Subscribe to Updates
Get the latest creative news from FooBar about art, design and business.
Author: kannadanewsnow09
ತುಮಕೂರು: ಜಿಲ್ಲೆಯ ಜಲಜೀವನ್ ಮಿಷನ್ ಯೋಜನೆಗಳಿಗೆ ಸಂಬಂಧಿಸಿದಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅವರು ಟೆಂಡರ್ ಕರೆಯಲು ವಿಳಂಬ ಮಾಡಿರುವ ಬಗ್ಗೆ ಹಾಗೂ ಈ ಯೋಜನೆಗಳಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ಇಲಾಖೆ ತನಿಖೆ ನಡೆಸಲು ಆದೇಶಿಸಿರುವುದಾಗಿ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ವಿಧಾನಸಭೆಯಲ್ಲಿ ಗಮನ ಸೆಳೆಯುವ ಸೂಚನೆಗೆ ಉತ್ತರ ನೀಡಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ಒಟ್ಟು 2230 ಕೋಟಿ ವೆಚ್ಚದಲ್ಲಿ 3699 ಕಾಮಗಾರಿಗಳನ್ನ ಮಾಡಲು ಕಳೆದ ಜೂನ್ 2022 ಹಾಗೂ ಜನವರಿ 2023 ರಲ್ಲಿ ಟೆಂಡರ್ ಕರೆಯಲಾಗಿತ್ತು. ಆದರೆ ಇದುವರೆಗೂ ಕಾಮಗಾರಿಗಳಿಗೆ ಚಾಲನೆ ದೊರೆತಿಲ್ಲ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ರವೀಶ್ ಅವರು ಉದ್ದೇಶಪೂರ್ವಕವಾಗಿ ಟೆಂಡರ್ ಕರೆಯಲು ವಿಳಂಬ ಮಾಡುತ್ತಿದ್ದಾರೆ ಹಾಗೂ ಈ ಯೋಜನೆಗಳಲ್ಲಿ ಭಾರಿ ಅವ್ಯವಹಾರ ಆಗಿದೆ ಎಂದು ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಅವರು ಗಮನ ಸೆಳೆಯುವ…
ಮಾರ್ವಾಡಿಗಳು ಈ ಲಕ್ಷ್ಮೀ ಕುಬೇರ ಪೂಜೆಯನ್ನು ಬಹಳ ವಿಮರ್ಶಾತ್ಮಕವಾಗಿ ನೆರವೇರಿಸುತ್ತಾರೆ. ನಮ್ಮ ಮನೆಯಲ್ಲಿ ಲಕ್ಷ್ಮೀ ಕುಬೇರ ಪೂಜೆಯನ್ನು ಅತ್ಯಂತ ವಿಮರ್ಶಾತ್ಮಕವಾಗಿ ಮಾಡುವುದಾಗಲಿ ಅಥವಾ ಕುಬೇರನನ್ನು ಅತ್ಯಂತ ಸರಳವಾಗಿ ಪೂಜಿಸುವುದಾಗಲಿ ಅದರೊಂದಿಗೆ ಈ ಮಂತ್ರವನ್ನು ಪಠಿಸಬೇಕು. ಈ ಕುಬೇರ ಪೂಜೆಯನ್ನು ಯಂತ್ರವನ್ನು ಇಟ್ಟುಕೊಂಡು, ಪೆಟ್ಟಿಗೆಯನ್ನು ಇಟ್ಟು, ಮಂತ್ರಗಳನ್ನು ಪಠಿಸುವ ಮೂಲಕ ಬಹಳ ವಿಮರ್ಶಾತ್ಮಕವಾಗಿ ನಡೆಸಲಾಗುತ್ತದೆ. ಅಷ್ಟರ ಮಟ್ಟಿಗೆ ಈ ಪೂಜೆ ಮಾಡಬಹುದೋ ಗೊತ್ತಿಲ್ಲ. ಆದರೆ ಮಂಗಳವಾರ ಮತ್ತು ಶುಕ್ರವಾರ ಸಂಜೆ ನಮ್ಮ ಮನೆಯಲ್ಲಿ ಈ ಪೂಜೆಯನ್ನು ಮಾಡಬಹುದಷ್ಟೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ…
ಬೆಂಗಳೂರು: ರಾಜ್ಯದ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವಂತ ಹೈದರಾಬಾದ್-ಕರ್ನಾಟಕ ಸ್ಥಳೀಯ ವೃಂದ – 100 ಹುದ್ದೆಗಳ ( Land Surveyors Recruitment ) ಭರ್ತಿಗೆ ಕೆಪಿಎಸ್ಸಿಯಿಂದ ( KPSC ) ಅಧಿಸೂಚನೆ ಹೊರಡಿಸಲಾಗಿದೆ. ಈ ಕುರಿತಂತೆ ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವಂತ 100 ಭೂಮಾಪಕರ ಗ್ರೂಪ್-ಸಿ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಿರುವುದಾಗಿ ತಿಳಿಸಿದೆ. ಪ್ರಮುಖ ದಿನಾಂಕಗಳು ಭೂಮಾಪಕರ 100 ಹುದ್ದೆಗಳಿಗೆ ದಿನಾಂಕ 11-03-2024ರಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10-04-2024 ಆಗಿದೆ. ತಾತ್ಕಾಲಿಕ ಸ್ಪರ್ಧಾತ್ಮಕ ಪರೀಕ್ಷೆಯು ಕನ್ನಡ ಭಾಷಾ ಪರೀಕ್ಷೆ ದಿನಾಂಕ 06-07-2024, ಸ್ಪರ್ಧಾತ್ಮಕ ಪರೀಕ್ಷೆಯು ದಿನಾಂಕ 07-07-2024ರಂದು ನಡೆಸಲು ನಿಗದಿ ಪಡಿಸಲಾಗಿದೆ. ಶೈಕ್ಷಣಿಕ ವಿದ್ಯಾರ್ಹತೆ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಕಾನೂನು ರೀತಿ ಸ್ಥಾಪಿಸಲಾದಂತ ಯಾವುದೇ ವಿವಿಯಿಂದ ಬಿಇ (ಸಿವಿಲ್) ಅಥವಾ ಬಿಟೆಕ್(ಸಿವಿಲ್)…
ಬೆಂಗಳೂರು: ಹೃದಯಾಘಾತಕ್ಕೆ ಒಳಗಾಗಿದ ಕಳೆದ 25 ದಿನಗಳಿಂದ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆಯೂ ಚಿಕಿತ್ಸೆಯನ್ನು ಪಡೆಯುತ್ತಿದ್ದಂತ ನಿವೃತ್ತ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಇದೀಗ ಚಿಕಿತ್ಸೆ ಫಲಿಸದೇ ನಿಧನರಾಗಿರೋದಾಗಿ ತಿಳಿದು ಬಂದಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಹೃದಯಾಘಾತದ ನಂತ್ರ ನಿವೃತ್ತ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ 25 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದಂತ ಅವರ ಆರೋಗ್ಯದಲ್ಲಿ ದಿನೇ ದಿನೇ ಚೇತರಿಕೆ ಕಾಣದೇ, ಗಂಭೀರ ಸ್ಥಿತಿಯನ್ನು ತಲುಪಿತ್ತು. ಇಂತಹ ಅವರು ಇಂದು ಸಂಜೆ 4.15ರ ವೇಳೆಗೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಇಂದು ನಿಧನರಾಗಿರುವಂತ ನಟ ಕೆ.ಶಿವರಾಮ್ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ನಾಳೆ ಬೆಳಿಗ್ಗೆ 7 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ರವೀಂದ್ರ ಕಲಾಕ್ಷೇತ್ರದ ಬಳಿಯಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅಂತ್ಯ ಸಂಸ್ಕಾರವನ್ನು ನಾಳೆ ಅಂತಿಮ ದರ್ಶನದ ಬಳಿಕ ಎಲ್ಲಿ ನಡೆಸಬೇಕು ಎನ್ನುವ ಬಗ್ಗೆ ಕುಟುಂಬಸ್ಥರು ನಿರ್ಧರಿಸಲಿದ್ದಾರೆ. ಈ ಬಗ್ಗೆ ಕೆ.ಶಿವರಾಮ್ ಅಳಿಯ ಪ್ರದೀಪ್ ಮಾಹಿತಿ ಹಂಚಿಕೊಂಡಿದ್ದು, ಶಿವರಾಮ್…
ಬೆಂಗಳೂರು: ಇಂದು ವಿಧಾನ ಪರಿಷತ್ತಿನಲ್ಲಿ ಮಹತ್ವದ ಐದು ವಿಧೇಯಕಗಳು ಅಂಗೀಕಾರಗೊಂಡಿದ್ದಾರೆ. ಈ ಮೂಲಕ ಇನ್ನೇನು ಕಾಯ್ದೆಯಾಗಿ ಜಾರಿಗೊಳ್ಳುವುದು ಮಾತ್ರವೇ ಭಾಗಿಯಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಮಾಹಿತಿ ನೀಡಿದ್ದು, ಇಂದು ವಿಧಾನ ಪರಿಷತ್ತಿನಲ್ಲಿ ಐದು ವಿಧೇಯಕಗಳು ಅಂಗೀಕಾರಗೊಂಡಿದ್ದಾವೆ. ಅವುಗಳು ಈ ಕೆಳಗಿನಂತೆ ಇದ್ದಾವೆ ಎಂದು ತಿಳಿಸಿದೆ. ಹೀಗಿವೆ ಇಂದು ವಿಧಾನ ಪರಿಷತ್ತಿನಲ್ಲಿ ಅಂಗೀಕಾರಗೊಂಡ 5 ವಿಧೇಯಕಗಳು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ-2024 ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ-2024 ಶ್ರೀ ಹುಲಿಗೆಮ್ಮ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ-2024 ಕರ್ನಾಟಕ ವಿಧಾನಮಂಡಲ ( ಅನರ್ಹತಾ ನಿವಾರಣಾ ) ( ತಿದ್ದುಪಡಿ) ವಿಧೇಯಕ-2024 ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕ -2024 https://twitter.com/KarnatakaVarthe/status/1763149370583822643 https://kannadanewsnow.com/kannada/former-ias-officer-and-actor-k-sivaram-passes-away/ https://kannadanewsnow.com/kannada/good-news-for-job-seekers-panchayati-raj-department-2022-recruitment-process-begins/
ಬೆಂಗಳೂರು: ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿ ಐಸಿಯುನಲ್ಲಿ ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಅವರು ಚಿಕಿತ್ಸೆ ಫಲಿಸದೇ ವಿಧಿವಶರಾಗಿದ್ದಾರೆ ಎಂಬುದಾಗಿ ಅಧಿಕೃತ ಮಾಹಿತಿ ಹೊರಬಿದ್ದಿದೆ. ಈ ಬಗ್ಗೆ ಕುಟುಂಬಸ್ಥರು ಅಧಿಕೃತ ಮಾಹಿತಿಯನ್ನು ಹಂಚಿಕೊಂಡಿದ್ದು ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಅವರು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಅವರು ಸಂಜೆ 4.15ರ ವೇಳೆಗೆ ಕೊನೆಯುಸಿರೆಳೆದರು ಎಂಬುದಾಗಿ ತಿಳಿಸಿದ್ದಾರೆ. ಬೆಂಗಳೂರಿನ ಖಾಸಗಿ ಆಶ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಅವರು ಇಂದು ಸಂಜೆ 4.15ರಲ್ಲಿ ನಿಧನರಾಗಿದ್ದಾರೆ. ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ನಾಳೆ ನೆರವೇರಿಸೋದಾಗಿ ಮಾಹಿತಿಯನ್ನು ನೀಡಿದ್ದಾರೆ. ಅಂದಹಾಗೇ ಕನ್ನಡದಲ್ಲಿ ಪ್ರಪ್ರಥಮ ಬಾರಿಗೆ ಐಎಎಸ್ ಬರೆದು ಭಾರತೀಯ ಆಡಳಿತಾ ಸೇವೆಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ, ನಿವೃತ್ತರಾಗಿದ್ದ ಹಾಗೂ ‘ಬಾ ನಲ್ಲೆ ಮಧು ಚಂದ್ರಕೆ’ ಸೇರಿದಂತೆ ಹಲವು ಚಿತ್ರಗಳ ಮೂಲಕ ಕನ್ನಡ ಸಿನಿ ರಸಿಕರಿಗೆ ಪರಿಚಿತರಾಗಿದ್ದ ಕೆ. ಶಿವರಾಮ್ ಅವರಿಗೆ ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ಬೆಂಗಳೂರಿನ ಎಚ್ ಸಿಜಿ…
ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಎ ಲೀಗ್ನಲ್ಲಿ ಜುವೆಂಟಸ್ ತಂಡದ ಪ್ರಮುಖ ಆಟಗಾರ, ಫ್ರೆಂಚ್ ಮಿಡ್ಫೀಲ್ಡರ್ ಪಾಲ್ ಪೋಗ್ಬಾ ಡೋಪಿಂಗ್ ಆರೋಪದ ಮೇಲೆ ನಾಲ್ಕು ವರ್ಷಗಳ ಅನರ್ಹತೆಗೆ ಒಳಗಾಗಿದ್ದಾರೆ. ಡೋಪಿಂಗ್ ವಿರೋಧಿ ಪ್ರಾಸಿಕ್ಯೂಟರ್ ಕಚೇರಿ, ವ್ಯಾಪಕ ತನಿಖೆಯ ನಂತರ, ಪ್ರಸ್ತಾವಿತ ಭಾರಿ ನಿರ್ಬಂಧಗಳನ್ನು ಎತ್ತಿಹಿಡಿದಿದೆ. ಇದು ಪ್ರತಿಭಾವಂತ ಕ್ರೀಡಾಪಟುವಿಗೆ ಗಮನಾರ್ಹ ಹಿನ್ನಡೆಯನ್ನು ಸೂಚಿಸುತ್ತದೆ. ಸೆರಿ ಎ ಚಾಂಪಿಯನ್ಶಿಪ್ನ ಉದ್ಘಾಟನಾ ಪಂದ್ಯವಾದ ಉಡಿನೆಸ್-ಜುವೆಂಟಸ್ ಪಂದ್ಯದ ನಂತರ ಆಗಸ್ಟ್ 20, 2023 ರಂದು ನಡೆಸಿದ ಡೋಪಿಂಗ್ ವಿರೋಧಿ ಸ್ಕ್ರೀನಿಂಗ್ ಸಮಯದಲ್ಲಿ ಪೋಗ್ಬಾ ಧಿಯಾಗೆ ಧನಾತ್ಮಕ ಪರೀಕ್ಷೆ ನಡೆಸಿದ ನಂತರ ಈ ತೀರ್ಪು ಬಂದಿದೆ. https://twitter.com/FabrizioRomano/status/1763168414451806688 ನಿಷೇಧಿತ ಸ್ಟೀರಾಯ್ಡ್ ಎಂಬ ವಸ್ತುವು ಆಟದ ಸಮಗ್ರತೆ ಮತ್ತು ನ್ಯಾಯೋಚಿತ ಆಟವನ್ನು ಖಚಿತಪಡಿಸಿಕೊಳ್ಳಲು ಜಾರಿಯಲ್ಲಿರುವ ಕ್ರಮಗಳ ಬಗ್ಗೆ ಗಂಭೀರ ಕಳವಳಗಳನ್ನು ಹುಟ್ಟುಹಾಕಿದೆ. ಪೋಗ್ಬಾ ಅವರ ಅಮಾನತು ಅವರ ಶ್ರೇಷ್ಠ ವೃತ್ತಿಜೀವನದ ಮೇಲೆ ನೆರಳು ಬೀರುವುದಲ್ಲದೆ, ಎ ಲೀಗ್ನ ಪ್ರಮುಖ ತಂಡಗಳಲ್ಲಿ ಒಂದಾದ ಜುವೆಂಟಸ್ಗೆ ಪರಿಣಾಮ ಬೀರುತ್ತದೆ. ತಂಡವು ಈಗ ಪ್ರಮುಖ…
ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದವರು ಏನೂ ಅಭಿವೃದ್ಧಿ ಮಾಡಿರಲಿಲ್ಲ. ಬರೀ ಲೂಟಿ ಹೊಡೆದರು. ನಾವು ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಯನ್ನೂ ಮಾಡಿದ್ದೇವೆ. ಇದು ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರಕ್ಕೆ ಇರುವ ವ್ಯತ್ಯಾಸ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ವಿಧಾನಸಭೆಯಲ್ಲಿ ಆಯವ್ಯಯ ಭಾಷಣ ಕುರಿತ ಚರ್ಚೆಗೆ ಉತ್ತರ ನೀಡಿದರು. ಬಸವರಾಜ ಬೊಮ್ಮಾಯಿ ಅವರು 2023 ರ ಫೆಬ್ರುವರಿಯಲ್ಲಿ 3.09 ಲಕ್ಷ ಕೋಟಿ ರೂ. ಗಾತ್ರದ ಆಯವ್ಯಯ ಮಂಡಿಸಿದರು. 2024-25ನೇ ಸಾಲಿಗೆ ನಾನು ಮಂಡಿಸಿದ ಆಯವ್ಯಯದ ಗಾತ್ರ 3,71,343 ಕೋಟಿ ರೂ. ನಷ್ಟಿದ್ದು, ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ಗಿಂತ 62,200 ಕೋಟಿ ರೂ. ನಷ್ಟು ಗಾತ್ರ ಹೆಚ್ಚಳವಾಗಿದೆ. ನಾನು ಜುಲೈ 2023 ರಲ್ಲಿ ಮಂಡಿಸಿದ ಬಜೆಟ್ಗಿಂತ ಇದು 43,601 ಕೋಟಿ ರೂ. ಹೆಚ್ಚಳವಾಗಿದೆ. ಅಂತೆಯೇ ರಾಜ್ಯದ ಜಿಡಿಪಿ 25,63,247 ಕೋಟಿ ರೂ. ಇತ್ತು. 2024- 25 ಕ್ಕೆ 28,09,063 ಕೋಟಿ ರೂ. ಆಗುವ ನಿರೀಕ್ಷೆ ಇದೆ. ಅಂರೆ 2,41,723 ಕೋಟಿ…
ಬೆಂಗಳೂರು: ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಅವರು ನಿಧನರಾಗಿದ್ದಾರೆ ಎನ್ನಲಾಗಿತ್ತು. ಆದ್ರೇ ಅವರು ಜೀವಂತವಾಗಿದ್ದಾರೆ. ನಿಧನರಾಗಿಲ್ಲ ಎಂಬುದಾಗಿ ಅವರ ಅಳಿಯ ಸ್ಪಷ್ಟಪಡಿಸಿದ್ದಾರೆ. ಅಲ್ಲವೇ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರೋದಾಗಿ ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ಇಂದು ಕೇಂದ್ರ ಸಚಿವ ಎ ನಾರಾಯಣಸ್ವಾಮಿ ಅವರು, ಕೆ.ಶಿವರಾಮ್ ಚಿಕಿತ್ಸೆ ಪಡೆಯುತ್ತಿರುವಂತ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ, ಅವರ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದರು. ಕೇಂದ್ರ ಸಚಿವ ಎ ನಾರಾಯಣಸ್ವಾಮಿ ಅವರೊಂದಿಗೆ ಮಾಜಿ ಸಚಿವ ಗೋವಿಂದ ಕಾರಜೋಳ ಕೂಡ ಆಗಮಿಸಿ, ವೈದ್ಯರಿಂದ ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಮಾಹಿತಿಯನ್ನು ಪಡೆದರು. ಮಾವನಿಗೆ ಏನು ಆಗಿಲ್ಲ – ಪ್ರದೀಪ್ ಮಾಹಿತಿ ಸ್ಯಾಂಡಲ್ವುಡ್ ನಟ, ನಿವೃತ್ತ ಐಎಎಸ್ ಅಧಿಕಾರಿ ಕೆ ಶಿವರಾಮ್ ಅವರು ಹೃದಯಾಘಾತಕ್ಕೆ ಒಳಗಾದ ನಂತ್ರ, ಅವರನ್ನು ಬೆಂಗಳೂರಿನ ಹೆಚ್ಸಿಜಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರು…
ಬೆಂಗಳೂರು: ರಾಜ್ಯ ಸರ್ಕಾರದಿಂದ ವಿಧಾನ ಸಭೆಯಲ್ಲಿ 2024-25ನೇ ಸಾಲಿನ ಧನ ವಿನಿಯೋಗ ವಿಧೇಯಕವನ್ನು ಮಂಡಿಸಿ ಅಂಗೀಕಾರ ಪಡೆಯಲಾಗಿತ್ತು. ಈ ಬೆನ್ನಲ್ಲೇ ಇಂದು ವಿಧಾನ ಪರಿಷತ್ತಿನಲ್ಲಿಯೂ ಮಂಡಿಸಿ ಅಂಗೀಕಾರ ಪಡೆಯಲಾಗಿದೆ. ಇಂದು ವಿಪಕ್ಷಗಳ ಗದ್ದಲದ ನಡುವೆಯೂ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು 2024-25ನೇ ಸಾಲಿನ ಧನ ವಿನಿಯೋಗ ವಿಧೇಯಕವನ್ನು ಮಂಡಿಸಿದರು. ಪೂರಕ ಅಂದಾಜುಗಳನ್ನು ಸಿಎಂ ಸಿದ್ಧರಾಮಯ್ಯ ಮಂಡಿಸಿದರು. ವಿಪಕ್ಷಗಳ ಗದ್ದಲದ ನಡುವೆಯೂ 2024-25ನೇ ಸಾಲಿನ ಧನ ವಿನಿಯೋಗ ವಿಧೇಯಕವು ವಿಧಾನ ಪರಿಷತ್ತಿನಲ್ಲಿ ಇಂದು ಅಂಗೀಕಾರಗೊಂಡಿದೆ. ಈ ಮೂಲಕ ವಿಧಾನಮಂಡಲದ ಅಧಿವೇಶನದಲ್ಲಿ 2024-25ನೇ ಸಾಲಿನ ಧನ ವಿನಿಯೋಗ ವಿಧೇಯಕವು ಅಂಗೀಕಾರ ಪಡೆದಂತೆ ಆಗಿದೆ. https://kannadanewsnow.com/kannada/hc-lifts-ban-on-chakravarthy-sulibeles-entry-into-kalaburagi-district/ https://kannadanewsnow.com/kannada/cm-siddaramaiah-accepts-caste-census-report-submitted-to-state-govt-despite-strong-opposition/