Subscribe to Updates
Get the latest creative news from FooBar about art, design and business.
Author: kannadanewsnow07
ನವದೆಹಲಿ: ಸಂವಿಧಾನದಲ್ಲಿ ಭಾರತೀಯವಾದುದು ಏನೂ ಇಲ್ಲ ಎಂದು ನಿಮ್ಮ ನಾಯಕ ಸಾವರ್ಕರ್ ಹೇಳಿದ್ದಾರೆ ಅಂತ ಸಂಸತ್ತಿನಲ್ಲಿ ರಾಹುಲ್ ಗಾಂಧಿ ಹೇಳಿದ್ದಾರೆ. ಭಾರತದ ಸಂವಿಧಾನವನ್ನು ಅಂಗೀಕರಿಸಿದ 75 ನೇ ವಾರ್ಷಿಕೋತ್ಸವದ ಚರ್ಚೆಯ ಸಂದರ್ಭದಲ್ಲಿ, ಲೋಕಸಭೆಯ ಎಲ್ಒಪಿ ರಾಹುಲ್ ಗಾಂಧಿ, ಮಾತನಾಡಿ, ಆರ್ಎಸ್ಎಸ್ನ ಆಲೋಚನೆಗಳ ಆಧುನಿಕ ವ್ಯಾಖ್ಯಾನವು ಭಾರತದ ಸಂವಿಧಾನದ ಬಗ್ಗೆ ಏನು ಹೇಳುತ್ತದೆ ಮತ್ತು ಭಾರತವನ್ನು ಹೇಗೆ ನಡೆಸಬೇಕು ಎಂದು ಅವರು ಭಾವಿಸುತ್ತಾರೆ ಎಂಬುದನ್ನು ಉಲ್ಲೇಖಿಸುವ ಮೂಲಕ ನಾನು ನನ್ನ ಭಾಷಣವನ್ನು ಪ್ರಾರಂಭಿಸಲು ಬಯಸುತ್ತೇನೆ ಅಂತ ಹೇಳಿದರು. ಇದೇ ವೇಳೆ ಅವರು ಇಂದು ಮನುಸ್ಮೃತಿಯೇ ಕಾನೂನು. ಇದು ಸಾವರ್ಕರ್ ಅವರ ಮಾತುಗಳು… ನಮ್ಮ ಸಂವಿಧಾನದಲ್ಲಿ ಭಾರತೀಯವಾದುದು ಏನೂ ಇಲ್ಲ ಎಂದು ಸಾವರ್ಕರ್ ತಮ್ಮ ಬರಹಗಳಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ. ಭಾರತವು ನಡೆಸುತ್ತಿರುವ ಪುಸ್ತಕವನ್ನು ಈ ಪುಸ್ತಕವು ಮೀರಿಸಬೇಕು ಎಂದು ಅವರು ಸ್ಪಷ್ಟವಾಗಿ ಹೇಳಿದ್ದಾರೆ ಅಂತ ಹೇಳಿದರು. https://twitter.com/ANI/status/1867856825309417750
ಬೆಂಗಳೂರು : 2023-24 ಮತ್ತು 2024-25ನೇ ಸಾಲಿನ ಶೈಕ್ಷಣಿಕ ಧನ ಸಹಾಯ ಪಡೆಯಲು ಅರ್ಹ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ತಮ್ಮ ಮಕ್ಕಳ ಅರ್ಜಿಗಳನ್ನು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ (ಎಸ್ಎಸ್ಪಿ) ಮೂಲಕ ಸಲ್ಲಿಸಲು ಡಿಸೆಂಬರ್ 31ರ ವರೆಗೆ ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳಿಗೆ ಪ್ರಮುಖ ಸೂಚನೆಗಳು ಹೀಗಿದೆ: ಎಲ್ಲಾ ನೋಂದಾಯಿತ ಕಟ್ಟಡ ಕಾರ್ಮಿಕರು – ដ https://kbocwwb. karnataka.gov.in (Registration Number) 2 (Reference Number) ನಮೂದಿಸಿ ಕಡ್ಡಾಯವಾಗಿ ದಿನಾಂಕ: 31-12-2024 ರೊಳಗೆ ಆಧಾರ್ ಕಾರ್ಡ್ ಸಂಖ್ಯೆಯನ್ನು ಲಿಂಕ್ ಮಾಡಲು ಸೂಚಿಸಿದೆ. ಅಲ್ಲದೇ ಎಲ್ಲಾ ನೋಂದಾಯಿತ ಕಟ್ಟಡ ಕಾರ್ಮಿಕರು ತಮ್ಮ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಯೊಂದಿಗೆ ಜೋಡಣೆ ಮಾಡಿ ಎನ್.ಪಿ.ಸಿ.ಐ ಮ್ಯಾಪಿಂಗ್ (NPCI Mapping) ಮಾಡಿಸುವುದು ಕಡ್ಡಾಯವಾಗಿರುತ್ತದೆ. ಈ ಹಿಂದೆ ಪ್ರೀ ಮೆಟ್ರಿಕ್ (1 ರಿಂದ 10ನೇ ತರಗತಿ) ತರಗತಿಗಳಲ್ಲಿ ಶೈಕ್ಷಣಿಕ ಧನಸಹಾಯಕ್ಕಾಗಿ ಎಸ್.ಎಸ್.ಪಿ ತಂತ್ರಾಂಶದ ಮೂಲಕ ಕರ್ನಾಟಕ ಸರ್ಕಾರದ ಯಾವುದಾದರೂ ಇಲಾಖೆಗೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ವಿದ್ಯಾರ್ಥಿವೇತನ ಪಡೆದಿದ್ದಲ್ಲಿ ಅಂತಹ…
ನವದೆಹಲಿ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಆಧಾರ್ ವಿವರಗಳ ಉಚಿತ ನವೀಕರಣದ ದಿನಾಂಕವನ್ನು ಮತ್ತೊಮ್ಮೆ ವಿಸ್ತರಿಸಿದೆ. ಆಧಾರ್ ವಿವರಗಳನ್ನು ಉಚಿತವಾಗಿ ನವೀಕರಿಸುವ ಕೊನೆಯ ದಿನಾಂಕವನ್ನು ಜೂನ್ 14, 2025 ರವರೆಗೆ ವಿಸ್ತರಿಸಲಾಗಿದೆ ಎಂದು ಯುಐಡಿಎಐ ಶನಿವಾರ ತಿಳಿಸಿದೆ. ಈ ಮೊದಲು ಕೊನೆಯ ದಿನಾಂಕ ಡಿಸೆಂಬರ್ 14, 2024 ಆಗಿತ್ತು. ಆಧಾರ್ ಸಂಖ್ಯೆಯು ಒಂದು ರೀತಿಯದ್ದಾಗಿದೆ ಮತ್ತು ಇದು ಅವರ ವಿಶಿಷ್ಟ ಬಯೋಮೆಟ್ರಿಕ್ ಮಾಹಿತಿಯೊಂದಿಗೆ ಸಂಬಂಧ ಹೊಂದಿರುವುದರಿಂದ ಯಾವುದೇ ನಿವಾಸಿಗೆ ನಕಲು ಮಾಡಲು ಸಾಧ್ಯವಿಲ್ಲ. ಈ ವ್ಯವಸ್ಥೆಯು ನಕಲಿ ಅಥವಾ ಅಸ್ತಿತ್ವದಲ್ಲಿಲ್ಲದ ಗುರುತುಗಳನ್ನು ಗುರುತಿಸಲು ಮತ್ತು ತಡೆಗಟ್ಟಲು ಸಹಾಯ ಮಾಡುತ್ತದೆ, ಸರ್ಕಾರಿ ಕಾರ್ಯಕ್ರಮಗಳಲ್ಲಿ ಸೋರಿಕೆಯನ್ನು ಕಡಿಮೆ ಮಾಡುತ್ತದೆ. ನಕಲಿ ಮತ್ತು ನಕಲಿ ಆಧಾರ್ ಸಂಖ್ಯೆಗಳನ್ನು ತೆಗೆದುಹಾಕುವ ಮೂಲಕ, ಸರ್ಕಾರಗಳು ಅರ್ಹ ನಿವಾಸಿಗಳಿಗೆ ಹೆಚ್ಚಿನ ಸಂಪನ್ಮೂಲಗಳನ್ನು ಹಂಚಿಕೆ ಮಾಡಬಹುದು, ಇದರಿಂದಾಗಿ ವ್ಯಾಪಕ ಜನಸಂಖ್ಯೆಗೆ ಪ್ರಯೋಜನಗಳನ್ನು ವಿಸ್ತರಿಸಬಹುದು. ಆನ್ಲೈನ್ನಲ್ಲಿ ಆಧಾರ್ ಅನ್ನು ಉಚಿತವಾಗಿ ನವೀಕರಿಸುವುದು ಹೇಗೆ? 1. ಯುಐಡಿಎಐನ ಅಧಿಕೃತ ವೆಬ್ಸೈಟ್ಗೆ ಹೋಗಿ. 2.…
ನವದೆಹಲಿ: ಮಾಜಿ ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ ಅವರನ್ನು ವಾಡಿಕೆಯ ತಪಾಸಣೆಗಾಗಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಪ್ರಸ್ತುತ ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ ಮತ್ತು ಅವರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಲಾಗಿದೆ. ಅವರು ಕಳೆದ ಎರಡು ವಾರಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ವರ್ಷದ ಆಗಸ್ಟ್ ನಲ್ಲಿ ಅಡ್ವಾಣಿ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಅವರು ನರವಿಜ್ಞಾನಿ ಡಾ.ವಿನೀತ್ ಸೂರಿ ಅವರ ವೀಕ್ಷಣೆಯಲ್ಲಿದ್ದರು ಮತ್ತು ಅವರ ಆರೋಗ್ಯ ಸುಧಾರಿಸಿದ ನಂತರ ಅವರನ್ನು ಬಿಡುಗಡೆ ಮಾಡಲಾಯಿತು. ಅದಕ್ಕೂ ಒಂದು ತಿಂಗಳ ಮೊದಲು, ಜೂನ್ 26 ರಂದು ರಾತ್ರಿ 10: 30 ಕ್ಕೆ, ಅವರನ್ನು ಚಿಕಿತ್ಸೆಗಾಗಿ ದೆಹಲಿ ಏಮ್ಸ್ನ ಮೂತ್ರಶಾಸ್ತ್ರ ವಿಭಾಗಕ್ಕೆ ದಾಖಲಿಸಲಾಯಿತು. ಡಾ.ಅಮರೇಶ್ ಸೇಠ್ ಅವರ ಮೇಲ್ವಿಚಾರಣೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಯಿತು ಮತ್ತು ಮರುದಿನ ಅವರನ್ನು ಬಿಡುಗಡೆ ಮಾಡಲಾಯಿತು. ಮಾರ್ಚ್ 30, 2024 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅವರಿಗೆ ಭಾರತ ರತ್ನ ಪ್ರಶಸ್ತಿಯನ್ನು ಪ್ರದಾನ…
ಬೆಂಗಳೂರು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ಹಾಗೂ ರುಡ್ಸೆಟ್ ಸಂಸ್ಥೆಯಿಂದ ಟಿವಿ ರಿಪೇರಿ ಕುರಿತು 30 ದಿನಗಳ ಉಚಿತ ತರಬೇತಿಗೆ ಆಸಕ್ತ ಗ್ರಾಮೀಣ ನಿರುದ್ಯೋಗಿ ಯುವಕ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದು, ಬರಹ ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ತರಬೇತಿ ವಸತಿಯುತವಾಗಿದ್ದು, ಉಚಿತವಾಗಿ ಊಟ, ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ,ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ದೂ.ಸಂ. 9740982585, 9380162042, 9241482541 ಗೆ ಸಂಪರ್ಕಿಸಲು ರುಡ್ಸೆಟ್ ಸಂಸ್ಥೆ ಶಾಖೆಯ ನಿರ್ದೇಶಕರಾದ ರವಿಕುಮಾರ ತಿಳಿಸಿದ್ದಾರೆ.
ಹೈದರಾಬಾದ್: ಸಂಧ್ಯಾ ಚಿತ್ರಮಂದಿರದಲ್ಲಿ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ನಾಂಪಲ್ಲಿ ನ್ಯಾಯಾಲಯದ 14 ದಿನಗಳ ರಿಮಾಂಡ್ ಆದೇಶದ ನಂತರ ಚಂಚಲಗುಡ ಜೈಲಿನಲ್ಲಿದ್ದ ನಟ ಅಲ್ಲು ಅರ್ಜುನ್ ಅವರನ್ನು ಶನಿವಾರ ಬೆಳಿಗ್ಗೆ ಬಿಡುಗಡೆ ಮಾಡಲಾಯಿತು. ತೆಲಂಗಾಣ ಹೈಕೋರ್ಟ್ ಅವರಿಗೆ ನಾಲ್ಕು ವಾರಗಳ ಮಧ್ಯಂತರ ಜಾಮೀನು ನೀಡಿತ್ತು. ಅಲ್ಲು ಅರ್ಜುನ್ ಅವರ ಕಾನೂನು ತಂಡವು ಜೈಲು ಅಧಿಕಾರಿಗಳಿಗೆ 50,000 ರೂ.ಗಳ ಜಾಮೀನು ಬಾಂಡ್ ಸಲ್ಲಿಸಿದೆ. ಆದಾಗ್ಯೂ, ಹೈಕೋರ್ಟ್ನಿಂದ ಜಾಮೀನು ದಾಖಲೆಗಳನ್ನು ಶುಕ್ರವಾರ ತಡರಾತ್ರಿ ಸ್ವೀಕರಿಸಲಾಯಿತು, ಇದರ ಪರಿಣಾಮವಾಗಿ ನಟ ಮರುದಿನ ಬೆಳಿಗ್ಗೆ ಬಿಡುಗಡೆಯಾಗುವ ಮೊದಲು ರಾತ್ರಿಯನ್ನು ಜೈಲಿನಲ್ಲಿ ಕಳೆದರು. ಈ ನಡುವೆ ತೆಲುಗು ಸೂಪರ್ಸ್ಟಾರ್ ಅಲ್ಲು ಅರ್ಜುನ್ ಅವರು ಕಾನೂನನ್ನು ಗೌರವಿಸುತ್ತಾರೆ ಮತ್ತು ಸಂಧ್ಯಾ ಚಿತ್ರಮಂದಿರದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಜೈಲಿನಿಂದ ಬಿಡುಗಡೆಯಾದ ನಂತರ ಅಧಿಕಾರಿಗಳಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು. https://twitter.com/ANI/status/1867771291228680320 ಈ ಸುದ್ದಿ ನವೀಕರಿಸಲಾಗುತ್ತಿದೆ. ಶೀಘ್ರದಲ್ಲಿ ಹೆಚ್ಚಿನ ಮಾಹಿತಿಯನ್ನು ಸೇರಿಸಲಾಗುವುದು…!
ಬೆಳಗಾವಿ:ಜನರಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಹಾಗೂ ಸಕ್ಕರೆ ಕಾಯಿಲೆಯನ್ನು ನಿಯಂತ್ರಿಸಲು ಸಿರಿಧಾನ್ಯದ ಬಳಕೆ ಸಹಕಾರಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಬೆಳಗಾವಿ ಸುವರ್ಣಸೌಧದಲ್ಲಿ ಅಂತರರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳದ ಪೂರ್ವಭಾವಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿರಿಧಾನ್ಯದಲ್ಲಿ ಪೆÇ್ರಟೀನ್ ಹಾಗೂ ನಾರಿನ ಅಂಶ ಹೆಚ್ಚಾಗಿದ್ದು, ರೈತರು ಹೆಚ್ಚಿನ ಸಂಖ್ಯೆಯಲ್ಲಿ ಸಿರಿಧಾನ್ಯ ಕೃಷಿಯನ್ನು ತೊಡಗಿಕೊಳ್ಳಬೇಕು ಎಂದರು. ದೇಶದಲ್ಲಿ ಕರ್ನಾಟಕ ರಾಜ್ಯ ಸಿರಿಧಾನ ಉತ್ಪಾದನೆಯಲ್ಲಿ ಮೂರನೇ ಸ್ಥಾನದಲ್ಲಿದೆ. ಸುಮಾರು 18.38 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 22.16 ಲಕ್ಷ ಟನ್ ಗಳಷ್ಟು ಸಿರಿಧಾನ್ಯವನ್ನು ರಾಜ್ಯದಲ್ಲಿ ಬೆಳೆಯಲಾಗುತ್ತಿದೆ ಎಂದು ತಿಳಿಸಿದರು. ದೇಶ ವಿದೇಶಗಳಲ್ಲಿ ಸಿರಿಧಾನ್ಯಗಳ ಬೇಡಿಕೆ ಹೆಚ್ಚಾಗುತ್ತಿದ್ದು, ವಿಶ್ವದಲ್ಲಿ 903.61 ಲಕ್ಷ ಟನ್ ಗಳಷ್ಟು ಸಿರಿಧಾನ್ಯವನ್ನು ಬೆಳೆಯಲಾಗುತ್ತಿದೆ. ಭಾರತದಲ್ಲಿ 31.50 ರಷ್ಟು ಸಿರಿಧಾನ್ಯವನ್ನು ಬೆಳೆಯುತ್ತಿದ್ದು, ವಿಶ್ವದಲ್ಲಿ ಅತ್ಯಂತ ಹೆಚ್ಚು ಸಿರಿಧಾನ್ಯ ಬೆಳೆಯುವ ದೇಶವಾಗಿದೆ ಎಂದರು. ಬೆಂಗಳೂರಿನ ನಗರದ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಅಂತರರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ…
ಬೆಳಗಾವಿ: ರಾಜ್ಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಮಾಸಿಕ ಗೌರವ ಧನವನ್ನು ಹೆಚ್ಚಳ ಮಾಡುವ ಬಗ್ಗೆ ಸಲ್ಲಿಸಲಾಗಿರುವ ಬೇಡಿಕೆಯನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತಂದು ಈ ಬಗ್ಗೆ ಅವರೊಂದಿಗೆ ಚರ್ಚಿಸಿ ಕ್ರಮ ವಹಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕಾ ಖರ್ಗೆ ಹೇಳಿದರು. ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಸದಸ್ಯ ಡಾ. ಧನಂಜಯ ಸರ್ಜಿ ಹಾಗೂ ಡಿ.ಎಸ್ ಅರುಣ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಕೇರಳ ರಾಜ್ಯದಲ್ಲಿ ರುವಂತೆ ಮಾಸಿಕ ಗೌರವ ಧನವನ್ನು ಹೆಚ್ಚಳ ಮಾಡಲು ಸಾಧ್ಯವಿಲ್ಲ ಆದರೆ ಹೆಚ್ಚಳ ಮಾಡುವ ಕುರಿತ ಮನವಿಯನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗುವುದು ಎಂದರು. ಗ್ರಾಮ ಪಂಚಾಯತ್ ಸದಸ್ಯರಿಗೆ ಪಿಂಚಣಿ, ಉಚಿತ ಬಸ್ ಪಾಸ್ ಮತ್ತು ಆರೋಗ್ಯ ವಿಮೆ ನೀಡುವ ಪ್ರಸ್ತಾವನೆ ಸರ್ಕಾರದ…
ಬೆಳಗಾವಿ: ರಾಜ್ಯದಲ್ಲಿ ಹೊಸದಾಗಿ 3988 ಅಂಗನವಾಡಿ ಕೇಂದ್ರಗಳನ್ನು ತೆರೆಯಲು ಕೇಂದ್ರ ಸರ್ಕಾರದ ಅನುಮೋದನೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮಿ ಆರ್. ಹೆಬ್ಬಾಳ್ಕರ್ ಹೇಳಿದರು. ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಸದಸ್ಯ ಜವರಾಯಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸುತ್ತಾ, ಹೊಸದಾಗಿ ಅಂಗನವಾಡಿ ಕೇಂದ್ರ ಪ್ರಾರಂಭಿಸಲು ಕೇಂದ್ರ ಸರ್ಕಾರದ ಅನುಮೋದನೆ ಅವಶ್ಯಕವಿರುತ್ತದೆ. ಏಕೆಂದರೆ ಅಂಗನವಾಡಿ ಕೇಂದ್ರದಲ್ಲಿ ಫಲಾನುಭವಿಗಳಿಗೆ ಪೂರೈಸಲಾಗುವ ಪೂರಕ ಪೌಷ್ಟಿಕ ಆಹಾರ ಯೋಜನೆಯಡಿ ಹಂಚಿಕೆ ಅನುದಾನದಲ್ಲಿ ಕೇಂದ್ರದ ಪಾಲು ಶೇ.20ರಷ್ಟು ಇರುತ್ತದೆ. ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಗೌರವಧನ ಪಾವತಿಯಲ್ಲಿ ಆಡಳಿತ ವೆಚ್ಚದಡಿ ಅನುದಾನ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದ ಪಾಲು ಶೇ.30ರಷ್ಟಿರುತ್ತದೆ. ಮುಂದುವರೆದು ಸಬ್ಸಿಡಿ ದರದಲ್ಲಿ ಅಕ್ಕಿ ಮತ್ತು ಗೋಧಿಯನ್ನು ಸಹ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಹಂಚಿಕೆ ಮಾಡುತ್ತದೆ. ಹಾಲಿ ಕರ್ನಾಟಕ ರಾಜ್ಯದಲ್ಲಿ ಕೇಂದ್ರ ಸರ್ಕಾರದ ಅನುಮೋದಿತ 65931 ಅಂಗನವಾಡಿ ಕೇಂದ್ರಗಳು ಹಾಗೂ…
ಬೆಳಗಾವಿ: ಕಳೆದ ಡಿ. 10 ರಂದು ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯದ ಮೀಸಲಾತಿ ಸಂಬಂಧ ಪ್ರತಿಭಟನೆ ನಡೆಯುತ್ತಿದ್ದ ಸಂದರ್ಭದಲ್ಲಿ ಜರುಗಿದ ಲಾಠಿ ಚಾರ್ಜ್ ನಂತಹ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಕಾನೂನು ಸುವ್ಯವಸ್ಥೆ ಪಾಲನೆ ಉದ್ದೇಶದಿಂದ ಸರ್ಕಾರ ತನ್ನ ಜವಾಬ್ದಾರಿಯನ್ನು ಸರಿಯಾಗಿಯೇ ನಿಭಾಯಿಸಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಹೇಳಿದರು. ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ವಿಧಾನಸಭೆ ಸಭಾಂಗಣದಲ್ಲಿ ಗುರುವಾರದಂದು ಪಂಚಮಸಾಲಿ ಮೀಸಲಾತಿ ಪ್ರತಿಭಟನೆಯ ಘಟನೆಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ ಅವರು, ನಾನು ಕಳೆದ ಡಿ. 10 ರಂದು ನಡೆದ ಘಟನೆಗೆ ಸೀಮಿತಗೊಳಿಸಿ ನನ್ನ ನೇಳಿಕೆ ನೀಡುತ್ತಿದ್ದು, ಮೀಸಲಾತಿ ವಿಷಯದ ಬಗ್ಗೆ ಮಾತನಾಡುವುದಿಲ್ಲ. ಡಿ. 09 ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುವ ಬಗ್ಗೆ ಘೋಷಣೆಯಾದ ಬಳಿಕ ಜಯ ಮೃತ್ಯುಂಜಯ ಸ್ವಾಮೀಜಿಯವರು, ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕುರಿತಂತೆ ಬೆಳಗಾವಿಯಲ್ಲಿ 5 ಸಾವಿರ ಟ್ರ್ಯಾಕ್ಟರ್ ತಂದು ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಕರೆ ಕೊಟ್ಟಿದ್ದರು. ಪ್ರತಿಭಟನೆ ಮಾಡುವುದು ಎಲ್ಲರ…