Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ : ಕೃಷಿ ಉತ್ಪಾದಕತೆ ಮತ್ತು ರೈತರ ಆದಾಯವನ್ನು ಹೆಚ್ಚಿಸುವ ಉದ್ದೇಶದಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ 109 ಅಧಿಕ ಇಳುವರಿ, ಹವಾಮಾನ-ಸ್ಥಿತಿಸ್ಥಾಪಕ ಮತ್ತು ಜೈವಿಕ ಬಲವರ್ಧಿತ ಬೀಜ ಪ್ರಭೇದಗಳನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಬಿಡುಗಡೆ ಮಾಡಿದರು. ಇಂಡಿಯನ್ ಕೌನ್ಸಿಲ್ ಆಫ್ ಅಗ್ರಿಕಲ್ಚರಲ್ ರಿಸರ್ಚ್ (ಐಸಿಎಆರ್) ಅಭಿವೃದ್ಧಿಪಡಿಸಿದ ಈ ಪ್ರಭೇದಗಳು 34 ಕ್ಷೇತ್ರ ಬೆಳೆಗಳು ಮತ್ತು 27 ತೋಟಗಾರಿಕೆ ಬೆಳೆಗಳು ಸೇರಿದಂತೆ 61 ಬೆಳೆಗಳನ್ನು ವ್ಯಾಪಿಸಿದೆ. ದೆಹಲಿಯ ಪೂಸಾ ಕ್ಯಾಂಪಸ್ನಲ್ಲಿ ಮೂರು ಪ್ರಾಯೋಗಿಕ ಕೃಷಿ ಪ್ಲಾಟ್ಗಳಲ್ಲಿ ಮೋದಿ ಬೀಜಗಳನ್ನು ಅನಾವರಣಗೊಳಿಸಿದರು, ಅಲ್ಲಿ ಅವರು ರೈತರು ಮತ್ತು ವಿಜ್ಞಾನಿಗಳೊಂದಿಗೆ ಸಂವಾದ ನಡೆಸಿದರು. ಕ್ಷೇತ್ರ ಬೆಳೆ ಪ್ರಭೇದಗಳಲ್ಲಿ ಏಕದಳ ಧಾನ್ಯಗಳು, ರಾಗಿ, ಮೇವಿನ ಬೆಳೆಗಳು, ಎಣ್ಣೆಕಾಳುಗಳು, ದ್ವಿದಳ ಧಾನ್ಯಗಳು, ಕಬ್ಬು, ಹತ್ತಿ ಮತ್ತು ನಾರು ಬೆಳೆಗಳು ಸೇರಿವೆ. ತೋಟಗಾರಿಕೆಗಾಗಿ, ಹೊಸ ರೀತಿಯ ಹಣ್ಣುಗಳು, ತರಕಾರಿಗಳು, ತೋಟದ ಬೆಳೆಗಳು, ಗೆಡ್ಡೆಗಳು, ಮಸಾಲೆಗಳು, ಹೂವುಗಳು ಮತ್ತು ಔಷಧೀಯ ಸಸ್ಯಗಳನ್ನು ಪ್ರಧಾನಿ ಬಿಡುಗಡೆ ಮಾಡಿದರು. https://twitter.com/ANI/status/1822541836885307848 2014…
ಮಧ್ಯಪ್ರದೇಶ: ಇಲ್ಲಿನ ಗುನಾ ಜಿಲ್ಲೆಯ ಏರ್ ಸ್ಟ್ರಿಪ್ ನಲ್ಲಿ ಭಾನುವಾರ ತರಬೇತಿ ವಿಮಾನ ಅಪಘಾತಕ್ಕೀಡಾಗಿದ್ದು, ಇಬ್ಬರು ಪೈಲಟ್ ಗಳು ಗಾಯಗೊಂಡಿದ್ದಾರೆ. ಖಾಸಗಿ ವಾಯುಯಾನ ಅಕಾಡೆಮಿಗೆ ಸೇರಿದ ಎರಡು ಆಸನಗಳ ಸೆಸ್ನಾ 152 ವಿಮಾನವು ಏರ್ ಸ್ಟ್ರಿಪ್ ನಲ್ಲಿ ಅಪಘಾತಕ್ಕೀಡಾಗಿದೆ. ಮಧ್ಯಾಹ್ನ 1.30 ರ ಸುಮಾರಿಗೆ ಈ ಘಟನೆ ನಡೆದಿದ್ದು, ಎಂಜಿನ್ ವೈಫಲ್ಯದಿಂದಾಗಿ 40 ನಿಮಿಷಗಳ ಕಾಲ ಗಾಳಿಯಲ್ಲಿ ಹಾರಾಟ ನಡೆಸಿತ್ತು ಎಂದು ಗುನಾ ಕಂಟೋನ್ಮೆಂಟ್ ಪೊಲೀಸ್ ಠಾಣೆಯ ಉಸ್ತುವಾರಿ ದಿಲೀಪ್ ರಾಜೋರಿಯಾ ಪಿಟಿಐಗೆ ತಿಳಿಸಿದ್ದಾರೆ. ಗಾಯಗೊಂಡ ಇಬ್ಬರು ಪೈಲಟ್ ಗಳು ಅಪಾಯದಿಂದ ಪಾರಾಗಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪರೀಕ್ಷೆ ಮತ್ತು ನಿರ್ವಹಣೆಗಾಗಿ ವಿಮಾನವು ಕೆಲವು ದಿನಗಳ ಹಿಂದೆ ಇಲ್ಲಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. https://kannadanewsnow.com/kannada/muda-scam-jds-releases-letter-seeking-alternative-site-for-siddaramaiah/ https://kannadanewsnow.com/kannada/steps-will-be-taken-for-all-round-development-of-chandragutti-temple-minister-madhu-bangarappa/
ಬೆಂಗಳೂರು: ಮುಡಾ ಹಗರಣ ಸಂಬಂಧ ಸಿದ್ಧರಾಮಯ್ಯ ಅವರು 1984ರಲ್ಲಿ ಶಾಸಕರಾಗಿದ್ದಂತ ಸಂದರ್ಭದಲ್ಲಿ ಬದಲಿ ನಿವೇಶನ ಕೋರಿ, ಮುಡಾ ಅಧ್ಯಕ್ಷರಿಗೆ ಬರೆದಿದ್ದಂತ ಪತ್ರವನ್ನು ಜೆಡಿಎಸ್ ಬಿಡುಗಡೆ ಮಾಡಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಜೆಡಿಎಸ್ ಪಕ್ಷವು, “ಗುಳಿಗೆ ಸಿದ್ದ ಒಳಗೆ ಮೇಯಿದ” ಈ ಮಾತು ನಿಮ್ಮಂಥವರನ್ನು ನೋಡಿಯೇ ಹೇಳಿರಬೇಕು ಸಿದ್ದರಾಮಯ್ಯನವರೇ… “ನನಗೆ ಒಂದು ನಿವೇಶನವೂ ಇಲ್ಲ. ಯಾವುದೇ ಲೆಟರ್ ಬರೆದಿಲ್ಲ” ಎಂದು ಸುಳ್ಳು ಹೇಳುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೇ, ಸಮಾಜವಾದಿ ಮುಖವಾಡ ತೊಟ್ಟು ನೀವು ಮಾಡಿರುವ ಅಕ್ರಮಗಳಿಗೆ ಈ ಲೆಟರ್ ಸಾಕ್ಷಿ ಎಂದಿದೆ. ಬದಲಿ ನಿವೇಶನ ಕೋರಿ ನೀವೇ ಸ್ವತಃ ಬರೆದಿರುವ ಪತ್ರ, ನಿಮ್ಮದೇ ಸಹಿ…ಇಷ್ಟು ಸಾಕಲ್ಲವೇ ? ಇದು ನಿಮಗೆ ಕಪ್ಪು ಚುಕ್ಕೆ ಅಲ್ಲವೇ …? ದಿನ ಪತ್ರಿಕೆಗಳು, ಮಾಧ್ಯಮಗಳ ಸಂದರ್ಶನಗಳಲ್ಲಿ ನಾನು ಶುದ್ಧ ಹಸ್ತ, ಸಮಾಜವಾದಿ ಎಂದು ಸತ್ಯ ಹರಿಶ್ಚಂದ್ರನಂತೆ ಮಾತಾಡುವ ನಿಮ್ಮ ಅಸಲೀ ಬಂಡವಾಳ ಈಗ ಬಯಲಾಗಿದೆ ಎಂದು ಹೇಳಿದೆ. ದಲಿತರ ಜಮೀನು ಕಬಳಿಸಿರುವ ನೀವು ಪರಿಶಿಷ್ಟ…
ಬೆಂಗಳೂರು: ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಕೊಚ್ಚಿ ಹೋಗಿದ್ದರ ಸಂಬಂಧ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ, ವಿಪಕ್ಷ ನಾಯಕ ಆರ್ ಅಶೋಕ್ ವಾಗ್ಧಾಳಿ ನಡೆಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದ ದಿವ್ಯ ನಿರ್ಲಕ್ಷ್ಯದಿಂದ ತುಂಗಭದ್ರಾ ಅಣೆಕಟ್ಟಿನ 19ನೇ ಗೇಟ್ ಚೈನ್ ಲಿಂಕ್ ಮುರಿದು ಬಿದ್ದಿದ್ದು, ಡ್ಯಾಂನ ಹೊರ ಹರಿವು ಏರಿಕೆಯಾಗಿ ಅಪಾರ ಪ್ರಮಾಣದ ನೀರು ಪೋಲಾಗುತ್ತಿರುವುದರಿಂದ ನದಿ ಪಾತ್ರದ ರೈತರನ್ನು ಚಿಂತೆಗೀಡು ಮಾಡಿದೆ ಎಂದಿದ್ದಾರೆ. ಕಳೆದ ವರ್ಷವೆಲ್ಲ ಬರಗಾಲದಿಂದ ತತ್ತರಿಸಿದ್ದ ರೈತರು ಈ ವರ್ಷ ಉತ್ತಮ ಮಳೆಯಾಗಿ ಜಲಾಶಯ ಭರ್ತಿಯಾಗಿರುವುದರಿಂದ ಎರಡು ಬೆಳೆ ತೆಗೆಯಬಹುದು ಎಂದು ನಿಟ್ಟುಸಿರು ಬಿಡುತ್ತಿರುವಾಗಲೇ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯದಿಂದ ಈಗ ಬಿತ್ತನೆಯಾಗಿರುವ ಒಂದು ಬೆಳೆಯುೂ ಸಹ ಕೈತಪ್ಪಬಹುದು ಎಂಬ ಆತಂಕದಲ್ಲಿದ್ದಾರೆ ಎಂದು ಹೇಳಿದ್ದಾರೆ. ನೀರಾವರಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ತಮ್ಮ ಇಲಾಖೆಗಳ ನಿರ್ವಹಣೆಗಿಂತ ಕಾಂಗ್ರೆಸ್ ಹೈಕಮಾಂಡ್ ಏಜೆಂಟ್ ಕೆಲಸವೇ ಹೆಚ್ಚಾಗಿದೆ. ಪ್ರಜೆಗಳ ಹಿತಕ್ಕಿಂತ,…
ಬೆಂಗಳೂರು: ಮೈಸೂರಿನ ಮುಡಾ ಹಗರಣ ಸಂಬಂಧ ಬಿಜೆಪಿ-ಜೆಡಿಎಸ್ ನಾಯಕರು ಮೈಸೂರು ಚಲೋ ಪಾದಯಾತ್ರೆ ನಡೆಸಿದರು. ಹಗರಣ ಸಂಬಂಧ ರಾಜ್ಯಪಾಲರಿಗೂ ದೂರು ನೀಡಲಾಗಿದೆ. ಇದರ ನಡುವೆ 1984ರಲ್ಲಿ ಸಿದ್ಧರಾಮಯ್ಯ ಅವರು ಮುಡಾಗೆ ಬದಲಿ ನಿವೇಶನಕ್ಕಾಗಿ ಖುದ್ದು ಬರೆದಿದ್ದಂತ ಪತ್ರವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಮೂಲಕ ಮುಡಾ ಹಗರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಂತೆ ಆಗಿದೆ. ಮುಡಾ ಹಗರಣದಲ್ಲಿ ನನ್ನ ಪಾತ್ರವೇ ಇಲ್ಲ. ನನಗೆ ಅಧಿಕಾರ, ಹಣದ ಮೇಲೆ ವ್ಯಾಮೋಹವೂ ಇಲ್ಲ. ನಾನು ನನ್ನ ಅಧಿಕಾರವನ್ನು ಶೋಷಿತರು, ದಲಿತರ ಏಳಿಗೆಗಾಗಿಯೇ ಮೀಸಲಿಟ್ಟಿದ್ದೇನೆ ಎಂಬುದಾಗಿ ಇತ್ತೀಚಿಗಷ್ಟೇ ಸಿಎಂ ಸಿದ್ಧರಾಮಯ್ಯ ಅವರು ಜನಾಂದೋಲ ಕಾರ್ಯಕ್ರಮದಲ್ಲಿ ಭಾಗಿಯಾಗಿ ಹೇಳಿದ್ದರು. ಅಲ್ಲದೇ ಮುಡಾ ಹಗರಣದಲ್ಲಿ ನನ್ನ ಪಾತ್ರವಿಲ್ಲ. ನಾನು ಭಾಗಿಯಾಗಿಯೂ ಇಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದರು. ಇದರ ಬೆನ್ನಲ್ಲೇ 1984ರಲ್ಲಿ ಸಿದ್ಧರಾಮಯ್ಯ ಅವರು ಶಆಸಕರಾಗಿದ್ದಂತ ಸಂದರ್ಭದಲ್ಲಿ ಮೈಸೂರಿನ ನಗರಾಭಿವೃದ್ಧ ವಿಶ್ವಸ್ಥ ಮಂಡಳಿಯ ಅಧ್ಯಕ್ಷರಿಗೆ ಬರೆದಿದ್ದಂತ ಪತ್ರವೊಂದು ವೈರಲ್ ಆಗಿದೆ. ವೈರಲ್ ಆಗಿರುವಂತ ಪತ್ರದಲ್ಲಿ ಏನಿದೆ.? ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವಂತ…
ವಿಜಯನಗರ: ಇಂದು ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಕಟ್ ಆಗಿರುವಂತ ಸ್ಥಳಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಅಲ್ಲದೇ ಸ್ಥಳದಲ್ಲಿದ್ದಂತ ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಸದ್ಯ ಆಗಸ್ಟ್.13ರಂದು ತುಂಗಭದ್ರಾ ಡ್ಯಾಂಗೆ ಬಾಗಿನ ಅರ್ಪಿಸುವಂತ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಸಮಾನಾಂತರ ಜಲಾಶಯ ನಿರ್ಮಾಣದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು. ತುಂಗಭದ್ರಾ ಡ್ಯಾಂನ 19ನೇ ಕ್ರಸ್ಟ್ ಗೇಟ್ ಕೊಚ್ಚಿ ಹೋಗಿದ್ದರಿಂದ ಈವರೆಗೆ 8 ಟಿಎಂಸಿ ನೀರು ಪೋಲಾಗಿದೆ. ಇದೇ ಡ್ಯಾಂ ನೀರು ಕರ್ನಾಟಕ, ತೆಲಂಗಾಣ, ಆಂಧ್ರದ ರೈತರ ಜೀವನಧಾರೆಯಾಗಿದೆ ಎಂದರು. ನಿನ್ನೆ ರಾತ್ರಿಯಿಂದ 10 ಕ್ರಸ್ಟ್ ಗೇಟ್ ಗಳ ಮೂಲಕ ನೀರು ಹೊರಗಡೆ ಬಿಡಲಾಗುತ್ತಿದೆ. 19ನೇ ಗೇಟ್ ಚೈನ್ ತುಂಡಾಗಿ ಮುರಿದಿದೆ. ಇದರ ಮೇಲೆ ಹೆಚ್ಚು ಒತ್ತಡ ಬೀಳಬಾರದು ಎನ್ನುವ ಕಾರಣಕ್ಕಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಸುರಕ್ಷತೆಯ ದೃಷ್ಟಿಯಿಂದ ನದಿಗೆ 98 ಸಾವಿರ ಕ್ಯೂಸೆಕ್ಸ್ ನೀರು ಬಿಡಲಾಗುತ್ತಿದೆ. ಪ್ರಸ್ತುತ 28,056…
ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಅಸಮಾಧಾನದ ಭಿನ್ನಮತ ಸ್ಪೋಟಗೊಂಡಿದೆ. ಈ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧವೇ ರಹಸ್ಯ ಸಭೆಯನ್ನು ರೆಬೆಲ್ ನಾಯಕರು ನಡೆಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಈ ಸಂಬಂಧ ಬೆಳಗಾವಿಯ ಜಾಂಬೋಟಿ ರೆಸ್ತೆಯಲ್ಲಿರುವಂತ ರೆಸಾರ್ಡ್ ಒಂದರಲ್ಲಿ ಬಿಜೆಪಿಯ ರೆಬಲ್ ನಾಯಕರು ರಹಸ್ಯ ಸಭೆಯನ್ನು ನಡೆಸಲಿದ್ದಾರೆ ಎನ್ನಲಾಗಿದೆ. ರೆಸಾರ್ಟ್ ನಲ್ಲಿ ನಡೆದಂತ ರಹಸ್ಯ ಸಭೆಯಲ್ಲೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಆಪ್ತ ಎನ್.ಆರ್ ಸಂತೋಷ್ ಕೂಡ ಭಾಗಿಯಾಗಿದ್ದು ತೀವ್ರ ಕುತೂಹಲವನ್ನು ಮೂಡಿಸಿದೆ. ಅಂದಹಾಗೇ ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ ಬಹಿರಂಗವಾಗಿಯೇ ಹೇಳಿಕೆ ನೀಡುವ ಮೂಲಕ ಸಿಡಿದೆದ್ದಿದ್ದರು. ಈಗ ಇಬ್ಬರು ನಾಯಕರ ಜೊತೆಗೆ ಹಲವು ಅಸಮಾಧಾನಿತ ಬಿಜೆಪಿ ನಯಾಕರು ಇವರೊಂದಿಗೆ ಕೈಜೋಡಿಸಿದ್ದಾರೆ ಎನ್ನಲಾಗಿದೆ. ಬೆಳಗಾವಿಯ ಜಾಂಬೋಟಿ ಬಳಿಯ ರೆಸಾರ್ಟ್ ನಲ್ಲಿ ನಡೆದಂತ ಬಿಜೆಪಿ ಅಸಮಾಧಾನಿತರ ರಹಸ್ಯ ಸಭೆಯಲ್ಲಿ ಮಾಜಿ ಸಚಿವ ಅರವಿಂದ ಲಿಂಬಾವಳಿ, ಮಾಜಿ ಸಂಸದ ಪ್ರತಾಪ್ ಸಿಂಹ,…
ಕೇರಳ: ವಯನಾಡ್ ಜಿಲ್ಲಾಡಳಿತವು ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಪ್ರದೇಶದಲ್ಲಿ ವಿನಾಶಕಾರಿ ಭೂಕುಸಿತ ಸಂಭವಿಸಿದ ನಂತರ 130 ಜನರು ಇನ್ನೂ ಕಾಣೆಯಾಗಿದ್ದಾರೆ. ವಿಶೇಷವಾಗಿ ಚೂರಲ್ಮಾಲಾ, ಮುಂಡಕ್ಕೈ ಮತ್ತು ಪುಂಚಿರಿವಟ್ಟಂ ಹಳ್ಳಿಗಳ ಮೇಲೆ ಪರಿಣಾಮ ಬೀರಿದೆ. ಕಾಣೆಯಾದವರಲ್ಲಿ 24 ಮಕ್ಕಳು, 57 ಮಹಿಳೆಯರು ಮತ್ತು 49 ಪುರುಷರು ಸೇರಿದ್ದಾರೆ. ಬಿಹಾರದ ಮೂವರು ವಲಸೆ ಕಾರ್ಮಿಕರನ್ನು ಸಹ ಈ ಪಟ್ಟಿಯಲ್ಲಿ ಸೇರಿಸಲಾಗಿದೆ. ಆಗಸ್ಟ್.10 ರಂದು ಬಿಡುಗಡೆಯಾದ ಈ ಪಟ್ಟಿಯು ವಯನಾಡ್ ಸಹಾಯಕ ಕಲೆಕ್ಟರ್ ಎಂ ಗೌತಮ್ ರಾಜ್ ನೇತೃತ್ವದ ವ್ಯಾಪಕ ಮತ್ತು ಸಂಘಟಿತ ಪ್ರಯತ್ನದ ಫಲಿತಾಂಶವಾಗಿದೆ. ಬ್ಲಾಕ್ ಮಟ್ಟದ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಜನಪ್ರತಿನಿಧಿಗಳು, ಮಾಜಿ ಪ್ರತಿನಿಧಿಗಳು ಮತ್ತು ಶಾಲಾ ಪ್ರತಿನಿಧಿಗಳನ್ನು ಒಳಗೊಂಡ ತಂಡವು ದತ್ತಾಂಶವನ್ನು ಸಂಗ್ರಹಿಸಲು ದಣಿವರಿಯದೆ ಕೆಲಸ ಮಾಡಿತು. “ವೈಜ್ಞಾನಿಕ ವಿಧಾನಗಳ ಮೂಲಕ ವಿವಿಧ ಏಜೆನ್ಸಿಗಳನ್ನು ಸಮನ್ವಯಗೊಳಿಸುವ ಕಠಿಣ ಪರಿಶ್ರಮದ ನಂತರ ಈ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಈ ಉದ್ದೇಶಕ್ಕಾಗಿ ಜಿಲ್ಲಾಡಳಿತವು ಮಾಹಿತಿ ಸಂಗ್ರಹಣೆ ಮತ್ತು ತನಿಖೆಯಿಂದ ಪ್ರಾರಂಭಿಸಿ ಸಾಟಿಯಿಲ್ಲದ…
ಬೆಂಗಳೂರು: ತುಂಗಭದ್ರಾ ಡ್ಯಾಂನ ಕ್ರಸ್ಟ್ ಗೇಟ್ ನಂ.19 ಕೊಚ್ಚಿ ಹೋಗಿದೆ. ಇದನ್ನು ಕೂಡಲೇ ಸರಿಪಡಿಸಿ, ಬೇಸಿಗೆಯಲ್ಲಿ ರೈತ ಬೆಳೆಗಳಿಗೆ ನೀರು ಒದಗಿಸುವಂತ ಕೆಲಸ ಮಾಡಬೇಕು ಅಂತ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಮೊದಲೇ ನೊಂದಿರುವ ಜನಕ್ಕೆ ಜಲಬಾಧೆ ಆವರಿಸದಿರಲಿ. ಬಳ್ಳಾರಿ ಜಿಲ್ಲೆಯ ತುಂಗ-ಭದ್ರಾ ಡ್ಯಾಮ್ ನ ಕ್ರಸ್ಟ್ ಗೇಟ್ ಕಟ್ಟಾಗಿ ನದಿ ಪಾತ್ರದ 30ಕ್ಕೂ ಹೆಚ್ಚು ಗ್ರಾಮಗಳಿಗೆ ನೀರು ನುಗ್ಗಿದ್ದು ಪ್ರವಾಹ ಎದುರಾಗುವ ಆತಂಕ ಜನರಲ್ಲಿ ಮನೆ ಮಾಡಿದೆ ಎಂದಿದ್ದಾರೆ. ಬರಗಾಲದಿಂದ ನಿರಂತರ ತತ್ತರಿಸಿದ್ದ ಜನತೆಗೆ ಅಣೆಕಟ್ಟು ತುಂಬಿದ ಖುಷಿಯಲ್ಲಿರುವಾಗಲೇ ಕ್ರಸ್ಟ್ ಗೇಟ್ ಕಟ್ಟಾಗಿರುವುದರ ಪರಿಣಾಮ ಸಂಗ್ರಹಿತ ನೀರು ಹೊರಹೋದರೆ ಮುಂದೆ ಕೃಷಿಗೆ ತೊಂದರೆಯಾಗುವ ಆತಂಕ ಆರಂಭವಾಗಿದೆ. ಇಂಥ ಬಹುದೊಡ್ಡ ಡ್ಯಾಮ್ ನಿರ್ವಹಣೆಯನ್ನು ಸೂಕ್ಷ್ಮವಾಗಿ ನಿರ್ವಹಿಸಬೇಕಿದ್ದ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ ಎಂದು ಕಿಡಿಕಾರಿದ್ದಾರೆ. ಸರ್ಕಾರ ಹಾಗೂ ಜಿಲ್ಲಾಡಳಿತ ತಕ್ಷಣ ನೆರೆ ಭೀತಿಯಲ್ಲಿರುವ ಗ್ರಾಮಗಳ ಜನರನ್ನು ಸ್ಥಳಾಂತರಿಸಿ, ಕೂಡಲೇ ಜಲಾಶಯದ…
ಬೆಂಗಳೂರು : “ಮೂರು ರಾಜ್ಯಗಳಿಗೆ ಸೇರಿರುವ ನೀರನ್ನು ಹೇಗಾದರೂ ಮಾಡಿ ಉಳಿಸಿಕೊಂಡು ತುಂಗಭದ್ರಾ ಅಣೆಕಟ್ಟಿನ ಗೇಟನ್ನು ದುರಸ್ತಿ ಮಾಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ತುಂಗಭದ್ರಾ ಜಲಾಶಯಕ್ಕೆ ತೆರಳುವ ಮುನ್ನ ಸದಾಶಿವ ನಗರದ ನಿವಾಸದ ಬಳಿ ಮಾಧ್ಯಮದವರನ್ನು ಉದ್ದೇಶಿಸಿ ಭಾನುವಾರ ಮಾತನಾಡಿದ ಅವರು “ನೀರನ್ನು ಹೊರಗೆ ಬಿಡದ ಹೊರತು ಗೇಟ್ ದುರಸ್ತಿ ಮಾಡಲು ಸಾಧ್ಯವಿಲ್ಲ ಎಂದು ತಜ್ಞರು ತಿಳಿಸಿದ್ದಾರೆ. ಆದ ಕಾರಣ ತಂತ್ರಜ್ಞರ ವರದಿಯ ಬಳಿಕ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ತಿಳಿಸಿದರು. “ಅಣೆಕಟ್ಟಿನ 1 ರಿಂದ 16 ನೇ ಗೇಟುಗಳನ್ನು ಸಿಡಬ್ಲ್ಯೂಸಿ ನಿರ್ವಹಣೆ ಮಾಡುತ್ತದೆ. 17 ರಿಂದ 32 ರವರೆಗಿನ ಜವಾಬ್ದಾರಿ ಕರ್ನಾಟಕ ಸರ್ಕಾರದ್ದಾಗಿದೆ. ಕೇಂದ್ರ ಜಲ ಆಯೋಗದವರು ಸಹ ಒಂದಷ್ಟು ತಂತ್ರಜ್ಞರನ್ನು ಕಳುಹಿಸಿದ್ದಾರೆ. ನಾವು ಸಹ ನುರಿತ ತಂತ್ರಜ್ಞರನ್ನು ಕಳುಹಿಸಿದ್ದೇವೆ. ನಾನು ಸಹ ಶನಿವಾರ ರಾತ್ರಿಯಿಂದಲೇ ಅಧಿಕಾರಿಗಳ ಜೊತೆ ದೂರವಾಣಿ ಸಂಪರ್ಕದಲ್ಲಿದ್ದು ಪ್ರತಿ ಕ್ಷಣದ ಮಾಹಿತಿ ಪಡೆಯುತ್ತಿದ್ದೇನೆ” ಎಂದು ಹೇಳಿದರು. “ತುಂಗಭದ್ರಾ ಅಣೆಕಟ್ಟಿನ 19ನೇ…