Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಇಂಡಿಗೊ, ವಿಸ್ತಾರಾ, ಸ್ಪೈಸ್ ಜೆಟ್ ನ 7 ವಿಮಾನಗಳು ಮತ್ತು ಏರ್ ಇಂಡಿಯಾದ 6 ವಿಮಾನಗಳು ಸೇರಿದಂತೆ ಸುಮಾರು 27 ವಿಮಾನಗಳಿಗೆ ಶುಕ್ರವಾರ ಹೊಸ ಬಾಂಬ್ ಬೆದರಿಕೆ ಬಂದಿದೆ. ಕಳೆದ 11 ದಿನಗಳಲ್ಲಿ, ಭಾರತೀಯ ವಾಹಕಗಳು ನಿರ್ವಹಿಸುವ ಸುಮಾರು 300 ಎಲ್ಲಾ ವಿಮಾನಗಳನ್ನು ಇಂತಹ ಬೆದರಿಕೆಗಳೊಂದಿಗೆ ಗುರಿಯಾಗಿಸಲಾಗಿದೆ. ಬಾಂಬ್ ಬೆದರಿಕೆ ಹಿನ್ನಲೆಯಲ್ಲಿ ವಿಮಾನಗಳ ಹಾರಾಟಕ್ಕೆ ಸಮಸ್ಯೆ ಕೂಡ ಉಂಟಾಗಿದೆ. https://kannadanewsnow.com/kannada/life-insurance-cut-by-at-least-6-25-of-average-salary-for-state-government-employees/ https://kannadanewsnow.com/kannada/good-news-for-police-aspirants-state-govt-gives-green-signal-for-4115-recruitment/
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನವನ್ನು ಜಾರಿಗೊಳಿಸಲಾಗಿದೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರದಿಂದ ವಿಮಾ ನಿಯಮಾವಳಿಯಂತೆ ಸರಾಸರಿ ವೇತನದ ಕನಿಷ್ಠ ಶೇ.6.25ರಷ್ಟು ಮಾಸಿಕ ವಿಮಾ ಕಂತಿಗೆ ವಿಮಾ ಇಲಾಖೆಯಿಂದ ಜೀವ ವಿಮೆಗೆ ಕಡ್ಡಾಯವಾಗಿ ವೇತನವನ್ನು ಕಡಿತಗೊಳಿಸುವುದಾಗಿ ಆದೇಶದಲ್ಲಿ ತಿಳಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದ ಖಜಾನೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ನಿರ್ದೇಶಕರು, ಕರ್ನಾಟಕ ಸರ್ಕಾರಿ ಜೀವ ವಿಮೆ ಇಲಾಖೆ, ಇವರು ಉಲ್ಲೇಖಿತ ಪತ್ರದಲ್ಲಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕಡ್ಡಾಯ ಜೀವ ವಿಮಾ ನಿಯಮಾವಳಿಗಳ ನಿಯಮ 8 ರಂತೆ ಪ್ರತಿಯೊಬ್ಬ ರಾಜ್ಯ ಸರ್ಕಾರಿ ನೌಕರ/ಅಧಿಕಾರಿಯು, ಅವರು ಹೊಂದಿರುವ ಹುದ್ದೆಯ ವೇತನ ಶ್ರೇಣಿಯ ಸರಾಸರಿ ವೇತನದ ಕನಿಷ್ಠ ಶೇ 6.25 ರಷ್ಟು ಮಾಸಿಕ ವಿಮಾ ಕಂತಿಗೆ ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯಲ್ಲಿ ಕಡ್ಡಾಯವಾಗಿ ಜೀವವಿಮೆ ಪಡೆಯಬೇಕಿರುತ್ತದೆ. ಕಡ್ಡಾಯ ಜೀವ ವಿಮಾ ನಿಯಮಾವಳಿಗಳ ನಿಯಮ 6 (ii) ರನ್ವಯ 50 ವರ್ಷ ವಯಸ್ಸು ಮೀರಿದ ರಾಜ್ಯ ಸರ್ಕಾರಿ ನೌಕರರಿಗೆ ಜೀವ ವಿಮಾ…
ಬೆಂಗಳೂರು: “ಶಿಗ್ಗಾಂವಿ ಉಪಚುನಾವಣೆ ಸಂಬಂಧ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಬಂಡಾಯವಿಲ್ಲ. ಸೈಯದ್ ಅಜ್ಜಂ ಪೀರ್ ಖಾದ್ರಿ ಅವರು ನಾಮಪತ್ರ ಹಿಂಪಡೆಯಲಿದ್ದು, ಎಲ್ಲರೂ ಒಟ್ಟಾಗಿ ಪಕ್ಷದ ಪರವಾಗಿ ಚುನಾವಣೆ ಮಾಡುತ್ತಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿ ಬಳಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಶಿಗ್ಗಾಂವಿಯಲ್ಲಿ ಖಾದ್ರಿ ಅವರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಬಗ್ಗೆ ಕೇಳಿದಾಗ, “ನಾನು ಖಾದ್ರಿ ಅವರು ಹಾಗೂ ಅವರ ಕಾರ್ಯಕರ್ತರ ಜತೆ ಮಾತನಾಡಿದ್ದೇನೆ. ಈ ವಿಚಾರವಾಗಿ ಸಚಿವರಾದ ಜಮೀರ್ ಅಹ್ಮದ್, ರಹೀಂ ಖಾನ್, ರೆಹಮಾನ್ ಖಾನ್ ಸೇರಿದಂತೆ ಆ ಜಿಲ್ಲೆಯ ನಾಯಕರ ಜತೆ ಚರ್ಚೆ ಮಾಡಿದ್ದು, ನಾಮಪತ್ರ ಹಿಂಪಡೆದು ಒಟ್ಟಾಗಿ ಕೆಲಸ ಮಾಡಲಾಗುವುದು” ಎಂದು ತಿಳಿಸಿದರು. https://kannadanewsnow.com/kannada/karnataka-govt-is-going-to-make-pakistan-pakistan-tejasvi-surya/ https://kannadanewsnow.com/kannada/good-news-for-police-aspirants-state-govt-gives-green-signal-for-4115-recruitment/
ಬೆಂಗಳೂರು: ಕರ್ನಾಟಕವನ್ನು ರಾಜ್ಯ ಸರ್ಕಾರ ಪಾಕಿಸ್ತಾನ ಮಾಡಲು ಹೊರಟಿದೆ. ವಿಜಯಪುರದ ಒಂದು ಜಿಲ್ಲೆಯ 15 ಸಾವಿರ ಎಕರೆ ರೈತರ ಜಮೀನನ್ನು ವಕ್ಫ್ ಬೋರ್ಡ್ ನನ್ನದು ಎಂದು ಹೇಳಿ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಿದೆ. ಸಚಿವ ಜಮೀರ್ ಅಹ್ಮದ್ ಅವರು ಅಧಿಕಾರಿಗಳ ಮೇಲೆ ಒತ್ತಡ ಹೇರಿ ರೈತರ ಜಮೀನನ್ನು ವಕ್ಫ್ ಬೋರ್ಡ್ ಬರೆಯಿಸಲು ಹೊರಟಿದ್ದಾರೆ ಎಂಬುದಾಗಿ ಸಂಸದ ತೇಜಸ್ವಿ ಸೂರ್ಯ ಅವರು ವಾಗ್ದಾಳಿ ನಡೆಸಿದ್ದಾರೆ. ಇಂದು ಬೆಂಗಳೂರಿನ ಜಯನಗರದ ಸಂಸದರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ವಿಜಯಪುರ ಜಿಲ್ಲೆ ತ್ರಿಕೋಟ ತಾಲೂಕಿನ ಹೊನ್ನವಾಡ ಗ್ರಾಮದಲ್ಲಿ 11,500 ಎಕರೆ ಪ್ರದೇಶದ ರೈತರ ಜಮೀನನ್ನು ಸರ್ಕಾರ ರಾತ್ರೋ ರಾತ್ರಿ ವಕ್ಫ್ ಬೋರ್ಡ್ ಗೆ ನೀಡಲು ಹೊರಟಿದೆ. ಪ್ರಧಾನಿ ನರೇಂದ್ರ ಮೋದಿ ಅವರು ವಕ್ಪ್ ಬೋರ್ಡ್ ಕಾನೂನಿಗೆ ತಿದ್ದುಪಡಿಯನ್ನು ತರಲು ಹೊರಟಿರುವ ಕಾರಣಕ್ಕೆ ಸಚಿವ ಜಮೀರ್ ಅವರು ಈ ಕಾರ್ಯಕ್ಕೆ ಮುಂದಾಗಿದ್ದಾರೆ ಎಂಬುದಾಗಿ ಗುಡುಗಿದರು. ಮುಸ್ಲಿಂರು ಕಾಂಗ್ರೆಸ್ ಗೆ ಮತ ಹಾಕುತ್ತಾರೆ ಎಂಬ ಕಾರಣದಿಂದ ಹಿಂದೂಗಳ ಜಮೀನನ್ನು ಮುಸ್ಲಿಮರಿಗೆ ಹೊರಟಿದೆ. ವಿಜಯಪುರ…
ನವದೆಹಲಿ: ಭಾರತದಲ್ಲಿ, ವಿವಿಧ ರೀತಿಯ ಪಡಿತರ ಚೀಟಿಗಳಿವೆ. ರಾಜ್ಯ ಸರ್ಕಾರವು ಜನರನ್ನು ವರ್ಗೀಕರಿಸುತ್ತದೆ ಮತ್ತು ವಿವಿಧ ವರ್ಗಗಳ ಪ್ರಕಾರ ವಿಭಿನ್ನ ಪಡಿತರ ಚೀಟಿಗಳನ್ನು ನೀಡುತ್ತದೆ. ಹಾಗಾದ್ರೆ ದೇಶದಲ್ಲಿರುವಂತ BPL, APL ಸೇರಿದಂತೆ ವಿವಿಧ ಮಾದರಿಯ ರೇಷನ್ ಕಾರ್ಡ್ ಗಳು ಯಾವುವು.? ಅವುಗಳ ಪ್ರಯೋಜನಗಳು ಏನೇನು ಎಂಬುದಾಗಿ ಮುಂದೆ ಓದಿ. ಪಡಿತರ ಚೀಟಿ ಎಂದರೇನು? ಪಡಿತರ ಚೀಟಿಯು ಆಯಾ ರಾಜ್ಯ ಸರ್ಕಾರಗಳು ನೀಡುವ ಅಧಿಕೃತ ದಾಖಲೆಯಾಗಿದೆ. ಈ ಕಾರ್ಡ್ ಸಹಾಯದಿಂದ, ಅರ್ಹ ಕುಟುಂಬಗಳು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್ಎಫ್ಎಸ್ಎ), 2013 ರ ಪ್ರಕಾರ ಸಬ್ಸಿಡಿ ದರದಲ್ಲಿ ಆಹಾರ ಧಾನ್ಯಗಳನ್ನು ಖರೀದಿಸಬಹುದು. ಈ ಹಿಂದೆ, ರಾಜ್ಯ ಸರ್ಕಾರಗಳ ಗುರುತಿನ ಆಧಾರದ ಮೇಲೆ, ಅರ್ಹ ಕುಟುಂಬಗಳು ಟಾರ್ಗೆಟೆಡ್ ಪಬ್ಲಿಕ್ ಡಿಸ್ಟ್ರಿಬ್ಯೂಷನ್ ಸಿಸ್ಟಮ್ (ಟಿಪಿಡಿಎಸ್) ಮೂಲಕ ಸಬ್ಸಿಡಿ ದರದಲ್ಲಿ ಆಹಾರ ಧಾನ್ಯಗಳನ್ನು ಖರೀದಿಸಬಹುದಾಗಿದೆ. 2013 ರಲ್ಲಿ, ರಾಷ್ಟ್ರೀಯ ಆಹಾರ ಮತ್ತು ಭದ್ರತಾ ಕಾಯ್ದೆ (ಎನ್ಎಫ್ಎಸ್ಎ) ಅನ್ನು ಜನರಿಗೆ ಕೈಗೆಟುಕುವ ಬೆಲೆಯಲ್ಲಿ ನಿರ್ದಿಷ್ಟ ಪ್ರಮಾಣ ಮತ್ತು ಗುಣಮಟ್ಟದ…
ಬೆಂಗಳೂರು: ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿರುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2024-25ನೇ ಸಾಲಿಗೆ ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ “ಮೀಡಿಯಾ ಕಿಟ್” ವಿತರಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮಾಧ್ಯಮ ಮಾನ್ಯತೆ ಪಡೆದ ಪತ್ರಕರ್ತರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸುದ್ದಿ ಮತ್ತು ಪತ್ರಿಕಾ ವಿಭಾಗದಿಂದ ಅಥವಾ ಆಯಾ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿಗಳಿಂದ ಅರ್ಜಿ ನಮೂನೆಯನ್ನು ಪಡೆದುಕೊಂಡು, ಇಲಾಖೆಯ ಮಾನ್ಯತಾ ಕಾರ್ಡು (Accriditation Card) , ಜನ್ಮ ದಿನಾಂಕ, ಖಾಯಂ ವಿಳಾಸ, ವಿದ್ಯಾರ್ಹತೆ, ಜಾತಿ (ಉಪಜಾತಿ), ಪತ್ರಿಕಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸೇವಾನುಭವ, ವೇತನ ವಿವರಗಳನ್ನೊಳಗೊಂಡ ಮಾಹಿತಿಯನ್ನು ಭರ್ತಿ ಮಾಡಿ ಸ್ವ-ವಿಳಾಸವಿರುವ ಲಕೋಟೆಯೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಬಯಸುವವರು ಅರ್ಜಿಯೊಂದಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ…
ಬೆಂಗಳೂರು: 2022-23ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಆಯ್ಕೆಯಾದ ಪದವೀಧರ ಪ್ರಾಥಮಿಕ ಶಿಕ್ಷಕರಿಗೆ ಶಾಲಾ ಶಿಕ್ಷಣ ಇಲಾಖೆಯಿಂದ ಗುಡ್ ನ್ಯೂಸ್ ನೀಡಲಾಗಿದೆ. ಅದೇ 6 ರಿಂದ 8ನೇ ತರಗತಿ ಶಾಲೆಗಳ ಶಿಕ್ಷಕರ ಹುದ್ದೆಗೆ ಆಯ್ಕೆಯಾಗಿರುವವರಿಗೆ ಕೌನ್ಸಿಲಿಂಗ್ ಪ್ರಕ್ರಿಯೆ ಮೂಲಕ ಸ್ಥಳ ಆಯ್ಕೆ ಮಾಡಿಕೊಂಡಿರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡುವ ಮತ್ತು ಕೌನ್ಸಿಲಿಂಗ್ ಮೂಲಕ ಸ್ಥಳ ನಿಯುಕ್ತಿಗೆ ಆದೇಶಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಪ್ರಾಥಮಿಕ ವಿಭಾಗದ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಅದರಲ್ಲಿ 2022-23 ನೇ ಸಾಲಿನಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿನ ಖಾಲಿ ಹುದ್ದೆಗಳಿಗೆ ಆಯ್ಕೆಯಾದ ಅರ್ಹ ಪದವೀಧರ ಪ್ರಾಥಮಿಕ ಶಿಕ್ಷಕರು ( 6 ರಿಂದ 8 ನೇ ತರಗತಿ) ಹುದ್ದೆಗೆ ಕೌನ್ಸಿಲಿಂಗ್ ಮೂಲಕ ಸ್ಥಳ ಹಂಚಿಕೆ ಪಕ್ರಿಯೆ ಕೈಗೊಳ್ಳಲಾಗಿತ್ತು ಎಂದಿದ್ದಾರೆ. ಮಾನ್ಯ ಭಾರತ ಸರ್ವೋಚ್ಚ ನ್ಯಾಯಾಲಯದ RECORD OF PROCEEDINGS ದಿ: 04.10.2024ರ ಆದೇಶಾನುಸಾರ ನೇಮಕಾತಿ ಆದೇಶ ನೀಡಲು ಬಾಕಿ ಉಳಿದಿರುವ ಅಭ್ಯರ್ಥಿಗಳಿಗೆ ನೇಮಕಾತಿ ನೀಡಲು ಅನುಮತಿಸಿದ. ಪ್ರಯುಕ್ತ…
BREAKING: ಶಿಗ್ಗಾವಿಯಲ್ಲಿ ಕಾಂಗ್ರೆಸ್ ಗೆ ಬಂಡಾಯದ ಬಿಸಿ: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಖಾದ್ರಿ
ಹಾವೇರಿ: ಜಿಲ್ಲೆಯ ಶಿಗ್ಗಾವಿ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುತ್ತಿದೆ. ಈ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರಿಗೆ ಟಿಕೆಟ್ ನೀಡಲಾಗಿದೆ. ಟಿಕೆಟ್ ನಿರೀಕ್ಷೆಯಲ್ಲಿದ್ದಂತ ಅಜ್ಜಂಪೀರ್ ಖಾದ್ರಿ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿರಲಿಲ್ಲ. ಹೀಗಾಗಿ ಇಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದಂತ ವೇಳೆಯಲ್ಲಿ ಖಾದ್ರಿ ಅವರು ಓಡೋಡಿ ಬಂದು ನಾಮಪತ್ರವನ್ನು ಸಲ್ಲಿಸಿದ್ದಾರೆ. ಶಿಗ್ಗಾವಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಂಡಾಯದ ಬಿಸಿ ತಟ್ಟಿದೆ. ಸಚಿವ ಜಮೀರ್ ಅಹ್ಮದ್ ಖಾನ್ ಅವರು ಅಜ್ಜಂಪೀರ್ ಖಾದ್ರಿ ಅವರ ಮನವೊಲಿಕೆಗೆ ಮಾಡಿದ ಪ್ರಯತ್ನ ಸಫಲವಾಗಿಲ್ಲ. ಇಂದು ನಾಮಪತ್ರ ಸಲ್ಲಿಸಲು ಕೊನೆಯ 13 ನಿಮಿಷದ ವೇಳೆಯಲ್ಲಿ ಓಡೋಡಿ ಬಂದು ಅಜ್ಜಂಪೀರ್ ಖಾದ್ರಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ. https://kannadanewsnow.com/kannada/good-news-for-police-aspirants-state-govt-gives-green-signal-for-4115-recruitment/ https://kannadanewsnow.com/kannada/bengaluru-power-outages-in-these-areas-from-october-27-to-30/
ಬೆಂಗಳೂರು: ದಿನಾಂಕ 27.10.2024 (ರವಿವಾರ) ದಿಂದ 30.10.2024 (ಬುಧವಾರ) ರ ವರೆಗೆ “66/11ಕೆ.ವಿ ಟೆಲಿಕಾಂ” ಸ್ಟೇಷನ್ ನಲ್ಲಿ 11ಕೆ,ವಿ ಬ್ಯಾಂಕ್-2 ನ ಬ್ರೇಕರಗಳನ್ನು ಬದಲಿಸುವ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು. ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು ಓಬಳೇಶ್ ಕಾಲೋನಿ, ರ‍್ಸಸ್ ಗರ‍್ಡನ್, ರಾಯಪುರ, ಬಿನ್ನಿ ಪೇಟ್, ಪಾದರಾಯನಪುರ, ಜೆಜೆಆರ್ ನಗರ, ಗೋಪಾಲನ್ ಮಾಲ್, ಮೈಸೂರು ರಸ್ತೆ 1ನೇ, 2ನೇ, 3ನೇ ಕ್ರಾಸ್, ಮೋಮಿಂಪುರ, ಜಂಥಾ ಕಾಲೋನಿ, ಶಾಮನಾ ಗರ‍್ಡನ್, ರ‍್ಫತ್ ನಗರ, ರಂಗನಾಥ್ ಕಾಲೋನಿ, ಹೊಸಹಳ್ಳಿ ಮುಖ್ಯರಸ್ತೆ, ಪರ‍್ಕ್ ನಾವು ಬಿನ್ನಿ ಪೇಟೆ, ಅಂಜನಪ್ಪ ಗರ‍್ಡನ್, ದೊರೆಸ್ವಾಮಿ ನಗರ ಕರೆಂಟ್ ಇರೋದಿಲ್ಲ. ಹೂವಿನ ಉದ್ಯಾನ, ಹೊಸ ಪೊಲೀಸ್ ಕ್ವಾಟ್ರಸ್, ಎಸ್‌ಡಿ ಮಠ, ಕಾಟನ್ ಪೆಟ್, ಅಕ್ಕಿಪೇಟೆ, ಬಾಲಾಜಿ ಕಾಂಪ್ಲೆಕ್ಸ್, ಮನರ‍್ತಿ ಪೆಟ್, ಸುಲ್ತಾನ್ ಪೆಟ್, ನಲ್ಬಂಡ್‌ವಾಡಿ ಎದುರು ಚಿಕ್ಕಪೇಟೆ ಮೆಟ್ರೋ ಸ್ಟೇಷನ್, ಪೊಲೀಸ್ ರಸ್ತೆ, ಗೋಪಾಲನ್ ಅಪರ‍್ಟ್‌ಮೆಂಟ್, ಮರಿಯಪ್ಪ ಎ. ಕೆಪಿಎಸ್ ಮಠ, ಗಂಗಪ್ಪ ಗರ‍್ಡನ್,…
ಬೆಂಗಳೂರು: ಕೆಪಿಟಿಸಿಎಲ್ 66/11ಕೆ.ವಿ ‘ಸಿ’ ಸ್ಟೇಷನ್ ಹಾಗೂ ವಿಕ್ಟೋರಿಯಾ” ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ದಿನಾಂಕ 27-10-2024ರ ಭಾನುವಾರದಂದು, ಬೆಂಗಳೂರಿನ ಈ ಕೆಳಕಂಡ ಪ್ರದೇಶಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಾಗಿದೆ. ಅ.27ರ ಭಾನುವಾರದಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಸಿ ಸ್ಟೇಷನ್ : “ಬ್ರಾಡ್ ವೇ ರಸ್ತೆ, ಕಾಕರ‍್ನ್ ರಸ್ತೆ, ಸ್ಟೇಷನ್ ರಸ್ತೆ, ಕ್ವೀನ್ಸ್ ರಸ್ತೆ, ಟೌನ್, ತಿಮ್ಮಯ್ಯ ರಸ್ತೆ, ಮಿಲ್ರ‍್ಸ್ ರಸ್ತೆ, ಸ್ಲಾಟರ್ ಹೌಸ್ ಮತ್ತು ಸುತ್ತಲಿನ ಪ್ರದೇಶ. ಕನ್ನಿಂಗ್ಹಾö್ಯಮ್ ರಸ್ತೆ, ಆಲಿ ಆಸ್ಕರ್ ರಸ್ತೆ, ಆಲಿ ಆಸ್ಕರ್ ರಸ್ತೆ ಕ್ರಾಸ್, ಚಿಕ್ಕ ಬಜಾರ್ ರಸ್ತೆ, ವೆಂಕಟಪ್ಪ ರಸ್ತೆ, ಮುನಿಸ್ವಾಮಿ ರಸ್ತೆ, ಪಾಯಪ್ಪ ಗಾರ್ಡನ್, ಸಿಮೆಂಟ್ರಿ ರಸ್ತೆ, ಪಾರ್ಕ್ ರಸ್ತೆ, ನಳ ರಸ್ತೆ, ನೋಹ ಸ್ಟ್ರೀಟ್, ಚಾಂದನಿ ಚೌಕ್, ಮಿಲ್ಲರ್ ಟ್ಯಾಂಕ್‌ಬಂಡ್ ರಸ್ತೆ, ಜಸ್ಮಾಭವನ ರಸ್ತೆ, ಸುಲ್ತಾನ್‌ಜಿಗುಂಟ ರಸ್ತೆ, ಹೇನ್ಸ್ ರಸ್ತೆ, ಬಂಬೂಬಜಾರ್, ಧನಕೋಟಿ ಲೇನ್ ಮತ್ತು ಸುತ್ತಲಿನ ಪ್ರದೇಶ. ನೆಹರುಪುರಂ,…












