Author: kannadanewsnow09

ಬೆಂಗಳೂರು : “ಸದ್ಯಕ್ಕೆ ಕೆಪಿಸಿಸಿಯಲ್ಲಿ ಯಾವುದೇ ಹುದ್ದೆ ಖಾಲಿ ಇಲ್ಲ. ಅಧ್ಯಕ್ಷ ಸ್ಥಾನಕ್ಕೆ ಆಸೆ, ದುರಾಸೆ ನನ್ನಲ್ಲಿಲ್ಲ” ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ತಿಳಿಸಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಿಮ್ಮ ಹೆಸರು ಕೇಳಿಬರುತ್ತಿದೆ ಎಂದು ಕೇಳಿದಾಗ, “ಒಂದಷ್ಟು ಜನರು ನನ್ನನ್ನು ಖುಷಿಪಡಿಸಲು, ಮತ್ತೆ ಕೆಲವರು ಇನ್ನೊಬ್ಬರನ್ನು ಖುಷಿ ಪಡಿಸಲು ಹಾಗೂ ತಮ್ಮ ಅನುಕೂಲಕ್ಕಾಗಿ ಈ ರೀತಿ ಹೆಸರುಗಳನ್ನು ಹೇಳುತ್ತಿರುತ್ತಾರೆ. ನಾನು ಪ್ರಸ್ತುತ ವಿಶ್ರಾಂತಿಯಲ್ಲಿದ್ದೇನೆ. ಜನರು ಕೊಟ್ಟ ತೀರ್ಪನ್ನು ಪ್ರಸಾದ ಎಂದು ಸ್ವೀಕರಿಸಿ ಕೆಲಸ ಮಾಡುವವನು ನಾನು. ಯಾವುದೇ ಸ್ಥಾನ ಸಿಗಬೇಕು ಅಂತಾದರೆ ಸಿಕ್ಕೇ ಸಿಗುತ್ತದೆ. ಇಲ್ಲದಿದ್ದರೆ ಸಿಗುವುದಿಲ್ಲ. ಯಾವುದೂ ಇಲ್ಲಿ ಸ್ವಂತ ಸ್ವತ್ತಲ್ಲ. ಸಾರ್ವಜನಿಕವಾದ ಹುದ್ದೆಗಳಿವು” ಎಂದು ತಿಳಿಸಿದ್ದಾರೆ. ಹೈಕಮಾಂಡ್ ಯಾರಿಗೆ ಜವಾಬ್ದಾರಿ ನೀಡುತ್ತಾರೋ ಅವರಿಗೆ ಸಹಕಾರ: ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದರೆ ಸಚಿವ ಸ್ಥಾನ ತ್ಯಾಗಕ್ಕೆ ಸಿದ್ಧ ಎನ್ನುವ ಕೆ.ಎನ್.ರಾಜಣ್ಣ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಸರ್ವಪಕ್ಷಗಳ…

Read More

ಬೆಂಗಳೂರು: ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗದ ಬೆಳ್ಳಂದೂರು ಯಾರ್ಡ್ ನ ಪುನರ್ನಿರ್ಮಾಣಕ್ಕಾಗಿ ಎಂಜಿನಿಯರಿಂಗ್ ಕಾಮಗಾರಿ ಕೈಗೊಳ್ಳುವ ಸಲುವಾಗಿ, ಈ ಕೆಳಗಿನ ರೈಲುಗಳ ಸಂಚಾರ ತಾತ್ಕಾಲಿಕ ರದ್ದು ಮತ್ತು ನಿಯಂತ್ರಿಸಲಾಗುತ್ತಿದೆ. ಅವುಗಳ ವಿವರ ಕೆಳಗಿನಂತಿವೆ: ರದ್ದು: ಯಶವಂತಪುರ-ಹೊಸೂರು ಮೆಮು (06203) ಮತ್ತು ಹೊಸೂರು-ಯಶವಂತಪುರ ಮೆಮು (06204) ವಿಶೇಷ ರೈಲುಗಳ ಸಂಚಾರ ಡಿಸೆಂಬರ್ 5 ರಂದು ರದ್ದುಗೊಳ್ಳಲಿದೆ. ನಿಯಂತ್ರಣ: ಡಿಸೆಂಬರ್ 5 ರಂದು ತಮ್ಮ ಮೂಲ ನಿಲ್ದಾಣದಿಂದ ಹೊರಡುವ ರೈಲುಗಳ ಸಂಖ್ಯೆ 11014 ಕೊಯಮತ್ತೂರು-ಲೋಕಮಾನ್ಯ ತಿಲಕ್ ಟರ್ಮಿನಸ್ ಎಕ್ಸ್ ಪ್ರೆಸ್ ರೈಲು ಮಾರ್ಗ ಮಧ್ಯದಲ್ಲಿ 90 ನಿಮಿಷ, ರೈಲು ಸಂಖ್ಯೆ 06393 ಯಶವಂತಪುರ-ಹೊಸೂರು ಮೆಮು ವಿಶೇಷ ರೈಲು ಮಾರ್ಗ ಮಧ್ಯದಲ್ಲಿ 60 ನಿಮಿಷಗಳ ಮತ್ತು ರೈಲು ಸಂಖ್ಯೆ 16211 ಯಶವಂತಪುರ-ಸೇಲಂ ಎಕ್ಸ್ ಪ್ರೆಸ್ ರೈಲು ಮಾರ್ಗ ಮಧ್ಯದಲ್ಲಿ 10 ನಿಮಿಷಗಳ ಕಾಲ ನಿಯಂತ್ರಿಸಲ್ಪಡುತ್ತದೆ. BREAKING ; ‘ಪ್ಯಾಕೇಜ್ಡ್ ಕುಡಿಯುವ ನೀರು, ಮಿನರಲ್ ವಾಟರ್’ ಕುಡಿಯೋಕು ಮುನ್ನ ಎಚ್ಚರ ; ‘ಹೈ ರಿಸ್ಕ್ ಫುಡ್’ ವರ್ಗಕ್ಕೆ ಸೇರ್ಪಡೆ…

Read More

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಫಎಂಗಲ್ ಚಂಡಮಾರುತದ ಅಬ್ಬರ ಪರಿಣಾಮ, ರಾಜ್ಯದ ಮಂಗಳೂರು, ಚಿಕ್ಕಬಳ್ಳಾಪುರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆ, ಚಳಿಗಾಳಿ ಆರಂಭಗೊಂಡಿದೆ. ಮಂಗಳೂರಿನಲ್ಲಿ ಇಂದು ಆರೇಂಜ್ ಅಲರ್ಟ್ ಅನ್ನು ಜಿಲ್ಲಾಧಿಕಾರಿ ಘೋಷಣೆ ಮಾಡಿದ್ದಾರೆ. ಅಲ್ಲದೇ ಯಾವುದೇ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ, ಮೀನುಗಾರಿಕೆಗೆ ತೆರಳಿದ್ದರೇ, ಕೂಡಲೇ ವಾಪಾಸಾಗುವಂತೆ ಮುನ್ಸೂಚನೆ ನೀಡಿದ್ದಾರೆ. ಮಂಗಳೂರಿನ ಹಲವೆಡೆ ಸತತ ಒಂದು ಗಂಟೆಯಿಂದ ಭಾರೀ ಮಳೆಯ ಜೊತೆಗೆ ಸುಳಿಗಾಳಿ ಬೀಸುತ್ತಿದ್ದು, ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಮಳೆಯಿಂದಾಗಿ ಕತ್ತಲು ಕವಿದಂತೆ ಆಗಿದ್ದು, ರಸ್ತೆಗಳಲ್ಲಿ ವಾಹನ ಸಂಚಾರಕ್ಕೂ ಅಡ್ಡಿಯಾಗಿದೆ. ಇನ್ನೂ ಚಿಕ್ಕಬಳ್ಳಾಪುರದಲ್ಲಿ ಫೆಂಗಲ್ ಚಂಡಮಾರುತದ ಕಾರಣ ಬೀಸುತ್ತಿರುವಂತ ಗಾಳಿಯಿಂದಾಗಿ ಜಿಲ್ಲಾಧಿಕಾರಿಯ ಮನೆಯ ಬಳಿಯ ಬೃಹತ್ ಗಾತ್ರದ ಮರವೊಂದು ಧರೆಗೆ ಉರುಳಿ ಬಿದ್ದಿದೆ. ಬುಡ ಸಹಿತ ರಸ್ತೆಗೆ ಅಡ್ಡಲಾಗಿ ಡಿಸಿ ಪಿಎನ್ ರವೀಂದ್ರ ಮನೆಯ ಬಳಿಯ ಮರ ಉರುಳಿ ಬಿದ್ದಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ, ನಗರಸಭೆ ಅಧಿಕಾರಿ, ಸಿಬ್ಬಂದಿಗಳು ಭೇಟಿ ನೀಡಿ ಮರ ತೆರವುಗೊಳಿಸುವ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ಹಾಲು ಮಹಾಮಂಡಳ(ಕೆಎಂಎಫ್) ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಕೆಎಎಸ್ ಅಧಿಕಾರಿ ಬಿ.ಶಿವಸ್ವಾಮಿ ಅವರನ್ನು ನೇಮಕ ಮಾಡಿ ಆದೇಶಿಸಿದೆ. ಈ ಸಂಬಂಧ ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಮುಖ್ಯಮಂತ್ರಿಯವರ ಜಂಟಿ ಕಾರ್ಯದರ್ಶಿಯಾಗಿದ್ದಂತ ಸೂಪರ್ ಟೈಂ ಸ್ಕೇಲ್ ಕೆಎಎಸ್ ಅಧಿಕಾರಿ ಬಿ.ಶಿವಸ್ವಾಮಿಯವರನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಕೆಎಎಫ್ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಿಸಲಾಗಿದೆ ಎಂದು ತಿಳಿಸಿದ್ದಾರೆ. ಇನ್ನೂ ಕರ್ನಾಟಕ ಹಾಲು ಮಹಾಮಂಡಳ (KMF) ವ್ಯವಸ್ಥಾಪಕ ನಿರ್ದೇಶಕರಾಗಿದ್ದಂತ ಎಂ.ಕೆ ಜಗದೀಶ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಇವರಿಗೆ ಮುಂದಿನ ಸ್ಥಳ ನಿಯುಕ್ತಿಗಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಲ್ಲಿ ಕಾರ್ಯವರದಿ ಮಾಡಿಕೊಳ್ಳುವಂತೆ ನಿರ್ದೇಶನವನ್ನು ಮಾಡಿದ್ದಾರೆ. https://kannadanewsnow.com/kannada/swamiji-apologised-for-filing-case-dr-cn-ashwathnarayan/ https://kannadanewsnow.com/kannada/karnataka-sslc-ii-puc-exam-1-tentative-schedule-released-heres-the-subject-wise-exam/

Read More

ಬೆಂಗಳೂರು: ಸ್ವಾಮೀಜಿಗಳು ಕ್ಷಮೆ ಕೇಳಿದರೂ ಕೇಸು ದಾಖಲಿಸಿದ್ದಾರೆ. ದೇಶವಿರೋಧಿ, ಗಲಭೆ ಎಬ್ಬಿಸುವ ಹಾಗೂ ಸೌಹಾರ್ದತೆ ಹಾಳು ಮಾಡುವ ರೀತಿಯಲ್ಲಿ ಹೇಳಿಕೆ ಕೊಟ್ಟ ಇತರರ ಬಗ್ಗೆ ಸರಕಾರ ಯಾಕೆ ಕೇಸು ಹಾಕಿಲ್ಲ? ಅವರ ಮೇಲೂ ಪ್ರಕರಣ ದಾಖಲಿಸಬೇಕಿತ್ತಲ್ಲವೇ? ಕಾನೂನು ಬೇರೆ ಬೇರೆ ಇದೆಯೇ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ್ ಅವರು ಪ್ರಶ್ನಿಸಿದರು. ನಗರದ ಮೈಸೂರು ರಸ್ತೆ ಬಳಿ ಇರುವ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದಲ್ಲಿ ಪರಮಪೂಜ್ಯ ಶ್ರೀ ಚಂದ್ರಶೇಖರನಾಥ ಮಹಾಸ್ವಾಮೀಜಿ ಅವರನ್ನು ಇಂದು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ವಾಮೀಜಿಯವರಿಗೆ 80 ವರ್ಷವಾಗಿದ್ದು, ಅನಾರೋಗ್ಯದಿಂದಿದ್ದಾರೆ. ಬಹಳ ನೊಂದಿದ್ದಾರೆ. ದೇಶದ್ರೋಹಿಗಳಿಗೂ ಇದು ಅನ್ವಯ ಮಾಡಬೇಕಿತ್ತು ಎಂದು ತಿಳಿಸಿದರು. ಎಲ್ಲರೂ ಒಗ್ಗೂಡಿ ಕೆಲಸ ಮಾಡಿ ಎಂದು ಸ್ವಾಮೀಜಿ ತಿಳಿಸಿದ್ದಾಗಿ ಹೇಳಿದರು. https://kannadanewsnow.com/kannada/devendra-fadnavis-will-be-next-chief-minister-of-maharashtra-bjp-leader-sudhir-mungantiwar/ https://kannadanewsnow.com/kannada/karnataka-sslc-ii-puc-exam-1-tentative-schedule-released-heres-the-subject-wise-exam/

Read More

ಮುಂಬೈ: ದೇವೇಂದ್ರ ಫಡ್ನವೀಸ್ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಬಿಜೆಪಿ ಮುಖಂಡ ಮತ್ತು ಮಾಜಿ ಸಚಿವ ಸುಧೀರ್ ಮುಂಗಂತಿವಾರ್ ಸೋಮವಾರ ಘೋಷಿಸಿದ್ದಾರೆ. “ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂಬುದು ನನ್ನ ಅಭಿಪ್ರಾಯ. ಬಿಜೆಪಿ ಯಾವುದೇ ಆಶ್ಚರ್ಯ ಪಡುವುದಿಲ್ಲ” ಎಂದು ಅವರು ಹೇಳಿದರು. ಈ ನಿರ್ಧಾರದ ಬಗ್ಗೆ ಏಕನಾಥ್ ಶಿಂಧೆ ಕೋಪಗೊಂಡಿಲ್ಲ ಎಂದು ಸುಧೀರ್ ಮುಂಗಂತಿವಾರ್ ಹೇಳಿದರು. ನೀವು ಇಲಾಖೆಯ ಬಗ್ಗೆ ನಿಮ್ಮದೇ ಆದ ಬೇಡಿಕೆಗಳನ್ನು ಹೊಂದಿದ್ದರೆ, ನೀವು ಕೋಪಗೊಂಡಿದ್ದೀರಿ ಎಂದರ್ಥವಲ್ಲ. ಅವನು ಎಲ್ಲರನ್ನೂ ಚೆನ್ನಾಗಿ ನೋಡಿಕೊಳ್ಳುತ್ತಾನೆ. ಶಿಂಧೆ ಅವರನ್ನು ಗೌರವಿಸಲಾಗುವುದು. ಶಿಂಧೆ ಕೂಡ ಸರ್ಕಾರದ ಭಾಗವಾಗಲಿದ್ದಾರೆ ಎಂದು ನಾನು ಭಾವಿಸುತ್ತೇನೆ. ಜನರು ಮಹಾಯುತಿಯನ್ನು ದೊಡ್ಡ ಮತಗಳಿಂದ ಗೆಲ್ಲಿಸಿದ್ದಾರೆ” ಎಂದು ಅವರು ಹೇಳಿದರು. ಡಿಸೆಂಬರ್ 5 ರಂದು ಮುಂಬೈನಲ್ಲಿ ಭವ್ಯ ಪ್ರಮಾಣವಚನ ಸಮಾರಂಭ ನಡೆಯಲಿದೆ ಎಂದು ಮುಂಗಂತಿವಾರ್ ಹೇಳಿದರು. https://kannadanewsnow.com/kannada/it-is-not-right-to-threaten-swamiji-bjp-state-president-b-y-vijayendra/ https://kannadanewsnow.com/kannada/karnataka-sslc-ii-puc-exam-1-tentative-schedule-released-heres-the-subject-wise-exam/

Read More

ಬೆಂಗಳೂರು: ಸ್ವಾಮೀಜಿಗಳು ಸಹಜವಾಗಿ ಆಕ್ರೋಶದಿಂದ ಮಾತನಾಡಿದ್ದಾರೆ. ಸರಕಾರವು ದೇಶದ್ರೋಹಿಗಳು, ದೇಶದ್ರೋಹಿ ಚಟುವಟಿಕೆಯಲ್ಲಿ ಪಾಲ್ಗೊಳ್ಳುವವರ ಕೇಸ್‍ಗಳನ್ನು ಹಿಂಪಡೆಯುತ್ತಿದೆ. ಮತ್ತೊಂದೆಡೆ ಸ್ವಾಮೀಜಿಗಳಿಗೆ ಬೆದರಿಕೆ ಹಾಕುವುದು ಖಂಡಿತ ಸರಿಯಲ್ಲ. ಸ್ವಾಮೀಜಿಗಳ ಪರ ಇದ್ದೇವೆ ಎಂದು ತಿಳಿಸಿ, ಆಶೀರ್ವಾದ ಪಡೆದಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ನಗರದ ಮೈಸೂರು ರಸ್ತೆ ಬಳಿ ಇರುವ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದಲ್ಲಿ ಪರಮಪೂಜ್ಯ ಶ್ರೀ ಚಂದ್ರಶೇಖರನಾಥ ಮಹಾಸ್ವಾಮೀಜಿ ಅವರನ್ನು ಇಂದು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ವಕ್ಫ್ ವಿಚಾರದಲ್ಲಿ ಫ್ರೀಡಂ ಪಾರ್ಕಿನಲ್ಲಿ ಮೊನ್ನೆ ನಡೆದ ಹೋರಾಟದಲ್ಲಿ ಸ್ವಾಮೀಜಿಗಳು ರಾಜ್ಯ ಸರಕಾರದ ನಡವಳಿಕೆ ವಿರುದ್ಧ ಆಕ್ರೋಶಭರಿತರಾಗಿ ಹೇಳಿಕೆ ಕೊಟ್ಟಿದ್ದರು. ಆ ಹೇಳಿಕೆ ಬಗ್ಗೆ ಸ್ವಾಮೀಜಿಗಳು ಕ್ಷಮೆಯನ್ನೂ ಕೇಳಿದ್ದಾರೆ. ಇದರ ನಡುವೆ ರಾಜ್ಯ ಸರಕಾರವು ಸ್ವಾಮೀಜಿಗಳ ವಿರುದ್ಧ ಎಫ್‍ಐಆರ್ ದಾಖಲು ಮಾಡಿ ಅವರಿಗೆ ತನಿಖೆಗೆ ಬರಲು ಒತ್ತಾಯಿಸಿದೆ ಎಂದು ಆಕ್ಷೇಪಿಸಿದರು. ಸ್ವಾಮೀಜಿಗಳು ಆರೋಗ್ಯ ಸರಿ ಇಲ್ಲದಿರುವ ಕುರಿತು ತಿಳಿಸಿದ್ದಲ್ಲದೆ…

Read More

ಬೆಂಗಳೂರು: ಅಲ್ಪಸಂಖ್ಯಾತ ಸಮುದಾಯದ ಕೆಲವು ಮುಖಂಡರು ದೊಡ್ಡ ಸಭೆ ಮಾಡಿ ನಾವು ಸುಪ್ರೀಂ ಕೋರ್ಟಿನ ಮುಂದೆ ಹೋಗಿ ಭಿಕ್ಷೆ ಬೇಡುವುದಿಲ್ಲ; ನಿಮಗೆ ಸಂಸತ್ ಇದ್ದರೆ ನಮಗೆ ರಸ್ತೆಗಳಿವೆ. ನಾವೂ ನೋಡಿಕೊಳ್ಳುತ್ತೇವೆ ಎಂದು ಬೆದರಿಕೆ ಹಾಕಿದ ನಿದರ್ಶನವಿದೆ. ಇದಕ್ಕೆ ಸರಕಾರ ಯಾವ ಕ್ರಮ ಕೈಗೊಂಡಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕೇಳಿದರು. ನಗರದ ಮೈಸೂರು ರಸ್ತೆ ಬಳಿ ಇರುವ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದಲ್ಲಿ ಪರಮಪೂಜ್ಯ ಶ್ರೀ ಚಂದ್ರಶೇಖರನಾಥ ಮಹಾಸ್ವಾಮೀಜಿ ಅವರನ್ನು ಇಂದು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಕರಿಯ ಎಂದವರ ಬಗ್ಗೆ ಎಫ್‍ಐಆರ್ ಆಗಿದೆಯೇ? ಎಂದು ಕೇಳಿದರು. ವಕ್ಫ್ ವಿಚಾರದಲ್ಲಿ ರೈತರಿಗೆ ಆಗಿರುವ ಆಕ್ರೋಶದ ಹಿನ್ನೆಲೆಯಲ್ಲಿ ಸ್ವಾಮೀಜಿಗಳು ಅವತ್ತು ಒಂದು ಮಾತನ್ನಾಡಿದ್ದರು. ಅದಕ್ಕೆ ಅವರು ಪಶ್ಚಾತ್ತಾಪವನ್ನೂ ವ್ಯಕ್ತಪಡಿಸಿದ್ದಾರೆ. ನೋವಾಗಿದ್ದರೆ ಕ್ಷಮೆ ಕೇಳುವುದಾಗಿ ತಿಳಿಸಿದ ಮೇಲೆ ಇನ್ನೇನಿದೆ ಎಂದು ಪ್ರಶ್ನಿಸಿದರು. ನಿಮ್ಮ ಪಕ್ಕದಲ್ಲೇ ನಿಂತು ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದವರನ್ನು ರಕ್ಷಿಸುತ್ತೀರಿ. ಮಾಡಿದ…

Read More

ತುಮಕೂರು : ನಮ್ಮ ಐದಕ್ಕೆ ಐದೂ ಗ್ಯಾರಂಟಿಗಳು ಮತ್ತು ನಮ್ಮ ಸರ್ಕಾರದ ಅಭಿವೃದ್ಧಿ ಯೋಜನೆಗಳು ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಸೇರಿವೆ. ನಾವು ಸಕಲರ ಅಭಿವೃದ್ಧಿ ರೂಪಿಸಿದ್ದರಿಂದಲೇ ರಾಜ್ಯದ ಆರ್ಥಿಕತೆ ವೇಗ ಪಡೆದುಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾಗಿದ್ದ ಸರ್ಕಾರದ ನಾನಾ ಯೋಜನೆಗಳ 750 ಕೋಟಿ ರೂಪಾಯಿ ಮೊತ್ತದ 23000 ಕ್ಕೂ ಅಧಿಕ ಮಂದಿ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ, ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಇಡೀ ದೇಶದಲ್ಲಿ ರಾಜ್ಯದ GDP ನಂಬರ್ ಒನ್ ಆಗಿದೆ. ದೇಶದ GDP ಇನ್ನೂ 8 ಇದೆ. ಆದರೆ ರಾಜ್ಯದ GDP 10 ಕ್ಕೆ ತಲುಪಿದೆ. ವಿದೇಶಿ ಬಂಡವಾಳ ಆಕರ್ಷಣೆ ಮತ್ತು ಕೇಂದ್ರಕ್ಕೆ ತೆರಿಗೆ ಪಾವತಿಸುವುದರಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಇದು ಸಾಧ್ಯವಾಗಿದ್ದು ರಾಜ್ಯದ ಎಲ್ಲಾ ಜಾತಿ ಮತ್ತು ಎಲ್ಲಾ ಧರ್ಮದವರ ಒಟ್ಟಾರೆ ಕೊಡುಗೆಯಿಂದ ಎಂದು ವಿವರಿಸಿದರು. ತುಮಕೂರು ಜಿಲ್ಲೆಯಲ್ಲಿ ಒಂದೂವರೆ ಲಕ್ಷ ಫಲಾನುಭವಿಗಳಿಗೆ…

Read More

ಬೆಂಗಳೂರು: ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಸಂಭವಿಸಿದ ಬಾಣಂತಿಯರ ಸಾವಿನ ಪ್ರಕರಣಗಳ ತನಿಖೆಗೆ ತಜ್ಞರ ಸಮಿತಿಯನ್ನು ರಚಿಸಲಾಗಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಿಳಿಸಿದ್ದಾರೆ. ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಸಂಭವಿಸಿರುವ ಬಾಣಂತಿಯರ ಸಾವಿನ ಪ್ರಕರಣಗಳ ತನಿಖೆಗೆ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚಿಸಿ, ವಾರದೊಳಗೆ ವರದಿ ಪಡೆಯಲಾಗುವುದು. ಔಷಧ ನಿಯಂತ್ರಣ ಕಾಯ್ದೆಯನ್ನು ಇನ್ನಷ್ಟು ಬಿಗಿಗೊಳಿಸುವ ಕುರಿತು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲು ಕೂಡ ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. https://twitter.com/KarnatakaVarthe/status/1863498696463372423 https://kannadanewsnow.com/kannada/people-rush-to-open-digital-accounts-in-post-offices-claiming-that-modi-siddaramaiah-will-deposit-money/ https://kannadanewsnow.com/kannada/breaking-cm-siddaramaiah-lays-foundation-stone-for-tumkur-international-cricket-stadium-by-batting/

Read More