Subscribe to Updates
Get the latest creative news from FooBar about art, design and business.
Author: kannadanewsnow09
ರಾಯಚೂರು: ತರಗತಿ ನಡೆಯುತ್ತಿದ್ದಾಲೇ ಬಿರುಕು ಬಿಟ್ಟಿದ್ದಂತ ಶಾಲೆಯ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ಓರ್ವ ವಿದ್ಯಾರ್ಥಿನಿಯ ಕಾಲಿನ ಬೆರಳು ಕಟ್ ಆಗಿರೋ ಘಟನೆ ರಾಯಚೂರಿನ ದೇವದುರ್ಗದಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ದೇವದುರ್ಗದ ಸರ್ಕಾರಿ ಶಾಲೆಯಲ್ಲಿ ಇಂದು ಘೋರ ಅವಘಡ ಸಂಭವಿಸಿದೆ. 7ನೇ ತರಗತಿಯ ಶಾಲೆ ನಡೆಯುತ್ತಿದಾಗಲೇ ಶಾಲಾ ಕೊಠಡಿಯ ಮೇಲ್ಛಾವಣಿಯ ಸಿಲಿಂಗ್ ಕುಸಿದು ಬಿದ್ದಿದೆ. ಈ ಪರಿಣಾಮ 7ನೇ ತರಗತಿಯ ಶ್ರೀದೇವಿಯ ಬಲಗಾಲಿನ ಬೆರಳು ಕಟ್ ಆಗಿರೋದಾಗಿ ತಿಳಿದು ಬಂದಿದೆ. ಸಿಲಿಂಗ್ ಕುಸಿತದಿಂದ ಕಾಲಿನ ಬೆರಳು ಕಟ್ ಆಗಿರುವಂತ ವಿದ್ಯಾರ್ಥಿನಿ ಶ್ರೀದೇವಿಯನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಿಕಿತ್ಸೆಯ ಬಳಿಕ ವಿದ್ಯಾರ್ಥಿನಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಾಲೆಯ ಮೇಲ್ಛಾವಣಿ ಕುಸಿಯೋ ಹಂತದಲ್ಲಿದ್ದರೂ ಅದರಲ್ಲೇ ದೇವದುರ್ಗದ ಸರ್ಕಾರಿ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿ ದಿನ ಜೀವ ಭಯದಲ್ಲಿ ಪಾಠ ಕೇಳುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಂಬಂಧ ದೇವದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ. https://kannadanewsnow.com/kannada/jee-mains-2024-be-b-tech-paper-1-admit-card-released-download-here/…
ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಜನವರಿ 27 ರಂದು ನಡೆಯಲಿರುವ ಪೇಪರ್ 1 ಪರೀಕ್ಷೆಗೆ ಜೆಇಇ ಮೇನ್ಸ್ 2024 ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಆ ದಿನ ಜಂಟಿ ಪ್ರವೇಶ ಪರೀಕ್ಷೆ B.Tech/B.E ಪತ್ರಿಕೆಗೆ ಹಾಜರಾಗುವ ಅಭ್ಯರ್ಥಿಗಳು ಜೆಇಇ main.nta.ac.in ನಲ್ಲಿ ಎನ್ಟಿಎ ಜೆಇಇಯ ಅಧಿಕೃತ ವೆಬ್ಸೈಟ್ ಮೂಲಕ ಪ್ರವೇಶ ಪತ್ರ ಅಥವಾ ಹಾಲ್ ಟಿಕೆಟ್ ಡೌನ್ಲೋಡ್ ಮಾಡಬಹುದು. ಜನವರಿ 27, 29, 30, 31 ಮತ್ತು ಫೆಬ್ರವರಿ 1 ರಂದು ದೇಶಾದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಬಿಇ ಅಥವಾ ಪೇಪರ್ 1 B.Tech/ ಪರೀಕ್ಷೆ ನಡೆಯಲಿದೆ. ಪರೀಕ್ಷೆಯು ಎರಡು ಪಾಳಿಗಳಲ್ಲಿ ನಡೆಯಲಿದೆ – ಮೊದಲನೆಯದು ಎಲ್ಲಾ ದಿನಗಳಲ್ಲಿ ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ ಮತ್ತು ಎರಡನೆಯದು ಮಧ್ಯಾಹ್ನ 3 ರಿಂದ ಸಂಜೆ 6 ರವರೆಗೆ ನಡೆಯಲಿದೆ. ಪೇಪರ್ 1 ರ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಲು, ಅಭ್ಯರ್ಥಿಗಳಿಗೆ ಅಪ್ಲಿಕೇಶನ್ ಸಂಖ್ಯೆ ಮತ್ತು ಹುಟ್ಟಿದ ದಿನಾಂಕದ ಅಗತ್ಯವಿದೆ.…
ನವದೆಹಲಿ: ಆನ್ಲೈನ್ ಆಹಾರ ವಿತರಣಾ ಪ್ಲಾಟ್ಫಾರ್ಮ್ ಜೊಮಾಟೊ ಗುರುವಾರ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಿಂದ ‘ಆನ್ಲೈನ್ ಪಾವತಿ ಅಗ್ರಿಗೇಟರ್’ ಆಗಿ ಅನುಮೋದನೆ ಪಡೆದಿದೆ ಎಂದು ಘೋಷಿಸಿದೆ. “ವ್ಯವಹಾರವನ್ನು ನಿರ್ವಹಿಸಲು ಜೊಮಾಟೊ ಲಿಮಿಟೆಡ್ (“ಕಂಪನಿ”) ನ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಯಾದ ಜೊಮಾಟೊ ಪೇಮೆಂಟ್ಸ್ ಪ್ರೈವೇಟ್ ಲಿಮಿಟೆಡ್ (“ಝಡ್ಪಿಪಿಎಲ್”) ಅನ್ನು ಪಾವತಿ ಅಗ್ರಿಗೇಟರ್ ಮತ್ತು ಪ್ರಿಪೇಯ್ಡ್ ಪಾವತಿ ಸಾಧನಗಳ ವಿತರಕರಾಗಿ ಸಂಯೋಜಿಸುವ ಬಗ್ಗೆ ಆಗಸ್ಟ್ 4, 2021 ರ ನಮ್ಮ ಹಿಂದಿನ ಬಹಿರಂಗಪಡಿಸುವಿಕೆಗೆ ಅನುಸಾರವಾಗಿ, ಜನವರಿ 24 ರಂದು ಝಡ್ಪಿಪಿಎಲ್ಗೆ ಅಧಿಕಾರ ಪ್ರಮಾಣಪತ್ರವನ್ನು ನೀಡಲಾಗಿದೆ ಎಂದು ತಿಳಿಸಲು ನಾವು ಬಯಸುತ್ತೇವೆ. ಆರ್ಬಿಐ ಹೊರಡಿಸಿದ ಮಾರ್ಗಸೂಚಿಗಳ ಪ್ರಕಾರ ಜನವರಿ 24, 2024 ರಿಂದ ಜಾರಿಗೆ ಬರುವಂತೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (“ಆರ್ಬಿಐ”) ನಿಂದ ಭಾರತದಲ್ಲಿ ‘ಆನ್ಲೈನ್ ಪಾವತಿ ಅಗ್ರಿಗೇಟರ್’ ಆಗಿ ಕಾರ್ಯನಿರ್ವಹಿಸಲಿದೆ” ಎಂದು ಜೊಮಾಟೊ ಎಕ್ಸ್ಚೇಂಜ್ ಫೈಲಿಂಗ್ನಲ್ಲಿ ತಿಳಿಸಿದೆ. ಮಾರುಕಟ್ಟೆಗಳು ಮುಚ್ಚಿದಾಗ ಜೊಮಾಟೊ ಷೇರುಗಳು ₹ 136.00 ಕ್ಕೆ ಕೆಂಪು ಬಣ್ಣದಲ್ಲಿ ವಹಿವಾಟು ನಡೆಸುತ್ತಿದ್ದವು.…
ತುಮಕೂರು: ಜಿಲ್ಲೆಯ ಬಾಲ ಮಂದಿರದಲ್ಲಿ ಆಶ್ರಯದಲ್ಲಿದ್ದಂತ ಸಂತ್ರಸ್ತ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರೋದಾಗಿ ತಿಳಿದು ಬಂದಿದೆ. ತುಮಕೂರು ನಗರದ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಬಾಲ ಮಂದಿರದಲ್ಲಿ ಮೈಸೂರು ಮೂಲದ ಅಪ್ರಾಪ್ತ ಬಾಲಕಿಯೊಬ್ಬಳು ಆಶ್ರಯ ನೀಡಲಾಗಿತ್ತು. ಇಂತಹ ಬಾಲಕಿ ಇಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಾಲಮಂದಿರದಲ್ಲಿ ಸಂತ್ರಸ್ತ ಬಾಲಕಿ ಆತ್ಮಹತ್ಯೆಗೆ ಶರಣಾಗಿರೋ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಜಯನಗರ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/breaking-french-president-arrives-in-india-for-republic-day-celebrations-holds-roadshow-with-modi-in-jaipur-today/ https://kannadanewsnow.com/kannada/dk-shivakumar-meets-laxman-savadi-after-laxman-savadi-joins-bjp/
ಕಲಬುರ್ಗಿ: ರಾಜ್ಯದಲ್ಲಿ 2016ರ ನಂತರ 13,888 ಜನ ನಿವೃತ್ತಿಯಾಗಿದ್ದು, ಹಿಂದಿನ ಸರ್ಕಾರದಲ್ಲಿ ನೇಮಕಾತಿ ನಡೆದಿರಲಿಲ್ಲ. ನಮ್ಮ ಸರ್ಕಾರ ಬಂದ ಕೂಡಲೆ ನೇಮಕಾತಿಗೆ ಚಾಲನೆ ನೀಡಿದ್ದೇವೆ. 9 ಸಾವಿರ ಸಿಬ್ಬಂದಿ ನೇಮಕಕ್ಕೆ ಮಾನ್ಯ ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿದ್ದಾರೆ. ಇದರಲ್ಲಿ ಕೆ.ಕೆ.ಆರ್.ಟಿ.ಸಿ. ಸಂಸ್ಥೆಯ 1,680 ನೇಮಕಾತಿ ಸೇರಿವೆ. 500 ಜನರಿಗೆ ಅನುಕಂಪ ಮೇಲೆ ಉದ್ಯೋಗ ನೀಡಲಾಗಿದೆ ಎಂಬುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಇಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಕಲಬುರಗಿ ನಗರದ ಸೂಪರ್ ಮಾರ್ಕೆಟ್ ಪ್ರದೇಶದಲ್ಲಿ ಕೆ.ಕೆ.ಆರ್.ಡಿ.ಬಿ.ಯ 20 ಕೋಟಿ ರೂ. ಅನುದಾನದಲ್ಲಿ ನಿರ್ಮಿಸಲಾದ ಕೋಟೆ ಮಾದರಿ ನಗರ ಸಾರಿಗೆ ಬಸ್ ನಿಲ್ದಾಣ ಲೋಕಾರ್ಪಣೆಗೊಳಿಸಿ ಮಾತನಾಡಿದಂತ ಅವರು, ಶಕ್ತಿ ಯೋಜನೆ ಜಾರಿ ಮುನ್ನ ರಾಜ್ಯದಲ್ಲಿ ಪ್ರತಿ ದಿನ 84 ಲಕ್ಷ ಜನ ಬಸ್ನಲ್ಲಿ ಪ್ರಯಾಣಿಸುತ್ತಿದ್ದರು. ಯೋಜನೆ ಜಾರಿ ನಂತರ 1.10 ಕೋಟಿ ಜನ ಪ್ರಯಾಣಿಸುತ್ತಿದ್ದಾರೆ. ಶಕ್ತಿ ಯೋಜನೆ ಕುರಿತು ವಿರೋಧ ಪಕ್ಷದವರು ಇಲ್ಲಸಲ್ಲದ ಆರೋಪ ಮಾಡುತ್ತಿದ್ದರು. ಈಗ ಯೋಜನೆ ಜಾರಿಯಾಗಿದೆ. ಕಳೆದ…
ಶಿವಮೊಗ್ಗ : ಶಿವಮೊಗ್ಗ ತಾಲ್ಲೂಕು, ಸಂತೇಕಡೂರು ಗ್ರಾಮದಲ್ಲಿ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಎಫ್-1 ಉಂಬ್ಳೇಬೈಲು, ಎಫ್-2 ಲಕ್ಕಿನಕೊಪ್ಪ, ಎಫ್-3 ಮತ್ತೂರು ಕುಡಿಯುವ ನೀರಿನ ಮಾರ್ಗಗಳ ವ್ಯಾಪ್ತಿಯಲ್ಲಿ ಹೆಚ್ಚುವರಿ ಹೊಸ 11 ಕೆವಿ ವಿದ್ಯುತ್ ಮಾರ್ಗ ರಚಿಸುವ ಕಾಮಗಾರಿ ಹಮ್ಮಿಕೊಂಡಿರುವುರಿಂದ ಈ ಮಾರ್ಗಗಗಳಲ್ಲಿ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ಜ.29 ರಿಂದ ಫೆ.03 ರವರೆಗೆ ಬೆಳಿಗ್ಗೆ 11 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕ ನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರುಳಿಹಳ್ಳಿ, ಗಣಿದಾಳು ಉಂಬ್ಳೇಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. https://kannadanewsnow.com/kannada/breaking-french-president-arrives-in-india-for-republic-day-celebrations-holds-roadshow-with-modi-in-jaipur-today/ https://kannadanewsnow.com/kannada/dk-shivakumar-meets-laxman-savadi-after-laxman-savadi-joins-bjp/
ರಾಯಚೂರು: ತರಗತಿ ನಡೆಯುತ್ತಿದ್ದಾಲೇ ಬಿರುಕು ಬಿಟ್ಟಿದ್ದಂತ ಶಾಲೆಯ ಮೇಲ್ಛಾವಣಿಯ ಸಿಲಿಂಗ್ ಕುಸಿದು ಬಿದ್ದ ಪರಿಣಾಮ ಓರ್ವ ವಿದ್ಯಾರ್ಥಿನಿಯ ಕಾಲಿನ ಬೆರಳು ಕಟ್ ಆಗಿರೋ ಘಟನೆ ರಾಯಚೂರಿನ ದೇವದುರ್ಗದಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ದೇವದುರ್ಗದ ಸರ್ಕಾರಿ ಶಾಲೆಯಲ್ಲಿ ಇಂದು ಘೋರ ಅವಘಡ ಸಂಭವಿಸಿದೆ. 7ನೇ ತರಗತಿಯ ಶಾಲೆ ನಡೆಯುತ್ತಿದಾಗಲೇ ಸಿಲಿಂಗ್ ಕುಸಿದು ಬಿದ್ದಿದೆ. ಈ ಪರಿಣಾಮ 7ನೇ ತರಗತಿಯ ಶ್ರೀದೇವಿ ಕಾಲಿನ ಬೆರಳು ಕಟ್ ಆಗಿರೋದಾಗಿ ತಿಳಿದು ಬಂದಿದೆ. ಸಿಲಿಂಗ್ ಕುಸಿತದಿಂದ ಕಾಲಿನ ಬೆರಳು ಕಟ್ ಆಗಿರುವಂತ ವಿದ್ಯಾರ್ಥಿನಿ ಶ್ರೀದೇವಿಯನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಶಾಲೆಯ ಮೇಲ್ಛಾವಣಿ ಕುಸಿಯೋ ಹಂತದಲ್ಲಿದ್ದರೂ ಅದರಲ್ಲೇ ದೇವದುರ್ಗದ ಸರ್ಕಾರಿ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿ ದಿನ ಜೀವ ಭಯದಲ್ಲಿ ಪಾಠ ಕೇಳುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಂಬಂಧ ದೇವದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/breaking-french-president-arrives-in-india-for-republic-day-celebrations-holds-roadshow-with-modi-in-jaipur-today/ https://kannadanewsnow.com/kannada/dk-shivakumar-meets-laxman-savadi-after-laxman-savadi-joins-bjp/
ನವದೆಹಲಿ: ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ತೊರೆದು, ಕಾಂಗ್ರೆಸ್ ಪಕ್ಷ ಸೇರಿದ್ದಂತ ಜಗದೀಶ್ ಶೆಟ್ಟರ್ ಮತ್ತೆ ಇಂದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಈ ಬಳಿಕ ಅವರು ಏನು ಹೇಳಿದ್ರು ಅಂತ ಮುಂದೆ ಓದಿ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಜಗದೀಶ್ ಶೆಟ್ಟರ್ ಅವರು, ಬಿಜೆಪಿ ಶಾಸಕರು, ಮಾಜಿ ಶಾಸಕರು, ಮುಖಂಡರು, ಕಾರ್ಯಕರ್ತರು ನಾನು ಮತ್ತೆ ಬಿಜೆಪಿ ಸೇರಬೇಕೆಂದು ಅಪೇಕ್ಷೆ ವ್ಯಕ್ತಪಡಿಸಿದ್ದರು. ರಾಷ್ಟ್ರೀಯ ನಾಯಕರೂ ಅದೇ ಆಶಯ ವ್ಯಕ್ತಪಡಿಸಿದರು. ಬಿಜೆಪಿ ಪುನರ್ ಸೇರ್ಪಡೆ ಸಂತೋಷದ ಸಂಗತಿ ಎಂದರು. ಕಾಂಗ್ರೆಸ್ ಪಕ್ಷದಿಂದ ವಿಧಾನ ಪರಿಷತ್ ಸದಸ್ಯತ್ವಕ್ಕೆ ಆಯ್ಕೆಯಾಗಿದ್ದು, ಆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ. ಇ ಮೇಲ್ ಮೂಲಕ ಅದನ್ನು ತಿಳಿಸಿದ್ದೇನೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೂ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ಟಿದ್ದನ್ನು ಇ ಮೇಲ್ ಮೂಲಕ ಕಳಿಸಿದ್ದೇನೆ. ರಾಜೀನಾಮೆ ಪತ್ರ ಕಳಿಸುವ ವ್ಯವಸ್ಥೆ ಮಾಡಿದ್ದೇನೆ ಎಂದು ವಿವರಿಸಿದರು. ದೇಶದ ಹಿತರಕ್ಷಣೆಗೆ ಮೋದಿಜೀ ಅವರು ಶ್ರಮಿಸುತ್ತಿದ್ದಾರೆ. ಅವರು ಮತ್ತೊಮ್ಮೆ ಪ್ರಧಾನಿ ಆಗಬೇಕಿದೆ. ಬಿಜೆಪಿ ಬೆಳವಣಿಗೆಗೆ…
ಬೆಂಗಳೂರು: ನಮ್ಮೆಲ್ಲ ಕಾರ್ಯಕರ್ತರ ಅಪೇಕ್ಷೆಯಂತೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಬಿಜೆಪಿ ಮರುಸೇರ್ಪಡೆ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರ ಉಪಸ್ಥಿತಿಯಲ್ಲಿ ದೆಹಲಿಯಲ್ಲಿ ಇಂದು ನಡೆದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಬಿಜೆಪಿ ಮರುಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜಗದೀಶ್ ಶೆಟ್ಟರ್ ಅವರು ಪಕ್ಷದ ಅನೇಕ ಜವಾಬ್ದಾರಿ ವಹಿಸಿದವರು. ಮುಖ್ಯಮಂತ್ರಿಯಾಗಿ ಅವರು ದುಡಿದಿದ್ದಾರೆ. ಅವರು ಬಿಜೆಪಿಗೆ ಬರಬೇಕೆಂದು ನಮ್ಮೆಲ್ಲ ಕಾರ್ಯಕರ್ತರ ಅಪೇಕ್ಷೆ ಇತ್ತು. ಅದಕ್ಕಾಗಿ ಇವತ್ತು ಪಕ್ಷದ ಹಿರಿಯ ನಾಯಕ ಅಮಿತ್ ಶಾ ಅವರನ್ನು ನಾನು, ಜಗದೀಶ್ ಶೆಟ್ಟರ್, ವಿಜಯೇಂದ್ರ ಸೇರಿ ಎಲ್ಲರೂ ಭೇಟಿ ಮಾಡಿ, ಅವರು ಸಹ ಸಂತೋಷದಿಂದ ಬಿಜೆಪಿ ಸೇರಲು ಕೋರಿದರು. ಅದರಂತೆ ಇವತ್ತು ಬಿಜೆಪಿ ಸೇರಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನೂ ಭೇಟಿ ಮಾಡುತ್ತೇವೆ ಎಂದು ವಿವರಿಸಿದರು. ಶೆಟ್ಟರ್ ಸೇರ್ಪಡೆಯಿಂದ ಬಿಜೆಪಿಗೆ ಹೆಚ್ಚು ಶಕ್ತಿ…
ಕಲಬುರಗಿಯಲ್ಲಿ ‘ಸ್ಯಾಟಲೈಟ್ ಬಸ್ ನಿಲ್ದಾಣ’ ನಿರ್ಮಾಣ: ಮಾರ್ಚ್ ಅಂತ್ಯಕ್ಕೆ 5,800 ಬಸ್ ಖರೀದಿ – ಸಚಿವ ರಾಮಲಿಂಗಾರೆಡ್ಡಿ
ಕಲಬುರಗಿ : ಶಕ್ತಿ ಯೋಜನೆ ಪರಿಣಾಮ ರಾಜ್ಯದಲ್ಲಿ ಬಸ್ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಅಗತ್ಯ ಸಾರಿಗೆ ಬಸ್ ಒದಗಿಸುವ ದೃಷ್ಠಿಯಿಂದ ಬರುವ ಮಾರ್ಚ್ ಅಂತ್ಯಕ್ಕೆ ರಾಜ್ಯದ ನಾಲ್ಕು ನಿಗಮಗಳಿಗೆ 5,800 ಬಸ್ ಖರೀದಿಸಲಾಗುತ್ತಿದೆ ರಾಜ್ಯದ ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರಾದ ಶ್ರೀ ರಾಮಲಿಂಗಾರೆಡ್ಡಿರವರು ತಿಳಿಸಿದರು. ಗುರುವಾರ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಕಲಬುರಗಿ ನಗರದ ಸೂಪರ್ ಮಾರ್ಕೆಟ್ ಪ್ರದೇಶದಲ್ಲಿ ಕೆ.ಕೆ.ಆರ್.ಡಿ.ಬಿ.ಯ 20 ಕೋಟಿ ರೂ. ಅನುದಾನದಲ್ಲಿ ನಿರ್ಮಿಸಲಾದ ಕೋಟೆ ಮಾದರಿ ನಗರ ಸಾರಿಗೆ ಬಸ್ ನಿಲ್ದಾಣ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ಕಲಬುರಗಿ ನಗರದಲ್ಲಿ ಸಂಚಾರ ದಟ್ಟಣೆ ಹೆಚ್ಚಿರುವ ಕಾರಣ ಹೊರವಲಯದ ನಾಲ್ಕು ದಿಕ್ಕಿನಲ್ಲಿ ಸ್ಯಾಟಲೈಟ್ ಬಸ್ ನಿಲ್ದಾಣ ನಿರ್ಮಿಸಬೇಕೆಂಬ ಮಾನ್ಯ ಶಾಸಕರಾದ ಅಲ್ಲಮಪ್ರಭು ಪಾಟೀಲ ಅವರ ಪ್ರಸ್ತಾವನೆಗೆ ಸಮಾರಂಭದಲ್ಲಿ ಮಾತನಾಡಿದ ಅವರು, ನಿವೇಶನ ನೀಡಿದಲ್ಲಿ ಸ್ಯಾಟ್ಲೈಟ್ ಬಸ್ ನಿಲ್ದಾಣ ನಿರ್ಮಿಸಲಾಗುವುದು ಎಂದು ಭರವಸೆ ನೀಡಿದರು. ಶಕ್ತಿ ಯೋಜನೆ ಜಾರಿ ಮುನ್ನ ರಾಜ್ಯದಲ್ಲಿ ಪ್ರತಿ ದಿನ 84 ಲಕ್ಷ…