Author: kannadanewsnow09

ಪಿರಿಯಾಪಟ್ಟಣ : “ಬಿಜೆಪಿ ಹಾಗೂ ಜೆಡಿಎಸ್ ಪಕ್ಷಕ್ಕೆ ನಾಯಕತ್ವ ಹಾಗೂ ಆತ್ಮವಿಶ್ವಾಸದ ಕೊರತೆ ಇದೆ. ಹೀಗಾಗಿ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದು, ಈಗ ಜಗದೀಶ್ ಶೆಟ್ಟರ್ ಅವರನ್ನು ವಾಪಸ್ ಸೆಳೆಯಲು ಬೆನ್ನು ಬಿದ್ದಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಮೈಸೂರು ಪಿರಿಯಾಪಟ್ಟಣ ಬೈಲುಕುಪ್ಪೆ ಹೆಲಿಪ್ಯಾಡ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯಿಸಿದರು. ಬಿಜೆಪಿ ನಾಯಕರು ಜಗದೀಶ್ ಶೆಟ್ಟರ್ ಅವರನ್ನು ಬಿಜೆಪಿಗೆ ವಾಪಸ್ ಕರೆತರುವ ಪ್ರಯತ್ನ ಮಾಡುತ್ತಿರುವ ಬಗ್ಗೆ ಮಾಧ್ಯಮಗಳು ಕೇಳಿದಾಗ ಉತ್ತರಿಸಿದ ಅವರು, “ಕಾಂಗ್ರೆಸ್ ಪಕ್ಷಕ್ಕೆ ಸೇರಿರುವ ಜಗದೀಶ್ ಶೆಟ್ಟರ್ ಅವರನ್ನು ತಮ್ಮ ಪಕ್ಷಕ್ಕೆ ವಾಪಸ್ ಕರೆದೊಯ್ಯಲು ಬಿಜೆಪಿಯ ಅನೇಕ ನಾಯಕರು ಶೆಟ್ಟರ್ ಅವರಿಗೆ ದುಂಬಾಲು ಬೀಳುತ್ತಿದ್ದಾರೆ. ಅವರ ಪಕ್ಷ ಎಷ್ಟು ದುರ್ಬಲವಾಗಿದೆ ಎಂಬುದಕ್ಕೆ ಇದಕ್ಕಿಂತ ದೊಡ್ಡ ಸಾಕ್ಷಿ ಬೇಕಾ? ಅವರ ಬಳಿ ಅಭ್ಯರ್ಥಿಗಳಿಲ್ಲವೇ? ಅವರ ಪಕ್ಷ ಸಮರ್ಥವಾಗಿದ್ದರೆ ಚುನಾವಣೆ ಎದುರಿಸಲಿ ಎಂದರು. ನಾವು ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದೆವು. ಆದರೆ ಕುಮಾರಸ್ವಾಮಿ ಅವರು…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಗೂಂಡಾ ಕಾಯ್ದೆಯನ್ನು ಮಿಸ್ ಯೂಸ್ ಮಾಡಿಕೊಳ್ಳದೇ, ಸರಿಯಾದ ರೀತಿಯಲ್ಲಿ ಬಳಕೆ ಮಾಡಿಕೊಳ್ಳೋದಕ್ಕೆ ಮಹತ್ವದ ಸೂಚನೆ ಹೊರಡಿಸಿದೆ. ಈ ಸಂಬಂಧ ಗೂಂಡಾ ಕಾಯ್ದೆಯಡಿ ಪ್ರಕರಣಗಳನ್ನು ನಿರ್ವಹಿಸುವ ಬಗ್ಗೆ ಮಹತ್ವದ ಸೂಚನೆಯನ್ನು ಪೊಲೀಸ್ ಇಲಾಖೆಗೆ ತಿಳಿಸಿದೆ. ಈ ಕುರಿತಂತೆ ಒಳಾಡಳಿತ ಇಲಾಖೆಯ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆಯನ್ನು ಹೊರಡಿಸಿದ್ದಾರೆ. ಅವರು ಹೊರಡಿಸಿರುವಂತ ಸುತ್ತೋಲೆಯಲ್ಲಿ  ಕರ್ನಾಟಕ ಅಕ್ರಮ ಭಟ್ಟಿ ಸಾರಾಯಿ ವ್ಯವಹಾರ, ಔಷಧಾಪರಾಧ, ಜೂಜುಕೋರ, ಗೂಂಡಾ ಅನೈತಿಕ ವ್ಯವಹಾರಗಳ ಅಪರಾಧ ಕೊಳಚೆ ಪ್ರದೇಶಗಳನ್ನು ಅಕ್ರಮವಾಗಿ ಆಕ್ರಮಿಸಿಕೊಳ್ಳುವ ವಿಡಿಯೋ ಅಥವಾ ಆಡಿಯೋ ಪ್ರೈರೇಟ್ ಚಟುವಟಿಕೆಗಳ ತಡೆ ಅಧಿನಿಯಮ 1985ರ ಕಾಯ್ದೆಯ ಕಲಂ 3 ಉಪ ಕಲಂ (1) & (2) ರಡಿ ಜಿಲ್ಲಾಧಿಕಾರಿ/ ಪೊಲೀಸ್‌ ಆಯುಕ್ತರಿಗೆ ಬಂಧನ ಆದೇಶ ಹೊರಡಿಸಲು ಅವಕಾಶವಿರುತ್ತದೆ ಎಂದಿದೆ. ಇಂತಹ ಪ್ರಕರಣಗಳ ಸೂಕ್ತತೆಯನ್ನು ಸದರಿ ಕಾಯ್ದೆಯ ಕಲಂ-9 ರಡಿ ರಚಿತವಾದ ಮಾನ್ಯ ಉಚ್ಚ ನ್ಯಾಯಾಲಯದ ಮೂವರು ನ್ಯಾಯಾಧೀಶರುಗಳನ್ನೊಳಗೊಂಡ ಸಲಹಾ ಮಂಡಳಿಯು ಪರಿಶೀಲಿಸುತ್ತದೆ. ಇತ್ತೀಚೆಗೆ ಬಹಳಷ್ಟು ಪ್ರಕರಣಗಳಲ್ಲಿ ತಾಂತ್ರಿಕ…

Read More

ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತೆರಳುತ್ತಿದ್ದಂತ ಕಾರು ಅಪಘಾತಗೊಂಡಿದೆ. ಕೊಲ್ಕತ್ತಾದಲ್ಲಿ ಅವರ ಕಾರು ಅಪಘಾತಗೊಂಡ ಪರಿಣಾಮ, ಅವರ ತಲೆಗೆ ಪೆಟ್ಟಾಗಿರೋದಾಗಿ ತಿಳಿದು ಬಂದಿದೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತೆರಳುತ್ತಿದ್ದಂತ ಕಾರು ಕೊಲ್ಕತ್ತಾದಲ್ಲಿ ಅಪಘಾತಗೊಂಡಿದೆ. ಈ ಅಪಘಾತದಲ್ಲಿ ಸಿಎಂ ಮಮತಾ ಬ್ಯಾನರ್ಜಿ ಅವರ ತಲೆಗೆ ಸಣ್ಣ ಪುಟ್ಟ ಗಾಯವಾಗಿರೋದಾಗಿ ಮೂಲಗಳಿಂದ ತಿಳಇದು ಬಂದಿದೆ. ಇಂದು ಇಂಡಿಯಾ ಮೈತ್ರಿಕೂಟದಿಂದ ಹೊರ ನಡೆದಿದ್ದಂತ ಅವರು, ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸೋದಾಗಿ ಘೋಷಣೆ ಮಾಡಿದ್ದರು. ಈ ಬೆನ್ನಲ್ಲೇ ಅವರ ಕಾರು ಅಪಘಾತಗೊಂಡಿದ್ದು, ಸಣ್ಣಪುಟ್ಟ ಗಾಯ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ಆಗೋರೋದಾಗಿ ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/breaking-big-shock-to-india-alliance-aap-announces-no-alliance-with-congress-in-punjab/ https://kannadanewsnow.com/kannada/breaking-young-rajat-patidar-replaces-virat-kohli-for-first-2-tests-against-england/

Read More

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ, ಜ್ಞಾನವಾಪಿ ಮಸೀದಿಯ ಬಗ್ಗೆ ಭಾರತೀಯ ಪುರಾತತ್ವ ಸಮೀಕ್ಷೆಯ ವರದಿಯನ್ನು ಬಹಿರಂಗಪಡಿಸೋದಕ್ಕೆ ಕೋರ್ಟ್ ಸಮ್ಮತಿ ನೀಡಿದೆ. ಜ್ಞಾನವಾಪಿ ಮಸೀದಿ ಸಂಕೀರ್ಣದ ಬಗ್ಗೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (Archaeological Survey of India – ASI) ವರದಿಯನ್ನು ಎರಡೂ ಪಕ್ಷಗಳಿಗೆ ನೀಡುವಂತೆ ವಾರಣಾಸಿ ನ್ಯಾಯಾಲಯ ಬುಧವಾರ ಕೇಳಿದೆ. ಹಿಂದೂ ಕಡೆಯವರನ್ನು ಪ್ರತಿನಿಧಿಸುವ ವಕೀಲ ವಿಷ್ಣು ಶಂಕರ್ ಜೈನ್, “ಇಂದು, ನ್ಯಾಯಾಲಯವು ಎರಡೂ ಕಡೆಯ ವಾದಗಳನ್ನು ಆಲಿಸಿತು ಮತ್ತು ಎಎಸ್ಐ ವರದಿಯ ಹಾರ್ಡ್ ಕಾಪಿಯನ್ನು ಎರಡೂ ಕಡೆಯವರಿಗೆ ನೀಡಲಾಗುವುದು ಎಂದು ಒಮ್ಮತಕ್ಕೆ ಬರಲಾಯಿತು… ಇಮೇಲ್ ಮೂಲಕ ವರದಿ ನೀಡಲು ಎಎಸ್ಐ ಆಕ್ಷೇಪ ವ್ಯಕ್ತಪಡಿಸಿತು. ಆದ್ದರಿಂದ, ವರದಿಯ ಹಾರ್ಡ್ ಕಾಪಿ ಪಡೆಯಲು ಎರಡೂ ಕಡೆಯವರು ಒಪ್ಪಿಕೊಂಡರು. https://twitter.com/ANI/status/1750092480996122684 ವರದಿಯನ್ನು ನಾಳೆ (ಗುರುವಾರ) ನೀಡುವ ಸಾಧ್ಯತೆಯಿದೆ ಎಂದು ಎಎಸ್ಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಧ್ಯಾಹ್ನ 12 ಗಂಟೆಯ ನಂತರ ಪ್ರಾರ್ಥನಾ ಪತ್ರ ಸಲ್ಲಿಸುವಂತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. “ಪ್ರತಿಯನ್ನು ಸಾರ್ವಜನಿಕರೊಂದಿಗೆ ಹಂಚಿಕೊಳ್ಳಬಾರದು ಎಂಬ ಯಾವುದೇ…

Read More

ವಾರಣಾಸಿ: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆ ಬಳಿಕ, ವಾರಣಾಸಿ ಜಿಲ್ಲಾ ನ್ಯಾಯಾಲಯವು ಎಎಸ್ಐ ಸರ್ವೆಗೆ ಆದೇಶಿಸಿತ್ತು. ಭಾರತೀಯ ಪುರಾತತ್ವ ಇಲಾಖೆಯಿಂದ ನಡೆಸಲಾಗಿರುವಂತ ಸಮೀಕ್ಷೆಯವ ವರದಿಯನ್ನು ಈಗ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಲಾಗಿದೆ. ಜ್ಞಾನವಾಪಿ ಮಸೀದಿಯ ಬಗ್ಗೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್ಐ) ವರದಿಯನ್ನು ಸಾರ್ವಜನಿಕಗೊಳಿಸಲಾಗುವುದು ಮತ್ತು ಅದರ ಪ್ರವೇಶವನ್ನು ಹಿಂದೂ ಮತ್ತು ಮುಸ್ಲಿಂ ಎರಡೂ ಕಡೆಯವರಿಗೆ ಒದಗಿಸಲಾಗುವುದು. ಈ ಕುರಿತು ಮಾತನಾಡಿದ ಹಿಂದೂ ಕಡೆಯ ವಕೀಲ ಹರಿಶಂಕರ್ ಜೈನ್, “ಎಎಸ್ಐ ಸಮೀಕ್ಷೆಯ ಪ್ರತಿಯನ್ನು ಪಡೆಯಲು ನಾವು ತುಂಬಾ ಅದೃಷ್ಟಶಾಲಿಗಳು” ಎಂದು ಹೇಳಿದರು. “ಎಎಸ್ಐ ಸಮೀಕ್ಷೆಯಲ್ಲಿ ಏನಿದೆ ಎಂದು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು” ಎಂದು ಜೈನ್ ಹೇಳಿದರು. ನ್ಯಾಯಾಲಯದ ನಿರ್ದೇಶನದಂತೆ ಎರಡೂ ಪಕ್ಷಗಳಿಗೆ ವರದಿಯ ಹಾರ್ಡ್ ಕಾಪಿ ನೀಡಲಾಗುವುದು ಎಂದು ಜೈನ್ ಗಮನಿಸಿದರು. https://kannadanewsnow.com/kannada/breaking-big-shock-to-india-alliance-aap-announces-no-alliance-with-congress-in-punjab/ https://kannadanewsnow.com/kannada/breaking-young-rajat-patidar-replaces-virat-kohli-for-first-2-tests-against-england/

Read More

ಬೆಂಗಳೂರು: ನಗರದಲ್ಲಿನ ಪ್ರೀ ಸ್ಕೂಲ್ ಒಂದರಲ್ಲಿ ನಡೆದಂತ ನಿರ್ಲಕ್ಷ್ಯ ಘಟನೆಯಿಂದಾಗಿ 4 ವರ್ಷದ ಪುಟ್ಟ ಕಂದಮ್ಮ ಜೀವನ್ಮರಣ ಹೋರಾಟ ನಡೆಸುತ್ತಿರುವಂತೆ ಆಗಿದೆ. ಈಗ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ. ಬೆಂಗಳೂರಿನ ಹೆಣ್ಣೂರಿನ ಚೆಲ್ಲಕೆರೆಯಲ್ಲಿನ ಡೆಲ್ಲಿ ಪ್ರೀ ಸ್ಕೂಲ್ ನಲ್ಲಿ 4 ವರ್ಷದ ಜಿನಾ ಓದುತ್ತಿದ್ದಳು. ಜನವರಿ.22ರಂದು 3ನೇ ಮಹಡಿಯಿಂದ ಬಿದ್ದಿದ್ದಂತ ಜಿನಾಗೆ ತಲೆಗೆ ತೀವ್ರವಾಗಿ ಪೆಟ್ಟಾಗಿ ಗಾಯ ಕೂಡ ಆಗಿತ್ತು. ಕೂಡಲೇ ಆಕೆಯನ್ನು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಇದೀಗ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವಂತ 4 ವರ್ಷದ ಜಿನಾ ಸ್ಥಿತಿ ಚಿಂತಾಜನಕವಾಗಿರೋದಾಗಿ ತಿಳಿದು ಬಂದಿದೆ. ಜಿನಾ ಇಷ್ಟು ತೀವ್ರವಾಗಿ ಗಾಯಗೊಂಡರೂ ಹೆಣ್ಣೂರು ಠಾಣೆಯ ಪೊಲೀಸರು ಮಾತ್ರ ಎಫ್ಐಆರ್ ದಾಖಲಿಸಿ, ಪ್ರೀ ಸ್ಕೂಲ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳೋ ಬದಲಾಗಿ, ಎನ್ ಸಿಆರ್ ಹಾಕಿ ಕಳುಹಿಸಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಮತ್ತಷ್ಟು ಮಾಹಿತಿ ಲಭ್ಯವಾಗಬೇಕಿದೆ. https://kannadanewsnow.com/kannada/good-news-for-farmers-in-the-state-first-instalment-of-drought-relief-to-be-released-within-a-week-cm-siddaramaiah/ https://kannadanewsnow.com/kannada/breaking-big-shock-to-india-alliance-aap-announces-no-alliance-with-congress-in-punjab/

Read More

ಬೆಂಗಳೂರು : ಉದ್ಯಾನ ನಗರಿ ಬೆಂಗಳೂರಿನ ವಿಜಯನಗರ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ಚಂದ್ರಾ ಬಡಾವಣೆಯಲ್ಲಿ ಇದೇ ಜನವರಿ 26 ರ ಗಣರಾಜ್ಯೋತ್ಸವ ದಿನದಿಂದ ಅತೀ ಎತ್ತರದ ರಾಷ್ಟ್ರಧ್ವಜ ಸ್ಥಂಭದಲ್ಲಿ ತ್ರಿವರ್ಣ ಧ್ವಜ ಹಾರಾಡಲಿದೆ. ಕರ್ನಾಟಕ ಉಚ್ಛ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ಅಂದು ಬೆಳಿಗ್ಗೆ 8-30 ಗಂಟೆಗೆ ಚಂದ್ರಾ ಬಡಾವಣೆಯ ಉದ್ಯಾನದಲ್ಲಿ ಈ ಬಾನೆತ್ತರದ ರಾಷ್ಟ್ರಧ್ವಜ ಸ್ಥಂಭವನ್ನು ಲೋಕಾರ್ಪಣೆ ಮಾಡಿ, ಪ್ರಪ್ರಥಮ ಬಾರಿಗೆ ರಾಷ್ಟ್ರದ ತ್ರಿವರ್ಣ ಧ್ವಜಾರೋಹಣವನ್ನು ನೆರವೇರಿಸಲಿದ್ದಾರೆ. ಸಂವಿಧಾನದ ಆಶಯಗಳಾದ ದೇಶ ಪ್ರೇಮ, ದೇಶ ಭಕ್ತಿ, ಸೋದರತೆ ಮತ್ತು ಸಾಮರಸ್ಯವನ್ನು ಉಳಿಸಿ ಬೆಳೆಸಲು ಪ್ರೇರಣೆ ಮತ್ತು ಸ್ಫೂರ್ತಿ ನೀಡುವ ಈ ಸಮಾರಂಭದಲ್ಲಿ ವಿಜಯನಗರ ಶಾಸಕ ಎಂ ಕೃಷ್ಣಪ್ಪ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಗೋವಿಂದರಾಜನಗರ ಶಾಸಕ ಪ್ರಿಯಾ ಕೃಷ್ಣ ಅವರೂ ಸೇರಿದಂತೆ ಹಲವು ಗಣ್ಯರು ಈ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಮಾರಂಭದ ಪ್ರಾರಂಭಕ್ಕೆ ಮುನ್ನ, ಬೆಳಿಗ್ಗೆ 7-30 ಗಂಟೆಗೆ, ವಿವಿಧ ಕಲಾ ತಂಡಗಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ಹಾಗೂ ವಾದ್ಯಗೋಷ್ಠಿ-ಸಹಿತವಾಗಿ ಶಾಲಾ-ಕಾಲೇಜು…

Read More

ಬೆಂಗಳೂರು: ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಹೆಚ್ಚು ರಾಜಸ್ವ ತರುವ ಅಬಕಾರಿ ಇಲಾಖೆಯಲ್ಲಿ ( Excise department ) ಕೇಳಿದ್ದಷ್ಟೂ ಹಣ ಕೊಟ್ಟರೆ ಬೇಕಾದ ಹುದ್ದೆಗಳಿಗೆ ವರ್ಗಾವಣೆ ಮಾಡಲಾಗುತ್ತಿದೆ. ಜತೆಗೆ, ಬೇಡಿಕೆ ಇರುವ ಸ್ಥಳಗಳ ನಿಯುಕ್ತಿಗಾಗಿ ಇನ್ನಷ್ಟು ಕುದುರಿಸಿ ಹಣ ಪಡೆದು ವರ್ಗಾಯಿಸಲಾಗುತ್ತಿದೆ. ಹಣ ನೀಡದಿರುವರಿಗೆ ಡಿಸ್ಟಿಲರಿ, ಬ್ರಿವರಿ ವೈನರಿ ಹಾಗೂ ಮೈಕ್ರೋಬ್ರಿವರಿಯಲ್ಲಿರುವ ಹುದ್ದೆ ತೋರಿಸಲಾಗುತ್ತಿದೆ. ಲೋಕಸಭೆ ಚುನಾವಣೆಗೆ ( Lok Sabha Election ) ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ವಿವಿಧ ವೃಂದದ ಅಧಿಕಾರಿಗಳನ್ನು ತರಾತುರಿ ವರ್ಗಾವಣೆಗೆ ಅಬಕಾರಿ ಸಚಿವರು ಕೈ ಹಾಕಿದ್ದಾರೆ. ಪ್ರತಿ ವರ್ಷ ಮೇ ಅಥವಾ ಜೂನ್‌ನಲ್ಲಿ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ ನಡೆಯತ್ತದೆ. ಆದರೆ,ಅಬಕಾರಿ ಇಲಾಖೆಯಲ್ಲಿ ವರ್ಷಕ್ಕೆ ಎರಡೆರಡು ಬಾರಿ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಗಳು ನಡೆದಿರುವುದುಂಟು.ಆಡಳಿತಾತ್ಮಕವಾಗಿ ಅಗತ್ಯವಿರುವ ಖಾಲಿ ಸ್ಥಾನಗಳಿಗೆ ವರ್ಗಾವಣೆ ಮಾಡಬಾರದು ಎಂದು ಸರ್ಕಾರದ ನಿಯಮವಿದೆ. ಆದರೂ ಈ ನಿಯಮವನ್ನು ಉಲ್ಲಂಸಿ ಇಲಾಖೆಯಲ್ಲಿ ಗ್ರೂಪ್ ‘ಬಿ’ ಮತ್ತು ‘ಸಿ’ವೃಂದದ ಅಧಿಕಾರಿಗಳನ್ನು ಖಾಲಿ ಸ್ಥಾನಕ್ಕೆ ವರ್ಗಾಯಿಸಲಾಗುತ್ತಿದೆ. ಹಿರಿತನ ಆಧಾರದಲ್ಲಿ ಮುಂಬಡ್ತಿ ಪಡೆದಿರುವ…

Read More

ಬೆಂಗಳೂರು: ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ನಿವೃತ್ತ ಕೆ.ಎ.ಎಸ್. ಅಧಿಕಾರಿ ಆರ್. ರುದ್ರಯ್ಯ ಅವರ ಪಕ್ಷವನ್ನು ಸೇರ್ಪಡೆಯಾದರು.  ಈ ವೇಳೆ ಮಾತನಾಡಿದಂತ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು, ಕಾಶ್ಮೀರದಿಂದ ಕನ್ಯಾಕುಮಾರಿ ತನಕ ದೇಶಾದ್ಯಂತ ಇವತ್ತು ನರೇಂದ್ರ ಮೋದಿಜೀ, ಬಿಜೆಪಿ ಮತ್ತು ಕಮಲ ಚಿಹ್ನೆ ಪರವಾದ ಅಲೆ ಇದೆ ಎಂದು  ತಿಳಿಸಿದರು. ಎಸ್‍ಸಿ, ಎಸ್‍ಟಿ ಸೇರಿದಂತೆ ಕಾಂಗ್ರೆಸ್ ಮತಬ್ಯಾಂಕಿನಂತಿದ್ದ ಎಲ್ಲ ಸಮುದಾಯಗಳು ಭ್ರಮನಿರಸನಗೊಂಡಿವೆ. ದಲಿತರ ಅಭಿವೃದ್ಧಿಗಾಗಿ ಕೊಟ್ಟಿದ್ದ ಸುಮಾರು 11,300 ಕೋಟಿ ಹಣವನ್ನು ಗ್ಯಾರಂಟಿ ಸ್ಕೀಮಿಗೆ ಕೊಟ್ಟರಲ್ಲವೇ? ಆ ಮೂಲಕ ದಲಿತರನ್ನು ವಂಚಿತರನ್ನಾಗಿ ಮಾಡಿದ್ದೀರಲ್ಲವೇ ಎಂದು ಕೇಳಿದರು. ರುದ್ರಯ್ಯ ದಕ್ಷ ಅಧಿಕಾರಿಯಾಗಿ ಸೇವೆ ಮಾಡಿದವರು. ಜನಪ್ರೀತಿ ಪಡೆದವರು ಎಂದು ತಿಳಿಸಿದರು. ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಮಾತನಾಡಿ, ಬಿಜೆಪಿ ಮಾಡಿದ ಸಾಧನೆ, ಅಭಿವೃದ್ಧಿ ಕಾರ್ಯವನ್ನು ಜನರಿಗೆ ತಿಳಿಸಬೇಕು. ಆಗ ಮಾತ್ರ ನಾವು ಗೆಲ್ಲಲು ಸಾಧ್ಯ ಎಂದು ತಿಳಿಸಿದರು. ಡಾ.ಅಂಬೇಡ್ಕರರನ್ನು ಕಾಂಗ್ರೆಸ್ ಸೋಲಿಸಿದ್ದು, ಅವರ…

Read More

ಬೆಂಗಳೂರು: ಕಾಶ್ಮೀರದಿಂದ ಕನ್ಯಾಕುಮಾರಿ ತನಕ ದೇಶಾದ್ಯಂತ ಇವತ್ತು ನರೇಂದ್ರ ಮೋದಿಜೀ, ಬಿಜೆಪಿ ಮತ್ತು ಕಮಲ ಚಿಹ್ನೆ ಪರವಾದ ಅಲೆ ಇದೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ನಿವೃತ್ತ ಕೆ.ಎ.ಎಸ್. ಅಧಿಕಾರಿ ಆರ್. ರುದ್ರಯ್ಯ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಡೀ ದೇಶ ಇವತ್ತು ಅತ್ಯಂತ ಭರವಸೆಯಿಂದ ನರೇಂದ್ರ ಮೋದಿಜೀ ಅವರ ನಾಯಕತ್ವದ ಬಿಜೆಪಿ ಕಡೆ ನೋಡುತ್ತಿದೆ. ಈ ಬಾರಿ ದಕ್ಷಿಣ ಭಾರತದಲ್ಲಿ ಆಶ್ಚರ್ಯಕರ ಫಲಿತಾಂಶ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕರ್ನಾಟಕದಲ್ಲಿ 25 ಲೋಕಸಭಾ ಸೀಟು ಬಂದಿತ್ತು. ಅದನ್ನು ಮೀರಿ ಅದಕ್ಕಿಂತ ಹೆಚ್ಚು ಸೀಟುಗಳನ್ನು ಪಕ್ಷ ಗೆಲ್ಲಲಿದೆ ಎಂದರು. ತೆಲಂಗಾಣ, ಆಂಧ್ರ, ತಮಿಳುನಾಡಿನಲ್ಲೂ ಅತಿ ಹೆಚ್ಚು ಸೀಟು ಸಿಗಲಿದ್ದು, ಅಚ್ಚರಿಯ ಫಲಿತಾಂಶ ಲಭಿಸಲಿದೆ ಎಂದು ತಿಳಿಸಿದರು. ಇದರ ಪ್ರಭಾವ ಕರ್ನಾಟಕದಲ್ಲೂ ಆಗಿದೆ. ಎಸ್‍ಸಿ, ಎಸ್‍ಟಿ ಸೇರಿದಂತೆ ಕಾಂಗ್ರೆಸ್ ಮತಬ್ಯಾಂಕಿನಂತಿದ್ದ ಎಲ್ಲ ಸಮುದಾಯಗಳು ಭ್ರಮನಿರಸನಗೊಂಡಿವೆ.…

Read More