Subscribe to Updates
Get the latest creative news from FooBar about art, design and business.
Author: kannadanewsnow09
ಬೆಳಗಾವಿ : ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಡಿಸೆಂಬರ್ 9, 2025ರಂದು ಬೆಳಿಗ್ಗೆ 9.30 ಗಂಟೆಗೆ ಸುವರ್ಣ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಪ್ರದರ್ಶಿಸಲಾಗುವುದು. ಕಲಬುರ್ಗಿ ಜಿಲ್ಲೆಯ ಕಾಮಲಾಪುರದ ವಿನೋದ್ ಕುಮಾರ್ ರೇವಪ್ಪ ಬಮ್ಮನ್ನ ಕುಟುಂಬಸ್ಥರು ವೈಯಕ್ತಿಕ ಆಸಕ್ತಿಯಿಂದ ಮಾಡಲ್ಪಟ್ಟಿರುವ ಈ ಕೆಲಸ ಮತ್ತೊಮ್ಮೆ ಐತಿಹಾಸಿಕವಾಗಲಿದೆ. ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದು, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಹೆಚ್.ಕೆ.ಪಾಟೀಲ್ ಸೇರಿದಂತೆ ರಾಜ್ಯ ಸರ್ಕಾರದ ಸಚಿವರು ಹಾಗೂ ಶಾಸಕರು ಭಾಗವಹಿಸಲಿದ್ದಾರೆ ಎಂದು ವಿಧಾನ ಸಭೆಯ ಕಚೇರಿ ಪ್ರಕಟಣೆ ತಿಳಿಸಿದೆ. https://kannadanewsnow.com/kannada/7-6-magnitude-earthquake-hits-japan-tsunami-warning-issued/ https://kannadanewsnow.com/kannada/alert-do-you-use-an-inverter-in-your-home-dont-make-these-mistakes-even-if-you-make-a-mistake/
ಸೋಮವಾರ ಸಂಜೆ ಉತ್ತರ ಜಪಾನ್‌ನ ಹೊಕ್ಕೈಡೋ ಪ್ರದೇಶದಲ್ಲಿ 7.6 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಕರಾವಳಿ ಪ್ರದೇಶಗಳಿಗೆ ಸುನಾಮಿ ಎಚ್ಚರಿಕೆಯನ್ನು ನೀಡಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಡಿಸೆಂಬರ್ 8, 2025 ರಂದು ಸಂಜೆ 7:45:09 ಕ್ಕೆ (ಸ್ಥಳೀಯ ಸಮಯ) ಭೂಕಂಪ ಸಂಭವಿಸಿದೆ. ಇದು 32 ಮೈಲುಗಳ ಆಳದಲ್ಲಿ ಹುಟ್ಟಿಕೊಂಡಿತು, ಇದರ ಕೇಂದ್ರಬಿಂದುವು ಹೊಕ್ಕೈಡೋ ಕರಾವಳಿಯಿಂದ 41°N ಅಕ್ಷಾಂಶ ಮತ್ತು 142.3°E ರೇಖಾಂಶದ ಬಳಿ ಇದೆ ಎಂದು USGS ತಿಳಿಸಿದೆ. https://twitter.com/stats_feed/status/1998041449255043281
ಬೆಳಗಾವಿ ಸುವರ್ಣಸೌಧ: ರಾಜ್ಯದಲ್ಲಿ ಪ್ರಸಕ್ತ ಆರ್ಥಿಕ ಸಾಲಿನಲ್ಲಿ ಸೆಪ್ಟೆಂಬರ್ 2025 ಅಂತ್ಯದವರೆಗೆ 195.27 ಲಕ್ಷ ಪೆಟ್ಟಿಗೆ ಬಿಯರ್ ಮಾರಾಟ ಮಾಡಲಾಗಿದ್ದು, ಇದು ಕಳೆದ ಇದೇ ಅವಧಿಗೆ ಹೋಲಿಸಿದಲ್ಲಿ 47.46 ಲಕ್ಷ ಪೆಟ್ಟಿಗೆಗಳು ಕಡಿಮೆ ಮಾರಾಟವಾಗಿ ಶೇ.19.55 ಋಣತ್ಮಾಕ ಬೆಳವಣಿಗೆಯಾಗಿರುತ್ತದೆ ಎಂದು ಅಬಕಾರಿ ಸಚಿವ ಆರ್. ಬಿ. ತಿಮ್ಮಾಪುರ ತಿಳಿಸಿದ್ದಾರೆ. ಅವರು ವಿಧಾನ ಪರಿಷತ್ ನಲ್ಲಿ, ರಾಜ್ಯದಲ್ಲಿ ಮದ್ಯಪಾನ ಸೇವನೆ ಮಾಡುತ್ತಿರುವವರು ಲಿವರ್ ಸಿರೋಸಿಸ್/ಜಾಂಡೀಸ್ ಎಂಬ ಪಿತ್ತಕೋಶ ಖಾಯಿಲೆಯಿಂದ ಬಳಲುತ್ತಿದ್ದು, ಅವರುಗಳ ಉತ್ತಮ ಚಿಕಿತ್ಸೆಗಾಗಿ ಅಬಕಾರಿ ಇಲಾಖೆಯ ಆದಾಯದ ಕನಿಷ್ಠ ಶೇ.20ರಷ್ಟು ಮೊತ್ತವನ್ನು ವಿನಿಯೋಗಿಸುವ ಕುರಿತ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಮತ್ತು ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್ ಅವರ ನಿಯಮ 330 ರ ವಿಷಯಕ್ಕೆ ನೀಡಿದ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಪ್ರಸ್ತುತ ಸಾಲಿನಲ್ಲಿ ಬಿಯರ್ ಮಾರಾಟವು ಕಡಿಮೆ ಮಾರಾಟವಾಗುತ್ತಿದ್ದು, ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಆಗಿದ್ದು, ಅಲ್ಲದೇ ಶೀತ ವಾತಾವರಣ ಇರುವುದರಿಂದ ಬಿಯರ್ ಮಾರಾಟದಲ್ಲಿ ಕುಸಿತ ಉಂಟಾಗಿರುವುದಕ್ಕೆ…
ಬೆಳಗಾವಿ ಸುವರ್ಣಸೌಧ : ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಪ್ರಥಮ ಮಾನ್ಯತೆ ಹಾಗೂ ಮಾನ್ಯತೆ ನವೀಕರಣಕ್ಕೆ ಸಂಬಂಧಿಸಿದ ನಿಯಮಗಳ ಸಡಿಲಿಕೆ ಕುರಿತು ಸದಸ್ಯರ ಮನವಿಗೆ ಸ್ಪಂದಿಸಿದ ಸರಕಾರ ಸದನ ಸಮಿತಿ ರಚಿಸಲು ನಿರ್ಧರಿಸಿದೆ. ನವೀಕರಣ ನಿಯಮಗಳ ಸಡಿಲಿಕೆ ಕುರಿತಂತೆ ಸದರಿ ಸದನ ಸಮಿತಿ ನೀಡುವ ವರದಿ ಆಧರಿಸಿ ಶೀಘ್ರ ತಿರ್ಮಾನ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ಹೇಳಿದರು. ಸರ್ಕಾರವು ಹೊರಡಿಸಿರುವ ಆದೇಶದಲ್ಲಿ ಉಲ್ಲೇಖಿಸಲಾಗಿರುವ ಶಾಲೆಗಳ ಮಾನ್ಯತೆ ನವೀಕರಣದ ನಿಯಮಗಳನ್ನು ಸಡಿಲಗೊಳಿಸುವ ವಿಷಯದ ಬಗ್ಗೆ ಸಮಗ್ರವಾಗಿ ಚರ್ಚಿಸಿ ನಿರ್ಣಯ ಕೈಗೊಳ್ಳಲು ಸದನ ಸಮಿತಿ ರಚಿಸಲಾಗುತ್ತಿದೆ ಎಂದು ಅವರು ವಿವರಿಸಿದರು. ವಿಧಾನ ಪರಿಷತ್ತಿನಲ್ಲಿ ಸದಸ್ಯರಾದ ಪುಟ್ಟಣ್ಣ, ಶಶೀಲ್ ಜಿ. ನಮೋಶಿ, ಎಸ್.ವಿ. ಸಂಕನೂರ ಮತ್ತು ಎಸ್.ಎಲ್. ಭೋಜೇಗೌಡ ಅವರು ನಿಯಮ 330ರ ಮೇರೆಗೆ ಪ್ರಸ್ತಾಪಿಸಿದ ಖಾಸಗಿ ಅನುದಾನಿತ, ಅನುದಾನ ರಹಿತ ಶಾಲೆಗಳ ಪ್ರಥಮ ಮಾನ್ಯತೆ ಹಾಗೂ ಮಾನ್ಯತೆ ನವೀಕರಣಕ್ಕೆ ಸಂಬಂಧಿಸಿದಂತೆ ಸರ್ಕಾರವು ಹೊರಡಿಸಿರುವ ಆದೇಶದಲ್ಲಿ…
ಬೆಳಗಾವಿ : ಯಾವುದೇ ಕಾರಣಕ್ಕೂ ಸರ್ಕಾರಿ ಒಡೆತನದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಖಾಸಗಿಕರಣ ಮಾಡುವ ಪ್ರಶ್ನೆಯೇ ಇಲ್ಲ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್ ವಿಧಾನಪರಿಷತ್‌ನಲ್ಲಿ ಸ್ಪಷ್ಟಪಡಿಸಿದರು. ಕಾಂಗ್ರೆಸ್ ಪಕ್ಷದ ನಾಗರಾಜ್ ಯಾದವ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಿಗೆ ಸರ್ಕಾರ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಒದಗಿಸಿಕೊಟ್ಟಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಮೇಲ್ದರ್ಜೆಗೇರಿಸಲಾಗುವುದು. ಯಾವುದೇ ಕಾರಣಕ್ಕೂ ಇವುಗಳನ್ನು ಖಾಸಗಿಯವರಿಗೆ ಒಪ್ಪಿಸುವ ಪ್ರಶ್ನೆಯೇ ಇಲ್ಲ ಎಂದು ಪುನರುಚ್ಚರಿಸಿದರು. ಬೆಳಗಾವಿಯ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಿರ್ಲಕ್ಷ್ಯದಿಂದ ರೋಗಿಯ ಹೊಟ್ಟೆಯ ಗಡ್ಡೆಯ ಬದಲು ಕರಳು ತೆಗೆದು ಹಾಕಲಾಗಿದೆ ಎಂಬ ವದಂತಿ ಹರಡಿದೆ. ಇದು ಸರ್ಕಾರದ ಗಮನಕ್ಕೆ ಬಂದಿದೆ. ಈತ ಮದ್ಯವ್ಯಸನಿಯಾಗಿದ್ದು, ಕರುಳಿನಲ್ಲಿ ರಂಧ್ರವಿರುವ ಬಗ್ಗೆ ತಾಲೂಕಿನ ಆಸ್ಪತ್ರೆಯಲ್ಲಿ ಸ್ಪಷ್ಟವಾಗಿ ನಮೂದಿಸಲಾಗಿದೆ. ರೋಗಿಗೆ ಅಪೆಂಡಿಸೆಕ್ಟಮಿ ಮಾಡಲಾಗಿದೆ. ಶಸ್ತ್ರಚಿಕಿತ್ಸೆಯ ವೇಳೆ ವೈದ್ಯರು ಕರಳನ್ನು ತೆಗೆದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. ಖಾಸಗಿ ಆಸ್ಪತ್ರೆಯಲ್ಲಿ…
ಬೆಳಗಾವಿ ಸುವರ್ಣಸೌಧ: ನಾಗರೀಕ ಸೌಲಭ್ಯ ನಿವೇಶನಗಳ ಹಂಚಿಕೆ ಪ್ರಕ್ರಿಯೆಯು ಸಂಪೂರ್ಣ ಪಾರದರ್ಶಕವಾಗಿದ್ದು, ಸದ್ಯ ರಾಜ್ಯದಲ್ಲಿ ಯಾವುದೇ ಸಮಸ್ಯೆಗಳಿಲ್ಲ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನಾ ಸಚಿವರಾದ ಬಿ ಎಸ್ ಸುರೇಶ ಹೇಳಿದರು. ನಗರಾಭಿವೃದ್ಧಿ ಇಲಾಖೆಯಿಂದ ಹಂಚಿಕೆ ಮಾಡುವ ಸಿ.ಎ. ನಿವೇಶನಗಳಿಗೆ ಸಾರ್ವಜನಿಕರು ನಿರಾಸಕ್ತಿ ತೋರಿಸುತ್ತಿರುವ ಬಗ್ಗೆ ಹಾಗೂ ಗುತ್ತಿಗೆಯನ್ನು ವಿಸ್ತರಿಸುವ ಪ್ರಕ್ರಿಯೆಯಲ್ಲಿ ಇಲಾಖೆಯು ಸಮರ್ಪಕವಾದ ನೀತಿಯನ್ನು ಅನುಸರಿಸುತ್ತಿಲ್ಲ ಎಂದು ಸದಸ್ಯರಾದ ಡಿ ಎಸ್ ಅರುಣ್ ಅವರು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರ ಗಮನ ಸೆಳೆಯುವ ಸೂಚನೆಯ ಮೇಲೆ ಮಾತನಾಡಿದ ಸಚಿವರು, ರಾಜ್ಯದಲ್ಲಿನ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ ಮತ್ತು ನಗರ ಯೋಜನಾ ಪ್ರಾಧಿಕಾರಗಳಲ್ಲಿ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ (ನಾಗರೀಕ ಸೌಲಭ್ಯ ನಿವೇಶನ ಹಂಚಿಕೆ) ನಿಯಮಗಳು 1991 ರನ್ವಯ ಹಾಗೂ ಕರ್ನಾಟಕ ಯೋಜನಾ ಪ್ರಾಧಿಕಾರಗಳ (ನಾಗರೀಕ ಸೌಕರ್ಯ ನಿವೇಶನಗಳ ಹಂಚಿಕೆ) 2016 ರನ್ವಯ ಕ್ರಮವಾಗಿ ನಾಗರೀಕ ಸೌಲಭ್ಯ ನಿವೇಶನಗಳನ್ನು ಹಂಚಿಕೆ ಮಾಡಲಾಗುತ್ತಿದೆ. ನಾಗರೀಕ ಸೌಲಭ್ಯ ನಿವೇಶನಗಳನ್ನು ಹಂಚಿಕೆ ಮಾಡಲು ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ (ನಾಗರೀಕ…
ಮಂಡ್ಯ : ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ಚಿರತೆ ಉಪಟಳ ಮುಂದುವರೆದಿದ್ದು, ಚಿರತೆ ದಾಳಿಗೆ ಬರೋಬ್ಬರಿ 4 ಕುರಿಗಳು ಸಾವನ್ನಪ್ಪಿದ್ದು, ಮತ್ತೆರಡು ಕುರಿಗಳು ಗಂಭೀರ ಗಾಯಗೊಂಡಿರುವ ಘಟನೆ ಜರುಗಿದೆ. ಮದ್ದೂರು ತಾಲೂಕಿನ ವಳಗೆರೆಹಳ್ಳಿ ಶ್ರೀನಿವಾಸ್ ಎಂಬುವವರ ಮನೆಯ ಹಿಂಭಾಗದ ಕೊಟ್ಟಿಗೆಗೆ ಭಾನುವಾರ ರಾತ್ರಿ 8.30 ರ ಸುಮಾರಿಗೆ ನುಗ್ಗಿರುವ ಚಿರತೆಯೊಂದು 18 ಕುರಿಗಳ ಪೈಕಿ 6 ಕುರಿಗಳ ಮೇಲೆ ದಾಳಿ ಮಾಡಿದೆ. ಕುರಿಗಳ ಚೀರಾಟದಿಂದ ಕೊಟ್ಟಿಗೆಗೆ ಬಂದ ಶ್ರೀನಿವಾಸ್ ಚಿರತೆ ದಾಳಿ ಮಾಡುತ್ತಿರುವುದು ಕಂಡು ಬಂದಿದೆ. ಕೂಗಾಟ ಚೀರಾಟ ನಡೆಸಿದ ಪರಿಣಾಮ ಚಿರತೆ ಅಲ್ಲಿಂದ ಪರಾರಿಯಾಗಿದೆ. ಆದರೆ, ಅಷ್ಟರಲ್ಲಿ 4 ಕುರಿಗಳು ಸಾವನ್ನಪ್ಪಿ 2 ಕುರಿಗಳು ಗಾಯಗೊಂಡಿದ್ದು, ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿವೆ. ಸ್ಥಳಕ್ಕೆ ವಲಯ ಅರಣ್ಯಾಧಿಕಾರಿ ಗವಿಯಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿ, ಚಿರತೆ ಸೆರೆಗೆ ಅಗತ್ಯವಿರುವ ಕಡೆಗಳಲ್ಲಿ ಈಗಾಗಲೆ ಹಲವಾರು ಗ್ರಾಮಗಳಲ್ಲಿ ಬೋನನ್ನು ಇರಿಸಲಾಗಿದ್ದು, ಹಲವಾರು ಚಿರತೆಗಳನ್ನು ಸೆರೆಹಿಡಿದು ಮೇಲಾಧಿಕಾರಿಗಳ ಆದೇಶದ ಮೇರೆಗೆ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ.…
ಬೆಳಗಾವಿ ಸುವರ್ಣಸೌಧ : 2025-26ನೇ ಸಾಲಿನಲ್ಲಿ 900 ಸರ್ಕಾರಿ ಶಾಲೆಗಳನ್ನು ಕೆ.ಪಿ.ಎಸ್. ಶಾಲೆಗಳನ್ನಾಗಿ ಉನ್ನತೀಕರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಒಂದು ಕೆ.ಪಿ.ಎಸ್. ಶಾಲೆಯನ್ನು ಹಂತ ಹಂತವಾಗಿ ಪ್ರಾರಂಭಿಸಲು ಕ್ರಮವಹಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ತಿಳಿಸಿದರು. ಪರಿಷತನಲ್ಲಿ ಡಿ.8ರಂದು ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಚಿದಾನಂದ್ ಎಂ ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನಮ್ಮ ರಕ್ತದಲ್ಲಿ ಕನ್ನಡವಿದೆ. ಹಾಗಾಗಿ ಕನ್ನಡ ಮಾಧ್ಯಮದ ಯಾವುದೇ ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಸ್ಪಷ್ಟಪಡಿಸಿದರು. ನಾವು ಬಜೆಟನಲ್ಲಿ 500 ಕೆಪಿಎಸ್ ಶಾಲೆಗಳನ್ನು ಆರಂಭಿಸುವ ಘೋಷಣೆ ಮಾಡಿದ್ದೇವೆ ಎಂದ ಸಚಿವರು, 2025-26ನೇ ಸಾಲಿನಲ್ಲಿ ಈಗಾಗಲೇ ಕಾರ್ಯಾಚರಣೆಯಲ್ಲಿರುವ 309 ಕೆಪಿಎಸ್ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕದಿಂದ ಪದವಿ ಪೂರ್ವ ತರಗತಿವರೆಗೆ ಒಟ್ಟು 2,72,464 ವಿದ್ಯಾರ್ಥಿಗಳು ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಈ ಕೆ.ಪಿ.ಎಸ್. ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ.…
ಬೆಳಗಾವಿ: ಬಿಜೆಪಿ ಆರೋಪಗಳ ಕುರಿತು ಮಾತನಾಡುತ್ತ ಸಮಸ್ಯೆಗಳು ಯಾವಾಗಲೂ ಇರುತ್ತದೆ. ಯಾವ ರೀತಿಯಲ್ಲಿ, ಹೇಗೆ, ಎಷ್ಟು ಪರಿಹಾರ ಮಾಡಲು ಪ್ರಯತ್ನ ಮಾಡಿದ್ದೇವೆ ಎನ್ನುವುದು ಮುಖ್ಯ. ಸಮಸ್ಯೆ ಬಗೆಹರಿಸುತ್ತಾರೆ ಅಂತಲೇ ರಾಜ್ಯ ಜನ ನಮಗೆ ಅಧಿಕಾರ ಕೊಟ್ಟಿದ್ದಾರೆ. ಕಾಂಗ್ರೆಸ್ ಸರ್ಕಾರ ಕಬ್ಬು, ಮೆಕ್ಕೆಜೋಳ ಬೆಳೆಗಾರರ ಸಮಸ್ಯೆಗೆ ಸ್ಪಂದಿಸಿದೆ. ಯುಕೆಪಿ ಪ್ರಾಜೆಕ್ಟ್ ಕಾರ್ಯರೂಪಕ್ಕೆ ಮುಂದಾಗಿದ್ದೇವೆ. ಹೀಗೆ ನಮ್ಮಸ ರ್ಕಾರ ಎಲ್ಲ ಜಾತಿ ಧರ್ಮ ಹಾಗೂ ರೈತರು, ದಿನ ದಲಿತರ ಏಳಿಗೆಗೆ ಬದ್ಧವಾಗಿ ಕೆಲಸ ಮಾಡುತ್ತಿದೆ. ಬಿಜೆಪಿಯ ಎಂಪಿಗಳು, ಮುಖಂಡರು, ಕೇಂದ್ರ ಮಂತ್ರಿಗಳು ಏನು ಮಾಡುತ್ತಿದ್ದಾರೆ?. ಕೇಂದ್ರದಿಂದ ಆಗುತ್ತಿರುವ ಮಲತಾಯಿ ಧೋರಣೆ ಬಗ್ಗೆ ಮಾತೇ ಆಡುತ್ತಿಲ್ಲ. ಮೆಕ್ಕೆಜೋಳ ಬೆಳೆದ ರೈತರ ಕುರಿತು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿ ಬೆಂಬಲ ಬೆಲೆ ಕೊಡಿಸಲು ಪ್ರಯತ್ನವೇ ಮಾಡುತ್ತಿಲ್ಲ. ಕೇಂದ್ರ ಸರ್ಕಾರ ಖರೀದಿಗೆ ಒಪ್ಪಿಗೆ ಕೊಡುತ್ತಿಲ್ಲ. ಖರೀದಿಸಿದರೆ ನೀವೇ ಉಪಯೋಗಿಸಕೊಳ್ಳಬೇಕು ಎನ್ನುತ್ತಿದೆ. ಖರೀದಿ ಮಾಡಿದರೆ ನೀವೇ ಜವಾಬ್ದಾರಿ ಎನ್ನಿತ್ತಿದೆ. ಇವುಗಳ ಕುರಿತು ಬಿಜೆಪಿ ಮಾತನ್ನೇ ಆಡುತ್ತಿಲ್ಲ. ಸರ್ಕಾರ ಈಗ ನಮ್ಮ…
ವಿಜಯನಗರ: ಜಿಲ್ಲೆಯಲ್ಲಿ ಗ್ರಾಮ ಪಂಚಾಯ್ತಿ ಸದಸ್ಯನ ಮೇಲೆ ನಾಯಿಗಳು ಭೀಕರವಾಗಿ ದಾಳಿ ನಡೆಸಿದ್ದಾವೆ. ಈ ದಾಳಿಯಿಂದಾಗಿ ಎರಡು ಬೆರಳುಗಳೇ ಕಟ್ ಆಗಿರೋದಾಗಿ ತಿಳಿದು ಬಂದಿದೆ. ವಿಜಯನಗರದ ಹರಪನಹಳ್ಳಿ ತಾಲ್ಲೂಕಿನ ಉಚ್ಚಂಗಿದುರ್ಗ ಹಾಲಮ್ಮನ ತೋಪಿನಲ್ಲಿ ನಾಯಿಗಳು ಗ್ರಾಮ ಪಂಚಾಯ್ತಿ ಸದಸ್ಯ ಮಂಜುನಾಥ್ ಎಂಬಾತನ ಮೇಲೆ ದಾಳಿ ಮಾಡಿದ್ದಾವೆ. ವಿಜಯನಗರದ ಹರಪನಹಳ್ಳಿ ತಾಲ್ಲೂಕಿನ ಹಾಲಮ್ಮನ ತೋಪಿನಲ್ಲಿ ಈ ಘಟನೆ ನಡೆದಿದೆ. ಗ್ರಾಮ ಪಂಚಾಯ್ತಿ ಸದಸ್ಯ ಮಂಜುನಾಥ್ ವಾಕಿಂಗ್ ಹೋಗಿದ್ದಂತ ಸಂದರ್ಭದಲ್ಲಿ ನಾಯಿಗಳು ದಾಳಿ ನಡೆಸಿ ಭೀಕರವಾಗಿ ಗಾಯಗೊಳಿಸಿದ್ದಾವೆ. ನಾಯಿಗಳ ಕಡಿತದಿಂದಾಗಿ ಮಂಜುನಾಥ್ ಎರಡು ಬೆರಳುಗಳೇ ಕಟ್ ಆಗಿರುವುದಾಗಿ ತಿಳಿದು ಬಂದಿದೆ. ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಮಂಜುನಾಥ್ ಚಿಕಿತ್ಸೆ ಪಡೆಯುತ್ತಿದ್ದಾರೆ. https://kannadanewsnow.com/kannada/progress-review-in-every-district-lok-adalat-state-sc-st-commission-chairman-dr-l-murthy/ https://kannadanewsnow.com/kannada/is-teaching-bhagavad-gita-to-children-a-great-crime-h-d-kumaraswamy-hits-back/













