Subscribe to Updates
Get the latest creative news from FooBar about art, design and business.
Author: kannadanewsnow07
ಬೆಂಗಳೂರು: ನನ್ನ ಜೊತೆಗಿದ್ದ ಹುಡುಗರಿಂದ ನಾನು ಹಾಳಾದೆ ಅಂಥ ತನಿಖೆ ವೇಳೆ ಪೊಲೀಸರ ಮುಂದೆ ನಟ ದರ್ಶನ್ ಪಶ್ಚಾತಾಪದ ಮಾತುಗಳನ್ನು ಹೇಳಿದ್ದಾರೆ ಎನ್ನಲಾಗಿದೆ. ಸದ್ಯ ರೇಣುಕಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್ ಪರಪ್ಪನ ಅಗ್ರಹಾರದಲ್ಲಿರುವ ಜೈಲಿನಲ್ಲಿ ದಿನ ಕಳೆಯುತ್ತಿದ್ದಾರೆ. ಇತ್ತ ನಟ ದರ್ಶನ್ ಪ್ರೇಯಸಿ ಕೂಡ ಈಗ ಉಲ್ಟಾ ಹೊಡೆಯುತ್ತಿದ್ದಾಳೆ ಎನ್ನಲಾಗಿದ್ದು, ಕೋರ್ಟಿನಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿರುವುದು ಈಗ ಎಲ್ಲರ ಹುಬ್ಬೇರಿಸುವಂತೆ ಮಾಡಿದೆ. ದರ್ಶನ್ ಗೆಳತಿ ಪವಿತ್ರಗೌಡಳಿಂದಲೇ ಪ್ರಕರಣ ಈ ಹಂತಕ್ಕೆ ಬಂದು ನಿಂತಿದೆ ಅಂತ ಜನತೆ ಮಾತನಾಡಿಕೊಳ್ಳುತ್ತಿದ್ದು, ಆಕೆಯಿಂದಲೇ ಇಂದು ನಟ ದರ್ಶನ್ ಜೀವನ ಹಾಳಾಗಿದೆ ಎನ್ನಲಾಗಿದೆ. ಈ ನಡುವೆ ಬೆಂಗಳೂರಿನ ಪಟ್ಟಣಗೆರೆ ಶೆಡ್, ದರ್ಶನ್, ಪವಿತ್ರಾ ಮನೆ, ಸ್ಟೂನಿ ಬ್ರೂಕ್ ಹೋಟೆಲ್, ಮೈಸೂರಿನ ಹೋಟೆಲ್, ಚಿತ್ರದುರ್ಗದಲ್ಲಿ ರೇಣುಕಾ ಸ್ವಾಮಿ ಮನೆ, ಆರೋಪಿಗಳ ಮನೆ ಇನ್ನಿತರೆ ಕಡೆಗಳಲ್ಲಿ ಪೊಲೀಸರು ಸ್ಥಳ ಮಹಜರು ಮಾಡಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಆರೋಪ ಪಟ್ಟಿಯನ್ನು ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ ಎನ್ನಲಾಗಿದೆ.
ಮಂಡ್ಯ: ಕಾಂಗ್ರೆಸ್ ಶಾಸಕರಿಗೆ ನೂರು ಕೋಟಿ ಆಫರ್ ನೀಡಿ ಬಿಜೆಪಿ-ಜೆಡಿಎಸ್ ನಾಯಕರು ನಮ್ಮ ಸರ್ಕಾರವನ್ನು ಬೀಳಿಸಲು ಮುಂದಾಗುತ್ತಿದ್ದಾರೆ ಅಂತ ಮಂಡ್ಯ ಕೈ ಶಾಸಕ ರವಿಕುಮಾರ್ ಹೇಳಿದ್ದಾರೆ. ಅವರು ಈ ಬಗ್ಗೆ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಮಾಹಿತಿ ನೀಡಿದರು, ಇದೇ ವೇಳೆ ಅವರು ಮಧ್ಯವರ್ತಿಗಳ ಮೂಲಕ ಐವತ್ತು ಮಂದಿ ಕಾಂಗ್ರೆಸ್ ಶಾಸಕರಿಗೆ ನೂರು ಕೋಟಿ ಆಫರ್ ನೀಡುತ್ತಿದ್ದಾರೆ ಅಂತ ಹೇಳಿದರು. ಇನ್ನೂ ಇದೇ ವೇಳೆ ಅವರು ಮಾತನಾಡುತ್ತ ಸಂತೋಶ್, ಶೋಭಾ, ಕುಮಾರಸ್ವಾಮಿಯವರು ಇದರಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಅಂತ ಅವರು ಆರೋಪಿಸಿದರು. ಇನ್ನೂ ನನ್ನ ಬಳಿ ದಾಖಲೆಗಳು ಇದ್ದು ಅವುಗಳನ್ನು ಶೀಘ್ರದಲ್ಲಿ ಬಿಡುಗಡೆ ಮಾಡಲಾಗುವುದು ಅಂತ ತಿಳಿಸಿದರು.
ಬೆಂಗಳೂರು: ರಾಜ್ಯ ವಿಧಾನಸಭೆಯ ಅಂದಾಜು ಸಮಿತಿಯು ನೋಂದಣಿ ಇಲಾಖೆ ನೀಡುವ ‘ಎನಿವೇರ್ ನೋಂದಣಿ’ ಸೇವೆಯನ್ನು ರಾಜ್ಯ ಮಟ್ಟದ ಕಾರ್ಯವಿಧಾನವಾಗಿ ವಿಸ್ತರಿಸುವುದಕ್ಕೆ ಮುಂದಾಗಿದೆ. ಸಾರ್ವಜನಿಕರು ಸ್ಥಿರಾಸ್ತಿ ನೋಂದಣಿಗಾಗಿ ನಿರ್ದಿಷ್ಟ ಉಪ ನೋಂದಣಿ ಕಚೇರಿಗೆ ಭೇಟಿ ನೀಡದೇ, ಮತ್ತಾವುದೇ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಬಹುದಾದ ‘ಎನಿವೇರ್ ನೋಂದಣಿ’ ವ್ಯವಸ್ಥೆ ಸೆಪ್ಟೆಂಬರ್ ಮೊದಲ ವಾರದಿಂದಲೇ ರಾಜಾದ್ಯಂತ ಜಾರಿಯಾಗಲಿದೆ. ಎನಿವೇರ್ ನೋಂದಣಿ ವ್ಯವಸ್ಥೆಯ ಅಡಿ ಯಾವುದೇ ವ್ಯಕ್ತಿಯು ನೋಂದಣಿ ದಸ್ತಾವೇಜನ್ನು ಜಿಲ್ಲೆಯ ವ್ಯಾಪ್ತಿಯ ಯಾವುದಾದರೂ ಉಪನೋಂದಣಿ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ. ‘ ಎನಿವೇರ್ ನೋಂದಣಿ ‘ ವ್ಯವಸ್ಥೆಯಿಂದ ಸಾರ್ವಜನಿಕರಿಗೆ ಬಹು ಕಚೇರಿ ಆಯ್ಕೆ ಸಿಗಲಿದ್ದು, ಒಂದೇ ಕಚೇರಿಯನ್ನು ಅವಲಂಬಿಸಬೇಕಾದ ಅನಿವಾರ್ಯತೆ ಇರುವುದಿಲ್ಲ.
ನವದೆಹಲಿ: ಟೆಲಿಗ್ರಾಮ್ ಮೆಸೇಜಿಂಗ್ ಅಪ್ಲಿಕೇಶನ್ನ ಬಿಲಿಯನೇರ್ ಸಹ-ಸಂಸ್ಥಾಪಕ ಮತ್ತು ಸಿಇಒ ಪಾವೆಲ್ ಡುರೊವ್ ಅವರನ್ನು ಶನಿವಾರ ಸಂಜೆ ಪ್ಯಾರಿಸ್ ಬಳಿಯ ಬೌರ್ಗೆಟ್ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಸ್ಥಳೀಯ ಕಾಲಮಾನ ರಾತ್ರಿ 8 ಗಂಟೆ ಸುಮಾರಿಗೆ ಅಜೆರ್ಬೈಜಾನ್ ನಿಂದ ಆಗಮಿಸಿದ ಅವರ ಖಾಸಗಿ ಜೆಟ್ ನಲ್ಲಿ ಪ್ರಯಾಣಿಸುತ್ತಿದ್ದಾಗ ಡುರೊವ್ ಅವರನ್ನು ಬಂಧಿಸಲಾಯಿತು. ಈ ಬಂಧನವು ಫ್ರಾನ್ಸ್ನಲ್ಲಿ ಬಾಕಿ ಇರುವ ವಾರಂಟ್ ಅನ್ನು ಅನುಸರಿಸುತ್ತದೆ. ಮೂಲತಃ ರಷ್ಯಾದವರಾದ ಡುರೊವ್ ದುಬೈನಲ್ಲಿ ವಾಸಿಸುತ್ತಿದ್ದಾರೆ ಮತ್ತು ಫ್ರಾನ್ಸ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ನ ದ್ವಿ ಪೌರತ್ವವನ್ನು ಹೊಂದಿದ್ದಾರೆ ಎಂದು ಫೋರ್ಬ್ಸ್ ತಿಳಿಸಿದೆ. ಡುರೊವ್ ಮತ್ತು ಅವರ ಸಹೋದರ ನಿಕೋಲಾಯ್ 2013 ರಲ್ಲಿ ಟೆಲಿಗ್ರಾಮ್ ಅನ್ನು ಪ್ರಾರಂಭಿಸಿದರು. ಎಂಡ್-ಟು-ಎಂಡ್ ಎನ್ಕ್ರಿಪ್ಟೆಡ್ ಮೆಸೇಜಿಂಗ್ ಮತ್ತು ಮಾಹಿತಿಯನ್ನು ಪ್ರಸಾರ ಮಾಡುವ “ಚಾನೆಲ್ಗಳಿಗೆ” ಹೆಸರುವಾಸಿಯಾದ ಈ ಪ್ಲಾಟ್ಫಾರ್ಮ್ ಸುಮಾರು 900 ಮಿಲಿಯನ್ ಸಕ್ರಿಯ ಬಳಕೆದಾರರನ್ನು ಹೊಂದಿದೆ. ಅಪ್ಲಿಕೇಶನ್ ತನ್ನ ಗೌಪ್ಯತೆ ವೈಶಿಷ್ಟ್ಯಗಳಿಗಾಗಿ ಜನಪ್ರಿಯತೆಯನ್ನು ಗಳಿಸಿದೆ ಮತ್ತು ಜಾಗತಿಕವಾಗಿ ವಿವಿಧ…
ಹೈದರಾಬಾದ್: ಹೈದರಾಬಾದ್ ವಿಪತ್ತು ಪ್ರತಿಕ್ರಿಯೆ ಮತ್ತು ಸ್ವತ್ತುಗಳ ಮೇಲ್ವಿಚಾರಣೆ ಮತ್ತು ರಕ್ಷಣೆ (ಹೈಡ್ರಾ) ಅಧಿಕಾರಿಗಳು ಶನಿವಾರ ಮಾಧಪುರದ ಸರೋವರದ ಎಫ್ಟಿಎಲ್ ಪ್ರದೇಶದಲ್ಲಿ ಸೌಲಭ್ಯವನ್ನು ನಿರ್ಮಿಸಿದ್ದಾರೆ ಎಂಬ ಆರೋಪದ ಮೇಲೆ ಮಾಧಪುರದ ‘ಎನ್ ಕನ್ವೆನ್ಷನ್’ ಅನ್ನು ನೆಲಸಮಗೊಳಿಸಲು ಪ್ರಾರಂಭಿಸಿದರು. ಈ ಆವರಣವು ಟಾಲಿವುಡ್ ಸೆಲೆಬ್ರಿಟಿ ನಾಗಾರ್ಜುನ ಅವರ ಒಡೆತನದಲ್ಲಿದೆ ಎಂದು ವರದಿಯಾಗಿದೆ. ಪೊಲೀಸ್ ತುಕಡಿಯೊಂದಿಗೆ, ಹೈಡ್ರಾ ಅಧಿಕಾರಿಗಳು ಮುಂಜಾನೆ ಸ್ಥಳಕ್ಕೆ ಆಗಮಿಸಿ ನೆಲಸಮಗೊಳಿಸುವ ಕಾರ್ಯವನ್ನು ಪ್ರಾರಂಭಿಸಿದರು. ಖಾನಮೆಟ್ ನ ತಮ್ಮಿಡಿಕುಂಟಾ ಸರೋವರದ ಬಫರ್ ಪ್ರದೇಶದಲ್ಲಿ ಈ ರಚನೆಯನ್ನು ಅನಧಿಕೃತವಾಗಿ ನಿರ್ಮಿಸಲಾಗಿದೆ ಎಂದು ಆರೋಪಿಸಲಾಗಿದೆ.
ಬೆಂಗಳೂರು: ಬ್ಯಾಗ್‌ನಲ್ಲಿ ಬಾಂಬ್ ಇದೇ ಅಂತ ಸಿಎಂ ನಿವಾಸದ ಬಳಿ ವ್ಯಕ್ತಿಯೊಬ್ಬ ಹೇಳಿದ ಘಟನೆ ನಡೆದಿದೆ. ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಲು ವ್ಯಕ್ತಿಯೊಬ್ಬರು ಆಗಮಿಸಿದ್ದರು, ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಸಿಎಂ ದೆಹಲಿಗೆ ತೆರಳಿದಿದ್ದಾರೆ ಇನ್ನೊಮ್ಮೆ ಬನ್ನಿ ಅಂಥ ಹೇಳಿದರು. ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಮತ್ತು ವ್ಯಕ್ತಿ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಬ್ಯಾಗ್‌ನಲ್ಲಿ ಇರೋದು ಎನು ಅಂತ ಪ್ರಶ್ನೆ ಮಾಡಿದ್ದಾರೆ. ಈ ವೇಳೆ ವ್ಯಕ್ತಿ ಬಾಂಬ್ ಇದೇ ಅಂತ ಹೇಳಿದ್ದಾನೆ. ಈ ನಡುವೆ ಸ್ಥಳದಲ್ಲಿದ್ದ ಪೊಲೀಸರು ಗಾಬರಿಯಾಗಿ, ವ್ಯಕ್ತಿಯನ್ನು ಪರಿಶೀಲನೆ ನಡೆಸಿ, ಬಳಿಕ ಆತನಿಗೆ ಬುದ್ದಿ ಹೇಳಿ ಕಳುಹಿಸಿಕೊಟ್ಟಿದ್ದಾರೆ ಎನ್ನಲಾಗಿದೆ.
ಹುಬ್ಬಳ್ಳಿ: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಮುಖವಾಡ ಕಳಚಿದೆ, ರಾಜೀನಾಮೆ ಕೊಡೋದು ಗ್ಯಾರಂಟಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ತಿಳಿಸಿದ್ದಾರೆ. ಅವರು ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ, ಈ ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ ಅವರು ಮಾತನಾಡಿ, ಸಿದ್ದರಾಮಯ್ಯ ಶಾಸಕರ ಸಭೆ ಮಾಡಿ ವಿಶ್ವಾಸಕ್ಕೆ ತೆಗೆದುಕೊಂಡಿದ್ದಾರೆ. ಆದರೆ ಪಕ್ಷದ ಹೈಕಮಾಂಡ ಅವರ ಬದಲಾವಣೆ ಮಾಡುವುದು ಬಗ್ಗೆ ಆಲೋಚಿಸುತ್ತಿದ್ದಾರೆ. ಆದ್ದರಿಂದ ಅವರು ದೆಹಲಿ ನಾಯಕ ಭೇಟಿಗೆ ಹೋಗಿದ್ದಾರೆ ಅಂತ ಅವರು ವ್ಯಂಗ್ಯವಾಡಿದರು.ಇದಲ್ಲದೇ ಸಿಎಂ ತಮ್ಮ ಮೇಲಿನ ಮುಡಾ ಹಗರಣದಿಂದ ನುಣುಚಿಕೊಳ್ಳಲು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮೇಲಿನ 15ಕ್ಕೂ ಹೆಚ್ಚು ಪ್ರಕರಣಗಳ ದಾಖಲೆಗಳನ್ನು ಸಂಗ್ರಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಅಂಥ ತಿಳಿಸದಿರು.
ಹೈದರಾಬಾದ್: ದಿನಕಳೆದಂತೆ ಯೂಟ್ಯೂಬರ್ಗಳು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಿದ್ಧರಾಗಲು ಪ್ರಯತ್ನಿಸುತ್ತಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಮನಬಂದಂತೆ ರೀಲ್ ಮಾಡುವ ಮೂಲಕ ಜನರಿಗೆ ಕಿರುಕುಳ ನೀಡಲಾಗುತ್ತಿದೆ.ಪೊಲೀಸರು ಕಠಿಣ ಕ್ರಮ ಕೈಗೊಳ್ಳುತ್ತಿದ್ದರೂ, ಅಂತಹ ಜನರು ಹೆಚ್ಚುತ್ತಿದ್ದಾರೆ. ಇತ್ತೀಚೆಗೆ, ಹರ್ಷ ಎಂಬ ಯೂಟ್ಯೂಬರ್ ತನ್ನ ರೀಲ್ಗಳಿಗಾಗಿ ವಿವಾದವನ್ನು ಮೈ ಮೇಲೆ ಎಳೇದುಕೊಂಡಿದ್ದಾನೆ. . ಕುಕಟ್ಪಲ್ಲಿಯಲ್ಲಿ, ನಿನ್ನೆ (ಗುರುವಾರ) ಹಣವನ್ನು ಗಾಳಿಯಲ್ಲಿ ಎಸೆದು ವೀಡಿಯೊಗಳನ್ನು ತೆಗೆದುಕೊಂಡು ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಆತ ಹಣವನ್ನು ಗಾಳಿಗೆ ಎಸೆಯುತ್ತಿದ್ದಂತೆ, ಅಲ್ಲಿದ್ದ ಕೆಲವು ಜನರು ಪೈಸೆ ತೆಗೆದುಕೊಳ್ಳಲು ಮುಂದಾಗಿದ್ದಾರ . ಇದರಿಂದಾಗಿ ರಸ್ತೆಗಳಲ್ಲಿ ವಾಹನ ಚಾಲಕರು ಮತ್ತು ಪಾದಚಾರಿಗಳು ಸಾಕಷ್ಟು ತೊಂದರೆ ಅನುಭವಿಸಿದರು. ಅವರು ತೆಗೆದ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾಗಿದೆ. ಈ ವೀಡಿಯೊಗಳು ವೈರಲ್ ಆಗಿವೆ. ಆದಾಗ್ಯೂ, ಈ ವಿಷಯವು ಸೈಬರಾಬಾದ್ ಪೊಲೀಸರ ಗಮನಕ್ಕೆ ಬಂದಾಗ, ಅವರು ಕ್ರಮ ಕೈಗೊಂಡು ಅವರ ವಿರುದ್ಧ ಕ್ರಮ ಕೈಗೊಂಡರು. ಇದಲ್ಲದೆ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು…
ನವದೆಹಲಿ: ಆರ್ ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಪ್ರಕರಣದಲ್ಲಿ ಭಾಗಿಯಾಗಿರುವ ಏಳು ಪ್ರಮುಖ ವ್ಯಕ್ತಿಗಳ ಪಾಲಿಗ್ರಾಫ್ ಪರೀಕ್ಷೆಗಳನ್ನು ಕೇಂದ್ರ ತನಿಖಾ ದಳ (ಸಿಬಿಐ) ಪ್ರಾರಂಭಿಸಿದೆ. ಇದರಲ್ಲಿ ಮುಖ್ಯ ಆರೋಪಿ, ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್, ನಾಲ್ವರು ವೈದ್ಯರು ಮತ್ತು ಇನ್ನೊಬ್ಬ ವ್ಯಕ್ತಿ ಸೇರಿದ್ದಾರೆ. ನವದೆಹಲಿಯ ವಿಧಿವಿಜ್ಞಾನ ತಜ್ಞರ ತಂಡವು ಪರೀಕ್ಷೆಗಳನ್ನು ನಡೆಸುತ್ತಿದೆ ಎನ್ನಲಾಗಿದೆ. ಈ ಹಿಂದೆ ಕೋಲ್ಕತಾ ಪೊಲೀಸ್ ಎಸ್ಐಟಿ ನಿರ್ವಹಿಸುತ್ತಿದ್ದ ಈ ಪ್ರಕರಣವನ್ನು ಸಿಬಿಐ ವಹಿಸಿಕೊಂಡಿದ್ದು, ಆಗಸ್ಟ್ 9 ರಂದು ಕಿರಿಯ ವೈದ್ಯರ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಈಗಾಗಲೇ ತನಿಖೆಯಲ್ಲಿರುವ ಘೋಷ್ ಅವರ ವಿಷಯಗಳನ್ನು ಮತ್ತಷ್ಟು ಜಟಿಲಗೊಳಿಸಿದೆ. ಶನಿವಾರ ಬೆಳಿಗ್ಗೆ 10 ಗಂಟೆಯೊಳಗೆ ಎಲ್ಲಾ ಪ್ರಕರಣದ ಕಡತಗಳನ್ನು ಸಿಬಿಐಗೆ ಹಸ್ತಾಂತರಿಸುವಂತೆ ಕಲ್ಕತ್ತಾ ಹೈಕೋರ್ಟ್ ಎಸ್ಐಟಿಗೆ ನಿರ್ದೇಶನ ನೀಡಿದೆ. ಕಿರಿಯ ವೈದ್ಯರ ದುರಂತ ಸಾವು ರಾಷ್ಟ್ರೀಯ ಪ್ರತಿಭಟನೆಗಳಿಗೆ ಕಾರಣವಾಯಿತು ಮತ್ತು ಹಲವಾರು ರಾಜ್ಯಗಳಲ್ಲಿ ವೈದ್ಯಕೀಯ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತು.
ಬೆಂಗಳೂರು: ಹಲವು ವಸ್ತುಗಳ ಬೆಲೆ ಏರಿಕೆಗಳ ಬೆನ್ನಲೇ ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ಬಿಗ್ ಶಾಕ್ ನೀಡಲು ಮುಂದಾಗಿದೆ. ಕೆಲವು ದಿನಗಳ ಹಿಂದೆ ನೀರಿನ ದರ ಹೆಚ್ಚಳದ ಬಗ್ಗೆ ಸೂಚನೆ ಕೊಟ್ಟಿದ್ದ ಡಿಸಿಎಂ ಶಿವಕುಮಾರ್ ನಂತರ ಈಗ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಈಗ ಕೆ.ಎಸ್.ಆರ್‌ಟಿಸಿ ಬಸ್ ದರ ಹೆಚ್ಚಳವನ್ನು ಮಾಡುವುದರ ಬಗ್ಗೆ ಸುಳಿವು ನೀಡಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿರುವ ಅವರು ಶ್ರೀ ಅಶೋಕ್ ರವರೇ, ನೀವು ಸಾರಿಗೆ ಸಚಿವರಾಗಿದ್ದವರು , ಸಾರಿಗೆ ಸಂಸ್ಥೆಗಳ ಬಗ್ಗೆ ತಿಳಿದೂ ಕೂಡ ಈ ರೀತಿ ಮಾತನಾಡುತ್ತಿದ್ದಾರಾ ಎಂದರೆ ಆಶ್ಚರ್ಯವಾಗುತ್ತಿದೆ. * 2013 ರಲ್ಲಿ ತಾವು ಸಾರಿಗೆ ಸಚಿವರಾಗಿದ್ದಾಗ ಬಸ್ ಪ್ರಯಾಣ ದರ 10.5% ಏರಿಕೆ ಮಾಡಿರುವುದು ಮರೆತುಬಿಟ್ಟಿದ್ದೀರಾ ? * 2020 ರಲ್ಲಿ ತಮ್ಮದೇ ಪಕ್ಷ ಅಧಿಕಾರದಲ್ಲಿದ್ದಾಗ ಬಸ್ ಪ್ರಯಾಣ ದರ 12% ಹೆಚ್ಚಳ ಮಾಡಿದಾಗ ನೀವು ಕ್ಯಾಬಿನೆಟ್ ಮಂತ್ರಿಯಾಗಿದ್ದರಲ್ಲವೇ ?ಆಗ ಯಾಕೆ ವಿರೋಧ ವ್ಯಕ್ತ ಪಡಿಸಲಿಲ್ಲ. * ದಿನಾಂಕ: 15/11/2021 ರಲ್ಲಿ…