Subscribe to Updates
Get the latest creative news from FooBar about art, design and business.
Author: kannadanewsnow07
ಬೆಂಗಳೂರು : 23-01-2024 ರಂದು ನಡೆಯುವ ಪೊಲೀಸ್ ಉಪ ನಿರೀಕ್ಷಕರ ಹುದ್ದೆ- 2024 (PSI-2024) ಪರೀಕ್ಷೆಗೆ ವಸ್ತ್ರಸಂಹಿತೆ ಪ್ರಕಟಿಸಲಾಗಿದ್ದು ಈನಡುವೆ ಪರೀಕ್ಷ ಪ್ರಾಧಿಕಾರವು ಮಾರ್ಗಸೂಚಿಯನ್ನು ಹೊರಡಿಸಿದೆ. ಪುರುಷ ಅಭ್ಯರ್ಥಿಗಳ ವಸ್ತ್ರ ಸಂಹಿತೆ ವಿವರ ಹೀಗಿದೆ. • ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಶರ್ಟ್ಗಳನ್ನು ಅನುಮತಿಸಲಾಗುವುದಿಲ್ಲವಾದ್ದರಿಂದ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್ಗಳನ್ನು ಧರಿಸುವುದನ್ನು ಖಚಿತಪಡಿಸಿಕೊಳ್ಳಬೇಕು. ಸಾದ್ಯವಾದಷ್ಟು ಕಾಲರ್ರಹಿತ ಶರ್ಟ್ ಧರಿಸಲು ಆದ್ಯತೆ ನೀಡುವುದು. • ಪ್ಯಾಂಟ್ ಮತ್ತು ಸರಳ ಪ್ಯಾಂಟ್ (ಜೇಬುಗಳು ಇಲ್ಲದಿರುವ / ಕಮ್ಮಿ ಜೇಬುಗಳಿರುವ) ಪುರುಷ ಅಭ್ಯರ್ಥಿಗಳಿಗೆ ಆದ್ಯತೆಯ ಡ್ರೆಸ್ ಕೋಡ್ ಆಗಿದೆ. ಕುರ್ತಾ ಪೈಜಾಮನ್ನು, ಜೀನ್ಸ್ ಪ್ಯಾಂಟ್ ಅನುಮತಿಸುವುದಿಲ್ಲ. • ಪುರುಷ ಅಭ್ಯರ್ಥಿಗಳು ಧರಿಸುವ ಬಟ್ಟೆಗಳು ಹಗುರವಾಗಿರಬೇಕು ಅಂದರೆ ಜಿಪ್ ಪಾಕೆಟ್ಗಳು, ಪಾಕೆಟ್ಗಳು, ದೊಡ್ಡ ಬಟನ್ ಗಳು ಮತ್ತು ವಿಸ್ತಾರವಾದ ಕಸೂತಿ ಇರುವ ಬಟ್ಟಗಳು ಇರಬಾರದು.ಪರೀಕ್ಷಾ ಹಾಲ್ ಒಳಗೆ ಶೂಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಭ್ಯರ್ಥಿಗಳು ಸ್ಯಾಂಡಲ್ ಅಥವಾ ತೆಳುವಾದ ಅಡಿಭಾಗ ಇರುವ ಚಪ್ಪಲಿಗಳನ್ನು ಧರಿಸುವುದು ಸೂಕ್ತ. ಅಭ್ಯರ್ಥಿಗಳು…
ಬೆಂಗಳೂರು: ಬೆಂಗಳೂರು : ಶೀಘ್ರದಲ್ಲೇ ರಾಜ್ಯದಲ್ಲಿ ಖಾಲಿ ಇರುವ ಪೊಲೀಸ್ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. ಅವರು ಬುಧವಾರ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಮಾತನಾಡಿದರು. ಇನ್ನೂ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನದ ನಂತರ ಮುಖ್ಯಮಂತ್ರಿಗಳ ಸುದ್ದಿಗೋಷ್ಠಿಯ ಮುಖ್ಯಾಂಶಗಳು ಹೀಗಿವೆ. ನಿಷ್ಠೆಯಿಂದ , ಪ್ರಾಮಾಣಿಕವಾಗಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕೆಂದು ಒತ್ತಾಯ ಪೂರ್ವಕವಾಗಿ ಸೂಚನೆ ನೀಡಲಾಗಿದೆ. • ಯಾವುದೇ ಅಲಕ್ಷ್ಯತೆ, ನಿರ್ಲಕ್ಷ್ಯತೆ, ಬೇಜವಾಬ್ದಾರಿತನವನ್ನು ಸಹಿಸುವುದಿಲ್ಲ. • ಇಂಟೆಲಿಜೆನ್ಸ್ ನಲ್ಲಿ ಪ್ರತ್ಯೇಕ ನೇಮಕಾತಿ ಮತ್ತು ತರಬೇತಿಯ ಹೆಚ್ಚಳ. • ಬೆಂಗಳೂರಿನಲ್ಲಿ 1.50 ಕೋಟಿ ಜನಸಂಖ್ಯೆಯಿದ್ದು, ಹೆಚ್ಚು ಜವಾಬ್ದಾರಿಗಳನ್ನು ವಹಿಸಲು ಹೆಚ್ಚುವರಿ ಡಿಸಿಪಿ ಹುದ್ದೆಗಳನ್ನು ಸೃಜಿಸಲಾಗುತ್ತಿದೆ. • ಸೈಬರ್ ಪೋಲಿಸ್ ಠಾಣೆಗಳಲ್ಲಿ ಎಸಿಪಿ/ಡಿಸಿಪಿ ಮಟ್ಟದ ಅಧಿಕಾರಿಗಳ ನೇಮಕ • ಸೈಬರ್ ಅಪರಾಧಗಳು ಹೆಚ್ಚುತ್ತಿದ್ದು, ದಲಿತರು, ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧಗಳೂ ಹೆಚ್ಚುತ್ತಿದ್ದು , ಇವುಗಳನ್ನು ನಿಯಂತ್ರಿಸಿ, ಅಪರಾಧಿಗಳನ್ನು ಶಿಕ್ಷೆಗೆ…
ಶಿವಮೊಗ್ಗ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್(ಸಿಎಆರ್ ಮತ್ತು ಡಿಎಆರ್-ಪುರುಷ ಮತ್ತು ತೃತೀಯ ಲಿಂಗ ಪುರುಷ) 3064 ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ದಿ: 28-0-01-2024 ರಂದು ಬೆಳಿಗ್ಗೆ 11 ರಿಂದ 12.30 ಗಂಟೆವರೆಗೆ ರಾಜ್ಯಾದ್ಯಂತ ನಡೆಸಲಾಗುವುದು. ಆದ್ದರಿಂದ ಸದರಿ ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಕರೆಪತ್ರದ ಬಗ್ಗೆ ಮುಂಬರುವ ದಿನಗಳಲ್ಲಿ ಎಸ್‍ಎಂಎಸ್ ಮೂಲಕ ಮಾಹಿತಿಯನ್ನು ನೀಡಲಾಗುವುದು ಹಾಗೂ ಕರೆಪತ್ರದ ಲಿಂಕ್‍ನ್ನು ಸಹ ಕಳುಹಿಸಲಾಗುವುದು. ಅಭ್ಯರ್ಥಿಗಳು ಕರಪತ್ರಗಳನ್ನು ಡೌನ್‍ಲೋಡ್ ಮಾಡಿಕೊಂಡು ನಿಗದಿಪಡಿಸಿದ ದಿನಾಂಕದಂದು ಲಿಖಿತ ಪರೀಕ್ಷೆಗೆ ಹಾಜರಾಗಬೇಕೆಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಮಿಥುನ್ ಕುಮಾರ್ ಜಿ ಕೆ ತಿಳಿಸಿದ್ದಾರೆ.
Ayodhya Ram Mandir ನವದೆಹಲಿ: ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮ್ ಲಾಲಾ ಅವರ ಪ್ರತಿಷ್ಠಾಪನಾ ಸಮಾರಂಭಕ್ಕೆ ಇನ್ನು ಕೆಲವೇ ದಿನಗಳು ಉಳಿದಿವೆ. ಅಂತಹ ಪರಿಸ್ಥಿತಿಯಲ್ಲಿ, ದೇವಾಲಯದಲ್ಲಿ ಭವ್ಯ ಸಮಾರಂಭಕ್ಕೆ ಸಿದ್ಧತೆಗಳು ಭರದಿಂದ ಸಾಗಿವೆ. ಏತನ್ಮಧ್ಯೆ, ರಾಮ ಮಂದಿರ ಟ್ರಸ್ಟ್ ರಾಮ ಭಕ್ತರಿಗೆ ವಿಶೇಷ ಮನವಿ ಮಾಡಿದೆ. “ಐದು ಶತಮಾನಗಳ ನಂತರ ಭಗವಾನ್ ರಾಮನು ತನ್ನ ಸರಿಯಾದ ನಿವಾಸಕ್ಕೆ ಮರಳುವ” ಬಗ್ಗೆ ತಮ್ಮ ಆಲೋಚನೆಗಳು ಮತ್ತು ಭಾವನೆಗಳನ್ನು ಹಂಚಿಕೊಳ್ಳುವಂತೆ ರಾಮ ಜನ್ಮಭೂಮಿ ಟ್ರಸ್ಟ್ ವಿಶ್ವದಾದ್ಯಂತದ ಜನರಲ್ಲಿ ಮನವಿ ಮಾಡಿಕೊಂಡಿದೆ. ಜನವರಿ 22 ರಂದು ನಡೆಯಲಿರುವ ರಾಮ್ ದೇವಾಲಯದ ಪ್ರತಿಷ್ಠಾಪನಾ ಸಮಾರಂಭಕ್ಕೆ ಮುಂಚಿತವಾಗಿ ರಾಮ್ ದೇವಾಲಯದ ಔಪಚಾರಿಕ ಚಟುವಟಿಕೆಗಳು ಇಂದು ದೇವಾಲಯದ ಆವರಣದಲ್ಲಿ ಪ್ರಾರಂಭವಾದವು. ಈ ಆಚರಣೆಗಳು ಜನವರಿ 21 ರವರೆಗೆ ಮುಂದುವರಿಯುತ್ತವೆ. ಜನವರಿ 22 ರಂದು, ರಾಮ್ ಲಲ್ಲಾ ವಿಗ್ರಹದ “ಪ್ರಾಣ ಪ್ರತಿಷ್ಠಾಪನೆ” (ಪ್ರತಿಷ್ಠಾಪನೆ) ಗೆ ಅಗತ್ಯವಾದ ಸಮಾರಂಭಗಳು ನಡೆಯಲಿವೆ ಎಂದು ದೇವಾಲಯದ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
Ramlala Pran Pratishtha ನವದೆಹಲಿ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭಗವಾನ್ ರಾಮನ ಭವ್ಯ ದೇವಾಲಯದ ಉದ್ಘಾಟನೆಗಾಗಿ ಎಲ್ಲರೂ ಕುತೂಹಲದಿಂದ ಕಾಯುತ್ತಿದ್ದಾರೆ. ಜನವರಿ 22 ರಂದು ಪ್ರಧಾನಿ ಮೋದಿ ಅವರ ಉಪಸ್ಥಿತಿಯಲ್ಲಿ ಶ್ರೀ ರಾಮ್ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾ ಪ್ರತಿಷ್ಠಾಪನೆ ನಡೆಯಲಿದೆ. ಇದಕ್ಕಾಗಿ ಸಿದ್ಧತೆಗಳು ಭರದಿಂದ ಸಾಗಿವೆ. ಪ್ರತಿಷ್ಠಾಪನೆಗೂ ಮುನ್ನ ದೇವಾಲಯದ ಗರ್ಭಗುಡಿಯಲ್ಲಿ ಚಿನ್ನದ ಬಾಗಿಲುಗಳನ್ನು ಅಳವಡಿಸುವ ಕಾರ್ಯ ನಡೆಯುತ್ತಿದೆ. ಸೋಮವಾರ, ದೇವಾಲಯದ ನೆಲಮಹಡಿಯಲ್ಲಿ ಬಾಗಿಲುಗಳನ್ನು ಅಳವಡಿಸುವ ಕೆಲಸ ಪೂರ್ಣಗೊಂಡಿದೆ. ಎಬಿಪಿ ನ್ಯೂಸ್ ದೇವಾಲಯದ ಒಳಗೆ ಒಂದು ವೀಡಿಯೊವನ್ನು ಬಿಡುಗಡೆ ಮಾಡಿದೆ, ಅದು ದೇವಸ್ಥಾನದ ಒಳಗೆಇರುವ ಅದ್ಭುತ ನೋಟವನ್ನು ತೋರಿಸಿದೆ. ಎರಡು ದಿನಗಳ ಹಿಂದೆ ದೇವಾಲಯದಲ್ಲಿ ಮೊದಲ ಚಿನ್ನದ ಬಾಗಿಲನ್ನು ಸ್ಥಾಪಿಸಲಾಗಿದ್ದು, ಸೋಮವಾರ ಇನ್ನೂ 13 ಬಾಗಿಲುಗಳನ್ನು ಸ್ಥಾಪಿಸಲಾಗಿದೆ ಎನ್ನಲಾಗಿದೆ. ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಎಕ್ಸ್ ನಲ್ಲಿನ ಬಾಗಿಲುಗಳ ಫೋಟೋವನ್ನು ಹಂಚಿಕೊಂಡಿದೆ ಮತ್ತು ಭಗವಾನ್ ಶ್ರೀ ರಾಮ್ ಲಾಲಾ ಸರ್ಕಾರದ ಗರ್ಭಗುಡಿಯಲ್ಲಿ ಚಿನ್ನದ ಲೇಪಿತ ಗೇಟ್ ಅನ್ನು ಸ್ಥಾಪಿಸುವುದರೊಂದಿಗೆ,…
ಬೆಂಗಳೂರು: ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರಕ್ಕೆ ಉಪಚುನಾವಣೆಯ ದಿನಾಂಕ ಘೋಷಣೆ ಮಾಡಲಾಗಿದೆ. ಪುಟ್ಟಣ್ಣ ಅವರ ರಾಜೀನಾಮೆಯಿಂದ ವಿಧಾನಪರಿಷತ್ ನ ಒಂದು ಸ್ಥಾನ ತೆರವಾಗಿತ್ತು. ತೆರವಾಗಿದ್ದ ಸ್ಥಾನಕ್ಕೆ ಉಪ ಚುನಾವಣೆ ದಿನಾಂಕ ಘೋಷಣೆ ಮಾಡಲಾಗಿದೆ. ಫೆಬ್ರವರಿ 16ರಂದು ಮತದಾನ ನಡೆಯಲಿದೆ. ಉಮೇದುವಾರಿಕೆ ಸಲ್ಲಿಸಲು ಜನವರಿ 30 ಕೊನೆಯ ದಿನವಾಗಿದೆ.
ಬೆಂಗಳೂರು: ವಿವಾದದ ಬಳಿಕ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಕಾಟೇರ’ ಚಿತ್ರ ತಂಡದ ಸಕ್ಸಸ್ ಪಾರ್ಟಿ ನಡೆಸಿದ್ದ ಜೆಟ್ ಲ್ಯಾಗ್ ರೆಸ್ಟೋ ಬಾರ್ ಪಬ್ ನ ಲೈಸೆನ್ಸ್ ಅಮಾನತು ಮಾಡಿ ಆದೇಶವನ್ನು ಹೊರಡಿಸಲಾಗಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಅಬಕಾರಿ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಆದೇಶವನ್ನು ಹೊರಡಿಸಿದ್ದಾರೆ ಅಂತ ತಿಳಿದು ಬಂದಿದೆ. ಸದ್ಯ 25 ದಿನಗಳ ಕಾಲ ಮದ್ಯ ಮಾರಾಟ ಮಾಡಲು ನಿಷೇಧ ಹೇರಲಾಗುವುದು ಅಂತ ತಿಳಿದು ಬಂದಿದೆ. ಈ ನಡುವೆ ಇದಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ನಟ ಡಾಲಿ ಧನುಂಜಯ್, ನಟ ಚಿಕ್ಕಣ್ಣ, ರಾಕ್ ಲೈನ್ ವೆಂಕಟೇಶ್, ಅಭಿಷೇಕ್ ಅಂಬರೀಶ್, ನಿನಾಸಂ ಸತೀಶ್, ಡೈರಕ್ಟರ್ ತರುಣ್ ಸುಧೀರ್, ಮೂಸಿಕ್ ಡೈರೆಕ್ಟರ್ ಹರಿಕೃಷ್ಣ ಸೇರಿ ಎಂಟು ಜನರಿಗೆ ನೊಟೀಸ್ ನೀಡಲಾಗಿತ್ತು,. ಎಲ್ಲರೂ ಕೂಡ ಸುಬ್ರಮಣ್ಯ ಠಾಣೆಗೆ ತೆರಳಿ ಮಾಹಿತಿಯನ್ನು ನೀಡಿದರು.
ನವದೆಹಲಿ: ಉತ್ತರ ಪ್ರದೇಶದ ನಿವಾಸಿಯೊಬ್ಬರು ಮುಂಬೈಗೆ ಪ್ರಯಾಣಿಸುವಾಗ ಬಾರ್ಬೆಕ್ಯೂ ನೇಷನ್ನಿಂದ ಆರ್ಡರ್ ಮಾಡಿದ ಆಹಾರದಲ್ಲಿ ಸತ್ತ ಇಲಿಯನ್ನು ಇರೋದನ್ನು ನೋಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಇದುವರೆಗೂ ಎಫ್ಐಆರ್ ದಾಖಲಾಗಿಲ್ಲ ಎನ್ನಲಾಗಿದೆ. ಊಟದ ತುತ್ತು ಸೇವಿಸಿದ ಕೆಲವೇ ಕ್ಷಣಗಳಲ್ಲಿ ಸತ್ತ ಇಲಿಯನ್ನು ಕಂಡು ಶುಕ್ಲಾ ಆಘಾತಕ್ಕೊಳಗಾಗಿದ್ದರು ಎನ್ನಲಾಗಿದೆ. ಜನವರಿ 6 ರಂದು ಮುಂಬೈಗೆ ಆಗಮಿಸಿದ ಶುಕ್ಲಾ ಅನಾರೋಗ್ಯಕ್ಕೆ ಒಳಗಾದರು ಮತ್ತು ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಅವರ ಪ್ರಕಾರ, ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಎಫ್ಐಆರ್ ದಾಖಲು ಮಾಡಲಾಗಿಲ್ಲ ಎನ್ನಲಾಗಿದೆ. ಮಾಧ್ಯಮವೊಂದರ ಜೊತೆ ಮಾತನಾಡಿದ ಶುಕ್ಲಾ ಅವರು ತಮ್ಮ ಆಘಾತಕಾರಿ ಅನುಭವದ ಬಗ್ಗೆ ಮಾತನಾಡಿದರು ಮತ್ತು ಜನವರಿ 9 ರಂದು ಆಸ್ಪತ್ರೆಗೆ ದಾಖಲಾದ ಬಗ್ಗೆ ಮಾತನಾಡಿದರು. ನಾನು ಜನವರಿ 8 ರಂದು ಬಾರ್ಬೆಕ್ಯೂ ನೇಷನ್ನ ಆನ್ಲೈನ್ ಅಪ್ಲಿಕೇಶನ್ನಿಂದ ಸಸ್ಯಾಹಾರಿ ಊಟವನ್ನು ಆರ್ಡರ್ ಮಾಡಿದ್ದೇನೆ, ಆದರೆ ನನಗೆ ನೀಡಿದ ಆಹಾರವು ಕಲುಷಿತವಾಗಿತ್ತು. ಸಸ್ಯಾಹಾರಿ ಊಟದಲ್ಲಿ ಅನ್ನ, ಸಬ್ಜಿ (ತರಕಾರಿ ಪಲ್ಯ), ದಾಲ್, ಪರೋಟಗಳು,…
ಬೆಂಗಳೂರು: ಬೆಂಗಳೂರು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 2023-24ನೇ ಸಾಲಿನಲ್ಲಿ ಅಸಿಡ್ ದಾಳಿಗೊಳಗಾದ ಮಹಿಳೆಯರ ಪುನರ್ವಸತಿಗಾಗಿ ‘ಗೆಳತಿ ಯೋಜನೆ’ಯನ್ನು ಅನುμÁ್ಠನಗೊಳಿಸುತ್ತಿದ್ದು, ಸದರಿ ಯೋಜನೆಯಡಿ ಪ್ರತಿ ಫಲಾನುಭವಿಗೆ ಘಟಕ ವೆಚ್ಚ ರೂ.5,00.000/- (ಸಾಲ ರೂ.2,50,000/- ಹಾಗೂ ಸಹಾಯಧನ ರೂ.2,50,000/-ಗಳು) ವರೆಗೆ ನೀಡಲಾಗುತ್ತದೆ. ಗೆಳತಿ ಯೋಜನೆಯಡಿ ಆಸಿಡ್ ದಾಳಿಗೊಳಗಾದ ಸಂತ್ರಸ್ತ ಮಹಿಳೆಯರು ನಿಗದಿತ ಅರ್ಜಿ ನಮೂನೆಯನ್ನು ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, 6ನೇ ಮಹಡಿ, ಜಯನಗರ ವಾಣಿಜ್ಯ ಸಂಕೀರ್ಣ, 4ನೇ ಬ್ಲಾಕ್, ಜಯನಗರ, ಬೆಂಗಳೂರು- 560011 ಇಲ್ಲಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಕಛೇರಿ ಅವಧಿಯಲ್ಲಿ ಜನವರಿ 31 ರೊಳಗೆ ಸದರಿ ಕಚೇರಿಗೆ ಅರ್ಜಿಗಳನ್ನು ಸಲ್ಲಿಸಬಹದು. ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲೆಯ ಉಪ ನಿರ್ದೇಶಕರನ್ನು ಸಂಪರ್ಕಿಸುವಂತೆ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ ಚಾಮರಾಜನಗರ: ಗಡಿಜಿಲ್ಲೆ ಚಾಮರಾಜನಗರದಲ್ಲಿ ಸಂಕ್ರಾತಿಯಂದು ಸಾವಿನ ಸರಮಾಲೆಯಾಗಿದ್ದು ಸಂತೆಮರಳ್ಳಿ ಠಾಣಾ ವ್ಯಾಪ್ತಿಯ ಪೊಲೀಸರು ದಾಳಿ ಮಾಡಿದ ಭೀತಿಯಲ್ಲಿ ಓಡಿದ ವೇಳೆ ಮೃತಪಟ್ಟ ಘಟನೆ ನಡೆದಿದೆ . ಚಾಮರಾಜನಗರ ತಾಲೂಕಿನ ಕೆಂಪನಪುರ ಗ್ರಾಮದ ಬಸವಣ್ಣ (62) ಎಂಬುವವರೆ ಮೃತ ದುರ್ದೈವಿಯಾಗಿದ್ದಾರೆ. ಸಂಕ್ರಾತಿ ಹಬ್ಬದ ಹಿನ್ನೆಲೆ ಕೆರೆ ಏರಿ ಸಮೀಪ ಪಾನಗೋಷ್ಟಿ ಮಾಡುತ್ತಿದ್ದ ವೇಳೆ ಪೊಲೀಸರನ್ನು ಕಂಡು ಹೆದರಿ ಓಡಿದ್ದಾರೆ. ಹೆದರಿ ದಿಕ್ಕಾಪಾಲಾಗಿ ಓಡುವಾಗ ಬಸವಣ್ಣ ಅವರು ಹೃದಯಾಘಾತವಾಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಸಮರ್ಥಿಸಿಕೊಂಡರೂ ಆ ಸ್ಥಳದಲ್ಲಿ ಜೂಜಾಟ ನಡೆಯುತ್ತಿತ್ತು ಎಂದು ಕೆಲವರ ಆರೋಪವಾಗಿದೆ. ಪಾರ್ಟಿ ಮಾಡುವವರನ್ನು ಜೂಜಾಟ ಆಡುತ್ತಿದ್ದಾರೆಂದು ಪೊಲೀಸರು ಓಡಿಸಿಕೊಂಡು ಹೋಗಿದ್ದರಿಂದಲೇ ಹೃದಯಾಘಾತದಿಂದ ಬಸವರಾಜು ನಿಧನರಾಗಿದ್ದಾರೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ಕೆಲವೆಡೆ ಗ್ರಾಮಗಳಲ್ಲಿ ಜೂಜಾಟ ಎಗ್ಗಿಲ್ಲದೆ ನಡೆಯುತ್ತಿದ್ದು ಇದಕ್ಕೆ ಕೆಲ ಪೊಲೀಸರ ಕುಮ್ಮಕ್ಕು ಇದೆ ಎನ್ನಲಾಗಿದೆ. ಈ ಸಂಬಂದ ದಾಳಿ ನಡೆದಾಗ ಯಾವ ಪೊಲೀಸರು ಹೋಗಿದ್ದರು ಎಂಬ ಮಾಹಿತಿ ಬಗ್ಗೆ ಯಾರೂಬ್ಬರು ಸ್ಪಷ್ಟ ಉತ್ತರ ನೀಡಲು ನಿರಾಕರಿಸಿದ್ದಾರೆ.…