Author: kannadanewsnow09

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕು ವ್ಯಾಪ್ತಿಯ ವಾಣಿ ವಿಲಾಸಪುರ ವ್ಯಾಪ್ತಿಯ ಗ್ರಾಮಗಳ ಕೆರಗಳಿಗೂ ಮಾರಿಕಣಿಮೆ ಡ್ಯಾಂನಿಂದ ನೀರು ತುಂಬಿಸುವಂತೆ ಆಗ್ರಹಿಸಿ ದಿನಾಂಕ 21-08-2024ರಂದು ವಿವಿ ಪುರಂ ಬಂದ್ ಗೆ ಕರೆ ನೀಡಲಾಗಿದೆ ಎಂದು ತಾಲ್ಲೂಕು ರೈತ ಸಂಘದ ಅಧ್ಯಕ್ಷ ಕೆ.ಟಿ ತಿಪ್ಪೇಸ್ವಾಮಿ ತಿಳಿಸಿದ್ದಾರೆ. ಅವರು ಇಂದು ವಿವಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಬರಮಗಿರಿ ಗ್ರಾಮದಲ್ಲಿ ಆ ಭಾಗದ ಕೆರೆಗಳಾದ ಭರಮಗಿರಿ ಕೆರೆ ಗುಡಿಹಳ್ಳಿ ಕೆರೆ ಗೌನಹಳ್ಳಿ ಕೆರೆ ಬೇರೇನಹಳ್ಳಿ ಜಾಲಿ ಕಟ್ಟೆ ಕೆರೆ ಕೂನಿಕೆರೆ ಕೆರೆ ಮತ್ತು ತವಂದಿ ಕೆರೆಗಳಿಗೆ ನೀರು ತುಂಬಿಸಬೇಕು ಎಂದು ಈ ಎಲ್ಲಾ ಗ್ರಾಮಗಳಿಂದ ರೈತ ಮುಖಂಡರು ಸಭೆ ಸೇರಿದರು ಸಭೆಯನ್ನು ನಡೆಸಿದರು. ಈ ಸಭೆಯನ್ನು ಉದ್ದೇಶಿಸಿ ಮಾತನಾಡಿದಂತ ಹಿರಿಯೂರು ತಾಲೂಕು ರೈತ ಸಂಘದ ಅಧ್ಯಕ್ಷರಾದ ಕೆ ಟಿ ತಿಪ್ಪೇಸ್ವಾಮಿ ವಾಣಿ ವಿಲಾಸ ಜಲಾಶಯದ ಸಮೀಪವಿದ್ದರೂ ಅಂತರ್ಜಲ ಈ ಭಾಗಕ್ಕೆ ಇಲ್ಲದಂತಾಗಿದ್ದು ಎಲ್ಲಾ ಕೆರೆಗಳು ಬತ್ತಿ ಹೋಗಿದ್ದಾವೆ. ಕುಡಿಯುವ ನೀರಿಗೂ ಸಹ ಆಹಾಕಾರ ಉಂಟಾಗಿದೆ. ಟ್ಯಾಂಕರ್ ಮೂಲಕ ಕುಡಿಯುವ…

Read More

ಬೆಂಗಳೂರು: ಅಂಗನವಾಡಿ ಮಕ್ಕಳಿಗೆ ನೀಡಲಾಗಿದ್ದ ಮೊಟ್ಟೆಯನ್ನು ತಟ್ಟೆಯಿಂದ ಎತ್ತಿಕೊಳ್ಳುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳದ ಶಿಶು ಅಭಿವೃದ್ಧಿಕಾರಿ (ಸಿಡಿಪಿಒ) ಅಮಾನತು ಮಾಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದ್ದಾರೆ. ಜೊತೆಗೆ ಕೊಪ್ಪಳ ಜಿಲ್ಲಾ ಉಪ ನಿರ್ದೇಶಕರಿಗೆ (ಡಿಡಿ) ನೋಟೀಸ್ ನೀಡಲು ಸೂಚಿಸಿದರು. ಕೊಪ್ಪಳದ ಗುಂಡೂರು ಗ್ರಾಮದ ಅಂಗನವಾಡಿಯ ಕಾರ್ಯಕರ್ತೆ ಲಕ್ಷ್ಮೀ ಹಾಗೂ ಸಹಾಯಕಿ ಶಹನಾಜ್ ಬೇಗಂ ಅವರ ಮೊಟ್ಟೆ ವಂಚನೆ ವಿಡಿಯೋ ವೈರಲ್ ಆಗಿತ್ತು. ಇದನ್ನು ಗಮನಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ತಕ್ಷಣ ಇಲಾಖೆ ಅಧಿಕಾರಿಗಳಿಗೆ ಫೋನ್ ಮಾಡಿ, ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯನ್ನು ಸಸ್ಪೆಂಡ್ ಮಾಡುವಂತೆ ಸೂಚಿಸಿದರು. ಇಡೀ ಪ್ರಕರಣದ ವರದಿ ನೀಡುವಂತ ಆದೇಶಿಸಿದ್ದಾರೆ. ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆ ಆಗಲೇಬೇಕು. ಕೆಳ ಹಂತದಿಂದ ಇಲಾಖೆಯಲ್ಲಿ‌ ಸುಧಾರಣೆ ತರಬೇಕು ಅಂತ ಕಷ್ಟ ಪಡುತ್ತಿದ್ದೇನೆ. ಪೌಷ್ಟಿಕ ಆಹಾರ, ಗುಣಮಟ್ಟದ ಶಿಕ್ಷಣ ಅಂಗನವಾಡಿಯ ಮೂಲ‌ ಉದ್ದೇಶ. ಆದರೆ, ಬಡಮಕ್ಕಳಿಗೆ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಸಚಿವೆ…

Read More

ಬೆಂಗಳೂರು: ಕರ್ನಾಟಕದ ಹೆಮ್ಮೆಯ ಕೆ ಎಸ್ ಆರ್ ಟಿಸಿಗೆ ಈಗಾಗಲೇ ಅನೇಕ ರಾಷ್ಟ್ರೀಯ ಪ್ರಶಸ್ತಿಗಳು ಬಂದಿವೆ. ರಾಜ್ಯದ ಪ್ರಯಾಣಿಕರಿಗೆ ಉತ್ತಮ ಸೇವೆ ನೀಡುತ್ತಿರುವಂತ ನಿಗಮಕ್ಕೆ, ಈಗ ಮತ್ತೊಂದು ಗರಿಮೆ ಸಂದಿದೆ. ಅದೇ ದೇಶದ ಲೀಡರ್ಸ್ ಆಫ್ ರೋಡ್ ಟ್ರಾನ್ಸಪೋರ್ಟ್ ಪ್ರಶಸ್ತಿ 2024 ಅನ್ನು ತನ್ನದಾಗಿಸಿಕೊಂಡಿದೆ. ಈ ಕುರಿತಂತೆ ನಿಗಮದವು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕೆ.ಎಸ್.ಆರ್.ಟಿ.ಸಿ ಗೆ ಟಿವಿ-9 ನೆಟ್ವರ್ಕ್‌ ನ ದೇಶದ ಲೀಡರ್ಸ್ ಆಫ್ ರೋಡ್ ಟ್ರಾನ್ಸಪೋರ್ಟ್ ಪ್ರಶಸ್ತಿ-2024 ಬಂದಿದೆ. ನಿಗಮವು ಕೈಗೊಂಡಿರುವ ಬ್ರ್ಯಾಂಡಿಂಗ್ ಹಾಗೂ ಮಾನವ ಸಂಪನ್ಮೂಲ ಉಪಕ್ರಮಗಳಿಗಾಗಿ “ಟಿವಿ-9 ನೆಟ್ವರ್ಕ ಲೀಡರ್ಸ್ ಆಫ್ ರೋಡ್ ಟ್ರಾನ್ಸಪೋರ್ಟ್ 2024ರ ಪ್ರಶಸ್ತಿಯು ವರ್ಷದ ದೇಶದ ಅತ್ಯುತ್ತಮ ಸಂಸ್ಥೆ ವರ್ಗದಲ್ಲಿ ಲಭಿಸಿರುತ್ತದೆ ಎಂದು ತಿಳಿಸಿದೆ. ದ ಇಂಪೀರಿಯಲ್ ಜನಪತ್ ಲೇನ್, ಜನಪತ್, ನವದೆಹಲಿ ಇಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹರ್ಷ್ ಮಲೋತ್ರ,ಮಾನ್ಯ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ರಾಜ್ಯ ಸಚಿವರು ಮತ್ತು ಸಾಂಸ್ಥಿಕ ವ್ಯವಹಾರಗಳ ಸಚಿವರು, ಭಾರತ ಸರ್ಕಾರರವರು ನಿಗಮಕ್ಕೆ ಪ್ರಶಸ್ತಿಯನ್ನು ಪ್ರದಾನ…

Read More

ಬೆಂಗಳೂರು: ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಕಟ್ ಘಟನೆ ಕುರಿತಂತೆ ಜಲ ಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚೆ ನಡೆಸಿ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ. ಮುಖ್ಯಮಂತ್ರಿಗಳು ಮಂಗಳವಾರ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಮುಖ್ಯಮಂತ್ರಿಗಳು ಇಂದು ಬೆಳಗ್ಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತ ಅವರೊಂದಿಗೆ ಮಾತುಕತೆ ನಡೆಸಿ ಸಂಪೂರ್ಣ ವಿವರ ಪಡೆದರು. ಯಾವುದೇ ಹಾನಿ ಸಂಭವಿಸದಂತೆ ಮುಂಜಾಗ್ರತೆ ವಹಿಸುವಂತೆ ಸೂಚಿಸಿದರು. ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರೊಂದಿಗೂ ಸಿಎಂ ಚರ್ಚಿಸಿದರು. https://kannadanewsnow.com/kannada/steps-will-be-taken-for-all-round-development-of-chandragutti-temple-minister-madhu-bangarappa/ https://kannadanewsnow.com/kannada/another-feather-in-the-cap-for-ksrtc-the-countrys-leaders-of-road-transport-2024-award/

Read More

ಬೆಂಗಳೂರು: ನಗರಕ್ಕೆ ಹೊರ ರಾಜ್ಯಗಳಿಂದ ರೈಲಿನಲ್ಲಿ ಬಂದಂತ ಮಾಂಸದ ಬಗ್ಗೆ ಭಾರೀ ವಿವಾದವೇ ಉಂಟಾಗಿತ್ತು. ನಾಯಿ ಮಾಂಸ ಎಂಬುದಾಗಿ ಅನೇಕರು ವಾದಿಸಿದ್ದರೇ, ಕುರಿ ಮಾಂಸ ಅಂತ ಕೆಲವರು. ರಾಜ್ಯ ಸರ್ಕಾರದ ಸರ್ಕಾರಿ ಲ್ಯಾಬ್ ರಿಪೋಸ್ಟ್ ಕೂಡ ಕುರಿ ಮಾಂಸ ಎಂಬುದಾಗಿ ಸ್ಪಷ್ಟ ಪಡಿಸಿತ್ತು. ಈಗ ಹೈದರಾಬಾದ್ ಲ್ಯಾಬ್ ವರದಿ ಕೂಡ ಬಂದಿದೆ. ಹಾಗಾದ್ರೇ ನಾಯಿ ಅಥವಾ ಕುರಿ ಮಾಂಸನ ಎನ್ನುವ ಬಗ್ಗೆ ಮುಂದೆ ಓದಿ. ಆಹಾರ ಇಲಾಖೆಯ ಆಯುಕ್ತ ಶ್ರೀನಿವಾಸ್ ಅವರು ಈಗಾಗಲೇ ಬೆಂಗಳೂರಿಗೆ ಹೊರ ರಾಜ್ಯಗಳಿಂದ ರೈಲಿನಲ್ಲಿ ಬಂದಂತ ಕುರಿ ಮಾಂಸ ಎಂಬುದಾಗಿ ಲ್ಯಾಬ್ ರಿಪೋಸ್ಟ್ ವರದಿಯಿಂದ ತಿಳಿದು ಬಂದಿದೆ ಎಂಬುದಾಗಿ ಸ್ಪಷ್ಟ ಪಡಿಸಿದ್ದರು. ರಾಜಸ್ಥಾನದಿಂದ ವ್ಯಾಪಾರಿ ಅಬ್ದುಲ್ ರಜಾಕ್ ಅವರು ಕುರಿ ಮಾಂಸದಲ್ಲಿ ನಾಯಿ ಮಾಂಸ ಬೆರೆಸಿದ್ದಾರೆ ಎಂಬುದಾಗಿ ಪುನೀತ್ ಕೆರೆಹಳ್ಳಿ ಆರೋಪಿಸಿದ್ದರು. ಹೀಗೆ ಬೆಂಗಳೂರಿಗೆ ಬಂದಿದ್ದಂತ ಮಾಂಸವನ್ನು ಆರೋಗ್ಯ ಇಲಾಖೆಯಿಂದ ಲ್ಯಾಬ್ ಪರೀಕ್ಷೆಗೆ ಕಳುಹಿಸಿ ಕೊಡಲಾಗಿತ್ತು. ನಾಯಿ ಮಾಂಸ ಅಲ್ಲ. ಕುರಿ ಮಾಂಸ ಅಂತ ಲ್ಯಾಬ್ ರಿಪೋರ್ಟ್…

Read More

ನವದೆಹಲಿ: ಸೆಬಿ ಅಧ್ಯಕ್ಷ ಮಾಧಾಬಿ ಪುರಿ ಬುಚ್ ವಿರುದ್ಧ ಮಾಡಲಾಗಿರುವ ಹೊಸ ಆರೋಪಗಳನ್ನು ಅದಾನಿ ಗ್ರೂಪ್ “ದುರುದ್ದೇಶಪೂರಿತ, ಕಿಡಿಗೇಡಿ ಮತ್ತು ಕುತಂತ್ರ” ಎಂದು ನಿರಾಕರಿಸಿದೆ. “ಹಿಂಡೆನ್ಬರ್ಗ್ ಅವರ ಇತ್ತೀಚಿನ ಆರೋಪಗಳು ದುರುದ್ದೇಶಪೂರಿತ, ಕಿಡಿಗೇಡಿ ಮತ್ತು ಸಾರ್ವಜನಿಕವಾಗಿ ಲಭ್ಯವಿರುವ ಮಾಹಿತಿಯ ಕುತಂತ್ರದ ಆಯ್ಕೆಗಳಾಗಿವೆ. ವಾಸ್ತವಾಂಶಗಳು ಮತ್ತು ಕಾನೂನನ್ನು ಉದ್ದೇಶಪೂರ್ವಕವಾಗಿ ಕಡೆಗಣಿಸಿ ವೈಯಕ್ತಿಕ ಲಾಭಕೋರತನಕ್ಕಾಗಿ ಪೂರ್ವನಿರ್ಧರಿತ ತೀರ್ಮಾನಗಳಿಗೆ ಬರುತ್ತವೆ” ಎಂದು ಕಂಪನಿ ಹೇಳಿಕೆಯಲ್ಲಿ ತಿಳಿಸಿದೆ. “ಅದಾನಿ ಗ್ರೂಪ್ ವಿರುದ್ಧದ ಈ ಆರೋಪಗಳನ್ನು ನಾವು ಸಂಪೂರ್ಣವಾಗಿ ತಿರಸ್ಕರಿಸುತ್ತೇವೆ, ಇದು ಸಮಗ್ರ ತನಿಖೆ, ಆಧಾರರಹಿತವೆಂದು ಸಾಬೀತಾಗಿರುವ ಮತ್ತು 2024 ರ ಜನವರಿಯಲ್ಲಿ ಗೌರವಾನ್ವಿತ ಸುಪ್ರೀಂ ಕೋರ್ಟ್ನಿಂದ ಈಗಾಗಲೇ ವಜಾಗೊಳಿಸಲ್ಪಟ್ಟ ಅಪಖ್ಯಾತಿಗೊಳಗಾದ ಹೇಳಿಕೆಗಳ ಮರುಬಳಕೆಯಾಗಿದೆ” ಎಂದು ಅದು ಹೇಳಿದೆ. ಹಿಂಡೆನ್ಬರ್ಗ್ ರಿಸರ್ಚ್ನ ಇತ್ತೀಚಿನ ವರದಿಯ ಬಗ್ಗೆ ಅದಾನಿ ಗ್ರೂಪ್ ಹೇಳಿಕೆ ನೀಡಿದೆ. ಹಿಂಡೆನ್ಬರ್ಗ್ನ ಇತ್ತೀಚಿನ ಆರೋಪಗಳು ದುರುದ್ದೇಶಪೂರಿತ, ಕಿಡಿಗೇಡಿ ಮತ್ತು ಸಾರ್ವಜನಿಕವಾಗಿ ಲಭ್ಯವಿರುವ ಮಾಹಿತಿಯ ಕುತಂತ್ರದ ಆಯ್ಕೆಗಳಾಗಿವೆ. ವಾಸ್ತವಾಂಶಗಳು ಮತ್ತು ಕಾನೂನನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸಿ ವೈಯಕ್ತಿಕ ಲಾಭಕೋರತನಕ್ಕಾಗಿ ಪೂರ್ವನಿರ್ಧರಿತ…

Read More

ಬೆಂಗಳೂರು: ಕೇರಳದ ವಯನಾಡಿನಲ್ಲಿ ಉಂಟಾದಂತ ಭೂ ಕುಸಿತದ ನಂತ್ರ, ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಕರ್ನಾಟಕದಲ್ಲಿ ಭೂ ಕುರಿತ ತಡೆಗೆ ಶೀಘ್ರವೇ ಹೊಸ ನೀತಿ ಜಾರಿಗೆ ತರಲು ನಿರ್ಧರಿಸಿದೆ. ಈ ಕುರಿತಂತೆ ಮಾಹಿತಿ ನೀಡಿರುವಂತ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು, ಘಟ್ಟ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಭೂ ಕುಸಿತದ ಪರಿಣಾಮಗಳನ್ನು ತಗ್ಗಿಸುವ ಸಂಬಂಧ ಅಭಿವೃದ್ಧಿ ಕೇಂದ್ರಿತ ಚಟುವಟಿಕೆ ನಿಯಂತ್ರಿಸುವ ನೀತಿಯೊಂದನ್ನು ರೂಪಿಸಲಾಗುತ್ತಿದೆ, ಗುಡ್ಡಗಳನ್ನು ಕಡಿದು ನಿರ್ಮಾಣ ಚಟುವಟಿಕೆ ಕೈಗೊಳ್ಳುವುದು ಸೇರಿ ಹಲವು ಅವೈಜ್ಞಾನಿಕ ಅಭಿವೃದ್ಧಿಗೆ ನಿರ್ಬಂಧಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ. ಗುಡ್ಡಗಳನ್ನು 90 ಡಿಗ್ರಿಯಲ್ಲಿ ಲಂಬವಾಗಿ ಕತ್ತರಿಸುವುದನ್ನು ತಡೆಯುವುದು, ಗುಡ್ಡದಿಂದ ನೀರು ಸರಾಗವಾಗಿ ಹರಿದುಹೋಗುವಂತೆ ವ್ಯವಸ್ಥೆ ಮಾಡುವುದು ಸೇರಿ ನಿರ್ಮಾಣ ಪರವಾನಗಿಯಲ್ಲಿ ಷರತ್ತು ವಿಧಿಸುವುದು, ಅನಧಿಕೃತ ನಿರ್ಮಾಣ ಚಟುವಟಿಕೆಗಳನ್ನು ನಿರ್ಬಂಧಿಸುವುದು ಒಳಗೊಂಡಂತೆ ಹಲವು ಉಪಕ್ರಮಗಳು ನೀತಿಯಲ್ಲಿ ಇರಲಿವೆ ಎಂದು ಅವರು ಹೇಳಿದ್ದಾರೆ. https://twitter.com/KarnatakaVarthe/status/1822223370655605163 https://kannadanewsnow.com/kannada/steps-will-be-taken-for-all-round-development-of-chandragutti-temple-minister-madhu-bangarappa/ https://kannadanewsnow.com/kannada/wayanad-tragedy-minister-m-b-patil-urges-businessmen-to-lend-a-helping-hand/ https://kannadanewsnow.com/kannada/tungabhadra-dam-crest-gate-washed-away-deputy-cm-dk-shivakumar-to-meet-today/

Read More

ಬೆಂಗಳೂರು: ಕಂಡುಕೇಳರಿಯದ ಭೂಕುಸಿತದಿಂದ ನಲುಗಿರುವ ಕೇರಳದ ವಯನಾಡ್ ಜನತೆಯ ನೆರವಿಗೆ ರಾಜ್ಯದ ಕೈಗಾರಿಕೋದ್ಯಮಿಗಳು ಧಾವಿಸಿ, ಸಹಾಯಹಸ್ತ ಚಾಚಬೇಕು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮನವಿ ಮಾಡಿದ್ದಾರೆ. ಈ ಬಗ್ಗೆ ಶನಿವಾರ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಈ ಸಂಬಂಧ ಯಾವುದೇ ಮಾಹಿತಿ/ಮಾರ್ಗದರ್ಶನ ಬೇಕಾದಲ್ಲಿ ಕೈಗಾರಿಕಾ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ ಅವರನ್ನು ದೂರವಾಣಿ ಸಂಖ್ಯೆ 080-22386796 ಅಥವಾ ಮಿಂಚಂಚೆ officeofdicommissioner@gmail.com ಮೂಲಕ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ. ವಯನಾಡ್ ದುರಂತದಲ್ಲಿ 412 ಮಂದಿ ಜೀವ ಕಳೆದುಕೊಂಡಿದ್ದು, ಇನ್ನೂ 138 ಜನ ಕಣ್ಮರೆಯಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಉದ್ಯಮಲೋಕವು ಮಾನವೀಯತೆಯನ್ನು ಎತ್ತಿ ಹಿಡಿಯಬೇಕಾಗಿದೆ ಎಂದು ಅವರು ಹೇಳಿದ್ದಾರೆ. ಉದ್ಯಮಿಗಳು ಸಂತ್ರಸ್ತರ ಪುನರ್ವಸತಿ, ಅಗತ್ಯ ವಸ್ತುಗಳ ಪೂರೈಕೆ, ಮನೆಗಳ ಪುನರ್ನಿರ್ಮಾಣ, ಮೂಲಸೌಕರ್ಯ, ಜೀವನೋಪಾಯಕ್ಕೆ ನೆರವು, ವೈದ್ಯಕೀಯ ನೆರವು ಹೀಗೆ ಯಾವ ರೂಪದಲ್ಲಾದರೂ ಸಹಾಯ ಮಾಡಬಹುದು ಎಂದು ಸಚಿವರು ತಿಳಿಸಿದ್ದಾರೆ. ನೆರೆಯ ರಾಜ್ಯವು ಈಗ ಪ್ರಾಕೃತಿಕ ವಿಕೋಪಕ್ಕೆ ಸಿಲುಕಿ ತತ್ತರಿಸಿದೆ. ಆ…

Read More

ಬೆಂಗಳೂರು: ಬೆಂಗಳೂರಿನ ಪ್ರಸಿದ್ಧ ಕಾಫಿ ಔಟ್ ಲೆಟ್ ನ ಕಸದ ಬುಟ್ಟಿಯೊಳಗೆ ಸುಮಾರು ಎರಡು ಗಂಟೆಗಳ ಕಾಲ ವೀಡಿಯೊ ರೆಕಾರ್ಡಿಂಗ್ ಮಾಡಿದಂತ ಮಹಿಳೆಯರ ಶೌಚಾಲಯದಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದೆ. ಈ ಸಂಬಂಧ ಕೆಫೆ ಸಿಬ್ಬಂದಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮಹಾನಗರದ ಬಿಇಎಲ್ ರಸ್ತೆಯಲ್ಲಿರುವ ಥರ್ಡ್ ವೇವ್ ಕಾಫಿ ಔಟ್ ಲೆಟ್ ನಲ್ಲಿ ಈ ಘಟನೆ ನಡೆದಿದ್ದು, ಮಹಿಳಾ ಶೌಚಾಲಯದಲ್ಲಿ ಫೋನ್ ಅಡಗಿಸಿಟ್ಟಿದ್ದಾರೆ ಎಂದು ಉದ್ಯೋಗಿಯೊಬ್ಬರು ಆರೋಪಿಸಿದ್ದಾರೆ. ‘ಗ್ಯಾಂಗ್ಸ್ ಆಫ್ ಸಿನಿಪುರ್’ ಎಂಬ ಇನ್ಸ್ಟಾಗ್ರಾಮ್ ಹ್ಯಾಂಡಲ್ ಈ ಆಘಾತಕಾರಿ ಘಟನೆಯನ್ನು ವಿವರಿಸಿದ ಕಥೆಯನ್ನು ಪೋಸ್ಟ್ ಮಾಡಿದೆ. “ನಾನು ಬೆಂಗಳೂರಿನ ಥರ್ಡ್ ವೇವ್ ಕಾಫಿ ಔಟ್ ಲೆಟ್ ನಲ್ಲಿದ್ದೆ. ಶೌಚಾಲಯದ ಸೀಟಿಗೆ ಎದುರಾಗಿ ಸುಮಾರು 2 ಗಂಟೆಗಳ ಕಾಲ ವೀಡಿಯೊ ರೆಕಾರ್ಡಿಂಗ್ ಮಾಡುತ್ತಿರುವ ಫೋನ್ ಅನ್ನು ಮಹಿಳೆಯೊಬ್ಬರು ಕಸದ ಬುಟ್ಟಿಯಲ್ಲಿ ಅಡಗಿಸಿಟ್ಟಿರುವುದನ್ನು ಕಂಡುಕೊಂಡಿದ್ದಾರೆ. ಇದು ಫ್ಲೈಟ್ ಮೋಡ್ನಲ್ಲಿತ್ತು, ಆದ್ದರಿಂದ ಅದು ಯಾವುದೇ ಶಬ್ದವನ್ನು ಮಾಡುವುದಿಲ್ಲ” ಎಂದು ಕಥೆಯಲ್ಲಿ ತಿಳಿಸಲಾಗಿದೆ. ಕ್ಯಾಮೆರಾವನ್ನು ಮಾತ್ರ ಬಹಿರಂಗಪಡಿಸಲು ಫೋನ್ ಅನ್ನು…

Read More

ರಾಯಚೂರು: ಕರ್ನಾಟಕದಲ್ಲಿ ವಾಸಿಸುತ್ತಿದ್ದಂತ ಐವರು ಬಾಂಗ್ಲಾ ನಿರಾಶ್ರಿತರಿಗೆ ಪೌರತ್ವ ತಿದ್ದುಪಡಿ ಕಾಯ್ದೆಯ ಅಡಿಯಲ್ಲಿ ಭಾರತೀಯ ಪೌರತ್ವವನ್ನು ನೀಡಲಾಗಿದೆ. ಕರ್ನಾಟಕದ ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಆರ್ ಹೆಚ್ ಕ್ಯಾಂಪ್ ಗಳಲ್ಲಿ ಐವರು ಬಾಂಗ್ಲಾ ನಿರಾಶ್ರಿತರು ವಾಸಿಸುತ್ತಿದ್ದರು. ಅವರಿಗೆ ಸಿಎಎ ಅಡಿಯಲ್ಲಿ ಈಗ ಭಾರತೀಯ ಪೌರತ್ವ ದೊರೆತಿದೆ. ಸಿಂಧನೂರು ತಾಲ್ಲೂಕಿನ ಆರ್ ಹೆಚ್ ಕ್ಯಾಂಗ್ ನ ನಿವಾಸಿಗಳಾದಂತ ರಾಮಕೃಷ್ಣನ್ ಅಭಿಕರಿ, ಸುಕುಮಾರ, ಮೊಂಡಲ್, ಬಿ.ಪ್ರಸಾದ ಗೋಲ್ಡರ್, ಜಯಂತ್ ಮೊಂಡಲ್ ಹಾಗೂ ಅದ್ವಿತ ಎಂಬುವರಿಗೆ ಕೇಂದ್ರ ಗೃಹ ಇಲಾಖೆಯಿಂದ ಪೌರತ್ವ ನೀಡಿದಂತ ಸೂಚನ ಪತ್ರವನ್ನು ನೀಡಲಾಗಿದೆ. ಅಂದಹಾಗೇ 1971ರ ಬಾಂಗ್ಲಾದೇಶ ವಿಮೋಚನಾ ವೇಳೆ ಬಾಂಗ್ಲಾ ಹಾಗೂ ಬರ್ಮಾ ವಲಸಿಗರು ಭಾರತಕ್ಕೆ ಆಗಮಿಸಿದ್ದರು. ಅವರು ಅಲ್ಲಿಂದ ಇಲ್ಲಿಯೇ ಆಶ್ರಯ ಪಡೆದುಕೊಂಡಿದ್ದರು. ಹೀಗೆ ಬಂದಂತ ಬಾಂಗ್ಲಾ ವಲಸಿಗರಲ್ಲಿ ಸಿಂಧನೂರು ತಾಲ್ಲೂಕಿನಲ್ಲೇ ಸುಮಾರು 932 ಕುಟುಂಬಗಳಿವೆ. ಅವರಿಗೆ 5 ಎಕರೆ ಜಮೀನು ನೀಡಲಾಗಿತ್ತು. ಈ ಕುಟುಂಬಗಳಿಗೆ ಯಾವುದೇ ಸೌಲಭ್ಯ ನೀಡಲಾಗಿರಲಿಲ್ಲ. ಕಳೆದ 40 ವರ್ಷಗಳಿಂದ ಅರ್ಜಿ ಹಾಕುತ್ತಲೇ ಬಂದಿದ್ದರು.…

Read More