Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಬರ್ಬರವಾಗಿ ಕೊಲೆಯಾದ ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಪ್ರಕರಣ ಸ್ಫೋಟಕ ತಿರುವು ಪಡೆದಿದ್ದು, ನಾನು ಯಾರ ವಿರುದ್ಧವೂ ದೂರು ಕೊಟ್ಟಿಲ್ಲ ಎಂದು ಅವರ ತಾಯಿಯೇ ಹೇಳಿಕೆ ನೀಡಿದ್ದಾರೆ. ಈ ಕೊಲೆ ಪ್ರಕರಣದಲ್ಲಿ ಕೆ.ಆರ್.ಪುರಂ ಶಾಸಕ ಹಾಗೂ ಮಾಜಿ ಸಚಿವ ಭೈರತಿ ಬಸವರಾಜ್ ಅವರನ್ನು ಐದನೇ ಆರೋಪಿಯನ್ನಾಗಿ ಹೆಸರಿಸಿ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಬಿಕ್ಲು ಶಿವು ತಾಯಿ ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಲಾಗಿದೆ ಎಂದು ಹೇಳಲಾಗಿತ್ತು. ಆದರೆ ಇದೀಗ ಅವರ ತಾಯಿ ವಿಜಯಲಕ್ಷ್ಮೀ ಈ ಬಗ್ಗೆ ಸ್ಪಷ್ಟನೆ ನೀಡಿ, ನಾನು ಭೈರತಿ ಬಸವರಾಜ್ ಸೇರಿದಂತೆ ಯಾರ ವಿರುದ್ಧವೂ ದೂರು ಕೊಟ್ಟಿಲ್ಲ. ಪೊಲೀಸರು ಅವರ ವಿರುದ್ಧ ಏಕೆ ಎಫ್ಐಆರ್ ಹಾಕಿದ್ದಾರೆ? ಎಂದು ಪ್ರಶ್ನೆ ಮಾಡಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮದಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದ ಮಗ ಕೊಲೆಯಾದ ದಿನ ಫೋನಲ್ಲಿ ಯಾರೊಂದಿಗೋ ಮಾತಾಡುತ್ತಿದ್ದವನು ಹಾಗೆಯೇ ಹೊರಗೆ ಹೋದ. ಸ್ವಲ್ಪ ಹೊತ್ತಿನ ಬಳಿಕ ಜನ ಕೂಗಾಡೋದು ಕೇಳಿಸಿತು. ತಾನು ಹೋಗಿ…
ಬೆಂಗಳೂರು: ಬಿಜೆಪಿಯವರು ಮಾತನಾಡುವುದು ಒಂದು, ಮಾಡುವುದು ಮತ್ತೊಂದು. ಕರ್ನಾಟಕದ ಗ್ಯಾರಂಟಿ ಯೋಜನೆಗಳನ್ನು ಕಾಪಿ ಹೊಡೆದು ಪಾಸಾಗಿರುವ ಸ್ಟೂಡೆಂಟ್ಸ್ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಟೀಕಿಸಿದ್ದಾರೆ. ಮುಂಬರುವ ಬಿಹಾರ ಚುನಾವಣೆಗೆ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿ ಘೋಷಿಸಿರುವ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಈ ಹಿಂದೆ ನರೇಗಾ, ಆಧಾರ್ ಕಾರ್ಡ್ ಜಾರಿಗೆ ತರುವುದನ್ನು ವಿರೋಧ ಮಾಡಿದ್ದರು. ದೇಶದಲ್ಲಿ ಉತ್ತಮ ಯೋಜನೆಗಳನ್ನು ವಿರೋಧಿಸಿದರು. ಆದರೀಗ ನಮ್ಮ ಯೋಜನೆಗಳನ್ನೇ ಅನುಸರಿಸುತ್ತಿದ್ದಾರೆ ಎಂದರು. ಮಹಿಳಾ ಸಬಲೀಕರಣಕ್ಕೆ ಗ್ಯಾರಂಟಿ ಯೋಜನೆಗಳನ್ನು ಮಾಡಿದ್ದೆವು. ಇದೀಗ ಕರ್ನಾಟಕದಲ್ಲಿ ಯಶಸ್ವಿಯಾಗಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಇದನ್ನು ನೋಡಿದ ಬಿಜೆಪಿಗರು, ಮಹಾರಾಷ್ಟ್ರ, ದೆಹಲಿಯಲ್ಲಿ ನಮ್ಮ ಯೋಜನೆಗಳನ್ನು ಘೋಷಣೆ ಮಾಡಿ ಚುನಾವಣೆ ಗೆದ್ದರು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆರೋಪಿಸಿದರು. ಕೇಂದ್ರದ ಬಿಜೆಪಿ ನಾಯಕರು ಕರ್ನಾಟಕಕ್ಕೆ ಬಂದಾಗಲೆಲ್ಲಾ ಗ್ಯಾರಂಟಿ ಯೋಜನೆಗಳನ್ನು ಟೀಕೆ ಮಾಡುತ್ತಾರೆ. ಆದರೆ, ಕರ್ನಾಟಕ ಮಾಡೆಲ್ ಇಟ್ಟುಕೊಂಡು ನರೇಂದ್ರ ಮೋದಿ ರಾಜಕಾರಣ ಮಾಡುತ್ತಿದ್ದಾರೆ. ಕರ್ನಾಟಕದ ಯೋಜನೆಗಳನ್ನ ಹಾಗೂ…
ಬೆಂಗಳೂರು : ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸುತ್ತಿರುವ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರೊಂದಿಗೆ ಗುರುವಾರ ಪೂರ್ವಭಾವಿ ಸಭೆ ನಡೆಸಿದರು. ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಯಿತು. ಅಂಗನವಾಡಿಯಲ್ಲಿ ಆರಂಭಿಸಲಾಗುವ ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ಚಿಲಿಪಿಲಿ 2.0 ಪಠ್ಯಕ್ರಮ ಆಳವಡಿಕೆ, ಶಿಕ್ಷಣ ಇಲಾಖೆಯ ಪೂರ್ವ ಪ್ರಾಥಮಿಕ ತರಗತಿಗಳಿಗೆ ಈಗಾಗಲೇ ದಾಖಲಾಗಿರುವ ಮಕ್ಕಳಿಗೆ ಪೂರಕ ಪೌಷ್ಠಿಕ ಆಹಾರ, ತೂಕ ಮತ್ತು ಅಳತೆ ಬಗ್ಗೆಯೂ ಗಮನಹರಿಸಬೇಕು ಎಂದು ಉಭಯ ಸಚಿವರು ಚರ್ಚೆ ನಡೆಸಿದರು. ಸಭೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ರಶ್ಮಿ ಮಹೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಡಾ.ಶಾಮ್ಲಾ ಇಕ್ಬಾಲ್, ಇಬ್ಬರು ಸಚಿವರ ಆಪ್ತ ಕಾರ್ಯದರ್ಶಿಗಳಾದ ಡಾ.ಟಿ.ಎಚ್.ವಿಶ್ವನಾಥ್, ಕಿಶೋರ್ ಕುಮಾರ್,…
ಶಿವಮೊಗ್ಗ: ಇ-ಸ್ವತ್ತು ಮಾಡಿಕೊಡಲು ವ್ಯಕ್ತಿಯೊಬ್ಬರಿಗೆ 3000 ಲಂಚಕ್ಕೆ ಬೇಡಿಕೆ ಇಟ್ಟು, ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿಯೇ ಸಿಕ್ಕಿ ಬಿದ್ದಿರುವಂತ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಈ ಬಗ್ಗೆ ಕರ್ನಾಟಕ ಲೋಕಾಯುಕ್ತ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಪಿರಾದುದಾರರಾದ ವಿನೋದ ಬಿ. ಬಿನ್ ಬಾಲಕೃಷ್ಣ ವಾಸ 1ನೇ ಕ್ರಾಸ್, ಶ್ರೀರಾಮಪುರ ಗ್ರಾಮ, ಶಿವಮೊಗ್ಗ ತಾಲ್ಲೂಕ್, ಶಿವಮೊಗ್ಗ ಜಿಲ್ಲೆ ರವರು ದಿನಾಂಕ:17-07-2025 ರಂದು ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಗೆ ಹಾಜರಾಗಿ ಗಣಕೀಕೃತ ದೂರನ್ನು ನೀಡಿದ್ದು, ಸದರಿ ದೂರಿನಲ್ಲಿ ಶಿವಮೊಗ್ಗ ತಾಲ್ಲೂಕು ಮುದ್ದಿನಕೊಪ್ಪ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಶ್ರೀರಾಮಪುರ ಗ್ರಾಮದ 1ನೇ ಕ್ರಾಸ್ನಲ್ಲಿ ತನ್ನ ತಾಯಿಯಾದ ಶಂಕರಿರವರ ಹೆಸರಿನಲ್ಲಿನ 30×50 ಅಳತೆಯ ಸೈಟಿನಲ್ಲಿ 23X38 ಅಡಿ ಅಳತೆಯಲ್ಲಿ ಆರ್.ಸಿ.ಸಿ.ಮನೆಯನ್ನು ಕಟ್ಟಿದ್ದು, ಸದರಿ ಮನೆಯ ಇ-ಸ್ವತ್ತು ಮಾಡಿಸಲು ಪಿದ್ಯಾದಿ ತಾಯಿಯವರು ದಿನಾಂಕ: 28-11-2024 ರಂದು ಶಿವಮೊಗ್ಗ ತಾಲ್ಲೂಕು ಮುದ್ದಿನಕೊಪ್ಪ ಗ್ರಾಮ ಪಂಚಾಯ್ತಿ ಕಛೇರಿಗೆ ಹೋಗಿ ಅರ್ಜಿಯನ್ನು ಸಲ್ಲಿಸಿರುತ್ತಾರೆ ಎಂದಿದೆ. ಈ ಬಗ್ಗೆ ವಿದ್ಯಾದುದಾರರು ಇ-ಸ್ವತ್ತು ಮಾಡಿಕೊಡುವಂತೆ ಮುದ್ದಿನಕೊಪ್ಪ ಗ್ರಾಮ…
ನಮ್ಮಲ್ಲಿ ಪ್ರತಿಯೊಬ್ಬರೂ ಕಷ್ಟಪಟ್ಟು ದುಡಿಯುವ ಮತ್ತು ಹಣ ಸಂಪಾದಿಸುವ ಏಕೈಕ ಕಾರಣವೆಂದರೆ ನಮ್ಮ ಭವಿಷ್ಯದ ಪಾಲುದಾರರನ್ನು ಉತ್ತಮಗೊಳಿಸುವುದು. ಮುಂದಿನ ಪೀಳಿಗೆಯಾಗುವವರು ನಮ್ಮ ವಂಶಸ್ಥರು. ಅವರ ಬದುಕು ಹಸನಾಗಬೇಕಾದರೆ ಉತ್ತಮ ಶಿಕ್ಷಣ ಪಡೆಯಬೇಕು. ನಾವು ಯಾವ ಒಳ್ಳೆಯ ಶಾಲೆಗೆ ಸೇರಿಸಿದರೂ ಓದುವ ಹಂಬಲವಿದ್ದರೆ ಮಾತ್ರ ಅವರು ಓದಬಲ್ಲರು. ಈ ಆಧ್ಯಾತ್ಮಿಕ ಪೋಸ್ಟ್ನಲ್ಲಿ ನಾವು ಆದಿ ಪೌರ್ಣಮಿಯ ದಿನದಂದು ಮಾಡಬೇಕಾದ ಹಯಗ್ರೀವರ ಪೂಜೆಯ ಬಗ್ಗೆ ನೋಡಲಿದ್ದೇವೆ. ಹಯಗ್ರೀವರು ಆದಿ ಪೌರ್ಣಮಿಯಂದು ಜನಿಸಿದರು ಎಂದು ಹೇಳಲಾಗುತ್ತದೆ. ಹಾಗಾದರೆ ಅವರ ಜನ್ಮದಿನವಾದ ಈ ಹಯಗ್ರೀವರ ಜಯಂತಿಯಂದು ನಾವು ಅವರನ್ನು ಹೇಗೆ ಪೂಜಿಸಬೇಕು? ಹಯಗ್ರೀವರು ಸರಸ್ವತಿಯ ಗುರು. ಶಿಕ್ಷಣದಲ್ಲಿ ಸರಸ್ವತಿಯೇ ಶ್ರೇಷ್ಠ ಎಂದು ಹೇಳುತ್ತೇವೆ. ಅವನ ಗುರು ಹಯಗ್ರೀವನಾಗಿದ್ದರೆ ಅವನು ಎಷ್ಟು ಶಕ್ತಿಶಾಲಿ? ಅವರನ್ನು ಮನಃಪೂರ್ವಕವಾಗಿ ಪೂಜಿಸಿದರೆ ನಮ್ಮ ಮಕ್ಕಳು ವಿದ್ಯಾಭ್ಯಾಸದಲ್ಲಿ ಮೇಲುಗೈ ಸಾಧಿಸುತ್ತಾರೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು…
ಹೈದರಾಬಾದ್: ತೆಲುಗಿನ ಖ್ಯಾತ ನಟ ವಿಜಯ್ ದೇವರಕೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಎಂಟರ್ಟೈನ್ಮೆಂಟ್ ಎಎಫ್’ ಎಂಬ ಇನ್ಸ್ಟಾಗ್ರಾಮ್ ಹ್ಯಾಂಡಲ್ ಇತ್ತೀಚೆಗೆ ಪೋಸ್ಟ್ ಮಾಡಿದ್ದು, ತೆಲುಗು ನಟ ವಿಜಯ್ ದೇವರಕೊಂಡ ಅವರು ಡೆಂಗ್ಯೂ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಲಾಗಿದೆ. ಈ ತಿಂಗಳ 20 ರೊಳಗೆ ವಿಜಯ್ ಅವರನ್ನು ಡಿಸ್ಚಾರ್ಜ್ ಮಾಡುವ ಸಾಧ್ಯತೆಯಿದೆ ಎಂದು ಪೋರ್ಟಲ್ ಉಲ್ಲೇಖಿಸಿರುವ ಮೂಲಗಳು ತಿಳಿಸಿವೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದ್ದರೂ, ವಿಜಯ್ ದೇವರಕೊಂಡ ಅಥವಾ ಅವರ ತಂಡವು ಇಲ್ಲಿಯವರೆಗೆ ಅವರ ಆಸ್ಪತ್ರೆಗೆ ದಾಖಲಾದ ವರದಿಯನ್ನು ದೃಢೀಕರಿಸುವ ಅಥವಾ ನಿರಾಕರಿಸುವ ಯಾವುದೇ ಹೇಳಿಕೆಯನ್ನು ನೀಡಿಲ್ಲ ಎಂಬುದನ್ನು ಗಮನಿಸಬೇಕು. ವಿಜಯ್ ದೇವರಕೊಂಡ ಅವರ ಮುಂದಿನ ಚಿತ್ರ ‘ಕಿಂಗ್ಡಮ್’ ಬಿಡುಗಡೆಗೆ ಸಜ್ಜಾಗುತ್ತಿರುವ ಸಮಯದಲ್ಲಿ ಅವರಿಗೆ ಡೆಂಗ್ಯೂ ಇರುವುದು ಪತ್ತೆಯಾಗಿದೆ ಎಂಬುದನ್ನು ಗಮನಿಸಬೇಕು. ಗೌತಮ್ ತಿನ್ನನುರಿ ನಿರ್ದೇಶನದ ತೆಲುಗು ಭಾಷೆಯ ಸ್ಪೈ ಆಕ್ಷನ್ ಥ್ರಿಲ್ಲರ್ ಚಿತ್ರ ಜುಲೈ 31 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. https://kannadanewsnow.com/kannada/here-are-the-main-highlights-of-todays-state-cabinet-meeting-led-by-cm-siddaramaiah/ https://kannadanewsnow.com/kannada/life-style-are-you-not-getting-pregnant-then-these-could-also-be-the-reason/
ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಗ್ರೇಟರ್ ಬೆಂಗಳೂರನ್ನು 5 ಪಾಲಿಕೆಯಾಗಿ ವಿಭಾಗ ಮಾಡುವುದು, ಬೆಂಗಳೂರು ಕಾಲ್ತುಳಿತ ದುರಂತ ಸಂಬಂಧ ಆರ್ ಸಿ ಬಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವುದು ಸೇರಿದಂತೆ ಮಹತ್ವದ ತೀರ್ಮಾನವನ್ನು ಕೈಗೊಳ್ಳಲಾಯಿತು. ಆ ಎಲ್ಲಾ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯ ನಂತ್ರ ಸುದ್ಧಿಗೋಷ್ಠಿಯಲ್ಲಿ ಸಚಿವ ಹೆಚ್.ಕೆ ಪಾಟೀಲ್ ಅವರು ಸಂಪುಟದ ನಿರ್ಧಾರಗಳನ್ನು ಮಾಧ್ಯಮಗಳಿಗೆ ತಿಳಿಸಿದರು. ರಾಯಚೂರು ತಾಲೂಕಿನಲ್ಲಿ ನೂತನ ಜವಳಿ ಪಾರ್ಕ್ ಸ್ಥಾಪನೆಗೆ ೨೪.೫೦ ಕೋಟಿಯಲ್ಲಿ ಅಭಿವೃದ್ಧಿ ಪಡಿಸಲು ಕ್ಯಾಬಿನೆಟ್ ಅನುಮೋದನೆ ನೀಡಲಾಗಿದೆ ಎಂದರು. ಜಿಲ್ಲಾ ಖನಿಜ ಪ್ರತಿಷ್ಟಾನ ತಿದ್ದುಪಡಿ ನಿಯಮಗಳು- 2025 ವಿವರವಾಗಿ ಚರ್ಚೆ ಮಾಡಲಾಗಿದೆ. ಕೆಲವು ತಾಂತ್ರಿಕ ವಿವರಗಳ ಅವಶ್ಯಕತೆ ಇರುವುದರಿಂದ ಮುಂದೂಡಿಕೆ ಮಾಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು. ಪರಮಾಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ತಾತ್ವಿಕ ಅನುಮೋದನೆ ನೀಡಲಾಗಿದೆ. ಎನ್.ಟಿಪಿಸಿ ಗುರುತಿಸಿರುವ ಸಂಭಾವ್ಯ ಸ್ಥಳಗಳ ಪರಿಶೀಲನೆಗೆ ನಿರ್ಧಾರ ಕೈಗೊಳ್ಳಲಾಗಿದೆ.…
ಬೆಂಗಳೂರು: ಜುಲೈ.19ರಂದು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ, ಕರ್ನಾಟಕ ರಾಜ್ಯ ಆಗಮ ಶಿಕ್ಷಣ ಮತ್ತು ಪರೀಕ್ಷಾ ಸಮಿತಿಯಿಂದ ಆಗಮ ಘಟಿಕೋತ್ಸವ-2025 ಆಯೋಜಿಸಲಾಗಿದೆ. ಈ ಘಟಿಕೋತ್ಸವದಲ್ಲಿ 2103 ಅರ್ಚಕರಿಗೆ ಪ್ರಮಾಣಪತ್ರವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ವಿತರಣೆ ಮಾಡುವುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರಿನಲ್ಲಿ ಜುಲೈ.19ರಂದು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ, ಕರ್ನಾಟಕ ರಾಜ್ಯ ಆಗಮ ಶಿಕ್ಷಣ ಮತ್ತು ಪರೀಕ್ಷಾ ಸಮಿತಿಯಿಂದ ಆಗಮ ಘಟಿಕೋತ್ಸವ 2025 CONVACATION CERTIFICATE ವಿತರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದಿದ್ದಾರೆ. ಬೆಂಗಳೂರಿನಲ್ಲಿ ಮಧ್ಯಾಹ್ನ 3 ಗಂಟೆಗೆ ಬಸವನಗುಡಿಯ ಶ್ರೀ ಕಾರಂಜಿ ಆಂಜನೇಯ ದೇವಸ್ಥಾನದ ಆವರಣದಲ್ಲಿನ ಶ್ರೀ ಶೃಂಗೇರಿ ಶಾರದಾ ಕಲ್ಯಾಣ ಮಂಟಪದಲ್ಲಿ ಈ ಆಗಮ ಘಟಿಕೋತ್ಸವವನ್ನು ಆಯೋಜಿಸಲಾಗಿದೆ ಎಂದು ಹೇಳಿದ್ದಾರೆ. ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ತುಮಕೂರಿನ ಸಿದ್ಧಗಂಗಾ ಮಠದ ಪೀಠಾಧ್ಯಕ್ಷ ಶ್ರೀ ಶ್ರೀ ಶ್ರೀ ಪರಮಪೂಜ್ಯ ಸಿದ್ದಲಿಂಗಮಹಾಸ್ವಾಮಿ, ಉಡುಪಿಯ…
ಬೆಂಗಳೂರು: ನಗರದಲ್ಲಿ ಜನರು ಬೆಚ್ಚಿ ಬೀಳುವಂತೆ ರೌಡಿ ಶೀಟರ್ ಬಿಕ್ಲು ಶಿವ ಆಲಿಯಾಸ್ ಶಿವಕುಮಾರ್ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಘಟನೆ ಸಂಬಂಧ ಐವರು ಆರೋಪಿಗಳು ಪೊಲೀಸರ ಮುಂದೆ ಶರಣಾಗಿದ್ದರು. ಇಂತಹ ಆರೋಪಿಗಳಿಗೆ ಕೋರ್ಟ್ 10 ದಿನ ಪೊಲೀಸರ ವಶಕ್ಕೆ ನೀಡಿ ಆದೇಶಿಸಿದೆ. ಬೆಂಗಳೂರಿನ ಹಲಸೂರಿ ಕೆರೆಯ ಬಳಿಯಲ್ಲಿ ರೌಡಿ ಶೀಟರ್ ಬಿಕ್ಲು ಶಿವ ಆಲಿಯಾಸ್ ಶಿವಕುಮಾರ್ ಹತ್ಯೆ ಪ್ರಕರಣ ಸಂಬಂಧ ಐವರು ಆರೋಪಿಗಳು ತಾವೇ ಕೊಲೆ ಮಾಡಿದ್ದಾಗಿ ಪೊಲೀಸರ ಮುಂದೆ ಶರಣಾಗಿದ್ದರು. ಈ ಆರೋಪಿಗಳನ್ನು ಬೆಂಗಳೂರಿನ ಮೆಯೋಹಾಲ್ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಪ್ರಕರಣ ಸಂಬಂಧ ಹೆಚ್ಚಿನ ವಿಚಾರಣೆ ನಡೆಸಲು ತಮ್ಮ ವಶಕ್ಕೆ ಐವರು ಆರೋಪಿಗಳನ್ನು ನೀಡುವಂತೆ ಪೊಲೀಸರು ಮನವಿ ಮಾಡಿದ್ದರು. ಈ ಮನವಿ ಪುರಸ್ಕರಿಸಿದಂತ ನ್ಯಾಯಾಲಯವು ನವೀನ್, ಪ್ಯಾಟ್ರಿಕ್, ಸಂತೋಷ್, ಕಿರಣ್, ವಿಮಲ್ ಗೆ 10 ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ. ಅಲ್ಲದೇ ಪೊಲೀಸರು ಆರೋಪಿಗಳ ಮೇಲೆ ಹಲ್ಲೆ ಮಾಡಿದಂತ ಕೋರ್ಟ್ ಸೂಚಿಸಿದೆ. ಜೊತೆಗೆ ಎರಡು…
ನವದೆಹಲಿ: ಇಂದೋರ್ ಸತತ ಎಂಟನೇ ಬಾರಿಗೆ ಭಾರತದ ಅತ್ಯಂತ ಸ್ವಚ್ಛ ನಗರ ಪ್ರಶಸ್ತಿಯನ್ನು ಪಡೆದುಕೊಂಡರೆ, ಕೇಂದ್ರ ಸರ್ಕಾರದ ವಾರ್ಷಿಕ ಸ್ವಚ್ಛತಾ ಸಮೀಕ್ಷೆಯಲ್ಲಿ ಸೂರತ್ ಎರಡನೇ ಸ್ಥಾನದಲ್ಲಿದೆ, ಅದರ ಫಲಿತಾಂಶಗಳನ್ನು ಇಂದು ಪ್ರಕಟಿಸಲಾಯಿತು. ರಾಷ್ಟ್ರ ರಾಜಧಾನಿಯ ವಿಜ್ಞಾನ ಭವನದಲ್ಲಿ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ (MoHUA) ಆಯೋಜಿಸಿದ್ದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಸ್ವಚ್ಛ ಸರ್ವೇಕ್ಷಣ್ 2024-25 ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಸರ್ಕಾರದ ಪ್ರಕಾರ, ‘ಸ್ವಚ್ಛ ಸರ್ವೇಕ್ಷಣ್’ ಮಿಷನ್ನ ಪ್ರಾಥಮಿಕ ಗುರಿ ದೊಡ್ಡ ಪ್ರಮಾಣದ ನಾಗರಿಕರ ಭಾಗವಹಿಸುವಿಕೆಯನ್ನು ಉತ್ತೇಜಿಸುವುದು ಮತ್ತು ಪಟ್ಟಣಗಳು ಮತ್ತು ನಗರಗಳನ್ನು ವಾಸಿಸಲು ಉತ್ತಮ ಸ್ಥಳಗಳನ್ನಾಗಿ ಮಾಡುವ ನಿಟ್ಟಿನಲ್ಲಿ ಒಟ್ಟಾಗಿ ಕೆಲಸ ಮಾಡುವ ಮಹತ್ವದ ಬಗ್ಗೆ ಸಮಾಜದ ಎಲ್ಲಾ ವರ್ಗಗಳಲ್ಲಿ ಜಾಗೃತಿ ಮೂಡಿಸುವುದು. ತನ್ನ ಒಂಬತ್ತನೇ ವರ್ಷಕ್ಕೆ ಪ್ರವೇಶಿಸುತ್ತಿರುವ ಸ್ವಚ್ಛ ಸರ್ವೇಕ್ಷಣ್, ನೈರ್ಮಲ್ಯ, ತ್ಯಾಜ್ಯ ನಿರ್ವಹಣೆ ಮತ್ತು ಸೇವಾ ವಿತರಣೆಯನ್ನು ಮೌಲ್ಯಮಾಪನ ಮಾಡಲು 10 ನಿಯತಾಂಕಗಳು ಮತ್ತು 54 ಸೂಚಕಗಳ ಚೌಕಟ್ಟನ್ನು ಬಳಸಿಕೊಂಡು 4,500 ಕ್ಕೂ ಹೆಚ್ಚು ನಗರಗಳನ್ನು…