Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಐದು ಗ್ಯಾರಂಟಿಗಳ ಪ್ರಚಾರ ಮತ್ತು ಸಮೀಕ್ಷೆಗಾಗಿ ರಾಜ್ಯ ಕಾಂಗ್ರೆಸ್ ಸರಕಾರ ಜನರ ತೆರಿಗೆ ಹಣವನ್ನು ಮನಸೋ ಇಚ್ಛೆ ಪೋಲು ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ. ವಿಧಾನಸಭೆಯಲ್ಲಿ ಗುರುವಾರ ರಾಜ್ಯಪಾಲರ ಭಾಷಣಾ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು; ಗ್ಯಾರಂಟಿಗಳ ಪ್ರಚಾರಕ್ಕೆ ಕೋಟ್ಯಂತರ ರೂಪಾಯಿ ಸುರಿಯುತ್ತಿರುವ ಸರಕಾರವು, ಬೇಕು ಬೇಕಾದವರಿಗೆ, ಶಾಸಕರ ಕುಟುಂಬಕ್ಕೆ ಸಮೀಕ್ಷೆಯ ಹೆಸರಿನಲ್ಲಿ ಹಣ ಕೊಟ್ಟಿದೆ ಎಂದು ದೂರಿದರು. ʼದ ಪಾಲಸಿ ಪ್ರಂಟ್ʼ ಎನ್ನುವ ದಿಕ್ಕಿಲ್ಲದ ಸಂಸ್ಥೆಗೆ ಸಮೀಕ್ಷೆ ಮಾಡುವುದಕ್ಕೆ 7.20 ಕೋಟಿ ರೂ. ಮೊತ್ತದ ಗುತ್ತಿಗೆ ಕೊಡಲಾಗಿದೆ. ಆದರೆ, ಕಂಪನಿಯ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಅದರ ಹಿಂದೆ ಮುಂದೆ ಯಾರಿದ್ದಾರೆ ಎನ್ನುವುದೂ ತಿಳಿದಿಲ್ಲ. ಆದರೂ, ಸರಕಾರ ಇಷ್ಟು ಪ್ರಮಾಣದಷ್ಟು ಹಣವನ್ನು ಆ ಕಂಪನಿಗೆ ಕೊಟ್ಟಿದೆ. ಹಾಗಾದರೆ, ಆ ಕಂಪನಿ ಯಾರದು? ಎಂದು ಮಾಜಿ ಮುಖ್ಯಮಂತ್ರಿಗಳು ಪ್ರಶ್ನಿಸಿದರು. ʼದ ಪಾಲಸಿ ಫ್ರಂಟ್ʼ ಸಲ್ಲಿಸಿದ ಪ್ರಸ್ತಾವನೆಗೆ ಒಂದೇ ದಿನದಲ್ಲಿ…
ಬೆಂಗಳೂರು: ಒಂದು ಕೈಯ್ಯಲ್ಲಿ ಗ್ಯಾರಂಟಿಗಳನ್ನು ಕೊಟ್ಟು ಜನರನ್ನು ಬಡತನದಿಂದ ಮಧ್ಯಮ ವರ್ಗಕ್ಕೆ ತಂದಿದ್ದೇವೆ ಎನ್ನುವ ರಾಜ್ಯ ಸರಕಾರ, ಹಾಗೆ ಕೊಟ್ಟು ಹತ್ತು ಕೈಗಳಲ್ಲಿ ಹೀಗೆ ಆ ಹಣವನ್ನು ಕಿತ್ತುಕೊಳುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪಿಸಿದರು. ಇದು ರಾಜ್ಯವನ್ನು ವಿನಾಶದ ಅಂಚಿಗೆ ತಳ್ಳುತ್ತಿರುವ ʼಸಿದ್ದನಾಮಿಕ್ಸ್ʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ ಕುಮಾರಸ್ವಾಮಿ ಅವರು. ವಿಧಾನಸಭೆಯಲ್ಲಿ ಗುರುವಾರ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು; ʼಸಿದ್ದನಾಮಿಕ್ಸ್ʼ ಎನ್ನುವ ಮೂಲಕ ಮುಖ್ಯಮಂತ್ರಿಗಳಿಗೆ ಕುಟುಕಿದರು. ಐದು ಗ್ಯಾರಂಟಿಗಳ ಮೂಲಕ ಜನರ ಆರ್ಥಿಕ ಶಕ್ತಿ, ಕೊಳ್ಳುವ ಶಕ್ತಿ ಹೆಚ್ಚಿದೆ ಎನ್ನುವ ಸರಕಾರ, ಮುದ್ರಾಂಕ ಶುಲ್ಕವನ್ನು ಐದು ಪಟ್ಟು ಹೆಚ್ಚಿಸಿದೆ. ಮಾರ್ಗದರ್ಶಿ ಮೌಲ್ಯ (ಗೈಡ್ಲೆನ್ಸ್ ವ್ಯಾಲ್ಯೂ) ಆಸ್ತಿ ದರಕ್ಕಿಂತ ಹೆಚ್ಚಾಗಿದೆ. ಅಬ್ಕಾರಿ ಸುಂಕ ಏರುತ್ತಲೇ ಇದೆ. ಒಂದು ಕೈಯ್ಯಲ್ಲಿ ಗ್ಯಾರಂಟಿ ಅಂತ ಕೊಟ್ಟು ಹತ್ತು ಕೈಗಳಲ್ಲಿ ತೆರಿಗೆ ಹೇರುವ ನೀತಿ ಆರ್ಥಿಕತೆಗೆ ಅದ್ಯಾವ ಸೀಮೆಯ ಉತ್ತೇಜನ ನೀಡುತ್ತದೆ?…
ನವದೆಹಲಿ: ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (Unified Payments Interface -UPI) ಮತ್ತು ನ್ಯಾಷನಲ್ ಪೇಮೆಂಟ್ಸ್ ಇಂಟರ್ಫೇಸ್ (National Payments Interface -NPI) ಏಕೀಕರಣಕ್ಕಾಗಿ ಭಾರತ ಮತ್ತು ನೇಪಾಳದ ಸರ್ಕಾರಿ ಸ್ವಾಮ್ಯದ ಕೇಂದ್ರ ಬ್ಯಾಂಕುಗಳು ಗುರುವಾರ ಉಲ್ಲೇಖದ ನಿಯಮಗಳಿಗೆ ಸಹಿ ಹಾಕಿದವು. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ನೇಪಾಳ ರಾಷ್ಟ್ರ ಬ್ಯಾಂಕ್ ಉಲ್ಲೇಖದ ನಿಯಮಗಳಿಗೆ ಸಹಿ ಹಾಕಿದವು. ಸಂಪರ್ಕದ ಔಪಚಾರಿಕ ಪ್ರಾರಂಭ ಅಥವಾ ಕಾರ್ಯಾಚರಣೆಯ ಪ್ರಾರಂಭವನ್ನು ನಂತರದ ದಿನಾಂಕದಲ್ಲಿ ಮಾಡಲಾಗುವುದು ಎಂದು ರಿಸರ್ವ್ ಬ್ಯಾಂಕ್ ಹೇಳಿಕೆಯಲ್ಲಿ ತಿಳಿಸಿದೆ. ಈ ಏಕೀಕರಣವು ಭಾರತ ಮತ್ತು ನೇಪಾಳದ ನಡುವೆ ಗಡಿಯಾಚೆಗಿನ ಹಣ ರವಾನೆಯನ್ನು ಸುಗಮಗೊಳಿಸುವ ಗುರಿಯನ್ನು ಹೊಂದಿದೆ. ಎರಡೂ ವ್ಯವಸ್ಥೆಗಳ ಬಳಕೆದಾರರಿಗೆ ತ್ವರಿತ, ಕಡಿಮೆ ವೆಚ್ಚದ ನಿಧಿ ವರ್ಗಾವಣೆ ಮಾಡಲು ಅನುವು ಮಾಡಿಕೊಡುತ್ತದೆ ಎಂದು ಅದು ಹೇಳಿದೆ. ಯುಪಿಐ-ಎನ್ಪಿಐ ಸಂಪರ್ಕದ ಮೂಲಕ ತಮ್ಮ ವೇಗದ ಪಾವತಿ ವ್ಯವಸ್ಥೆಯನ್ನು ಸಂಪರ್ಕಿಸುವಲ್ಲಿ ಭಾರತ ಮತ್ತು ನೇಪಾಳದ ನಡುವಿನ ಸಹಯೋಗವು ಆರ್ಥಿಕ ಸಂಪರ್ಕವನ್ನು ಮತ್ತಷ್ಟು ಆಳಗೊಳಿಸುತ್ತದೆ. ಉಭಯ ದೇಶಗಳ…
ನವದೆಹಲಿ: ಬೆಳೆಗಳಿಗೆ ಎಂಎಸ್ಪಿಗಾಗಿ ಕಾನೂನು ಜಾರಿಗೆ ತರುವುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ 200 ಕ್ಕೂ ಹೆಚ್ಚು ರೈತ ಸಂಘಗಳು ಫೆಬ್ರವರಿ 13, 2024 ರಂದು ರೈತರ ದೆಹಲಿ ಚಲೋ ಪ್ರತಿಭಟನೆಗೆ ಕರೆ ನೀಡಿದ್ದಾವೆ. ಈ ಪ್ರತಿಭಟನೆಯ ಮಧ್ಯೆ, ರೈತರು ಫೆಬ್ರವರಿ 16, 2024ರ ನಾಳೆ ಗ್ರಾಮೀಣ ಭಾರತ್ ಬಂದ್ ಗೆ ಕರೆ ನೀಡಿದ್ದಾರೆ. ಈ ರಾಷ್ಟ್ರವ್ಯಾಪಿ ಪ್ರತಿಭಟನೆಯನ್ನು ವಿವಿಧ ರೈತ ಸಂಘಗಳು ಬೆಂಬಲಿಸಿವೆ. ಇದಕ್ಕಾಗಿ ತಮ್ಮೊಂದಿಗೆ ಕೈಜೋಡಿಸಲು ಜನರಿಗೆ ಮನವಿ ಮಾಡಲಾಗಿದೆ. ನಾಳೆ ಭಾರತ್ ಬಂದ್ಗೆ ಮುಂಚಿತವಾಗಿ, ಶಾಲೆಗಳು ಮತ್ತು ಶಾಪಿಂಗ್ ಮಾಲ್ಗಳಿಂದ ರೈಲುಗಳು, ಬ್ಯಾಂಕುಗಳು ಮತ್ತು ಸರ್ಕಾರಿ ಕಚೇರಿಗಳವರೆಗೆ, ಯಾವುದು ತೆರೆದಿದೆ, ಯಾವುದು ಮುಚ್ಚಲ್ಪಟ್ಟಿದೆ ಎಂಬುದರ ಸಂಪೂರ್ಣ ಮಾಹಿತಿ ಮುಂದೆ ಓದಿ. ಮೊದಲೇ ಹೇಳಿದಂತೆ, ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ಸೇರಿದಂತೆ ರೈತ ಸಂಘಗಳು ಮತ್ತು ಒಕ್ಕೂಟಗಳು ನಾಳೆ ಫೆಬ್ರವರಿ 16, 2024 ರಂದು ಭಾರತ್ ಬಂದ್ಗೆ ಕರೆ ನೀಡಿವೆ. ರಾಷ್ಟ್ರವ್ಯಾಪಿ ಬೆಳಿಗ್ಗೆ 6:00 ರಿಂದ…
ಬೆಂಗಳೂರು: ಹಿಂದೂ ಸಂಸ್ಕೃತಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಮಂಗಳೂರಿನ ಜೆರೋಸಾ ಶಾಲೆಯ ಸಿಸ್ಟರ್ ಪ್ರಭ ಅವರನ್ನು ಬಂಧಿಸಬೇಕು. ಬಿಜೆಪಿ ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸಿದ ಪೊಲೀಸರನ್ನು ಅಮಾನತುಗೊಳಿಸಬೇಕೆಂದು ವಿಧಾನಸಭಾ ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರಿನ ಶಾಲೆಯಲ್ಲಿ ಸಿಸ್ಟರ್ ಪ್ರಭ ಅವರು, ಅಯೋಧ್ಯೆಯ ರಾಮ ಮಂದಿರ ಮಸೀದಿಯನ್ನು ಒಡೆದು ಕಟ್ಟಿದ್ದಾರೆ, ಕಲ್ಲಿನ ಕಟ್ಟಡ ನಿರ್ಮಿಸಿದ್ದಾರೆ, ಬಳೆ ತೊಡುವುದರಲ್ಲಿ ಪವಿತ್ರತೆ ಇಲ್ಲ ಎಂದೆಲ್ಲ ಶಾಲಾ ಮಕ್ಕಳಿಗೆ ಹೇಳಿದ್ದಾರೆ. ಜೊತೆಗೆ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆಯೂ ಅವಹೇಳನಕಾರಿಯಾಗಿ ಮಾತಾಡಿದ್ದಾರೆ. ಈ ಮೂಲಕ ಮಕ್ಕಳನ್ನು ಮತಾಂತರಗೊಳಿಸುವ ಪ್ರಯತ್ನ ನಡೆದಿದೆ. ಈ ಕುರಿತು ಮಕ್ಕಳು ಪೋಷಕರ ಬಳಿ ಹೇಳಿಕೊಂಡಿದ್ದಾರೆ. ಹಿಂದೂ ದೇವರು ಹಾಗೂ ಆಚರಣೆಗಳ ಬಗ್ಗೆ ಅವಹೇಳನಕಾರಿಯಾಗಿ ಮಾತಾಡಿರುವುದರಿಂದ ಶಾಸಕ ಭರತ್ ಶೆಟ್ಟಿ ಶಾಲೆಗೆ ಹೋಗಿ ದೂರು ನೀಡಿದ್ದಾರೆ ಎಂದರು. ಈಗ ಯಾರೋ ವ್ಯಕ್ತಿ ಬಿಜೆಪಿಯ ಇಬ್ಬರು ಶಾಸಕರ ಮೇಲೆ ದೊಡ್ಡ ಪ್ರಕರಣ ದಾಖಲಿಸಿದ್ದಾರೆ. ಶಾಸಕ ಭರತ್ ಶೆಟ್ಟಿ ಸ್ಥಳದಲ್ಲೇ ಇಲ್ಲದಿದ್ದರೂ ಅವರ ವಿರುದ್ಧ…
ಬೆಂಗಳೂರು: ಬೆಂಗಳೂರು ಅಥವಾ ಕಲಬುರಗಿಯಲ್ಲಿ ‘ವಚನ ಮಂಟಪ’ ಹಾಗೂ ‘ವಚನ ವಿಶ್ವವಿದ್ಯಾಲಯ’ ಸ್ಥಾಪಿಸುವಂತೆ ಮತ್ತು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರದ ಮೂಲಕ ಸಚಿವ ಪ್ರಿಯಾಂಕ್ ಖರ್ಗೆ ಮನವಿ ಮಾಡಿದ್ದಾರೆ. ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿರುವಂತ ಅವರು, ಕನ್ನಡ ನಾಡು ಇಂದು ಇಡೀ ವಿಶ್ವದಲ್ಲಿ ತನ್ನದೇ ಆದ ವಿಶಿಷ್ಟ ಸ್ಥಾನಗಳಿಸಿ, ಭಾರತ ದೇಶದ ಆರ್ಥಿಕ ಯಂತ್ರವಾಗಿ ಕಾರ್ಯ ನಿರ್ವಹಿಸುತ್ತಾ ಒಂದು ಅಮೋಘ ರಾಜ್ಯವಾಗಿ ರೂಪುಗೊಳ್ಳಲು ನಮ್ಮ ನಾಡಿನ ತಾತ್ವಿಕ ಅಡಿಪಾಯವೇ ಕಾರಣ. ಈ ತತ್ವಗಳ ಆಶಯವನ್ನು ಜಗತ್ತಿಗೆ ತಿಳಿಸಲು ಇರುವ ಭಾಷೆಯ ಅಂತರಕ್ಕೆ ಸೇತುವೆ ಕಟ್ಟುವ ಮಹತ್ತರವಾದ ಕೆಲಸ ಮಾಡುವ ನಿಟ್ಟಿನಲ್ಲಿ ಈ ಕೆಳಗಿನ ಎರಡು ಮನವಿಗಳನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿದ್ದಾರೆ. 1) ವಚನ ಮಂಟಪ: ನಾಡಿನ ರಾಜಧಾನಿಯಾದ ಬೆಂಗಳೂರಿನಲ್ಲಿ ಅಥವಾ ಶರಣ ಸಾಹಿತ್ಯದ ಕೇಂದ್ರ ಬಿಂದುವಾಗಿದ್ದ ಕಲಬುರಗಿಯಲ್ಲಿ ಜಗಜ್ಯೋತಿ ಗುರು ಬಸವಣ್ಣ, ಅಲ್ಲಮಪ್ರಭು, ಅಕ್ಕಮಹಾದೇವಿ, ಮಡಿವಾಳ ಮಾಚಿದೇವ, ದೇವರ ದಾಸಿಮ್ಮಯ್ಯ, ಅಂಬಿಗರ ಚೌಡಯ್ಯ, ಡೋಹರ ಕಕ್ಕಯ್ಯ, ಸರ್ವಜ್ಞರಂತಹ ನಾಡಿನ ಮೇರು…
ಬೆಂಗಳೂರು: ಮಂಗಳೂರಿನ ಸೆಂಟ್ ಜೆರೋಸಾ ಶಾಲೆಯಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ವಿರುದ್ದ ಪ್ರಕರಣ ದಾಖಲಿಸಿರುವ ಪಾಂಡೇಶ್ವರ ಪೊಲಿಸ್ ಠಾಣೆಯ ಪೊಲಿಸ್ ಅಧಿಕಾರಿಯನ್ನು ಅಮಾನತು ಮಾಡುವಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು. ಪ್ರಕರಣ ಕುರಿತು ವಿಧಾನಸಭೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ಶಾಲೆಯಲ್ಲಿ ನಡೆದ ಘಟನೆಯ ಬಗ್ಗೆ ಅನಿಲ್ ಜರಾಬ್ ಲೊಬೊ ಅವರು ದೂರು ಕೊಟ್ಟಿದ್ದಾರೆ. ಅದು ಶಾಲೆಯಲ್ಲಿ ನಡೆದಿರುವ ಘಟನೆಯ ಬಗ್ಗೆ ದೂರು ಕೊಟ್ಟಿದ್ದಾರೆ. ಮೊದಲು ಮಕ್ಕಳು ದೂರು ಕೊಟ್ಟಾಗ ಅದನ್ನು ಎಫ್‌ಐ ಆರ್ ಮಾಡಲಿಲ್ಲ. ಅದನ್ನು ಪ್ರಾಥಮಿಕ ವಿಚಾರಣೆ ಮಾಡಿದಾಗ ಅದರಲ್ಲಿ ತಪ್ಪು ಕಂಡಿಲ್ಲ ಅಂತ ಎಫ್ ಐ ಆರ್ ಮಾಡಿಲ್ಲ ಅಂತೀರಾ. ಶಾಸಕರ ವಿರುದ್ದ ಯಾವುದೇ ವಿಚಾರಣೆ ಮಾಡದೇ ಎಫ್ ಐಆರ್ ಮಾಡಿದ್ದೀರಾ. ಪೊಲಿಸರು ತಮ್ಮ ಕೆಲಸದಲ್ಲಿ ತಾರತಮ್ಯ ಮಾಡುತ್ತಿರುವುದು ಸ್ಪಷ್ಟವಾಗಿದೆ. ಶಾಸಕರ ಮೇಲೆ ಎಫ್ ಐ ಆರ್ ಹಾಕಿರುವ ಪೊಲಿಸ್ ಅಧಿಕಾರಿಯನ್ನು…
ಬೆಂಗಳೂರು: ರಾಜ್ಯ ಸರ್ಕಾರದಿಂದ ವಸತಿ ಶಾಲೆಗಳಲ್ಲಿ ಧಾರ್ಮಿಕ ಹಬ್ಬಗಳನ್ನು ಆಚರಣೆ ಮಾಡದಂತೆ ನಿರ್ಬಂಧವನ್ನು ಹೇರಿ ಆದೇಶ ಹೊರಡಿಸಲಾಗಿತ್ತು. ವಿವಾದಕ್ಕೆ ಎಡೆಮಾಡಿಕೊಡುತ್ತಿದ್ದಂತೇ, ರಾಜ್ಯ ಸರ್ಕಾರ ಈ ಆದೇಶವನ್ನು ವಾಪಾಸ್ ಪಡೆದಿದೆ. ಈ ಸಂಬಂಧ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಿಂದ ಹಿಂಪಡೆದ ಆದೇಶ ಮಾಡಲಾಗಿದ್ದು, ವಸತಿ ಶಾಲೆಗಳಲ್ಲಿ ಧಾರ್ಮಿಕ ಆಚರಣೆಗೆ ಹೇರಿದ್ದ ನಿರ್ಬಂಧದ ಆದೇಶವನ್ನು ವಾಪಾಸ್ ಪಡೆದಿರೋದಾಗಿ ತಿಳಿಸಿದೆ. ಈ ಹಿಂದೆ ಏನು ಆದೇಶ ಮಾಡಿತ್ತು.? ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಿಂದ ಸುತ್ತೋಲೆ ಹೊರಡಿಸಲಾಗಿದೆ. ಅದರಲ್ಲಿ ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳನ್ನು ಆಚರಣೆ ಮಾಡುವಂತಿಲ್ಲ. ನಿಗದಿತ ರಾಷ್ಟ್ರೀಯ ಹಬ್ಬ, ನಾಡಹಬ್ಬ ಮತ್ತು ಜಯಂತಿಗಳನ್ನು ಮಾತ್ರವೇ ಆಚರಿಸುವಂತೆ ತಿಳಿಸಲಾಗಿತ್ತು. ಈ ಸುತ್ತೋಲೆಯನ್ನು ಸಮಾಜ ಕಲ್ಯಾಣ ಸಚಿವ ಹೆಚ್.ಸಿ ಮಹದೇವಪ್ಪ ಅವರ ಸೂಚನೆಯ ಮೇರೆಗೆ ಕರ್ನಾಟಕ ವಸತಿ ಶಿಕ್ಷಣ ಸಂಘ ಹೊರಡಿಸಿದೆ. ಆ ಸುತ್ತೋಲೆಯಲ್ಲಿ 10 ಅನುಮೋದಿತ ರಾಷ್ಟ್ರೀಯ ಹಬ್ಬಗಳನ್ನು ಮಾತ್ರವೇ ಶಾಲೆ, ಕಾಲೇಜುಗಳಲ್ಲಿ ಆಚರಿಸಬೇಕು. ಧಾರ್ಮಿಕ ಹಬ್ಬ ಆಚರಿಸದಂತೆ ಸೂಚಿಸಲಾಗಿತ್ತು. ಒಂದು ವೇಳೆ…
ಬೆಂಗಳೂರು: ಉಸಿರಾಟದ ಸಮಸ್ಯೆಯಿಂದಾಗಿ ಮಣಿಪಾಲ್ ಆಸ್ಪತ್ರೆಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ದಾಖಲಾಗಿರೋದಾಗಿ ತಿಳಿದು ಬಂದಿತ್ತು. ಈ ಸಂಬಂಧ ಮಾಹಿತಿ ಹಂಚಿಕೊಂಡಿರುವಂತ ಅವರು ನಾನು ಆರೋಗ್ಯವಾಗಿದ್ದೇನೆ. ಯಾವುದೇ ಆಂತಕ ಪಡಬೇಡಿ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ. ಈ ಸಂಬಂಧ ಎಕ್ಸ್ ಮಾಡಿರುವಂತ ಅವರು, ನನ್ನ ಆರೋಗ್ಯಕ್ಕೆ ಸಂಬಂಧಿಸಿದಂತೆ ಸುದ್ದಿಯನ್ನು ಗಮನಿಸಿದ್ದೇನೆ. ಆ ತರದ ಯಾವುದೇ ಅನಾರೋಗ್ಯಕ್ಕೆ ನಾನು ಒಳಗಾಗಿಲ್ಲ ಎಂಬುದಾಗಿ ತಿಳಿಸಿದ್ದಾರೆ. ನಿಗದಿಯಂತೆ ರೊಟೀನ್ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದೇನೆ. ನನ್ನ ಆರೋಗ್ಯ ಸ್ಥಿರವಾಗಿದೆ. ಯಾವುದೇ ಆತಂಕ ಪಡುವಂತ ಅಗತ್ಯವಿಲ್ಲ. ನಾನು ಶೀಘ್ರದಲ್ಲೇ ಮನಗೆ ಹಿಂದಿರುಗುತ್ತೇನೆ ಎಂಬುದಾಗಿ ಮಾಹಿತಿ ಹಂಚಿಕೊಂಡಿದ್ದಾರೆ. https://twitter.com/H_D_Devegowda/status/1758103989411893479 https://kannadanewsnow.com/kannada/good-news-for-those-who-have-applied-for-new-bpl-apl-cards-minister-muniyappa-announces-that-cards-will-be-issued-from-april-1/ https://kannadanewsnow.com/kannada/good-news-for-transport-employees-here-are-the-details-of-all-private-hospitals-recognized-by-the-state-government/
ಚಾಮರಾಜನಗರ: ಕರಿಮಣಿ ಮಾಲೀಕ ಹಾಡು ತುಂಬಾನೇ ಫೇಮಸ್ ಆಗಿದೆ. ಅದರಲ್ಲೂ ರೀಸ್ಸ್ ನಲ್ಲಿ ಸಖತ್ ಸದ್ದು ಮಾಡುತ್ತಿದೆ. ಇಂತಹ ಫೇಮಸ್ ಹಾಡಿಗೆ ಕರಿಮಣಿ ಮಾಲೀಕ ನೀನಲ್ಲ ಎಂಬುದಾಗಿ ಪತ್ನಿಯೊಬ್ಬರು ರೀಲ್ಸ್ ಮಾಡಿದ್ದಾರೆ. ಹೀಗೆ ರೀಲ್ಸ್ ಮಾಡಿದ್ದನ್ನು ನೋಡಿದಂತ ಪತಿಯೊಬ್ಬ ಮನನೊಂದು ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ಚಾಮರಾಜನಗರ ಪಿ.ಜಿ ಪಾಳ್ಯದಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪಿ.ಜಿ ಪಾಳ್ಯ ಗ್ರಾಮದಲ್ಲಿ ಕುಮಾರ್ ಹಾಗೂ ರೂಪಾ ಅನ್ಯೂನ್ಯವಾಗಿದ್ದರು. ಫೇಸ್ ಬುಕ್ ನಲ್ಲಿ ಆಗಾಗ ರೂಪಾ ರೀಲ್ಸ್ ಕೂಡ ಮಾಡೋ ಗೀಳು ಇತ್ತು. ಈ ಮೊದಲು ವಿವಿಧ ಹಾಡುಗಳಿಗೆ ರೀಲ್ಸ್ ಮಾಡಿದ್ದಂತ ರೂಪ, ಇತ್ತೀಚೆಗೆ ಫೇಮಸ್ ಆಗಿದ್ದಂತ ಕರಿಮಣಿ ಮಾಲೀಕ ನೀನಲ್ಲ ಹಾಡಿಗೆ ರೀಲ್ಸ್ ಮಾಡಿದ್ದಳು. ರೂಪಾ ಇಂತಹ ಹಾಡಿಗೆ ರೀಲ್ಸ್ ಮಾಡಿದ್ದ ವೀಡಿಯೋವನ್ನು ನೋಡಿದಂತ ಕುಮಾರ್(33) ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಮಾಗಿರೋದಾಗಿ ತಿಳಿದು ಬಂದಿದೆ. ಈ ಬಗ್ಗೆ ಕುಮಾರ್ ಅವರ ಸಹೋದರ ಮಹದೇವ ಸ್ವಾಮಿಯವರು ಹನೂರು ಠಾಣೆಗೆ ದೂರು ನೀಡಿದ್ದು, ತನ್ನ…