Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು : ಸಮಾಜಘಾತುಕ ಶಕ್ತಿಗಳು ಹಾಗೂ ಉಗ್ರಗಾಮಿ ಸಂಘಟನೆಗಳು ನಡೆಸುತ್ತಿರುವ ದುಷ್ಕೃತ್ಯಗಳ ಬಗ್ಗೆ ರಾಜ್ಯದ ಕಾಂಗ್ರೆಸ್ ಸರಕಾರ ಸಹಾನುಭೂತಿ ಮನೋಭಾವ ಪ್ರದರ್ಶಿಸುತ್ತಿರುವುದು ಆಘಾತಕಾರಿ ಬೆಳವಣಿಗೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲೋಕಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು, ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ದೇಶದ್ರೋಹ ಕೆಲಸ ಮಾಡುತ್ತಿರುವ ರಾಜ್ಯ ಸರಕಾರವನ್ನು ವಜಾ ಮಾಡುವಂತೆ ರಾಜ್ಯಪಾಲರಿಗೂ ಮನವಿ ಸಲ್ಲಿಸಲಾಗಿದೆ. ಜನವಿರೋಧಿ ಧೋರಣೆಯ ಈ ಸರಕಾರಕ್ಕೆ ಒಂದು ಕ್ಷಣವೂ ಅಧಿಕಾರದಲ್ಲಿ ಮುಂದುವರಿಯುವ ನೈತಿಕತೆ ಇಲ್ಲ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಪ್ರಣಾಳಿಕೆ ಸಿದ್ಧಪಡಿಸುವುದಕ್ಕೆ ಪೂರ್ವಭಾವಿಯಾಗಿ ಜನತೆಯಿಂದ ಅಭಿಪ್ರಾಯ ಸಂಗ್ರಹಿಸುವ “ಸಂಕಲ್ಪ ಅಭಿಯಾನ” ಕಾರ್ಯಕ್ರಮಕ್ಕೆ ಪಕ್ಷದ ಕಚೇರಿಯಲ್ಲಿ ಭಾನುವಾರ ಚಾಲನೆ ನೀಡಿದ ಬಳಿಕ ಸುದ್ದಿಗಾರರಿಗೆ ಅವರು ಪ್ರತಿಕ್ರಿಯೆ ನೀಡಿದರು. ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಮತ್ತು ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಗಳಲ್ಲಿ ಸರಕಾರ ನಡೆದುಕೊಳ್ಳುತ್ತಿರುವ ರೀತಿ ಕಳವಳಕಾರಿಯಾಗಿದೆ. ದೇಶ ವಿದ್ರೋಹಿ ಶಕ್ತಿಗಳನ್ನೇ ಸಮರ್ಥನೆ ಮಾಡುವ,…
ಬೆಂಗಳೂರು: ನಗರದ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ನಡೆದಿದ್ದಂತ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಸಿಸಿಬಿಯಿಂದ ಕೆಲವು ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ. ಅವರನ್ನು ಆಡುಗೋಡಿಯ ಟೆಕ್ನಿಕಲ್ ಸೆಲ್ ನಲ್ಲಿ ತೀವ್ರವಾಗಿ ವಿಚಾರಣೆಗೆ ಒಳಪಡಿಸುತ್ತಿರೋದಾಗಿ ತಿಳಿದು ಬಂದಿದೆ. ಸಿಸಿಬಿ ಪೊಲೀಸರಿಂದ ಆಡುಗೋಡಿಯ ಟೆಕ್ನಿಕಲ್ ಸೆಲ್ ಗೆ ಶಂಕಿತರನ್ನು ಕರೆತಂದು ತೀವ್ರ ವಿಚಾರಣೆಯನ್ನು ನಡೆಸಲಾಗುತ್ತಿದೆ. ಈ ವಿಚಾರಣೆಯ ವೇಳೆಯಲ್ಲಿ ಅಡುಗೋಡಿಯ ಟೆಕ್ನಿಕಲ್ ಸೆಲ್ ಗೆ ಈಶಾನ್ಯ ವಿಭಾಗ ಡಿಸಿಲಿ ಲಕ್ಷ್ಮೀ ಪ್ರಸಾದ್ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಶುಕ್ರವಾರದಂದು ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಆಗಿತ್ತು. ಐದು ನಿಮಿಷಗಳಲ್ಲಿ ಎರಡು ಬಾರಿ ಸ್ಪೋಟ ಉಂಟಾಗಿತ್ತು. ಈ ಘಟನೆಯಲ್ಲಿ 10 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. https://kannadanewsnow.com/kannada/harsh-vardhan/ https://kannadanewsnow.com/kannada/pakistan-shehbaz-sharif-elected-prime-minister-three-weeks/
ಬೆಂಗಳೂರು: ಬಿಎಂಟಿಸಿಯಲ್ಲಿ ಖಾಲಿ ಇರುವಂತ 2500 ನಿರ್ವಾಹಕರ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಏಪ್ರಿಲ್ 10 ಕೊನೆಯ ದಿನವಾಗಿದೆ. ಈ ಕುರಿತಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ನಿರ್ವಾಹಕ ದರ್ಜೆ-3 ಮೇಲ್ವಿಚಾರಕೇತರ ಹುದ್ದೆಗಳನ್ನು ಭರ್ತಿ ಮಾಡಲು ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿರುವುದಾಗಿ ತಿಳಿಸಿದೆ. ಹುದ್ದೆಗಳ ವಿವರ ಮಿಕ್ಕುಳಿದ ವೃಂದ -2286 ಹುದ್ದೆಗಳು ಸ್ಥಳೀಯ ವೃಂದ – 199 ಹುದ್ದೆಗಳು ಹಾಗೂ ಹಿಂಬಾಕಿ 15 ಹುದ್ದೆಗಳು ಸೇರಿ 214 ಹುದ್ದೆಗಳು ಶೈಕ್ಷಣಿಕ ವಿದ್ಯಾರ್ಹತೆ ಪಿಯುಸಿ ಆರ್ಟ್ಸ್, ಕಾಮರ್ಸ್, ಸೈನ್ಸ್ ನಲ್ಲಿ ಉತ್ತೀರ್ಣರಾಗಿರಬೇಕು. ಅಥವಾ 10+2 ಐಸಿಎಸ್ಇ, ಸಿಬಿಎಸ್ಇರಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ತತ್ಸಮಾನ ವಿದ್ಯಾಹ್ರತೆ ಅಂದರೆ ತಾಂತ್ರಿಕ ಶಿಕ್ಷಣ ಇಲಾಖೆಯಿಂದ 3 ವರ್ಷಗಳ ಡಿಪ್ಲೋಮಾದಲ್ಲಿ ಉತ್ತೀರ್ಣರಾಗಿರತಕ್ಕದ್ದು. ಮಾನ್ಯತೆ ಹೊಂದಿರುವ ಮೋಟಾರು ವಾಹನ ನಿರ್ವಾಹಕ ಪರವಾನಗಿ ಮತ್ತು ಬ್ಯಾಡ್ಜ್ ಅನ್ನು ಹೊಂದಿರಬೇಕು. ವಯೋಮಿತಿ ಸಾಮಾನ್ಯ ವರ್ಗದವರಿಗೆ 35 ವರ್ಷಗಳು. 2ಎ,…
ಬೆಂಗಳೂರು: ಈವರೆಗೆ ಗ್ರಾಮ ಪಂಚಾಯ್ತಿ ಸೇವೆಗಳಿಗೆ ( Gramapanchayat Service ) ಸಂಬಂಧಿಸಿದಂತೆ ಕಚೇರಿಗೆ ತೆರಳಿ ಅರ್ಜಿಸಲ್ಲಿಸಬೇಕಾಗಿತ್ತು. ಆದ್ರೇ ಈಗ ಗ್ರಾಮ ಪಂಚಾಯ್ತಿ ಸೇವೆಗಳಿಗೆ ಅರ್ಜಿ ಸಲ್ಲಿಕೆ ಮತ್ತಷ್ಟು ಸರಳಗೊಳಿಸಲಾಗಿದೆ. ಅದೇನು ಅಂದ್ರೇ ಜಸ್ಟ್ ಈ ನಂಬರ್ ಗೆ ವಾಟ್ಸಾಪ್ ( WhatsApp ) ಮಾಡಿ ಸಾಕು. ಅದು ಹೇಗೆ ಅಂತ ಮುಂದೆ ಓದಿ. ರಾಜ್ಯ ಸರ್ಕಾರದಿಂದ ಸಾರ್ವಜನಿಕರಿಗೆ ಗ್ರಾಮ ಪಂಚಾಯ್ತಿ ಸೇವೆಗಳು ಕುಳಿತಲ್ಲೇ ಸಿಗುವಂತೆ ಮಾಡುವ ನಿಟ್ಟಿನಲ್ಲಿ ಪಂಚಮಿತ್ರ ವಾಟ್ಸಾಪ್ ಚಾಟ್ ಆರಂಭಿಸಲಾಗಿದೆ. ಇನ್ಮುಂದೆ ವಾಟ್ಸ್ ಆಪ್ ನಲ್ಲಿ ಗ್ರಾಮ ಪಂಚಾಯ್ತಿಯ ಅನೇಕ ಸೇವೆಗಳಿಗೆ ಅರ್ಜಿಯನ್ನು ಸಲ್ಲಿಸಿ, ಪಡೆಯಬಹುದಾಗಿದೆ. ಪಂಚಮಿತ್ರವು ಕರ್ನಾಟಕ ಗ್ರಾಮ ಪಂಚಾಯತಿಗಳ ಮುಖಪುಟವಾಗಿದ್ದು, ಸಾರ್ವಜನಿಕರ ಮಾಹಿತಿಯ ವೇದಿಕೆಯಾಗಿದೆ. ಯಾವುದೇ ಗ್ರಾಮ ಪಂಚಾಯಿತಿಯ ಚುನಾಯಿತ ಸದಸ್ಯರ, ಪಂಚಾಯಿತಿ ಸಿಬ್ಬಂದಿಗಳ, ಗ್ರಾಮ ಪಂಚಾಯಿತಿಯ ಸಭಾ ನಡುವಳಿಗಳು, ಮುಂಬರುವ ಸಭೆಗಳ ದಿನಾಂಕ ಮತ್ತು ಅದರಲ್ಲಿ ಚರ್ಚಿಸುವ ವಿಷಯಗಳು, ಗ್ರಾಮ ಪಂಚಾಯಿತಿಯ ಆದಾಯ, ಇತ್ಯಾದಿ ಮಾಹಿತಿಯನ್ನು ಸಾರ್ವಜನಿಕರು ತಿಳಿಯಬಹುದು. ವಾಟ್ಸಾಪ್ ಚಾಟ್ ಆರಂಭಿಸಲಾಗಿದ್ದು,…
ಬೆಂಗಳೂರು: ನಗರದಲ್ಲಿ ಕೆರೆಗಳ ಅಳಿವು ಉಳಿವಿನ ಪ್ರಶ್ನೆಯಾಗಿದೆ. ಬೆಂಗಳೂರಲ್ಲಿ ಕೆರೆ ನಿರ್ವಣೆಗಾಗಿ ಬಿಬಿಎಂಪಿ ಮಹತ್ವದ ಕ್ರಮ ಕೈಗೊಳ್ಳಲಾಗಿದ್ದು, ಸಾರ್ವಜನಿಕರಿಗೆ ಅದರಲ್ಲಿ ತೊಡಗಿಸಿಕೊಳ್ಳೋ ಅವಕಾಶವನ್ನು ನೀಡಲಾಗಿದೆ. ನೀವು ಬೆಂಗಳೂರಲ್ಲಿ ಕೆರೆ ರಕ್ಷಣೆ ಮಾಡೋ ಉದ್ದೇಶ ಹೊಂದಿದ್ದರೇ, ನಿಮಗೂ ಸುವರ್ಣಾವಕಾಶವಿದೆ. ಆ ಬಗ್ಗೆ ಮುಂದೆ ಓದಿ. ಈ ಕುರಿತಂತೆ ಬಿಬಿಎಂಪಿ ಮಾಹಿತಿ ನೀಡಿದ್ದು, ಬೆಂಗಳೂರಿನ ವ್ಯಾಪ್ತಿಯಲ್ಲಿ ಕೆರೆ ಮಿತ್ರರಾಗಲು ಈ ಹಿಂದೆ ಎರಡು ಬಾರಿ ಕೆರೆಗಳ ನಿರ್ವಹಣೆಯಲ್ಲಿ ನಾಗರೀಕರನ್ನು ಒಳಗೊಳ್ಳುವ ಉದ್ದೇಶದಿಂದ ಅಧಿಸೂಚನೆಯನ್ನು ಹೊರಡಿಸಿ ಆಸಕ್ತಿವುಳ್ಳ ನಾಗರೀಕರನ್ನು “ಕೆರೆ ಮಿತ್ರ” ಸ್ವಯಂಸೇವಕರಾಗಿ ನೊಂದಾಯಿಸಿಕೊಳ್ಳಲು ಕೋರಲಾಗಿತ್ತು. ಅದರಂತೆ 124 ಕೆರೆಗಳಿಗೆ ಈಗಾಗಲೇ ಕೆರೆ ಮಿತ್ರ ಸ್ವಯಂಸೇವಕರನ್ನು ಆಯ್ಕೆ ಮಾಡಲಾಗಿರುತ್ತದೆ. ಇನ್ನುಳಿದ ಕೆಲವು ಕೆರೆಗಳಿಗೆ ನಾಗರೀಕರು ನೊಂದಾಯಿಸದೇ ಇರುವುದರಿಂದ ಈ ಕೆರೆಗಳಿಗೆ ಹಾಗೂ ಕೆಲವು ಕೆರೆಗಳಿಗೆ ಕೇವಲ ಒಬ್ಬರು ನೊಂದಾಯಿಸಿರುವುದರಿಂದ ಒಟ್ಟಾಗಿ ಎಲ್ಲಾ ಕೆರೆಗಳಿಗೆ ನಾಗರೀಕರನ್ನು “ಕೆರೆ ಮಿತ್ರ” ಸ್ವಯಂ ಸೇವಕರನ್ನಾಗಿ ಪಾಲಿಕೆಯ ವೆಬ್ಸೈಟ್ನಲ್ಲಿ ನೊಂದಾಯಿಸಿಕೊಳ್ಳಲು ಕೋರಲಾಗಿದೆ. ಅದರಂತೆ ಬೆಂಗಳೂರಿನ ನಿವಾಸಿಗಳು ಅವರು ವಾಸವಿರುವ ವಾರ್ಡ್ /…
ಬೆಂಗಳೂರು: ರಾಜ್ಯ ಸರ್ಕಾರದಿಂದ ಹಾವು ಕಡಿತ ಚಿಕಿತ್ಸಾ ಕೇಂದ್ರಗಳನ್ನು ಗುರುತಿಸುವ ಬಗ್ಗೆ ಹಾಗೂ ಹಾವು ಕಡಿತದ ಪ್ರಕರಣಗಳಿಗೆ ವಿವಿಧ ಹಂತಗಳಲ್ಲಿ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಪ್ರಕಟಿತ ಮಾರ್ಗಸೂಚಿ ಕ್ರಮಗಳನ್ನು ಹಾವು ಕಡಿತಕ್ಕೆ ಚಿಕಿತ್ಸೆಯನ್ನು ನೀಡುವ ವೇಳೆಯಲ್ಲಿ ಕಡ್ಡಾಯವಾಗಿ ಪಾಲಿಸುವಂತೆಯೂ ಖಡಕ್ ಸೂಚನೆ ನೀಡಿದೆ. ರಾಜ್ಯ ಸರ್ಕಾರದಿಂದ ಕೆಲ ದಿನಗಳ ಹಿಂದಷ್ಟೇ ಹಾವು ಕಡಿತವನ್ನು ಅಧಿಸೂಚಿತ ಖಾಯಿಲೆ, ಘೋಷಿತ ಖಾಯಿಲೆ ಎಂಬುದಾಗಿ ಘೋಷಣೆ ಮಾಡಲಾಗಿತ್ತು. ಈ ಬೆನ್ನಲ್ಲೇ ಆರೋಗ್ಯ ಇಲಾಖೆಯಿಂದ ಹಾವುಗಳ ಕಡಿತಕ್ಕೆ ಚಿಕಿತ್ಸೆ ನೀಡುವ ಸಂಬಂಧ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಪ್ರಕಟಿತ ಮಾರ್ಗಸೂಚಿಯಲ್ಲಿ ಕರ್ನಾಟಕ ಸರ್ಕಾರವು ಹಾವು ಕಡಿತ ಪ್ರಕರಣ ಮತ್ತು ಮರಣವನ್ನು ಅಧಿಸೂಚಿತ ರೋಗವೆಂದು ಅಧಿಸೂಚನೆ ಸಂಖ್ಯೆ ಆಕುಕ 56 ಸಿಜಿಎಂ 2024 ದಿನಾಂಕ 12.02.2024 ರಂದು ಘೋಷಿಸಿದೆ. ರಾಜ್ಯದ ಎಲ್ಲಾ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ, ಎಲ್ಲಾ ಜಿಲ್ಲಾ ಆಸ್ಪತ್ರೆಗಳನ್ನು ಹಾಗೂ ಆಯ್ದ ಸಮುದಾಯ ಆರೋಗ್ಯ ಕೇಂದ್ರಗಳನ್ನು ಹಾವು ಕಡಿತ ಚಿಕಿತ್ಸಾ ಕೇಂದ್ರಗಳಾಗಿ ಗುರುತಿಸಲಾಗಿದೆ. ಹಾಗೂ ಹಾವು…
ಕನಕಗಿರಿ : ಶ್ರೇಷ್ಠತೆಯ ವ್ಯಸನದಿಂದ 58 ಲಕ್ಷ ಯಹೂದಿಗಳನ್ನು ಹತ್ಯೆ ಮಾಡಿದ ಹಿಟ್ಲರ್ ಕೊನೆಗೆ ಒಬ್ಬ ಹೇಡಿಯಂತೆ ಗುಂಡು ಹಾರಿಸಿಕೊಂಡು ಸತ್ತ. ಇಂಥಾ ಪರಿಸ್ಥಿತಿ ನಮ್ಮ ದೇಶದಲ್ಲಿ ಬರಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು. ಕೊಪ್ಪಳ ಜಿಲ್ಲೆಯ ಐತಿಹಾಸಿಕ ಕನಕಗಿರಿ ಉತ್ಸವವನ್ನು ಭವ್ಯವಾದ “ರಾಜಾ ಉಡಚಪ್ಪ ನಾಯಕ” ವೇದಿಕೆಯಲ್ಲಿ ಉದ್ಘಾಟಿಸಿ ಮಾತನಾಡಿದರು. ಇಲ್ಲಿ ಶ್ರೇಷ್ಠರು, ಕನಿಷ್ಠರು ಇಲ್ಲವೇ ಇಲ್ಲ. ತಮ್ಮನ್ನು ತಾವು ಶ್ರೇಷ್ಠರು ಎನ್ನುವವರು, ಮತ್ತೊಬ್ಬರನ್ನು ಕನಿಷ್ಠರು ಎನ್ನುವವರು ಮನುಷ್ಯರೇ ಅಲ್ಲ. ಈ ರೀತಿಯ ಶ್ರೇಷ್ಠತೆಯ ವ್ಯಸನವನ್ನು ಹೋಗಲಾಡಿಸಲು ಬಸವಣ್ಣ, ಅಂಬೇಡ್ಕರ್ ಹೋರಾಟ ಮಾಡಿದರು ಎಂದು ವಿವರಿಸಿದರು. ಸಮಾಜದಲ್ಲಿ ಅಸಮಾನತೆ ಇದೆ. ಇದನ್ನು ಹೋಗಲಾಡಿಸಲು ಏನಾದ್ರೂ ಪ್ರಯತ್ನ ಮಾಡಿದ್ವಾ ಎನ್ನುವ ಕುರಿತು ಪ್ರತಿಯೊಬ್ಬರೂ ತಮ್ಮನ್ನು ಪ್ರಶ್ನಿಸಿಕೊಳ್ಳಬೇಕು ಎಂದರು. ಚತುವರ್ಣವ್ಯವಸ್ಥೆ ರೂಪಿಸಿ ಒಬ್ಬರನ್ನು ಶ್ರೇಷ್ಠರು ಉಳಿದವರನ್ನು ಕನಿಷ್ಠರು ಎನ್ನುವ ವ್ಯವಸ್ಥೆ ರೂಪಿಸಿದರು. ಇದನ್ನೇ ಹಿಟ್ಲರ್ ಮತ್ತು ಮುಸಲೋನಿ ಜರ್ಮನಿಯಲ್ಲಿ ಮಾಡಿದ್ದು. ಕೊನೆಗೆ ಅವರಿಗೆ ಯಾವ ಗತಿ ಆಯ್ತು ಎಂದು ಇಡಿ ಮನುಕುಲ…
ಕೊಪ್ಪಳ: ಮುಂದಿನ ವರ್ಷ ಕನಕಗಿರಿ ಅಭಿವೃದ್ಧಿ ಪ್ರಾಧಿಕಾರವನ್ನು ರಚನೆ ಮಾಡಲಾಗುವುದು ಎಂದು ಸಿ.ಎಂ ಸಿದ್ಧರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ. ಕನಕಗಿರಿ ಉತ್ಸವವನ್ನು ನಿರಂತರವಾಗಿ ನಡೆಸಲು, ಕನಕಗಿರಿಯ ಸರ್ವತೋಮುಖ ಅಭಿವೃದ್ಧಿಗೆ ನಾನು ಮತ್ತು ನಮ್ಮ ಸರ್ಕಾರ ಸದಾ ಬದ್ದವಾಗಿದೆ. ಸರ್ವೋದಯ, ಸರ್ವದರ್ಮ, ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟುಕೊಂಡಿರುವವನು ನಾನು. ಈ ದಿಕ್ಕಿನಲ್ಲೇ ನಮ್ಮ ಸರ್ಕಾರ ಮುನ್ನಡೆಯಲಿದೆ. ಕೊಪ್ಪಳ ನನ್ನದೇ ಕ್ಷೇತ್ರ. ಈ ಜಿಲ್ಲೆಯ ಜನರ ಪ್ರೀತಿಗೆ ನಾನು ಸದಾ ಋಣಿ ಎಂದು ಕೃತಜ್ಞತೆ ಸಲ್ಲಿಸಿದರು. ಶ್ರೀ ವೇದಮೂರ್ತಿ ಭುವನೇಶ್ವರಯ್ಯ ತಾತನವರ ದಿವ್ಯ ಸಾನ್ನಿದ್ಯದಲ್ಲಿ ನಡೆದ ಉತ್ಸವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರೂ, ಕೊಪ್ಪಳ ಜಿಲ್ಲಾ ಸಚಿವರಾದ ಶಿವರಾಜ್ ತಂಗಡಗಿ ಸಂಗಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ರಾಯರೆಡ್ಡಿ, ಸಂಸದರಾದ ಕರಡಿ ಸಂಗಣ್ಣ, ಶಾಸಕರಾದ ರಾಘವೇಂದ್ರ ಹಿಟ್ನಾಳ್, ಜನಾರ್ಧನರೆಡ್ಡಿ, ದೊಡ್ಡನಗೌಡ ಪಾಟೀಲ್, ಇಕ್ಬಾಲ್ ಅನ್ಸಾರಿ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
ಶಿವಮೊಗ್ಗ: ಸೊರಬ ಪುರಸಭೆಯ 2023-24 ನೇ ಸಾಲಿನ ಶೇ.24.10 ಪರಿಶಿಷ್ಟ ಜಾತಿ(ಎಸ್ಸಿಪಿ) ಅನುದಾನದಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ(ಟಿಎಸ್ಪಿ) ಅನುದಾನದಡಿ ಅಡುಗೆ ಅನಿಲ ಸಂಪರ್ಕ ನೀಡಲು, ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಹಾಗೂ ಶೇ.5 ರ ವಿಕಲಚೇತನರ ಯೋಜನೆಯಡಿ ಅಂಗವಿಕಲರ ಉಪಯೋಗಕ್ಕೆ ಅಡುಗೆ ಅನಿಲ ಸಂಪರ್ಕ ಕಲ್ಪಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪುರಸಭೆ ಕಚೇರಿಯಿಂದ ಅರ್ಜಿ ಪಡೆದು ಮಾ.07 ರೊಳಗೆ ನಿಗದಿತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು ಎಂದು ಸೊರಬ ಪುರಸಭೆ ಮುಖ್ಯಾಧಿಕಾರಿ ತಿಳಿಸಿದ್ದಾರೆ. https://kannadanewsnow.com/kannada/is-covid-19-vaccine-increasing-the-risk-of-heart-attack-the-health-ministers-clarification-is-as-follows/ https://kannadanewsnow.com/kannada/sri-ramakrishna-vidyashala-mysuru-invites-applications-for-admission-to-8th-standard/
ಬೆಂಗಳೂರು: ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಮಟ್ಟದಲ್ಲಿ ಹಾಗೂ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಕ ಅಧಿಕಾರಿಗಳು ಪ್ರತಿ ಸೋಮವಾರ ತಮ್ಮ ಕಾರ್ಯಕ್ಷೇತ್ರದಲ್ಲಿ ಪ್ರವಾಸ ಮಾಡಿ ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳಬೇಕು, ತಮ್ಮ ಪ್ರವಾಸ ಸಮಯದಲ್ಲಿ ನರೇಗಾ ಕಾಮಗಾರಿಗಳ ವೀಕ್ಷಣೆ, ಕೂಸಿನ ಮನೆ ಹಾಗೂ ಅರಿವು ಕೇಂದ್ರಗಳ ತಪಾಸಣೆಯನ್ನು ಸೇರಿಸಿಕೊಳ್ಳಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದ್ದಾರೆ. ಪ್ರತಿ ತಿಂಗಳ ಎರಡನೆ ದಿನಾಂಕದಂದು ನಡೆಯುವ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಮಾಸಿಕ ವಿಡಿಯೋ ಕಾನ್ಪರೆನ್ಸ್ ವಿಮರ್ಶಾ ಸಭೆಯಲ್ಲಿ ಸಚಿವರು ಮಾತನಾಡಿದರು. ಬೇಸಿಗೆಯ ಪ್ರಖರತೆ ಹೆಚ್ಚಾಗುತ್ತಿದ್ದು ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಅಭಾವ ಜಾಸ್ತಿಯಾಗುತ್ತಿದೆ, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಮುಂದಿನ ಮೂರು ತಿಂಗಳುಗಳ ಕಾಲ ಪ್ರತಿ ಎರಡನೆ ಹಾಗೂ ನಾಲ್ಕನೆ ಸೋಮವಾರಗಳಂದು ಸಭೆ ನಡೆಸಿ ಕುಡಿಯುವ ನೀರಿನ ಪರಿಸ್ಥಿತಿಯ ಬಗ್ಗೆ ಅವಲೋಕನ ಮಾಡಬೇಕು, ನೀರಿನ ಅಭಾವ ಎದುರಿಸುವ ಗ್ರಾಮಗಳಿಗೆ ಪರ್ಯಾಯ ನೀರಿನ…