Author: kannadanewsnow07

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರೈತ ಸಂಘಟನೆ ಹಾಗೂ ಮುಖಂಡರುಗಳ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಇದೇ ವೇಳೆ ಅವರು ಮಾತನಾಡಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಕರ್ನಾಟಕಕ್ಕೆ ಬರಿಗೈಯಲ್ಲಿ ಬಂದಿದ್ದಾರೆ. ಬಡವರು, ರೈತರ ಬಗ್ಗೆ ಮಾತನಾಡಲು ಅವರಿಗೆ ನೈತಿಕತೆ ಇಲ್ಲ. ಇಂದಿನವರೆಗೆ ಬರಗಾಲದ ಬಗ್ಗೆ ಐದು ತಿಂಗಳಾದರೂ ಒಂದು ಸಭೆಯನ್ನೂ ಅಮಿತ್ ಶಾ ಕರೆದಿಲ್ಲ. ಬರಪರಿಹಾರ ಕೊಡಲು ಇರುವ ಸಮಿತಿಗೆ ಅವರೇ ಅಧ್ಯಕ್ಷರು. ದೇಶದ ಬಗ್ಗೆ ಮಾತನಾಡಲು ಅವರಿಗೆ ಯಾವ ನೈತಿಕತೆ ಇದೆ. ರೈತರು ಬರಗಾಲದಲ್ಲಿ ಕಷ್ಟಪಡುತ್ತಿದ್ದಾರೆ. ಬರಗಾಲ ಬಂದಾಗ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ 150 ಮಾನವ ದಿನಗಳನ್ನು ಹೆಚ್ಚಿಸುವುದು ಕಡ್ಡಾಯವಾದರೂ ಇಂದಿನವರೆಗೆ ಹೆಚ್ಚಿಸಿಲ್ಲ, 2-3 ಪತ್ರ ಬರೆದಿದ್ದರೂ ಉತ್ತರ ನೀಡಿಲ್ಲ. ಈಗ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಬಿಜೆಪಿ ಜೊತೆ ಸೇರಿದ್ದಾರೆ. ಇದೇ ದೇವೆಗೌಡರು ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಬೇಕು ಎಂದಿದ್ದರು, ಈಗೇನು ಹೆಳುತ್ತಿದ್ದಾರೆ. ಅವರು ಯಜಮಾನರು,…

Read More

ಝಬುವಾ (ಮಧ್ಯಪ್ರದೇಶ): ಮಧ್ಯಪ್ರದೇಶದ ಜಬುವಾದಲ್ಲಿ ಭಾನುವಾರ ಜನ ಜಾತಿ ಮಹಾಸಭಾವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಎನ್ಡಿಎ 400 ಸ್ಥಾನಗಳನ್ನು ದಾಟಲು ಸಾಧ್ಯವಾದರೆ, ಬಿಜೆಪಿ ಮಾತ್ರ 370 ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯಬೇಕು ಎಂದು ಹೇಳಿದರು. ಪ್ರಧಾನಿ ಮೋದಿ ಅವರು ತಮ್ಮ ಮಧ್ಯಪ್ರದೇಶ ಭೇಟಿ, ಬರೆಯುತ್ತಿರುವದಕ್ಕೆ ವಿರುದ್ಧವಾಗಿ, ಚುನಾವಣೆಯನ್ನು ಗುರಿಯಾಗಿಸಿಕೊಂಡಿಲ್ಲ ಎಂದು ಹೇಳಿದರು. “ಮಧ್ಯಪ್ರದೇಶದ ವಿಧಾನಸಭಾ ಚುನಾವಣಾ ಫಲಿತಾಂಶಗಳು ಈಗಾಗಲೇ ಇಲ್ಲಿನ ಜನರ ಮನಸ್ಥಿತಿಯನ್ನು ತೋರಿಸಿವೆ… ನಾನು ಸೇವಕನಾಗಿ ಇಲ್ಲಿಗೆ ಬಂದಿದ್ದೇನೆ” ಎಂದು ಪ್ರಧಾನಿ ಮೋದಿ ಹೇಳಿದರು. “ವಿರೋಧ ಪಕ್ಷದ ನಾಯಕರು ಕೂಡ ಸಂಸತ್ತಿನಲ್ಲಿ ’24 ಮೇ 400 ಪಾರ್’ ಎಂದು ಹೇಳುತ್ತಿದ್ದಾರೆ” ಎಂದು ಪ್ರಧಾನಿ ಮೋದಿ ಹೇಳಿದರು.

Read More

ಮಡಿಕೇರಿ ಫೆ.08(ಕರ್ನಾಟಕ ವಾರ್ತೆ):-ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು “ಉನ್ನತ ಶಿಕ್ಷಣ ಎಲ್ಲರಿಗೂ ಎಲ್ಲೆಡೆ” ಎಂಬ ಘೋಷವಾಕ್ಯದೊಂದಿಗೆ 1996ರಲ್ಲಿ ಸ್ಥಾಪನೆಯಾಗಿ, 18 ವರ್ಷದಿಂದ 80 ವರ್ಷ ವಯೋಮಾನದವರೆಗಿನ ಲಕ್ಷಾಂತರ ಮಂದಿಗೆ ವಿದ್ಯೆ ನೀಡಿ, ವಿದ್ಯಾರ್ಥಿಗಳ ಮನೆ ಬಾಗಿಲಿಗೆ ಉನ್ನತ ಶಿಕ್ಷಣ ನೀಡಲು ಪ್ರಯತ್ನಿಸುತ್ತಿದ್ದು, ವಿಶ್ವವಿದ್ಯಾನಿಲಯವು ಕರ್ನಾಟಕದಾದ್ಯಂತ ಪ್ರಸ್ತುತ ಜಿಲ್ಲಾ ಕೇಂದ್ರಗಳಲ್ಲಿ 36 ಪ್ರಾದೇಶಿಕ ಕೇಂದ್ರಗಳನ್ನು ತೆರೆದು ವಿದ್ಯಾರ್ಥಿಗಳಿಗೆ ರೆಗ್ಯೂಲರ್ ವಿಶ್ವವಿದ್ಯಾನಿಲಯಗಳ ಉನ್ನತ ಶಿಕ್ಷಣಕ್ಕೆ ಸರಿಸಮನಾಗಿ ಮನೆ ಬಾಗಿಲಿಗೆ ಉನ್ನತ ಶಿಕ್ಷಣ ಕೊಡುವಲ್ಲಿ ಮುಂಚೂಣಿಯಲ್ಲಿದೆ. ಹೀಗಾಗಿ, 10+2 (ಪದವಿ ಪೂರ್ವ)., 10+2+3 (ಸ್ನಾತಕ ಪದವಿ) ವಿದ್ಯಾರ್ಹತೆ ಹೊಂದಿರುವ ಎಲ್ಲಾ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಮಾಡಿಕೊಂಡು ಕರಾಮುವಿಯಲ್ಲಿ ಪ್ರವೇಶಾತಿ ಪಡೆಯಬಹುದು. ಕ.ರಾ.ಮು.ವಿ.ಯು ಕರ್ನಾಟಕ ರಾಜ್ಯದಲ್ಲಿ ಮೈಸೂರಿನ ಮುಕ್ತಗಂಗೋತ್ರಿಯಲ್ಲಿ ಕೇಂದ್ರ ಕಚೇರಿ ಹೊಂದಿದ್ದು, ಅತ್ಯಂತ ಸುಂದರವಾದ ಹಸಿರು ಪರಿಸರದಲ್ಲಿ ಸುಸಜ್ಜಿತ ಆಡಳಿತ ಭವನ, ಪರೀಕ್ಷಾ ಭವನ, ವಿಜ್ಞಾನ ಭವನ, ಗ್ರಂಥಾಲಯ, ಪ್ರಾಯೋಗಿಕ ಪ್ರಯೋಗಾಲಯವನ್ನು ಹೊಂದಿದ್ದು, ರಾಜ್ಯದಾದ್ಯಂತ 36 ಪ್ರಾದೇಶಿಕ ಕೇಂದ್ರಗಳು ಮತ್ತು 180 ಕಲಿಕಾರ್ಥಿ ಸಹಾಯ…

Read More

ಬೆಂಗಳೂರು: ರಾಜ್ಯ ಸರ್ಕಾರ ಬರ ನಿರ್ವಹಣೆಗೆ ಪರಿಹಾರ ಕ್ರಮವಾಗಿ ರೂ 2000 ಕೋಟಿ ಅನುದಾನವನ್ನು ನಿಗದಿ ಪಡಿಸಿದ್ದು, ಈಗಾಗಲೇ ರೂ 628 ಕೋಟಿ ಹಣವನ್ನು ನೇರವಾಗಿ 33 ಲಕ್ಷ ರೈತರ ಖಾತೆಗೆ ಬಿಡುಗಡೆ ಮಾಡಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾಡನಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, 1.6 ಲಕ್ಷ ರೈತರ ಬ್ಯಾಂಕ್ ಖಾತೆಯ ಮಾರ್ಪಾಡು ಪ್ರಕ್ರಿಯೆ ನಡೆಯುತ್ತಿದ್ದು, ಇದು ಸರಿಯಾದ ಕೂಡಲೇ ಅವರ ಖಾತೆಗಳಿಗೂ ಬರ ಪರಿಹಾರದ ಹಣವನ್ನು ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಲಾಗುವುದು ಎಂದರು. ಅರ್ಹ ರೈತರಿಗೆ ಬರ ಪರಿಹಾರ ತಲುಪಿಸುವ ಹಾಗೂ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಬರ ಪರಿಹಾರ ಬಿಡುಗಡೆ ಮಾಡಿರುವ ರೈತ ಪಟ್ಟಿಯನ್ನು ಪ್ರಕಟ ಮಾಡಬೇಕು ಎಂದು ಸೂಚನೆ ನೀಡಿರುವ ಹಿನ್ನೆಲೆ, ಬಹುತೇಕ ಗ್ರಾಮ ಪಂಚಾಯಿತಿಗಳಲ್ಲಿ ರೈತರ ಹೆಸರು ಪ್ರಕಟಿಣೆ ಮಾಡಲಾಗಿದೆ. ಆ ಪಟ್ಟಿಯಲ್ಲಿ ರೈತರ ಹೆಸರು…

Read More

ಬೆಂಗಳೂರು: ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ ಫೆ.26 ಮತ್ತು 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಸುಮಾರು 50 ಸಾವಿರಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳು ಮತ್ತು ರಾಜ್ಯದ ಎಲ್ಲ ವಲಯಗಳಿಂದ 500ಕ್ಕೂ ಹೆಚ್ಚಿನ ಪ್ರತಿಷ್ಠಿತ ಬೃಹತ್/ ಮಧ್ಯಮ/ ಸಣ್ಣ ಉದ್ಯೋಗದಾತರ ಸಂಸ್ಥೆಗಳು ಭಾಗವಹಿಸುವ ನಿರೀಕ್ಷೆಯಿದೆ. ಉದ್ಯೋಗಾಕಾಂಕ್ಷಿಗಳು ಹಾಗೂ ಉದ್ಯೋಗದಾತರುhttps://skillconnect. kaushalkar.com ನಲ್ಲಿ ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ 1800-599-9918 ಸಂಪರ್ಕಿಸಲು ಕೋರಲಾಗಿದೆ. ಎಲ್ಲಾ ವಿದ್ಯಾರ್ಹತೆಯ ಉದ್ಯೋಗಾಂಕ್ಷಿಗಳು ಹಾಗೂ ಖಾಸಗಿ ಕಂಪನಿ/ ಉದ್ಯೋಗದಾತರು “ಯುವ ಸಮೃದ್ಧಿ ಸಮ್ಮೇಳನ”ದ ಬೃಹತ್ ಉದ್ಯೋಗಮೇಳ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು.  ಉದ್ಯೋಗಾಕಾಂಕ್ಷಿಗಳು/ ಉದ್ಯೋಗದಾತರು https://Skillconnect.kaushalkar.com/ ಗೆ ಭೇಟಿ ನೀಡಿ ತಮ್ಮ ಸ್ವ-ವಿವರವನ್ನು ನೋಂದಣಿ ಮಾಡುವ ಮೂಲಕ ಉದ್ಯೋಗ ಮೇಳಕ್ಕೆ ನೋಂದಾಯಿಸಿಕೊಳ್ಳುವಂತೆ ಕೋರಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿಯ ಅಧಿಕಾರಿ/ ಸಿಬ್ಬಂಧಿಯವರನ್ನು ಕಚೇರಿ ವೇಳೆಯಲ್ಲಿ ಆಯಾ ಜಿಲ್ಲೆಯವರು ಸಂಪರ್ಕಿಸಬಹುದಾಗಿದೆ.

Read More

ಬೆಂಗಳೂರು: ಕೇಂದ್ರ ¸ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕಕ್ಕೆ ಬರಿಗೈಯಲ್ಲಿ ಬಂದಿದ್ದಾರೆ. ಬಡವರು, ರೈತರ ಬಗ್ಗೆ ಮಾತನಾಡಲು ಅವರಿಗೆ ನೈತಿಕತೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರೈತ ಸಂಘಟನೆ ಹಾಗೂ ಮುಖಂಡರುಗಳ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ನೈತಿಕ ಹಕ್ಕಿಲ್ಲ : ಇಂದಿನವರೆಗೆ ಬರಗಾಲದ ಬಗ್ಗೆ ಐದು ತಿಂಗಳಾದರೂ ಒಂದು ಸಭೆಯನ್ನೂ ಅಮಿತ್ ಶಾ ಕರೆದಿಲ್ಲ. ಬರಪರಿಹಾರ ಕೊಡಲು ಇರುವ ಸಮಿತಿಗೆ ಅವರೇ ಅಧ್ಯಕ್ಷರು. ದೇಶದ ಬಗ್ಗೆ ಮಾತನಾಡಲು ಅವರಿಗೆ ಯಾವ ನೈತಿಕತೆ ಇದೆ. ರೈತರು ಬರಗಾಲದಲ್ಲಿ ಕಷ್ಟಪಡುತ್ತಿದ್ದಾರೆ. ಬರಗಾಲ ಬಂದಾಗ ಎಂ.ಎನ್. ನರೇಗಾ ಯೋಜನೆಯಡಿ 150 ಮಾನವದಿನಗಳನ್ನು ಹೆಚ್ಚಿಸುವುದು ಕಡ್ಡಾಯವಾದರೂ ಇಂದಿನವರೆಗೆ ಹೆಚ್ಚಿಸಿಲ್ಲ. ಆದರೆ ಕೇಂದ್ರ ಸರ್ಕಾರದವರು ಅನುಮತಿ ನೀಡದೇ, 2-3 ಪತ್ರ ಬರೆದಿದ್ದರೂ ಉತ್ತರ ನೀಡಿಲ್ಲ ಎಂದರು. ಅನ್ಯಾಯವನ್ನೆಲ್ಲಾ ಸರಿ ಎಂದು ಹೇಳಬಾರದು : ನಿರ್ಮಲಾ ಸೀತಾರಾಮನ್ ಅವರು ತಕ್ಕ ಉತ್ತರ ನೀಡಿದ್ದಾರೆ ಎಂದು ಮಾಜಿ ಪ್ರಧಾನಿ…

Read More

ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತೆ ತಿಹಾರ್ ಜೈಲು ಸೇರುತ್ತಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದ್ದಾರೆ. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ, ಈ ಬಗ್ಗೆ ತಿಳಿಸಿದರು, ಇದೇ ವೇಳೆ ಅವರು ಡಿ.ಕೆ.ಶಿವಕುಮಾರ್, ಡಿ.ಕೆ.ಸುರೇಶ್ ಇಬ್ಬರೂ ಗೂಂಡಾಗಳು ಎನ್ನುವುದು ಜನರಿಗೆ ತಿಳಿಸಿದೆ. . ನನ್ನ ಮಾತಿಗೆ ಸಿನಿಮಾ ಸ್ಟೈಲ್ ನಲ್ಲಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ, ಇದಲ್ಲದೇ . ನನ್ನ ಮಾತಿಗೆ ಸಿನಿಮಾ ಸ್ಟೈಲ್ ನಲ್ಲಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ಹೋಗುವುದು ನಿಶ್ಚಿತ ಅಂತ ತಿಳಿಸಿದರು.

Read More

. ನವದೆಹಲಿ: ಭಾನುವಾರ ಬೆಳಿಗ್ಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ಇಳಿದ ನಂತರ ಇಂಡಿಗೊ ವಿಮಾನವನ್ನು ಟ್ಯಾಕ್ಸಿವೇ ದಾಟಿದ ನಂತರ 15 ನಿಮಿಷಗಳ ಕಾಲ ನಿರ್ಬಂಧಿಸಲಾಯಿತು. ಅಮೃತಸರದಿಂದ ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನವು ಇಂದು ದಾರಿ ತಪ್ಪಿದ ಕಾರಣ ರನ್ವೇಯನ್ನು 15 ನಿಮಿಷಗಳ ಕಾಲ ನಿರ್ಬಂಧಿಸಲಾಯಿತು ಎನ್ನಲಾಗಿದೆ. ಟ್ಯಾಕ್ಸಿವೇ ಎಂಬುದು ವಿಮಾನಕ್ಕೆ ಬಳಸುವ ಮಾರ್ಗವಾಗಿದೆ, ಅದು ರನ್ ವೇಯನ್ನು ಏಪ್ರನ್ ಗಳು, ಹ್ಯಾಂಗರ್ ಗಳು ಮತ್ತು ಟರ್ಮಿನಲ್ ಗಳಂತಹ ಸೌಲಭ್ಯಗಳಿಗೆ ಸಂಪರ್ಕಿಸುತ್ತದೆ . 6ಇ 2221 ವಿಮಾನವನ್ನು ನಿರ್ವಹಿಸುತ್ತಿದ್ದ ಎ 320 ವಿಮಾನವು ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಐಜಿಐಎ) ಟ್ಯಾಕ್ಸಿವೇ ದಾಟಿ ರನ್ ವೇ 28/10 ರ ತುದಿಗೆ ಹೋಯಿತು. ಘಟನೆಯಿಂದಾಗಿ, ರನ್ವೇಯನ್ನು ಸುಮಾರು 15 ನಿಮಿಷಗಳ ಕಾಲ ನಿರ್ಬಂಧಿಸಲಾಯಿತು ಮತ್ತು ಕೆಲವು ವಿಮಾನ ಕಾರ್ಯಾಚರಣೆಗಳ ಮೇಲೆ ಪರಿಣಾಮ ಬೀರಿತು. ನಂತರ, ಇಂಡಿಗೊ ಟೋಯಿಂಗ್ ವ್ಯಾನ್ ವಿಮಾನವನ್ನು ರನ್ವೇಯ ತುದಿಯಿಂದ ಪಾರ್ಕಿಂಗ್ ಬೇಗೆ ಎಳೆದು ತರಲಾಯಿತು ಎಂದು ಮೂಲಗಳು ತಿಳಿಸಿವೆ.…

Read More

ಹೈದ್ರಾಬಾದ್‌: ಹೈದರಾಬಾದ್ನ ಅಮನ್ ಅವರು ನಗರದ ಮೆಟ್ರೋ ನಿಲ್ದಾಣದಿಂದ ಖರೀದಿಸಿದ ಕ್ಯಾಡ್ಬರಿ ಡೈರಿ ಮಿಲ್ಕ್ ಚಾಕೊಲೇಟ್ನ ಬಾರ್ನಲ್ಲಿ ಜೀವಂತ ಹುಳು ತೆವಳುತ್ತಿರುವುದನ್ನು ಕಂಡುಕೊಂಡಿದ್ದು ಅದರ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ನಗರದ ಅಮೀರ್ ಪೇಟ್ ಮೆಟ್ರೋ ನಿಲ್ದಾಣದ ರತ್ನದೀಪ್ ರಿಟೇಲ್ ಸ್ಟೋರ್ ನಿಂದ 45 ರೂ.ಗೆ ಪಾವತಿಸಿದ ಚಾಕೊಲೇಟ್ ಬಿಲ್ ಅನ್ನು ಸಹ ರಾಬಿನ್ ಜಕ್ಕಯಸ್ ಎಕ್ಸ್ (ಈ ಹಿಂದೆ ಟ್ವಿಟರ್) ನಲ್ಲಿ ಹಂಚಿಕೊಂಡಿದ್ದಾರೆ. “ರತ್ನದೀಪ್ ಮೆಟ್ರೋ ಅಮೀರ್ಪೇಟ್ನಲ್ಲಿ ಖರೀದಿಸಿದ ಕ್ಯಾಡ್ಬರಿ ಚಾಕೊಲೇಟ್ನಲ್ಲಿ ಹುಳು ತೆವಳುತ್ತಿರುವುದನ್ನು ನೋಡಿದೆ. ಈ ಎಕ್ಸ್ ಪೈರಿ ಉತ್ಪನ್ನಗಳಿಗೆ ಗುಣಮಟ್ಟದ ತಪಾಸಣೆ ಇದೆಯೇ? ಸಾರ್ವಜನಿಕ ಆರೋಗ್ಯ ಅಪಾಯಗಳಿಗೆ ಯಾರು ಜವಾಬ್ದಾರರು? ಅಂತ ಸಾಮಾಜಿಕ ಜಾಲತಾಣದಲ್ಲಿ ಜಕಿಯಸ್ ಶುಕ್ರವಾರ ಬರೆದಿದ್ದಾರೆ. ಅವರ ಪೋಸ್ಟ್ ಶೀಘ್ರದಲ್ಲೇ ವೈರಲ್ ಆಗಿದ್ದು, ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ನೆಟ್ಟಿಗರು ವ್ಯಕ್ತಿಯನ್ನು ಕೇಳಿದ್ದಾರೆ. ಒಬ್ಬ ಬಳಕೆದಾರರು ಬರೆದಿದ್ದಾರೆ, “ಕ್ಯಾಡ್ಬರಿ ತಂಡಕ್ಕೆ ಕುಂದುಕೊರತೆಗಳನ್ನು ತಿಳಿಸಿ. ಮಾದರಿಯನ್ನು ಸಂಗ್ರಹಿಸಿ ತನಿಖೆ ನಡೆಸಲು ಬರುತ್ತೇನೆ. ಇನ್ನೊಬ್ಬ…

Read More

ಬೆಂಗಳೂರು: ನಾಳೆಯಿಂದ ರಾಜ್ಯ ಸರ್ಕಾರದ ಬಜೆಟ್‌ ಅಧಿವೇಶನ ಆರಂಭವಾಗಲಿದ್ದು, ಉಭಸದನಗಳನ್ನು ಉದ್ದೇಶಿಸಿ ರಾಜ್ಯಪಾಲರಿಂದ ಭಾಷಣ ಮಾಡಲಿದ್ದಾರೆ.  ರಾಜ್ಯಪಾಲರ ಮಾತಿನ ಬಳಿಕ ಅಗಲಿದ ಗಣ್ಯರಿಗೆ ಸಂತಾಪವನ್ನು ಸೂಚನೆ ಮಾಡಲಾಗುವುದು. ವಿಧಾನಸಭೆಯ ಮಾಜಿ ಸದಸ್ಯರಾಗಿದ್ದ ನಾಗನಗೌಡ ಕಂದಕೂರ ಮತ್ತು ಹಿರಿಯ ಸಾಹಿತಿ ಹಾಗೂ ವಿಮರ್ಶಕರಾದ ಪ್ರೊ. ಅಮೃತ ಸೋಮೇಶ್ವರ ಅವರು ನಿಧನ ಹೊಂದಿರುವುದನ್ನು ಈ ಸದನಕ್ಕೆ ಅತ್ಯಂತ ವಿಷಾದದಿಂದ ತಿಳಿಸಬಯಸುತ್ತೇನೆ. 1. ನಾಗನಗೌಡ ಕಂದಕೂರ : ರಾಜ್ಯದ ಮಾಜಿ ಸದಸ್ಯರಾಗಿದ್ದ ನಾಗನಗೌಡ ಕಂದಕೂರು ಅವರು ದಿನಾಂಕ:01.06.1945 ರಂದು ಯಾದಗಿರಿ ಜಿಲ್ಲೆಯ ಗುರುಮಿಠಲ್ ತಾಲ್ಲೂಕಿನ ಕಂದಕೂರ ಗ್ರಾಮದಲ್ಲಿ ಜನಿಸಿದ್ದು, ವೃತ್ತಿಯಲ್ಲಿ ಕೃಷಿಕರಾಗಿದ್ದರು. 15ನೇ ವಿಧಾನಸಭೆಗೆ ಆಯ್ಕೆಯಾಗಿದ್ದ ಶ್ರೀಯುತರು 2019 ರಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಹಿರಿಯ ರಾಜಕಾರಣಿ ನಾಗನಗೌಡ ಕಂದಕೂರು ರವರು ದಿನಾಂಕ:28.01.2024 ರಂದು ನಿಧನ ಹೊಂದಿರುತ್ತಾರೆ. 2. ಪ್ರೊ. ಅಮೃತ ಸೋಮೇಶ್ವರ : ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರದ ಅನನ್ಯ ಸಾಧಕರಾಗಿದ್ದ ಪ್ರೊ. ಅಮೃತ ಸೋಮೇಶ್ವರ ಅವರು ಕನ್ನಡ…

Read More