Author: kannadanewsnow07

ಬೆಂಗಳೂರು: ಲಿಂಗತ್ವ ಅಲ್ಪ ಸಂಖ್ಯಾತ ಸಮುದಾಯದವರು ಅಥವಾ ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಗಳು ಗೃಹಲಕ್ಷ್ಮಿ ಯೋಜನೆಯಡಿ ಪ್ರಯೋಜನ ಪಡೆಯಲು ಅನುವಾಗುವಂತೆ ಗೃಹಲಕ್ಷ್ಮಿ ಯೋಜನೆಯ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ National Portal for Transgender Persons ವತಿಯಿಂದ ಪಡೆದಿರುವ ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ ಚೀಟಿಯನ್ನು ಪರಿಗಣಿಸಲು ಸರ್ಕಾರವು ಅನುಮೋದನೆ ನೀಡಿ ತಂತ್ರಾಂಶದಲ್ಲಿ ಮಾರ್ಪಾಡು ಮಾಡಲಾಗಿದೆ. ಜುಲೈ 8 ರಿಂದ ಲಿಂಗತ್ವ ಅಲ್ಪಸಂಖ್ಯಾತರು ಪ್ರಸ್ತುತ ವಾಸವಾಗಿರುವವರು ಮಹಿಳಾ ಮತ್ತು ಮಕ್ಕಳ ಅಭಿವರದ್ಧಿ ಇಲಾಖೆಯ ಉಪನಿರ್ದೇಶಕರ ಜಿಲ್ಲಾ ಕಚೇರಿಗೆ ತೆರಳಿ ಗೃಹಲಕ್ಷ್ಮಿ ಯೋಜನೆಯ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಟ್ರಾನ್ಸ್-ಜೆಂಡರ್ ಗುರುತಿನ ಚೀಟಿ, ಪಾಸ್‍ಪೋರ್ಟ್ ಅಳತೆಯ ಪೋಟೋ ಮತ್ತು ಆಧಾರ್ ಕಾರ್ಡ್‍ನ್ನು ಕಡ್ಡಾಯವಾಗಿ ನೀಡಬೇಕಾಗಿರುತ್ತದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬೆಂಗಳೂರು: ಐಎಎಸ್, ಐಆರ್‍ಎಸ್ ಸೇರಿ ಮತ್ತಿತರೆ ಸ್ಪರ್ಧಾತ್ಮಕ ಪರೀಕ್ಷೆ ಸಿದ್ದತೆಗಳಿಗಾಗಿ ದೆಹಲಿಯಲ್ಲಿ ಎಸ್‍ಸಿ/ಎಸ್‍ಟಿ ಮಕ್ಕಳಿಗೆ ಉತ್ತಮ ಹಾಸ್ಟೆಲ್ ಕಟ್ಟಿಸುವ ಜೊತೆಗೆ ತಿಂಗಳಿಗೆ 15 ಸಾವಿರ ರೂಪಾಯಿ ಕೊಡಲಾಗುವುದು (ಸದ್ಯ 10 ಸಾವಿರ ಕೊಡಲಾಗುತ್ತಿದ್ದು 5 ಸಾವಿರ ಹೆಚ್ಚಿಸಲಾಗುವುದು. ಈ ಸಂಬಂಧ ತಕ್ಷಣ ಆದೇಶ ಹೊರಡಿಸಲಾಗುವುದು) ದೆಹಲಿ ಹಾಸ್ಟೆಲ್ ನಲ್ಲಿ ಹೈಟೆಕ್ ಲೈಬ್ರೆರಿ ಮಾಡಲಾಗುವುದು. ಅಲ್ಲಿ ಎಲ್ಲಾ ರೀತಿಯ ಪುಸ್ತಕಗಳು ಸಿಗುವ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ರಾಜ್ಯ ಅಭಿವೃದ್ಧಿ ಪರಿಷತ್ ಸಭೆಯಲ್ಲಿ ಮಾತನಾಡಿದ ಅವರು, ಇಡೀ ದೇಶದಲ್ಲಿ ಎಸ್‍ಸಿಎಸ್‍ಪಿ / ಟಿಎಸ್‍ಪಿ ಕಾಯ್ದೆ ಮಾಡಿರುವುದು ನಾವು ಮಾತ್ರ. ಜನಸಂಖ್ಯೆಗೆ ಅನುಗುಣವಾಗಿ ಎಸ್‍ಸಿ / ಎಸ್‍ಟಿ ಸಮುದಾಯಕ್ಕೆ ಹಣ ಖರ್ಚು ಕೊಡುತ್ತಿರುವುದು ನಮ್ಮ ಸರ್ಕಾರ ಮಾತ್ರ ಎಂದು ಅವರು ತಿಳಿಸಿದರು. 2024-25 ನೇ ಸಾಲಿನಲ್ಲಿ ಎಸ್‍ಸಿಪಿ/ಟಿಎಸ್‍ಪಿ ಯೋಜನೆಯಲ್ಲಿ ಲಭ್ಯವಿರುವ ಹಣವನ್ನು ಖರ್ಚು ಮಾಡಲು ಕ್ರಿಯಾಯೋಜನೆಗೆ…

Read More

ಮೈಸೂರು: ಮೈಸೂರು: ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಹೊರ ಬಂದಿದೆ ಅಂಥ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿಯವರು ಹೊಸ ಬಾಂಬ್‌ ಸಿಡಿಸಿದ್ದಾರೆ. ಅವರು ಇಂದು ಸಚಿವರಾದ ಬಳಿಕ ಮೊದಲ ಬಾರಿಗೆ ಮೈಸೂರಿನ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದರು. ಇದೇ ವೇಳೆ ಅವರು ಮಾತನಾಡಿ, ಇಷ್ಟು ದಿನ ಹೊರಗೆ ಬಾರದ ಹಗರಣ ಈಗ ಬಂದಿದ್ದು ಹೇಗೆ? ಇದರ ಹಿಂದೆ ಸಿಎಂ ಖುರ್ಚಿ ಮೇಲೆ ಟವಲ್ ಹಾಕಿರುವವರ ಪಾತ್ರ ಇದೆ. ಸಿಡಿ ಫ್ಯಾಕ್ಟರಿ ಬಂದ್ ಆಯ್ತು ಮುಡಾ ಫ್ಯಾಕ್ಟರಿ ಶುರುವಾಯಿತು ಎಂದು ಹೇಳಿದರು.

Read More

ಬೆಂಗಳೂರು: ರಾಜ್ಯದ ಎಲ್ಲಾ ಇಲಾಖೆಗಳ ಸರ್ಕಾರಿ ಕಛೇರಿ ಕಛೇರಿಗಳಲ್ಲಿ ಬಯೋಮೆಟ್ರಿಕ್ ಯಂತ್ರದ ದಾಖಲಿಸುತ್ತಿರುವ ಕುರಿತು ಮಾಹಿತಿ ಒದಗಿಸುವ ಬಗ್ಗೆ ಮಾಹಿತಿಯನ್ನು ನೀಡುವಂತೆ ಅಧೀನ ಅಧಿಕಾರಿಗಳಿಂದ ಮಾಹಿತಿಯನ್ನು ಕೇಳಿದೆ. ಅದರಂತೆ. ರಾಜ್ಯ ಜ್ಯ ಸರ್ಕಾರವು ಹಲವು ಸುತ್ತೋಲೆಗಳ ಮೂಲಕ ರಾಜ್ಯ ಸರ್ಕಾರದ ಕಛೇರಿಗಳು ಸೇರಿದಂತೆ ಅಧೀನಕ್ಕೊಳಪಡುವ ಎಲ್ಲಾ ನಿಗಮ / ಮಂಡಳಿ / ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರಿ / ನೌಕರರ ದೈನಂದಿನ ಹಾಜರಾತಿಯನ್ನು ಬಯೋಮೆಟ್ರಿಕ್ ಯಂತ್ರದ ಮೂಲಕ ದಾಖಲಿಸಲು ಬಯೋಮೆಟ್ರಿಕ್ ಹಾಜರಾತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಲು ನಿರ್ದೇಶನಗಳನ್ನು ನೀಡಿರುತ್ತದೆ. ಅದಾಗ್ಯೂ ಹಲವಾರು ಕಛೇರಿಯನ್ನೊಳಗೊಂಡಂತೆ ಅಧೀನ ಸಂಸ್ಥೆಗಳಲ್ಲಿ ಪ್ರಸ್ತುತದವರೆಗೂ ಬಯೋಮೆಟ್ರಿಕ್‌ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸದ ಬಗ್ಗೆ ಸಾರ್ವಜನಿಕರಿಂದ ದೂರುಗಳು ಸ್ವೀಕೃತವಾಗುತ್ತಿವೆ. ಈ ನಿಟ್ಟಿನಲ್ಲಿ ತಮ್ಮ ಇಲಾಖೆಯ ಅಧೀನಕ್ಕೊಳಪಡುವ ಸರ್ಕಾರಿ ಕಛೇರಿಗಳು ಸೇರಿದಂತೆ ಅಧೀನ ಸಂಸ್ಥೆ/ನಿಗಮ/ಮಂಡಳಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿಯನ್ನು ಅಳವಡಿಸಿರುವ ಬಗ್ಗೆ ದಿನಾಂಕ: 06/07/2024ರೊಳಗಾಗಿ ಈ ಕಛೇರಿಗೆ ವರದಿ ಕಳುಹಿಸುವಂತೆ ತಿಳಿಸಿದೆ.

Read More

ನವದೆಹಲಿ: ರಿಷಿ ಸುನಕ್ ನೇತೃತ್ವದ 14 ವರ್ಷಗಳ ಕನ್ಸರ್ವೇಟಿವ್ ಆಡಳಿತವನ್ನು ಕೊನೆಗೊಳಿಸುವ ಮೂಲಕ ಸಂಸದೀಯ ಚುನಾವಣೆಯಲ್ಲಿ ಅವರ ಕೇಂದ್ರ-ಎಡ ಲೇಬರ್ ಪಕ್ಷವು ಗಮನಾರ್ಹ ಬಹುಮತವನ್ನು ಗೆಲ್ಲುವ ನಿರೀಕ್ಷೆಯಿದ್ದು, ಕೈರ್ ಸ್ಟಾರ್ಮರ್ ಬ್ರಿಟನ್ನ ಮುಂದಿನ ಪ್ರಧಾನಿಯಾಗಲು ಸಜ್ಜಾಗಿದ್ದಾರೆ.  ಕನ್ಸರ್ವೇಟಿವ್ಗಳು ಇಲ್ಲಿಯವರೆಗೆ ಕೇವಲ 70 ಸ್ಥಾನಗಳನ್ನು ಗೆದ್ದಿದ್ದಾರೆ. ಪಕ್ಷವು ಇತಿಹಾಸದಲ್ಲಿ ತನ್ನ ಅತ್ಯಂತ ಕೆಟ್ಟ ಪ್ರದರ್ಶನದ ಹಾದಿಯಲ್ಲಿದೆ. ಜೀವನ ವೆಚ್ಚದ ಬಿಕ್ಕಟ್ಟು, ಸಾರ್ವಜನಿಕ ಸೇವೆಗಳ ವೈಫಲ್ಯ ಮತ್ತು ಸರಣಿ ಹಗರಣಗಳಂತಹ ಸಮಸ್ಯೆಗಳಿಗೆ ಮತದಾರರು ಹೆಚ್ಚಾಗಿ ಕನ್ಸರ್ವೇಟಿವ್ ಗಳನ್ನು ದೂಷಿಸಿದ್ದಾರೆ. ನಿರ್ಗಮನ ಹೌಸ್ ಆಫ್ ಕಾಮನ್ಸ್ ನಲ್ಲಿ ಭಾರತೀಯ ಮೂಲದ 15 ಸಂಸದರು ಇದ್ದರು ಮತ್ತು ಈ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ. ಯುಕೆ ಸಾರ್ವತ್ರಿಕ ಚುನಾವಣೆ 2024 ರಲ್ಲಿ, ಲಭ್ಯವಿರುವ 680 ಸ್ಥಾನಗಳಿಗೆ ಒಟ್ಟು 107 ಬ್ರಿಟಿಷ್-ಭಾರತೀಯ ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ. ಕಿಂಗ್ ಚಾರ್ಲ್ಸ್ ಅವರಿಗೆ ರಾಜೀನಾಮೆ ಸಲ್ಲಿಸಲು ಪ್ರಧಾನಿ ರಿಷಿ ಸುನಕ್ ಅವರು ಟೀಸೈಡ್ ವಿಮಾನ ನಿಲ್ದಾಣದಿಂದ ಲಂಡನ್ ಗೆ ತೆರಳಿದ್ದಾರೆ ಎಂದು ಬಿಬಿಸಿ ವರದಿ…

Read More

ಲಂಡನ್‌: ದೇಶದ ಸಾರ್ವತ್ರಿಕ ಚುನಾವಣೆಯಲ್ಲಿ ಜಯಗಳಿಸಿದ ನಂತರ ಯುಕೆಯ ಲೇಬರ್ ಪಕ್ಷವು ಹೌಸ್ ಆಫ್ ಕಾಮನ್ಸ್ನಲ್ಲಿ ಕಾರ್ಯನಿರತ ಬಹುಮತಕ್ಕಾಗಿ 326 ಸ್ಥಾನಗಳ ಮಿತಿಯನ್ನು ದಾಟಿ ಅಧಿಕಾರಕ್ಕೆ ಬಂದಿದೆ. ಅನೇಕ ಕ್ಯಾಬಿನೆಟ್ ಸದಸ್ಯರು ತಮ್ಮ ಸ್ಥಾನಗಳನ್ನು ಕಳೆದುಕೊಂಡ ನಂತರ ರಿಷಿ ಸುನಕ್ ಸೋಲನ್ನು ಒಪ್ಪಿಕೊಂಡರು ಈ ಚುನಾವಣೆಯಲ್ಲಿ ದಾಖಲೆ ಸಂಖ್ಯೆಯ ಕ್ಯಾಬಿನೆಟ್ ಮಂತ್ರಿಗಳು ತಮ್ಮ ಸ್ಥಾನಗಳನ್ನು ಕಳೆದುಕೊಂಡಿದ್ದಾರೆ. ಗ್ರಾಂಟ್ ಶಾಪ್ಸ್ – ರಕ್ಷಣಾ ಕಾರ್ಯದರ್ಶಿ ಸೈಮನ್ ಹಾರ್ಟ್ – ಮುಖ್ಯ ಸಚೇತಕ ಗಿಲಿಯನ್ ಕೀಗನ್ – ಶಿಕ್ಷಣ ಕಾರ್ಯದರ್ಶಿ ಅಲೆಕ್ಸ್ ಚಾಕ್ – ನ್ಯಾಯಾಂಗ ಕಾರ್ಯದರ್ಶಿ ಪೆನ್ನಿ ಮೊರ್ಡಾಂಟ್ – ಕಾಮನ್ಸ್ ನಾಯಕ ಲೂಸಿ ಫ್ರೇಜರ್ – ಸಂಸ್ಕೃತಿ ಕಾರ್ಯದರ್ಶಿ ಜಾನಿ ಮರ್ಸರ್ – ಅನುಭವಿ ಸಚಿವ ಮಿಚೆಲ್ ಡೊನೆಲಾನ್ – ವಿಜ್ಞಾನ, ನಾವೀನ್ಯತೆ ಮತ್ತು ತಂತ್ರಜ್ಞಾನ ಕಾರ್ಯದರ್ಶಿ ಡೇವಿಡ್ ಡೇವಿಸ್ – ವೇಲ್ಸ್ ಕಾರ್ಯದರ್ಶಿ ವಿಕ್ಟೋರಿಯಾ ಪ್ರಿಂಟಿಸ್ – ಅಟಾರ್ನಿ ಜನರಲ್ ಮಾರ್ಕ್ ಹಾರ್ಪರ್ – ಸಾರಿಗೆ ಕಾರ್ಯದರ್ಶಿ

Read More

ಬೆಂಗಳೂರು: ಮುಡಾದವರು ಹಂಚಿಕೆ ಮಾಡಿರುವ ನಿವೇಶನಗಳನ್ನು ಬೇಕಾದರೆ ವಾಪಸ್‌ ಪಡೆದು ತಮ್ಮ ಜಮೀನಿನ ಮೌಲ್ಯದ 62 ಕೋಟಿ ರೂ. ಗಳನ್ನು ಕಾನೂನು ರೀತ್ಯ ಮುಡಾ ತಮಗೆ ಕೊಟ್ಟುಬಿಡಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಜೆಪಿಯವರಿಗೆ ಬೇರೇನೂ ವಿಷಯವಿಲ್ಲ. ಆರ್.ಎಸ್.ಎಸ್ ಹೇಳಿದಂತೆ ಮಾಡುತ್ತಾರೆ. ವಿಷಯವೇ ಇಲ್ಲ. ಮುಡಾ ನಮ್ಮ 3.16 ಎಕರೆ ಜಮೀನಿನಲ್ಲಿ ನಿವೇಶನಗಳನ್ನು ಮಾಡಿ ಹಂಚಿದರೆ ನಾವು ಕೇಳಬಾರದೇ. ಹಾಗಿದ್ದಲ್ಲಿ ಜಮೀನಿನ ಮೌಲ್ಯ 60 ಕೋಟಿ.ರೂ.ಗಳನ್ನು ಕೊಟ್ಟುಬಿಡಬೇಕಾ ಅವರು ಇದೇ ವೇಳೆ ತಿಳಿಸಿದರು.ಮುಡಾ ನಿವೇಶನ ಹಂಚಿಕೆ ಕುರಿತು ಬಿಜೆಪಿ ಮಾಡುತ್ತಿರುವ ಆರೋಪಗಳು ರಾಜಕೀಯ ಪ್ರೇರಿತ ಆರೋಪಗಳೇ ಹೊರತು ಅಂಕಿ-ಅಂಶಗಳ ಮೇಲೆ ಮಾಡಿರುವ ಆರೋಪಗಳಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯತಿಳಿಸಿದರು.

Read More

ಮಂಗಳೂರು: ಮಂಗಳೂರು ಮಣ್ಣು ಕುಸಿತ ಪ್ರಕರಣ ಸಂಬಂಧ ಗುತ್ತಿಗೆದಾರ ಸೇರಿ ಮೂವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ನಡುವೆ ಘಟನೆಯಲ್ಲಿ ಸಾವನ್ನಪ್ಪಿದ ಕಾರ್ಮಿಕ ಚಂದನ್ ಕುಮಾರ್ ಕುಟುಂಬಕ್ಕೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಎರಡು ಲಕ್ಷ ರೂಪಾಯಿ ಪರಿಹಾರ ಮಂಜೂರು ಮಾಡಿದೆ. ಜಿಲ್ಲಾಡಳಿತದ ಮುತುವರ್ಜಿಯಿಂದ ಗುರುವಾರವೇ ಮಂಡಳಿ ಮೃತ ಕಾರ್ಮಿಕರ ಪತ್ನಿ ಕಿರಣ ದೇವಿ ಅವರಿಗೆ ಪರಿಹಾರದ ಚೆಕ್ ನೀಡಿದ್ದು, ಕಟ್ಟಡ ನಿರ್ಮಾಣದ ಗುತ್ತಿಗೆದಾರರೂ ಎರಡು ಲಕ್ಷ ರೂ. ಪರಿಹಾರ ಹಾಗೂ ಕಾರ್ಮಿಕ ಪರಿಹಾರ ಕಾಯಿದೆಯಡಿಯಲ್ಲಿಯೂ ಕಾರ್ಮಿಕರ ಕುಟುಂಬಕ್ಕೆ ವಿಮಾ ಮೊತ್ತ ದೊರಕಲಿದೆ ಎಂದು ಕಾರ್ಮಿಕ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Read More

ಬೆಂಗಳೂರು: 21 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹಾಗಾದ್ರೇ ಯಾರು ಎಲ್ಲಿಂದ ಎಲ್ಲಿಗೆ ಎನ್ನುವುದರ ವಿವರ ಈ ಕೆಳಕಂಡತಿದೆ.

Read More

ಕೋಲಾರ್: ಕೋಚಿಮುಲ್‌ ರೈತರ ಹಾಲಿನ ದರವನ್ನು ಲೀಟರ್‌ಗೆ 2 ರೂಪಾಯಿ ಇಳಿಕೆ ಮಾಡಿ ಆದೇಶ ಹೊರಡಿಸಿದ್ದು, ಈ ಮೂಲಕ ಹೈನುಗಾರಿಕೆ ಮಾಡಿಕೊಂಡು ಜೀವನ ನಡೆಸುತ್ತಿದ್ದ ರೈತರ ಆದಾಯಕ್ಕೆ ಕೊಕ್ಕೆ ಬಿದಿದ್ದೆ. ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟ (ಕೋಚಿಮುಲ್‌) ರೈತರಿಗೆ ಆಘಾತ ಕೊಟ್ಟಿದ್ದು, ಹಾಲು ಖರೀದಿ ದರ 2 ರೂಪಾಯಿ ಕಡಿತಗೊಳಿಸಿ ಆದೇಶಿಸಿರುವುದರಿಂದ ರೈತರಲ್ಲಿ ಆಕ್ರೋಶ ಮನೆ ಮಾಡಿದೆ. ಶುಕ್ರವಾರದಿಂದಲೇ ಜಾರಿಗೆ ಬರುವಂತೆ ರೈತರಿಂದ ಖರೀದಿಸುವ ಹಾಲಿನ ದರವನ್ನು 2 ರೂಪಾಯಿ ಕಡಿತಗೊಳಿಸಿ ಆದೇಶಿಸಿದ್ದು, ಪ್ರತಿ ಲೀಟರ್‌ಗೆ ಇನ್ನು ಮುಂದೆ 33.4 ರೂ. ಬದಲಿಗೆ 31.4 ರೂ. ನೀಡಲು ಆಡಳಿತ ಮಂಡಳಿ ನಿರ್ಧರಿಸಿದೆ.  ಜನವರಿಯಲ್ಲಿ ಪ್ರತಿ ದಿನ ಕೋಚಿಮುಲ್‌ಗೆ 9.65 ಲಕ್ಷ ಲೀಟರ್‌ ಹಾಲು ಸಂಗ್ರಹವಾಗುತ್ತಿತ್ತು. ಆದರೆ ಜೂನ್ ತಿಂಗಳಿನಿಂದ ಪ್ರತಿ ದಿನ ಕೋಚಿಮುಲ್‌ಗೆ 12.37 ಲಕ್ಷ ಲೀಟರ್‌ ಹಾಲು ಸಂಗ್ರಹವಾಗುತ್ತಿದೆ ಈಗಾಗಲೇ ಲೀಟರ್‌ಗೆ 2 ರೂ. ಹೆಚ್ಚಳ ಮಾಡಿ ಕೆಎಂಎಫ್‌ ಆದೇಶ ಹೊರಡಿಸಿದೆ. ಈಗ ರೈತರಿಗೆ 2 ರೂ.…

Read More