Author: kannadanewsnow09

ಕಲಬುರ್ಗಿ: ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಕಲಬುರ್ಗಿಯ ಅಫಜಲಪುರ ಕ್ಷೇತ್ರ ಕಾಂಗ್ರೆಸ್ ಶಾಸಕ ಎಂ.ವೈ ಪಾಟೀಲ್ ಅವರ ಕಾರು ಉರುಳಿ ಬಿದ್ದಿದೆ. ಈ ಅಪಘಾತದಲ್ಲಿ ಶಾಸಕ ಎಂ.ವೈ ಪಾಟೀಲ್ ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿರೋದಾಗಿ ತಿಳಿದು ಬಂದಿದೆ. ಕಲಬುರ್ಗಿ ಜಿಲ್ಲೆಯ ಅಫಜಲಪುರದ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಂ.ವೈ ಪಾಟೀಲ್ ಅವರು ತೆರಳುತ್ತಿದ್ದಂತ ಕಾರು ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಈ ಘಟನೆಯಲ್ಲಿ ಶಾಸಕ ಎಂ.ವೈ ಪಾಟೀಲ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿರೋದಾಗಿ ತಿಳಇದು ಬಂದಿದೆ. ಜೇವರ್ಗಿ(ಬಿ) ಗ್ರಾಮದ ಬಳಿಯಲ್ಲಿ ಕಾರು ರಸ್ತೆ ತಿರುವಿನಲ್ಲಿ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಕೂಡಲೇ ಕಾರಿನಲ್ಲಿದ್ದಂತ ಶಾಸಕ ಎಂ.ವೈ ಪಾಟೀಲ್ ಅವರನ್ನು ಸ್ಥಳೀಯರು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂಬಂಧ ಹೆಚ್ಚಿನ ಮಾಹಿತಿ ತಿಳಿಯಬೇಕಿದೆ. https://kannadanewsnow.com/kannada/note-register-for-yuvanidhi-scheme-as-follows/ https://kannadanewsnow.com/kannada/karsevak-shrikant-poojary-granted-bail/

Read More

ಶಿವಮೊಗ್ಗ : ಯುವಜನತೆಯ ಉಜ್ವಲ ಭವಿಷ್ಯಕ್ಕಾಗಿ ರಾಜ್ಯ ಸರ್ಕಾರದ 5 ನೇ ಗ್ಯಾರಂಟಿ ಯೋಜನೆಯಾದ ‘ಯುವನಿಧಿ’ ಯೋಜನೆಗೆ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು 2022-23 ರಲ್ಲಿ ಪದವಿ, ಡಿಪ್ಲೊಮಾ ಉತ್ತೀರ್ಣರಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು https://sevasindhugs.karnataka.gov.in ಗೆ ಭೇಟಿ ನೀಡಿ ಅಥವಾ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರಗಳಲ್ಲಿ ಯೋಜನೆಗೆ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು. 2023 ರಲ್ಲಿ ಪದವಿ, ಡಿಪ್ಲೊಮಾ ಉತ್ತೀರ್ಣರಾಗಿ ಕನಿಷ್ಟ 6 ತಿಂಗಳ ಅವಧಿಯವರೆಗೆ ಸರ್ಕಾರಿ/ಖಾಸಗಿ ಉದ್ಯೋಗ, ಸ್ವಯಂ ಉದ್ಯೋಗ ಹೊಂದಿಲ್ಲದವರು, ಉನ್ನತ ವಿದ್ಯಾಭ್ಯಾಸ ಮುಂದುವರೆಸದೇ ಇರುವ, ಕರ್ನಾಟಕದಲ್ಲಿ ವಾಸವಿರುವವರು ‘ಯುವನಿಧಿ’ ಯೋಜನೆಯಡಿ ನೋಂದಾಯಿಸಲು ಅರ್ಹರಾಗಿರುತ್ತಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಪದವಿ, ಡಿಪ್ಲೊಮಾ ಪ್ರಮಾಣಪತ್ರ, ಆಧಾರ್ ಕಾರ್ಡ್, ಪಡಿತರ ಚೀಟಿ ಅಭ್ಯರ್ಥಿಯ ಬ್ಯಾಂಕ್ ಪಾಸ್‍ಪುಸ್ತಕ, ಇತ್ಯಾದಿ ದಾಖಲಾತಿಗಳೊಂದಿಗೆ ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು. ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಶಿವಮೊಗ್ಗ ದೂ.ಸಂ: 08182-255293 ಸಂಪರ್ಕಿಸಬಹುದು ಎಂದು…

Read More

ಬೆಂಗಳೂರು: ನೈಸ್ ಯೋಜನೆಯನ್ನು ರಾಜ್ಯ ಸರಕಾರ ವಶಕ್ಕೆ ಪಡೆಯಬೇಕು ಆಗ್ರಹಪಡಿಸಿರುವ ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು; ಆ ಕಂಪನಿ ವಶದಲ್ಲಿರುವ 13404 ಎಕರೆಯಷ್ಟು ರೈತರ ಭೂಮಿಯನ್ನು ಸರಕಾರ ಮರು ವಶಪಡಿಸಿಕೊಳ್ಳಬೇಕು ಎಂದರು. ಅಲ್ಲದೆ; ಈ ಬಗ್ಗೆ ತಾವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರೂ ಅವರು ಈವರೆಗೆ ಯಾವುದೇ ಕ್ರಮ ವಹಿಸಿಲ್ಲ ಎಂದು ಮಾಜಿ ಪ್ರಧಾನಿಗಳು ಅತೀವ ಬೇಸರ ವ್ಯಕ್ತಪಡಿಸಿದರು. ಸಿದ್ದರಾಮಯ್ಯ ಅವರಿಗೆ ಏನು ಕಷ್ಟ ಇದೆಯೋ ಗೊತ್ತಿಲ್ಲ. ಅವರು ಬಡವರ ಪರ ಮಾತನಾಡುತ್ತಾರೆ. ಆ ಯೋಜನೆಯಲ್ಲಿ ಇಷ್ಟೊಂದು ಅಕ್ರಮ ಆಗಿದ್ದರೂ, ಬಡವರ ಭೂಮಿ ಲೂಟಿ ಹೊಡೆಯಲಾಗಿದ್ದರೂ ಏನು ಕ್ರಮ ತೆಗೆದುಕೊಂಡಿಲ್ಲ. ಬಡವರ ಪರ ಮಾತಾಡುವ ಸಿಎಂ ಯಾಕೆ ಕ್ರಮ ತೆಗೆದುಕೊಂಡಿಲ್ಲ ಎಂದು ಮಾಜಿ ಪ್ರಧಾನಿಗಳು ಅತ್ಯಂತ ಖಾರವಾಗಿ ಪ್ರಶ್ನಿಸಿದರು. ಸಿದ್ದರಾಮಯ್ಯ ಅವರು ಎಷ್ಟು ವರ್ಷ ಆಳಿದರೂ ಈ ಕಪ್ಪುಚುಕ್ಕೆಯಿಂದ ಹೊರೆಗೆ ಬರಲು ಸಾಧ್ಯವಿಲ್ಲ. ಇದರ ವಿರುದ್ದ ಅವರು ಕ್ರಮ ತೆಗೆದುಕೊಳ್ಳದೇ ಹೋದರೆ ಅವರ ರಾಜಕೀಯ ಜೀವನಕ್ಕೆ…

Read More

ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐಗೆ ವಹಿಸಿದ್ದನ್ನು ಹಿಂಪಡೆದ ರಾಜ್ಯ ಸರ್ಕಾರ ಕ್ರಮ ಪ್ರಶ್ನಿಸಿ ಹೈಕೋರ್ಟ್ ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ವಿಸ್ತೃತ ಪೀಠಕ್ಕೆ ವಹಿಸಿ ಆದೇಶಿಸಿದೆ. ಇಂದು ಹೈಕೋರ್ಟ್ ನ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರನ್ನೊಳಗೊಂಡ ಏಕ ಪೀಠದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐಗೆ ವಹಿಸಿದ್ದನ್ನು ಹಿಂಪಡೆದ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆ ನಡೆಯಿತು. ಈ ವೇಳೆ ಹೈಕೋರ್ಟ್ ನ್ಯಾಯಪೀಠದ ಮುಂದೆ ಕಾನೂನು ದುರುಪಯೋಗವನ್ನು ರಾಜ್ಯ ಸರ್ಕಾರ ಮಾಡಿಕೊಂಡಿದೆ ಎಂಬುದಾಗಿ ವಾದವನ್ನು ಮಂಡಿಸಲಾಯಿತು. ಈ ವಾದವನ್ನು ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು ಇಂದೊಂದು ಗಂಭೀರ ಪ್ರಕರಣವಾಗಿದ್ದು, ಡಿಕೆ ಶಿವುಕಮಾರ್ ಪ್ರಕರಣವನ್ನು ವಿಸ್ತೃತ ನ್ಯಾಯಪೀಠದಲ್ಲಿ ವಿಚಾರಣೆ ನಡೆಸೋದಕ್ಕೆ ವರ್ಗಾವಣೆ ಮಾಡಿ ಆದೇಶಿಸಿದೆ. ಈ ಮೂಲಕ ಡಿಕೆ ಶಿವಕುಮಾರ್…

Read More

ಬೆಂಗಳೂರು: ಇಂದಿರಾ ಕ್ಯಾಂಟೀನ್ ಮತ್ತು ಮಧ್ಯಾಹ್ನದ ಶಾಲಾ ಊಟದಲ್ಲಿ ಸಿರಿಧಾನ್ಯ ಬಳಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದರು. ಕೃಷಿ ಇಲಾಖೆ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ 2024 ಮತ್ತು ಸಿರಿಧಾನ್ಯ ತಿನಿಸುಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನು ಉದ್ಘಾಟಿಸಿ ಮಾತನಾಡಿದರು. ನಮ್ಮ ರಾಜ್ಯದ ಜನರು ಮತ್ತು ಶಾಲಾ ಮಕ್ಕಳು ಇನ್ನಷ್ಟು ಸದೃಡವಾಗಿ , ಆರೋಗ್ಯವಂತರಾಗಲು ಇಂದಿರಾ ಕ್ಯಾಂಟೀನ್ ಮತ್ತು ಶಾಲಾ ಊಟದಲ್ಲಿ ಸಿರಿ ಧಾನ್ಯ ಬಳಸುವ ಸಂಬಂಧ ಸದ್ಯದಲ್ಲೇ ಸಂಬಂಧಪಟ್ಟ ಇಲಾಖೆಗಳ ಸಭೆ ಕರೆದು ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಘೋಷಿಸಿದರು. ಹಾಗೆಯೇ ಉತ್ತಮ ಗುಣಮಟ್ಟದ ಸಿರಿಧಾನ್ಯ ಬೀಜ ಉತ್ಪಾದನೆ, ಹೊಸ ತಳಿ ಅಭಿವೃದ್ಧಿ ಹಾಗೂ ಸಿರಿಧಾನ್ಯ ರಫ್ತಿಗೆ ಅನುಕೂಲ ಆಗುವಂತೆ ಸಿರಿಧಾನ್ಯ ಬೆಳೆಗೆ ಪ್ರೋತ್ಸಾಹದಾಯಕವಾಗಿ ಅಗತ್ಯ ಕೇಂದ್ರವನ್ನು ರಾಜ್ಯ ಸರ್ಕಾರ ಸ್ಥಾಪಿಸಲಿದೆ ಎಂದು ಇದೇ ಸಂದರ್ಭದಲ್ಲಿ ಸಿಎಂ ಭರವಸೆ ನೀಡಿದರು. ಎಲ್ಲಿ ಮಳೆ ಕಡಿಮೆ ಬೀಳುತ್ತದೆಯೋ, ಭೂಮಿಯ ಫಲವತ್ತತೆ…

Read More

ಮಂಡ್ಯ: ಜಿಲ್ಲೆಯಲ್ಲಿ ಶ್ರೀರಂಗಪಟ್ಟಣದಲ್ಲಿ ನಡೆದಿದ್ದಂತ ಹನುಮ ಜಯಂತಿ ಯಾತ್ರೆಯಲ್ಲಿ ಪಾಲ್ಗೊಂಡು ಮುಸ್ಲೀಂ ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆಯನ್ನು ಕಲ್ಲಡ್ಕ ಪ್ರಭಾಕರ ಭಟ್ ನೀಡಿದ್ದರು. ಈ ಹಿನ್ನಲೆಯಲ್ಲಿ ಇವರ ವಿರುದ್ಧ ದೂರು ದಾಖಲಾಗಿತ್ತು. ಈ ಪ್ರಕರಣ ಸಂಬಂಧ ಇಂದು ಶ್ರೀರಂಗ ಪಟ್ಟಣದ 3ನೇ ಅಪರ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯಕ್ಕೆ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಇಂದು ಶ್ರೀರಂಗಪಟ್ಟಣ 3 ನೇ ಅಪರ ಜಿಲ್ಲಾ ಸೆಶನ್ ನ್ಯಾಯಾಲಯದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ಈ ನ್ಯಾಯಾಲಯ ಆರೋಪಿ ಕಲ್ಲಡ್ಕ ಪ್ರಭಾಕರ ಭಟ್ ಗೆ ನೀಡಿರುವ ಮಧ್ಯಂತರ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸಬೇಕು ಎಂದು ಹಿರಿಯ ವಕೀಲ ಎಸ್ ಬಾಲನ್ ವಾದ ಮಂಡಿಸಿದರು‌. “ಪ್ರಭಾಕರ ಭಟ್ ಈ ರೀತಿ ಕೃತ್ಯಗಳ ಚಾಳಿ ಹೊಂದಿದ್ದಾನೆ. ದ್ವೇಷ ಭಾಷಣ ಎನ್ನುವುದು ದೇಶ ಒಡೆಯುವ ಕೃತ್ಯ ಎಂದು ಸುಪ್ರಿಂ ಕೋರ್ಟ್ 2021 ಅಕ್ಟೋಬರ್ 21 ರ ಆದೇಶದಲ್ಲಿ ಹೇಳಿದೆ. ಹಾಗಾಗಿ ಇದು ದೇಶದ್ರೋಹದ ಕೃತ್ಯ” ಎಂದು…

Read More

ಶಿವಮೊಗ್ಗ ; ಶಿವಮೊಗ್ಗ ರಂಗಾಯಣವು ರಂಗಾಸ್ತಕರಿಗಾಗಿ ಫೆಬ್ರವರಿ-2024ರಲ್ಲಿ 20 ದಿನಗಳ ಕಾಲ ಪೂರ್ಣಾವಧಿ ನಾಟಕ ಸಿದ್ಧತಾ ಶಿಬಿರವನ್ನು ಆಯೋಜಿಸಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಶಿಬಿರಾರ್ಥಿಗಳು 20-40 ವರ್ಷದೊಳಗಿನವರಾಗಿರಬೇಕು. 12 ಜನ ಅಭ್ಯರ್ಥಿಗಳಿಗೆ ಮಾತ್ರ ಅವಕಾಶವಿದ್ದು, ಅನುಭವ, ಆಸಕ್ತಿ, ಬದ್ಧತೆಯ ಆಧಾರದ ಮೇಲೆ ಸಂದರ್ಶನದ ಮೂಲಕ ಅಂತಿಮ ಆಯ್ಕೆ ಮಾಡಲಾಗುವುದು. ಸಂದರ್ಶನಕ್ಕೆ ಸ್ವಂತ ಖರ್ಚಿನಲ್ಲಿ ಬರಬೇಕು ಹಾಗೂ ಆಯ್ಕೆಯಾದ ಅಭ್ಯರ್ಥಿಗಳು ಕನಿಷ್ಠ 5 ಪ್ರದರ್ಶನಗಳಿಗೆ ಒಪ್ಪಿಗೆ ಸೂಚಿಸಬೇಕು. ಶಿಬಿರದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಹೆಸರು, ವಿಳಾಸ, ದೂರವಾಣಿ ವಿದ್ಯಾರ್ಹತೆ, ರಂಗಭೂಮಿ ಅನುಭವ ವಿವರ, ಶಿಬಿರಾರ್ಥಿಯಾಗಿ ತರಬೇತಿ ಪಡೆಯುವ ಉದ್ದೇಶ ಹಾಗೂ ವಯಸ್ಸಿನ ದಾಖಲೆಯೊಂದಿಗೆ ಅರ್ಜಿ ಸಲ್ಲಿಸುವುದು. ಶಿಬಿರಾರ್ಥಿಗಳು ಕಡ್ಡಾಯವಾಗಿ ಶಿಬಿರದ ಚಟುವಟಿಕೆಗಳಲ್ಲಿ ಭಾಗವಹಿಸುವುದು ಮತ್ತು 20 ದಿನಗಳು ನಿರಂತರವಾಗಿ ನಡೆಯುವ ಈ ಶಿಬಿರದಲ್ಲಿ ಮಧ್ಯದಲ್ಲಿ ಯಾವುದೇ ರಜೆ ಇರುವುದಿಲ್ಲ. ಶಿಬಿರಾರ್ಥಿಗಳ ಆಯ್ಕೆಯಲ್ಲಿ ಶಿಬಿರದ ನಿರ್ದೇಶಕರು ಹಾಗೂ ಆಡಳಿತಾಧಿಕಾರಿಗಳ ನಿರ್ಧಾರವೇ ಅಂತಿಮ. ಶಿಬಿರ ನಡೆಯುವ ಸಮಯದಲ್ಲಿ ಮಧ್ಯದಲ್ಲಿ ಬಿಟ್ಟು ಹೋಗಲು ಅವಕಾಶವಿರುವುದಿಲ್ಲ.…

Read More

ಶಿವಮೊಗ್ಗ ; ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ, ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ ಸಹಯೋಗದೊಂದಿಗೆ ಜ.10 ಮತ್ತು 11 ರಂದು ನಗರದ ವಿನೋಬನಗರದಲ್ಲಿರುವ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ರೈತರಿಗೆ ಮೇವು ಬೆಳೆಗಳ ಕುರಿತು ತರಬೇತಿಯನ್ನು ಆಯೋಜಿಸಲಾಗಿದೆ. ತರಬೇತಿ ಕಾರ್ಯಕ್ರಮದಲ್ಲಿ ಮಲೆನಾಡು ಗಿಡ್ಡತಳಿ ಹೊಂದಿರುವ ಸಣ್ಣ ಹಿಡುವಳಿದಾರಿಗೆ ಹಸಿರು ಮೇವಿನ ತಳಿಗಳ ಪ್ರದರ್ಶನ ಹಾಗೂ ಮೇವಿನ ಬೆಳೆಗಳ ಬೇಸಾಯ ಕ್ರಮಗಳು, ಮೇವು ಬೀಜಗಳ ಸಂಸ್ಕರಣೆ ಹಾಗೂ ಮೇವಿನ ತಳಿಗಳ ಪಸರಣೆ (ಪ್ರಾಯೋಗಿಕ ತರಬೇತಿ), ಹುಲ್ಲುಗಾವಲು ನಿರ್ವಹಣೆಯ ಅಗತ್ಯತೆಯ ಕುರಿತಾದ ವಿವಿಧ ವಿಷಯಗಳು ಒಳಗೊಂಡಿರುತ್ತದೆ. ಮಲೆನಾಡು ಗಿಡ್ಡ ತಳಿಯ ಹಾಲು, ಸಗಣಿ ಮತ್ತು ಗಂಜಳದಿಂದ ತಯಾರಿಸಲಾದ ವಿವಿಧ ಉತ್ಪನ್ನಗಳ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಈ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಸಕ್ತಿಯುಳ್ಳವರು ತಮ್ಮ ಹೆಸರನ್ನು ಡಾ. ಹರೀಶ್ ಎಂ.-9470747820 ಹಾಗೂ ಡಾ. ವೆಂಕಟೇಶ್ -9482373685 ಮೊಬೈಲ್ ನಂ.ಗಳಿಗೆ ಎಸ್.ಎಂ.ಎಸ್./ವಾಟ್ಸ್‍ಪ್ ಮೂಲಕ ಅಥವಾ ರಾ.ಕೃ.ವಿಕಾಸ ಯೋಜನಾ ಸಂಯೋಜಕರು, ಪ್ರಾಣಿ ಅನುವಂಶೀಯತೆ ಹಾಗೂ ತಳಿಶಾಸ್ತ್ರ ವಿಭಾಗ, ಪಶುವೈದ್ಯಕೀಯ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ 2023ನೇ ಮುಂಗಾರು ಹಂಗಾಮಿನಲ್ಲಿ ಬರ ಪರಿಸ್ಥಿತಿಯಿಂದ ಉಂಟಾದ ಬೆಳೆಹಾನಿಗೆ ರೈತರಿಗೆ ಪರಿಹಾರವನ್ನು ಬಿಡುಗಡೆ ಮಾಡಿ ಆದೇಶಿಸಿದೆ. ಈ ಕುರಿತಂತೆ ಇಂದು ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಕೇಂದ್ರ ಸರ್ಕಾರದಿದಂ ಬರ ನಿರ್ವಹಣೆಗಾಗಿ NDRF ಅನುದಾನವನ್ನು ನಿರೀಕ್ಷಿಸಿ, ಕೇಂದ್ರ ಸರ್ಕಾರದ ಗೃಹ ಮಂತ್ರಾಲಯವು ದಿನಾಂಕ 17-07-2023ರಲ್ಲಿ ಹೊರಡಿಸಿರುವ SDRF ಮಾರ್ಗಸೂಚಿಯನ್ವಯ ಅರ್ಹ ರೈತರಿಗೆ ಬರ ಪರಿಸ್ಥಿತಿಯಿಂದ ಶೇ.33ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಉಂಟಾದ ಬೆಳೆ ಹಾನಿಗೆ ಗರಿಷ್ಠ 2 ಹೆಕ್ಟೇರ್ ಗೆ ಸೀಮಿತಗೊಳಿಸಿ ಇನ್ ಪುಡ್ ಸಬ್ಸಿಡಿಯನ್ನು ನಿಗದಿಪಡಿಸಲಾಗಿದೆ ಅಂತ ತಿಳಿಸಿದ್ದಾರೆ. ಮಳೆಯಾಶ್ರಿತ ಬೆಳೆ ನಷ್ಟಕ್ಕೆ ಪ್ರತಿ ಹೆಕ್ಟೇರ್ ಗಳಿಗೆ ರೂ.8,500, ನೀರಾವರಿ ಬೆಳೆಗೆ ರೂ.17,000 ಹಾಗೂ ಬಹು ವಾರ್ಷಿಕ ಬೆಳೆ ನಷ್ಟ ಪರಿಹಾರಕ್ಕೆ ರೂ.22,500 ಪರಿಹಾರವನ್ನು ನಿಗದಿ ಮಾಡಿ, ಅದಕ್ಕಾಗಿ ರಾಜ್ಯ ಸರ್ಕಾರವು 105 ಕೋಟಿಯನ್ನು ಆಯುಕ್ತರು, ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ, ಬೆಂಗಳೂರು ಇವರಿಗೆ ಬಿಡುಗಡೆ ಮಾಡಿದೆ. ಪ್ರತಿ ರೈತರಿಗೆ ಗರಿಷ್ಠ…

Read More

ಬೆಂಗಳೂರು: ನಗರದಲ್ಲಿರುವಂತ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಯನ್ನು ಹಾಕಲಾಗಿದೆ. ಈ ಮೂಲಕ ಮತ್ತೊಮ್ಮೆ ರಾಜ್ಯ ರಾಜಧಾನಿ ಬೆಂಗಳೂರು ಬೆಚ್ಚಿ ಬೀಳಉವಂತೆ ಮಾಡಲಾಗಿದೆ. ಈ ಹಿಂದೆ ಸಾಲು ಸಾಲು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿತ್ತು. ಆ ಪ್ರಕರಣದ ಬಗ್ಗೆ ಇನ್ನೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಬೆನ್ನಲ್ಲೇ ಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಬೆಂಗಳೂರಿನ ಹೃದಯ ಭಾಗದಲ್ಲಿರುವಂತ ವಿಶ್ವೇಶ್ವರಯ್ಯ ಮ್ಯೂಸಿಯಂ ಅನ್ನು ಬಾಂಬ್ ಇಟ್ಟು ಸ್ಪೋಟಿಸೋದಾಗಿ ಇ-ಮೇಲ್ ನಲ್ಲಿ ಬೆದರಿಕೆ ಹಾಕಲಾಗಿದೆ ಎನ್ನಲಾಗುತ್ತಿದೆ. ಈ ಬೆದರಿಕೆ ಇ-ಮೇಲ್ ಬಂದ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು, ಈ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ. https://kannadanewsnow.com/kannada/shivamogga-power-outage-in-these-areas-of-tomorrow/ https://kannadanewsnow.com/kannada/karsevak-shrikant-poojary-granted-bail/

Read More