Author: kannadanewsnow07

ಬೆಂಗಳೂರು : 2023-24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5, 8 ಮತ್ತು 9 ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿರುವ ಸಂಕಲನಾತ್ಮಕ ಮೌಲ್ಯಾಂಕನ-2 (SA-2) ಕ್ಕೆ ಸಂಬಂಧಿಸಿದಂತೆ ಮಾದರಿ ಪ್ರಶೋತ್ತರ ಪತ್ರಿಕೆಗಳನ್ನು ಮಂಡಲಿಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಿರುವ ಬಗ್ಗೆ ಆದೇಶವನ್ನು ಪ್ರಕಟ ಮಾಡಿದೆ. ಇದೇ ವೇಳೇ ಆದೇಶದ ಪ್ರಕಟಣೆಯಲ್ಲಿ ಮೇಲ್ಕಂಡ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ 2023-24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5, 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಾಂಕನ-2 (SA-2) ಕಾರ್ಯವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ನಡೆಸಲಾಗುತ್ತಿದೆ. ಸದರಿ ಮೌಲ್ಯಾಂಕನಕ್ಕೆ ಸಂಬಂಧಿಸಿದಂತೆ 5, 8 ಮತ್ತು 9ನೇ ತರಗತಿಯ ಮಾದರಿ ಪ್ರಶೋತ್ತರ #gf 량: 26.01.2024 ಮಂಡಳಿಯ ವೆಬ್‌ ಸೈಟ್‌ https://kseab.karnataka.gov.in ಪ್ರಕಟಿಸಲಾಗಿದೆ. ಸದರಿ ಮಾದರಿ ಪ್ರಶೋತ್ತರ ಪತ್ರಿಕೆಗಳನ್ನು ವಿದ್ಯಾರ್ಥಿಗಳಿಗೆ ನೀಡಿ ಅಭ್ಯಸಿಸುವಂತೆ…

Read More

ಬೆಂಗಳೂರು: 2022-23 ನೇ ಸಾಲಿನ ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಜನವರಿ, 28 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಮಡಿಕೇರಿ ನಗರದ ಶಾಲೆ, ಕಾಲೇಜುಗಳಲ್ಲಿ ನಡೆಯಲಿರುವ ಲಿಖಿತ ಪರೀಕ್ಷೆಯ ಸಂಬಂಧ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿದೆ. ಪುರುಷ ಮತ್ತು ತೃತೀಯ ಲಿಂಗ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‍ಗಳನ್ನು ಕಡ್ಡಾಯವಾಗಿ ಧರಿಸುವುದು ಹಾಗೂ ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್‍ಗಳನ್ನು ಧರಿಸುವುದು, ಜಿಪ್ ಪಾಕೆಟ್‍ಗಳು, ದೊಡ್ಡ ಬಟನ್‍ಗಳು ಇರುವ ಶರ್ಟ್‍ಗಳನ್ನು ಧರಿಸತಕ್ಕದಲ್ಲ. ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟ್‍ಗಳನ್ನು ಧರಿಸಬಾರದು. ಪರೀಕ್ಷಾ ಕೇಂದ್ರದೊಳಗೆ ಶೂಗಳನ್ನು ನಿಷೇಧಿಸಲಾಗಿದ್ದು, ಅಭ್ಯರ್ಥಿಗಳು ತೆಳುವಾದ ಅಡಿಭಾಗವಿರುವ ಪಾದರಕ್ಷೆಗಳನ್ನು (ಚಪ್ಪಲಿ) ಧರಿಸುವುದು. ಕುತ್ತಿಗೆ ಸುತ್ತ ಯಾವುದೇ ಲೋಹದ ಆಭರಣಗಳು ಅಥವಾ ಉಂಗುರ ಮತ್ತು ಕಡಗಗಳನ್ನು ಧರಿಸುವುದು ನಿಷೇಧಿಸಲಾಗಿದೆ

Read More

ಬೆಂಗಳೂರು : ಖಾಸಗಿ ಅನುದಾನಿತ ಶಾಲೆಗಳಲ್ಲಿ ದಿನಾಂಕ: 01.04.2006 ರ ಪೂರ್ವದಲ್ಲಿ ನೇಮಕಾತಿಯಾಗಿ ನಂತರ ಅನುದಾನಕ್ಕೆ ಒಳಪಟ್ಟ ನೌಕರರಿಗೆ ಹಳೆಯ ನಿಶ್ಚಿತ ಪಿಂಚಣಿ ಯೋಜನಾ ವ್ಯಾಪ್ತಿಗೆ ಒಳಪಡಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಆದೇಶದಲ್ಲಿ ಉಲ್ಲೇಖ ಮಾಡಿರುವಂತೆ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ ಸರ್ಕಾರದ ಪತ್ರದಲ್ಲಿ ಖಾಸಗಿ ಅನುದಾನಿತ ಶಾಲೆಗಳಲ್ಲಿ ದಿನಾಂಕ: 01.04.2006 ರ ಪೂರ್ವದಲ್ಲಿ ನೇಮಕಾತಿಯಾಗಿ ನಂತರ ಅನುದಾನಕ್ಕೆ ಒಳಪಟ್ಟ ನೌಕರರಿಗೆ ಹಳೆಯ ನಿಶ್ಚಿತ ಪಿಂಚಣಿ ಯೋಜನಾ ವ್ಯಾಪ್ತಿಗೆ ಒಳಪಡಿಸುವ ಕುರಿತು ಪರಿಶೀಲಿಸಲು ಲಗತ್ತಿಸಿರುವ ಅನುಬಂಧದಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಕೂಡಲೇ ಸರ್ಕಾರಕ್ಕೆ ಸಲ್ಲಿಸುವಂತೆ ತಿಳಿಸಲಾಗಿದೆ. ಉಲ್ಲೇಖಿತ ಸರ್ಕಾರದ ಪತ್ರಗಳು ಮತ್ತು ಅದರೊಂದಿಗಿನ ಅನುಬಂಧವನ್ನು ಈ ಪತ್ರದೊಂದಿಗೆ ಲಗತ್ತಿಸಿ ಕಳುಹಿಸುತ್ತಾ, ಸರ್ಕಾರದ ವತ್ರದಲ್ಲಿ ತಿಳಿಸಿರುವಂತೆ ದಿನಾಂಕ: 01.04.2006 ರ ಪೂರ್ವದಲ್ಲಿ ನೇಮಕಾತಿಯಾಗಿ ನಂತರ ಅನುದಾನಕ್ಕೆ ಒಳಪಟ್ಟ ಶಿಕ್ಷಕರು / ಸಿಬ್ಬಂದಿಗಳ ನಿವೃತ್ತಿ ನಂತರ ನಿಗಧಿಪಡಿಸಬೇಕಾದ ಪಿಂಚಣಿ ಲೆಕ್ಕಾಚಾರ ಮಾಡಿ ಪ್ರಾಥಮಿಕ / ಪ್ರೌಢಶಾಲೆಗಳ ಮಾಹಿತಿಯನ್ನು ಪ್ರತ್ಯೇಕವಾಗಿ ಅನುಬಂಧದಲ್ಲಿ…

Read More

ಬೆಂಗಳೂರು: ಲಿಯೋ ರಾಷ್ಟ್ರೀಯ ರೋಗನಿರೋಧಕ ದಿನದ ಅಂಗವಾಗಿ ಮಾರ್ಚ್ 3ರಂದು ನಡೆಯುವ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದಲ್ಲಿ ಯಾವುದೇ ಅರ್ಹ ಮಗು ಪೋಲಿಯೋ ಲಸಿಕೆಯಿಂದ ಹೊರಗುಳಿಯದಂತೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜನವರಿ 24ರಂದು ಹಮ್ಮಿಕೊಂಡಿದ್ದ ಪೋಲಿಯೋ ಲಸಿಕಾ ಕಾರ್ಯಕ್ರಮ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ನಮ್ಮ ದೇಶದಲ್ಲಿ 2011ರ ನಂತರ ಪೋಲಿಯೋ ಪ್ರಕರಣಗಳು ಕಂಡುಬಂದಿಲ್ಲವಾದರೂ, ನಾವು ಮೈಮರೆಯುವಂತಿಲ್ಲ. ಪೋಲಿಯೋಗೆ ಕಾರಣವಾಗುವ ವೈರಸ್‌ಗಳು ನೆರೆಯ ಪಾಕಿಸ್ತಾನ, ಅಪಘಾನಿಸ್ತಾನ ದೇಶದಿಂದ ವಾತಾವರಣದಲ್ಲಿ ಸೇರಿಕೊಂಡು, ದೇಶದೊಳಗೆ ಬರುವ ಸಾಧ್ಯತೆಗಳಿರುತ್ತವೆ ಎಂಬುದಾಗಿ ವೈದ್ಯಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಹೀಗಾಗಿ ಜಗತ್ತಿನಿಂದಲೇ ಈ ಪೋಲಿಯೋ ವೈರಸ್ ನಿರ್ಮೂಲನೆಯಾಗುವವರೆಗೂ ಪಲ್ಸ್ ಪೋಲಿಯೋ ಲಸಿಕೆಯನ್ನು ತಪ್ಪದೆ ಮಕ್ಕಳಿಗೆ ಹಾಕಿಸುವುದು ಅತ್ಯವಶ್ಯಕವಾಗಿದೆ ಎಂದು ಹೇಳಿದರು. ಲಸಿಕಾ ದಿನ ಎಲ್ಲಾ ಅಂಗನವಾಡಿ ಕೇಂದ್ರವನ್ನು ತೆರೆದಿಟ್ಟು ಮಕ್ಕಳಿಗೆ ಲಸಿಕೆ ಹಾಕಿಸಲು ಕ್ರಮ ಕೈಗೊಳ್ಳಬೇಕು. ತಾಯಂದಿರ ಸಭೆ, ಬಾಲ ವಿಕಾಸ ಸಮಿತಿ…

Read More

ಬೆಂಗಳೂರು : ಗ್ಯಾರಂಟಿ ಯೋಜನೆಗಳ ಅನುಷ್ಟಾನ ಮತ್ತು ಸಾಂಸ್ಥಿಕ ಕಾರ್ಯವಿಧಾನಗಳು ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಅನುಷ್ಠಾನ ಪ್ರಾಧಿಕಾರ, ಬಿ.ಬಿ.ಎಂ.ಪಿ. ಮಟ್ಟದ ಅನುಷ್ಮಾನ ಸಮಿತಿ ಹಾಗೂ ತಾಲ್ಲೂಕು ಮಟ್ಟದಲ್ಲಿ ಅನುಷ್ಠಾನ ಸಮಿತಿಗಳನ್ನು ರಚಿಸಿ, ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆದೇಶದಲ್ಲಿ ಉಲ್ಲೇಖ ಮಾಡಿರುವಂತೆ ಮುಖ್ಯಮಂತ್ರಿಗಳು ಜುಲೈ-2023ರಲ್ಲಿ ಮಂಡಿಸಿದ 2023-24ನೇ ಸಾಲಿನ ಆಯವ್ಯಯ ಭಾಷಣದಲ್ಲಿ ರಾಜ್ಯದ ಜನತೆಗೆ ‘ಶಕ್ತಿ’, ‘ಗೃಹ ಜ್ಯೋತಿ’, ‘ಅನ್ನ ಭಾಗ್ಯ’, ‘ಗೃಹ ಲಕ್ಷ್ಮಿ’ ಮತ್ತು ‘ಯುವ ನಿಧಿ’ ಯೋಜನೆಗಳನ್ನು ಜಾರಿಗೊಳಿಸುವುದಾಗಿ ಘೋಷಿಸಿರುತ್ತಾರೆ. ಅದರಂತೆ, ಶಕ್ತಿ ಯೋಜನೆಯನ್ನು ಜೂನ್ 11, 2023 ರಂದು, ‘ಗೃಹ ಜ್ಯೋತಿ’ ಯೋಜನೆಯನ್ನು ಜುಲೈ 1, 2023 ರಂದು, ‘ಅನ್ನ ಭಾಗ್ಯ’ ಯೋಜನೆಯನ್ನು ಜುಲೈ- 2023ರಂದು, ‘ಗೃಹ ಲಕ್ಷ್ಮಿ’ ಯೋಜನೆಯನ್ನು 2023ರಂದು ಮತ್ತು ‘ಯುವ ನಿಧಿ’ ಯೋಜನೆಯನ್ನು ಜನವರಿ 12, 2024 ರಂದು ಜಾರಿಗೊಳಿಸಿ, ಅರ್ಹ ಫಲಾನುಭವಿಗಳಿಗೆ ಯೋಜನೆಯ ಲಾಭಗಳನ್ನು ವಿತರಿಸಲಾಗುತ್ತಿದೆ. ಶಕ್ತಿ’ ಯೋಜನೆಯ ಮೂಲಕ ರಾಜ್ಯದ ಎಲ್ಲಾ ಸಾರಿಗೆ…

Read More

ಬೆಂಗಳೂರು: ನಟ ದರ್ಶನ್‌ಗೆ ಸಂಬಂಧಪಟ್ಟಂತೆ ಹಲವು ಮಾಹಿತಿಗಳು ಕಳೆದ ಎರಡು ದಿನದಿಂದ ವೈರಲ್‌ ಆಗುತ್ತಿದ್ದಾರೆ. ಸಾಮಾಜಿಕ ತಾಣದಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ನಟಿ ಪವಿತ್ರ ಗೌಡವರ ವಿರುದ್ದ ಕಾನೂನು ಕ್ರಮ ಎಚ್ಚರಿಕೆ ನೀಡುವುದಾಗಿ ಹೇಳಿಕೊಂಡಿದ್ದಾರೆ. ಈ ನಡುವೆ ಇಂದು ಮತ್ತೆ ಪವಿತ್ರ ಅವರು ತಮ್ಮ ಹಾಗೂ ದರ್ಶನ್‌ ಅವರ ಸಂಬಂಧದ ಬಗ್ಗೆ ಬಗ್ಗೆ ಮಾಹಿತಿ ನೀಡಿದ್ದಾರೆ. ಹಾಗಾದ್ರೇ ಅವರ ಪೋಸ್ಟ್‌ನಲ್ಲಿ ಇರುವುದು ಎನು ಎನ್ನುವುದನ್ನು ನೋಡುವುದಾದ್ರೆ ಅದರ ವಿವರ ಈ ಕೆಳಕಂಡತಿದೆ. ನಾನು ಪವಿತ್ರ ಗೌಡ,ನನ್ನ ಮಗಳು ಖುಷಿ ಗೌಡ. ನಾನು ಸಂಜಯ್ ಎಂಬ ವ್ಯಕ್ತಿಯನ್ನು ಮದುವೆಯಾಗಿದ್ದು ನಂತರ ಖುಷಿ ಗೌಡ ಹುಟ್ಟಿರುತ್ತಾಳೆ. ನಮ್ಮ life ನಲ್ಲಿ ಉಂಟಾದ problems ಇಂದ ನಾನು ಸಂಜಯ್ ಅವರಿಂದ Divorce ಪಡೆದಿದೇನೆ. ಇಲ್ಲಿಯ ವರಗೂ ಖುಷಿ ಗೌಡ ದರ್ಶನ್ ಶ್ರೀನಿವಾಸರವರ ಮಗಳೆಂದು ನಾನು ಎಲ್ಲೂ ಹೇಳಿಲ್ಲ!! ನಾನು ಹಾಗೂ ದರ್ಶನ್ ಶ್ರೀನಿವಾಸರವರು ಕಳೆದ 10 ವರ್ಷಗಳಿಂದ ಜೊತೆಯಲ್ಲಿ ಸಂತೋಷವಾಗಿದ್ದೀವಿ.plz Note this “I’m…

Read More

ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಎನ್ಡಿಎಗೆ ಮರಳಲು ನಿರ್ಧರಿಸಿದ್ದಾರೆ ಮತ್ತು ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಸರ್ಕಾರ ರಚನೆಯಾದ ನಂತರ, ವಿಧಾನಸಭಾ ಸ್ಪೀಕರ್ ಆಯ್ಕೆ ಮಾಡಲಾಗುತ್ತದೆ. ಬಿಹಾರ ರಾಜಕೀಯದಲ್ಲಿ ಬದಲಾವಣೆಯ ಊಹಾಪೋಹಗಳ ನಡುವೆ ಭಾರಿ ಬೆಳವಣಿಗೆಯಲ್ಲಿ, ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತೆ ಪಕ್ಷಾಂತರ ಮಾಡಲಿದ್ದಾರೆ ಮತ್ತು ಅವರ ಪಕ್ಷ ಜೆಡಿಯು ಬಿಜೆಪಿಯೊಂದಿಗೆ ಸರ್ಕಾರ ರಚಿಸಲಿದೆ ಎಂದು ಮೂಲಗಳು ಶುಕ್ರವಾರ (ಜನವರಿ 26) ತಿಳಿಸಿವೆ.

Read More

ನವದೆಹಲಿ: ಜನತಾದಳ ಯುನೈಟೆಡ್ (ಜೆಡಿಯು) ಮತ್ತು ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ನಡುವಿನ ಬಿಹಾರದ ಆಡಳಿತ ಮೈತ್ರಿಕೂಟದೊಳಗಿನ ಉದ್ವಿಗ್ನತೆಯ ಮಧ್ಯೆ, ಬಿಹಾರದಲ್ಲಿ ಹೊಸ ಸರ್ಕಾರವನ್ನು ಸ್ಥಾಪಿಸಲು ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತೊಮ್ಮೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಬಹುದು ಎನ್ನಲಾಗಿದೆ. ಮೂಲಗಳ ಪ್ರಕಾರ, ಮುಂದಿನ ಎರಡು ಮೂರು ದಿನಗಳಲ್ಲಿ ಈ ವಿಷಯದ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ನಿರೀಕ್ಷೆಯಿದೆ.  ಆದಾಗ್ಯೂ, ಅನುಭವಿ ಜೆಡಿಯು ನಾಯಕ ಮುಂಬರುವ ಲೋಕಸಭಾ ಚುನಾವಣೆಯವರೆಗೆ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುವುದನ್ನು ಮುಂದುವರಿಸಲಿದ್ದಾರೆ. ಹಿಂದಿನ ಜೆಡಿಯು-ಬಿಜೆಪಿ ಸರ್ಕಾರದಿಂದ ಕ್ಯಾಬಿನೆಟ್ ಹಂಚಿಕೆಯನ್ನು ಪುನರಾವರ್ತಿಸಲಾಗುವುದು ಎಂದು ಮೂಲಗಳು ಸೂಚಿಸುತ್ತವೆ. ಮೂಲಗಳ ಪ್ರಕಾರ, ನಿತೀಶ್ ಕುಮಾರ್ ಅವರು ತಮ್ಮ ಪ್ರಸ್ತುತ ಸಮ್ಮಿಶ್ರ ಪಾಲುದಾರ ಲಾಲು ಪ್ರಸಾದ್ ಯಾದವ್ ಅವರ ಆರ್ಜೆಡಿ ಮತ್ತು ಎನ್ಡಿಎ ಬಣದ ಸದಸ್ಯರಾಗಿರುವ ಕಾಂಗ್ರೆಸ್ ಎರಡರ ಬಗ್ಗೆಯೂ ಅಸಮಾಧಾನ ಹೊಂದಿದ್ದಾರೆ. ಬಿಹಾರ ಮುಖ್ಯಮಂತ್ರಿಯ ‘ಪರಿವಾರವಾದ್’ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಲಾಲು ಯಾದವ್ ಅವರ ಮಗಳು ರೋಹಿಣಿ ಆಚಾರ್ಯ ಅವರು ಈಗ ಅಳಿಸಿದ ಟ್ವೀಟ್ ನಿಂದ ಅವರು…

Read More

ನವದೆಹಲಿ: ವಾರಣಾಸಿಯ ಜ್ಞಾನವಾಪಿ ಮಸೀದಿಯ ಭಾರತೀಯ ಪುರಾತತ್ವ ಸರ್ವೇಕ್ಷಣಾ (ಎಎಸ್ಐ) ಸಮೀಕ್ಷೆಯ ವರದಿಯು ಹೊಸ ವಿವಾದದ ಅಲೆಯನ್ನು ಹುಟ್ಟುಹಾಕಿದೆ, ಫೋಟೋಗಳು ಮಸೀದಿ ಸಂಕೀರ್ಣದೊಳಗೆ ಹಿಂದೂ ದೇವತೆಗಳ ಪ್ರತಿಮೆಗಳು ಮತ್ತು ಇತರ ವಿಗ್ರಹಗಳ ತುಣುಕುಗಳನ್ನು ಬಹಿರಂಗಪಡಿಸಿವೆ. ಹನುಮಾನ್, ಗಣೇಶ ಮತ್ತು ನಂದಿಯಂತಹ ಹಿಂದೂ ದೇವತೆಗಳ ಮುರಿದ ವಿಗ್ರಹಗಳನ್ನು ತೋರಿಸುವ ಅನೇಕ ಫೋಟೋಗಳನ್ನು ಒಳಗೊಂಡಿರುವ ಸಮೀಕ್ಷೆಯ ವರದಿಯನ್ನು ಇಂಡಿಯಾ ಟುಡೇ ಪ್ರತ್ಯೇಕವಾಗಿ ಪಡೆದುಕೊಂಡಿದ್ದು, ಅವುಗಳನ್ನು ಪ್ರಕಟ ಮಾಡಿದೆ. ಫೋಟೋಗಳು ಹಲವಾರು ಯೋನಿಪಟ್ಟಾಗಳು (ಶಿವಲಿಂಗದ ತಳ) ಮತ್ತು ಅದರ ಕೆಳಭಾಗ ಅಥವಾ ತಳಭಾಗ ಕಾಣೆಯಾಗಿರುವ ಶಿವಲಿಂಗವನ್ನು ಸಹ ಬಹಿರಂಗಪಡಿಸುತ್ತವೆ ಎನ್ನಲಾಗಿದೆ.ಈ ನಡುವೆ ನಾಣ್ಯಗಳು, ಪರ್ಷಿಯನ್ ಭಾಷೆಯಲ್ಲಿ ಕೆತ್ತಲಾದ ಮರಳುಗಲ್ಲಿನ ಚಪ್ಪಡಿ, ಪೆಸ್ಟಲ್ ಮತ್ತು ಹಾನಿಯ ವಿವಿಧ ಸ್ಥಿತಿಗಳಲ್ಲಿನ ಪ್ರತಿಮೆಗಳಂತಹ ಇತರ ವಸ್ತುಗಳ ಪತ್ತೆಯನ್ನು ಸಹ ಕಾಣಬಹುದಾಗಿದೆ ಅಂತತಿಳಿಸಿದೆ. ಕೃಪೆ: ಇಂಡಿಯಾ ಟುಡೇ.ಕಾಮ್‌

Read More

ನವದೆಹಲಿ: ಭಾರತವು ಇಂದು ತನ್ನ 75 ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಕಾರ್ತವ್ಯ ಪಥದಲ್ಲಿ “ಆವಾಹನ್” ಕೇಂದ್ರ ಸ್ಥಾನವನ್ನು ಪಡೆದುಕೊಂಡಿದೆ. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಮತ್ತು ಅಧ್ಯಕ್ಷ ಮುರ್ಮು ಅವರು ಕಾರ್ತವ್ಯ ಪಥಕ್ಕೆ ಆಗಮಿಸಿದಾಗ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಿದರು. ಏತನ್ಮಧ್ಯೆ, 105 ಹೆಲಿಕಾಪ್ಟರ್ ಘಟಕದ ನಾಲ್ಕು ಎಂಐ -17 IV ಹೆಲಿಕಾಪ್ಟರ್ ಗಳು ಕಾರ್ತವ್ಯ ಪಥದಲ್ಲಿ ಹಾಜರಿದ್ದ ಪ್ರೇಕ್ಷಕರ ಮೇಲೆ ಹೂವಿನ ದಳಗಳನ್ನು ಸುರಿಸಿದವು. ರಾಷ್ಟ್ರ ರಾಜಧಾನಿಯನ್ನು ಭದ್ರತೆಯ ಹೊದಿಕೆಯಲ್ಲಿ ಇರಿಸಲಾಗಿದ್ದು, ನಗರದಾದ್ಯಂತ 70,000 ಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಈ ನಡುವೆ ಪ್ರಾಣ ಪ್ರತಿಷ್ಠಾ ಬಳಿಕ ಗಣರಾಜ್ಯೋತ್ಸವ ಮೆರವಣಿಗೆಯಲ್ಲಿ ರಾಮನ ಸ್ತಬ್ಧಚಿತ್ರ ಪ್ರದರ್ಶನ ಕೂಡ ಕಂಡುಬಂದಿದೆ.

Read More