Subscribe to Updates
Get the latest creative news from FooBar about art, design and business.
Author: kannadanewsnow09
ದಕ್ಷಿಣ ಕೊರಿಯಾ: ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಪ್ರಯಾಣಿಕರ ವಿಮಾನದ ಹಿಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ವಿಮಾನದಲ್ಲಿದ್ದ 176 ಜನರನ್ನು ಸ್ಥಳಾಂತರಿಸಲಾಗಿದೆ. ಆಗ್ನೇಯ ಬುಸಾನ್ ನ ಗಿಮ್ಹೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹಾಂಗ್ ಕಾಂಗ್ ಗೆ ಹಾರಲು ಏರ್ ಬಸ್ ಎ 321 ವಿಮಾನವು ಸಿದ್ಧವಾಗಿತ್ತು ಆದರೆ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಷ್ಟ್ರೀಯ ಅಗ್ನಿಶಾಮಕ ಸಂಸ್ಥೆಯ ಪ್ರಕಾರ, ಸ್ಥಳಾಂತರಿಸುವ ಸಮಯದಲ್ಲಿ ಮೂವರು ಸ್ವಲ್ಪ ಗಾಯಗೊಂಡಿದ್ದಾರೆ. ಆದರೆ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲಾಗಿದೆ. 169 ಪ್ರಯಾಣಿಕರು ಮತ್ತು ಏಳು ಸಿಬ್ಬಂದಿಯನ್ನು ಸ್ಥಳಾಂತರಿಸಲಾಗಿದೆ ಎಂದು ಸಾರಿಗೆ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. https://twitter.com/aviationbrk/status/1884242617027678545 ಆದಾಗ್ಯೂ, ವಿಮಾನದ ಹಿಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳುವುದನ್ನು ಹೊರತುಪಡಿಸಿ ಬೆಂಕಿಯ ಕಾರಣವನ್ನು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿಲ್ಲ. ಕಳೆದ ತಿಂಗಳು ಡಿಸೆಂಬರ್ 29 ರಂದು ಥೈಲ್ಯಾಂಡ್ನಿಂದ ಮುವಾನ್ಗೆ ತೆರಳುತ್ತಿದ್ದ ಜೆಜು ಏರ್ ಬೋಯಿಂಗ್ 737-800 ವಿಮಾನವು ಕಾಂಕ್ರೀಟ್ ತಡೆಗೋಡೆಗೆ ಡಿಕ್ಕಿ ಹೊಡೆದ ನಂತರ ಅಪಘಾತಕ್ಕೀಡಾಗಿ ಫೈರ್ಬಾಲ್ಗೆ ಸ್ಫೋಟಗೊಂಡಾಗ ಈ ದುರಂತ ಅನುಭವಿಸಿತು. ವಿಮಾನದಲ್ಲಿದ್ದ…
ನವದೆಹಲಿ : ‘ಚಾಟ್ ಜಿಪಿಟಿಯನ್ನು ಖಂಡಿತವಾಗಿಯೂ ಬಳಸಿ. ಆದರೆ ನಾವು ಕೃತಕ ಬುದ್ಧಿಮತ್ತೆಯಿಂದ ಅಲ್ಲ ನಮ್ಮ ಸ್ವಂತ ಬುದ್ಧಿವಂತಿಕೆಯಿಂದ ಮುಂದುವರೆಯುತ್ತೇವೆ. ನೀವೂ ನಿಮ್ಮ ಸ್ವಂತ ಬುದ್ಧಿಯಿಂದ ಮುಂದೆ ಸಾಗಬಹುದು ಎಂಬುದನ್ನು ನೆನಪಿಡಿ’ ಎಂದು ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಪಂಡಿತ್ ದೀನ್ ದಯಾಳ್ ಎನರ್ಜಿ ಯೂನಿವರ್ಸಿಟಿ (ಪಿಡಿಇಯು) ಘಟಿಕೋತ್ಸವ ಸಮಾರಂಭದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುವಾಗ ಅವರು ಕೃತಕ ಬುದ್ಧಿಮತ್ತೆಯ ಕುರಿತು ತಮ್ಮ ಅಭಿಪ್ರಾಯ ಹಂಚಿಕೊಂಡರು. ‘ನಾನು ನಮ್ಮ ಯುವ ವಿದ್ಯಾರ್ಥಿಗಳಿಗೆ ಒಂದು ಸಲಹೆ ನೀಡಲು ಬಯಸುತ್ತೇನೆ. ಕೃತಕ ಬುದ್ಧಿಮತ್ತೆಯನ್ನು ಸಾಧನವಾಗಿ ಬಳಸುವಲ್ಲಿ ಒಬ್ಬರು ಪ್ರವೀಣರಾಗಿರಬೇಕು ಆದರೆ ನಿಮ್ಮ ಬುದ್ಧಿವಂತಿಕೆಯನ್ನು ಬಳಸುವುದನ್ನು ನಿಲ್ಲಿಸಬೇಡಿ. ನೀವು ಈ ವಿಶ್ವವಿದ್ಯಾಲಯದಿಂದ ಹೊರಹೋದ ತಕ್ಷಣ, ನೀವು ಇನ್ನೂ ದೊಡ್ಡದಾದ ‘ಯೂನಿವರ್ಸಿಟಿ ಆಫ್ ಲೈಫ್’ ನಲ್ಲಿ ಪ್ರವೇಶ ಪಡೆಯಬೇಕಾಗುತ್ತದೆ. ಅಲ್ಲಿ ಕ್ಯಾಂಪಸ್ ಇರುವುದಿಲ್ಲ, ತರಗತಿ ಇರುವುದಿಲ್ಲ ಮತ್ತು ಬೋಧನಾ ಶಿಕ್ಷಕರು ಇರುವುದಿಲ್ಲ. ನೀವು ನಿಮ್ಮ ಸ್ವಂತ ಜೀವನದಲ್ಲಿ ಮುಂದೆ ಸಾಗಲು ಸಾಧ್ಯವಾಗುತ್ತದೆ’…
ನವದೆಹಲಿ: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಭಾಗವಹಿಸುವ ಲಕ್ಷಾಂತರ ಭಕ್ತರಿಗೆ ಸುಗಮ ಮತ್ತು ಅನುಕೂಲಕರ ಪ್ರಯಾಣವನ್ನು ಖಚಿತಪಡಿಸಿಕೊಳ್ಳಲು ಭಾರತೀಯ ರೈಲ್ವೆ ಭಾರಿ ಪ್ರಯತ್ನಗಳನ್ನು ಕೈಗೊಂಡಿದೆ. ಪ್ರಯಾಗ್ ರಾಜ್ ರೈಲ್ವೆ ನಿಲ್ದಾಣದಿಂದ ಪ್ರತಿ ನಾಲ್ಕು ನಿಮಿಷಕ್ಕೊಂದು ವಿವಿಧೆಡೆಗೆ ರೈಲು ಸಂಚಾರದ ವ್ಯವಸ್ಥೆ ಮಾಡಲಾಗಿದೆ ಎಂಬುದಾಗಿ ರೈಲ್ವೆ ಮಂಡಳಿ ಅಧ್ಯಕ್ಷ ಮತ್ತು ಸಿಇಒ ಸತೀಶ್ ಕುಮಾರ್ ತಿಳಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಮಹಾ ಕುಂಭಮೇಳದ ಅಭೂತಪೂರ್ವ ಯಾತ್ರಾರ್ಥಿಗಳ ಒಳಹರಿವನ್ನು ಸರಿದೂಗಿಸಲು ರೈಲ್ವೆ ವ್ಯಾಪಕ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದರು. ಈ ಪ್ರಯತ್ನಗಳ ಭಾಗವಾಗಿ, ಭಾರತೀಯ ರೈಲ್ವೆ ಜನವರಿ 14 ರಂದು 132 ರಿಂದ 135 ವಿಶೇಷ ರೈಲುಗಳನ್ನು ಓಡಿಸಿದೆ ಮತ್ತು 2025 ರ ಮಹಾ ಕುಂಭ ಮೇಳದ ಅತ್ಯಂತ ಶುಭ ದಿನವಾದ ಮುಂಬರುವ ಮೌನಿ ಅಮಾವಾಸ್ಯೆಗೆ ರೈಲು ಸೇವೆಗಳನ್ನು ಗಮನಾರ್ಹವಾಗಿ ಹೆಚ್ಚಿಸಲು ನಿರ್ಧರಿಸಿದೆ. ಭಕ್ತರ ಬೃಹತ್ ಒಳಹರಿವನ್ನು ನಿರ್ವಹಿಸಲು ರೈಲ್ವೆ ಈ ಸಂದರ್ಭದಲ್ಲಿ 190 ವಿಶೇಷ ರೈಲುಗಳು, ಎನ್ಆರ್, ಎನ್ಇಆರ್…
ಚಾಮರಾಜನಗರ: ಜಿಲ್ಲೆಯಲ್ಲಿ ಕಾರೊಂದು ಬೈಕ್ ಗೆ ಡಿಕ್ಕಿಯಾಗಿ ಉಂಟಾದಂತ ಅಪಘಾತದ ಪರಿಣಾಮ ಬೈಕ್ ನಲ್ಲಿದ್ದಂತ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹಿರಿಕಾಟಿ ಗೇಟ್ ಬಳಿಯಲ್ಲಿ ಕಾರೊಂದು ಬೈಕ್ ಗೆ ಡಿಕ್ಕಿಯಾಗಿದೆ. ಇದರಿಂದಾಗಿ ಬೈಕ್ ನಲ್ಲಿ ತೆರಳುತ್ತಿದ್ದಂತ ಮೂವರು ದುರ್ಮರಣ ಹೊಂದಿರೋದಾಗಿ ತಿಳಿದು ಬಂದಿದೆ. ಮೃತರನ್ನು ಪತಿ ಶಶಿಧರ್, ಪತ್ನಿ ಶಾಲಿನಿ ಹಾಗೂ ಭಾಗ್ಯಮ್ಮ ಎಂಬುದಾಗಿ ಗುರ್ತಿಸಲಾಗಿದೆ. ಈ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/air-show-on-feb-13-14-colleges-in-bengaluru-to-remain-closed/ https://kannadanewsnow.com/kannada/are-there-cockroaches-lizards-and-ants-in-your-house-just-do-this-elimination-is-guaranteed/
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗಳಲ್ಲಿ ಬರುವ ಕೊಳವೆ ಬಾವಿಗಳನ್ನು ಪಾಲಿಕೆಯಿಂದ ಜಲಮಂಡಳಿಗೆ ಹಸ್ತಾಂತರಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಯಲಹಂಕ ವಲಯ ವ್ಯಾಪ್ತಿಯಲ್ಲಿ “ಮುಖ್ಯ ಆಯುಕ್ತರ ನಡೆ ವಲಯದ ಕಡೆ”ಯಲ್ಲಿ ಇಂದು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದ ವೇಳೆ, ಸಾರ್ವಜನಿಕರೊಬ್ಬರು ಮಾತನಾಡಿ 110 ಹಳ್ಳಿಗಳ ಪೈಕಿ ಥಣಿಸಂದ್ರ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಮನವಿ ಮಾಡಿದರು. ಅದಕ್ಕೆ ಮುಖ್ಯ ಆಯುಕ್ತರು ಪ್ರತಿಕ್ರಿಯಿಸಿ, ನಗರದಲ್ಲಿ ಜಲಮಂಡಳಿ ವತಿಯಿಂದ ಕಾವೇರಿ 5ನೇ ಹಂತದ ಕಾಮಗಾರಿ ಪೂರ್ಣಗೊಂಡಿದ್ದು, ಬಹುತೇಕ ಕಡೆ ಕಾವೇರಿ ನೀರಿನ ಸಂಪರ್ಕವನ್ನು ನೀಡಲಾಗಿದೆ. ಈ ಸಂಬಂಧ ಪಾಲಿಕೆ ಸುಪರ್ದಿಯಲ್ಲಿರುವ ಕೊಳವೆ ಬಾವಿಗಳನ್ನು ಜಲಮಂಡಳಿಗೆ ಹಸ್ತಾಂತರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಫೆಬ್ರವರಿ ಅಂತ್ಯದೊಳಗಾಗಿ ನೀರು ಒದಗಿಸಿ: ಥಣಿಸಂದ್ರ ಹಾಗೂ ಹೆಗ್ಡೆ ನಗರಕ್ಕೆ ಕಾವೇರಿ ನೀರು ಸಂಪರ್ಕ ಕಲ್ಪಿಸಲು ಕೇಳಿದ್ದಕ್ಕೆ ಪ್ರತಿಕ್ರಿಯಿಸಿ, ಕಾವೇರಿ ನೀರು ಎಲ್ಲಾ ಕಡೆ ಸಿಗುವಂತೆ ಮಾಡಬೇಕು. ಈ ಸಂಬಂಧ ಕಮಿಷನ್ ಮಾಡಿ ಟೆಸ್ಟಿಂಗ್ ಮಾಡಬೇಕು.…
ಒಬ್ಬ ವ್ಯಕ್ತಿಯು ಒಳ್ಳೆಯವನಾಗಿದ್ದರೆ, ಅವನ ಸುತ್ತಲಿನ ಜನರು ಅದನ್ನು ಅಸೂಯೆ ಮತ್ತು ಕೋಪದಿಂದ ಹೇಳುತ್ತಾರೆ, ಆದರೆ ಅವನು ತನ್ನ ಕಾರ್ಯ ಮತ್ತು ಮನಸ್ಸಿನಿಂದ ಏನನ್ನಾದರೂ ಯೋಚಿಸಿದರೆ ಅದು ಕೆಟ್ಟ ವಿಷಯವಾಗುತ್ತದೆ. ಪಟ್ಟಣವು ಕೆಟ್ಟ ಕಣ್ಣು ಹೊಂದಿದೆ ಎಂದು ಅವರು ಹೇಳುತ್ತಾರೆ. ಒಬ್ಬರ ಕಣ್ಣು ಇನ್ನೊಬ್ಬರ ಕಣ್ಣು ಒಂದೇ ಅಲ್ಲ ಎಂದು ಹೇಳಲಾಗುತ್ತದೆ. ಎಲ್ಲರೂ ನಮ್ಮ ಬಗ್ಗೆ ಒಂದೇ ರೀತಿ ಯೋಚಿಸಲು ಸಾಧ್ಯವಿಲ್ಲ. ಈ ದೃಷ್ಟಿಗಳು ಒಬ್ಬರ ಸ್ಥಿತಿಯಲ್ಲಿ ಅಡೆತಡೆಗಳು, ಅಪಘಾತಗಳು, ರೋಗಗಳು ಮತ್ತು ನಷ್ಟಗಳನ್ನು ಉಂಟುಮಾಡುತ್ತವೆ ಎಂದು ಶಾಸ್ತ್ರಗಳು ಹೇಳುತ್ತವೆ. ಇದನ್ನು ಹೋಗಲಾಡಿಸಲು ನಮ್ಮ ಪೂರ್ವಜರು ಸಾಂಪ್ರದಾಯಿಕವಾಗಿ ಕೆಲವು ಸರಳ ಪರಿಹಾರಗಳನ್ನು ಮಾಡಿದ್ದಾರೆ. ಲವಂಗದೊಂದಿಗೆ ದುಷ್ಟ ಕಣ್ಣುಗಳನ್ನು ತೊಡೆದುಹಾಕಲು ಹೇಗೆ? ನಾವು ಈ ಪೋಸ್ಟ್ನಲ್ಲಿ ಆಧ್ಯಾತ್ಮಿಕ ಮಾಹಿತಿಯನ್ನು ನೋಡುವುದನ್ನು ಮುಂದುವರಿಸಲಿದ್ದೇವೆ . ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ…
ಚಿತ್ರದುರ್ಗ : ರಾಜ್ಯ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗ ಸಂಸ್ಥೆಯಾಗಿರುವ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು “Cyber Security and Internet Safety” ವಿಷಯದ ಮೇಲೆ 2025ರ ಫೆಬ್ರವರಿ 05 ರಿಂದ 7 ರವರೆಗೆ ಮೂರು ದಿನಗಳ ತರಬೇತಿ ಕಾರ್ಯಾಗಾರವನ್ನು ಅಕಾಡೆಮಿ ಕಚೇರಿಯಲ್ಲಿ ಆಯೋಜಿಸಲಾಗುತ್ತಿದೆ. ಈ ಕಾರ್ಯಾಗಾರದಲ್ಲಿ “Cyber Security and Internet Safety , ನಡೆಯುತ್ತಿರುವ ಆನ್ಲೈನ್ ವಂಚನೆಗಳನ್ನು ತಡೆಗಟ್ಟಲು ತೆಗೆದುಕೊಳ್ಳಬೇಕಾದ ಮುಂಜಾಗೃತ ಕ್ರಮಗಳು ಮತ್ತು ಅಂತರ್ಜಾಲ ಸುರಕ್ಷತೆ ಉಪಯೋಗದ ಬಗ್ಗೆ ವಿವಿಧ ನುರಿತ ತಜ್ಞರಿಂದ ಉಪನ್ಯಾಸಗಳನ್ನು ಏರ್ಪಡಿಸಲಾಗಿದ್ದು, ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಪೆÇೀಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ಆಸಕ್ತ ಜನ ಸಾಮಾನ್ಯರು ಭಾಗವಹಿಸಬಹುದಾಗಿದೆ. ಆಸಕ್ತ ಪ್ರತಿನಿಧಿಗಳು ಫೆ.03ರೊಳಗಾಗಿ (Google form-https://forms.gle/9Fds6N5vjzLpjNGX7) ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ವಿವರಗಳಿಗೆ ವೈಜ್ಞಾನಿಕಾಧಿಕಾರಿ ಶ್ರೀನಿವಾಸು, (ಮೊ 9620767819) ಹಾಗೂ ಚಂದ್ರಶೇಖರಮೂರ್ತಿ (ಮೊ. 9686449019) ಇವರನ್ನು ಸಂಪರ್ಕಿಸಬಹುದಾಗಿದೆ ಅಥವಾ ಅಕಾಡೆಮಿ ವೆಬ್ಸೈಟ್- http://kstacademy.in ವೀಕ್ಷಿಸಬಹುದಾಗಿದೆ ಎಂದು ಕರ್ನಾಟಕ ವಿಜ್ಞಾನ…
ಬಳ್ಳಾರಿ : ಪ್ರಸ್ತಕ ಸಾಲಿನ ಹಿಂಗಾರು ಹಂಗಾಮಿನ ಎಫ್ಎಕ್ಯೂ ಗುಣಮಟ್ಟದ ಕಡಲೇಕಾಳು ಉತ್ಪನ್ನವನ್ನು ಬೆಂಬಲ ಬೆಲೆ ಯೋಜನೆಯಡಿ ಬೆಂಗಳೂರಿನ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ನಿಯಮಿತ, ಬಳ್ಳಾರಿ ಶಾಖೆ ವತಿಯಿಂದ ಖರೀದಿಸಲಾಗುತ್ತಿದೆ ಎಂದು ಕೃಷಿ ಮಾರಾಟ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. ಕೇಂದ್ರ ಸರ್ಕಾರವು ನಿಗಧಿಪಡಿಸಿದ ಬೆಂಬಲ ಬೆಲೆಯಂತೆ ಪ್ರತಿ ಕ್ವಿಂಟಾಲ್ಗೆ ರೂ.5,650 ರಂತೆ ರೈತರಿಂದ ಖರೀದಿಸಲಾಗುತ್ತದೆ. ಖರೀದಿ ಕೇಂದ್ರಗಳು: ಬಳ್ಳಾರಿ ನಗರದ ಎಸ್ಪಿ ವೃತ್ತದ ಹತ್ತಿರದ ಮಾರುತಿ ನಗರದ 2ನೇ ಕ್ರಾಸ್ನ ರೈತರ ಸೇವಾ ಸಹಕಾರ ಸಂಘ ನಿಯಮಿತ (ಮೊ.9900559927). ಸಿರುಗುಪ್ಪ ಪಟ್ಟಣದ ಪಿಎಲ್ಡಿ ಬ್ಯಾಂಕ್ ಕಟ್ಟಡದ ಪಶು ಆಸ್ಪತ್ರೆ ಪಕ್ಕದಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ಮೊ.9845166601). ಬೇಕಾದ ದಾಖಲೆ: ಆಧಾರ್ಕಾರ್ಡ್, ಪ್ರಸ್ತಕ ಸಾಲಿನ ಪಹಣಿ ಪತ್ರ, ಎಫ್ಐಡಿ ಕಡ್ಡಾಯ, ರೈತರು ತಮ್ಮ ಹೆಸರನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ಹೆಸರು ನೋಂದಾಯಿಸಿರಬೇಕು. ಬ್ಯಾಂಕ್ ಖಾತೆ ಪುಸ್ತಕದ ನಕಲು ಪ್ರತಿ. ರೈತರಲ್ಲಿ ಫ್ರೂಟ್ಸ್ ಐಡಿ ಇಲ್ಲದೇ ಇದ್ದಲ್ಲಿ ಅಥವಾ ಫ್ರೂಟ್ಸ್ ನಲ್ಲಿ ಯಾವುದಾದರೂ…
ಬಳ್ಳಾರಿ : ಏಳುಬೆಂಚಿಯ ಆರ್ಒ ಪ್ಲಾಂಟ್ ನ ಪೂರ್ಣಿಮ ಎಂಟರ್ ಪ್ರೈಸಸ್ ನ ಮಾಲೀಕರಾದ ಅಮರೇಶ್ವರ ಶಾಸ್ತ್ರಿ ಇವರಿಗೆ ಮಂಜೂರಾದ ಹಾಲಿ ವಿದ್ಯುತ್ ಮಾಪಕವನ್ನು ಬೈಪಾಸ್ ಮಾಡಿಕೊಂಡು ಅನಧಿಕೃತವಾಗಿ ತಮ್ಮ ಇಂಡಸ್ಟ್ರಿಯ ವಿದ್ಯುತ್ ಉಪಕರಣಗಳಿಗೆ ಕಳ್ಳತನದಿಂದ ವಿದ್ಯುತ್ ಉಪಯೋಗಿಸಿ ಅನಧೀಕೃತ ಲಾಭ ಪಡೆದು ಜೆಸ್ಕಾಂ ಕಂಪನಿಗೆ ಹಾನಿ ಮಾಡಿರುವುದರಿಂದ ರೂ.18,02,951/- ದಂಡ ಮತ್ತು ದಂಡ ಪಾವತಿಸಲು ತಪ್ಪಿದಲ್ಲಿ 3 ತಿಂಗಳ ಸಾದಾ ಶಿಕ್ಷೆ ವಿಧಿಸಿ ಇಲ್ಲಿನ 1 ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ವಿದ್ಯಾಧರ ಶಿರಹಟ್ಟಿ ಅವರು ಆದೇಶಿಸಿದ್ದಾರೆ. 2022ರ ಆ.18 ರಂದು ಬೆಳಿಗ್ಗೆ 10.39 ಗಂಟೆಗೆ ಜೆಸ್ಕಾಂ ಜಾಗೃತ ದಳದ ಎಇ ಕೆ.ಗಾದಿಲಿಂಗಪ್ಪ ತಮ್ಮ ಸಿಬ್ಬಂದಿಯವರೊಂದಿಗೆ ವಿವಿಧೆಡೆ ವಿದ್ಯುತ್ ಕಳ್ಳತನ ಪ್ರಕರಣ ಪತ್ತೆಗಾಗಿ ಹೋದಾಗ ಕಂಡುಬAದಿದ್ದು, ಇವರ ಮೇಲೆ ಕ್ರಮ ಕೈಗೊಳ್ಳಲು ಮುದ್ದೆ ಮಾಲುನೊಂದಿಗೆ ಜೆಸ್ಕಾಂ ಇಲಾಖೆಯವರು ಲಿಖಿತ ದೂರು ನೀಡಿದ್ದರು. ಪ್ರಕರಣದ ಸಾಕ್ಷಿದಾರರ ವಿಚಾರಣೆಯಿಂದ ಹಾಗೂ ತನಿಖೆಯಿಂದ ಆರೋಪಿತರ ವಿರುದ್ಧ ಆರೋಪ ಸಾಬಿತಾಗಿದ್ದರಿಂದ ಕಲಂ: 135(1)…
ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಒದಗಿಸುವಂತ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದೆ. ಇದೀಗ ಅರ್ಹ ಪತ್ರಕರ್ತರಿಂದ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಮಾಧ್ಯಮ ಮಾನ್ಯತಾ ಪತ್ರ ಹೊಂದಿರುವ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ಪಾಸ್ ಸೌಲಭ್ಯವನ್ನು ರಾಜ್ಯ ಸರ್ಕಾರ ಕಲ್ಪಿಸಿದೆ. ಈ ಮೂಲಕ ಬಜೆಟ್ನಲ್ಲಿ ಘೋಷಣೆ ಮಾಡಿ ಅದನ್ನು ಯಥಾವತ್ತಾಗಿ ಜಾರಿಗೆ ಕೊಟ್ಟು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ ನುಡಿದಂತೆ ನಡೆದಿದೆ. ಉಚಿತ ಬಸ್ಪಾಸ್ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಪೂರ್ಣಾವಧಿಗೆ ನೇಮಕಗೊಂಡು 4 ವರ್ಷಗಳ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು. ನೇಮಕಾತಿ ಆದೇಶ/ ವೇತನ ಪತ್ರ/ ಬ್ಯಾಂಕ್ ಸ್ಟೇಟ್ಮೆಂಟ್ ಇವುಗಳಲ್ಲಿ ಯಾವುದಾದರೂ ಒಂದು ದಾಖಲೆಯನ್ನು ಸೇವಾನುಭವಕ್ಕಾಗಿ ಒದಗಿಸಬೇಕು. ಅರ್ಹ ಪತ್ರಕರ್ತರು ಉಚಿತ ಬಸ್ಪಾಸ್ ಅಡಿ ಜಿಲ್ಲಾ ವ್ಯಾಪ್ತಿಯಲ್ಲಿ ಸಂಚರಿಸುವ ಕರ್ನಾಟಕ ಸಾರಿಗೆ ಸಂಸ್ಥೆ…







