Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಜಿಲ್ಲೆಯಲ್ಲಿ ಅನ್ಯಕೋಮಿನ ವ್ಯಕ್ತಿಯೊಬ್ಬ ನಾಗರ ವಿಗ್ರಹವನ್ನೇ ಕಿತ್ತು ಚರಂಡಿಗೆ ಎಸೆದು ದುಷ್ಕೃತ್ಯ ಮೆರೆದಿರುವಂತ ಘಟನೆ ನಡೆದಿದೆ. ಶಿವಮೊಗ್ಗದ ಶಾಂತಿನಗರದ ಬಂಗಾರಪ್ಪ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ನಾಗರ ವಿಗ್ರಹವನ್ನು ಕಿತ್ತು ಚರಂಡಿಗೆ ಎಸೆದಿರುವುದು ಅಲ್ಲದೇ, ಗಣೇಶ ಮೂರ್ತಿಗೆ ಒದ್ದು ಅವಮಾನವನ್ನು ದುರುಳ ಮಾಡಿದ್ದಾನೆ. ನಾಗರ ವಿಗ್ರವನ್ನು ಕಿತ್ತು ಚರಂಡಿಗೆ ಎಸೆದು ಅನ್ಯಕೋಮಿನ ದುಷ್ಕರ್ಮಿ ಪರಾರಿಯಾಗಿದ್ದಾನೆ. ಈ ವಿಷಯ ತಿಳಿದು ಸ್ಥಳಕ್ಕೆ ಡಿವೈಎಸ್ಪಿ ಸಂಜೀವ್ ಕುಮಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/good-news-for-ias-ips-aspirants-upsc-invites-applications-for-free-training/ https://kannadanewsnow.com/kannada/invitation-to-apply-for-professional-training/
‘IAS, IPS ಹುದ್ದೆ’ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್: ‘UPSC ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ | IAS Officer
ಬೆಂಗಳೂರು: ನಾಗರಿಕ ಸೇವಾ ಪರೀಕ್ಷೆ ಬರೆದು ಉನ್ನತ ಹುದ್ದೆಗೇರಲು ಬಯಸುವ ಪ್ರತಿಭಾನ್ವಿತ ಯುವತಿಯರಿಗಾಗಿ ಉಚಿತ ವಸತಿ ಸಹಿತ ಅಧ್ಯಯನ ಕೇಂದ್ರ ನಡೆಸುತ್ತಿರುವ ರಾಹ್ ಅಕಾಡೆಮಿ ‘ರಾಹ್ ಸೂಪರ್ 30’, 2025-26ನೇ ಶೈಕ್ಷಣಿಕ ಸಾಲಿಗೆ ಅರ್ಹ ಮಹಿಳಾ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿದೆ. ಕಳೆದ ವರ್ಷ ಕನಕಪುರ ರಸ್ತೆಯ ಮ್ಯಾಂಗೋ ಗಾರ್ಡನ್ ಲೇಔಟ್‌ನಲ್ಲಿ ಪ್ರಾರಂಭವಾದ ‘ರಾಹ್ ಸೂಪರ್ 30’ ಆರ್ಥಿಕವಾಗಿ ಹಿಂದುಳಿದ ಪ್ರತಿಭಾನ್ವಿತ, ಅರ್ಹ ಮಹಿಳಾ ಪದವೀಧರರಿಗೆ ಯುಪಿಎಸ್‌ಸಿ (ಪೂರ್ವಭಾವಿ ಮತ್ತು ಮುಖ್ಯ) ಪರೀಕ್ಷೆಗೆ ತರಬೇತಿ, ಪರಿಣಿತರ ಮಾರ್ಗದರ್ಶನ, ಗ್ರಂಥಾಲಯ ಸೇರಿದಂತೆ ವಸತಿ ಸಹಿತ ಅಧ್ಯಯನಕ್ಕೆ ಅಗತ್ಯ ಸೌಕರ್ಯಗಳನ್ನು ಉಚಿತವಾಗಿ ಒದಗಿಸುತ್ತಿದೆ. ಮೊದಲ ಬ್ಯಾಚ್‌ನ ವಿದ್ಯಾರ್ಥಿನಿ ಡಾ. ಅಲ್ಮಾಸ್ ಫಾತಿಮಾ ಅವರು ನಾಗರಿಕ ಸೇವೆಗಳ ಇತ್ತೀಚಿನ ಪೂರ್ವಭಾವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ಸದ್ಯ ಮುಖ್ಯ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದಾರೆ. ಅಲ್ಲದೆ, ತೆಲಂಗಾಣ ರಾಜ್ಯ ಸೇವೆಗಳ ಪರೀಕ್ಷೆಯಲ್ಲಿ 99ನೇ ರ‍್ಯಾಂಕ್ ಗಳಿಸಿದ್ದಾರೆ ಮತ್ತು ತೆಲಂಗಾಣ ಪೊಲೀಸ್ ಸೇವೆಗಳಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿವೈಎಸ್‌ಪಿ) ಹುದ್ದೆಯನ್ನು ಪಡೆದಿದ್ದಾರೆ. ಇದು…
ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಪರಿಶಿಷ್ಟ ಪಂಗಡದ ಇಂಜಿನಿಯರಿಂಗ್ ಪದವೀಧರರಿಗೆ ಐ.ಐ.ಎಸ್ ಸಿ (IISc), ಐ.ಐ.ಟಿ (IIT) ಮತ್ತು ಎನ್.ಐ.ಟಿ (NIT) ಸಂಸ್ಥೆಗಳ ಮೂಲಕ Artificial Intelligence and Machine Learning ಮುಂತಾದ ವೃತ್ತಿಪರ ತರಬೇತಿ ಕೋರ್ಸುಗಳಿಗೆ ಶಿಷ್ಯವೇತನದೊಂದಿಗೆ ತರಬೇತಿಯನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯು ಪರಿಶಿಷ್ಟ ಪಂಗಡಕ್ಕೆ ಸೇರಿರಬೇಕು. ಅಭ್ಯರ್ಥಿಯು ಇಂಜಿನಿಯರಿಂಗ್ ಪದವೀಧರರಾಗಿರಬೇಕು. ಆಸಕ್ತರು ಅರ್ಜಿಯನ್ನು ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿ ಸಹಾಯಕ ನಿರ್ದೇಶಕರ ಕಛೇರಿ (ಗ್ರೇಡ್ -1), ಸಮಾಜ ಕಲ್ಯಾಣ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪಕ್ಕ, ಯಲಹಂಕ, ಬೆಂಗಳೂರು ಉತ್ತರ ತಾಲ್ಲೂಕು -560 064 ಇಲ್ಲಿಗೆ ಜುಲೈ 04ರೊಳಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 080-28461351 ಅಥವಾ ಇ-ಮೇಲ್ tswdblr.north@gmail.com ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ಉತ್ತರ ತಾಲ್ಲೂಕು, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು (ಗ್ರೇಡ್-1) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಡ್ಯ : ಜು. 28 ರಂದು ಕಾಂಗ್ರೆಸ್ ಸರ್ಕಾರದ ಸಾಧನ ಸಮಾವೇಶ ಹಾಗೂ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ 1200 ಕೋಟಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ ಹಾಗೂ ಪೂರ್ಣಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ನೆರೆವೇರಿಸಲಿದ್ದಾರೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು. ಸೋಮನಹಳ್ಳಿಯ ತಿಮ್ಮದಾಸ್ ಹೋಟೆಲ್ ಸಮೀಪ ಸಾಧನ ಸಮಾವೇಶ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಶನಿವಾರ ಸಂಜೆ ಶಾಸಕ ಕೆ.ಎಂ.ಉದಯ್ ನೇತೃತ್ವದಲ್ಲಿ ಜಿಲ್ಲಾ ಮತ್ತು ತಾಲೂಕು ಆಡಳಿತದ ಅಧಿಕಾರಿಗಳೊಂದಿಗೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದರು. ಇದೇ ವೇಳೆ ಶಾಸಕ ಕೆ.ಎಂ.ಉದಯ್ ಮಾತನಾಡಿ, ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ 1200 ರೂ. ಕೋಟಿಗೂ ಅಧಿಕ ಅನುದಾನ ನೀಡಿರುವುದರಿಂದ ಕ್ಷೇತ್ರದ ಜನರ ಪರವಾಗಿ ಅಭಿನಂದನೆ ಸಲ್ಲಿಸಲಾಗುವುದು ಎಂದರು. ಸಾಧನ ಸಮಾವೇಶವನ್ನು ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಶೀಘ್ರವಾಗಿ ಕಾರ್ಯಕ್ರಮದ ಸಂಬಂಧ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಸಮಾವೇಶದ ರೂಪುರೇಷ ರೂಪಿಸಲಾಗುವುದು…
ಬೆಂಗಳೂರು: ಈಗಾಗಲೇ ಯುಜಿಸಿಇಟಿಗೆ ಅರ್ಜಿ ಸಲ್ಲಿಸಿರುವ ಹಾಗೂ ನೀಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ತಮ್ಮ ನೀಟ್ ರೋಲ್ ನಂಬರ್ ಅನ್ನು ದಾಖಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶನಿವಾರ ತನ್ನ ವೆಬ್ ಸೈಟ್ ನಲ್ಲಿ ಲಿಂಕ್ ಬಿಡುಗಡೆ ಮಾಡಿದೆ. ಜು.8ರಂದು ಬೆಳಿಗ್ಗೆ 11ರವರೆಗೆ ರೋಲ್ ನಂಬರ್ ದಾಖಲಿಸಲು ಅವಕಾಶ ಇರುತ್ತದೆ. ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್ ಗಳಿಗೆ ಪ್ರವೇಶ ಪಡೆಯಬೇಕೆನ್ನುವ ಅಭ್ಯರ್ಥಿಗಳು ಕಡ್ಡಾಯವಾಗಿ ತಮ್ಮ ನೀಟ್ ರೋಲ್ ನಂಬರ್ ದಾಖಲಿಸಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅಭ್ಯರ್ಥಿಗಳು ದಾಖಲಿಸುವ ರೋಲ್ ನಂಬರ್ ಅನ್ನು ಎನ್ ಟಿಎ ಡಾಟಾದೊಂದಿಗೆ ತಾಳೆ ಮಾಡಿ ಯುಜಿನೀಟ್ ಅರ್ಹತೆ ಪಡೆದಿದ್ದಲ್ಲಿ ಅರ್ಜಿ ನಮೂನೆ ಪ್ರತಿ ತೆಗೆದುಕೊಳ್ಳಲು ಅವಕಾಶ ನೀಡಲಾಗುತ್ತದೆ. ನಂತರ ವೆರಿಫಿಕೇಷನ್ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಅವರು ಹೇಳಿದರು. ಜುಲೈ 7ರಿಂದ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಟ್ ಪರೀಕ್ಷೆ ಯಲ್ಲಿ ಅರ್ಹತೆ ಪಡೆದಿರುವವರು ಹಾಗೂ ಇದುವರೆಗೂ…
ಬೆಂಗಳೂರು: ಇಂದು ಬೀರೂರು, ಅಜ್ಜಂಪುರ ಮತ್ತು ಶಿವಾನಿ ರೈಲು ನಿಲ್ದಾಣಗಳನ್ನು ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವರಾದ ವಿ. ಸೋಮಣ್ಣ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಅವರು ಮೂಲಸೌಕರ್ಯಗಳು, ಪ್ರಗತಿಯಲ್ಲಿರುವ ಕಾಮಗಾರಿಗಳು ಹಾಗೂ ಮುಂದಿನ ಅಭಿವೃದ್ಧಿ ಯೋಜನೆಗಳ ಬಗ್ಗೆ ವಿಮರ್ಶೆ ನಡೆಸಿದರು. ಮಾಧ್ಯಮ ಮತ್ತು ರೈಲ್ವೆ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಮುಂದಿನ ನಾಲ್ಕು ರಿಂದ ಐದು ವರ್ಷಗಳಲ್ಲಿ ದೇಶಾದ್ಯಂತ ಎಲ್ಲಾ ಲೆವೆಲ್ ಕ್ರಾಸಿಂಗ್ ಗೇಟ್‌ಗಳನ್ನು ಮುಚ್ಚಲಾಗುವುದು, ಇದರ ಮೂಲಕ ರೈಲು ಸಂಚಾರದ ಸುರಕ್ಷತೆ ಹಾಗೂ ಕಾರ್ಯದಕ್ಷತೆ ಹೆಚ್ಚಾಗಲಿದೆ ಎಂದು ಹೇಳಿದರು. ಅವರು ಭಾರತೀಯ ರೈಲ್ವೆಗೂ ಸೇನೆಯಷ್ಟೇ ಮಹತ್ವವಿದೆ ಎಂಬುದನ್ನು ಉಲ್ಲೇಖಿಸಿ, ದೇಶದ ಅಭಿವೃದ್ಧಿ ಮತ್ತು ಸಾರ್ವಜನಿಕ ಸೇವೆಯಲ್ಲಿ ರೈಲ್ವೆಯ ಪಾತ್ರ ಅಪಾರವಾಗಿದೆ ಎಂದರು. ಕೇಂದ್ರ ಸಚಿವ ವಿ.ಸೋಮಣ್ಣ ಅವರು ತಮ್ಮ ಭೇಟಿಯ ಸಂದರ್ಭದಲ್ಲಿ ಬೀರೂರು ರೈಲ್ವೆ ನಿಲ್ದಾಣದ ಬಳಿ ರಸ್ತೆ ಕಳಸೇತುವೆ (ರೋಡ್ ಅಂಡರ್ ಬ್ರಿಡ್ಜ್) ನಿರ್ಮಾಣಕ್ಕೆ ಅನುಮೋದನೆ ನೀಡಿದರು, ಇದು ವಾಹನ ಸಂಚಾರದ ದಟ್ಟಣೆಯನ್ನು ಕಡಿಮೆಮಾಡಿ ಸುರಕ್ಷತೆಯನ್ನು…
ಕತ್ತಲೆ ಆವರಿಸಿದಾಗ ದುಷ್ಟ ಶಕ್ತಿಗಳು ಹೆಚ್ಚು ಸಕ್ರಿಯವಾಗಿರುತ್ತವೆ ಎಂದು ಹೇಳಲಾಗುತ್ತದೆ. ಕತ್ತಲೆ ನಮ್ಮನ್ನು ಆವರಿಸುವ ಅಮಾವಾಸ್ಯೆಯ ದಿನದಂದು ದುಷ್ಟ ಶಕ್ತಿಗಳ ಪ್ರಭಾವವೂ ಹೆಚ್ಚಾಗಿರುತ್ತದೆ. ಈ ದುಷ್ಟ ಶಕ್ತಿಗಳಿಂದ ನಮ್ಮನ್ನು ರಕ್ಷಿಸಿಕೊಳ್ಳಲು ಅಮಾವಾಸ್ಯೆಯಂದು ಪಿತೃ ಪೂಜೆ ಮತ್ತು ಕುಲದೇವತೆಗಳ ಪೂಜೆಯನ್ನು ಮಾಡಬೇಕೆಂದು ನಮ್ಮ ಪೂರ್ವಜರು ಹೇಳಿದ್ದಾರೆ. ಇದರ ಆಧಾರದ ಮೇಲೆ, ನಿಮ್ಮ ಮನೆಯಲ್ಲಿ ದುಷ್ಟಶಕ್ತಿಗಳಿಂದ ಯಾವುದೇ ಸಮಸ್ಯೆಗಳಿದ್ದರೆ, ಅಥವಾ ನಿಮ್ಮ ಮನೆಯಲ್ಲಿರುವ ಜನರು ದುಷ್ಟಶಕ್ತಿಗಳಿಂದ ಪ್ರಭಾವಿತರಾಗಿದ್ದರೆ, ಮುಂಬರುವ ಅಮಾವಾಸ್ಯೆಯಂದು ಹನುಮಂತನ ಈ ಶಕ್ತಿಶಾಲಿ ಮಂತ್ರವನ್ನು ಪಠಿಸಿ. ನಿಮ್ಮ ದುಃಖವು ಶೀಘ್ರದಲ್ಲೇ ನಿಮ್ಮನ್ನು ಬಿಟ್ಟು ಹೋಗುತ್ತದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ…
ನವದೆಹಲಿ: ರಸ್ತೆ ಸುರಕ್ಷತೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಶನಿವಾರ ದೇಶಾದ್ಯಂತ ಗ್ರಾಹಕರಿಗೆ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (ಬಿಐಎಸ್) ಪ್ರಮಾಣೀಕೃತ ಹೆಲ್ಮೆಟ್‌ಗಳನ್ನು ಮಾತ್ರ ಬಳಸುವಂತೆ ಮನವಿ ಮಾಡಿದೆ. ಗ್ರಾಹಕ ವ್ಯವಹಾರಗಳ ಇಲಾಖೆಯು ಬಿಐಎಸ್ ಪ್ರಮಾಣೀಕರಣವಿಲ್ಲದೆ ಹೆಲ್ಮೆಟ್‌ಗಳ ತಯಾರಿಕೆ ಅಥವಾ ಮಾರಾಟದ ವಿರುದ್ಧ ಕಟ್ಟುನಿಟ್ಟಿನ ಜಾರಿಗೊಳಿಸುವಿಕೆಗೆ ಕರೆ ನೀಡಿದೆ. ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ಮಾಹಿತಿಯ ಪ್ರಕಾರ, ಭಾರತದಲ್ಲಿ ರಸ್ತೆಗಳಲ್ಲಿ 21 ಕೋಟಿಗೂ ಹೆಚ್ಚು ದ್ವಿಚಕ್ರ ವಾಹನಗಳಿವೆ. ಮೋಟಾರು ವಾಹನ ಕಾಯ್ದೆ, 1988 ರ ಅಡಿಯಲ್ಲಿ ಹೆಲ್ಮೆಟ್ ಧರಿಸುವುದು ಕಡ್ಡಾಯವಾಗಿದ್ದರೂ, ಅದರ ಪರಿಣಾಮಕಾರಿತ್ವವು ಗುಣಮಟ್ಟವನ್ನು ಅವಲಂಬಿಸಿರುತ್ತದೆ. ಕಳಪೆ ಗುಣಮಟ್ಟದ ಹೆಲ್ಮೆಟ್‌ಗಳು ರಕ್ಷಣೆಯನ್ನು ರಾಜಿ ಮಾಡಿಕೊಳ್ಳುತ್ತವೆ ಮತ್ತು ಅವುಗಳ ಉದ್ದೇಶವನ್ನು ಸೋಲಿಸುತ್ತವೆ. ಇದನ್ನು ಪರಿಹರಿಸಲು, 2021 ರಿಂದ ಗುಣಮಟ್ಟ ನಿಯಂತ್ರಣ ಆದೇಶ ಜಾರಿಯಲ್ಲಿದ್ದು, ಎಲ್ಲಾ ದ್ವಿಚಕ್ರ ವಾಹನ ಸವಾರರಿಗೆ ಬಿಐಎಸ್ ಮಾನದಂಡಗಳ ಅಡಿಯಲ್ಲಿ (ಐಎಸ್ 4151:2015) ಪ್ರಮಾಣೀಕರಿಸಿದ ಐಎಸ್‌ಐ-ಗುರುತು ಪಡೆದ ಹೆಲ್ಮೆಟ್‌ಗಳನ್ನು ಕಡ್ಡಾಯಗೊಳಿಸುತ್ತದೆ. ಜೂನ್ 2025 ರ ಹೊತ್ತಿಗೆ,…
ಶಿವಮೊಗ್ಗ: ದಿನೇ ದಿನೇ ಆನ್ ಲೈನ್ ಗೇಮಿನ ಹುಚ್ಚಿಗೆ ಬೀಳುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದರ ಜೊತೆ ಜೊತೆಗೆ ಯುವಕರು ಆನ್ ಲೈನ್ ಗೇಮಿನಿಂದ ಆರ್ಥಿಕ ನಷ್ಟಕ್ಕೆ ಒಳಗಾಗಿ ಆತ್ಮಹತ್ಯೆಯಂತ ನಿರ್ಧಾರಕ್ಕೂ ಮುಂದಾಗುತ್ತಿದ್ದಾರೆ. ಇಂತಹ ಆಟಗಳಿಂದ ದೂರವಿರುವಂತೆ ಸಾಗರ ಡಿವೈಎಸ್ಪಿ ಗೋಪಾಲಕೃಷ್ಣ ಟಿ ನಾಯಕ್ ಅವರು ಯುವಕರಿಗೆ ಕಿವಿಮಾತು ಹೇಳಿದರು. ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಳೆದ ಕೆಲವು ದಿನಗಳಿಂದ ತಾಲ್ಲೂಕಿನಲ್ಲಿ ಎರಡು ಮೂರು ಯುವಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಬೇರೆಬೇರೆ ಕಾರಣಗಳಿದ್ದಾಗ್ಯೂ, ಆನ್‌ಲೈನ್ ಗೇಮ್‌ಗಳಲ್ಲಿ ಹಣ ಕಳೆದುಕೊಂಡಿದ್ದು ಸಹ ಎಲ್ಲೋ ಒಂದು ಕಡೆ ಲಿಂಕ್ ಆಗಿದೆ ಎಂದರು. ಸಾಗರ ತಾಲ್ಲೂಕಿನ ವಿವಿಧ ಪ್ರವಾಸಿ ತಾಣಗಳಿಗೆ ಮುಂಗಾರು ಮಳೆ ಆರಂಭಗೊಂಡ ನಂತರ ಪ್ರವಾಸಿಗರ ಭೇಟಿ ಹೆಚ್ಚಾಗಿದೆ. ಈ ಸಂದರ್ಭದಲ್ಲಿ ಕುಡಿದು ವಾಹನ ಚಾಲನೆ ಪ್ರಕರಣಗಳು ವರದಿಯಾಗುತ್ತಿವೆ. ಕುಡಿದು ವಾಹನ ಚಲಾಯಿಸಬಾರದು. ಈ ಪ್ರಕರಣಗಳ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಚಾಲಕ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು. ಕರ್ನಾಟಕ ಸರ್ಕಾರ ನಶೆಮುಕ್ತ…
ಹಾಸನ: ಜಿಲ್ಲೆಯಲ್ಲಿ ಹೃದಯಾಘಾತದ ಪ್ರಕರಣಗಳು ಮುಂದುವರೆದಿವೆ. ಜಿಲ್ಲೆಯಲ್ಲಿಂದು ಹೃದಯಾಘಾತದಿಂದ ಕುಳಿತಲ್ಲೇ 63 ವರ್ಷದ ವೃದ್ಧರೊಬ್ಬರು ಪ್ರಾಣಬಿಟ್ಟಿದ್ದಾರೆ. ಹಾಸನದಲ್ಲಿ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಮುಂದುವರೆದಿದೆ. ಹಾಸನದ ಹಗರೆ ಗ್ರಾಮದಲ್ಲಿ ಕುಳಿತಲ್ಲೇ ವೃದ್ಧರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಹಗರೆ ಗ್ರಾಮದ ನಿರ್ವಾಣಿಗೌಡ(63) ಎಂಬ ವೃದ್ಧರೊಬ್ಬರು ಕುಳಿತಲ್ಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹೃದಯಾಘಾತದಿಂದ ಅಡವಿಬಂಟೇನಹಳ್ಳಿಯ ನಿರ್ವಾಣಿಗೌಡ ಸಾವನ್ನಪ್ಪಿದ್ದಾರೆ. ಅಂದಹಾಗೇ ದಿನಸಿ ತರೋದಕ್ಕೆ ಹಾಸನ ಜಿಲ್ಲೆಯ ಹಗರೆ ಗ್ರಾಮಕ್ಕೆ ವೃದ್ಧ ನಿರ್ವಾಹಣಿಗೌಡ ತೆರಳಿದ್ದರು. ಈ ವೇಳೆ ನ್ಯಾಯಬೆಲೆ ಅಂಗಡಿ ಬಳಿ ಕುಳಿತಿದ್ದಾಗ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. https://kannadanewsnow.com/kannada/why-is-there-no-action-against-cm-siddaramaiah-opposition-leader-r-ashoks-question/ https://kannadanewsnow.com/kannada/negligence-during-internal-reservation-survey-in-bengaluru-four-officials-suspended-on-a-single-day-today/