Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ನಿರ್ಣಾಯಕ ಮಹಾರಾಷ್ಟ್ರ ವಿಧಾನಸಭೆಗೆ ಮುಂಚಿತವಾಗಿ “ಗಡಿಯಾರ” ಚಿಹ್ನೆಯನ್ನು ಉಳಿಸಿಕೊಳ್ಳಲು ಎನ್ಸಿಪಿಯ ಅಜಿತ್ ಪವಾರ್ ನೇತೃತ್ವದ ಬಣಕ್ಕೆ ಸುಪ್ರೀಂ ಕೋರ್ಟ್ ಗುರುವಾರ ಅನುಮತಿ ನೀಡಿದೆ. ಆದಾಗ್ಯೂ, ಚಿಹ್ನೆಯನ್ನು ಹಕ್ಕು ನಿರಾಕರಣೆಯೊಂದಿಗೆ ಬಳಸುವಂತೆ ಮತ್ತು ನವೆಂಬರ್ 6 ರೊಳಗೆ ತನ್ನ ನಿರ್ದೇಶನಗಳನ್ನು ಉಲ್ಲಂಘಿಸುವುದಿಲ್ಲ ಎಂದು ಹೊಸ ಮುಚ್ಚಳಿಕೆಯನ್ನು ಸಲ್ಲಿಸುವಂತೆ ಉನ್ನತ ನ್ಯಾಯಾಲಯವು ಅಜಿತ್ ಪವಾರ್ ಬಣಕ್ಕೆ ಸೂಚಿಸಿತು. “ಚುನಾವಣೆ ಮುಗಿಯುವವರೆಗೂ ನೀವು (ಅಜಿತ್ ಪವಾರ್ ಬಣ) ನಮ್ಮ ನಿರ್ದೇಶನಗಳನ್ನು ಉಲ್ಲಂಘಿಸುವುದಿಲ್ಲ ಎಂದು ದಯವಿಟ್ಟು ಹೊಸ ಮುಚ್ಚಳಿಕೆಯನ್ನು ಸಲ್ಲಿಸಿ. ನಿಮಗಾಗಿ ಮುಜುಗರದ ಪರಿಸ್ಥಿತಿಯನ್ನು ಸೃಷ್ಟಿಸಬೇಡಿ. ನಮ್ಮ ಆದೇಶವನ್ನು ಉಲ್ಲಂಘಿಸಲು ಉದ್ದೇಶಪೂರ್ವಕ ಪ್ರಯತ್ನ ನಡೆಯುತ್ತಿದೆ ಎಂದು ನಾವು ಕಂಡುಕೊಂಡರೆ, ನಾವು ಸ್ವಯಂಪ್ರೇರಿತ ನ್ಯಾಯಾಂಗ ನಿಂದನೆಯನ್ನು ಪ್ರಾರಂಭಿಸಬಹುದು” ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ವರ್ಷದ ಆರಂಭದಲ್ಲಿ, ಚುನಾವಣಾ ಆಯೋಗವು ಎನ್ಸಿಪಿಯ “ಗಡಿಯಾರ” ಚಿಹ್ನೆಯನ್ನು ಅಜಿತ್ ಪವಾರ್ ನೇತೃತ್ವದ ಗುಂಪಿಗೆ ಹಂಚಿಕೆ ಮಾಡಿತು. 2023 ರಲ್ಲಿ, ಅಜಿತ್ ಪವಾರ್ ತಮ್ಮ ಚಿಕ್ಕಪ್ಪನ ವಿರುದ್ಧ ದಂಗೆಯೆದ್ದು ಆಡಳಿತಾರೂಢ ಮಹಾಯುತಿ…
ನವದೆಹಲಿ: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಇನ್-ಸ್ಪಾಸ್ ಆಶ್ರಯದಲ್ಲಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮೀಸಲಾಗಿರುವ 1000 ಕೋಟಿ ರೂ.ಗಳ ಸಾಹಸೋದ್ಯಮ ಬಂಡವಾಳ ನಿಧಿ ಸ್ಥಾಪನೆಗೆ ತನ್ನ ಅನುಮೋದನೆ ನೀಡಿದೆ. ಆರ್ಥಿಕ ಪರಿಣಾಮಗಳು: ಉದ್ದೇಶಿತ 1,000 ಕೋಟಿ ರೂ.ಗಳ ವಿಸಿ ನಿಧಿಯ ನಿಯೋಜನೆ ಅವಧಿಯನ್ನು ನಿಧಿ ಕಾರ್ಯಾಚರಣೆಗಳ ಪ್ರಾರಂಭದ ನಿಜವಾದ ದಿನಾಂಕದಿಂದ ಐದು ವರ್ಷಗಳವರೆಗೆ ಯೋಜಿಸಲಾಗಿದೆ. ಹೂಡಿಕೆಯ ಅವಕಾಶಗಳು ಮತ್ತು ನಿಧಿಯ ಅವಶ್ಯಕತೆಗಳನ್ನು ಅವಲಂಬಿಸಿ ಸರಾಸರಿ ನಿಯೋಜನೆ ಮೊತ್ತವು ವರ್ಷಕ್ಕೆ 150-250 ಕೋಟಿ ರೂ.ಗಳಾಗಿರಬಹುದು. ಕಂಪನಿಯ ಹಂತ, ಅದರ ಬೆಳವಣಿಗೆಯ ಪಥ ಮತ್ತು ರಾಷ್ಟ್ರೀಯ ಬಾಹ್ಯಾಕಾಶ ಸಾಮರ್ಥ್ಯಗಳ ಮೇಲೆ ಅದರ ಸಂಭಾವ್ಯ ಪರಿಣಾಮವನ್ನು ಅವಲಂಬಿಸಿ ಹೂಡಿಕೆಯ ಸೂಚಕ ಶ್ರೇಣಿಯನ್ನು 10-60 ಕೋಟಿ ರೂ.ಗಳಿಗೆ ಪ್ರಸ್ತಾಪಿಸಲಾಗಿದೆ. ಸೂಚಕ ಈಕ್ವಿಟಿ ಹೂಡಿಕೆ ಶ್ರೇಣಿಯು ಹೀಗಿರಬಹುದು: • ಬೆಳವಣಿಗೆಯ ಹಂತ: 10 ಕೋಟಿ ರೂ.- 30 ಕೋಟಿ ರೂ. • ವಿಳಂಬ ಬೆಳವಣಿಗೆಯ ಹಂತ: 30 ಕೋಟಿ ರೂ.-…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬೆಂಗಳೂರನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ಸರ್ಕಾರ ನಮಗೆ ಬ್ರ್ಯಾಂಡ್ ಬೆಂಗಳೂರು ನೀಡುವುದು ಬೇಡ, ಸುರಕ್ಷಿತವಾದ ರೆಗ್ಯುಲರ್ ಬೆಂಗಳೂರು ನೀಡಿದರೆ ಸಾಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಬಾಬುಸಾಪಾಳ್ಯದಲ್ಲಿ ಕಟ್ಟಡ ಕುಸಿದ ಸ್ಥಳಕ್ಕೆ ಭೇಟಿ ನೀಡಿದ ಅವರು, ಸಂತ್ರಸ್ತರು ಹಾಗೂ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಬಂದ ನಂತರ ಬ್ರ್ಯಾಂಡ್ ಬೆಂಗಳೂರು ಎಂಬ ಹೆಸರು ಹುಟ್ಟುಹಾಕಿದ್ದಾರೆ. ಆದರೆ ನಗರದಲ್ಲಿ ದಿನಕ್ಕೊಂದು ಅವಘಡ ಸಂಭವಿಸುತ್ತಿದೆ. ಬಾಬುಸಾಪಾಳ್ಯದಲ್ಲಿ ಕಟ್ಟಡ ಕುಸಿತವಾಗಿದ್ದು, ಎಂಟು ಅಮಾಯಕರು ಮೃತರಾಗಿದ್ದಾರೆ. ಇಲ್ಲಿನ 20 ಅಡಿ ರಸ್ತೆಗೆ ಹೆಚ್ಚೆಂದರೆ 3 ಮಹಡಿ ನಿರ್ಮಿಸಬಹುದು. ಆದರೆ 7 ಮಹಡಿ ನಿರ್ಮಿಸಲು ಹೊರಟಿದ್ದರಿಂದ ಅವಘಡ ನಡೆದಿದೆ. ಬಿಬಿಎಂಪಿ ಅಧಿಕಾರಿಗಳು ಇದನ್ನು ಸರಿಯಾಗಿ ನಿರ್ವಹಣೆ ಮಾಡಿದ್ದರೆ ಎಲ್ಲವೂ ಸರಿ ಇರುತ್ತಿತ್ತು ಎಂದರು. ಕಾಂಗ್ರೆಸ್ ಸರ್ಕಾರ ಇಂತಹ ಯಾವುದೇ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಕೆಲ ತಿಂಗಳ ಹಿಂದೆ ವಿದ್ಯುತ್ ತಂತಿ ತಗುಲಿ ತಾಯಿ ಮತ್ತು ಮಗು ಮೃತಪಟ್ಟಾಗ ಅದಕ್ಕೆ…
ನವದೆಹಲಿ: 2,245 ಕೋಟಿ ರೂ.ಗಳ ವೆಚ್ಚದಲ್ಲಿ ಅಮರಾವತಿ ರೈಲ್ವೆ ಮಾರ್ಗವನ್ನು ಕೇಂದ್ರವು ಅನುಮೋದಿಸಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಇದು ಕೃಷ್ಣಾ ನದಿಗೆ ಅಡ್ಡಲಾಗಿ 3 ಕಿ.ಮೀ ಸೇತುವೆಯನ್ನು ಹೊಂದಿರುತ್ತದೆ. ಇದು ಹೈದರಾಬಾದ್, ಚೆನ್ನೈ ಮತ್ತು ಕೋಲ್ಕತ್ತಾದೊಂದಿಗೆ ಅಮರಾವತಿಯಿಂದ ನೇರ ರೈಲು ಸಂಪರ್ಕವನ್ನು ಹೊಂದಿರುತ್ತದೆ. ಇದು ಮಧ್ಯ ಮತ್ತು ಉತ್ತರ ಭಾರತದ ದಕ್ಷಿಣ ಭಾರತದ ಸಂಪರ್ಕವನ್ನು ಸುಧಾರಿಸುತ್ತದೆ ಎಂದು ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಇದು 19 ಲಕ್ಷ ಮಾನವ ದಿನಗಳ ಉದ್ಯೋಗವನ್ನು ಸೃಷ್ಟಿಸುತ್ತದೆ. ಇದು 6 ಕೋಟಿ ಕೆಜಿ ಇಂಗಾಲದ ಹೊರಸೂಸುವಿಕೆಯನ್ನು ಉಳಿಸುತ್ತದೆ ಎಂದಿದ್ದಾರೆ. https://kannadanewsnow.com/kannada/i-have-put-nikhil-kumaraswamy-in-your-lap-it-is-your-responsibility-to-win-hdk/ https://kannadanewsnow.com/kannada/by-election-schedule-for-gram-panchayat-seats-announced/
ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಇದನ್ನು ಹೆಚ್.ಡಿ ಕುಮಾರಸ್ವಾಮಿ ಕೂಡ ಗುಟ್ಟು ಬಿಚ್ಚಿಟ್ಟಿದ್ದಾರೆ. ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವಂತ ಜೆಡಿಎಸ್ ಕಚೇರಿಯಲ್ಲಿ ನಡೆದಂತ ಚನ್ನಪಟ್ಟಣ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದಂತ ಅವರು, ನಿಖಿಲ್ ಕುಮಾರಸ್ವಾಮಿ ನಿಮ್ಮ ಮಗ. ನಿಮ್ಮ ಮಡಿಲಿಗೆ ಹಾಕಿದ್ದೇನೆ. ಗೆಲ್ಲಿಸುವ ಜವಾಬ್ದಾರಿ ನಿಮ್ಮ ಮೇಲಿದೆ ಎಂಬುದಾಗಿ ಭಾವನಾತ್ಮಕವಾಗಿ ಹೇಳಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಅಂದಹಾಗೇ ಇಂದಿನ ಚನ್ನಪಟ್ಟಣ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಚನ್ನಪಟ್ಟಣ ಉಪ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿ ಹೆಸರು ಫೈನಲ್ ಮಾಡಲಾಗಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಹೆಚ್.ಡಿ ಕುಮಾರಸ್ವಾಮಿ ಹಾಗೂ ಬಿಎಸ್ ಯಡಿಯೂರಪ್ಪ ಜಂಟಿ ಸುದ್ದಿಗೋಷ್ಠಿಯಲ್ಲಿ ಹೆಸರನ್ನು ಘೋಷಣೆ ಮಾಡಲಿದ್ದಾರೆ. https://kannadanewsnow.com/kannada/bomb-threat-to-85-more-aircraft/ https://kannadanewsnow.com/kannada/by-election-schedule-for-gram-panchayat-seats-announced/
ನವದೆಹಲಿ: ಕಳೆದ ಕೆಲ ದಿನಗಳಿಂದ ಹಲವು ವಿಮಾನಗಳಿಗೆ ಬಾಂಬ್ ಬೆದರಿಕೆಯನ್ನು ಇಮೇಲ್, ಎಕ್ಸ್ ಮೂಲಕ ಹಾಕಲಾಗಿತ್ತು. ಇಂದು ಮತ್ತೆ ಸರಣಿ ಮುಂದುವರೆದಿದ್ದು ಹೊಸದಾಗಿ 85 ವಿಮಾನಗಳಿಗೆ ಬಾಂಬ್ ಬೆದರಿಕೆಯನ್ನು ಹಾಕಲಾಗಿದೆ. ಇಂದು ಇಂಡಿಗೊ, ಏರ್ ಇಂಡಿಯಾ, ವಿಸ್ತಾರಾ ಮತ್ತು ಅಕಾಸಾ ಏರ್ ಸೇರಿದಂತೆ 85 ವಿಮಾನಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಹೀಗಾಗಿ ಕೆಲ ವಿಮಾನಗಳ ಸಂಚಾರದಲ್ಲೂ ವ್ಯತ್ಯಯ ಉಂಟಾಗಿದೆ. ಬಾಂಬ್ ಬೆದರಿಕೆಯಿಂದಾಗಿ ವಿಮಾನಗಳನ್ನು ಬಾಂಬ್ ನಿಷ್ಕ್ರೀಯ ದಳದವರು ತಪಾಸಣೆಗೆ ಒಳಪಡಿಸುತ್ತಿದ್ದಾರೆ. https://kannadanewsnow.com/kannada/bidar-labourer-dies-after-falling-from-3rd-floor-of-building/ https://kannadanewsnow.com/kannada/by-election-schedule-for-gram-panchayat-seats-announced/
ಬೀದರ್: ಜಿಲ್ಲೆಯ ಕಟ್ಟಡವೊಂದರ ಮೂರನೇ ಮಹಡಿಯಿಂದ ಕೆಳಗೆ ಬಿದ್ದು ಕಾರ್ಮಿಕನೋರ್ವ ಸಾವನ್ನಪ್ಪಿರುವಂತ ಘೋರ ಘಟನೆ ನಡೆದಿದೆ. ಈ ಘಟನೆಗೆ ಮಾಲೀಕರು, ಗುತ್ತಿಗೆದಾರರೇ ಕಾರಣ ಎಂಬುದಾಗಿ ಪೋಷಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಬೀದರ್ ಜಿಲ್ಲೆಯ ವಿದ್ಯಾನಗರದಲ್ಲಿ ಮೂರು ದಿನಗಳ ಹಿಂದೆ ನಡೆದಿದ್ದಂತ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇಲ್ಲಿನ ಮೂರನೇ ಮಹಡಿಯ ಕಟ್ಟಡವೊಂದರಿಂದ ಕಾರ್ಮಿಕ ಇಮ್ಯಾನುಯೆಲ್ (23) ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ. ಕಾರ್ಮಿಕ ಇಮ್ಯಾನುಯೆಲ್ ಕಟ್ಟಡದ ಮೂರನೇ ಮಹಡಿಯಿಂದ ಕೆಳಗೆ ಬೀಳುತ್ತಿರುವಂತ ದೃಶ್ಯ ಸಮೀಪದ ಸಿಸಿಟಿವಿಯೊಂದರಲ್ಲಿ ಸೆರೆಯಾಗಿದೆ. ಈ ದುರಂತಕ್ಕೆ ಗುತ್ತಿಗೆದಾರರು, ಮನೆಯ ಮಾಲೀಕರು, ಇಂಜಿನಿಯರ್ ಕಾರಣ. ಮನೆ ಕೆಲಸಕ್ಕೆ ಮಗನನ್ನು ಕರೆದುಕೊಂಡು ಹೋಗಿ ಕೊಲೆ ಮಾಡಿರುವುದಾಗಿ ಪೋಷಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಅಲ್ಲದೇ ಸೂಕ್ತ ಕಾನೂನು ಕ್ರಮಕ್ಕೂ ಆಗ್ರಹಿಸಿದ್ದಾರೆ. https://kannadanewsnow.com/kannada/sandur-assembly-bypoll-8-cases-registered-for-violation-of-model-code-of-conduct/ https://kannadanewsnow.com/kannada/by-election-schedule-for-gram-panchayat-seats-announced/
ಬಳ್ಳಾರಿ : ಜಿಲ್ಲೆಯ ವಿವಿಧ ತಾಲ್ಲೂಕುಗಳ ಗ್ರಾಮ ಪಂಚಾಯಿತಿಯಲ್ಲಿ ವಿವಿಧ ಕಾರಣಗಳಿಂದ ತೆರವಾದ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ಚುನಾವಣಾ ವೇಳಾಪಟ್ಟಿ ಪ್ರಕಟಿಸಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ. ನಾಮಪತ್ರಗಳನ್ನು ಸಲ್ಲಿಸಲು ನ.12 ರಂದು ಕೊನೆಯ ದಿನವಾಗಿರುತ್ತದೆ. ನ.13 ರಂದು ನಾಮ ಪತ್ರಗಳನ್ನು ಪರಿಶೀಲಿಸುವ ದಿನವಾಗಿರುತ್ತದೆ. ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ನ.15 ಕೊನೆಯ ದಿನವಾಗಿರುತ್ತದೆ. ಮತದಾನವು ನ.23 ರಂದು ನಡೆಯಲಿದೆ. ಮಾದರಿ ನೀತಿ ಸಂಹಿತೆಯು ನ.06 ರಿಂದ ನ.26 ರ ವರೆಗೆ ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ವ್ಯಾಪ್ತಿ ಪ್ರದೇಶಕ್ಕೆ ಮಾತ್ರ ಜಾರಿ ಇರುತ್ತದೆ. ಚುನಾವಣೆಯನ್ನು ಶಾಂತಿಯುತವಾಗಿ ಹಾಗೂ ಮುಕ್ತವಾಗಿ ನಡೆಸುವ ಹಿನ್ನಲೆಯಲ್ಲಿ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಆಯಾ ತಾಲ್ಲೂಕು ತಹಶೀಲ್ದಾರರ ಉಸ್ತುವಾರಿಯಲ್ಲಿ ತಾಲ್ಲೂಕು ಮಟ್ಟದ ಎಂಸಿಸಿ ತಂಡಗಳನ್ನು ರಚಿಸಿ ಜಿಲ್ಲಾಧಿಕಾರಿಯವರು ಆದೇಶಿಸಿದ್ದಾರೆ. ಖಾಲಿ ಇರುವ ಗ್ರಾಪಂ ವಿವರ ಮತ್ತು ಸ್ಥಾನ: ಬಳ್ಳಾರಿ ತಾಲ್ಲೂಕಿನ ಕಪ್ಪಗಲ್ಲು-1, ರ್ರಗುಡಿ-1, ಬಿ.ಬೆಳಗಲ್ಲು-1, ಕುರುಗೋಡು ತಾಲ್ಲೂಕಿನ ಕಲ್ಲುಕಂಭ-2, ದಮ್ಮೂರು-1, ಸಿರುಗುಪ್ಪ ತಾಲ್ಲೂಕಿನ…
ಬಳ್ಳಾರಿ : ಸಂಡೂರು ವಿಧಾನಸಭೆ ಉಪಚುನಾವಣೆ ಅಂಗವಾಗಿ ಮಾದರಿ ನೀತಿ ಸಂಹಿತೆಯು ಕಟ್ಟುನಿಟ್ಟಾಗಿ ಜಾರಿಯಲ್ಲಿದ್ದು, ಬುಧವಾರ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಅನಧೀಕೃತವಾಗಿ ಸಾಗಿಸುತ್ತಿದ್ದ 2616.93 ಲೀಟರ್ (ರೂ.7,76,648 ಮೌಲ್ಯ) ಮದ್ಯ ವಶಪಡಿಸಿಕೊಂಡು 8 ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ. ಅಬಕಾರಿ ಪೊಲೀಸ್ ಅಧಿಕಾರಿಗಳಿಂದ 2615.49 ಲೀಟರ್ (ರೂ.776008 ಮೌಲ್ಯ) ಮದ್ಯ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳಿಂದ 1.41 ಲೀಟರ್ (ರೂ.640 ಮೌಲ್ಯ) ಮದ್ಯ ವಶಪಡಿಸಿಕೊಳ್ಳಲಾಗಿದೆ. ಸಂಡೂರು ವಿಧಾನಸಭೆ ಉಪಚುನಾವಣೆಯ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಈಗಾಗಲೇ ವಿವಿಧ ತಂಡಗಳನ್ನು ರಚಿಸಲಾಗಿದ್ದು, ಅವುಗಳು ಕಾರ್ಯಪ್ರವೃತ್ತವಾಗಿದೆ. 9 ಫ್ಲೆಯಿಂಗ್ ಸ್ಕ್ವಾಡ್ 1 ಎಸ್ಎಸ್ಟಿ ತಂಡ ಮತ್ತು 4 ಅಬಕಾರಿ ತಂಡ ಕಾರ್ಯ ನಿರ್ವಹಿಸುತ್ತಿವೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ. https://kannadanewsnow.com/kannada/ct-ravis-cooperation-is-in-favour-of-yogeshwar-dk-suresh/ https://kannadanewsnow.com/kannada/ct-ravis-cooperation-is-in-favour-of-yogeshwar-dk-suresh/
ಚನ್ನಪಟ್ಟಣ: ಸಿಪಿ ಯೋಗೇಶ್ವರ್ ಜನಪ್ರಿಯ ನಾಯಕರಾಗಿದ್ದಾರೆ. ಅವರು ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ಗೆಲ್ಲೋದರಲ್ಲಿ ಡೌಟೇ ಇಲ್ಲ ಎಂಬುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. ಇಂದು ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಸಿ.ಪಿ ಯೋಗೇಶ್ವರ್ ನಾಮಪತ್ರ ಸಲ್ಲಿಕೆಗೆ ಮುನ್ನಾ ನಡೆದಂತ ರೋಡ್ ಶೋನಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ಎರಡು ಬಾರಿ ಸಿಎಂ ಆಗಿದ್ದಾಗ ಚನ್ನಪಟ್ಟಣ ಕ್ಷೇತ್ರದ ಅಭಿವೃದ್ದಿಗೆ ತಮ್ಮ ಕೊಡುಗೆ ಏನು ಎನ್ನುವ ಪಟ್ಟಿಯನ್ನು ಕುಮಾರಸ್ವಾಮಿ ಅವರು ಬಿಡುಗಡೆ ಮಾಡಲಿ. ಕ್ಷೇತ್ರದ ಅಭಿವೃದ್ದಿಗೆ ಅವರ ಸಾಕ್ಷಿ ಗುಡ್ಡೆಯನ್ನು ಜನರ ಮುಂದಿಡಲಿ. ಶುಭ ಘಳಿಗೆಯಲ್ಲಿ ಯೋಗೇಶ್ವರ್ ಪಕ್ಷ ಸೇರಿದ್ದಾರೆ. ಇವರ ಕೈ ಬಲಪಡಿಸುವುದರ ಮೂಲಕ ದೇಶಕ್ಕೆ ಬಲವಾದ ಸಂದೇಶ ನೀಡಬೇಕು. ಅತಿ ಹೆಚ್ಚು ಮತಗಳ ಅಂತರದಿಂದ ಇವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡುತ್ತೇನೆ ಎಂದರು. ಮುಂದಿನ ದಿನಗಳಲ್ಲಿ ಮಿಕ್ಕ ವಿಚಾರಗಳನ್ನು ನಾನು ಮಾತನಾಡುತ್ತೇನೆ. ಮುಂದಿನ ದಿನಗಳಲ್ಲಿ ಸಾಕಷ್ಟು ಸಿನಿಮಾಗಳನ್ನು ನಾವು ನೋಡಬೇಕಿದೆ. ಚುನಾವಣೆ ಗೆಲ್ಲುವುದೊಂದೇ ನಮ್ಮ ಗುರಿ. ಲೋಕಸಭಾ ಚುನಾವಣೆ ಯಲ್ಲಿ…












