Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಕೆರೆಗಳ ನಡುವೆ ಸಂಪರ್ಕ, ರಾಜಕಾಲುವೆ ಪಕ್ಕ 50 ಅಡಿ ಅಂತರದಲ್ಲಿ ಕಟ್ಟಡ ನಿರ್ಮಾಣಕ್ಕೆ ತಡೆ, ರಾಜಕಾಲುವೆ ಪಕ್ಕದಲ್ಲಿ 300 ಕಿ.ಮೀ. ಉದ್ದ ರಸ್ತೆ ನಿರ್ಮಾಣ, ಚರಂಡಿಗಳ ಹೂಳೆತ್ತುವುದು, ಅಪಾಯಕಾರಿ, ಅನಧಿಕೃತ ಕಟ್ಟಗಳ ಸಮೀಕ್ಷೆ ಹಾಗೂ ತೆರವು, ಕಾನೂನು ತಿದ್ದುಪಡಿ ಅಥವಾ ಸುಗ್ರೀವಾಜ್ಞೆ ಮೂಲಕ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ… ಇವಿಷ್ಟು ಬೆಂಗಳೂರು ನಗರದಲ್ಲಿ ಅತಿವೃಷ್ಠಿಯಿಂದ ಉದ್ಭವಿಸುವ ಸಮಸ್ಯೆಗಳ ಶಾಶ್ವತ ಪರಿಹಾರಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬಿಬಿಎಂಪಿ ಮತ್ತಿತರ ಅಧಿಕಾರಿಗಳಿಗೆ ಗುರುವಾರ ನೀಡಿರುವ ಸೂಚನೆಗಳಾಗಿವೆ. ಬೆಂಗಳೂರಿನಲ್ಲಿ ಅತಿವೃಷ್ಠಿ ವಿಪತ್ತು ನಿರ್ವಹಣೆ ಮತ್ತಿತರ ವಿಷಯಗಳ ಕುರಿತು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬಿಬಿಎಂಪಿ ಮತ್ತಿತರ ಅಧಿಕಾರಿಗಳ ಜತೆ ತುರ್ತುಸಭೆ ನಡೆಸಿದರು. ಸಭೆ ನಂತರ ಮಾಧ್ಯಮಗೋಷ್ಠಿ ನಡೆಸಿದ ಉಪಮುಖ್ಯಮಂತ್ರಿಗಳು ಸಭೆಯಲ್ಲಿ ಕೈಗೊಂಡ ನಿರ್ಣಯಗಳು ಹಾಗೂ ಅಧಿಕಾರಿಗಳಿಗೆ ನೀಡಿರುವ ಸೂಚನೆಗಳ ಬಗ್ಗೆ ಮಾಹಿತಿ ನೀಡಿದರು. “ಇಂದು ಬೆಂಗಳೂರು ನಗರದಲ್ಲಿ ಅತಿವೃಷ್ಠಿ ಸಮಸ್ಯೆ ನಿವಾರಣೆಗಾಗಿ ಹಲವು ಪ್ರಮುಖ ತೀರ್ಮಾನ ಕೈಗೊಂಡಿದ್ದು, ಅಧಿಕಾರಿಗಳಿಗೆ ಕೆಲವು ನಿರ್ದೇಶನ ನೀಡಿದ್ದೇನೆ.…
ಬೆಂಗಳೂರು: ರಾಜ್ಯದ ಅಧಿಸೂಚಿತ, ದಾಖಲಿತ ಅರಣ್ಯ ಮತ್ತು ಪರಿಭಾವಿತ ಅರಣ್ಯ ಭೂಮಿಗಳ ಸಮಗ್ರ ದಾಖಲೀಕರಣಕ್ಕಾಗಿ 15 ದಿನಗಳಲ್ಲಿ ತಜ್ಞರ ಸಮಿತಿ ರಚಿಸಲು ಅರಣ್ಯ ಮತ್ತು ಕಂದಾಯ ಸಚಿವರ ಜಂಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ವನ್ ಸಂರಕ್ಷಣ ಏವಂ ಸಂವರ್ಧನ ಅಧಿನಿಯಮ 1980ರ ನಿಯಮ 16ರಡಿ ಹೊಸದಾಗಿ ತಜ್ಞರ ಸಮಿತಿ ರಚಿಸಲು ಅವಕಾಶವಿದ್ದು, ಈ ನೂತನ ಸಮಿತಿ ರಾಜ್ಯದ ಅಧಿಸೂಚಿತ ಮತ್ತು ದಾಖಲಿತ ಅರಣ್ಯದ ಸಮಗ್ರ ದಾಖಲೀಕರಣ ರಚಿಸುವದೊಂದಿಗೆ ಪ್ರಸ್ತುತ ಪರಿಭಾವಿತ ಅರಣ್ಯ ಪ್ರದೇಶದ ನ್ಯೂನತೆಗಳನ್ನು ಪರೀಶಿಲಿಸಿ, ಸರಿಪಡಿಸಿ 6 ತಿಂಗಳೊಳಗೆ ಕ್ರೋಡಿಕೃತ ವರದಿ ಸಲ್ಲಿಸಲಿದೆ. ಕೇಲವು ಪರಿಭಾವಿತ ಅರಣ್ಯ ಎಂದು ಗುರುತಿಸಿರುವ ಪ್ರದೇಶದಲ್ಲಿ ಅಧಿಸೂಚಿತ ಅರಣ್ಯ, ಪಟ್ಟಾಭೂಮಿ, ಸರ್ಕಾರಿ ಕಚೇರಿ, ಶಾಲೆ ಕಾಲೇಜುಗಳೂ ಇವೆ ಹೀಗಾಗಿ ಇದರ ಪರೀಶಿಲನೆ ಆಗಬೇಕು ಎಂಬ ಬೇಡಿಕೆ ಹಿನ್ನೆಲೆಯಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಮತ್ತು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರ ಸಹ ಅಧ್ಯಕ್ಷತೆಯಲ್ಲಿಂದು ವಿಕಾಸಸೌಧದಲ್ಲಿ ಮಹತ್ವದ ಸಭೆ ನಡೆಸಲಾಯಿತು. ಗೋದಾವರ್ಮನ್ ತಿರುಮಲ್ಪಾಡ್ V/s…
ಬೆಂಗಳೂರು: ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರನ್ನು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪಕ್ಷದ ವರಿಷ್ಠರು ಆಯ್ಕೆ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಚನ್ನಪಟ್ಟಣ ಕ್ಷೇತ್ರಕ್ಕೆ ನಿಖಿಲ್ ಕುಮಾರಸ್ವಾಮಿಯವರನ್ನು ಜೆಡಿಎಸ್ ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಚನ್ನಪಟ್ಟಣ ಕ್ಷೇತ್ರಕ್ಕೆ ಬಿಜೆಪಿ ಅಥವಾ ಜೆಡಿಎಸ್ ನವರು ಯಾರನ್ನು ಅಭ್ಯರ್ಥಿಯಾಗಿ ಕಣಕ್ಕೆ ಇಳಿಸುತ್ತಾರೆಂಬುದು ನಮಗೆ ಮುಖ್ಯವಲ್ಲ. ನಮ್ಮ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ ಅವರು ಚನಪಟ್ಟಣ ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದರು. https://kannadanewsnow.com/kannada/belekeri-port-illegal-ore-missing-case-congress-mla-satish-sail-arrested/ https://kannadanewsnow.com/kannada/minister-ishwar-khandre-gives-good-news-to-farmers-cultivating-forest-land-in-the-state/
ಬೆಂಗಳೂರು: 2010ರ ಬೇಲೆಕೇರಿ ಬಂಧರಿನಲ್ಲಿನ ಅದಿರು ನಾಪತ್ತೆ ಪ್ರಕರಣ ಸಂಬಂಧದ ತೀರ್ಪನ್ನು ಕೋರ್ಟ್ ಪ್ರಕಟಿಸಿದೆ. ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರು ಅಪರಾಧಿ ಎಂಬುದಾಗಿ ತನ್ನ ತೀರ್ಪಿನಲ್ಲಿ ಕೋರ್ಟ್ ಪ್ರಕಟಿಸಿದೆ. ಆದರೇ ಶಿಕ್ಷೆಯ ಪ್ರಮಾಣವನ್ನು ನಾಳೆ ಪ್ರಕಟಿಸುವುದಾಗಿ ತಿಳಿಸಿದೆ. ಈ ಹಿನ್ನಲೆಯಲ್ಲಿ ಸಿಬಿಐ ಅಧಿಕಾರಿಗಳು ಶಾಸಕ ಸತೀಶ್ ಸೈಲ್ ಅವರನ್ನು ಬಂಧಿಸಿದ್ದಾರೆ. ಈ ಸಂಬಂಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಾದ-ಪ್ರತಿವಾದವನ್ನು ಆಲಿಸಿತ್ತು. ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ತೀರ್ಪು ಪ್ರಕಟಿಸಿದ್ದು, ಬೇಲೆಕೇರಿಯಲ್ಲಿ ಸೀಜ್ ಆಗಿದ್ದಂತ 11,312 ಮೆಟ್ರಿಕ್ ಟನ್ ಅದಿರನ್ನು ಅನುಮತಿ ಇಲ್ಲದೇ ಸಾಗಾಟ ಮಾಡಲಾಗಿತ್ತು. ಈ ಸಂಬಂಧ ಒಟ್ಟು 6 ಪ್ರಕರಣಗಳು ದಾಖಲಾಗಿದ್ದವು. ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ವಾದ ಪ್ರತಿವಾದವನ್ನು ಆಲಿಸಿ, ಕಾಂಗ್ರೆಸ್ ಶಾಸಕ ಸತೀಶ್ ಸೈಲ್, ಮಹೇಶ್ ಬಿಳಿಯೆ, ಮಲ್ಲಿಕಾರ್ಜುನ ಶಿಪ್ಪಿಂಗ್ ಅವರನ್ನು ದೋಷಿ ಎಂಬುದಾಗಿ ತೀರ್ಪು ನೀಡಿದೆ. ಈ ಹಿನ್ನಲೆಯಲ್ಲಿ ಆರೋಪಿಗಳನ್ನು ಸಿಬಿಐ ಬಂಧಿಸಿ, ಪರಪ್ಪನ ಅಗ್ರಹಾರ ಜೈಲು ಸೇರಿಸಿದೆ.…
ಬೆಂಗಳೂರು : ರಾಜ್ಯದ ಅರಣ್ಯ ಭೂಮಿಗಳ ಸಮಗ್ರ ದಾಖಲೀಕರಣಕ್ಕಾಗಿ ಮತ್ತು ಪರಿಭಾವಿತ ಅರಣ್ಯದ ಪುನರ್ ಪರಿಶೀಲನೆಗಾಗಿ 15 ದಿನಗಳಲ್ಲಿ ತಜ್ಞರ ಸಮಿತಿ ರಚಿಸಲು ಅರಣ್ಯ ಮತ್ತು ಕಂದಾಯ ಸಚಿವರ ಜಂಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ವನ್ ಸಂರಕ್ಷಣ ಏವಂ ಸಂವರ್ಧನ ಅಧಿನಿಯಮ 1980ರ ನಿಯಮ 16ರಡಿ ಹೊಸದಾಗಿ ತಜ್ಞರ ಸಮಿತಿ ರಚಿಸಲು ಅವಕಾಶವಿದ್ದು, ಈ ನೂತನ ಸಮಿತಿ ರಾಜ್ಯದ ಅಧಿಸೂಚಿತ ಮತ್ತು ದಾಖಲಿಸಲಾದ ಅರಣ್ಯ ಪ್ರದೇಶದ ಸಮಗ್ರ ದಾಖಲೀಕರಣ ಮತ್ತು ಪರಿಭಾವಿತ ಅರಣ್ಯ ಪ್ರದೇಶದ ಲೋಪದೋಷ ಸರಿಪಡಿಸಲು ಪರಾಮರ್ಶಿಸಿ 6 ತಿಂಗಳೊಳಗೆ ವರದಿ ಸಲ್ಲಿಸಲಿದೆ. ಪರಿಭಾವಿತ ಅರಣ್ಯ ಎಂದು ಗುರುತಿಸಿರುವ ಪ್ರದೇಶದಲ್ಲಿ ಅಧಿಸೂಚಿತ ಅರಣ್ಯ, ಪಟ್ಟಾಭೂಮಿ, ಸರ್ಕಾರಿ ಕಚೇರಿ, ಶಾಲೆ ಕಾಲೇಜುಗಳೂ ಇವೆ. ಹೀಗಾಗಿ ಇದರ ಪರಾಮರ್ಶೆ ಆಗಬೇಕು ಎಂಬ ಬೇಡಿಕೆ ಹಿನ್ನೆಲೆಯಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಮತ್ತು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರ ಸಹ ಅಧ್ಯಕ್ಷತೆಯಲ್ಲಿಂದು ವಿಕಾಸಸೌಧದಲ್ಲಿ ಮಹತ್ವದ ಸಭೆ ನಡೆಸಲಾಯಿತು. ಗೋದಾವರ್ಮನ್ ತಿರುಮಲ್ಪಾಡ್ V/s ಕೇಂದ್ರ…
ಬೆಂಗಳೂರು: ಭಾನುವಾರ ರಾಜ್ಯಾದ್ಯಂತ ಗ್ರಾಮ ಆಡಳಿತ ಅಧಿಕಾರಿಗಳ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಯಲ್ಲಿ ಯಾವ ಅಕ್ರಮಗಳೂ ನಡೆಯದಂತೆ ಅಧಿಕಾರಿಗಳು ಕಟ್ಟೆಚ್ಚರಿಕೆ ವಹಿಸಬೇಕು ಎಂದು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಕಟ್ಟೆಚ್ಚರಿಕೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆಗೆ ಗುರುವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಎಚ್ಚರಿಸಿದ ಅವರು, “ಈ ಹಿಂದೆ ಕರ್ನಾಟಕ ಲೋಕಸೇವಾ ಆಯೋಗ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿರುವ ಕೆಲವು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮ ನಡೆದಿರುವುದು ಕಂಡುಬಂದಿದೆ. ಪಿಎಸ್ಐ ಪರೀಕ್ಷೆಯಲ್ಲಿ ನಡೆದ ಅಕ್ರಮ ಇಡೀ ವ್ಯವಸ್ಥೆಯೇ ತಲೆತಗ್ಗಿಸುವಂತಹ ಕೃತ್ಯವಾಗಿದ್ದು, ಗ್ರಾಮ ಆಡಳಿತ ಅಧಿಕಾರಿಗಳ ಪರೀಕ್ಷೆಯಲ್ಲಿ ಇಂತಹ ಯಾವ ಅಕ್ರಮಗಳಿಗೂ ಅಧಿಕಾರಿಗಳು ಅವಕಾಶ ನೀಡಬಾರದು” ಎಂದು ತಾಕೀತು ಮಾಡಿದರು. “ರಾಜ್ಯಾದ್ಯಂತ ಒಟ್ಟಾರೆ 4.71 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಈ ಹಿಂದೆ ಮೂರು ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದೆ ದೊಡ್ಡ ಸಂಖ್ಯೆಯಾಗಿತ್ತು. ಆದರೆ, ಈ ವರ್ಷ ಕೆಲಸ ಆಕಾಂಕ್ಷಿ…
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವದ ಗೃಹ ಆರೋಗ್ಯ ಯೋಜನೆಗೆ ಇಂದು ಚಾಲನೆ ದೊರೆತಿದೆ. ಬೆಂಗಳೂರಿನ ವಿಧಾನ ಸೌಧದ ಬ್ಯಾಂಕ್ವೀಟ್ ಹಾಲ್ ನಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರು ದೀಪ ಬೆಳಗಿಸುವ ಮೂಲಕ ಯೋಜನೆಗೆ ಚಾಲನೆ ನೀಡಿದರು. ಕೋಲಾರ ಜಿಲ್ಲೆಯಿಂದ ಯೋಜನೆ ಪ್ರಾರಂಭಿಸಲಾಗಿದ್ದು, ಸಾಂಕೇತಿಕವಾಗಿ ನಾಲ್ವರಿಗೆ ಔಷಧಿಗಳನ್ನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಗೃಹ ಆರೋಗ್ಯ ಯೋಜನೆಯ ರೂವಾರಿ ಆಗಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಇದೊಂದು ದೂರದೃಷ್ಟಿಯ ಯೋಜನೆಯಾಗಿದ್ದು, ಗ್ರಾಮೀಣ ಪ್ರದೇಶದ ಜನರ ಜೀವ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂದರು. ರಾಜ್ಯದಲ್ಲಿ ಶೇಕಡಾ 26.9% ರಷ್ಟು ರಕ್ತದೊತ್ತಡ, ಶೇಕಡಾ 15.6% ರಷ್ಟು ಮಧುಮೇಹ ರೋಗಗಳಿಂದ ಜನರು ಬಳಲುತ್ತಿದ್ದು, ಇದರಿಂದ ಉಂಟುಗುತ್ತಿರುವ ಮರಣ ಹಾಗೂ ಅನಾರೋಗ್ಯ ತೊಡಕುಗಳನ್ನ ತಡೆಗಟ್ಟವುದು ಗೃಹ ಆರೋಗ್ಯ ಯೋಜನೆಯ ಮುಖ್ಯ ಗುರಿಯಾಗಿದೆ. ಅಲ್ಲದೇ ರಾಜ್ಯದಲ್ಲಿ ಶೇಕಡಾ 11.5 % ರಷ್ಟು ಬಾಯಿ ಕ್ಯಾನ್ಸರ್; ಶೇಕಡಾ 26 % ರಷ್ಟು ಸ್ತನ ಕ್ಯಾನ್ಸರ್ ಹಾಗೂ ಶೇಕಡಾ 18.3 % ರಷ್ಟು…
ಬೆಂಗಳೂರು: 2010ರ ಬೇಲೆಕೇರಿ ಬಂಧರಿನಲ್ಲಿನ ಅದಿರು ನಾಪತ್ತೆ ಪ್ರಕರಣ ಸಂಬಂಧದ ತೀರ್ಪನ್ನು ಕೋರ್ಟ್ ಪ್ರಕಟಿಸಿದೆ. ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರು ಅಪರಾಧಿ ಎಂಬುದಾಗಿ ತನ್ನ ತೀರ್ಪಿನಲ್ಲಿ ಕೋರ್ಟ್ ಪ್ರಕಟಿಸಿದೆ. ಆದರೇ ಶಿಕ್ಷೆಯ ಪ್ರಮಾಣವನ್ನು ನಾಳೆ ಪ್ರಕಟಿಸುವುದಾಗಿ ತಿಳಿಸಿದೆ. ಈ ಸಂಬಂಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಾದ-ಪ್ರತಿವಾದವನ್ನು ಆಲಿಸಿತ್ತು. ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ತೀರ್ಪು ಪ್ರಕಟಿಸಿದ್ದು, ಬೇಲೆಕೇರಿಯಲ್ಲಿ ಸೀಜ್ ಆಗಿದ್ದಂತ 11,312 ಮೆಟ್ರಿಕ್ ಟನ್ ಅದಿರನ್ನು ಅನುಮತಿ ಇಲ್ಲದೇ ಸಾಗಾಟ ಮಾಡಲಾಗಿತ್ತು. ಈ ಸಂಬಂಧ ಒಟ್ಟು 6 ಪ್ರಕರಣಗಳು ದಾಖಲಾಗಿದ್ದವು. ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ವಾದ ಪ್ರತಿವಾದವನ್ನು ಆಲಿಸಿ, ಕಾಂಗ್ರೆಸ್ ಶಾಸಕ ಸತೀಶ್ ಸೈಲ್, ಮಹೇಶ್ ಬಿಳಿಯೆ, ಮಲ್ಲಿಕಾರ್ಜುನ ಶಿಪ್ಪಿಂಗ್ ಅವರನ್ನು ದೋಷಿ ಎಂಬುದಾಗಿ ತೀರ್ಪು ನೀಡಿದೆ. ಅಂದಹಾಗೇ ಕೇಂದ್ರ ಸರ್ಕಾರದ ತನಿಖಾ ಸಂಸ್ಥೆ ಸಿಬಿಐ ನಿಂದ ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗಿತ್ತು. ಈ…
ಕೊಪ್ಪಳ: ಜಿಲ್ಲೆಯ ಮರಕುಂಬಿ ಗ್ರಾಮದ ದಲಿತ ಮೇಲಿನ ದೌರ್ಜನ್ಯ ಪ್ರಕರಣ ಸಂಬಂಧ ಬಂಧಿತರಾಗಿದ್ದಂತ 101 ಆರೋಪಿಗಳಲ್ಲಿ 98 ಮಂದಿಗೆ ಜೀವಾವಧಿ ಶಿಕ್ಷೆಯನ್ನು ನೀಡಿ ಕೋರ್ಟ್ ಆದೇಶಿಸಿದೆ. ಇಂದು ಕೊಪ್ಪಳ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು ತೀರ್ಪು ಪ್ರಕಟಿಸಿದ್ದು, ಮರಕುಂಬಿ ಗ್ರಾಮ ದಲಿತರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿದ್ದಂತ 101 ಆರೋಪಿಗಳಲ್ಲಿ 98 ಆರೋಪಿಗಳಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿ ಆದೇಶಿಸಿದ್ದಾರೆ. ಇನ್ನೂ ಮೂವರು ಆರೋಪಿಗಳಇಗೆ ಐದು ವರ್ಷ ಕಠಿಣ ಶಿಕ್ಷೆಯನ್ನು ತಲಾ 2 ಸಾವಿರ ದಂಡವನ್ನು ವಿಧಿಸಿದ್ದಾರೆ. ಇನ್ನೂ ಜೀವಾವಧಿ ಶಿಕ್ಷೆಗೆ ಒಳಗಾದಂತ 98 ಅಪರಾಧಿಗಳಿಗೆ ತಲಾ 5 ಸಾವಿರ ದಂಡವನ್ನು ವಿಧಿಸಿದ್ದಾರೆ. https://kannadanewsnow.com/kannada/bengaluru-building-collapse-three-accused-sent-to-14-day-judicial-custody/ https://kannadanewsnow.com/kannada/a-rare-drum-artist-in-the-state-you-will-be-shocked-to-hear-about-his-achievements/
ಬೆಂಗಳೂರು: ನಗರದ ಬಾಬುಸಾಬ್ ಪಾಳ್ಯದಲ್ಲಿ 6 ಅಂತಸ್ಥಿನ ಕಟ್ಟಡವೊಂದು ಕುಸಿದು ಬಿದ್ದು 8 ಮಂದಿ ಸಾವನ್ನಪ್ಪಿದ್ದರು. ಈ ಪ್ರಕರಣದಲ್ಲಿ ಬಂಧಿತರಾಗಿದ್ದಂತ ಮೂವರು ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ. ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿನ ಕಟ್ಟಡ ಕುಸಿತ ದುರಂತ ಪ್ರಕರಣ ಸಂಬಂಧ ಹೆಣ್ಣೂರು ಠಾಣೆಯ ಪೊಲೀಸರಿಂದ ಮುನಿರಾಜು ರೆಡ್ಡಿ, ಭುವನ್ ರೆಡ್ಡಿ ಹಾಗೂ ಮುನಿಯಪ್ಪ ಎಂಬುವರನ್ನು ಬಂಧಿಸಲಾಗಿತ್ತು. ಇಂದು ಬಂಧಿತ ಆರೋಪಿಗಳನ್ನು ಬೆಂಗಳೂರಿನ 11ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಬಂಧಿತ ಮೂವರು ಆರೋಪಿಗಳಿಗೆ ನ್ಯಾಯಾಥೀಶರು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದ್ದಾರೆ. ಈ ಮೂಲಕ ಕಟ್ಟಡ ಕುಸಿದು 8 ಮಂದಿ ಸಾವಿಗೆ ಕಾರಣವಾದಂತ ಮೂವರು ಆರೋಪಿಗಳು ಜೈಲುಪಾಲಾಗಿದ್ದಾರೆ. https://kannadanewsnow.com/kannada/a-rare-drum-artist-in-the-state-you-will-be-shocked-to-hear-about-his-achievements/ https://kannadanewsnow.com/kannada/8-bjp-mlas-join-congress-sd-somashekar/












