Author: kannadanewsnow09

ಬೆಂಗಳೂರು: ಸಿಎಂ ಸಿದ್ಧರಾಮಯ್ಯನ ( CM Siddaramaiah ) ನೇತೃತ್ವದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ( Karnataka Cabinet Meeting ) ಗರಿಷ್ಠ ವಯೋಮಿತಿಯಲ್ಲಿ ಮೂರು ವರ್ಷಗಳ ಸಡಿಲಿಕೆಯನ್ನು ಒಂದು ಬಾರಿಗೆ ಮಾತ್ರ ಅನ್ವಯಿಸಲು ನಿರ್ಧಾರ ಕೈಗೊಳ್ಳಲಾಗಿತ್ತು. ಅದರಂತೆ ರಾಜ್ಯ ಸರ್ಕಾರ ಕೆಎಎಸ್ ಹುದ್ದೆ ( KAS Recruitment ) ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಒಂದು ಬಾರಿಗೆ ಮಾತ್ರ ಅನ್ವಯ ಆಗುವಂತೆ ಪರೀಕ್ಷೆಗೆ ವಯೋಮಿತಿ ಸಡಿಲಿಕೆ ಮಾಡಿ ಆದೇಶಿಸಿದೆ. ಈ ಸಂಬಂಧ ರಾಜ್ಯ ಸರ್ಕಾರ ( Karnataka Government ) ಆದೇಶ ಹೊರಡಿಸಿದ್ದು, 2023-24ನೇ ಸಾಲಿನಲ್ಲಿ ಕೆಎಎಸ್ ಪರೀಕ್ಷೆ ( KAS Exam 2024 ) ಬರೆಯುವವರಿಗೆ ಒಂದು ಬಾರಿಗೆ ಸೀಮಿತವಾಗಿ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ ಅಂತ ತಿಳಿಸಿದೆ. ಇನ್ನೂ 2023-24ನೇ ಸಾಲಿನಲ್ಲಿ ಕರ್ನಾಟಕ ಲೋಕಸೇವಾ ಆಯೋಗವು ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್-ಎ ಮತ್ತು ಗ್ರೂಪ್-ಬಿ ರಿಕ್ತ ಸ್ಥಾನಗಳನ್ನು ತುಂಬಲು ಹೊರಡಿಸುವ ಅಧಿಸೂಚನೆಯಲ್ಲಿ…

Read More

ಉತ್ತರ ಕನ್ನಡ: ಜಿಲ್ಲೆಯ ಭಟ್ಕಳದಲ್ಲಿ ಐಸಿಸ್ ಉಗ್ರನ ಜೊತೆಗೆ ನಂಟು ಹೊಂದಿದ್ದಂತ ಆರೋಪದ ಮೇರೆಗೆ ಮಹಿಳೆಯೊಬ್ಬರನ್ನು ಮುಂಬೈನ ಎಟಿಎಸ್ ಅಧಿಕಾರಿಗಳು ತೀವ್ರವಾಗಿ ವಿಚಾರಣೆ ನಡೆಸಿರೋದಾಗಿ ತಿಳಿದು ಬಂದಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳಕ್ಕೆ ನಿನ್ನೆ ಆಗಮಿಸಿರೋ ಮುಂಬೈನ ಎಟಿಎಸ್ ಅಧಿಕಾರಿಗಳು, ಭಟ್ಕಳ ಪೊಲೀಸರ ಸಹಾಯದೊಂದಿಗೆ ಐಸಿಸ್ ಉಗ್ರನ ಜೊತೆಗೆ ನಂಟು ಹೊಂದಿದ್ದಂತ ಮಹಿಳೆಯೊಬ್ಬರನ್ನು ತೀವ್ರವಾಗಿ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಮಹಾರಾಷ್ಟ್ರದ ನಾಸಿಕ್ ಟಿಡ್ಕೆ ಕಾಲೋನಿಯಲ್ಲಿ ಐಸಿಸ್ ಜೊತೆಗೆ ನಂಟು ಹೊಂದಿದ್ದಂತ ಆರೋಪದಲ್ಲಿ ಹುಸೇನ್ ಅಬ್ದುಲ್ ಅಜೀಜ್ ಶೇಕ್(32) ಎಂಬಾತನನ್ನು ಬಂಧಿಸಲಾಗಿತ್ತು. ಬಂಧಿತ ಆರೋಪಿಯಿಂದ ಸಿಮ್ ಕಾರ್ಡ್, ಮೊಬೈಲ್ ಪೋನ್, ಪೆನ್ ಡ್ರೈವ್, ಲ್ಯಾಪ್ ಟಾಪ್ ಸೇರಿದಂತೆ ವಿವಿಧ ವಸ್ತುಗಳನ್ನು ಜಪ್ತಿ ಮಾಡಿದ್ದರು. ಇಂತಹ ಬಂಧಿತ ಐಸಿಸ್ ಜೊತೆಗೆ ಸಂಪರ್ಕ ಹೊಂದಿದ್ದಂತ ಶಂಕಿತ ಆರೋಪಿ ಹುಸೇನ್ ಜೊತೆಗೆ ಸಂಪರ್ಕವನ್ನು ಭಟ್ಕಳದ ಮಹಿಳೆಯೊಬ್ಬರು ಹೊಂದಿದ್ದರು. ಅಲ್ಲದೇ ಆತನನ್ನು ಭಟ್ಕಳಕ್ಕೆ ಕರೆಸಿಕೊಂಡಿದ್ದಂತ ಮಹಿಳೆ, ಲಾಡ್ಜ್ ಒಂದರಲ್ಲಿ ಖಾಸಗಿಯಾಗಿಯೂ ಕೆಲ ಕಾಲ ಭೇಟಿಯಾಗಿದ್ದರು ಎಂಬುದಾಗಿ ತನಿಖೆಯಿಂದ ತಿಳಿದು…

Read More

ನವದೆಹಲಿ: ಪಾಕಿಸ್ತಾನ ಆಲ್ರೌಂಡರ್ ಶೋಯೆಬ್ ಮಲಿಕ್ ಅವರು ಬಾಂಗ್ಲಾದೇಶ ಪ್ರೀಮಿಯರ್ ಲೀಗ್ ( Bangladesh Premier League -BPL) ನ 2024 ರ ಋತುವಿನಲ್ಲಿ ಇನ್ನು ಮುಂದೆ ಆಡುವುದಿಲ್ಲ ಎಂದು ತಿಳಿದುಬಂದಿದೆ. ಮಲಿಕ್ ವೈಯಕ್ತಿಕ ಕಾರಣಗಳಿಗಾಗಿ ದುಬೈಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆಯಾದರೂ, ಬಾಂಗ್ಲಾದೇಶದ ಮಾಧ್ಯಮಗಳಲ್ಲಿನ ವರದಿಗಳು ವಿಭಿನ್ನ ನಿರೂಪಣೆಯನ್ನು ಚಿತ್ರಿಸುತ್ತವೆ. ಬಾಂಗ್ಲಾದೇಶದ ಪತ್ರಕರ್ತ ಸೈಯದ್ ಸಮಿ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್ ಪ್ರಕಾರ, ಮ್ಯಾಚ್ ಫಿಕ್ಸಿಂಗ್ ಆರೋಪದ ಮೇಲೆ ಮಲಿಕ್ ಅವರ ಒಪ್ಪಂದವನ್ನು ಅವರ ಫ್ರಾಂಚೈಸಿ ಫಾರ್ಚೂನ್ ಬರಿಶಾಲ್ ಕೊನೆಗೊಳಿಸಿದೆ. “ಫಿಕ್ಸಿಂಗ್ ಆರೋಪದ ಮೇಲೆ ಫಾರ್ಚೂನ್ ಬರಿಸಾಲ್ ಶೋಯೆಬ್ ಮಲಿಕ್ ಅವರ ಒಪ್ಪಂದವನ್ನು ಕೊನೆಗೊಳಿಸಿದೆ. ಇತ್ತೀಚೆಗೆ ನಡೆದ ಪಂದ್ಯದಲ್ಲಿ ಸ್ಪಿನ್ನರ್ ಆಗಿರುವ ಮಲಿಕ್ ಒಂದೇ ಓವರ್ನಲ್ಲಿ ಮೂರು ನೋ ಬಾಲ್ಗಳನ್ನು ಎಸೆದಿದ್ದರು. ಫಾರ್ಚೂನ್ ಬರಿಶಾಲ್ ತಂಡದ ಮಾಲೀಕ ಮಿಜಾನುರ್ ರೆಹಮಾನ್ ಈ ಸುದ್ದಿಯನ್ನು ದೃಢಪಡಿಸಿದ್ದಾರೆ. ಬಿಪಿಎಲ್ 2024: ಸಾಮಿ ಎಕ್ಸ್ (ಹಿಂದೆ ಟ್ವಿಟರ್) ಪೋಸ್ಟ್ನಲ್ಲಿ ಬರೆದಿದ್ದಾರೆ. ನಿಖರವಾಗಿ ಏನಾಯಿತು? ವಿಶೇಷವೆಂದರೆ, ಮಲಿಕ್…

Read More

ಬೆಂಗಳೂರು : ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಕುಟುಂಬಗಳ ಶ್ರೇಯೋಭಿವೃದ್ದಿಗಾಗಿ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ನೀಡುವ ಸ್ವಾವಲಂಭಿ ಮತ್ತು ಸಾಂದೀಪಿನಿ ಶಿಷ್ಯ ವೇತನದ ಯೋಜನೆಗಳ ಉಪಯೋಗವನ್ನು ಅರ್ಹರು ಪಡೆದುಕೊಳ್ಳಿ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ತಮ್ಮ ಕಚೇರಿಯಲ್ಲಿ ನಿಗಮದ ಡಿಬಿಟಿ ಪ್ರಕ್ರಿಯೆಗೆ ಚಾಲನೆ ನೀಡಿ ಮಾತನಾಡಿದ ಅವರು, “ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಕುಟುಂಬಗಳು ಸ್ವಯಂ ಉದ್ಯೋಗ ಹಾಗೂ ಆರ್ಥಿಕ ಚಟುವಟಿಕೆಗಳಿಗಾಗಿ ಬ್ಯಾಂಕ್ ನಿಂದ ಸಾಲ ಪಡೆದಿದ್ದಲ್ಲಿ, ಸಾಲದ ಪೈಕಿ ಶೇ. 20 ರಷ್ಟು ಹಣವನ್ನು ಸರ್ಕಾರ “ಸ್ವಾವಲಂಭಿ” ಯೋಜನೆ ಅಡಿಯಲ್ಲಿ ಸಹಾಯಧನ ನೀಡಲಿದೆ. ಗರಿಷ್ಠ 5 ಲಕ್ಷದ ವರೆಗೆ ಸಹಾಯಧನ ನೀಡಲಾಗುವುದು. ವ್ಯಾಪಾರ, ಅಂಗಡಿ, ಹೈನುಗಾರಿಕೆ, ಹೊಲಿಗೆ ವೃತ್ತಿ, ಆಟಿಕೆ ತಯಾರಿಕೆ, ಮೊಬೈಲ್ ಅಂಗಡಿ, ಗುಡಿ ಕೈಗಾರಿಕೆ ಸೇರಿದಂತೆ ಹೆಚ್ಚಿನ ಘಟಕ ವೆಚ್ಚವಿರುವ ಆದಾಯ ಬರುವಂತಹ ಲಾಭದಾಯಕ ಉದ್ಯಮಗಳನ್ನು ಸ್ಥಾಪಿಸಲು ರಾಷ್ತ್ರೀಕೃತ ಬ್ಯಾಂಕ್ ಗಳಿ‌ಂದ ಸಾಲ ಪಡೆದವರು ಈ ಯೋಜನೆ ಅರ್ಹರಾಗಿರುತ್ತಾರೆ. ಜನವರಿ 31 ರ ವರೆಗೆ ಅರ್ಜಿ ಸಲ್ಲಿಸಲು…

Read More

ಬೆಂಗಳೂರು : “ಕಾಂಗ್ರೆಸ್ ಪಕ್ಷ ಸಮುದ್ರವಿದ್ದಂತೆ. ನೂರಾರು ನಾಯಕರು ಬರುತ್ತಾರೆ, ಹೋಗುತ್ತಾರೆ. ಯಾರೇ ಬರಲಿ, ಯಾರೇ ಹೋಗಲಿ ಪಕ್ಷಕ್ಕೆ ಅದರಿಂದ ನಷ್ಟವಾಗುವುದಿಲ್ಲ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಅವರು ಬಿಜೆಪಿ ಆಂತರಿಕ ವಿಚಾರದಿಂದ ಬೇಸತ್ತು ಆ ಪಕ್ಷದ ವಿರುದ್ಧ ದೊಡ್ಡ ಆರೋಪ ಮಾಡಿ ಕಾಂಗ್ರೆಸ್ ಸೇರಿದ್ದರು. ಅವರಿಗೆ ಪಕ್ಷದ ಟೆಕೆಟ್ ನೀಡಿದ್ದೆವು. 35 ಸಾವಿರ ಮತಗಳ ಅಂತರದಲ್ಲಿ ಸೋತಿದ್ದರು. ಆದರೂ ಅವರಿಗೆ ವಿಧಾನ ಪರಿಷತ್ತಿಗೆ ನಾಮನಿರ್ದೆಶನ ಮಾಡಿದ್ದೆವು. ಕಳೆದ 2-3 ತಿಂಗಳಿಂದ ಬಿಜೆಪಿ ನಾಯಕರು ಅವರನ್ನು ಸಂಪರ್ಕ ಮಾಡುತ್ತಿದ್ದರು. ಮೊನ್ನೆ ಕೂಡ ಬಿಜೆಪಿ ಸೇರುವುದಿಲ್ಲ ಎಂದು ಅವರು ಹೇಳಿದ್ದರು. ಆದರೆ ನಿನ್ನೆ ಏಕಾಏಕಿ ಪಕ್ಷ ತೊರೆದಿದ್ದಾರೆ ಎಂದರು. ನಮ್ಮ ಪಕ್ಷ 136 ಸೀಟು ಗೆದ್ದಿದೆ. ನಮ್ಮ ತಪ್ಪಿನಿಂದ 6-7 ಸೀಟು ಸೋತಿದ್ದೇವೆ. ಈಗಲೂ ಬಹಳ ಮಂದಿ ನಮ್ಮ ಪಕ್ಷ ಸೇರಲು ಎದುರು ನೋಡುತ್ತಿದ್ದಾರೆ.…

Read More

ಬೆಂಗಳೂರು: ಲಕ್ಷ್ಮಣ್ ಸವದಿ ಅವರನ್ನು ಭೇಟಿ ಮಾಡಿದ್ದ ಬಗ್ಗೆ ಕೇಳಿದಾಗ, ನಾನು ಶೆಟ್ಟರ್ ಅವರ ಜತೆಗೆ ಬಂದವನಲ್ಲ. ನಾನು ನನ್ನ ವೈಯಕ್ತಿಕ ನಿರ್ಧಾರದಿಂದ ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದೇನೆ. ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ಸವದಿ ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಜತೆಗೆ ಅವರೇ ಮಾಧ್ಯಮಗಳಿಗೆ ಉತ್ತರ ನೀಡಿದ್ದಾರೆ. ಅವರು ಈಗ ನಮ್ಮ ಪಕ್ಷದ ನಾಯಕರು ಹಾಗೂ ಪ್ರಮುಖ ಆಸ್ತಿ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬಿಜೆಪಿಯವರು ಸವದಿ ಅವರನ್ನು ಸೆಳೆಯುವ ಪ್ರಯತ್ನ ಮಾಡುತ್ತಿರುವ ಬಗ್ಗೆ ಕೇಳಿದಾಗ, “ಬಿಜೆಪಿಯವರು ಯಾರನ್ನೂ ಬಿಡುತ್ತಿಲ್ಲ. ಎಲ್ಲರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ನಮಗೂ ಆ ಕೆಲಸ ಗೊತ್ತಿದೆ. ನಾವು ಮನಸ್ಸು ಮಾಡಿದ್ದರೆ ಎಷ್ಟೋ ಮನೆಗಳು ಖಾಲಿಯಾಗಿರುತ್ತಿದ್ದವು” ಎಂದು ತಿಳಿಸಿದರು. ನಮ್ಮ ಸಿದ್ಧಾಂತದಲ್ಲಿದ್ದವರನ್ನು ಮತ್ತೆ ಕರೆತರುವ ಪ್ರಯತ್ನದಲ್ಲಿದ್ದೇವೆ ಎಂಬ ಸುನೀಲ್ ಕುಮಾರ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಮ್ಮ ಪಕ್ಷದಿಂದ ಕರೆದುಕೊಂಡು ಹೋದರಲ್ಲ, ಅವರಿಗೆ ಯಾವ ಸಿದ್ಧಾಂತವಿತ್ತು? ಈಗ ಅವರಿಗೆ ಯಾವ ಸಿದ್ಧಾಂತದ ಪಾಠ…

Read More

ಬೆಂಗಳೂರು: ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಟಿಕೆಟ್ ಸಿಗದ ಕಾರಣಕ್ಕೆ ಬಿಜೆಪಿ ತೊರೆದು, ಕಾಂಗ್ರೆಸ್ ಪಕ್ಷವನ್ನು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೇರಿದ್ದರು. ಇಂದು ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸೇರ್ಪಡೆಗೊಂಡಿದ್ದರು. ಇಂತಹ ಅವರು ಇದೀಗ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ನವದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದಂತ ಅವರು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರನ್ನು ಭೇಟಿಯಾಗಿ, ತಮ್ಮ ಸ್ವ ಹಸ್ತಾಕ್ಷರದಲ್ಲಿ ಬರೆದಿರುವಂತ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ಜಗದೀಶ್ ಶೆಟ್ಟರ್ ಅವರಿಂದ ರಾಜೀನಾಮೆ ಪತ್ರವನ್ನು ಸ್ವೀಕರಿಸಿದಂತ ಸಭಾಪತಿ ಬಸವರಾಜ ಹೊರಟ್ಟಿಯವರು ಅವರ ರಾಜೀನಾಮೆಯನ್ನು ಅಂಗೀಕರಿಸಿದರು. ಅವರು ಸಭಾಪತಿ ಬಸವರಾಜ ಹೊರಟ್ಟಿಗೆ ಸಲ್ಲಿಸಿರುವಂತ ರಾಜೀನಾಮೆ ಪತ್ರದಲ್ಲಿ ನಾನು ದಿನಾಂಕ 25-01-2024ರಂದು ಪರಿಷತ್ತಿನಲ್ಲಿ ನನ್ನ ಸದಸ್ಯ ಸ್ಥಾನಕ್ಕೆ ರಾಜೀನಾಮೆಯನ್ನು ನೀಡುತ್ತಿದ್ದೇನೆ ಎಂಬುದಾಗಿ ತಿಳಿಸಿದ್ದಾರೆ. ಮತ್ತೆ ಬಿಜೆಪಿ ಸೇರಿದ ಬಳಿಕ ‘ಮಾಜಿ ಸಿಎಂ ಜಗದೀಶ್ ಶೆಟ್ಟರ್’ ಹೇಳಿದ್ದೇನು ಗೊತ್ತಾ.? ನವದೆಹಲಿ: ವಿಧಾನಸಭಾ ಚುನಾವಣೆ…

Read More

ಬೆಂಗಳೂರು: 2024ನೇ ಸಾಲಿನ ದೇಶದ ಅತ್ಯುನ್ನತ ನಾಗರೀಕ ಗೌರವಗಳಲ್ಲಿ ಒಂದಾಗಿರುವಂತ ಪದ್ಮ ಶ್ರೀ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ಇಂತಹ ಪ್ರಶಸ್ತಿಗೆ ಕರ್ನಾಟಕದ ಜೇನು ಕುರುಬ ಸಮುದಾಯದ ಸೋಮಣ್ಣ ಅವರಿಗೆ ಸಂದಿದೆ. 2024ನೇ ಸಾಲಿನ ಪದ್ಮ ಶ್ರೀ ಪ್ರಶಸ್ತಿಯನ್ನು ಮೈಸೂರಿನ ಬುಡಕಟ್ಟು ಕಲ್ಯಾಣ ಕಾರ್ಯಕರ್ತೆ, ದಣಿವರಿಯದೆ ಕೆಲಸ ಮಾಡುತ್ತಿರುವಂತ ಜೇನು ಕುರುಬ ಸಮುದಾಯದ ಸೋಮಣ್ಣ ಅವರಿಗೆ ನೀಡಲಾಗಿದೆ. ಜೇನು ಕುರುಬ ಸಮುದಾಯದವರಾಗಿರುವಂತ ಸೋಮಣ್ಣ ಅವರು, ಎಲೆ ಮರೆಯ ಕಾಯಿಯಂತೆ 4 ದಶಕಗಳಿಂದ ಜೆನು ಕುರುಬ ಜನಾಂಗದ ಉನ್ನತಿಗಾಗಿ ಕೆಲಸ ಮಾಡುತ್ತಿದ್ದಾರೆ. ಕಾನೂನುಬದ್ಧತೆಯನ್ನು ಖಚಿತಪಡಿಸಿಕೊಳ್ಳಲು ಹಕ್ಕುಪತ್ರಗಳನ್ನು ಪಡೆಯಲು ಸಹಾಯ ಮಾಡಿದರು. 500 ಕ್ಕೂ ಹೆಚ್ಚು ಬುಡಕಟ್ಟು ಜನಾಂಗದವರಿಗೆ ಮಾನ್ಯತೆ ಮತ್ತು ರಕ್ಷಣೆ ನೀಡಿದ್ದಾರೆ. ಅರಣ್ಯ ಪ್ರದೇಶಗಳಲ್ಲಿ ವಾಸಿಸುವ ಸಮುದಾಯಗಳ ಏಳಿಗೆಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಅವರ ಸಾಮಾಜಿಕ ಕಾರ್ಯಗಳು ಪರಿಸರಕ್ಕೂ ವಿಸ್ತರಿಸಿದವು. ಸಂರಕ್ಷಣೆ, ಸಂರಕ್ಷಣೆಯ ಮಹತ್ವವನ್ನು ಒತ್ತಿಹೇಳುತ್ತದೆ. ನೈಸರ್ಗಿಕ ಆವಾಸಸ್ಥಾನಗಳ ಬಗ್ಗೆಯೂ ಅರಿವು ಮೂಡಿಸೋ ಕೆಲಸ ಮಾಡಿದ್ದಾರೆ. ಜೆನು ಕುರುಬ ಸುಮಾರು 40,000 ನಿವಾಸಿಗಳನ್ನು ಹೊಂದಿರುವ ನೀಲಗಿರಿಯಿಂದ…

Read More

ಚೈನ್ನೈ: ಖ್ಯಾತ ಸಂಗೀತ ಸಂಯೋಜಕ ಇಳಯರಾಜಾ ಅವರ ಮಗಳು ಭವತಾರಿಣಿ ದೀರ್ಘಕಾಲದ ಅನಾರೋಗ್ಯದಿಂದ ಜನವರಿ 25 ರಂದು ನಿಧನರಾದರು. ಅವರಿಗೆ 47 ವರ್ಷ ವಯಸ್ಸಾಗಿತ್ತು ಮತ್ತು ಶ್ರೀಲಂಕಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ, ಭವತಾರಿಣಿ ಚಿಕಿತ್ಸೆಗಾಗಿ ಭಾರತದಿಂದ ಶ್ರೀಲಂಕಾಕ್ಕೆ ಪ್ರಯಾಣಿಸಿದ್ದಾರೆ. ಐದು ತಿಂಗಳ ಕಾಲ ಆಯುರ್ವೇದ ಚಿಕಿತ್ಸೆಗೆ ಒಳಗಾಗಿದ್ದರೂ, ಅವರ ಆರೋಗ್ಯ ಸುಧಾರಿಸಲಿಲ್ಲ. ಅವರು ಇಂದು ಸಂಜೆ 5: 20 ಕ್ಕೆ ನಿಧನರಾದರು. ಅವರ ದೇಹವನ್ನು ನಾಳೆ ಚೆನ್ನೈಗೆ ಸಾಗಿಸಲು ನಿರ್ಧರಿಸಲಾಗಿದೆ. ಮೃತ ಭವತಾರಿಣಿ ಚಲನಚಿತ್ರ ರಂಗದಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡಿದ್ದರು.  30ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಹಲವಾರು ಜನಪ್ರಿಯ ಹಾಡುಗಳಿಗೆ ಧ್ವನಿ ನೀಡಿದ್ದಾರೆ. ಅವರ ಅಕಾಲಿಕ ಸಾವು ಇಡೀ ಮನರಂಜನಾ ಜಗತ್ತಿನಲ್ಲಿ ಆಘಾತವನ್ನುಂಟು ಮಾಡಿದೆ. ಬಹುಮುಖ ಕಲಾವಿದೆಯಾಗಿ, ಅವರು ನಟಿ, ಹಿನ್ನೆಲೆ ಗಾಯಕಿ ಮತ್ತು ಸಂಗೀತ ಸಂಯೋಜಕರಾಗಿ ಉತ್ತಮ ಸಾಧನೆ ಮಾಡಿದರು. ಇಳಯರಾಜಾ ಅವರ ಮಗಳಾಗಿ, ಅವರು ತಮ್ಮ ತಂದೆ ಮತ್ತು ಸಹೋದರರೊಂದಿಗೆ ವಿವಿಧ ಚಲನಚಿತ್ರ ಸಂಗೀತ ಯೋಜನೆಗಳಲ್ಲಿ…

Read More

ಬೆಂಗಳೂರು: ದಿನಾಂಕ 29-01-2024ರಂದು ತಾಂತ್ರಿಕ ಪರೀಕ್ಷಾ ಮಂಡಳಿಯಿಂದ ನಡೆಸಲಾಗಿದ್ದಂತ ಡಿಪ್ಲೋಮಾ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಲಾಗುತ್ತಿದೆ. ಈ ಕುರಿತಂತೆ ಸುತ್ತೋಲೆ ಹೊರಡಿಸಿರುವಂತ ತಾಂತ್ರಿಕ ಪರೀಕ್ಷಾ ಮಂಡಳಿಯ ಕಾರ್ಯದರ್ಶಿಗಳು 2023ರ ಡಿಸೆಂಬರ್ ತಿಂಗಳಿನಲ್ಲಿ ಡಿಪ್ಲೋಮಾ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸಲಾಗಿತ್ತು ಅಂತ ತಿಳಿಸಿದ್ದಾರೆ. ತಾಂತ್ರಿಕ ಪರೀಕ್ಷಾ ಮಂಡಳಿಯ ಡಿಪ್ಲೋಮಾ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶವನ್ನು ದಿನಾಂಕ 29-01-2024ರಂದು ಸೋಮವಾರ ಮಧ್ಯಾಹ್ನ 3 ಗಂಟೆಗೆ ಸಂಸ್ಥೆಯಲ್ಲಿ ಉಪಯೋಗಿಸುತ್ತಿರುವ BTELinx ಆನ್ ಲೈನ್ ವೆಬ್ ಪೋರ್ಟಲ್ ನಲ್ಲಿ ಮತ್ತು www.myexamresults.net ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ. https://kannadanewsnow.com/kannada/dont-fall-into-the-trap-of-offers-play-smart-stay-safe-govt-warns-gaming-lovers/ https://kannadanewsnow.com/kannada/big-news-another-good-news-for-state-government-employees-govt-orders-increase-in-in-charge-allowance/

Read More