Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಬಹುರಾಜ್ಯಗಳಿಗೆ ವಿಸ್ತರಿಸಿರುವ ಬೃಹತ್ ಮೊತ್ತದ ವಾಲ್ಮೀಕಿ ನಿಗಮದ ಹಗರಣದ ಸಂಬಂಧ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕು ಹಾಗೂ ಇದರ ತನಿಖೆಯನ್ನು ಸಿಬಿಐ ನಡೆಸಬೇಕು ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಆಗ್ರಹಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಇಲಾಖೆ ವ್ಯಾಪ್ತಿಯಲ್ಲಿ ನಡೆದ ಬಹುದೊಡ್ಡ ಹಗರಣ ಇದಾಗಿದೆ. 100ಕ್ಕೆ ನೂರರಷ್ಟು ಹಣ ವರ್ಗಾಯಿಸಿ ಲೂಟಿ ಮಾಡಿದ ಹಗರಣ. ಈ ಹಗರಣದಲ್ಲಿ ಸಿಎಂ ನೈತಿಕತೆ ಪ್ರಶ್ನೆ ಬರುವ ಕಾರಣ ಹೊಣೆ ಹೊರಲು ಕೇಳಿದ್ದೆವು. ಆದರೆ, ಅವರು ವಿಷಯಾಂತರ ಮಾಡುತ್ತಾರೆ ಎಂದು ಆಕ್ಷೇಪಿಸಿದರು. ಈ ಸಂಬಂಧ ಇವತ್ತು ಚಳವಳಿ ನಡೆಸಿ ಸಿಎಂ ರಾಜೀನಾಮೆಗೆ ಆಗ್ರಹಿಸಿದ್ದೇವೆ ಎಂದರು. ಸರಕಾರದ ತನಿಖೆಯ ಬಗ್ಗೆ ನಮಗೆ ಸಂಶಯ ಇದೆ. ಇದು ಬಹುರಾಜ್ಯಗಳಿಗೆ ಸಂಬಂಧಿಸಿದ ಹಗರಣ. ಆಪಾದಿತರು ಆಂಧ್ರ, ತೆಲಂಗಾಣಕ್ಕೂ ಸೇರಿದ್ದಾರೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯವು ಸಿಬಿಐ ತನಿಖೆ ಕೋರಿ ಪತ್ರ…
ಕೋಲಾರ: ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಂಸದ ಡಿ.ಕೆ ಸುರೇಶ್ ಅವರನ್ನು ಸೋಲಿಸಿದ್ದೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಎಂಬುದಾಗಿ ವಿಪಕ್ಷ ನಾಯಕ ಆರ್.ಅಶೋಕ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಲೋಕಸಭಾ ಚುನಾವಣೆಯಲ್ಲಿ ಪರಮೇಶ್ವರ್ ರೀತಿಯಲ್ಲೇ ಡಿ.ಕೆ ಸುರೇಶ್ ಅವರನ್ನು ಸಿಎಂ ಸಿದ್ಧರಾಮಯ್ಯ ಸೋಲಿಸಿದ್ದಾರೆ ಎಂಬುದಾಗಿ ಗಂಭೀರ್ ಆರೋಪ ಮಾಡಿದರು. ಡಿ.ಕೆ ಶಿವಕುಮಾರ್ ಅವರು ಸಿಎಂ ಸ್ಥಾನ ಕೇಳ್ತಾರೆ ಎಂದೇ ಡಿ.ಕೆ ಸುರೇಶ್ ಅವರನ್ನು ಸೋಲಿಸಲಾಗಿದೆ. ಆದರೇ ಡಿ.ಕೆ ಶಿವಕುಮಾರ್ ಚದುರಂಗದಾಟ ಶುರು ಮಾಡಿದ್ದಾರೆ. ಸ್ವಾಮೀಜಿಗಳ ಮೂಲಕ ಸಿಎಂ ಸ್ಥಾನಕ್ಕೆ ಬೇಡಿಕೆ ಇಡಿಸಿದ್ದಾರೆ ಎಂಬುದಾಗಿ ತಿಳಿಸಿದರು. https://kannadanewsnow.com/kannada/haveri-accident-case-cm-siddaramaiah-announces-rs-2-lakh-ex-gratia-for-kin-of-deceased/ https://kannadanewsnow.com/kannada/note-temporary-ban-on-movement-of-heavy-vehicles-at-agumbe-ghat-till-september-15/
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಕೋಟ್ಯಂತರ ರೂಪಾಯಿ ಮೊತ್ತವನ್ನು ಲೋಕಸಭಾ ಚುನಾವಣೆಗೆ ಬಳಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದರು. ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಕಾರ್ಯಕ್ರಮದಲ್ಲಿ ಅವರು ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರನ್ನು ಉದ್ದೇಶಿಸಿ ಮಾತನಾಡಿದರು. ವಿವಿಧ ಕಂಪೆನಿಗಳಿಗೆ ಹಣ ವರ್ಗಾಯಿಸಿ, ಅಲ್ಲಿಂದ ಹಣ ಡ್ರಾ ಮಾಡಿ, ಚುನಾವಣೆಗೆ ಬಳಸಿದ್ದು, ಹಣ ದುರುಪಯೋಗ ಆಗಿದೆ ಎಂದು ಆರೋಪಿಸಿದರು. ಬಾರ್‍ನಲ್ಲಿ ಕುಳಿತು ಕುಡಿದ ಬಿಲ್ ಅನ್ನು ವಾಲ್ಮೀಕಿ ನಿಗಮದಿಂದ ಪಡೆದು ದುರುಪಯೋಗ ಮಾಡಿದ್ದಾರೆ. ಯಡಿಯೂರಪ್ಪನವರ ನೇತೃತ್ವದ ಬಿಜೆಪಿ ಸರಕಾರ ಇದ್ದಾಗ ಅನೇಕ ಅಭಿವೃದ್ಧಿ ನಿಗಮಗಳನ್ನು ಮಾಡಿದ್ದಾರೆ. ಅದೇರೀತಿ ವಾಲ್ಮೀಕಿ ಅಭಿವೃದ್ಧಿ ನಿಗಮ ಸ್ಥಾಪಿಸಿ, ನೂರಾರು ಕೋಟಿ ರೂಪಾಯಿ ಕೊಟ್ಟು ವಾಲ್ಮೀಕಿ ಸಮುದಾಯ, ಬಡ ಮಕ್ಕಳಿಗೆ ನ್ಯಾಯ ದೊರಕಿಸಲು ಶ್ರಮಿಸಿದ್ದರು ಎಂದರು. ಬಿಜೆಪಿ ತೀವ್ರ ಹೋರಾಟದ ಬಳಿಕ ಸಚಿವ ನಾಗೇಂದ್ರ ರಾಜೀನಾಮೆ ಕೊಟ್ಟಿದ್ದಾರೆ. ಆದರೆ, ಎಸ್‍ಐಟಿ ಇಲ್ಲಿನವರೆಗೆ ನಾಗೇಂದ್ರರನ್ನು ತನಿಖೆಗೆ ಕರೆದಿಲ್ಲ ಎಂದು ಆಕ್ಷೇಪಿಸಿದರು. ಇದು ಕೇವಲ…
ನವದೆಹಲಿ: ಕಾಂಗ್ರೆಸ್ ಸಂಸದೆ ಫುಲೋ ದೇವಿ ನೇತಮ್ ಅವರು ಶುಕ್ರವಾರ ಸಂಸತ್ತಿನಲ್ಲಿ ನಡೆದ ಪ್ರತಿಭಟನೆಯ ಸಮಯದಲ್ಲಿ ಮೂರ್ಛೆ ಹೋದರು ಮತ್ತು ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ನೀಟ್ ವಿಷಯದ ಬಗ್ಗೆ ಅವರು ಸದನದ ಬಾವಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಅವರಿಗೆ ತಲೆತಿರುಗಲು ಪ್ರಾರಂಭಿಸಿತು. ಆಕೆಯನ್ನು ದೆಹಲಿಯ ಆರ್ಎಂಎಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. https://kannadanewsnow.com/kannada/haveri-accident-case-cm-siddaramaiah-announces-rs-2-lakh-ex-gratia-for-kin-of-deceased/ https://kannadanewsnow.com/kannada/note-temporary-ban-on-movement-of-heavy-vehicles-at-agumbe-ghat-till-september-15/
ಬೆಂಗಳೂರು: ವಿದ್ಯುತ್ ನಿರ್ವಹಣ ಕಾಮಗಾರಿ ಹಿನ್ನಲೆಯಲ್ಲಿ ನಾಳೆ ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ( BESCOM ) ಮನವಿ ಮಾಡಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 29.06.2024 (ಶನಿವಾರ) ಬೆಳಿಗ್ಗೆ 10:00 ಗಂಟೆಯಿಂದ ಮದ್ಯಾಹ್ನ 13:00 ಗಂಟೆಯವರೆಗೆ “220/66/11ಕೆ.ವಿ ಐ.ಟಿ.ಐ’ ಸ್ಟೇಷನ್” ನಲ್ಲಿ 31.5 ಎಮ್.ವಿ.ಎ ಶಕ್ತಿ ಪರಿವರ್ತಕ -1 ರ ನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು ಎಂದಿದೆ. ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut “ಜೈ ಭೂವನೇಶ್ವರ ಲೇಔಟ್, ದೀಪಾ ಆಸ್ಪತ್ರೆ, ವಿನಾಯಕ ಲೇಔಟ್, ಅಜಿತ್ ಲೇಔಟ್, ಚಕ್ಕಬಸವನಪುರ, ಡೀಸೆಲ್ ಲೋಕೊ ಶೆಡ್, ಜಸ್ಟೀಸ್ ಬೀಮಯ್ಯ ಲೇಔಟ್, ಆರ್ ಆರ್ ಟೆಂಪಲ್ ರೋಡ, ಟೆಂಟ್ ರೋq, ಕಾವೇರಿ ನಗರ, ಐಟಿಐ ಎಸ್ಟೇಟ್, ಸಿಂಗಾಯನಪಾಳ್ಯ, ಶ್ರೀಶೈಲ ಡೌನ್, ಭಟ್ಟರಹಳ್ಳಿ, ಮೇಡಹಳ್ಳಿ, ಟಿಸಿ ಪಾಳ್ಯ, ಆರ್‌ಎಂಎಸ್ ಕಾಲೋನಿ, ಕೆಆರ್ ಪುರಂ,…
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಜೈಲುಪಾಲಾಗಿದೆ. ಅವರ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ತರಾವರಿ ಕಾಮೆಂಟ್ ಗಳು ತೋರಿ ಬರುತ್ತಿವೆ. ಹೀಗಾಗಿ ದಯವಿಟ್ಟು ಕೆಟ್ಟದಾಗಿ ನಟ ದರ್ಶನ್ ಬಗ್ಗೆ ಕಾಮೆಂಟ್ ಮಾಡದಂತೆ ನಟಿ ಸೋನುಗೌಡ ಮನವಿ ಮಾಡಿದ್ದಾರೆ. ಈ ಬಗ್ಗೆ ರೀಲ್ಸ್ ಮಾಡಿರುವಂತ ಅವರು ದಯವಿಟ್ಟು ನಟ ದರ್ಶನ್ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಮಾಡಬೇಡಿ. ದರ್ಶನ್ ಬಗ್ಗೆ ಮಾತಾಡುವಷ್ಟು ದೊಡ್ಡವಳು ನಾನು ಅಲ್ಲ ಎಂಬುದಾಗಿ ರೀಲ್ಸ್ ಮಾಡಿ ದರ್ಶನ್ ಕುಟುಂಬಕ್ಕೆ ಸೋನುಗೌಡ ಧೈರ್ಯ ಹೇಳಿದ್ದಾಳೆ. ಇನ್ನೂ ತಪ್ಪು ಮಾಡಿದವರಿಗೆ ಶಿಕ್ಷೆಯಾಗುತ್ತದೆ. ಕಾನೂನು ತೀರ್ಪು ಬರುವವರೆಗೂ ಕಾಯಿರಿ. ದಯವಿಟ್ಟು ನಟ ದರ್ಶನ್ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಮಾಡಬೇಡಿ ಎಂಬುದಾಗಿ ಮನವಿ ಮಾಡಿದ್ದಾರೆ. https://kannadanewsnow.com/kannada/haveri-accident-case-cm-siddaramaiah-announces-rs-2-lakh-ex-gratia-for-kin-of-deceased/ https://kannadanewsnow.com/kannada/note-temporary-ban-on-movement-of-heavy-vehicles-at-agumbe-ghat-till-september-15/
ಶಿವಮೊಗ್ಗ : ಜಿಲ್ಲೆಯ ಜನರ ಸಮಸ್ಯೆಗಳಿಗೆ ತಕ್ಷಣದ ಪರಿಹಾರ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಸರ್ಕಾರ ಉತ್ಸುಕವಾಗಿದ್ದು, ರಾಜ್ಯದ ಮಾನ್ಯ ಮುಖ್ಯಮಂತ್ರಿಗಳ ಮಾರ್ಗದರ್ಶನ ಹಾಗೂ ಸಲಹೆಯಂತೆ ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ನಗರದ ಕುವೆಂಪು ರಂಗಮಂದಿರದಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿಸಿರುವುದಾಗಿ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ಅವರು ಹೇಳಿದರು. ಅವರು ಇಂದು ನಗರದ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತವು ಆಯೋಜಿಸಲಾಗಿದ್ದ ಜನ ಸ್ಪಂದನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜನಸ್ಪಂದನ ಕಾರ್ಯಕ್ರಮದಲ್ಲಿ ಆಲಿಸುವ ಜನರ ಸಮಸ್ಯೆಗಳಿಗೆ ಸರ್ಕಾರ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿ, ತಕ್ಷಣದ ಪರಿಹಾರ ಕ್ರಮ ಕೈಗೊಳ್ಳಲಿದ್ದಾರೆ. ಜನಪರವಾಗಿರುವ ಈ ಕಾರ್ಯಕ್ರಮ ಜನಸ್ನೇಹಿಯಾಗಿದೆ ಎಂದವರು ನುಡಿದರು. ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸುವಂತೆ ಸೂಚಿಸಿದ ಅವರು ಇಲಾಖೆಗಳು ಜನಸ್ನೇಹಿಯಾಗಿರಬೇಕು ಎಂದರು. ಕೆಲವು ಜಟಿಲವಾದ ಹಾಗೂ ಇತ್ಯರ್ಥವಾಗದ ಸಮಸ್ಯೆಗಳಿದ್ದಲ್ಲಿ ಇಲಾಖೆಯ ಹಿರಿಯ…
ಕೋಲಾರ: ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಭಾಗಿಯಾಗಿದ್ದು, ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿರುದ್ಧ ಬಿಜೆಪಿಯಿಂದ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಸಚಿವ ಬಿ.ನಾಗೇಂದ್ರ 20% ತಿಂದಿದ್ದಾರೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ 80% ತಿಂದಿದ್ದಾರೆ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಈ ಕುರಿತು ಸದನದಲ್ಲೂ ಆಗ್ರಹಿಸುತ್ತೇವೆ. ಸಿಎಂ ರಾಜೀನಾಮೆ ನೀಡುವವರೆಗೂ ಹೋರಾಡುತ್ತೇವೆ ಎಂದು ತಿಳಿಸಿದರು. ಕಾಂಗ್ರೆಸ್ ಸರ್ಕಾರ ಉಚಿತಗಳ ಹೆಸರಲ್ಲಿ ಬೆಲೆ ಏರಿಕೆ ಮಾಡಿದೆ. ಹಾಲಿನ ಬೆಲೆ ಏರಿಕೆ ಮಾಡಿದ್ದು ಏಕೆ ಎಂದು ಪ್ರಶ್ನೆ ಮಾಡಿದರೆ ಹೆಚ್ಚು ಹಾಲು ನೀಡಿದ್ದೇವೆ ಎನ್ನುತ್ತಾರೆ. ಆದರೆ ಹೆಚ್ಚಾದ ಹಣವನ್ನು ರೈತರಿಗೆ ಕೊಡುವುದಿಲ್ಲ. ಬಡವರು ಕೂಲಿ ಮಾಡಿ ದುಡಿದು ಮದ್ಯ ಸೇವಿಸಲು ಹೋದರೆ ಅದಕ್ಕೂ ದರ ಏರಿಕೆ ಮಾಡಿದ್ದಾರೆ. ಶ್ರೀಮಂತರು ಕುಡಿಯುವ ಮದ್ಯದ ದರವನ್ನು ಇಳಿಕೆ ಮಾಡಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ…
ಬೆಂಗಳೂರು: ಬೆಂಗಳೂರಿನಲ್ಲಿ ಡೆಂಗ್ಯೂ ರೋಗ ಹಾವಳಿ ಮಿತಿ ಮೀರಿ ಹೆಚ್ಚಾಗುತ್ತಿದ್ದು ಬಿಬಿಎಂಪಿ ರೋಗವನ್ನು ನಿಯಂತ್ರಿಸುವಲ್ಲಿ ವಿಫಲವಾಗಿದೆ, ತನ್ನ ಕೆಲಸ ಮಾಡಲು ಕೈಲಾಗದೆ ಜನರೆಲ್ಲಾ ಸೇರಿ ರೋಗ ಕಡಿಮೆ ಮಾಡಬೇಕು ಎಂದು ಕಾರಣ ಕೊಡುತ್ತಿದೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಆಕ್ರೋಶ ವ್ಯಕ್ತಪಡಿಸಿದರು. ನಗರದ ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ಆಮ್ ಆದ್ಮಿ ಪಾರ್ಟಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು, ಈ ಸಂದರ್ಭದಲ್ಲಿ ಮಾತನಾಡಿದ ಮೋಹನ್ ದಾಸರಿ, ಬೆಂಗಳೂರಿನಲ್ಲಿ 2-3 ಸಾವಿರ ಡೆಂಗ್ಯೂ ಕೇಸ್‌ಗಳಿವೆ ಎಂದು ಬಿಬಿಎಂಪಿ ಹೇಳುತ್ತಿದೆ, ಆದರೆ ನಮಗಿರುವ ಮಾಹಿತಿ ಪ್ರಕಾರ 40,000 ರಿಂದ 50,000 ಪ್ರಕರಣಗಳಿವೆ ಎಂದರು. ಆಸ್ಪತ್ರೆಗಳ ಮುಂದೆ ಜನ ಸಾಲುಗಟ್ಟಿ ನಿಂತಿದ್ದಾರೆ, ಡೆಂಗ್ಯೂ ನಿಯಂತ್ರಣಕ್ಕೆ ಜನ ನಮ್ಮ ಜೊತೆ ಕೈ ಜೋಡಿಸಬೇಕು ಎಂದು ಬಿಬಿಎಂಪಿ ಮನವಿ ಮಾಡುತ್ತಿದೆ, ಜನ ಮನೆಯಲ್ಲಿ ನಿಯಂತ್ರಣ ಮಾಡಬಹುದು ಆದರೆ ಸಾರ್ವಜನಿಕ ಸ್ಥಳಗಳಲ್ಲಿ ಯಾರು ನಿಯಂತ್ರಿಸಬೇಕು, ಬಿಬಿಎಂಪಿ ತನ್ನ ಕೆಲಸ ಸರಿಯಾಗಿ ಮಾಡದೆ, ಜನರ ಮೇಲೆ…
ನವದೆಹಲಿ: ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಒವೈಸಿ ಅವರ ಮನೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಶುಕ್ರವಾರ ದೆಹಲಿ ಪೊಲೀಸ್ ಆಯುಕ್ತರಿಗೆ ಸಮನ್ಸ್ ನೀಡಿದ್ದಾರೆ. ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ, ನಾಲ್ಕೈದು ಜನರು ಜೂನ್ 27 ರಂದು ರಾತ್ರಿ 9 ಗಂಟೆ ಸುಮಾರಿಗೆ ಕೇಂದ್ರ ದೆಹಲಿಯಲ್ಲಿರುವ ಓವೈಸಿ ಅವರ 34 ಅಶೋಕ ರಸ್ತೆಯ ನಿವಾಸಕ್ಕೆ ತಲುಪಿ ಮನೆಯ ಪ್ರವೇಶ ದ್ವಾರ ಮತ್ತು ಗೋಡೆಯಲ್ಲಿ ಮೂರು ಪೋಸ್ಟರ್ಗಳನ್ನು ಅಂಟಿಸಿದ್ದಾರೆ. ಈ ಬಗ್ಗೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಸಂಸತ್ತಿನಲ್ಲಿ ಒವೈಸಿ ಅವರನ್ನು ಭೇಟಿಯಾಗಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಈ ಘಟನೆಯು ಹೆಚ್ಚಿನ ಭದ್ರತಾ ವಲಯ ಮತ್ತು ಪೊಲೀಸ್ ಪ್ರಧಾನ ಕಚೇರಿಗೆ ಆಯ್ಕೆಯ ಎದುರು ನಡೆದಿರುವುದರಿಂದ ಅವರು ದೆಹಲಿ ಸಿಪಿಯನ್ನು ಕರೆಸಿದ್ದಾರೆ. “ಭಾರತ್ ಮಾತಾ ಕಿ ಜೈ” ಎಂದು ಹೇಳದ ರಾಜಕಾರಣಿಯ ವಿರುದ್ಧ ದೇಶದ ಯುವಕರು ಒಂದಾಗಬೇಕು ಎಂದು ದುಷ್ಕರ್ಮಿಗಳಲ್ಲಿ ಒಬ್ಬರು ಹೇಳಿದ ಘಟನೆಯ ವೀಡಿಯೊ ಆನ್ ಲೈನ್ ನಲ್ಲಿ…