Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಮಾರ್ಚ್.5ರ ಇಂದು ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ, ಎಸ್ಟಿ ನೌಕರರ ರಾಜ್ಯ ಮಟ್ಟದ 5ನೇ ಸಮಾವೇಶವನ್ನು ಆಯೋಜಿಸಲಾಗಿದೆ. ಈ ಸಮಾವೇಶದಲ್ಲಿ ಭಾಗಿಯಾಗುವಂತ ನೌಕರರಿಗೆ ಅನುಕೂಲವಾಗುವಂತೆ ಮಾರ್ಚ್.5ರ ಇಂದು ಮತ್ತು ನಾಳೆ, ಎರಡು ದಿನ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು,ಕರ್ನಾಟಕ ರಾಜ್ಯ ಸರ್ಕಾರಿ ಎಸ್.ಸಿ./ಎಸ್.ಟಿ. ನೌಕರರ ಸಮನ್ವಯ ಸಮಿತಿಯ ವತಿಯಿಂದ ದಿನಾಂಕ: 05.03.2024 ರಂದು ಬೆಂಗಳೂರಿನ ವಸಂತ ನಗರದಲ್ಲಿರುವ ಡಾ|| ಅಂಬೇಡ್ಕರ್ ಭವನದಲ್ಲಿ ರಾಜ್ಯ ಮಟ್ಟದ 5ನೇ ಕರ್ನಾಟಕ ರಾಜ್ಯ ಸರ್ಕಾರಿ ಎಸ್.ಸಿ/ಎಸ್.ಟಿ, ನೌಕರರ ಸಮಾವೇಶವನ್ನು ಆಯೋಜಿಸಲಾಗಿದೆ ಎಂದಿದ್ದಾರೆ. ಈ ಸಮಾವೇಶದಲ್ಲಿ ಭಾಗವಹಿಸುವ ಬೆಂಗಳೂರು ನಗರ ಜಿಲ್ಲೆಯ ಸಂಘದ ಸದಸ್ಯರು ಅಧಿಕಾರಿ/ನೌಕರರಿಗೆ ದಿನಾಂಕ: 05.03.2024 ರಂದು ಒಂದು ದಿನ ಮಾತ್ರ ಹಾಗೂ ರಾಜ್ಯದ ಇತರ ಜಿಲ್ಲೆಗಳ ಸಂಘದ ಸದಸ್ಯ ಅಧಿಕಾರಿ/ನೌಕರರಿಗೆ ಪ್ರಯಾಣ ದಿನಗಳೂ ಸೇರಿದಂತೆ ದಿನಾಂಕ: 05.03 2024 ಮತ್ತು…
ಬೆಂಗಳೂರು: ರಾಜ್ಯ ಸರ್ಕಾರದಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ತಾಂತ್ರಿಕ ಕಾಲೇಜು ಅತಿಥಿ ಉಪನ್ಯಾಸಕರಿಗೆ ಭರ್ಜರಿ ಗುಡ್ ನ್ಯೂಸ್ ನೀಡಲಾಗಿದೆ. ಅದೇ ಗೌರವ ಧನವನ್ನು ಪರಿಷ್ಕರಿಸಿ ಆದೇಶಿಸಿದೆ. ಅಲ್ಲದೇ ಆರೋಗ್ಯ ವಿಮಾ ಸೌಲಭ್ಯ, ಇಡಗಂಟು ಯೋಜನೆಯನ್ನು ಜಾರಿಗೊಳಿಸಿ ಆದೇಶಿಸಿದೆ. ಈ ಕುರಿತಂತೆ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಂ.ಧನಂಜಯ ನಡವಳಿಯನ್ನು ಹೊರಡಿಸಿದ್ದು, ಸರ್ಕಾರಿ ಪ್ರಧಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಗುಳ ಆರೋಗ್ಯದ ದೃಷ್ಠಿಯಿಂದ ವಾರ್ಷಿಕ 5 ಲಕ್ಷಗಳ ಆರೋಗ್ಯ ವಿಮಾ ಸೌಲಭ್ಯವನ್ನು ಒದಗಿಸಲು ಮಾಸಿಕ 400 ರೂ ವಂತಿಕೆಯನ್ನು ಅವರಿಂದ ಕಟಾಯಿಸಿ, ಇನ್ನುಳಿದ 400 ರೂ ಸರ್ಕಾರದ ವತಿಯಿಂದ ಭರಿಸಲು ಉದ್ದೇಶಿಸಿದ್ದು, ಹೀಗೆ ಒಟ್ಟು 800 ಗಳನ್ನು ಆರೋಗ್ಯ ವಿಮೆಗೆ ಪಾವತಿಸಲು ಉದ್ದೇಶಿಸಿದೆ ಎಂದಿದ್ದಾರೆ. ಅತಿಥಿ ಉಪನ್ಯಾಸಕರ ಆರೋಗ್ಯದ ಸಲುವಾಗಿ ವಿಮಾ ಸೌಲಭ್ಯವನ್ನು ಮಂಜೂರು ಮಾಡುವಂತೆ ಹಾಗೂ ಅತಿಥಿ ಉಪನ್ಯಾಸಕರುಗಳಾಗಿ ಸೇವೆ ಸಲ್ಲಿಸಿದ 60 ವರ್ಷ ಮೀರಿದ ನಂತ್ರ ಇವರಿಗೆ ಭದ್ರತಾ ರೂಪದಲ್ಲಿ ವಾರ್ಷಿಕ 50,000…
ಬೀದರ್: ಜಿಲ್ಲೆಯ ಹಲವೆಡೆ ಇಂದು ರಾತ್ರಿ ಭೂಕಂಪನ ಉಂಟಾಗಿದೆ. ಲಘು ಭೂಕಂಪನದಿಂದಾಗಿ ಭೂಮಿ ಕಂಪಿಸಿದ ಪರಿಣಾಮ ಜನರು ಬೆಚ್ಚಿ ಬಿದ್ದಿರೋದಾಗಿ ತಿಳಿದು ಬಂದಿದೆ. ಬೀದರ್ ಜಿಲ್ಲೆಯಲ್ಲಿ ಸಂಜೆ ಸುಮಾರು 7.40 ಗಂಟೆಗೆ ಭೂಕಂಪನ ಉಂಟಾಗಿದೆ. ಬೀದರ್ ತಾಲೂಕಿನ ಇಸ್ಲಾಂಪುರದ ಯರನಹಳ್ಳಿಯಲ್ಲಿ 1.85 ತೀವ್ರತೆಯಲ್ಲಿ ಭೂಕಂಪನ ಸಂಭವಿಸಿದೆ. ಅಲ್ಲದೇ ಬಸವಕಲ್ಯಾಣದ ರಾಜೇಶ್ವರದಲ್ಲಿ 2.6ರಷ್ಟು ತೀವ್ರತೆಯಲ್ಲಿ ಭೂಮಿ ಕಂಪಿಸಿದೆ. ಇದಲ್ಲದೇ ಯರಭಾಗದಲ್ಲಿ 3.2 ರಷ್ಟು ತೀವ್ರತೆಯಲ್ಲಿ ಭೂಮಿ ಕಂಪನ ಉಂಟಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣ ಕೇಂದ್ರದಿಂದ ಈ ಮಾಹಿತಿಯನ್ನು ಬಿಡುಗಡೆ ಮಾಡಲಾಗಿದೆ.
ಆಂಧ್ರಪ್ರದೇಶ: ಇಂದು ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಅದೇ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾಗಿ ಐವರು ದುರ್ಮರಣ ಹೊಂದಿರುವಂತ ಘಟನೆ ನಡೆದಿದೆ. ಆಂಧ್ರಪ್ರದೇಶದ ಮೆಹಬೂಬನಗರ ಜಿಲ್ಲೆಯ ಕೊತಕೋಟೆ ಬೈಪಾಸ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿಯಾಗಿದೆ. ಈ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದರೇ, ಮಗುವೊಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದೆ. ಎರಿಟಿಗಾ ಕಾರಿನಲ್ಲಿ ಹೈದರಾಬಾದ್ ಗೆ ಬಳ್ಳಾರಿ ಮೂಲದವರು ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಕಾರು ಮರಕ್ಕೆ ಡಿಕ್ಕಿಯಾಗಿ ಸಂಭವಿಸಿದಂತ ಅಪಘಾತದಲ್ಲಿ ಮತ್ತಿಬ್ಬರು ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/sanatan-dharma-row-pm-modi-hits-out-at-udhayanidhi-stalin-over-hereditary-identity/ https://kannadanewsnow.com/kannada/bjp-state-president-jp-nadda-resigns-from-rajya-sabha/
ಆಂಧ್ರಪ್ರದೇಶ: ಇಲ್ಲಿನ ಕಡಪ ಜಿಲ್ಲೆಯಲ್ಲಿ ತೆಲಂಗಾಣ ಪೊಲೀಸರು ಹಾಗೂ ಎನ್ಐಎ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಓರ್ವ ಶಂಕಿತ ಉಗ್ರನನ್ನು ಬಂಧಿಸಿದ್ದಾರೆ. ಕಳೆದ 25 ದಿನಗಳಿಂದ ಆಂಧ್ರಪ್ರದೇಶದ ಚೆರ್ಲೋಪಲ್ಲಿ ಬಳಿಯ ಮಸೀದಿಯೊಂದರಲ್ಲಿ ಶಂಕಿತ ಓರ್ವ ಉಗ್ರ ಅಡಗಿರೋ ಮಾಹಿತಿಯನ್ನು ತಿಳಿದಂತ ಎನ್ಐಎ ಹಾಗೂ ತೆಲಂಗಾಣ ಪೊಲೀಸರು ಬಂಧಿಸಿದ್ದಾರೆ. ನಿಷೇಧಿತ ಪಿಎಫ್ಐ ಸಂಘಟನೆಗ ಸೇರಿದಂತ್ತೆ ಉತ್ತರ ತೆಲಂಗಾಣದ ಕಾರ್ಯದರ್ಶಿಯಾಗಿ ಅಬ್ದುಲ್ ಸಲೀಂ ಕಾರ್ಯ ನಿರ್ವಹಿಸುತ್ತಿದ್ದನು. ತಲೆಮರೆಸಿಕೊಂಡಿದ್ದಂತ ಆತ ಆನ್ ಲೈನ್ ಮೂಲಕ ಕರೆ ಮಾಡುತ್ತಿದ್ದನು. ಈ ಎಲ್ಲಾ ಮಾಹಿತಿಯನ್ನು ಕಲೆಹಾಕಿ ಆಂಧ್ರಪ್ರದೇಶ ಕಡಪ ಜಿಲ್ಲೆಯ ಮೈದುೂಕೊರು ಮಂಡಲದ ಚೆರ್ಲೋಪಲ್ಲಿ ಬಳಿಯ ಮಸೀದಿಯೊಂದರಲ್ಲಿ ಬಂಧಿಸಿದ್ದಾರೆ. ಇದೀಗ ಬಂಧಿತ ಶಂಕಿತ ಉಗ್ರನನ್ನು ಹೈದರಾಬಾದಿಗೆ ಕರೆದೊಯ್ಯುತ್ತಿದ್ದು, ಅಲ್ಲಿ ವಿಚಾರಣೆಯನ್ನು ನಡೆಸಲಿದ್ದಾರೆ. ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಸಂಬಂಧವೂ ಶಂಕಿತ ಉಗ್ರನನ್ನು ಎನ್ಐಎ ಅಧಿಕಾರಿಗಳ ವಿಚಾರಣೆ ನಡೆಸೋ ಸಾಧ್ಯತೆ ಇದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/from-now-on-disputes-of-economically-weaker-sections-in-the-state-will-be-settled-within-a-time-frame-of-6-months/ https://kannadanewsnow.com/kannada/digitize-applications-under-sakala-from-receipt-to-service-minister-krishna-byre-gowda/
ಬೆಂಗಳೂರು: ರಾಜ್ಯ ಸರ್ಕಾರದಿಂದ ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ಗೌರವಧನ ಹೆಚ್ಚಿಸಿ ಹಾಗೂ ವಿಮಾ ಸೌಲಭ್ಯ ಜಾರಿಗೊಳಿಸಿ ಆದೇಶಿಸಿದೆ. ಈ ಕುರಿತಂತೆ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದು, ಇಂಜಿನಿಯರಿಂಗ್ ಕಾಲೇಜುಗಳಲ್ಲಿನ ಅರೆಕಾಲಿಕ ಉಪನ್ಯಾಸಕರುಗಳಿಗೆ ಗರಿಷ್ಠ ಮಾಸಿಕ ಕಾರ್ಯಭಾರ 32 ಗಂಟೆಗೆ ಗರಿಷ್ಠ ಕಾರ್ಯಭಾರಕ್ಕೆ ಮಾಸಿಕ ಗೌರವಧನ ರೂ.15,000ಗಳನ್ನು ಹಾಗೂ ಪಾಲಿಟೆಕ್ನಿಕ್ ಮತ್ತು ಸರ್ಕಾರಿ ಕಿರಿಯ ತಾಂತ್ರಿಕ ಶಾಲೆಗಳಲ್ಲಿನ ಅರೆಕಾಲಿಕ ಉಪನ್ಯಾಸಕರುಗಳಿಗೆ ಗರಿಷ್ಠ ರೂ.12,500ಗಳನ್ನು ಪಾವತಿಸಲಾಗುತ್ತಿದೆ ಎಂದಿದ್ದಾರೆ. ಪ್ರಸ್ತುತ ಸಲ್ಲಿಸುತ್ತಿರುವ ಸೇವಾ ಅವಧಿಗೆ ಅನುಗುಣವಾಗಿ ಗೌರವಧನವನ್ನು 5 ವರ್ಷಕ್ಕಿಂತ ಕಡಿಮೆ ಸೇವಾವಧಿಗೆ ರೂ.5,000, 5 ವರ್ಷದಿಂದ 10 ವರ್ಷಗಳ ಸೇವಾವಧಿಗೆ 6000, 10 ವರ್ಷದಿಂದ 15 ವರ್ಷಗಳ ಸೇವಾವಧಿಗೆ ರೂ.7000 ಹಾಗೂ 15 ವರ್ಷ ಮೇಲ್ಪಟ್ಟು ಸೇವಾವಧಿಗೆ ರೂ.8000 ಹೆಚ್ಚಿಸಿ ಆದೇಶಿಸಿದ್ದಾರೆ. ಇದಲ್ಲೇದ 60 ವರ್ಷ ಮೀರಿದಂತ ಅತಿಥಿ ಉಪನ್ಯಾಸಕರುಗಳಿಗೆ ಭದ್ರತಾ ರೂಪದಲ್ಲಿ ವಾರ್ಷಿಕ ರೂ.50,000ದಂತೆ ಗರಿಷ್ಠ 5 ಲಕ್ಷಗಳ ಮೊತ್ತದ ಇಡಿಗಂಟಿನ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಉನ್ನತ ಶಿಕ್ಷಣ ಇಲಾಖೆಯ ಕಾಲೇಜು ಶಿಕ್ಷಣ ಇಲಾಖಎಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಂತ ಸ್ರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರುಗಳಿಗೆ ಗೌರವಧನ ಮತ್ತಿತರ ಸೌಲಭ್ಯವನ್ನು ಮಂಜೂರು ಮಾಡಿ ಆದೇಶಿಸಿದೆ. ಅದರಲ್ಲೂ ಗೌರವಧನವನ್ನು ಸೇವಾ ಹಿರಿತನದ ಆಧಾರದ ಮೇಲೆ ಪರಿಷ್ಕರಿಸಿ ಆದೇಶಿಸಿದೆ. ಈ ಕುರಿತಂತೆ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಂ.ಧನಂಜಯ ನಡವಳಿಯನ್ನು ಹೊರಡಿಸಿದ್ದು, ಸರ್ಕಾರಿ ಪ್ರಧಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಗುಳ ಆರೋಗ್ಯದ ದೃಷ್ಠಿಯಿಂದ ವಾರ್ಷಿಕ 5 ಲಕ್ಷಗಳ ಆರೋಗ್ಯ ವಿಮಾ ಸೌಲಭ್ಯವನ್ನು ಒದಗಿಸಲು ಮಾಸಿಕ 400 ರೂ ವಂತಿಕೆಯನ್ನು ಅವರಿಂದ ಕಟಾಯಿಸಿ, ಇನ್ನುಳಿದ 400 ರೂ ಸರ್ಕಾರದ ವತಿಯಿಂದ ಭರಿಸಲು ಉದ್ದೇಶಿಸಿದ್ದು, ಹೀಗೆ ಒಟ್ಟು 800 ಗಳನ್ನು ಆರೋಗ್ಯ ವಿಮೆಗೆ ಪಾವತಿಸಲು ಉದ್ದೇಶಿಸಿದೆ ಎಂದಿದ್ದಾರೆ. ಅತಿಥಿ ಉಪನ್ಯಾಸಕರ ಆರೋಗ್ಯದ ಸಲುವಾಗಿ ವಿಮಾ ಸೌಲಭ್ಯವನ್ನು ಮಂಜೂರು ಮಾಡುವಂತೆ ಹಾಗೂ ಅತಿಥಿ ಉಪನ್ಯಾಸಕರುಗಳಾಗಿ ಸೇವೆ ಸಲ್ಲಿಸಿದ 60 ವರ್ಷ ಮೀರಿದ ನಂತ್ರ ಇವರಿಗೆ ಭದ್ರತಾ…
ಬೆಂಗಳೂರು: ನಗರದ ಎಲ್ಲಾ ನೀರಿನ ಟ್ಯಾಂಕರ್ ಮಾಲೀಕರು ಮಾ. 7 ತಾರೀಕಿನ ವೇಳೆಗೆ ನೋಂದಣಿ ಮಾಡಿಸದಿದ್ದರೆ ಸೀಜ್ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಖಡಕ್ ಎಚ್ಚರಿಕೆ ನೀಡಿದರು. ಕುಡಿಯುವ ನೀರಿನ ಸಮಸ್ಯೆ ವಿಚಾರವಾಗಿ ಬಿಬಿಎಂಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ 3,500 ಟ್ಯಾಂಕರ್ಗಳು ಇದ್ದು, ಕೇವಲ 219 ಟ್ಯಾಂಕರ್ಗಳು ಅಂದರೆ ಕೇವಲ ಶೇ 10 ರಷ್ಟು ಮಾತ್ರ ನೋಂದಣಿ ಮಾಡಿಸಿಕೊಂಡಿವೆ. ಚಿಕ್ಕ, ದೊಡ್ಡ, ಹಾಲಿನ ಟ್ಯಾಂಕರ್ಗಳನ್ನು ಶೀಘ್ರ ಸರ್ಕಾರದ ವಶಕ್ಕೆ ಪಡೆಯಲಾಗುವುದು. ಬಿಡಬ್ಲ್ಯೂ ಎಸ್ಎಸ್ಬಿ ಅವರು 210 ಟ್ಯಾಂಕರ್ಗಳನ್ನು ಈಗಾಗಲೇ ನೀರಿನ ಪೂರೈಕೆಗೆ ಬಳಸುತ್ತಿದ್ದಾರೆ ಎಂದಿದ್ದಾರೆ. ನೀರು ಸರ್ಕಾರಕ್ಕೆ ಸೇರಿದ್ದು ನೀರು ಸರ್ಕಾರಕ್ಕೆ ಸೇರಿದ್ದು. ಯಾವುದೇ ವೈಯಕ್ತಿಕ ವ್ಯಕ್ತಿಗೆ ಸೇರಿದ್ದಲ್ಲ. ಯಾವ ನೀರನ್ನು ಬೇಕಾದರೂ ನಿಯಂತ್ರಣಕ್ಕೆ ತೆಗೆದುಕೊಳ್ಳುವ ಹಕ್ಕು ಸರ್ಕಾರಕ್ಕೆ ಇದೆ. ಬೆಂಗಳೂರು ಹೊರವಲಯದಲ್ಲಿ ಅಂತರ್ಜಲ ನೀರಿನ ಮಟ್ಟ ಹೆಚ್ಚಿರುವ ಕಡೆಯಿಂದಲೂ ನೀರಿನ ಪೂರೈಕೆ ಮಾಡಲು ಸಿದ್ದರಾಗಿ ಇರಬೇಕು ಎಂದು ಅಧಿಕಾರಿಗಳಿಗೆ ತಿಳಿಸಲಾಗಿದೆ. ನೀರಿನ ಸಮಸ್ಯೆ ಬಗೆಹರಿಸಲು…
ಋಣಭಾರ ತೊಲಗಲು, ದುಷ್ಟ ಶಕ್ತಿಗಳಿಂದ ಮುಕ್ತಿ ಪಡೆಯಲು, ಶತ್ರು ಬಾಧೆಯಿಂದ ಮುಕ್ತಿ ಹೊಂದಲು ಭೈರವನ ಆರಾಧನೆ ಹೇಗೆ ಉತ್ತಮವೋ, ಅದೇ ರೀತಿ ಅಡೆತಡೆಗಳ ನಿವಾರಣೆಗೆ ಭೈರವನ ಆರಾಧನೆ ಮಾಡಬಹುದು. ಕೆಲವು ಕೆಲಸಗಳು ಎಂದಿಗೂ ಮುಗಿಯುವುದಿಲ್ಲ. ನಾವು ಅನೇಕ ವಿಷಯಗಳನ್ನು ಪ್ರಯತ್ನಿಸಿದ್ದೇವೆ. ಭೈರವನನ್ನು ಪೂಜಿಸುವಾಗ ಅಡೆತಡೆಗಳು ಕಂಡುಬಂದರೆ ತಕ್ಷಣವೇ ಅಡೆತಡೆಗಳು ನಿವಾರಣೆಯಾಗುತ್ತವೆ. ಶಿವನ ಅಂಶವುಳ್ಳ ಈ ಭೈರವನಿಗೆ ಎಂತಹ ದೊಡ್ಡ ಸಂಕಷ್ಟವನ್ನೂ ನಿವಾರಿಸುವ ಶಕ್ತಿಯಿದೆ. ಅಡೆತಡೆಗಳನ್ನು ನಿವಾರಿಸುವ ಭೈರವನ ಆರಾಧನೆಯನ್ನು ನಾವೂ ತಿಳಿಯೋಣವೇ? ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ…
ಪಾಟ್ನಾ: ಪ್ರಧಾನಿ ನರೇಂದ್ರ ಮೋದಿ ಹಿಂದೂ ಅಲ್ಲ ಎಂದು ಹೇಳಿಕೆ ನೀಡಿದ್ದ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ವಿರುದ್ಧ ಪಾಟ್ನಾ ಪೊಲೀಸರು ಸೋಮವಾರ ಪ್ರಕರಣ ದಾಖಲಿಸಿದ್ದಾರೆ. ಭಾರತೀಯ ಜನತಾ ಯುವ ಮೋರ್ಚಾದ (ಬಿಜೆವೈಎಂ) ರಾಜ್ಯ ವಕ್ತಾರ ಕಲ್ಲು ಎಂದೂ ಕರೆಯಲ್ಪಡುವ ಕೃಷ್ಣ ಸಿಂಗ್ ಅವರು ಭಾನುವಾರ ರಾತ್ರಿ ಪಾಟ್ನಾದ ಗಾಂಧಿ ಮೈದಾನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಾವು ಲಾಲು ಪ್ರಸಾದ್ ಯಾದವ್ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ ಮತ್ತು ಈ ವಿಷಯವು ತನಿಖೆಯಲ್ಲಿದೆ” ಎಂದು ಗಾಂಧಿ ಮೈದಾನ್ ಪೊಲೀಸ್ ಠಾಣೆಯ ಎಸ್ಎಚ್ಒ ಸೀತಾರಾಮ್ ಕುಮಾರ್ ಹೇಳಿದ್ದಾರೆ. ಭಾನುವಾರ ಗಾಂಧಿ ಮೈದಾನದಲ್ಲಿ ನಡೆದ ಜನವಿಶ್ವಾಸ್ ರ್ಯಾಲಿಯಲ್ಲಿ ಮಾತನಾಡಿದ ಲಾಲು ಪ್ರಸಾದ್ ಯಾದವ್, ಇತ್ತೀಚಿನ ದಿನಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ವಂಶಪಾರಂಪರ್ಯದ ಮೇಲೆ ದಾಳಿ ನಡೆಸುತ್ತಿದ್ದಾರೆ ಎಂದಿದ್ದರು. ರ್ಯಾಲಿಯಲ್ಲಿ ಮಾತನಾಡಿದ ಲಾಲು ಪ್ರಸಾದ್, “ಅವರಿಗೆ ಏಕೆ ಮಕ್ಕಳಿಲ್ಲ ಎಂದು ನಾನು ಅವರನ್ನು ಕೇಳಲು ಬಯಸುತ್ತೇನೆ. ಅವರು ಮಕ್ಕಳನ್ನು ಹೊಂದಿರುವವರ ಮೇಲೆ ದಾಳಿ…