Author: kannadanewsnow09

ನವದೆಹಲಿ: ದೆಹಲಿ-ಎನ್ಸಿಆರ್ನಲ್ಲಿ ಅನಿವಾರ್ಯವಲ್ಲದ ನಿರ್ಮಾಣ ಕಾರ್ಯಗಳು ಮತ್ತು ಬಿಎಸ್ -3 ಪೆಟ್ರೋಲ್ ಮತ್ತು ಬಿಎಸ್ -4 ಡೀಸೆಲ್ ನಾಲ್ಕು ಚಕ್ರದ ವಾಹನಗಳ ಸಂಚಾರವನ್ನು ಕೇಂದ್ರ ಸರ್ಕಾರ ಭಾನುವಾರ ನಿಷೇಧಿಸಿದೆ. ಪ್ರತಿಕೂಲ ಹವಾಮಾನ ಪರಿಸ್ಥಿತಿಗಳು ಮತ್ತು ಸ್ಥಳೀಯ ಮಾಲಿನ್ಯ ಮೂಲಗಳಿಂದಾಗಿ ದೆಹಲಿಯ ಎಕ್ಯೂಐ (ಬೆಳಿಗ್ಗೆ 10 ಮತ್ತು 11 ಗಂಟೆಗೆ 458 ಮತ್ತು 457) ಗಮನಾರ್ಹ ಏರಿಕೆಯನ್ನು ವಾಯು ಗುಣಮಟ್ಟ ನಿರ್ವಹಣಾ ಆಯೋಗ ಗಮನಿಸಿದೆ. ಈ ಪ್ರದೇಶಕ್ಕೆ ವಾಯುಮಾಲಿನ್ಯ ತಗ್ಗಿಸುವ ಕಾರ್ಯತಂತ್ರಗಳನ್ನು ರೂಪಿಸುವ ಮತ್ತು ಅವುಗಳ ಅನುಷ್ಠಾನದ ಜವಾಬ್ದಾರಿಯನ್ನು ಹೊಂದಿರುವ ಶಾಸನಬದ್ಧ ಸಂಸ್ಥೆಯಾದ ಸಮಿತಿಯು, ಮತ್ತಷ್ಟು ಹದಗೆಡುವುದನ್ನು ತಡೆಗಟ್ಟಲು ತಕ್ಷಣವೇ ಗ್ರ್ಯಾಪ್ ಹಂತ -3 ನಿರ್ಬಂಧಗಳನ್ನು (‘ತೀವ್ರ’ ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) ಶ್ರೇಣಿ) ಜಾರಿಗೆ ತರಲು ನಿರ್ಧರಿಸಿದೆ. ಚಳಿಗಾಲದಲ್ಲಿ ಈ ಪ್ರದೇಶದಲ್ಲಿ ಜಾರಿಗೆ ತರಲಾದ ಕೇಂದ್ರದ ವಾಯುಮಾಲಿನ್ಯ ನಿಯಂತ್ರಣ ಯೋಜನೆಯಾದ ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್ (ಗ್ರ್ಯಾಪ್) ಕ್ರಮಗಳನ್ನು ನಾಲ್ಕು ಹಂತಗಳಾಗಿ ವರ್ಗೀಕರಿಸುತ್ತದೆ: ಹಂತ 1 – ‘ಕಳಪೆ’ (ಎಕ್ಯೂಐ 201-300);…

Read More

ಬೆಂಗಳೂರು: ಇಷ್ಟು ದಿನ ಅಡ್ರೆಸ್ ಇಲ್ಲದಂತೆ ಕಳೆದು ಹೋಗಿದ್ದ ತಾವು ಈಗ ಚುನಾವಣೆ ಸಮಯದಲ್ಲಿ ಮತ ಗಳಿಸಲು ರೋಷ, ಆವೇಶದ ಮಾತುಗಳನ್ನು ಆಡುತ್ತಿದ್ದೀರಿ ಎಂಬುದನ್ನು ಅರ್ಥ ಮಾಡಿಕೊಳ್ಳದೆ ಇರುವಷ್ಟು ಜನ ದಡ್ಡರಲ್ಲ. ಈ ಬಾರಿ ತಮಗೆ ತಕ್ಕ ಪಾಠ ಕಲಿಸುತ್ತಾರೆ. ನಿಮ್ಮನ್ನು ಶಾಶ್ವತವಾಗಿ ಅಡ್ರೆಸ್ ಗೆ ಇಲ್ಲದಂತೆ ಮಾಡುತ್ತಾರೆ. ನೋಡ್ತಾ ಇರಿ ಎಂಬುದಾಗಿ ಸಚಿವ ರಾಮಲಿಂಗಾರೆಡ್ಡಿ ಅವರು ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ. ಈ ಕುರಿತಂತೆ ಇಂದು ಎಕ್ಸ್ ಮಾಡಿರುವಂತ ಅವರು, ಲೋಕಸಭಾ ಸದಸ್ಯರಾದ ಅನಂತ್ ಕುಮಾರ್ ಹೆಗಡೆಯವರೇ, “ಕುಲವಂ ಪೇಳ್ವುದು ನಾಲ್ಗೆ” ಎಂಬ ಮಾತಿನಂತೆ ನಿಮ್ಮ ಸಂಸ್ಕಾರ ಏನು ಎಂಬುದನ್ನು ನೀವಾಡಿರುವ ಮಾತು ಪ್ರತಿಬಿಂಬಿಸುತ್ತಿದೆ. ಇದೇ ಏನು ಬಿಜೆಪಿ, ಆರ್ ಎಸ್ ಎಸ್, ನಿಮ್ಮ ತಂದೆ-ತಾಯಿ ನಿಮಗೆ ಕಲಿಸಿರುವ ಸಂಸ್ಕೃತಿ. ಇದೇ ಏನು ನಿಮ್ಮ ಆಚಾರ-ವಿಚಾರ? ಎಂದು ಪ್ರಶ್ನಿಸಿದ್ದಾರೆ. “ಆಚಾರವಿಲ್ಲದ ನಾಲಿಗೆ, ನಿನ್ನ ನೀಚ ಬುದ್ದಿಯ ಬಿಡು ನಾಲಿಗೆ’ ಎಂಬ ದಾಸರವಾಣಿಯನ್ನು ಪರಿಪಾಲಿಸಬೇಕಾದ ಸ್ಥಿತಿಗೆ ನೀವು…

Read More

ಚಿಕ್ಕಬಳ್ಳಾಪುರ: ಅನಂತ್ ಕುಮಾರ್ ಹೆಗಡೆ ಅವರೇ ನಾಲಿಗೆ ಹಿಡಿತದಲ್ಲಿ ಇರಲಿ. ಒಬ್ಬ ಅಹಿಂದಾ ಲೀಡರ್ ನೀವು. ರಾಜ್ಯ, ರಾಷ್ಟ್ರ ರಾಜಕಾರಣದ ವ್ಯಕ್ತಿ ಬಗ್ಗೆ ಮಾತನಾಡುವಾಗ ಎಚ್ಚರಿಕೆ ಇರಬೇಕು. ನಿಮಗೆ ಮಾನ ಮರ್ಯಾಧೆ ಇಲ್ವ ಅನಂತಕುಮಾರ್ ಹೆಗಡೆ ಅವರೇ. ಏನು ಹಿಂದೂ ಧರ್ಮ ನಿಮ್ಮಪ್ಪನ ಮನೆ ಸ್ವತ್ತಾ? ಎಂಬುದಾಗಿ ಶಾಸಕ ಪ್ರದೀಪ್ ಈಶ್ವರ್ ಕಿಡಿಕಿಡಿಯಾಗಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ನಾವು ಹಿಂದೂಗಳೆ ರೀ. ನಮ್ಮ ಎದೆ ಸೀಳಿದ್ರೆ ಶ್ರೀರಾಮನೂ ಕಾಣಿಸ್ತಾನೆ. ಸಿದ್ಧರಾಮಯ್ಯನೂ ಕಾಣಿಸ್ತಾರೆ. ಬಾಬಾ ಸಾಹೇಬ್ ಅಂಬೇಡ್ಕ್ ಕಾಣಿಸ್ತಾರೆ. ದೇವರಾಜ್ ಅರಸ್ ಅವರು ಕಾಣಿಸ್ತಾರೆ. ನನ್ನಂಥವರ ಎದೆಯಲ್ಲಿ ಶಿವಕುಮಾರ್ ಸ್ವಾಮೀಜಿನೂ ಕಾಣಿಸ್ತಾರೆ ಎಂದು ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ವಾಗ್ಧಾಳಿ ನಡೆಸಿದರು. ಏನೋ ಅನಂತ್ ಕುಮಾರ್ ಹೆಗಡೆ ಅವರೇ ಹಿಂದೂ ಧರ್ಮನ ನಿಮ್ಮಪ್ಪನ ಮನೆ ಆಸ್ತಿ ಥರ ಆಡ್ತಿದ್ದೀರಲ್ಲ. ನಿನಗೆ ಹೆಂಗೆ ರಕ್ತದಲ್ಲಿ ಹಿಂದೂ ಧರ್ಮ ಇದೆಯೋ, ನಮಗೂ ನಮ್ಮ ರಕ್ತದಲ್ಲಿ ಹಂಗೆ ಇದೆ. ಮೈಂಡ್ ಯುವರ್ ಟಂಗ್.…

Read More

ದಾವಣಗೆರೆ: ಸಂಸದ ಜಿಎಂ ಸಿದ್ದೇಶ್ವರ್ ಅವರಿಗೆ ಜೀವ ಬೆದರಿಕೆ ಹಾಕಿರೋದಾಗಿ ಗಂಭೀರ ಆರೋಪವನ್ನು ಸ್ವತಹ ಸಂಸದರೇ ಬಹಿರಂಗ ಪಡಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಸಂಸದ ಜಿ.ಎಂ ಸಿದ್ದೇಶ್ವರ್ ಅವರು, ತಮಗೆ ಜೀವ ಬೆದರಿಕೆ ಹಾಕಲಾಗಿದೆ. ನನಗೆ ಜೀವ ಬೆದರಿಕೆ ಇದೆ. ನನ್ನ ತೆಗೆಯಬೇಕು ಎಂದು ಕೆಲವರು ಕಾಯುತ್ತಿದ್ದಾರೆ ಎಂಬುದಾಗಿ ಗಂಭೀರ ಆರೋಪ ಮಾಡಿದ್ದಾರೆ. ಕಾಲು ತೆಗೆಯಬೇಕು. ವಿಷ ಹಾಕಿ ಸಾಯಿಸಬೇಕು ಅಂತ ಸಂಚು ರೂಪಿಸಿದ್ದಾರೆ. ಹೀಗಾಗಿ ಎಲ್ಲೇ ಹೋದ್ರೂ ಎಚ್ಚರದಿಂದ ಇರುತ್ತೇನೆ. ನನಗೆ ಯಾರು ಏನೇ ಕೊಟ್ಟರೂ ನಾನು ತಿನ್ನೋದಿಲ್ಲ. ಅಷ್ಟು ಜಾಗ್ರತೆಯನ್ನು ವಹಿಸಿರೋದಾಗಿ ಸ್ಪೋಟಕ ಬಾಂಬ್ ಸಿಡಿಸಿದ್ದಾರೆ. https://kannadanewsnow.com/kannada/suo-motu-case-filed-against-anant-kumar-hegde/ https://kannadanewsnow.com/kannada/anantkumar-hegde-pradeep-easwar/

Read More

ಮಂಗಳೂರು: ಸಿಎಂ ಸಿದ್ಧರಾಮಯ್ಯ ವಿರುದ್ಧ ಏಕವಚನದಲ್ಲೇ ವಾಗ್ಧಾಳಿ ಹಾಗೂ ಬಾಬ್ರಿ ಮಸೀದಿಯಂತೆ ಚಿನ್ನಪಲ್ಲಿ ಮಸೀದಿ ಧ್ವಂಸವಾಗೋದಾಗಿ ಹೇಳಿಕೆ ನೀಡಿದಂತ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಸುಮೋಟೋ ಕೇಸ್ ದಾಖಲಾಗಿದೆ. ಮಂಗಳೂರಿನ ಕುಮಟಾ ಪೊಲೀಸ್ ಠಾಣೆಯಲ್ಲಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಸುಮೋಟೋ ಕೇಸ್ ದಾಖಲಾಗಿದೆ. ಕಾರಣ ಅವರು ಭಟ್ಕಳದಲ್ಲಿರುವಂತ ಚಿನ್ನಪಲ್ಲಿ ಮಸೀದಿ ಬಾಬ್ರಿ ಮಸೀದಿಯಂತೆ ದ್ವಂಸ ಆಗಲಿದೆ ಅಂತ ಅಶಾಂತಿ ಮೂಡಿಸೋ ಆರೋಪದ ಹೇಳಿಕೆ ನೀಡಿದ್ದಕ್ಕಾಗಿ ಆಗಿದೆ. ದ್ವೇಷ ಭಾಷಣ ಮಾಡಿದ್ದಾರೆ ಎಂಬುದಾಗಿ ಸುಮೋಟೋ ಕೇಸ್ ದಾಖಲಿಸಲಾಗಿದೆ. ದ್ವೇಷ ಭಾಷಣ, ಅಶಾಂತಿ ಮೂಡಿಸಲು ಯತ್ನ ಆರೋಪದ ಮೇಲೆ ಕೇಸ್ ಬುಕ್ ಮಾಡಿದ್ದಾರೆ. ಐಪಿಸಿ ಸೆಕ್ಷನ್ 505, 153 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಮಾಧ್ಯಮಗಳಲ್ಲಿ ಹೇಳಿಕೆ ಪ್ರಸಾರವಾದ ಮೇಲೆ ಕೇಸ್ ಹಾಕಲಾಗಿದೆ. ಚಿನ್ನಪಲ್ಲಿ ಮಸೀದಿ ನಿರ್ನಾಮ ಆಗಲಿದೆ. ಬಾಬ್ರಿ ಮಸೀದಿ ಸಾಲಿಗೆ ಚಿನ್ನಪಲ್ಲಿ ಮಸೀದಿ ಸೇರಲಿದೆ ಅಂತ ಹೇಳಿದ್ದರು. ಅಲ್ಲದೇ ಸಿಎಂ ಸಿದ್ಧರಾಮಯ್ಯ ವಿರುದ್ಧ ಏಕವಚನದಲ್ಲೇ ಕಿಡಿಕಾರಿದ್ದರು. https://kannadanewsnow.com/kannada/anantkumar-hegde-pradeep-easwar/…

Read More

ಬೆಂಗಳೂರು: ನಗರದಲ್ಲಿ ಬಿಎಂಟಿಸಿ ಮಹಿಳಾ ಕಂಡಕ್ಟರ್ ಮೇಲೆ ಚಾಕುವನಿಂದ ಹಲ್ಲೆ ನಡೆಸಿರುವಂತ ಘಟನೆ ನಡೆದಿದೆ. ಮಹಿಳಾ ಪ್ರಯಾಣಿಕರೇ ಚಾಕುವಿನಿಂದ ಹಲ್ಲೆ ನಡೆಸಿದ್ದು, ಕಂಡಕ್ಟರ್ ಗಾಯಗೊಂಡಿದ್ದಾರೆ ಎನ್ನಲಾಗುತ್ತಿದೆ. ಬೆಂಗಳೂರಿನ ದಾಸರಹಳ್ಳಿಯಲ್ಲಿ ಡಿಪೋ ನಂ.40ಕ್ಕೆ ಸೇರಿದಂತೆ ಬಿಎಂಟಿಸಿ ಬಸ್ಸಿನಲ್ಲಿ ಮಹಿಳಾ ಕಂಡಕ್ಟರ್ ಮೇಲೆ ಮಹಿಳಾ ಪ್ರಯಾಣಿಕರು ಚಾಕುವಿನಿಂದ ಹಲ್ಲೆ ನಡೆಸಿರೋ ಘಟನೆ ನಡೆದಿದೆ. ಬಸ್ಸಿನಲ್ಲಿ ಟಿಕೆಟ್ ಪಡೆಯದೇ ಕುಳಿತಿದ್ದಂತವನ್ನು ಬಿಎಂಟಿಸಿ ಮಹಿಳಾ ಕಂಡಕ್ಟರ್ ಸುಕನ್ಯಾ ಪ್ರಶ್ನಿಸಿದ್ದಾರೆ. ಈ ವೇಳೆ ಪರಸ್ಪರ ವಾಗ್ವಾದ ನಡೆದು, ಆ ಬಳಿಕ ಮಹಿಳಾ ಬಿಎಂಟಿಸಿ ಕಂಡಕ್ಟರ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ ಎಂಬುದಾಗಿ ತಿಳಿದು ಬಂದಿದೆ. ಮಹಿಳಾ ಪ್ರಯಾಣಿಕರಿಂದ ಚಾಕುವಿನಿಂದ ಹಲ್ಲೆಗೆ ಒಳಗಾದಂತ ಬಿಎಂಟಿಸಿ ಬಸ್ ಕಂಡಕ್ಟರ್ ಅನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/airtel-5g-jio/ https://kannadanewsnow.com/kannada/anantkumar-hegde-pradeep-easwar/

Read More

ಬೆಂಗಳೂರು : “ಆಂಬುಲೆನ್ಸ್ ಗಳ ಸುಗಮ ಸಂಚಾರಕ್ಕೆ ಟ್ರಾಫಿಕ್ ಸಿಗ್ನಲ್ ಗಳ ಜೊತೆ ವೈರ್ ಲೆಸ್ ಸಂಪರ್ಕ, ಋತುಸ್ರಾವ ಮಹಿಳೆಯರ ಅನುಕೂಲಕ್ಕೆ ಸಾರ್ವಜನಿಕ ಸ್ಥಳಗಳಲ್ಲಿ ಪಿಂಕ್ ಬೂತ್ ಸ್ಥಾಪನೆ, ಸಮಾರಂಭಗಳಲ್ಲಿ ಬಳಸಿದ ಹೂವು ಮತ್ತು ಆಹಾರ ತ್ಯಾಜ್ಯಗಳ ಸಮರ್ಪಕ ವಿಲೇವಾರಿ ಸೇರಿ ಐಡಿಯಾಥಾನ್ ಸ್ಪರ್ಧೆಯ ಅತ್ಯುತ್ತಮ ಸಲಹೆಗಳನ್ನು ಜಾರಿ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕಳೆದೊಂದು ತಿಂಗಳಿಂದ ನಡೆದ ಯುವ ನಾಯಕತ್ವ ಸಮ್ಮೇಳನ ಹಾಗೂ ಐಡಿಯಾಥಾನ್ ಸ್ಪರ್ಧೆಯ ಅಂತಿಮ ಸುತ್ತು ನಗರದಲ್ಲಿ ಶನಿವಾರ ನಡೆಯಿತು. ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದ ಶಿವಕುಮಾರ್ ಅವರು, ಬ್ರಾಂಡ್ ಬೆಂಗಳೂರು ಯೋಜನೆ ಮೂಲಕ ಬೆಂಗಳೂರಿನ ಸಮಸ್ಯೆಗಳಿಗೆ ಶಾಲಾ ಮಕ್ಕಳು ಈ ಐಡಿಯಾಥಾನ್ ಸ್ಪರ್ಧೆ ಮೂಲಕ ಉತ್ತಮ ಸಲಹೆಗಳನ್ನು ನೀಡಿದ್ದಾರೆ. ದೇಶದ ಬೆಳವಣಿಗೆಗೆ ನಿಮ್ಮ ಆಲೋಚನೆ, ನಾಯಕತ್ವ ಗುಣ ಅತ್ಯಗತ್ಯ. ಕೇವಲ ರಾಜಕಾರಣಿಗಳು ಮಾತ್ರ ನಾಯಕರಲ್ಲ. ನಿಮ್ಮಲ್ಲೂ ನಾಯಕತ್ವ ಗುಣ ಇವೆ. ನೀವು ಯಾವುದೇ ಕ್ಷೇತ್ರ ಆಯ್ಕೆ ಮಾಡಿಕೊಂಡರೂ ನಾಯಕತ್ವದ ಗುಣ ಬೆಳೆಸಿಕೊಳ್ಳಬೇಕು…

Read More

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಾಲ್ಕು ನಗರಗಳಿಗೆ ಒಂದು ಎನ್ನುವಂತೆ ಆರ್.ಟಿಓ ಕಚೇರಿಯಿದೆ. ಈ ಕಚೇರಿಗೆ ಡಿಎಲ್, ವಾಹನ ನೋಂದಣಿ ಸೇರಿದಂತೆ ವಿವಿಧ ಕಾರ್ಯಗಳಿಗಾಗಿ ಜನರು ಬಂದ್ರೆ ಆರ್.ಟಿಓ ಇಲ್ಲದೇ ಜನರು ದಿನಂಪ್ರತಿ ಪರದಾಡುತ್ತ, ಹೈರಾಣಾಗುತ್ತಿರೋ ಘಟನೆ ನಡೆಯುತ್ತಿದೆ. ಹೌದು.. ಶಿವಮೊಗ್ಗ ಜಿಲ್ಲೆಯ ಸಾಗರದ ಆರ್ ಟಿ ಓ ಕಛೇರಿಯಲ್ಲಿ ಉಪ ಸಾರಿಗೆ ಅಧಿಕಾರಿಗಳ ಅನುಪಸ್ಥಿತಿ ಸಾಗರದ ವಾಹನ ಮಾಲಿಕರು ಪರದಾಡುವ ಪರಿಸ್ಥಿತಿ ಬಂದಿದೆ. ಯಾಕೆ ಈ ಸಮಸ್ಯೆ.? ಸಾಗರದ ಆರ್ ಟಿ ಒ ಕಛೆರಿಗೆ ಸಾಗರ ಶಿಕಾರಿಪುರ ಶಿರಾಳಕೊಪ್ಪ. ಸೊರಬ ಹೊಸನಗರದಿಂದ ಜನರು ಬರುತ್ತಾರೆ ಬಂದ ಮೇಲೆ ಉಪ ಸಾರಿಗೆ ಅಧಿಕಾರಿಗಳ ಗೈರು ನೋಡಿ ಹೊರ ತಾಲೂಕಿನಿಂದ ಬಂದವರು ತಾಲೂಕು ಆಡಳಿತಕ್ಕೆ ಹಿಡಿ ಶಾಪ ಹಾಕಿ ಹೊಗುತಿದ್ದಾರೆ ಸಾಗರದ ಉಪ ಸಾರಿಗೆ ಅಧಿಕಾರಿ ರಾಕೇಶ್ ಕುಮಾರ್ ಗೈರು ಇದರ ಬಗ್ಗೆ ಮಾಹಿತಿ ಕಲೆ ಹಾಕಿದಾಗ ಗೊತ್ತಾಗಿದ್ದು, ಎರಡು ಕಡೆ ಅವರನ್ನು ಡೆಪ್ಯೂಟೇಷನ್ ಮೇಲೆ ಕರ್ತವ್ಯಕ್ಕೆ ನಿಯೋಜಿಸಿರೋದು ಆಗಿದೆ. ಹೀಗೆ ಎರಡು ಆರ್…

Read More

ನವದೆಹಲಿ: ಪೂಂಚ್ ಮತ್ತು ರಾಜೌರಿ ಪ್ರದೇಶಗಳಲ್ಲಿ ಇತ್ತೀಚೆಗೆ ನಡೆದ ಅನೇಕ ಭಯೋತ್ಪಾದಕ ದಾಳಿಗಳ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ( Jammu and Kashmir ) ಆಪರೇಷನ್ ಸರ್ವಶಕ್ತಿ ( Operation Sarvashakti ) ಎಂಬ ದೊಡ್ಡ ಪ್ರಮಾಣದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯನ್ನು ಪ್ರಾರಂಭಿಸಲು ಭಾರತೀಯ ಸೇನೆ (  Indian Army ) ನಿರ್ಧರಿಸಿದೆ. ಪಿರ್ ಪಂಜಾಲ್ ಶ್ರೇಣಿಗಳ ಎರಡೂ ಬದಿಗಳಲ್ಲಿ ಆಪರೇಷನ್ ಸರ್ವಶಕ್ತಿಯನ್ನು ಪ್ರಾರಂಭಿಸಲಾಗುವುದು. ಸೇನಾ ಪ್ರಧಾನ ಕಚೇರಿ ಮತ್ತು ಉತ್ತರ ಕಮಾಂಡ್ನ ನಿಕಟ ಮೇಲ್ವಿಚಾರಣೆಯಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕರ ವಿರುದ್ಧ ಕ್ರಮಗಳನ್ನು ಕೈಗೊಳ್ಳಲಿವೆ ಎಂದು ಭದ್ರತಾ ಸಂಸ್ಥೆಯ ಉನ್ನತ ಮೂಲಗಳು ತಿಳಿಸಿವೆ. ಪಾಕಿಸ್ತಾನದ ಯೋಜನೆಗಳನ್ನು ತಡೆಯಲು ಭಾರತೀಯ ಸೇನೆ, ರಾಜ್ಯ ಸಂಸ್ಥೆಗಳು ಮತ್ತು ಗುಪ್ತಚರ ಸಂಸ್ಥೆಗಳು ಪರಸ್ಪರ ನಿಕಟ ಸಮನ್ವಯದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ (  Union Home Minister Amit Shah ) ಅವರು ಜಮ್ಮು ಮತ್ತು…

Read More

ಬೆಂಗಳೂರು: ನಾನು ಯಾವುದೇ ಕಾರಣಕ್ಕೂ ನಾನು ಲೋಕಸಭೆಗೆ ಸ್ಪರ್ಧೆ ಮಾಡೊದಿಲ್ಲ. 92 ವರ್ಷ ಆಯ್ತು. ರಾಜ್ಯಸಭೆಯ ಅವಧಿ ಇನ್ನು ಎರಡೂವರೆ ವರ್ಷ ಇದೆ. ರಾಜ್ಯಸಭೆಯೇ ಸಾಕು. ಚುನಾವಣೆ ವೇಳೆ ಮೈತ್ರಿಕೂಟದ ಪರವಾಗಿ ಪ್ರಚಾರ ಮಾಡುತ್ತೇನೆ. ನಮ್ಮ ಪಕ್ಷದ ಪರವಾಗಿ ಪ್ರವಾಸ ಮಾಡುತ್ತೇನೆ. ಬಿಜೆಪಿಯವರು ಎಲ್ಲಿಗೆ ಕರೆದರೂ ಹೋಗುತ್ತೇನೆ. ಮಾತನಾಡುವ ಶಕ್ತಿ ಇದೆ, ನನಪಿನ ಶಕ್ತಿ ಇದೆ ಎಂಬುದಾಗಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಸ್ಪಷ್ಟ ಪಡಿಸಿದ್ದಾರೆ. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಟಿ ಉದೇಶಿಸಿ ಮಾತನಾಡಿದ ಅವರು; ಒಂದು ಬಾರಿ ಸಂಸತ್ ಸದಸ್ಯರಾದವರನ್ನು ಮಂತ್ರಿ ಮಾಡಿದ್ದಾರೆ. ಮೋದಿ‌ ಅವರ‌ ಆಕ್ಷನ್ ಪ್ಲ್ಯಾನ್ ಅವರ ಸಹೋದ್ಯೋಗಿಗಳಿಗೂ ಗೊತ್ತಾಗುವುದಿಲ್ಲ. ಹೀಗಾಗಿ ಅವರ ಮನಸ್ಸಿ‌ಲ್ಲಿ ಏನಿದೆಯೋ ನನಗೆ ಗೊತ್ತಿಲ್ಲ ಎಂದರು. ಲೋಕಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡುತ್ತಾರಾ? ಇಲ್ಲವಾ? ಎಂದು ಕೇಳಲಾದ ಪ್ರಶ್ನೆಗೂ ಉತ್ತರಿಸಿದ ಅವರು; ನರೇಂದ್ರ ಮೋದಿ ಅವರು ಏನು ಹೇಳ್ತಾರೋ ನೊಡೋಣ. ಅವರ ಮನಸಿನಲ್ಲಿ ಇದೆಯೋ ಗೊತ್ತಿಲ್ಲ. ಮೋದಿ…

Read More