Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿ ಇಂದು ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾಯಿತು. ಸಿಎಂ ಸಿದ್ದರಾಮಯ್ಯನವರು ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಅಂಗಾಂಗ ದಾನಿಗಳ ಕುಟುಂಬದವರಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಿದರು. ಸಾಂತ್ವನದ ಜೊತೆಗೆ ಸಾವಿನಲ್ಲೂ ಅಂಗಾಂಗ ದಾನ ಮಾಡುವ ಮೂಲಕ ಸಾರ್ಥಕತೆ ತೋರಿದ ಕುಟುಂಬಗಳ ಕಾರ್ಯವನ್ನ ಶ್ಲಾಘಿಸಿದರು. ಅಪಘಾತಕ್ಕೀಡಾದ ಶರವಣ ಅವರ ಪತ್ನಿ, ಪ್ರಶಂಸಾ ಪತ್ರ ಸ್ವೀಕರಿಸುವಾಗ ಅಗಲಿದ ತಮ್ಮ ಪತಿಯನ್ನು ನೆನೆದು ಕಣ್ಣೀರಿಟ್ಟರು. ಕೊಲೆಗೀಡಾದ ಚಿಕ್ಕಮಗಳೂರು ಕೆ.ಜಿ. ನವೀನ್ ಕುಟುಂಬದವರಿಗೆ ಅವರ ಸಾವಿಗೆ ನ್ಯಾಯ ಒದಗಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ನೀವು ಕೈಗೊಂಡ ನಿರ್ಧಾರ ಸುಲಭವಲ್ಲ. ಆದರೆ ಇತರರ ಜೀವ ಉಳಿಸುವ ಕೆಲಸ ನೀವು ಮಾಡಿದ್ದೀರಿ. ನಿಮಗೆ ಯಾವುದೇ ಸಂಕಷ್ಟ ಎದುರಾದರೂ ನಿಮ್ಮೊಂದಿಗೆ ನಾವಿದ್ದೇವೆ ಎಂದು ಸ್ಥೈರ್ಯ ತುಂಬಿದರು. ತಮ್ಮ ಹಿಂದಿನ ಅವಧಿಯಲ್ಲಿ ಅಂಗಾಂಗ ದಾನಕ್ಕೆ ಸೊಸೈಟಿ ಸ್ಥಾಪಿಸಿದ್ದನ್ನು ಸ್ಮರಿಸಿದ ಸಿಎಂ, ಇನ್ನಷ್ಟು ಜನರು ಅಂಗಾಂಗ ದಾನಕ್ಕೆ ಮುಂದಾಗಬೇಕೆಂದು ಕರೆ ನೀಡಿದರು.…
ಬೆಂಗಳೂರು: ಮೊನ್ನೆ ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಲಾಗಿತ್ತು. ಇಂದು ಬೆಂಗಳೂರಿನ ರಾಮೇಶ್ವರಂ ಕಫೆಯಲ್ಲಿ ಬಾಂಬ್ ಸ್ಟೋಗೊಂಡಿದೆ. ಇದರ ಹೊಣೆಯನ್ನು ಹೊತ್ತು ಗೃಹ ಸಚಿವ ಡಾ.ಜಿ ಪರಮೇಶ್ವರ್ ರಾಜೀನಾಮೆ ನೀಡುವಂತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ. ಈ ಕುರಿತಂತೆ ಇಂದು ಎಕ್ಸ್ ಮಾಡಿರುವಂತ ಅವರು, ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟದ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ ತನಿಖೆ ನಡೆಸಬೇಕು. ಗ್ರಾಹಕರು ಬಿಟ್ಟುಹೋದ ಚೀಲದಿಂದಾಗಿ ಸ್ಫೋಟ ಸಂಭವಿಸಿದೆಯೇ ಹೊರತು ಯಾವುದೇ ಸಿಲಿಂಡರ್ ಸ್ಫೋಟದಿಂದಲ್ಲ ಎಂದಿದ್ದಾರೆ. ಕೆಲವು ದಿನಗಳ ಹಿಂದೆ ಕರ್ನಾಟಕ ಕಾಂಗ್ರೆಸ್ ಪಾಕಿಸ್ತಾನ ಪರ ಘೋಷಣೆ ಕೂಗಿದವರನ್ನು ಸಮರ್ಥಿಸಿಕೊಂಡಿತ್ತು. ಇಂದು ರಾಮೇಶ್ವರಂ ಕಫೆಯಲ್ಲಿ ಬಾಂಬ್ ಬ್ಲಾಸ್ಟ್ ಆಗಿದೆ. ಹೀಗಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಗೃಹ ಸಚಿವ ಪರಮೇಶ್ವರ್ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದಾರೆ. https://twitter.com/BasanagoudaBJP/status/1763509307382071792 https://kannadanewsnow.com/kannada/kpsc-recruitment-for-364-posts-of-land-surveyors/ https://kannadanewsnow.com/kannada/important-information-for-state-government-employees-applications-invited-for-first-session-departmental-examination/
ಪುರಾಣ ಕಾಲದಿಂದ ಕೂಡ ನಾವು ಶಕ್ತಿಗೆ ದೇವಿಯನ್ನೇ ಹೋಲಿಸುತ್ತೇವೆ. ಆದಿಶಕ್ತಿ ಪಾರ್ವತಿ ಈ ಜಗತ್ತಿನ ಸೃಷ್ಟಿಗೆ ಕಾರಣ ಎಂದು ನಂಬಿದ್ದೇವೆ ಹಾಗೆಯೇ ಬದುಕು ನಡೆಯಬೇಕು ಎಂದರು ವಿದ್ಯೆಗೆ ಸರಸ್ವತಿ, ಹಣಕ್ಕೆ ಲಕ್ಷ್ಮಿ, ಧೈರ್ಯಕ್ಕೆ ದುರ್ಗೆ ಹೇಗೆ ಈ ದೇವಿಯರ ಆಶೀರ್ವಾದ ಇರಲೇಬೇಕು. ಹಾಗಾಗಿ ಕರ್ನಾಟಕದ ಪ್ರತಿ ಮನೆಗಳಲ್ಲೂ ಕೂಡ ಮನೆಯ ಹೆಣ್ಣು ದೇವತೆಯನ್ನು ಬಹಳ ಭಕ್ತಿ ಭಾವದಿಂದ ಪೂಜಿಸುತ್ತಾರೆ ಹೀಗಾಗಿ ಊರಿನಲ್ಲೂ ಈ ರೀತಿ ಒಂದಾದರೂ ಶಕ್ತಿ ದೇವತೆ ದೇವಸ್ಥಾನ ಇರುತ್ತದೆ. ಇನ್ನು ಕೆಲವು ದೇವಸ್ಥಾನಗಳಲ್ಲೂ ಬಹಳ ವಿಶೇಷವಾಗಿತ್ತು ಆ ಕ್ಷೇತ್ರದ ಪ್ರಭಾವ ನೋಡಿ ನಾಡಿನ ಮೂಲೆ ಮೂಲೆಗಳಿಂದಲೂ ಕೂಡ ಭಕ್ತರು ಆಗಮಿಸುತ್ತಾರೆ. ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ 9686268564 ಇಷ್ಟ ಪಟ್ಟವರು ನೀಮ್ಮಂತೇ ಆಗಲು, ಪ್ರೀತಿಯಲ್ಲಿ ಮೋಸ ಹೋಗಿದ್ದರೆ ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ,…
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ ಎನ್ನುವಂತೆ 2024ರ ಪ್ರಥಮ ಅಧಿವೇಶನ ಇಲಾಖಾ ಪರೀಕ್ಷೆಗಳಿಗೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕುರಿತಂತೆ ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚನೆಯನ್ನು ಹೊರಡಿಸಿದ್ದು, 2024ರ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಗಳಿಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ದಿನಾಂಕ 15-03-2024ರಿಂದ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದೆ. ದಿನಾಂಕ 14-04-2024 ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಹಾಗೂ ಶುಲ್ಕ ಪಾವತಿಸಲು ಕೊನೆಯ ದಿನವಾಗಿದೆ ಎಂದಿದೆ. ಇಲಾಖಾ ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕರ್ನಾಟಕ ಲೋಕಸೇವಾ ಆಯೋಗದ ವೆಬ್ ಸೈಟ್ https://www.kpsc.kar.nic.in ಗೆ ಭೇಟಿ ನೀಡಿ ಸಲ್ಲಿಸಬೇಕು. ಅರ್ಹತೆ – ಈ ಇಲಾಖಾ ಪರೀಕ್ಷೆಗೆ ಅರ್ಜಿ ಸಲ್ಲಿಸು ಸರ್ಕಾರಿ ನೌಕರರು ಆಗಿರಬೇಕು. ಸರ್ಕಾರಿ ಸ್ವಾಮ್ಯಕ್ಕೊಳಪಟ್ಟ ನಿಗಮ, ಮಂಡಳಿ, ಸ್ಥಳೀಯ ಸಂಸ್ಥೆಗಳು, ವಿಶ್ವವಿದ್ಯಾಲಯಗಳು, ಪ್ರಾಧಿಕಾರಗಳ ಖಾಯಂ ನೌಕರರು ಆಗಿರಬೇಕು. ಗ್ರೂಪ್-ಡಿ ನೌಕರರು ಇಲಾಖಾ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ…
ಬೆಂಗಳೂರು: ನಿನ್ನೆ ನಿಧನರಾಗಿದ್ದಂತ ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಅವರ ಅಂತ್ಯಕ್ರಿಯೆಯನ್ನು ಇಂದು ಅವರ ಹುಟ್ಟೂರು ಬಿಡದಿಯ ಉರುಗಹಳ್ಳಿಯಲ್ಲಿ ಅಂತ್ಯಕ್ರಿಯೆಯನ್ನು ನೆರವೇರಿಸಲಾಯಿತು. ನಿನ್ನೆ ನಿಧನರಾದಂತ ಮಾಜಿ ಐಎಎಸ್ ಅಧಿಕಾರಿ ಹಾಗೂ ನಟ ಕೆ. ಶಿವರಾಮ್ ಅವರ ಅಂತ್ಯಕ್ರಿಯೆಯನ್ನು ಅವರ ಹುಟ್ಟೂರು ಬಿಡದಿಯ ಉರುಗಹಳ್ಳಿಯಲ್ಲಿ ಮಾಡುವುದಾಗಿ ಅವರ ಕುಟುಂಬಸ್ಥರು ತಿಳಿಸಿದ್ದಾರೆ. ಶಿವರಾಂ ಅವರ ಅಂತ್ಯಕ್ರಿಯೆಯನ್ನು ಛಲವಾದಿ ಮಹಾಸಭಾದ ಜಾಗದಲ್ಲಿ ಮಾಡಬೇಕು ಎಂದು ಅವರ ಅಭಿಮಾನಿಗಳು ಒತ್ತಾಯಿಸಿದ್ದರು. ಸರಕಾರ ಅದಕ್ಕೆ ಸಮ್ಮತಿ ನೀಡದೇ ಇರುವ ಕಾರಣದಿಂದಾಗಿ ಹುಟ್ಟೂರಿಗೆ ಪಾರ್ಥೀವ ಶರೀರವನ್ನು ತಗೆದುಕೊಂಡು ಹೋಗಲಾಗುತ್ತಿದೆ. ಇಂದು ಸಂಜೆ ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಅವರ ಅಂತ್ಯಕ್ರಿಯೆಯನ್ನು ಅವರ ಬಿಡದಿಯ ಹುಟ್ಟೂರು ಉರುಗಹಳ್ಳಿಯಲ್ಲಿ ನೆರವೇರಿಸಲಾಗುತ್ತಿದೆ. https://kannadanewsnow.com/kannada/bomb-blast-at-rameswaram-cafe-in-bengaluru-cm-siddaramaiah/ https://kannadanewsnow.com/kannada/kpsc-recruitment-for-364-posts-of-land-surveyors/
ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಕಡಿಮೆ ತೀವ್ರತೆಯ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಬಾಂಬ್ ಸ್ಫೋಟ ಸಂಭವಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ದೃಢಪಡಿಸಿದ್ದಾರೆ. ಶುಕ್ರವಾರ ಮಧ್ಯಾಹ್ನ ಜನಪ್ರಿಯ ಉಪಾಹಾರ ಗೃಹದಲ್ಲಿ ಸಂಭವಿಸಿದ ಸ್ಫೋಟದಲ್ಲಿ 9 ಜನರು ಗಾಯಗೊಂಡಿದ್ದಾರೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ವ್ಯಕ್ತಿಯೊಬ್ಬ ಕೆಫೆಯಲ್ಲಿ ಚೀಲವನ್ನು ಬಿಟ್ಟು ಹೋಗುತ್ತಿರುವುದು ಕಂಡುಬಂದಿದೆ ಎಂದು ಸಿಎಂ ಸಿದ್ದರಾಮಯ್ಯ ದೃಢಪಡಿಸಿದ್ದಾರೆ. ಆರಂಭಿಕ ವರದಿಗಳು ಚೀಲದಲ್ಲಿದ್ದ ವಸ್ತುವು ಕೆಫೆಯಲ್ಲಿ ಸ್ಫೋಟಕ್ಕೆ ಕಾರಣವಾಯಿತು ಎಂದು ಸೂಚಿಸಿತ್ತು. ಪರಿಸ್ಥಿತಿಯನ್ನು ಪರಿಶೀಲಿಸಲು ರಾಜ್ಯ ಗೃಹ ಸಚಿವರು ಕೆಫೆಗೆ ತೆರಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಮಾಹಿತಿ ನೀಡಿದರು. ತಮ್ಮ ಸರ್ಕಾರದ ಅಡಿಯಲ್ಲಿ ಮೊದಲ ಬಾರಿಗೆ ಸ್ಫೋಟ ಸಂಭವಿಸಿದೆ ಎಂದು ಸಿಎಂ ಹೇಳಿದರು. ಬೆಂಗಳೂರು ಕೆಫೆಯಲ್ಲಿ ಸ್ಫೋಟ: 9 ಮಂದಿಗೆ ಗಾಯ ನಗರದ ಪ್ರಸಿದ್ಧ ಕೆಫೆಯಲ್ಲಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ನಿಗೂಢ ಸ್ಫೋಟದಲ್ಲಿ ಒಂಬತ್ತು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಎಚ್ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಹಠಾತ್ ಸ್ಫೋಟ ಸಂಭವಿಸಿದ್ದು, ಗ್ರಾಹಕರು ಜೀವ ಉಳಿಸಿಕೊಳ್ಳಲು…
ಬೆಂಗಳೂರು: ನಗರದ ರಾಮೇಶ್ವರಂ ಕೆಫೆಯಲ್ಲಿ ನಡೆದಿರುವಂತ ನಿಗೂಢ ಸ್ಪೋಟಕ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅದೇ ಸುಧಾರಿತ ಐಇಡಿ ಬಳಸಿ ಸ್ಪೋಟಿಸಿರೋ ಶಂಕೆಯನ್ನು ಪೊಲೀಸರು ವ್ಯಕ್ತ ಪಡಿಸಿದ್ದಾರೆ. ಇದಕ್ಕೆ ಪುಷ್ಟೀಕರಣ ಎನ್ನುವಂತೆ ಐಡಿ ಮತ್ತು ಐಜಿಪಿ ಅಲೋಕ್ ಮೋಹನ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ ರಾಮೇಶ್ವರಂ ಕಫೆಯಲ್ಲಿ ಮಧ್ಯಾಹ್ನ 1 ಗಂಟೆಗೆ ಬಾಂಬ್ ಬ್ಲಾಸ್ಟ್ ಆಗಿದೆ ಎಂಬುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಪೊಲೀಸರು, ಎಫ್ಎಸ್ಎಲ್ ತಜ್ಞರ ತಂಡವು ಪರಿಶೀಲನೆ ನಡೆಸುತ್ತಿದೆ. ಶ್ವಾನದಳದ ಸಿಬ್ಬಂದಿಯೂ ಸ್ಥಳದಲ್ಲಿದ್ದಾರೆ. ಪೊಲೀಸರು ಸಂಪೂರ್ಣ ತನಿಖೆಯನ್ನು ನಡೆಸುತ್ತಿದ್ದು, ತನಿಖೆಯ ನಂತ್ರ ಸ್ಪೋಟಕದ ಹಿಂದಿನ ಕಾರಣ ಏನು ಎಂಬುದು ತಿಳಿದು ಬರಬೇಕಿದೆ ಎಂದರು. ಮತ್ತೊಂದೆಡೆ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸ್ಪೋಟದ ಜಾಗದಲ್ಲಿ ಸಾಕ್ಷ್ಯ ಗಳ ಪರಿಶೀಲನೆ ಮಾಡುತ್ತಿರುವ ಪೊಲೀಸರು ಉಗ್ರರ ಕೃತ್ಯ ಇರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಐಇಡಿ (impoverished explossive device – ಸುಧಾರಿತ ಸ್ಪೋಟಕ್ಕೆ ಸಾಮಾಗ್ರಿ) ಬಳಕೆ ಮಾಡಿಕೊಂಡು ಸ್ಪೋಟ ಮಾಡಿರುವ…
ಮೈಸೂರು: ಬೆಂಗಳೂರಿನ ರಾಮೇಶ್ವರಂ ಕಫೆಯಲ್ಲಿ ಇಂದು ನಿಗೂಢ ಸ್ಪೋಟ ಸಂಭವಿಸಿತ್ತು. ಆ ಘಟನೆಗೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಆ ಕುರಿತಂತೆ ಸಿಎಂ ಸಿದ್ಧರಾಮಯ್ಯ ಏನು ಹೇಳಿದರು ಅಂತ ಮುಂದೆ ಓದಿ. ಈ ಕುರಿತಂತೆ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಇತ್ತೀಚೆಗೆ ಯಾವತ್ತೂ ಹೀಗೆ ಆಗಿರಲಿಲ್ಲ. ಮಂಗಳೂರು ಬ್ಲಾಸ್ಟ್ ನಂತ್ರ ರಾಜ್ಯದಲ್ಲಿ ಹೀಗೆ ಆಗಿರಲಿಲ್ಲ. ಬಿಜೆಪಿ ಸರ್ಕಾರದ ಅವಧಿಯಲ್ಲೇ ಆಗಿದ್ದು. ಯಾರು ಮಾಡಿದ್ದಾರೆ ಎನ್ನುವುದನ್ನು ಪತ್ತೆ ಹಚ್ಚಿ. ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದರು. ಈ ತರದ ವಿಚಾರದಲ್ಲಿ ರಾಜಕಾರಣ ಮಾಡಬಾರದು. ಆದರೇ ಈ ಘಟನೆ ಸಂಬಂಧ ಎಲ್ಲರೂ ತನಿಖೆಗೆ ಸಹಕರಿಸಬೇಕು. ಹೇಗೆ ಆಗಿದೆ ಎನ್ನುವ ಬಗ್ಗೆ ತನಿಖೆಯಿಂದ ವಿಷಯ ಗೊತ್ತಾಗಬೇಕು. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅವರೊಂದಿಗೆ ಮಾಹಿತಿ ಪಡೆದು ಪ್ರಕರಣದ ತನಿಖೆಯನ್ನು ಯಾವುದರಿಂದ ನಡೆಸಬೇಕು ಎನ್ನುವ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು. ಮಧ್ಯಾಹ್ನ 12 ಗಂಟೆ ವೇಳೆಗೆ ರಾಮೇಶ್ವರಂ ಕಫೆಯಲ್ಲಿ ಸ್ಪೋಟ ಸಂಭವಿಸಿದೆ ಎಂದು ತಿಳಿದು ಬಂದಿದೆ.…
ಬೆಂಗಳೂರು: ಕರ್ನಾಟಕ ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳಿಗೆ ( KSRTC, BMTC, KKRTC, NWKRTC ) ದೆಹಲಿಯ ದೇಶದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟದ ( ASRTU) 2022 -23ನೇ ಸಾಲಿನ ಒಟ್ಟು 5 ರಾಷ್ಟ್ರೀಯ ಸಾರ್ವಜನಿಕ ಬಸ್ ಸಾರಿಗೆ ಪ್ರಶಸ್ತಿಗಳು ( National Transport Excellence Award) ಲಭಿಸಿರುತ್ತವೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟ ( ASRTU)ದ ವ್ಯಾಪ್ತಿಯಲ್ಲಿ ದೇಶದ 62 ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳು ಸದಸ್ಯತ್ವವನ್ನು ಹೊಂದಿವೆ. ಸದರಿ ಒಕ್ಕೂಟವು 13ನೇ ಆಗಸ್ಟ್ 1965 ರಲ್ಲಿ ಅಸ್ತಿತ್ವಕ್ಕೆ ಬಂದಿದ್ದು ,ಭಾರತ ಸರ್ಕಾರದ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯದ ನಿರ್ದೇಶನದ ಅನುಸಾರ ಕಾರ್ಯನಿರ್ವಹಿಸುತ್ತದೆ ಈ ಸಂಸ್ಥೆಯು 58 ವರ್ಷಗಳ ಅನುಭವವನ್ನು ಹೊಂದಿದ್ದು, ದೇಶದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ. ಕೆ ಎಸ್ ಆರ್ ಟಿ ಸಿ ಗೆ ಬ್ರ್ಯಾಂಡಿಂಗ್ ಹಾಗೂ ವರ್ಚಸ್ಸು ಅಭಿವೃದ್ಧಿ ಉಪಕ್ರಮ ಮತ್ತು ಸಿಬ್ಬಂದಿಗಳ ಕಲ್ಯಾಣಕ್ಕಾಗಿ ಕೈಗೊಂಡಿರುವ ವಿನೂತನ…
ಹಾಸನ : “ಗ್ಯಾರಂಟಿ ಯೋಜನೆಗಳಿಂದ ಒಂದು ಬಡ ಕುಟುಂಬಕ್ಕೆ ವಾರ್ಷಿಕ 50-60 ಸಾವಿರ ಉಳಿತಾಯವಾಗುತ್ತಿದೆ. ಐದು ಗ್ಯಾರಂಟಿ ಯೋಜನೆಗಳ ಹೊರತಾಗಿ ವಿವಿಧ ಅಭಿವೃದ್ಧಿಗೆ ರಾಜ್ಯ ಸರ್ಕಾರ ರೂ.1.20 ಸಾವಿರ ಕೋಟಿ ಹಣವನ್ನು ಬಜೆಟ್ ನಲ್ಲಿ ಮೀಸಲಿಟ್ಟಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಹಾಸನದಲ್ಲಿ ನಡೆದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಸಮಾರಂಭದಲ್ಲಿ ಮಾತನಾಡಿದ ಅವರು “1.56 ಕೋಟಿ ಕುಟುಂಬಗಳಿಗೆ ಉಚಿತವಾಗಿ ವಿದ್ಯುತ್ ನೀಡುವುದರ ಜೊತೆಗೆ 1.50 ರುಪಾಯಿ ವಿದ್ಯುತ್ ದರ ಇಳಿಸಿದ್ದೇವೆ. ಇದಕ್ಕೆ ವಿರೋಧ ಪಕ್ಷಗಳು ಏನು ಹೇಳುತ್ತವೆ. ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದ್ದ ಕುಮಾರಸ್ವಾಮಿ, ಆರ್. ಅಶೋಕ್ ಅವರು ಇದಕ್ಕೆ ಉತ್ತರಿಸಲಿ ಎಂದರು. ವಸ್ತುಗಳ ಬೆಲೆ ಏರಿಕೆಯಾಗಿತ್ತು. ಬಿಜೆಪಿಯವರು ವಿದ್ಯುತ್ ಬೆಲೆ ಏರಿಕೆ ಮಾಡಿದ್ದರು. ನಾವು ಉಚಿತವಾಗಿ ವಿದ್ಯುತ್ ನೀಡುವುದರ ಜೊತೆಗೆ ಬೆಲೆ ಇಳಿಕೆ ಮಾಡಿದ್ದೇವೆ. ಗೃಹಲಕ್ಷ್ಮೀ ಯೋಜನೆಯಿಂದ ಅತ್ತೆ-ಸೊಸೆ ಜಗಳವಾಡುತ್ತಾರೆ ಎಂದು ಗುಲ್ಲೆಬ್ಬಿಸಿದರು. ಯಾವುದಾದರೂ ಮನೆಯಲ್ಲಿ ಜಗಳ ಉಂಟಾಗಿದೆಯೇ? ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆಯವರು “ಶಕ್ತಿ ಯೋಜನೆಯಿಂದ ದೇವಸ್ಥಾನಕ್ಕೆ ಜನ ಹೆಚ್ಚು ಬರುತ್ತಿದ್ದಾರೆ. ಹುಂಡಿ…