Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯದಲ್ಲಿ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಗೆ ಅವಕಾಶ ಇಲ್ಲದಿದ್ದರೂ ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ವಿಭಾಗದ ಮುಖ್ಯಸ್ಥ ಡಾ.ಎಚ್. ಎಲ್. ವಿಶ್ವನಾಥ್ ಅವರನ್ನು ಏಕಾಏಕಿ ವರ್ಗಾವಣೆ ಮಾಡಿ ವೈದ್ಯಕೀಯ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಬೋರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ಡಾ.ಎಚ್.ಎಂ.ಶ್ರೀಕಾಂತ್, ವೈದ್ಯ ವೃತ್ತಿ ಬದಲು ‘ಡಿ’ದರ್ಜೆ ನೌಕರರಂತೆ ಕಡತ ನಿರ್ವಹಣೆಯಲ್ಲಿ ತೊಡಗಿರುವ ಕುರಿತು ಜನತಾ ಪಕ್ಷ, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್‌ಗೆ ದೂರು ಕೊಟ್ಟಿತ್ತು. ದೂರಿನ್ವಯ ತನಿಖೆ ನಡೆಸಿ ವರದಿ ನೀಡುವಂತೆ ಡಾ.ವಿಶ್ವನಾಥ್ ನೇತೃತ್ವದಲ್ಲಿ ಸಮಿತಿ ರಚಿಸಿ ವೈದ್ಯಕೀಯ ಶಿಕ್ಷಣ ನಿರ್ದೇಶಾಲಯ ಆದೇಶಿಸಿತ್ತು. ಅದರಂತೆ, ಸಮಿತಿಯು ಶುಕ್ರವಾರ ದೂರುದಾರರನ್ನು ಕರೆದು ಅಗತ್ಯ ಮಾಹಿತಿ ಪಡೆದಿತ್ತು. ಶ್ರೀಕಾಂತ್ ವಿರುದ್ಧ ಕೇಳಿಬಂದಿರುವ ದೊಡ್ಡಮಟ್ಟದ ಅವ್ಯವಹಾರವನ್ನು ಮುಚ್ಚಿಹಾಕಲು ರಾಜಕೀಯ ಪ್ರಭಾವ ಬೀರಿ ವಿಶ್ವನಾಥ್ ಅವರನ್ನು ಉದ್ದೇಶಪೂರ್ವಕವಾಗಿ ವರ್ಗಾವಣೆ ಮಾಡಲಾಗಿದೆ. ದೂರಿನ ವಿವರ ಬೌರಿಂಗ್ ಸಂಸ್ಥೆ ಅಧೀನದ ಅಟಲ್ ಬಿಹಾರಿ ವಾಜಪೇಯಿ…
ತುಮಕೂರು: ನಾಳೆ ಅಯೋಧ್ಯೆ ರಾಮಮಂದಿರಲ್ಲಿ ಶ್ರೀರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ, ಅಯೋಧ್ಯೆ ರಾಮ ಮಂದಿರ ಉದ್ಘಾಟನೆ, ರಾಮ ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಈ ವೇಳೆಯಲ್ಲೇ ವಿವಿಧ ರಾಜ್ಯಗಳು ನಾಳೆ ಸರ್ಕಾರಿ ರಜೆ ಘೋಷಣೆ ಮಾಡಿವೆ. ಆದೇ ರೀತಿ ಕರ್ನಾಟಕದಲ್ಲೂ ನಾಳೆ ಸರ್ಕಾರಿ ರಜೆ ಘೋಷಣೆ ಮಾಡಬೇಕು ಎಂಬುದು ಹಲವರ ಒತ್ತಾಯವಾಗಿತ್ತು. ಆದ್ರೇ ನಾಳೆ ಕರ್ನಾಟಕದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡಲ್ಲ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಸ್ಪಷ್ಟ ಪಡಿಸಿದ್ದಾರೆ. ಇಂದು ತುಮಕೂರಿನಲ್ಲಿ ಕರ್ನಾಟಕ ರತ್ನ ಶತಾಯುಷಿ ಪರಮಪೂಜ್ಯ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ ಸ್ಮರಣಾರ್ಥ ನಿರ್ಮಿಸಿರುವ ಸ್ಮೃತಿ ವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಾಳೆ ನಾನು ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವಂತ ರಾಮ ಮಂದಿರವನ್ನು ಉದ್ಘಾಟನೆ ಮಾಡಲಿದ್ದೇನೆ. ಆ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದೇನೆ ಎಂದರು. ದೇಶದ ಹಲವು ರಾಜ್ಯಗಳಲ್ಲಿ ನಾಳೆ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಕರ್ನಾಟಕದಲ್ಲೂ ನಾಳೆ ಸರ್ಕಾರಿ ರಜೆ ಘೋಷಣೆ ಮಾಡ್ತೀರಾ…
ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ ಮೇಜರ್ ಸರ್ಜರಿ ಎನ್ನುವಂತೆ 57 ಪಿಡಿಒಗಳನ್ನು ವರ್ಗಾವಣೆ ( PDO Transfer ) ಮಾಡಿ ಆದೇಶ ಹೊರಡಿಸಿದೆ. ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ನಿರ್ದೇಶಕರು ಆದೇಶ ಹೊರಡಿಸಿದ್ದು, ತುಮಕೂರಿನ ಮಸ್ಕಲ್ ಗ್ರಾಮ ಪಂಚಾಯ್ತಿ ಪಿಡಿಒ ಅಧಿಕಾರಿ ಮಾರುತಿ ಬಿ.ಹೆಚ್ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಹೊಸಹಳ್ಳಿ ಗ್ರಾಮ ಪಂಚಾಯ್ತಿಗೆ ವರ್ಗಾವಣೆ ಮಾಡಿದ್ದಾರೆ. ಇನ್ನೂ ನೆಲಮಂಗಲದ ಅರೆಬೊಮ್ಮನಹಳ್ಳಿ ಪಿಡಿಒ ಸೌಮ್ಯ ವಿಎಸ್ ಅವರನ್ನು ದೊಡ್ಡಬಳ್ಳಾಪುರ ತಾಲೂಕು ಪಂಚಾಯ್ತಿಯಲ್ಲಿನ ವ್ಯವಸ್ಥಾಪಕರ ಹುದ್ದೆಗೆ ವರ್ಗಾವಣೆ ಮಾಡಿದ್ರೇ, ಕೆಪರಾಜಯ್ಯ ಅವರನ್ನು ಬೆಟ್ಟಕೋಟೆ ಗ್ರಾಮಪಂಚಾಯ್ತಿಗೆ ವರ್ಗಾವಣೆ ಮಾಡಲಾಗಿದೆ. ವೀಣಾ ಲ ಹಡಪದ ಅವರನ್ನು ಚನ್ನರಾಯಪಟ್ಟಣದ ಪಿಡಿಒ, ವಿಜಯ ಕುಮಾರಿ ಹೆಚ್.ಆರ್ ಅವರನ್ನು ಮಾರೇನಹಳ್ಳಿ ಗ್ರಾಮ ಪಂಚಾಯ್ತಿಗೆ, ಅಶ್ವತ್ಥನಾರಾಯಣ ಸ್ವಾಮಿ.ಆರ್ ಅವರನ್ನು ಪೋಶೆಟ್ಟಿಹಳ್ಳಿಯ ಪಿಡಿಓ ಆಗಿ ವರ್ಗಾವಣೆ ಮಾಡಲಾಗಿದೆ. ಹೀಗಿದೆ 57 ಪಿಡಿಒ ವರ್ಗಾವಣೆಯ ಪಟ್ಟಿ https://kannadanewsnow.com/kannada/rashmika-mandanna-arrested-for-making-deep-fake-video/ https://kannadanewsnow.com/kannada/cm-siddaramaiah-writes-to-centre-to-confer-bharat-ratna-on-siddaganga-swamiji/
ತುಮಕೂರು: ಶಿವಕುಮಾರಮಹಾಶಿವಯೋಗಿ ಶ್ರೀಗಳು ಬಸವಾದಿ ಶರಣರ ಆಶಯಗಳನ್ನು ಆಚರಿಸಲು ಬದುಕನ್ನು ಮುಡಿಪಾಗಿಟ್ಟು ನುಡಿದಂತೆ ನಡೆದ ಮಹಾಯೋಗಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಕರ್ನಾಟಕ ರತ್ನ ಶತಾಯುಷಿ ಪರಮಪೂಜ್ಯ ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ ಸ್ಮರಣಾರ್ಥ ನಿರ್ಮಿಸಿರುವ “ಸ್ಮೃತಿ ವನ” ವನ್ನು ಉದ್ಘಾಟಿಸಿ, ಶ್ರೀಗಳ 5 ನೇ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಶ್ರೀ ಶ್ರೀ ಶಿವಕುಮಾರಮಹಾಶಿವಯೋಗಿಗಳಿಗೆ ಭಾರತ ರತ್ನ ನೀಡಬೇಕು. ಇದಕ್ಕಾಗಿ ಕೇಂದ್ರಕ್ಕೆ ಪತ್ರ ಬರೆಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು. 12 ನೇ ಶತಮಾನದಲ್ಲೇ ಬಸವಾದಿ ಶರಣರು ಜಾತಿ ರಹಿತ, ವರ್ಗ ರಹಿತ ಸಮಾನತಾ ಸಮಾಜ ನಿರ್ಮಾಣಕ್ಕಾಗಿ ಕ್ರಾಂತಿಯನ್ನೇ ಮಾಡಿದ್ದರು. ಮನುಷ್ಯ ಕುಲ ಇರುವವರೆಗೂ ಶಾಶ್ವತ ಆಗಿ ಉಳಿಯುವ ಸಂದೇಶ ಮತ್ತು ಮೌಲ್ಯಗಳನ್ನು ಬಿಟ್ಟು ಹೋಗಿದ್ದಾರೆ. ಈ ಮೌಲ್ಯಗಳನ್ನು ಪಾಲಿಸುವುದೇ ಬಸವಾದಿ ಶರಣರಿಗೆ ಸಲ್ಲಿಸುವ ಗೌರವ ಎಂದರು. ಭಾರತ ಸಂವಿಧಾನದ ಆಶಯ ಮತ್ತು ಬಸವಾದಿ ಶರಣರ ಹೋರಾಟದ ಆಶಯ ಒಂದೇ ಆಗಿದೆ.…
ಬೆಂಗಳೂರು: ಅಲ್ಲಿ ನೋಡಲು ರಾಮ, ಇಲ್ಲಿ ನೋಡಲು ರಾಮ ಎಂಬಂತೆ ಎಲ್ಲೆಲ್ಲಿ ನೋಡಿದರೂ ರಾಮ ಜಪವೇ. ನಾಳೆ ಪ್ರತಿಯೊಬ್ಬರ ಕನಸು ಅಯೋಧ್ಯಾ ದರ್ಶನ. ಆದರೆ ದೂರದ ಅಯೋಧ್ಯೆಗೆ ಎಲ್ಲರಿಗೂ ಹೋಗಲಾಗದು. ಅದಕ್ಕಾಗಿ ಬೆಂಗಳೂರಿನ ಗಿರಿನಗರದ ವಾಸವಿ ದೇವಸ್ಥಾನದಲ್ಲಿ ಅಯೋಧ್ಯೆಯ ರಾಮಮಂದಿರದ ಸುಂದರ ಕಲಾಕೃತಿಯಂತಿರುವ ಪ್ರತಿಕೃತಿಯನ್ನು ಅನಾವರಣ ಮಾಡಲಾಗುತ್ತಿದೆ. ರಾಮಭಕ್ತರು ಇಲ್ಲಿಯೇ ರಾಮಮಂದಿರದ ಭವ್ಯತೆ ದರ್ಶಿಸಿ, ರಾಮನನ್ನು ಕಣ್ತುಂಬಿಸಿಕೊಂಡು ಧನ್ಯರಾಗಬಹುದು. ಜ.22ರ ನಾಳೆ ರಾಮನಿಗೆ ಅಭಿಷೇಕ, ಪೂಜೆ, ಭಜನೆಗಳು ಇಡೀ ದಿನ ನಡೆಯಲಿದ್ದು, ಇದರ ನೇರ ಪ್ರಸಾರದ ಆಯೋಜನೆಯಾಗಿದೆ. ಸಾರ್ವಜನಿಕರು ಈ ದಿವ್ಯ ಸಂದರ್ಭದಲ್ಲಿ ದರ್ಶನಕ್ಕೆ ಆಗಮಿಸಬಹುದು. ಈ ಅಯೋಧ್ಯ ರಾಮಮಂದಿರದ ಪ್ರತಿಕೃತಿಯನ್ನು ವಾಸವಿ ದೇಗುಲದ ಅಳತೆಗೆ ತಕ್ಕಂತೆ ರೂಪಿಸಲಾಗಿದೆ. 24 ಅಡಿ ಉದ್ದ, 18 ಅಡಿ ಅಗಲದ ರಾಮಮಂದಿರದ ಗೋಪುರ 16 ಅಡಿಯಿದೆ. ಬಸವನಗುಡಿಯ ಶಾಸಕ ರವಿ ಸುಬ್ರಹ್ಮಣ್ಯ ಅವರು ಉದ್ಘಾಟನೆ ಮಾಡಲಿದ್ದಾರೆ. ಜ. 22 ರಂದು ಈ ನೂತನ ಅಯೋಧ್ಯೆ ರಾಮಮಂದಿರದ ಪ್ರತಿರೂಪವನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಇದನ್ನು ಜ. 22 ರಿಂದ 30ರವರೆಗೆ, ಬೆಳಗ್ಗಿನಿಂದ…
ಬೆಂಗಳೂರು: ನಾಳೆ ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾ ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಈ ಸುಸಂದರ್ಭದಲ್ಲಿ ಭಾಗಿಯಾಗೋದಕ್ಕಾಗಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಕುಟುಂಬ ಸಮೇತರಾಗಿ ತೆರಳಿದ್ದಾರೆ. ಅಯೋಧ್ಯೆಯ ರಾಮ ಮಂದಿರದಲ್ಲಿ ನಾಳೆ ನಡೆಯಲಿರುವ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು, ಅವರ ಧರ್ಮಪತ್ನಿ ಚನ್ನಮ್ಮ ಅಮ್ಮನವರು, ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹಾಗೂ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಇಂದು ವಿಶೇಷ ವಿಮಾನದಲ್ಲಿ ಅಯೋಧ್ಯೆಗೆ ಪ್ರಯಾಣ ಬೆಳೆಸಿದರು. ನಾಳೆ ಅಯೋಧ್ಯೆಯಲ್ಲಿನ ಶ್ರೀರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮ, ಶ್ರೀರಾಮಲಲ್ಲಾ ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ಕುಟುಂಬ ಭಾಗಿಯಾಗಲಿದೆ. https://kannadanewsnow.com/kannada/rashmika-mandanna-arrested-for-making-deep-fake-video/ https://kannadanewsnow.com/kannada/%e0%b2%ae%e0%b2%82%e0%b2%97%e0%b2%b3%e0%b3%82%e0%b2%b0%e0%b2%bf%e0%b2%a8%e0%b2%b2%e0%b3%8d%e0%b2%b2%e0%b2%bf-%e0%b2%ae%e0%b3%8a%e0%b2%a6%e0%b2%b2%e0%b2%ac%e0%b2%be%e0%b2%b0%e0%b2%bf%e0%b2%97%e0%b3%86/
ಬೆಂಗಳೂರು: ನಗರದಲ್ಲಿ ಮಾರಕಾಸ್ತ್ರಗಳೊಂದಿಗೆ ಓಡಾಡುತ್ತಿದ್ದಂತ ಸುಪಾರಿ ಕಿಲ್ಲರ್ ಅನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ ಅವನ ಬಳಿಯಲ್ಲಿದ್ದಂತ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ನಗರದ ಪುಟ್ಟೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಪುಟ್ಟೇನಹಳ್ಳಿ ಕೆರೆಯ ಬಳಿ ಮಾರಕಾಸ್ತ್ರವನ್ನು ಇಟ್ಟುಕೊಂಡು ಅನುಮಾನಾಸ್ಪದವಾಗಿ ಸುಫಾರಿ ಕಿಲ್ಲರ್ ಒಬ್ಬನನ್ನು ಸಿಸಿಬಿಯ ಸಂಘಟಿತ ಅಪರಾಧ ದಳದ ಪಶ್ಚಿಮ ವಿಭಾಗದ ಅಧಿಕಾರಿ ಹಾಗೂ ಸಿಬ್ಬಂದಿಗಳ ತಂಡವು ಬಂಧಿಸಲಾಗಿದೆ. ಆತನ ಬಳಿ ಇದ್ದಂತ ಡ್ರಾಗರ್ ತರಹದ ಮಾರಕಾಸ್ತ್ರವನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಸುಫಾರಿ ಕಿಲ್ಲರ್ ಹುಳಿಮಾವು ಮತ್ತು ಬನ್ನೇರುಘಟ್ಟ ಪೊಲೀಸ್ ಠಾಣಾ ಸರಹದ್ದಿನಲ್ಲಿ ಇಬ್ಬರು ವ್ಯಕ್ತಿಗಳು ಸುಪಾರಿ ಪಡೆದುಕೊಂಡು ಕೊಲೆ ಮಾಡಿದ್ದರು. 2 ಕೊಲೆಯತ್ನ ಪ್ರಕರಣಗಳು ಸಹ ದಾಖಲಾಗಿತ್ತು. ಬಂದಿತ ಆರೋಪಿ ಕಿಡ್ನಾಪ್ ಪ್ರಕರಣವೊಂದರಲ್ಲಿ ಬಂಧಿಸಲು ಹೋಗಿದ್ದ ಪೊಲೀಸರನ್ನೇ ಕೊಲೆ ಮಾಡಲು ಪ್ರಯತ್ನಿಸಿದ್ದರು, ಆಗ ಪೊಲೀಸರು ಈತನ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ. https://kannadanewsnow.com/kannada/we-dont-need-to-learn-about-religion-devotion-from-others-dk-shivakumar-to-bjp-demands-leave-tomorrow/ https://kannadanewsnow.com/kannada/karnataka-government-holiday-to-be-declared-tomorrow-heres-what-deputy-cm-dk-shivakumar-said/
ಬೆಂಗಳೂರು: ಕೇಂದ್ರಕ್ಕೆ ಹಣದ ಹಾಲು ಕರೆಯುವ ಎರಡನೇ ಅತಿದೊಡ್ಡ ರಾಜ್ಯ ಕರ್ನಾಟಕ. ಆದರೆ, ಇದೀಗ ನಮ್ಮ ಪಾಲಿನ ನ್ಯಾಯಯುತ ಹಣಕ್ಕೂ ಕೇಂದ್ರ ಸರ್ಕಾರದ ಎದುರು ಕೈಕಟ್ಟಿ ನಿಲ್ಲುವಂತಹ ಸ್ಥಿತಿ ಎದುರಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ ಹೊರಹಾಕಿದ್ದಾರೆ. ತಾಜ್ ವೆಸ್ಟ್‌ಎಂಡ್ ಹೋಟೆಲ್‌ನಲ್ಲಿ ಶನಿವಾರ ಎಂಎಸ್ ರಾಮಯ್ಯ ವಿಶ್ವವಿದ್ಯಾಲಯ ಆಯೋಜಿಸಿದ್ದ “ಹಣಕಾಸಿನ ಫೆಡರಲಿಸಂ: ಹದಿನಾರನೇ ಹಣಕಾಸು ಆಯೋಗದ ಮುಂದಿರುವ ಸವಾಲುಗಳು” ಎಂಬ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. “ಯುಪಿಎ ಸರ್ಕಾರದ ಅವಧಿಯಲ್ಲಿ ಜಾರಿಯಾದ 14ನೇ ಹಣಕಾಸು ಆಯೋಗದ ಮುಖ್ಯಸ್ಥರಾಗಿದ್ದ ವೈ.ಬಿ. ರೆಡ್ಡಿ ಕರ್ನಾಟದ ಆದಾಯದಲ್ಲಿ ಶೇ.42 ರಷ್ಟು ಹಿಂತಿರುಗಿಸಲು ಸೂಚಿತ್ತು. ಈ ವೇಳೆ ಕರ್ನಾಟಕಕ್ಕೆ ಶೇ.33 ರಿಂದ ಶೇ.34 ರಷ್ಟು ಹಣ ಲಭ್ಯವಾಗಿತ್ತು. ಆದರೆ, ಕಳೆದ 10 ವರ್ಷದ ಅವಧಿಯಲ್ಲಿ ಈ ಪ್ರಮಾಣ ಶೇ.28ಕ್ಕೆ ಇಳಿದಿದೆ ಪರಿಣಾಮ ರಾಜ್ಯ ಸಂಕಷ್ಟಕ್ಕೆ ಗುರಿಯಾಗಿದೆ” ಎಂದರು. ಮುಂದುವರೆದು, “ಕರ್ನಾಟಕಕ್ಕೆ ನಷ್ಟದ ಪಾಲನ್ನು ತುಂಬಿಕೊಡಿ ಎಂದು ಸ್ವತಃ ಹಣಕಾಸು ಆಯೋಗವೇ ಹೇಳಿದರೂ ಕೇಂದ್ರ ಸರ್ಕಾರ…
ಬೆಂಗಳೂರು: ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಯ ಕಾರ್ಯಕ್ರಮ ನಾಳೆ ನಡೆಯಲಿದೆ. ಈ ಸಂದರ್ಭದಲ್ಲಿ ಭಕ್ತಿ ಪರವಶತೆಯಲ್ಲಿ ಮುಳುಗೋದಕ್ಕೆ ನಾಳೆ ಸರ್ಕಾರಿ ರಜೆ ನೀಡುವಂತೆ ಸಿಎಂ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದು ವಿಪಕ್ಷ ನಾಯಕ ಆರ್.ಅಶೋಕ್ ಒತ್ತಾಯಿಸಿದ್ದಾರೆ. ಈ ಕುರಿತಂತೆ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿರುವಂತ ಅವರು, ಆ ಪತ್ರದಲ್ಲಿ 500 ವರ್ಷಗಳ ಹೋರಾಟ, ತ್ಯಾಗದ ಫಲವಾಗಿ ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣವಾಗಿ ಜನವರಿ 22 ರಂದು ವಿಗ್ರಹ ಪ್ರಾಣ ಪ್ರತಿಷ್ಠಾಪನೆ ನಡೆಯುತ್ತಿದೆ. ಈ ದಿನದಂದು ಪ್ರತಿ ಮನೆಗಳಲ್ಲಿ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ದೀಪ ಬೆಳಗುವುದು, ಭಜನೆ, ಶ್ರೀರಾಮನ ಆರಾಧನೆ ನಡೆಯುತ್ತಿದೆ. ಇಡೀ ರಾಜ್ಯದಲ್ಲಿ ಸಂಭ್ರಮ, ಸಡಗರದ ಆಚರಣೆ ನಡೆಯಲಿದೆ ಎಂದಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಕೂಡ ವಿಗ್ರಹ ಪ್ರಾಣ ಪ್ರತಿಷ್ಠಾಪನೆಯಲ್ಲಿ ಭಾಗವಹಿಸಿದ್ದು, ಈಗಾಗಲೇ ಕೇಂದ್ರ ಸರ್ಕಾರದ ಕಚೇರಿಗಳಿಗೆ ಅರ್ಧ ದಿನದ ರಜೆ ಘೋಷಿಸಿದ್ದಾರೆ. ರಾಜ್ಯದಲ್ಲೂ ದೊಡ್ಡ ಮಟ್ಟದ ಆಚರಣೆ ನಡೆಯುತ್ತಿದ್ದು, ಆ ದಿನ ಕೆಲಸ ಮಾಡುವುದರಿಂದ ಆಚರಣೆಗೆ…
ಬೆಂಗಳೂರು : “ನಾವು ಪೂಜೆ, ಪುನಸ್ಕಾರ ಮಾಡಿಕೊಂಡು ನಮ್ಮ ಸಂಸ್ಕೃತಿ ಪಾಲನೆ ಮಾಡಿಕೊಂಡು ಬಂದಿದ್ದೇವೆ. ಧರ್ಮ, ಭಕ್ತಿ ಬಗ್ಗೆ ಬೇರೆಯವರಿಂದ ಕಲಿಯುವ ಅಗತ್ಯ ನಮಗಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, “ಭಕ್ತಿ, ಧರ್ಮ, ಗೌರವವನ್ನು ನಾವು ಪ್ರಚಾರಕ್ಕೆ ಬಳಸುವುದಿಲ್ಲ. ಪ್ರಾರ್ಥನೆಗಳಿಂದ ಫಲ ಸಿಗುತ್ತದೆ ಎಂಬುದು ನಮ್ಮ ನಂಬಿಕೆ. ಹೀಗಾಗಿ ಪ್ರಾರ್ಥನೆ ಮಾಡಿಕೊಳ್ಳಲು ಹೇಳಿದ್ದೇವೆ. ಬೇರೆಯವರು ಹೇಳುವ ಮುನ್ನವೇ ನಮ್ಮ ಸರ್ಕಾರ ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ವಿಶೇಷ ಪೂಜೆಗೆ ಸೂಚನೆ ನೀಡಿದೆ. ದೇವಾಲಯಗಳಲ್ಲಿ ಯಾವ ಪೂಜೆ, ಪುನಸ್ಕಾರ ಮಾಡಬೇಕೋ ಅದನ್ನು ಮಾಡಲಾಗುವುದು. ಬೇರೆಯವರಿಂದ ನಾವು ಹೇಳಿಸಿಕೊಳ್ಳುವ ಪ್ರಮೇಯವೇ ಇಲ್ಲ. ಸಿದ್ದರಾಮಯ್ಯ ಅವರ ಹೆಸರಲ್ಲಿ ರಾಮ ಇದ್ದಾನೆ, ನನ್ನ ಹೆಸರಿನಲ್ಲಿ ಶಿವ ಇದ್ದಾನೆ. ಧರ್ಮ, ಸಂಸ್ಕೃತಿ ಪಾಲನೆ ವಿಚಾರವಾಗಿ ನಮಗೆ ಯಾರೂ ಹೇಳಿಕೊಡುವುದೂ ಬೇಡ, ಒತ್ತಡ ಹಾಕುವುದೂ ಬೇಡ. ನಮ್ಮ ಕರ್ತವ್ಯ ನಾವು ಮಾಡುತ್ತೇವೆ. ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕಾರಣ ಮಾಡಬಾರದು” ಎಂದು…