Author: kannadanewsnow09

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ ಎನ್ನುವಂತೆ, ಕರ್ನಾಟಕ ನಾಗರೀಕ ಸೇವಾ (ಪರಿಷ್ಕೃತ ವೇತನ) ನಿಯಮಗಳು 2022 ರನ್ವಯ ಕರ್ನಾಟಕ ಸರ್ಕಾರಿ ನೌಕರರು ಪಾವತಿಸಬೇಕಾದ ಕನಿಷ್ಠ ಮಾಸಿಕ ವಿಮಾ ಕಂತಿನ ದರದ ನಿಗದಿ ಪಡಿಸಲಾಗಿದೆ. ಹಾಗಾದ್ರೇ ಎಷ್ಟು ವೇತನ ತೆಗೆದುಕೊಳ್ಳುವವರಿಗೆ ಎಷ್ಟು ವಿಮಾ ಕಂತಿನ ದರ ಕಡಿತವಾಗಲಿದೆ ಎನ್ನುವ ಬಗ್ಗೆ ಮುಂದೆ ಓದಿ. ಈ ಕುರಿತು ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ರಾಜ್ಯ ಸಿವಿಲ್ ಸೇವಾ ಅಧಿನಿಯಮ, 1978 ರ (1990 ರ ಕರ್ನಾಟಕ ಅಧಿನಿಯಮ 14) ರ 3 ನೇ ಪ್ರಕರಣದ (2) ನೇ ಉಪ ಪ್ರಕರಣದ ಪರಂತುಕದೊಡನೆ ಓದಿಕೊಂಡು ಅದೇ 3 ನೇ ಪ್ರಕರಣದ (1) ನೇ ಉಪ ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಈ ಮೂಲಕ ಕರ್ನಾಟಕ ಸರ್ಕಾರಿ ನೌಕರರ (ಕಡ್ಡಾಯ ಜೀವ ವಿಮಾ) ನಿಯಮಗಳು, 1958 ಕ್ಕೆ ಮತ್ತಷ್ಟು ತಿದ್ದುಪಡಿ ಮಾಡಲು ಈ ಕೆಳಕಂಡ ನಿಯಮಗಳನ್ನು…

Read More

ಬೆಂಗಳೂರು: ರಾಜ್ಯದ ಮಳೆಹಾನಿಯಿಂದಾಗಿ ರೈತರ ಬೆಳೆ ನಷ್ಟವಾಗಿದೆ. ಹಲವೆಡೆ ಮನೆಗಳು ಕುಸಿದು ಹೋಗಿದ್ದಾವೆ. ಇಂತಹ ಮಳೆಹಾನಿ ಸಂತ್ರಸ್ತರಿಗೆ ಗುಡ್ ನ್ಯೂಸ್ ಎನ್ನುವಂತೆ ಸಿಎಂ ಸಿದ್ಧರಾಮಯ್ಯ ಅವರು 48 ಗಂಟೆಗಳಲ್ಲಿ ಪರಿಹಾರವನ್ನು ನೀಡುವಂತೆ ಖಡಕ್ ಆದೇಶವನ್ನು ಮಾಡಿದ್ದಾರೆ. ರಾಜ್ಯದಲ್ಲಿನ ಮಳೆಹಾನಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮಹತ್ವದ ಸಭೆಯನ್ನು ನಡೆಸಿದರು. ಈ ಬಾರಿ ಹಿಂಗಾರು ಹಂಗಾಮಿನಲ್ಲಿ ಅಕ್ಟೋಬರ್‌ 1ರಿಂದ 25ರ ವರೆಗೆ ರಾಜ್ಯದಲ್ಲಿ ಸರಾಸರಿ 181 ಮಿ.ಮೀ ಮಳೆಯಾಗಿದೆ. ಈ ಅವಧಿಯ ವಾಸ್ತವಿಕ ಸರಾಸರಿ ಮಳೆ ಪ್ರಮಾಣ 114 ಮಿ.ಮೀ ಆಗಿದ್ದು, ಶೇ.58 ರಷ್ಟು ಹೆಚ್ಚುವರಿ ಮಳೆ ದಾಖಲಾಗಿದೆ ಎಂದರು. ಹಿಂಗಾರು ಅವಧಿಯಲ್ಲಿ ಅತಿವೃಷ್ಟಿಯಿಂದಾಗಿ ಒಟ್ಟು 25 ಸಾವು ಸಂಭವಿಸಿದ್ದು, ತುರ್ತು ಪರಿಹಾರ ಪಾವತಿಸಲಾಗಿದೆ ಎಂದು ಹೇಳಿದರು. ಈ ಅವಧಿಯಲ್ಲಿ ಅಧಿಕ ಮಳೆಯಿಂದಾಗಿ 84ಮನೆಗಳು ಸಂಪೂರ್ಣ ಹಾನಿಗೀಡಾಗಿದ್ದು, 2077ಮನೆಗಳು ಭಾಗಶಃ ಹಾನಿಗೀಡಾಗಿವೆ. ಪೂರ್ತಿ ಮನೆಗೆ 1.20ಲಕ್ಷ ರೂ ಪರಿಹಾರ ಹಾಗೂ ಮನೆ ನಿರ್ಮಿಸಿ ಕೊಡಲು ಈಗಾಗಲೇ ಆದೇಶಿಸಲಾಗಿದೆ. ಭಾಗಶಃ ಹಾನಿಗೀಡಾದ ಮನೆಗಳಿಗೆ…

Read More

ಬೆಂಗಳೂರು: ದೀಪಾವಳಿ ಹಬ್ಬದ ವೇಳೆಯಲ್ಲೇ ಸಾಲು ಸಾಲು ರಜೆಗಳಿದ್ದಾವೆ. ಈ ಕಾರಣಕ್ಕೆ ರಾಜ್ಯದ ಜನರು ತಮ್ಮ ಸ್ವ ಗ್ರಾಮಗಳಿಗೆ, ಇಲ್ಲವೇ ಪ್ರವಾಸಕ್ಕೆ ತೆರಳೋರ ಸಂಖ್ಯೆ ಹೆಚ್ಚಿದೆ. ಇಂತವರಿಗೆ ಕೆ ಎಸ್ ಆರ್ ಟಿಸಿ ಗುಡ್ ನ್ಯೂಸ್ ನೀಡಿದೆ. ಅದೇ ಮುಂಗಡ ಬಸ್ ಟಿಕೆಟ್ ಬುಕ್ಕಿಂಗ್ ನಲ್ಲಿ ಶೇ.5, 10ರಷ್ಟು ರಿಯಾಯಿತಿಯನ್ನು ಘೋಷಿಸಿದೆ. ಇಂದು ಈ ಸಂಬಂಧ ಮಾಹಿತಿ ನೀಡಿರುವಂತ ಕೆ ಎಸ್ ಆರ್ ಟಿಸಿಯು, ದಿನಾಂಕ 31.10.2024 ರಂದು ನರಕ ಚತುರ್ದಶಿ ಹಾಗೂ ದಿನಾಂಕ:01.11.2024 ರಂದು ಕನ್ನಡ ರಾಜ್ಯೋತ್ಸವ ದಿನಾಂಕ 02.11.2024ರಂದು ಬಲಿಪಾಡ್ಯಮಿ ಹಬ್ಬದ ಪ್ರಯುಕ್ತ ಕರಾರಸಾ ನಿಗಮ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ 30.10.2024 ರಿಂದ 01.11.2024 ರವರೆಗೆ ಬೆಂಗಳೂರಿನಿಂದ ಹೆಚ್ಚುವರಿಯಾಗಿ 2000 ವಿಶೇಷ ಬಸ್ ಸಂಚಾರದ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದೆ. ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ…

Read More

ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಹಂಗಾಮಿನ ಮಳೆಯಿಂದಾಗಿ ಅಕ್ಟೋಬರ್.1ರಿಂದ 25ರವರೆಗೆ ಬರೋಬ್ಬರಿ 74,993 ಹೆಕ್ಟೇರ್ ಪ್ರದೇಶದಲ್ಲಿನ ಕೃಷಿ ಬೆಳೆ ಹಾನಿಯಾಗಿದೆ. ಅಲ್ಲದೇ 2077 ಮನೆಗಳು ಹಾನಿಗೊಂಡಿದ್ದರೇ, 25 ಜನರು ಸಾವನ್ನಪ್ಪಿದ್ದಾರೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಶನಿವಾರದಂದು ಮುಖ್ಯಮಂತ್ರಿ ಅವರು 2024 ರ ಹಿಂಗಾರು ಅವಧಿಯಲ್ಲಿ ಅಧಿಕ ಮಳೆಯಿಂದ ಉಂಟಾದ ಹಾನಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ನಡೆಸಿದ ಪರಿಶೀಲನಾ ಸಭೆಯನ್ನು ನಡೆಸಿ ಮಾತನಾಡಿದರು. ಹೀಗಿದೆ ಸಿಎಂ ಸಿದ್ಧರಾಮಯ್ಯ ಅವರ ಮಳೆಹಾನಿ ಸಭೆಯ ಪ್ರಮುಖ ಹೈಲೈಟ್ಸ್ 1. ಈ ಬಾರಿ ಹಿಂಗಾರು ಹಂಗಾಮಿನಲ್ಲಿ ಅಕ್ಟೋಬರ್‌ 1ರಿಂದ 25ರ ವರೆಗೆ ರಾಜ್ಯದಲ್ಲಿ ಸರಾಸರಿ 181 ಮಿ.ಮೀ ಮಳೆಯಾಗಿದೆ. ಈ ಅವಧಿಯ ವಾಸ್ತವಿಕ ಸರಾಸರಿ ಮಳೆ ಪ್ರಮಾಣ 114 ಮಿ.ಮೀ ಆಗಿದ್ದು, ಶೇ.58 ರಷ್ಟು ಹೆಚ್ಚುವರಿ ಮಳೆ ದಾಖಲಾಗಿದೆ. 2. ಮುಂಗಾರು ಅವಧಿಯಲ್ಲಿ ಅಂದರೆ ಜೂನ್‌ 1ರಿಂದ ಸೆಪ್ಟಂಬರ್‌ 30ರ ಅವಧಿಯಲ್ಲಿ ರಾಜ್ಯದಲ್ಲಿ ವಾಡಿಕೆ ಮಳೆ 852 ಮಿ.ಮೀ ಆಗಿದ್ದು, ಈ ಬಾರಿ…

Read More

ಶಿವಮೊಗ್ಗ: ಸಾಗರ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ನೌಕರರ ಸಂಘದ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದೆ. ಈ ಸ್ಥಾನಕ್ಕೆ ಸಾಗರ ಟೌನ್ ಮೆಟ್ರಿಕ್ ನಂತ್ರದ ವಿದ್ಯಾರ್ಥಿನಿಲಯದ ಹಾಸ್ಟೆಲ್ ಸೂಪರಿಡೆಂಟ್ ಜೈಶೀಲ.ಬಿ ಅವರು ಸ್ಪರ್ಧಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಾಗರ ತಾಲ್ಲೂಕು ಕಾರ್ಯಕಾರಿ ಸಮಿತಿ ಚುನಾವಣೆ 2024-29 ಘೋಷಣೆಯಾಗಿದೆ. ಈ ಚುನಾವಣೆಯ ಸಲುವಾಗಿ ಬಿಸಿಎಂ ಇಲಾಖೆ ನಿರ್ದೇಶಕರ ಸ್ಥಾನಕ್ಕೆ ತಾನು ಸ್ಪರ್ಧಿಸಿದ್ದೇನೆ. ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ದಿನಾಂಕ 28-10-2024ರಂದು ನಡೆಯಲಿರುವಂತ ಮತದಾನದಲ್ಲಿ ಭಾಗಿಯಾಗಿ, ತಮಗೆ ಮತ ನೀಡುವಂತೆ ಮನವಿ ಮಾಡಿದ್ದಾರೆ. ತಾನು ಬಿಸಿಎಂ ಇಲಾಖೆಯ ಸಮಸ್ತ ನೌಕರರ ಶ್ರೇಯೋಭಿವೃದ್ಧಿಗಾಗಿ ದುಡಿಯಲಿದ್ದೇನೆ. ಜ್ಯೋತಿ ಸಂಜೀವಿನಿ, ಉಚಿತ ವೈದ್ಯಕೀಯ ಚಿಕಿತ್ಸೆ ಅನುಷ್ಠಾನಕ್ಕೆ ಶ್ರಮಿಸುತ್ತೇನೆ. ಬಡ್ತಿ ಸೇರಿದಂತೆ ನೌಕರರ ಇತರೆ ಸಮಸ್ಯೆಗಳ ಯಾವುದೇ ತರಹದ ಹೋರಾಟಕ್ಕೂ ಬದ್ಧನಾಗಿರುವುದಾಗಿ ಹೇಳಿದ್ದಾರೆ. ದಿನಾಂಕ 28-10-2024ರಂದು ಸಾಗರ ನಗರದ ಕರ್ನಾಟಕ…

Read More

ಬೆಂಗಳೂರು: ಪಟಾಕಿ ಮೇಲಿನ ನಿರ್ಬಂಧ ಸುಪ್ರೀಂಕೋರ್ಟ್ ಆದೇಶದ ಪಾಲನೆಯೇ ಹೊರತು ರಾಜ್ಯ ಸರ್ಕಾರದ ಸ್ವಯಂ ನಿರ್ಧಾರವಲ್ಲ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸ್ಪಷ್ಟಪಡಿಸಿದ್ದಾರೆ. ಹಿಂದೂ ಹಬ್ಬಗಳಿಗೆ ಮಾತ್ರ ಇವರ ಪೌರುಷ, ಪಟಾಕಿ ಹೊಡೆಯೋರು ಹೊಡೀತಾರೆ, ಯಾರೂ ಏನೂ ಮಾಡಕ್ಕೆ ಆಗಲ್ಲ. ಈ ಆದೇಶ ಕಾಗದದ ಹುಲಿ ಎಂಬ ಹೇಳಿಕೆ ನೀಡಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ತಿರುಗೇಟು ನೀಡಿರುವ ಅವರು, ಸುಪ್ರೀಂಕೋರ್ಟ್ ತೀರ್ಪನ್ನೇ ಕಾಗದದ ಹುಲಿ ಎನ್ನುವ ಜೋಶಿ ಅವರಿಗೆ ಸಚಿವರಾಗಿ ಮುಂದುವರಿಯಲು ಅರ್ಹತೆಯೇ ಇಲ್ಲ ಎಂದು ಹೇಳಿದ್ದಾರೆ. ಸುಪ್ರೀಂಕೋರ್ಟ್ ರಿಟ್ ಅರ್ಜಿ (ಸಿವಿಲ್) ಸಂಖ್ಯೆ 728 -2015ರಲ್ಲಿ ದೀಪಾವಳಿ ಹಬ್ಬದ ದಿನಗಳಲ್ಲಿ ಅಥವಾ ಗುರುಪೂರಬ್ ನಂತಹ ಬೇರೆ ಹಬ್ಬದ ದಿನಗಳಲ್ಲಿ ರಾತ್ರಿ 8ರಿಂದ ರಾತ್ರಿ 10ಗಂಟೆಯವರಗೆ ಮಾತ್ರವೇ ಪಟಾಕಿ ಸಿಡಿಸಬೇಕು ಎಂದು ತೀರ್ಪು ನೀಡಿದೆ. ಅದರ ಅನುಷ್ಠಾನ ಮಾಡಬೇಡಿ ಎಂದು ಕೇಂದ್ರ ಸರ್ಕಾರದಿಂದ ಆದೇಶ ಹೊರಡಿಸಲಿ ಎಂದು ಸವಾಲು ಹಾಕಿದ್ದಾರೆ. ಕೋರ್ಟ್ 125 ಡೆಸಿಬಲ್…

Read More

ಬೆಂಗಳೂರು: ನಗರದಲ್ಲಿ ಸಿಸಿಬಿ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನೆಡಸಲಾಗಿದೆ. ಓಡಿಸ್ಸಾ ರಾಜ್ಯ ಮೂಲದ ಡ್ರಗ್ ಪೆಡ್ಲರ್ ಬಂಧಿಸಲಾಗಿದೆ. ಅಲ್ಲದೇ 9 ಲಕ್ಷ ಮೌಲ್ಯದ ನಿಷೇಧಿತ ಮಾದಕ ವಸ್ತು ಗಾಂಜಾ, ಕೃತ್ಯಕ್ಕೆ ಬಳಸುತ್ತಿದ್ದ ಮೊಬೈಲ್ ಪೋನ್ ಹಾಗೂ ಇತರೆ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಬೆಂಗಳೂರು ನಗರ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆಯನ್ನು ನಡೆಸಿ ಓಡಿಸ್ಸಾ ಮೂಲದ ಡ್ರಗ್‌ ಪೆಡ್ಲರ್ ಒಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ. ಬಂಧಿತನ ವಶದಿಂದ ಅಂದಾಜು 9 ಲಕ್ಷ ರೂ ಮೌಲ್ಯದ 4 ಕೆ.ಜಿ 475 ಗ್ರಾಂ ತೂಕದ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ್ದ ಮೊಬೈಲ್ ಫೋನ್ ಹಾಗೂ ಒಂದು ಎಲೆಕ್ಟ್ರಾನಿಕ್ ತೂಕದ ಯಂತ್ರ ವಶಪಡಿಸಿಕೊಂಡು, ಮಹದೇವಪುರ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ತನಿಖೆ ಮುಂದುವರೆದಿರುತ್ತದೆ ಎಂದಿದೆ. ಬಂಧಿತ ವ್ಯಕ್ತಿಯು ಓಡಿಸ್ಸಾ ರಾಜ್ಯದಿಂದ…

Read More

ಬೆಂಗಳೂರು: 2024ನೇ ಸಾಲಿನ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿತದಿಂದ ಉಂಟಾಗುವ ಶಬ್ಧ, ವಾಯು ಮಾಲಿನ್ಯ ನಿಯಂತ್ರಣದಲ್ಲಿಡಲು ಹಾಗೂ ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯ ಸಂರಕ್ಷಣೆಯ ಹಿತದೃಷ್ಠಿಯಿಂದ ಭಾರತ ಸರ್ಕಾರದ ಪರಿಸರ (ಸಂರಕ್ಷಣಾ) ನಿಯಮಾವಳಿ 1986 ತಿದ್ದುಪಡಿ 1999 ಮತ್ತು 2000 ಅಡಿಯಲ್ಲಿ ನಿಗಧಿಪಡಿಸಿರುವ ಮಾನಕಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಈ ಕೆಳಕಂಡ ಕ್ರಮಗಳನ್ನು ಸಾರ್ವಜನಿಕರು ಅನುಸರಿಸಲು ರಾಜ್ಯ ಸರ್ಕಾರ ಕೋರಲಾಗಿದೆ. ಸರ್ವೋಚ್ಚ ನ್ಯಾಯಾಲಯವು ನೀಡಿದ ನಿರ್ದೇಶನದಲ್ಲಿ ಅನುಮತಿಸಿರುವ ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಇತರ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಿರುತ್ತದೆ. ಪಟಾಕಿ ಮಾರಾಟ ಮಾಡುವವರು ಹಾಗೂ ಪಟಾಕಿ ಸಂಗ್ರಹಿಸುವ ಗೋದಾಮುಗಳನ್ನು ಸಂಬಂಧ ಪಟ್ಟ ಎಲ್ಲಾ ಇಲಾಖೆಯ ಅನುಮತಿ ಪಡೆಯಬೇಕು. 25 ಡೆಸಿಬಲ್‍ಗಳಿಗಿಂತ ಹೆಚ್ಚು ಶಬ್ಧ ಉಂಟುಮಾಡುವ ಪಟಾಕಿಗಳ ದಾಸ್ತಾನು, ಮಾರಾಟ ಹಾಗೂ ಉಪಯೋಗಿಸುವುದನ್ನು ಕಟ್ಟು ನಿಟ್ಟಾಗಿ ನಿಷೇಧಿಸಲಾಗಿದೆ. ಹಸಿರು ನ್ಯಾಯ ಪೀಠ, ನವದೆಹಲಿ ರವರ ಆದೇಶದಂತೆ ಎಲ್ಲಾ ಹಸಿರು ಪಟಾಕಿಗಳ ಪ್ಯಾಕೆಟ್ ಮೇಲೆ ಹಸಿರು ಪಟಾಕಿಯ ಚಿಹ್ನೆ ಹಾಗೂ…

Read More

ಮಡಿಕೇರಿ : ಕೊಡಗು ಜಿಲ್ಲೆಯ ಜಿಲ್ಲಾ ಸರ್ಕಾರಿ ವಕೀಲರ ಮತ್ತು ಅಪರ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಯನ್ನು ಭರ್ತಿ ಮಾಡಲು ಸರ್ಕಾರವು ಉದ್ದೇಶಿಸಿದ್ದು, ಈ ಹುದ್ದೆಯನ್ನು ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತು) ಕಾಯಿದೆ, 1977 ರನ್ವಯ ಭರ್ತಿ ಮಾಡಲು ಷರತ್ತುಗಳನ್ವಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್, 14 ರ ಸಂಜೆ 5.30 ಗಂಟೆಗೆ ಕೊನೆಯ ದಿನವಾಗಿದೆ. ಅರ್ಜಿಯನ್ನು ಜಿಲ್ಲಾಧಿಕಾರಿ ಕಚೇರಿ, ಮಡಿಕೇರಿ ಇಲ್ಲಿಗೆ ಸಲ್ಲಿಸಬೇಕು. ಷರತ್ತುಗಳು: ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಮತ್ತು ಅಪರ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಜಿಲ್ಲಾ ಬಾರ್ ಅಸೋಸಿಯೇಷನಲ್ಲಿ ನೋಂದಾಯಿಸಿರಬೇಕು. ಅಭ್ಯರ್ಥಿಯು ಕನಿಷ್ಠ 10 ವರ್ಷಗಳ ಕಾಲ ವಕೀಲಿ ವೃತ್ತಿಯನ್ನು ಪೂರೈಸಿರಬೇಕು. ಸರ್ಕಾರಿ ನೌಕರರಾಗಿರಬಾರದು. ಸರ್ಕಾರದ ಯಾವುದೇ ಪೂರ್ಣ ಅಥವಾ ಅರೆಕಾಲಿಕ ಹುದ್ದೆಗಳಲ್ಲಿ ಇರಬಾರದು. ಯಾವುದೇ ನಿಗಮ ಮಂಡಳಿ ಮತ್ತು ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರದಲ್ಲಿ ಕಾನೂನು ಸಲಹೆಗಾರರಾಗಿ ಕರ್ತವ್ಯ ನಿರ್ವಹಿಸುತ್ತಿರಬಾರದು ಎಂದು ಜಿಲ್ಲಾಧಿಕಾರಿ…

Read More

ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ ಪಿ ಯೋಗೇಶ್ವರ್ ಅವರು ನಾಮಪತ್ರ ಸಲ್ಲಿಸಿದ ನಂತರ ಅವರ ಪುತ್ರಿ ನಿಶಾ ಯೋಗೇಶ್ವರ್ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳ ಮೂಲಕ ಮಾಡುತ್ತಿರುವ ಆಪಾದನೆಗಳು ಸತ್ಯಕ್ಕೆ ದೂರವಾಗಿವೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಮಾಧ್ಯಮ ಸಲಹೆಗಾರ ಪಿ.ತ್ಯಾಗರಾಜ್ ಸ್ಪಷ್ಟ ಪಡಿಸಿದ್ದಾರೆ. ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕಳೆದ ಲೋಕಸಭೆ ಚುನಾವಣೆಗೆ ಮೊದಲು ನಿಶಾ ಯೋಗೇಶ್ವರ್ ಅವರು ಕುಮಾರಕೃಪಾದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಒಮ್ಮೆ ಭೇಟಿ ಮಾಡಿದ್ದರು ಎಂದಿದ್ದಾರೆ. ಆಗ ಡಿಸಿಎಂ ಅವರು ತಂದೆ-ಮಗಳ ವಿಚಾರದಲ್ಲಿ ತಾನು ತಲೆ ಹಾಕುವುದಿಲ್ಲ. ಅಪ್ಪ-ಮಗಳನ್ನು ದೂರ ಮಾಡಿದ ಅಪಕೀರ್ತಿಗೆ ನಾನು ಒಳಗಾಗಲು ಬಯಸುವುದಿಲ್ಲ. ನಿಮ್ಮ ಕುಟುಂಬ ವಿಚಾರದಲ್ಲಿ ನಾನು ತಲೆ ಹಾಕಿಲ್ಲ, ಈಗಲೂ ಹಾಕುವುದಿಲ್ಲ. ಮುಂದೆಯೂ ಹಾಕುವುದಿಲ್ಲ. ನಿಮ್ಮ ತಂದೆಯ ಜತೆ ಮಾತನಾಡಿ ನೀವೇ ಸಮಸ್ಯೆಯನ್ನು ಬಗೆಹರಿಸಿಕೊಳ್ಳಿ ಎಂದು ಬುದ್ದಿವಾದ ಹೇಳಿ ಕಳುಹಿಸಿದ್ದರು ಎಂದು…

Read More