೆಯ ವ್ಯಾಪ್ತಿಯಲ್ಲಿದ್ದ 11366 ಜನರಿಗೆ ಹಳೆ ಪಿಂಚಣಿ ಯೋಜನೆಗೆ ಸೇರ್ಪಡೆ ಗೊಳಿಸಲಾಗಿದೆ. ಉಳಿದವರನ್ನೂ ಹಳೆ ಪಿಂಚಣಿ ಯೋಜನೆಗೆ ವ್ಯಾಪ್ತಿಗೆ ಸೇರಿಸಿ, ಪಿಂಚಣಿಗೆ ನೀಡುತ್ತಿರುವ ಕೊಡುಗೆಯನ್ನು ನಿಲ್ಲಿಸಲು ಆದೇಶಿಸಲು ಕೋರಿದರು. ತೀವ್ರತರವಾದ 7 ಕಾಯಿಲೆಗಳಿಗೆ ಚಿಕಿತ್ಸೆ ಒದಗಿಸುವ ಜ್ಯೋತಿ ಸಂಜೀವಿನಿ ಆರೋಗ್ಯ ಯೋಜನೆಗೆ ಚಾಲನೆ ನೀಡಲಾಗಿತ್ತು. ಸರ್ಕಾರಿ ನೌಕರರ…

Read More

ರಾಯಚೂರು : ಒಂದು ವಾರದಲ್ಲಿ ಬರಪರಿಹಾರದ ಮೊದಲ ಕಂತಿನ ಹಣ ಪಾವತಿ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದರು. ಅವರು ಬುಧವಾರ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು, ಇದೇ ವೇಳೆ ಅವರು ಮಾತನಾಡಿ, ಹಿಂದೆ ಬರಪರಿಹಾರ, ಅತಿವೃಷ್ಟಿ ಪರಿಹಾರ ನೀಡುವಲ್ಲಿ ಹಲವು ನ್ಯೂನ್ಯತೆಗಳಿದ್ದವು. ಎಷ್ಟೋ ಜನ ಬೆಳೆಯನ್ನೇ ಬೆಳೆಯದಿದ್ದರೂ ಅವರಿಗೂ ಪರಿಹಾರ ಹೋಗುತ್ತಿತ್ತು. ಇದರಿಂದ ಬೆಳೆ ಹಾನಿಯಾದವರಿಗೆ ಪರಿಹಾರ ಸಿಗುತ್ತಿರಲಿಲ್ಲ ಅಂತ ತಿಳಿಸಿದರು. ಇನ್ನೂ ಬೆಳೆ ಸಮೀಕ್ಷೆಯನ್ನು ಶೀಘ್ರದಲ್ಲಿ ಮಾಡಿದ್ದು, ಈಗ ಎಲ್ಲಾ ಕೆಲಸ ಮುಗಿದಿದ್ದು, ಸುಮಾರು ಹನ್ನೆರಡು ಲ ಮಂದಿಗೆ ಹಣ ವರ್ಗಾವಣೆ ಮಾಡುವುದಕ್ಕೆ ಆರ್‌ಬಿಐಗೆ ಕಳುಹಿಸಿಕೊಡಲಾಗುವುದು ಅಂತ ತಿಳಿಸಿದ ಅವರು,ಕೇಂದ್ರ ಸರ್ಕಾರದಿಂದ ಇನ್ನೂ ಕೂಡ ಹಣ ಬಂದಿಲ್ಲ, ಸಿಎಂ ಹಣಕ್ಕಾಗಿ ಕಾಯದೇ ರೈತರಿಗೆ ಹಣ ನೀಡುವುದಕ್ಕೆ ತೀರ್ಮಾನ ಮಾಡಿದ್ದಾರೆ. ಕೇಂದ್ರ ಸರ್ಕಾರಕ್ಕೆ ಕೂಡ ಹಣಕ್ಕಾಗಿ ಮನವಿ ಮಾಡಲಾಗಿದೆ ಅಂತ ತಿಳಿಸಿದರು.

Read More

ಬೆಂಗಳೂರು : 23-01-2024 ರಂದು ನಡೆಯುವ ಪೊಲೀಸ್ ಉಪ ನಿರೀಕ್ಷಕರ ಹುದ್ದೆ- 2024 (PSI-2024) ಪರೀಕ್ಷೆಗೆ ವಸ್ತ್ರಸಂಹಿತೆ ಪ್ರಕಟಿಸಲಾಗಿದ್ದು ಈನಡುವೆ ಪರೀಕ್ಷ ಪ್ರಾಧಿಕಾರವು ಮಾರ್ಗಸೂಚಿಯನ್ನು ಹೊರಡಿಸಿದೆ. ಪುರುಷ ಅಭ್ಯರ್ಥಿಗಳ ವಸ್ತ್ರ ಸಂಹಿತೆ ವಿವರ ಹೀಗಿದೆ. • ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಶರ್ಟ್ಗಳನ್ನು ಅನುಮತಿಸಲಾಗುವುದಿಲ್ಲವಾದ್ದರಿಂದ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್ಗಳನ್ನು ಧರಿಸುವುದನ್ನು ಖಚಿತಪಡಿಸಿಕೊಳ್ಳಬೇಕು. ಸಾದ್ಯವಾದಷ್ಟು ಕಾಲರ್ರಹಿತ ಶರ್ಟ್ ಧರಿಸಲು ಆದ್ಯತೆ ನೀಡುವುದು. • ಪ್ಯಾಂಟ್ ಮತ್ತು ಸರಳ ಪ್ಯಾಂಟ್ (ಜೇಬುಗಳು ಇಲ್ಲದಿರುವ / ಕಮ್ಮಿ ಜೇಬುಗಳಿರುವ) ಪುರುಷ ಅಭ್ಯರ್ಥಿಗಳಿಗೆ ಆದ್ಯತೆಯ ಡ್ರೆಸ್ ಕೋಡ್ ಆಗಿದೆ. ಕುರ್ತಾ ಪೈಜಾಮನ್ನು, ಜೀನ್ಸ್ ಪ್ಯಾಂಟ್ ಅನುಮತಿಸುವುದಿಲ್ಲ. • ಪುರುಷ ಅಭ್ಯರ್ಥಿಗಳು ಧರಿಸುವ ಬಟ್ಟೆಗಳು ಹಗುರವಾಗಿರಬೇಕು ಅಂದರೆ ಜಿಪ್ ಪಾಕೆಟ್ಗಳು, ಪಾಕೆಟ್ಗಳು, ದೊಡ್ಡ ಬಟನ್ ಗಳು ಮತ್ತು ವಿಸ್ತಾರವಾದ ಕಸೂತಿ ಇರುವ ಬಟ್ಟಗಳು ಇರಬಾರದು.ಪರೀಕ್ಷಾ ಹಾಲ್ ಒಳಗೆ ಶೂಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಭ್ಯರ್ಥಿಗಳು ಸ್ಯಾಂಡಲ್ ಅಥವಾ ತೆಳುವಾದ ಅಡಿಭಾಗ ಇರುವ ಚಪ್ಪಲಿಗಳನ್ನು ಧರಿಸುವುದು ಸೂಕ್ತ. ಅಭ್ಯರ್ಥಿಗಳು…

Read More

ಬೆಂಗಳೂರು: ಬೆಂಗಳೂರು : ಶೀಘ್ರದಲ್ಲೇ ರಾಜ್ಯದಲ್ಲಿ ಖಾಲಿ ಇರುವ ಪೊಲೀಸ್ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. ಅವರು ಬುಧವಾರ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಮಾತನಾಡಿದರು. ಇನ್ನೂ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನದ ನಂತರ ಮುಖ್ಯಮಂತ್ರಿಗಳ ಸುದ್ದಿಗೋಷ್ಠಿಯ ಮುಖ್ಯಾಂಶಗಳು ಹೀಗಿವೆ. ನಿಷ್ಠೆಯಿಂದ , ಪ್ರಾಮಾಣಿಕವಾಗಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕೆಂದು ಒತ್ತಾಯ ಪೂರ್ವಕವಾಗಿ ಸೂಚನೆ ನೀಡಲಾಗಿದೆ. • ಯಾವುದೇ ಅಲಕ್ಷ್ಯತೆ, ನಿರ್ಲಕ್ಷ್ಯತೆ, ಬೇಜವಾಬ್ದಾರಿತನವನ್ನು ಸಹಿಸುವುದಿಲ್ಲ. • ಇಂಟೆಲಿಜೆನ್ಸ್ ನಲ್ಲಿ ಪ್ರತ್ಯೇಕ ನೇಮಕಾತಿ ಮತ್ತು ತರಬೇತಿಯ ಹೆಚ್ಚಳ. • ಬೆಂಗಳೂರಿನಲ್ಲಿ 1.50 ಕೋಟಿ ಜನಸಂಖ್ಯೆಯಿದ್ದು, ಹೆಚ್ಚು ಜವಾಬ್ದಾರಿಗಳನ್ನು ವಹಿಸಲು ಹೆಚ್ಚುವರಿ ಡಿಸಿಪಿ ಹುದ್ದೆಗಳನ್ನು ಸೃಜಿಸಲಾಗುತ್ತಿದೆ. • ಸೈಬರ್ ಪೋಲಿಸ್ ಠಾಣೆಗಳಲ್ಲಿ ಎಸಿಪಿ/ಡಿಸಿಪಿ ಮಟ್ಟದ ಅಧಿಕಾರಿಗಳ ನೇಮಕ • ಸೈಬರ್ ಅಪರಾಧಗಳು ಹೆಚ್ಚುತ್ತಿದ್ದು, ದಲಿತರು, ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧಗಳೂ ಹೆಚ್ಚುತ್ತಿದ್ದು , ಇವುಗಳನ್ನು ನಿಯಂತ್ರಿಸಿ, ಅಪರಾಧಿಗಳನ್ನು ಶಿಕ್ಷೆಗೆ…

Read More