Author: kannadanewsnow09

ಹುಬ್ಬಳ್ಳಿ: ಮಾರಕಾಸ್ತ್ರಗಳಿಂದಲೇ ತಂದೆ ತಾಯಿಯನ್ನು ಕೊಚ್ಚಿ ಕೊಲೆಗೈದ ಶಾಕಿಂಗ್ ಘಟನೆ ಹುಬ್ಬಳ್ಳಿಯ ಕುಸಗಲ್ ಗ್ರಾಮದಲ್ಲಿ ನಡೆದಿದೆ. ಹುಬ್ಬಳ್ಳಿಯ ಕುಸಗಲ್ ಗ್ರಾಮದಲ್ಲಿ ತಂದೆ ಅಶೋಕ್, ತಾಯಿ ಶಾರದಮ್ಮ ಎಂಬುವರನ್ನು ಅವರ ಪುತ್ರಿ ಗಂಗಾಧರಪ್ಪ ಎಂಬಾತ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾನೆ. ಈ ವಿಷಯ ತಿಳಿದು ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮಾಂತರ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. https://kannadanewsnow.com/kannada/beer-lovers-shocked-by-state-government-will-the-price-hike-be-fixed-from-january-20/ https://kannadanewsnow.com/kannada/himachal-man-stunned-by-rs-2-billion-electricity-bill-previous-charge-was/

Read More

ಬೆಂಗಳೂರು: ಜನವರಿ.20, 2025ರಿಂದಲೇ ಜಾರಿಗೆ ಬರುವಂತೆ ರಾಜ್ಯ ಸರ್ಕಾರದಿಂದ ಬಿಯರ್ ದರ ಏರಿಕೆಗೆ ಮುಂದಾಗಿರುವುದಾಗಿ ತಿಳಿದು ಬಂದಿದೆ. ಆ ಮೂಲಕ ಮದ್ಯಪ್ರಿಯರಿಗೆ ಶಾಕ್ ನೀಡಲು ಸಜ್ಜಾಗಿದೆ ಎನ್ನಲಾಗುತ್ತಿದೆ.  ರಾಜ್ಯ ಸರ್ಕಾರವು ಶೀಘ್ರವೆ ಬಿಯರ್ ಬೆಲೆಯಲ್ಲಿ 10 ರಿಂದ 50 ರೂ.ವರೆಗೆ ಹೆಚ್ಚಳ ಮಾಡಲು ನಿರ್ಧರಿಸಿದೆ ಎನ್ನಲಾಗಿದ್ದು, ಬಿಯರ್ ನಲ್ಲಿನ ಅಲ್ಕೋಹಾಲ್ ಅಂಶದ ಮೇಲೆ ದರ 10 ರಿಂದ 50 ರೂ.ವರೆಗೆ ಹೆಚ್ಚಳ ಮಾಡಲು ನಿರ್ಧರಿಸಿದೆ ಎಂದು ಹೇಳಲಾಗಿದೆ. ಕಡಿಮೆ ಆಲ್ಕೋಹಾಲ್ ಅಂಶವಿರುವ ಬಿಯರ್ ಗಳ ಬೆಲೆ ಯಥಾಸ್ಥಿತಿ ಇರಲಿದ್ದು, ಸ್ಟ್ರಾಂಗ್ ಬಿಯರ್ಗಳ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಜನವರಿ 20 ರಿಂದ ದರ ಹೆಚ್ಚಳ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಮೂಲಕ ಬಿಯರ್ ಪ್ರಿಯರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದೆ. 2024-25ನೇ ಸಾಲಿನ ಬಜೆಟ್‌ನಲ್ಲಿ ಮುಖ್ಯಮಂತ್ರಿ ಐಎಂಎಲ್‌ ಹಾಗೂ ಬಿಯರ್‌ ಸ್ಪ್ಯಾಬ್‌ಗಳನ್ನು ಪರಿಷ್ಕರಿಸಲಾಗುವುದು ಎಂದು ಪ್ರಕಟಿಸಿದ್ದರು. ಅದರಂತೆ, ಐಎಂಎಲ್‌ ದರ ಪರಿಷ್ಕರಿಸಲಾಗಿತ್ತು. ಆದರೆ, ಬಿಯರ್‌ ಮೇಲಿನ…

Read More

ತಮಿಳುನಾಡು: ದೇಶದಲ್ಲಿ ಹೆಚ್ ಎಂ ಪಿ ವಿ ವೈರಸ್ ಸೋಂಕಿನ ಪ್ರಕರಣಗಳ ಸಂಖ್ಯೆ ಮುಂದುವರೆದಿದೆ. ಇಂದು ತಮಿಳುನಾಡಿನಲ್ಲಿ ಮತ್ತಿಬ್ಬರು ಮಕ್ಕಳಿಗೆ ವೈರಸ್ ದೃಢಪಟ್ಟಿದೆ. ಹೀಗಾಗಿ ಭಾರತದಲ್ಲಿ ಸೋಂಕಿತರ ಸಂಖ್ಯೆ 6ಕ್ಕೆ ಏರಿಕೆಯಾದಂತೆ ಆಗಿದೆ. ತಮಿಳುನಾಡಿನ ಚೆನ್ನೈನಲ್ಲಿ ಜ್ವರ, ಶೀತ ಮತ್ತು ಕೆಮ್ಮಿನಿಂದ ಬಳಲುತ್ತಿದ್ದಂತ ಮಗುವೊಂದಕ್ಕೆ ಉಸಿರಾಟದ ತೊಂದರೆ ಕೂಡ ಕಾಣಿಸಿಕೊಂಡಿತ್ತು. ಹೀಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಇಂತಹ ಮಗುವಿಗೆ ಹೆಚ್ ಎಂಪಿವಿ ವೈರಸ್ ಸೋಂಕು ತಗುಲಿರುವುದು ಪರೀಕ್ಷೆಯ ವರದಿಯಿಂದ ದೃಢಪಟ್ಟಿದೆ. ಇನ್ನೂ ಗಿಂಡಿಯ ಖಾಸಗಿ ಮಕ್ಕಳ ಆಸ್ಪತ್ರೆಯಲ್ಲಿ ಮತ್ತೊಂದು ಮಗುವು ಇದೇ ಲಕ್ಷಣದಿಂದಾಗಿ ಚಿಕಿತ್ಸೆಗೆ ದಾಖಲಾಗಿ ಪಡೆಯುತ್ತಿತ್ತು. ಆ ಮಗುವನ್ನು ಪರೀಕ್ಷೆಗೆ ಒಳಪಡಿಸಿದಾಗ ಹೆಚ್ ಎಂ ಪಿ ವಿ ವೈರಸ್ ಸೋಂಕು ದೃಢಪಟ್ಟಿದೆ. ಈ ಮೂಲಕ ಚೆನ್ನೈನಲ್ಲಿ ಇಬ್ಬರು ಮಕ್ಕಳಿಗೆ ಸೋಂಕು ದೃಢಪಟ್ಟು, ಭಾರತದಲ್ಲಿ ಸೋಂಕಿತರ ಸಂಖ್ಯೆ 6ಕ್ಕೆ ಏರಿಕೆಯಾದಂತೆ ಆಗಿದೆ. https://kannadanewsnow.com/kannada/bjp-mla-chandru-lamanis-car-driver-commits-suicide/ https://kannadanewsnow.com/kannada/himachal-man-stunned-by-rs-2-billion-electricity-bill-previous-charge-was/

Read More

ಗದಗ: ಜಿಲ್ಲೆಯ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರ ಬಳಿಯಲ್ಲಿ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದಂತ ವ್ಯಕ್ತಿಯೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಗದಗ ಜಿಲ್ಲೆಯ ಶಿರಹಟ್ಟಿಯ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರ ಕಾರು ಚಾಲಕ ಸುನೀಲ್ ಲಮಾಣಿ(25) ಎಂಬಾತ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರಿಗೆ ಸೇರಿದಂತ ನಿವಾಸದಲ್ಲೇ ಚಾಲಕ ಸುನೀಲ್ ಲಮಾಣಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಲಕ್ಷ್ಮೇಶ್ವರ ಪಟ್ಟಣದಲ್ಲಿರುವಂತ ಚಂದ್ರು ಲಮಾಣಿ ಅವರಿಗೆ ಸೇರಿದ ನಿವಾಸದಲ್ಲಿ ಈ ಘಟನೆ ನಡೆದಿದೆ. ಸುನೀಲ್ ಲಮಾಣಿ ಅವರು ಕೌಟುಂಬಿಕ ಕಲಹದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಾಗಿ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. https://kannadanewsnow.com/kannada/recruitment-rally-for-airmen-recruitment-to-be-held-in-shimoga-from-jan-29/ https://kannadanewsnow.com/kannada/himachal-man-stunned-by-rs-2-billion-electricity-bill-previous-charge-was/

Read More

ಶಿವಮೊಗ್ಗ : ಭಾರತೀಯ ವಾಯುಪಡೆಯು ಭಾರತದ/ಗೂರ್ಖಾ(ನೇಪಾಳ) ಪುರುಷ ಅಭ್ಯರ್ಥಿಗಳನ್ನು ಭಾರತೀಯ ವಾಯುಪಡೆಗೆ ಏರ್‌ಮ್ಯಾನ್ ಆಗಿ ಗ್ರೂಪ್ ‘ವೈ’(ತಾಂತ್ರಿಕವಲ್ಲದ) ವೈದ್ಯಕೀಯ ಸಹಾಯಕ ವೃತ್ತಿಗೆ ಸೇರಲು ಜ.29 ರಿಂದ ಫೆ.06 ರವರೆಗೆ ನೇಮಕ ರ‍್ಯಾಲಿ ಏರ್ಪಡಿಸಿದೆ. ನೇಮಕಾತಿ ರ‍್ಯಾಲಿಯನ್ನು ಮಹಾರಾಜ ಕಾಲೇಜು ಮೈದಾನ, ಪಿ ಟಿ ಉಷಾ ರಸ್ತೆ, ಶೆಣೈಸ್ ಎರ್ನಾಕುಲಂ, ಕೊಚ್ಚಿ, ಕೇರಳ 682011 ಇಲ್ಲಿ ಏರ್ಪಡಿಸಲಾಗಿದೆ. ಜ.29 ರಿಂದ 30 ರವರೆಗೆ ಗುಂಪು ವೈ/ ವೈದ್ಯಕೀಯ ಸಹಾಯಕರ ಹುದ್ದೆಗೆ, ವಿದ್ಯಾರ್ಹತೆ 10+2 ಅಭ್ಯರ್ಥಿಗಳು ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ಎಲ್ಲಾ ಜಿಲ್ಲೆಗಳ ಅಭ್ಯರ್ಥಿಗಳು ಹಾಜರಾಗಬಹುದು. ಫೆ.04 ರಿಂದ 05 ರವರೆಗೆ ಗುಂಪು ವೈ/ವೈದ್ಯಕೀಯ ಸಹಾಯಕ ಹುದ್ದೆ, ವಿದ್ಯಾರ್ಹತೆ ಫಾರ್ಮಸಿಯಲ್ಲಿ ಡಿಪ್ಲೊಮಾ/ಬಿಎಸ್‌ಸಿ ಹೊಂದಿರುವ ಅಭ್ಯರ್ಥಿಗಳು ತಮಿಳುನಾಡು, ಕೇರಳ, ಕರ್ನಾಟಕ, ತೆಲಂಗಾಣ ಮತ್ತು ಆಂಧ್ರಪ್ರದೇಶ ರಾಜ್ಯಗಳ ಎಲ್ಲಾ ಜಿಲ್ಲೆಗಳು ಮತ್ತು ಪುದುಚೇರಿ ಹಾಗೂ ಲಕ್ಷದ್ವೀಪಗಳು ಕೇಂದ್ರಾಡಳಿತ ಪ್ರದೇಶಗಳ ಅಭ್ಯರ್ಥಿಗಳು ಹಾಜರಾಗಬಹುದು. ವೈದ್ಯಕೀಯ ಸಹಾಯಕ ವೃತ್ತಿಗೆ 10+2 ಹೊಂದಿರುವ ಅಭ್ಯರ್ಥಿಗಳು ಅವಿವಾಹಿತರಾಗಿರೇಕು. 2004ರ ಜುಲೈ 03…

Read More

ಶಿವಮೊಗ್ಗ: ಹುಲಿ-ಸಿಂಹಧಾಮ, ತ್ಯಾವರೆಕೊಪ್ಪದಲ್ಲಿ ಸಾಮಾನ್ಯವಾಗಿ ಮಂಗಳವಾರದಂದು ವಾರದ ರಜೆಯಾಗಿರುತ್ತದೆ. ಆದರೆ ಸಂಕ್ರಾಂತಿ ಹಬ್ಬದ ಹಿನ್ನೆಲೆ ದಿನಾಂಕ: 14-01-2025 ರ ಮಂಗಳವಾರ ಸಹ ಮೃಗಾಲಯ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದೆ. ಸಾರ್ವಜನಿಕರು ಮೃಗಾಲಯ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಕಾರಣ ಪ್ರವಾಸಿಗರಿಗೆ ಪ್ರಕೃತಿ ಶಿಕ್ಷಣ ನೀಡುವ ಸಲುವಾಗಿ ಹುಲಿ-ಸಿಂಹಧಾಮದಲ್ಲಿ ಜ.14 ರ ಮಂಗಳವಾರವೂ ಸಹ ತೆರೆದಿರುತ್ತದೆ. ಪ್ರವಾಸಿಗರು ಇದರ ಸದುಪಯೋಗ ಪಡೆಯಬೇಕೆಂದು ಹುಲಿ-ಸಿಂಹಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ. https://kannadanewsnow.com/kannada/shivamogga-anjani-tigress-found-dead-in-thyavarekoppa/ https://kannadanewsnow.com/kannada/himachal-man-stunned-by-rs-2-billion-electricity-bill-previous-charge-was/

Read More

ಶಿವಮೊಗ್ಗ : ಹುಲಿ-ಸಿಂಹಧಾಮ, ತ್ಯಾವರೆಕೊಪ್ಪದಲ್ಲಿ ಸುಮಾರು 17 ವರ್ಷದ ‘ಅಂಜನಿ’ ಎಂಬ ಹೆಸರಿನ ಹೆಣ್ಣು ಹುಲಿಯು ಜ.08 ರ ರಾತ್ರಿ ವಯೋಸಹಜವಾದ ಬಹು ಅಂಗಾAಗ ವೈಫಲ್ಯದಿಂದ ಮೃತಪಟ್ಟಿರುವುದಾಗಿ ಮೃಗಾಲಯದ ಪಶು ವೈದ್ಯಾಧಿಕಾರಿಗಳು ತಿಳಿಸಿರುತ್ತಾರೆ. ಈ ಬಗ್ಗೆ ಕಾನೂನು ರೀತ್ಯಾ ಮರಣೋತ್ತರ ಪರೀಕ್ಷೆಯನ್ನು ಪಶು ವೈದ್ಯಕೀಯ ಕಾಲೇಜಿನ ಪಶು ವೈದ್ಯರ ತಂಡ ಜರುಗಿಸಿ, ಹುಲಿಯ ದೇಹವನ್ನು ವಿಲೇ ಮಾಡಲಾಗಿರುತ್ತದೆ ಎಂದು ಹುಲಿ-ಸಿಂಹಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ. https://kannadanewsnow.com/kannada/the-6th-edition-of-the-inter-state-hockey-cup-begins-in-bengaluru-from-today-with-20-teams-participating/ https://kannadanewsnow.com/kannada/himachal-man-stunned-by-rs-2-billion-electricity-bill-previous-charge-was/

Read More

ಚಿಕ್ಕಮಗಳೂರು: ನಗರದಲ್ಲಿನ ಐ.ಡಿ.ಎಸ್.ಜಿ. ಸರ್ಕಾರಿ ಕಾಲೇಜು ವತಿಯಿಂದ ಜ.9ರ ಗುರುವಾರ ಕನ್ನಡ ಸ್ನಾತಕೋತ್ತರ ಮತ್ತು ಸ್ನಾತಕ ವಿಭಾಗ ಹಾಗೂ ಆಂತರಿಕ ಗುಣಮಟ್ಟ ಭರವಸೆ ಕೋಶದ ವತಿಯಿಂದ ‘ವಿಶ್ವಮಾನವ ದಿನ ಆಚರಣೆ’ ಮತ್ತು ‘ಕುವೆಂಪು ಬದುಕು ಬರಹ ಕುರಿತ ವಿದ್ಯಾರ್ಥಿ ವಿಚಾರ ಸಂಕಿರಣ’ ಕಾರ್ಯಕ್ರಮವನ್ನು ನಡೆಸಲಾಯಿತು. ಪ್ರಾಂಶುಪಾಲರಾದ ಡಾ. ಪುಷ್ಟಭಾರತಿ ಆರ್.ಎ. ಅವರು ಕುವೆಂಪುರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ದೀಪ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಬಳಿಕ ಮಾತನಾಡಿದಂತ ಅವರು, ಕುವೆಂಪು ಎಂದರೇ ನಮಗೆ ಮೈ ರೋಮಾಂಚನವಾಗುತ್ತದೆ. ಕುವೆಂಪುವನ್ನು ಮತ್ತೆ ಮತ್ತೆ ಓದಲು ಅವರ ಚಿಂತನೆಗಳನ್ನು ಮರುಮನನ ಮಾಡಿಕೊಳ್ಳಲು ಇದೊಂದು ಉತ್ತಮ ಅವಕಾಶ. ಅದರಲ್ಲೂ ಈ ಕಾರ್ಯಕ್ರಮದಲ್ಲಿ ಕುವೆಂಪು ಬದುಕು-ಬರಹಗಳ ಅವಲೋಕನಕ್ಕೆ ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಟ್ಟಿರುವುದು ನನಗೆ ಹೆಚ್ಚು ಸಂತಸ ತಂದಿದೆ ಎಂದು ಅಭಿಪ್ರಾಯಪಟ್ಟರು. ಸುಮಾರು ಹದಿನೈದಕ್ಕೂ ಹೆಚ್ಚು ವಿದ್ಯಾರ್ಥಿಗಳು “ಕುವೆಂಪು ಬದುಕು-ಬರಹ” ಕುರಿತು ತಮ್ಮ ಪ್ರಬಂಧಗಳನ್ನು ಮಂಡಿಸಿದರು. ಕುವೆಂಪುರವರ ಮಹಾಕಾವ್ಯ, ಎರಡು ಕಾದಂಬರಿಗಳು, ನಾಟಕಗಳು, ಕಥೆಗಳು, ಅವರ ಭಾಷಣ, ವಿಮರ್ಶೆ, ಮೀಮಾಂಸೆ…

Read More

ಬೆಂಗಳೂರು: ಬಹು ನಿರೀಕ್ಷಿತ 6ನೇ ಆವೃತ್ತಿಯ “ಚೈರೋಸ್ ಭೀಮಯ್ಯ ಹಾಕಿ ಕಪ್ 2025” ಇಂದಿನಿಂದ ಫೀಲ್ಡ್ ಮಾರ್ಷಲ್ ಕೆ.ಎಂ. ಕರಿಯಪ್ಪ ಹಾಕಿ ಅರೆನಾನಲ್ಲಿ ನಡೆಯಲಿದೆ. ಕರ್ನಾಟಕ ಹಾಕಿ ಅಸೋಸಿಯೇಷನ್‌ ಹಾಗೂ ಕೂರ್ಗ್ ಚಾಲೆಂಜರ್ಸ್ ಚಿಕ್‌ಪೆಟ್ ಅಸೋಸಿಯೇಷನ್ (CCCA) ಸಹಯೋಗದಲ್ಲಿ ಈ ಅಂತರ್‌-ರಾಜ್ಯ ಪಂದ್ಯಾವಳಿ 5-ಎ-ಸೈಡ್ ಮಾದರಿಯಲ್ಲಿ ಭಾರತೀಯ ಹಾಕಿ ಪ್ರದರ್ಶನ ನಡೆಯಲಿದೆ. ಹಾಕಿ ಕಪ್‌ ಪಂದ್ಯಾವಳಿಯಲ್ಲಿ ಒಟ್ಟು 180 ಆಟಗಾರರನ್ನೊಳಗೊಂಡ ಒಟ್ಟು 20 ತಂಡಗಳು ಭಾಗವಹಿಸಲಿದ್ದಾರೆ. ಇಂದಿನಿಂದ ಜನವರಿ 12ರವರೆಗೆ ಪಂದ್ಯಾವಳಿ ನಡೆಯಲಿದ್ದು, ಭಾನುವಾರ ವಿಜೇತರನ್ನು ಘೋಷಿಸಲಾಗುತ್ತದೆ. ಮಾಜಿ ಭಾರತೀಯ ಹಾಕಿ ಆಟಗಾರರಾದ ವಿ.ಆರ್. ರಘುನಾಥ್, ವಿ.ಎಸ್. ವಿನಯ, ಅಮರ್ ಐಯಮ್ಮ, ನಿತಿನ್ ತಿಮ್ಮಯ್ಯ ಮತ್ತು ನಿಕ್ಕಿನ್ ತಿಮ್ಮಯ್ಯ ಅವರು ಸಹ ಭಾಗವಹಿಸಲಿದ್ದಾರೆ. ಜನವರಿ 12 ರಂದು ನಡೆಯುವ ಅಂತಿಮ ಸುತ್ತು ನಡೆಯಲಿದ್ದು, ಬಳಿಕ ವಿಜೇತ ತಂಡ ಪದ್ಮಶ್ರೀ ಮತ್ತು ಮಾಜಿ ಭಾರತೀಯ ಹಾಕಿ ಆಟಗಾರ ಎಂ.ಪಿ. ಗಣೇಶ್ ಹಾಗೂ ಧನರಾಜ್‌ ಪಿಳ್ಳೈ ವಿತರಿಸಲಿದ್ದಾರೆ. ಸಂಘಟಕರನ್ನು ಪ್ರತಿನಿಧಿಸಿದ ಸಿಸಿಸಿಎ ಅಧ್ಯಕ್ಷ ಶ್ರೀ…

Read More

ಬೆಂಗಳೂರು: ರಾಜ್ಯದಲ್ಲಿ ತಮ್ಮದೇ ಆದಂತ ಸಂಪ್ರದಾಯ, ಆಚರಣೆಗಳ ಮೂಲಕ ಗುರ್ತಿಸಿಕೊಂಡಿರುವಂತ ಸಮುದಾಯ ಕಾಡುಗೊಲ್ಲ ಬುಡಕಟ್ಟು ಸಮುದಾಯವಾಗಿದೆ. ಈ ಸಮುದಾಯವನ್ನು ಎಸ್ ಟಿ ಪಟ್ಟಿಗೆ ಸೇರಿಸುವಂತೆ ಆಗ್ರಹ ಹಲವು ದಿನಗಳ ಹಿಂದಿನದ್ದು. ಇಂದು ಮತ್ತೆ ಸಿಎಂ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ಈ ಒತ್ತಾಯವನ್ನು ಮಾಡಲಾಗಿದೆ. ಈ ವೇಳೆ ಮಾತನಾಡಿದಂತ ಎಂಎಲ್ಸಿ ನಾಗರಾಜ್ ಯಾದವ್ ಅವರು, ಈ ಜನಾಂಗ ಹಿಂದುಳಿದೆ. ಈ ಜನಾಂಗವನ್ನು ಎಸ್ ಟಿ ಪಟ್ಟಿಗೆ ಸೇರಿಸಲು ನೀವೇ ಮುಂದಾಗಬೇಕು. ಕಾಡುಗೊಲ್ಲ ಸಮುದಾಯವನ್ನು ಎಸ್ಟಿ ಪಟ್ಟಿಗೆ ಸಲ್ಲಿಸುವ ಕೆಲಸವಾಗಬೇಕು. ಅಲೆ ಮಾರಿ ಪಟ್ಟಿಗೆ ಸೇರಿಸುವ ಕೆಲಸ ಆಗಬೇಕು. ಕಾಡುಗೊಲ್ಲರ ಅಭಿವೃದ್ಧಿ ನಿಗಮಕ್ಕೆ ಕಾಡುಗೊಲ್ಲ ಸಮುದಾಯದ ವ್ಯಕ್ತಿಯನ್ನೇ ಅಧ್ಯಕ್ಷರನ್ನಾಗಿ ಈ ಕೂಡಲೇ ಮಾಡಬೇಕು ಎಂದು ಆಗ್ರಹಿಸಿದರು. ಆ ಬಳಿಕ ಮಾತನಾಡಿದಂತ ಕರ್ನಾಟಕ ಕಾಡುಗೊಲ್ಲ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಧ್ಯಕ್ಷರಾದಂತ ಸಿ.ಶಿವು ಯಾದವ್ ಮಾತನಾಡಿ, 2010ರಲ್ಲಿ ಕುಲಶಾಸ್ತ್ರ ಅಧ್ಯಯ ಮಾಡಿಸಿ, 2014ರಲ್ಲಿ ನಿಮ್ಮ ಸಚಿವ ಸಂಪುಟದ ಮುಂದೆ ತಂದು, ಭಾರತ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿತ್ತು. ಇದಕ್ಕಾಗಿ ಕರ್ನಾಟಕ ಕಾಡುಗೊಲ್ಲ ಕ್ಷೇಮಾಭಿವೃದ್ಧಿ…

Read More