Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯದಲ್ಲಿ ಮೊಬೈಲ್ ಮತ್ತು ಎಲೆಕ್ಟ್ರಾನಿಕ್ ಉತ್ಪನ್ನಗಳ ಉತ್ಪಾದನೆ ಹಾಗೂ ವಿನ್ಯಾಸ ಕ್ಷೇತ್ರದ ವಿಸ್ತರಣೆಯನ್ನು ಗುರಿಯಾಗಿ ಇಟ್ಟುಕೊಂಡು 150 ಬಿಲಿಯನ್ ಡಾಲರ್ ಹೂಡಿಕೆ ಸಾಧ್ಯವಾಗುವಂತೆ ವಿಷನ್ ಡಾಕ್ಯುಮೆಂಟ್ ತಯಾರಿಸುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅವರು ಗುರುವಾರ ವಿಧಾನಸೌಧದ ಕಚೇರಿಯಲ್ಲಿ ತಮ್ಮನ್ನು ಭೇಟಿಯಾದ ಇಂಡಿಯನ್ ಸೆಲ್ಯುಲರ್ ಮತ್ತು ಎಲೆಕ್ಟ್ರಾನಿಕ್ಸ್ ಅಸೋಸಿಯೇಷನ್ (ಐಸಿಇಎ) ಅಧ್ಯಕ್ಷ ಪಂಕಜ್ ಮಹೀಂದ್ರೂ ನೇತೃತ್ವದ ಉನ್ನತ ಮಟ್ಟದ ನಿಯೋಗದ ಜತೆ ವಿಸ್ತೃತ ಮಾತುಕತೆ ನಡೆಸಿದರು. ಬಳಿಕ ಮಾತನಾಡಿದ ಅವರು, ಕೇಂದ್ರ ಸರಕಾರದ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯವು ಈ ವರ್ಷದ ಏಪ್ರಿಲ್ ತಿಂಗಳಲ್ಲಿ ಎಲೆಕ್ಟ್ರಾನಿಕ್ಸ್ ಬಿಡಿಭಾಗಗಳ ತಯಾರಿಕೆ ಯೋಜನೆಯನ್ನು ಘೋಷಿಸಿದೆ. ಇದಕ್ಕೆ ಸಮಾನಾಂತರವಾಗಿ ರಾಜ್ಯ ಸರಕಾರವು ಕೂಡ ಒಂದು ಯೋಜನೆಯನ್ನು ರೂಪಿಸಲು ಚಿಂತಿಸುತ್ತಿದ್ದು, ಇದರ ಕಾರ್ಯಸಾಧ್ಯತೆಯನ್ನು ಕುರಿತು ಅಧ್ಯಯನ ಮಾಡುತ್ತಿದೆ. ಇದು ಕರಡು ಹಂತದಲ್ಲಿದ್ದು, ಇದಕ್ಕೆ ಐಸಿಇಎ ನೀಡುವ ಸಲಹೆಗಳನ್ನು ಸ್ವಾಗತಿಸಲಾಗುವುದು’ ಎಂದಿದ್ದಾರೆ. ಮೊಬೈಲ್ ಫೋನ್ ಬಿಡಿಭಾಗಗಳು ಮಾತ್ರವಲ್ಲದೆ…
ಬೆಂಗಳೂರು: ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಬೆಂಗಳೂರು ನಗರ ಜಿಲ್ಲಾ ಶಾಖೆಯಲ್ಲಿ ಗೌರವಧನ ಆಧಾರದ ಮೇಲೆ ಕಾರ್ಯನಿರ್ವಹಿಸಲು ಟೈಪಿಸ್ಟ್ ಕಾಮ್ ಸಂಯೋಜಕರು ಹುದ್ದೆ ಹಾಗೂ ದೀರ್ಘಾವಧಿ ಇಂಟರ್ನ್ ಶಿಪ್ ಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ತಮ್ಮ ಸ್ವವಿವರಗಳೊಂದಿಗೆ ಗೌರವ ಕಾರ್ಯದರ್ಶಿ, IRCS ಬೆಂಗಳೂರು ನಗರ ಜಿಲ್ಲೆ ಅಥವಾ ಇ-ಮೇಲ್ cdmvm14@gmail.com ಇಲ್ಲಿಗೆ ಪತ್ರಿಕಾ ಪ್ರಕಟಣೆಗೊಂಡ 07 ದಿನಗಳ ಒಳಗೆ ಅರ್ಜಿಗಳನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 080-2214243, 2211292 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಶಾಖೆ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಗೌರವ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) 5 ಮತ್ತು 8ನೇ ಸೆಮಿಸ್ಟರ್ ಬಿ.ಇ ಮತ್ತು ಬಿ.ಟೆಕ್ ವಿದ್ಯಾರ್ಥಿಗಳಿಗೆ ಪರೀಕ್ಷಾ ಅರ್ಜಿಗಳನ್ನು ಭರ್ತಿ ಮಾಡಲು ನಿಗದಿ ಪಡಿಸಿದ್ದ ದಿನಾಂಕವನ್ನು ವಿಸ್ತರಿಸಿದೆ. ಕಾಲೇಜುಗಳು ಪರೀಕ್ಷಾ ಅರ್ಜಿಗಳನ್ನು ಭರ್ತಿ ಮಾಡಲು ಡಿಸೆಂಬರ್ 6 ಮತ್ತು ದಂಡ ಶುಲ್ಕ 500 ರೂ.ಗಳೊಂದಿಗೆ ಭರ್ತಿ ಮಾಡಲು ಡಿಸೆಂಬರ್ 8 ಕೊನೆಯ ದಿನವಾಗಿದೆ. ಪ್ರವೇಶ ಪತ್ರಗಳು ಡಿಸೆಂಬರ್ 10 ರಂದು ಬಿಡುಗಡೆ ಮಾಡಲಿದೆ. ಹೆಚ್ಚಿನ ಮಾಹಿತಿಗೆ https://prexam.vtu.ac.in/ ಸಂಪರ್ಕಿಸಬಹುದಾಗಿದೆ ಎಂದು ವಿಟಿಯು ಕುಲಸಚಿವ(ಮೌಲ್ಯಮಾಪನ) ಡಾ.ಯು.ಜೆ.ಉಜ್ವಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೀಗಿದೆ ಪರಿಷ್ಕೃತ ವೇಳಾಪಟ್ಟಿ ಬಿ.ಇ. ಮತ್ತು ಬಿ.ಟೆಕ್ ಕೋರ್ಸ್ ಗಳ ಅಂತಿಮ ಪರೀಕ್ಷೆಗಳ ವೇಳಾಪಟ್ಟಿಯನ್ನು ಪರಿಷ್ಕರಿಸಿದೆ. ಡಿಸೆಂಬರ್ನಲ್ಲಿ ನಡೆಸಲು ಉದ್ದೇಶಿಸಲಾಗಿದ್ದ ಪರೀಕ್ಷೆಗಳನ್ನು 2026 ಜನವರಿಯಲ್ಲಿ ನಡೆಸಲು ನಿರ್ಧರಿಸಿದೆ. ವಿಷಯವಾರು ವೇಳಾಪಟ್ಟಿಯನ್ನು ವಿಟಿಯು ವೆಬ್ಸೈಟ್ https://vtu.ac.in/ ಮೂಲಕ ನೋಡಬಹುದಾಗಿದೆ ಎಂದು ವಿಟಿಯು ತಿಳಿಸಿದೆ. https://kannadanewsnow.com/kannada/breaking-today-at-4-pm-at-vidhana-soudha-state-cabinet-meeting-scheduled-under-the-leadership-of-cm-siddaramaiah/ https://kannadanewsnow.com/kannada/dharmasthala-case-even-though-bail-was-granted-mask-man-chinnayya-is-not-lucky-to-get-released/
ಶಿವಮೊಗ್ಗ: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಆದರೂ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಬಿಡುಗಡೆ ಭಾಗ್ಯವಿಲ್ಲ. ಕಾರಣವೇನು ಅಂತ ಮುಂದೆ ಓದಿ. ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಮಂಗಳೂರಿನ ಜಿಲ್ಲಾ ನ್ಯಾಯಾಲಯವು ಜಾಮೀನು ಮಂಜೂರು ಮಾಡಿತ್ತು. ಕೋರ್ಟ್ ಜಾಮೀನು ನೀಡಿ 9 ದಿನಗಳೇ ಕಳೆದರೂ ಶ್ಯೂರಿಟಿ ನೀಡಲು ಯಾರೂ ಮುಂದೆ ಬಾರದ ಕಾರಣ ಶಿವಮೊಗ್ಗ ಜಿಲ್ಲಾ ಕಾರಾಗೃಹದಲ್ಲೇ ಮಾಸ್ಕ್ ಮ್ಯಾನ್ ಚಿನ್ನಯ್ಯ ದಿನ ಕಳೆಯುವಂತೆ ಆಗಿದೆ. ಅಂದಹಾಗೇ ಮಂಗಳೂರು ಜಿಲ್ಲಾ ನ್ಯಾಯಾಲಯವು ಧರ್ಮಸ್ಥಳ ಬುರುಡೆ ಕೇಸಲ್ಲಿ ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಜಾಮೀನು ವೇಳೆ 1 ಲಕ್ಷ ರೂಪಾಯಿ ಬಾಂಡ್, ಇಬ್ಬರ ಶ್ಯೂರಿಟಿಯೊಂದಿಗೆ 12 ಷರತ್ತುಗಳನ್ನು ವಿಧಿಸಿತ್ತು. ಈ ಹಿನ್ನಲೆಯಲ್ಲಿ ಶ್ಯೂರಿಟಿಗೆ ಯಾರೂ ಮುಂದೆ ಬಾರದ ಕಾರಣ ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಜೈಲಿನಿಂದ ಬಿಡುಗಡೆ ಭಾಗ್ಯ ದೊರೆತಿಲ್ಲ.
ಬೆಂಗಳೂರು :“ಯಾವುದೇ ಪರಿಸ್ಥಿತಿಯಲ್ಲಾದರೂ ಸರಿ ಮಹಿಳಾ ನೌಕರರು ಜಾತಿ ಸಂಘಗಳ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಆರದ ಮೇಲೆ ಸಂಘಟನೆ ಮಾಡಿ. ನಿಮ್ಮದು ಕೇವಲ ಒಂದೇ ಒಂದು ಸಂಘ ಇರಬೇಕು. ಅದು ಮಹಿಳಾ ಸಂಘವಾಗಿರಬೇಕು. ಇದು ನಾನು ನಿಮಗೆ ನೀಡುತ್ತಿರುವ ಸಲಹೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಗುರುವಾರ ನಡೆದ ಸರ್ಕಾರಿ ಮಹಿಳಾ ನೌಕರರ ಸಮ್ಮೇಳನ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. “ನಾನು ಬಂಗಾರಪ್ಪನವರ ಸರ್ಕಾರದಲ್ಲಿ ಸಚಿವನಾಗಿದ್ದಾಗಿನಿಂದ. ಅಂದರೆ 40 ವರ್ಷಗಳಿಂದ ಈ ಸಂಘವನ್ನು ಗಮನಿಸಿಕೊಂಡು ಬಂದಿದ್ದೇನೆ. ನಿಮ್ಮ ಒಗ್ಗಟ್ಟು ಬಿಡಬೇಡಿ. ಲಿಂಗಾಯತರ, ಹಿಂದುಳಿದ ವರ್ಗಗಳ, ಒಕ್ಕಲಿಗರ, ಪರಿಶಿಷ್ಟ ಜಾತಿ ಹಾಗೂ ವರ್ಗಗಳ ಸಂಘ ಎಂದು ಜಾತಿ ಆಧಾರದ ಮೇಲೆ ಸಂಘಟನೆ ಮಾಡಬೇಡಿ. ಈ ಆಲೋಚನೆಯನ್ನು ನಿಮ್ಮ ತಲೆಯಿಂದ ತೆಗೆದುಹಾಕಿ” ಎಂದು ಕಿವಿಮಾತು ಹೇಳಿದರು. ಮಹಿಳೆಯರು ಕರುಣೆಯ ಕಡಲು, ಮಮತೆಯ ಮುಗಿಲು “ಸಂಘಟನೆ ಬಹಳ ಮುಖ್ಯ. ಶಿಕ್ಷಣ…
ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2025-26ನೇ ಸಾಲಿನ ಯುವಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ 50 ಯುವ ಬರಹಗಾರರ ಹಸ್ತಪ್ರತಿಗಳ ಪ್ರಕಟಣೆಗೆ ಮಾತ್ರ ರೂ.15,000-00ಗಳ ಪ್ರೋತ್ಸಾಹಧನ ನೀಡಲಾಗುವುದು. ಅರ್ಜಿದಾರರು 18 ರಿಂದ 40 ವರ್ಷ ವಯೋಮಿತಿಯವರಾಗಿರಬೇಕು. ಸ್ವ-ವಿವರವುಳ್ಳ ಪ್ರಾಧಿಕಾರದ ಅರ್ಜಿ ನಮೂನೆಯೊಂದಿಗೆ ದೃಢೀಕೃತ ಎಸ್.ಎಸ್.ಎಲ್.ಸಿ. ಪ್ರಮಾಣ ಪತ್ರದ ಪ್ರತಿ ಅಥವಾ ಅಧಿಕೃತವಾದ, ದೃಢೀಕರಿಸಲ್ಪಟ್ಟ ಜನ್ಮದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸಬೇಕು. ಅಲ್ಲದೆ ಪ್ರಸ್ತುತ ಸಲ್ಲಿಸಲ್ಪಡುತ್ತಿರುವ ಕೃತಿಯು ತಮ್ಮ ಚೊಚ್ಚಲ ಕೃತಿಯಾಗಿದ್ದು, ಎಲ್ಲಿಯೂ ಪ್ರಕಟವಾಗಿಲ್ಲವೆಂದು ಸ್ವಯಂ ದೃಢೀಕರಣ ನೀಡಬೇಕು. ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಡಿ.ಟಿ.ಪಿ.ಮಾಡಿಸಿದಾಗ 1/8 ಡೆಮ್ಮಿ ಅಳತೆಯಲ್ಲಿ ಕನಿಷ್ಟ 60 ಪುಟಗಳಿರಬೇಕು. ಅನುವಾದ, ಪಠ್ಯಪುಸ್ತಕ ಹಾಗೂ ಬೇರಾವುದೇ ಪದವಿ / ಸ್ನಾತಕೋತ್ತರ ಪದವಿ(PHD)ಗೆ ಸಿದ್ಧಪಡಿಸಿದ ಸಂಶೋಧನಾ ಪ್ರಬಂಧಗಳನ್ನು ಹೊರತುಪಡಿಸಿ, ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶಾ ಲೇಖನ, ಪ್ರಬಂಧ ಮುಂತಾದ ಕನ್ನಡ ಸಾಹಿತ್ಯ ಪ್ರಕಾರಗಳಿಗೆ ಸಂಬಂಧಿಸಿದಂತೆ ಹಸ್ತಪ್ರತಿ ಇರಬೇಕು. ಕೃತಿಯ ಪಠ್ಯದಲ್ಲಿ ಯಾವುದೇ…
ನವದೆಹಲಿ: ಇನ್ಮುಂದೆ ಪಾನ್ ಮಸಾಲಾ ಪ್ಯಾಕ್ ಗಳ ಮೇಲೆ ಕಡ್ಡಾಯವಾಗಿ ಚಿಲ್ಲರೆ ಮಾರಾಟ ಬೆಲೆ ( Retail Selling Price-RSP) ಹಾಕುವಂತೆ ಕೇಂದ್ರ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು, ಇನ್ಮುಂದೆ ಪಾನ್ ಮಸಾಲಾ ಪ್ಯಾಕ್ ಗಳ ಮೇಲೆ ಕಡ್ಡಾಯವಾಗಿ ಚಿಲ್ಲರೆ ಮಾರಾಟ ಬೆಲೆ ಹಾಕುವಂತೆ ಆದೇಶ ಹೊರಡಿಸಿದೆ. ಫೆಬ್ರವರಿ.1, 2026ರಿಂದ ಜಾರಿಗೆ ಹರುವಂತೆ ಪಾನ್ ಮಸಾಲಾ ಪ್ಯಾಕೇಟ್ ಮೇಲೆ ಚಿಲ್ಲರೆ ಮಾರಾಟ ಬೆಲೆ ಹಾಕುವ ಹೊಸ ಆದೇಶ ಅನ್ವಯ ಆಗಲಿದೆ ಎಂಬುದಾಗಿ ತಿಳಿಸಿದೆ. ಗ್ರಾಹಕರಿಗೆ ಪಾರದರ್ಶಕತೆ ಹೆಚ್ಚಿಸಲು ಕೇಂದ್ರ ಸರ್ಕಾರ ಈ ಹೊಸ ಆದೇಶ ಹೊರಡಿಸಿದೆ. ಎಲ್ಲಾ ಗಾತ್ರದ ಪ್ಯಾಕ್ ಮೇಲೂ ಚಿಲ್ಲರೆ ಮಾರಾಟ ಬೆಲೆ ಹಾಕುವುದು ಕಡ್ಡಾಯವಾಗಿದೆ. ಕಾನೂನು ಮಾಪನಶಾಸ್ತ್ರ ತಿದ್ದುಪಡಿ ಅಡಿಯಲ್ಲಿ ಕೇಂದ್ರ ಸರ್ಕಾರ ಆದೇಶ ಮಾಡಿದೆ.
ಶಿವಮೊಗ್ಗ: ಇಂದು ಜನರ ಸಮಸ್ಯೆ ಸರಿ ಪಡಿಸೋ ನಿಟ್ಟಿನಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಮಹತ್ವದ ಹೆಜ್ಜೆ ಇರಿಸಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಸಾಗರದ ನಗರಸಭೆ ಆವರಣದಲ್ಲಿ ಜನ ಸಂಪರ್ಕ ಸಭೆಯನ್ನು ನಡೆಸಲಿದ್ದಾರೆ. ಆ ಮೂಲಕ ಜನರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸುವಂತ ಕೆಲಸವನ್ನು ಮಾಡಲಿದ್ದಾರೆ. ಈ ಕುರಿತಂತೆ ಸಾಗರ ನಗರಸಭೆ ಪೌರಾಯುಕ್ತ ಹೆಚ್.ಕೆ ನಾಗಪ್ಪ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಡಿಸೆಂಬರ್.4, 2025ರ ಇಂದು ಬೆಳಗ್ಗೆ 11 ಗಂಟೆಗೆ ಸಾಗರನ ನಗರಸಭೆ ಆವರಣದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ನೇತೃತ್ವದಲ್ಲಿ ಜನಸಂಪರ್ಕ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಸಾಗರ ನಗರದ ಜನತೆಯ ಅಹವಾಲುಗಳಿಗೆ ಸ್ಥಳದಲ್ಲೇ ಪರಿಹರಿಸುವಂತ ಕೆಲಸ ಮಾಡಲಿದ್ದಾರೆ ಎಂದಿದ್ದಾರೆ. ಇಂದು ಬೆಳಗ್ಗೆ 9.30ರಿಂದಲೇ ಸಾರ್ವಜನಿಕರ ಅಹವಾಲುಗಳಿಗೆ ಅರ್ಜಿ ಸ್ವೀಕಾರ ಆರಂಭಗೊಳ್ಳಲಿದೆ. ಸಾಗರ ನಗರದ ಜನರು ಸ್ವಚ್ಛತೆ, ನೈರ್ಮಲ್ಯ, ವಿದ್ಯುತ್, ಕುಡಿಯುವ ನೀರು, ಮೂಲಭೂತ ಸೌಕರ್ಯ ಮತ್ತು ನಾಗರೀಕ ಸೇವೆಗಳು, ಇ-ಆಸ್ತಿ ಮತ್ತು ಇತರೆ ಯೋಜನೆಗಳು, ನಗರ ಪ್ರದೇಶಕ್ಕೆ ಸಂಬಂಧಿಸಿದ ಇತರೆ…
ನವದೆಹಲಿ: ಅಂಗನವಾಡಿ, ಅಕ್ಷರ ದಾಸೋಹ ಹಾಗೂ ಆಶಾ ಕಾರ್ಯಕರ್ತೆಯರ ಸಮಸ್ಯೆಗಳ ಬಗ್ಗೆ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವರಾದ ಅನ್ನಪೂರ್ಣ ದೇವಿ ಮತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಮಹತ್ವದ ಮಾತುಕತೆ ನಡೆಸಿದರು. ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನಾ ಚಳವಳಿ ನಡೆಸುತ್ತಿದ್ದ ಕರ್ನಾಟಕ ಅಂಗನವಾಡಿ, ಅಕ್ಷರ ದಾಸೋಹಿ, ಆಶಾ ನೌಕರರ ಪ್ರಮುಖರನ್ನು ಬುಧವಾರ ನವದೆಹಲಿಗೆ ಕರೆಸಿಕೊಂಡ ಸಚಿವ ಕುಮಾರಸ್ವಾಮಿ ಅವರು; ಸಂಜೆ ಈ ಎಲ್ಲಾ ಪ್ರಮುಖರ ಜತೆ ಸಂಜೆ ನವದೆಹಲಿಯ ಶಾಸ್ತ್ರೀ ಭವನದಲ್ಲಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯದ ಕಚೇರಿಯಲ್ಲಿ ಸಚಿವರಾದ ಅನ್ನಪೂರ್ಣದೇವಿ ಅವರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ನೌಕರರ ಪರವಾಗಿ ಸಚಿವರಿಗೆ ಅವರ ಸಮಸ್ಯೆಗಳು, ಬೇಡಿಕೆಗಳ ಬಗ್ಗೆ ಕುಮಾರಸ್ವಾಮಿ ಅವರು ಮಾಹಿತಿ ನೀಡಿದರು. ಇಬ್ಬರು ಸಚಿವರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯದ ಉನ್ನತ ಅಧಿಕಾರಿಗಳು ಹಾಜರಿದ್ದ…
ಪಾದಚಾರಿ ಮಾರ್ಗದಲ್ಲಿ ವಾಸಿಸುವ ವ್ಯಕ್ತಿಯಿಂದ ಹಿಡಿದು ಬಂಗಲೆಯಲ್ಲಿ ವಾಸಿಸುವ ಶ್ರೀಮಂತ ಉದ್ಯಮಿಯವರೆಗೆ ಎಲ್ಲರಿಗೂ ಸಾಲದ ಸಮಸ್ಯೆ ಇದೆ. ಆ ಸಾಲದ ಸಮಸ್ಯೆಯು ಪ್ರಮಾಣದಲ್ಲಿ ಬದಲಾಗುತ್ತದೆ ಆದರೆ ಪ್ರತಿಯೊಬ್ಬರಿಗೂ ಒಂದಲ್ಲ ಒಂದು ರೂಪದಲ್ಲಿ ಉಳಿಯುತ್ತದೆ. ಕೆಲವು ಜನರು ಪಾವತಿಸದ ಸಾಲಕ್ಕೆ ಬಡ್ಡಿಯನ್ನು ಪಾವತಿಸುವ ಮೂಲಕ ಬಳಲುತ್ತಿದ್ದಾರೆ. ಈ ಸಂಧರ್ಭದಲ್ಲಿ ಎಂತಹ ಸಾಲದ ಹೊರೆಯಿದ್ದರೂ ಆ ಋಣ ತೀರಿಸಲು ನಾವು ಮಾಡಬಹುದಾದ ಉಪಾಯವೇ ಇಳನೇರ್ ದೀಪಂ. ಈ ಆಧ್ಯಾತ್ಮಿಕ ಪೋಸ್ಟ್ನಲ್ಲಿ, ಎಳನೀರನ್ನು ಬಳಸಿ ದೀಪವನ್ನು ಹೇಗೆ ಬೆಳಗಿಸಬೇಕು ಎಂದು ನಾವು ನೋಡಲಿದ್ದೇವೆ . ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ,…














