Author: kannadanewsnow09

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಸಾಹಿತಿ, ಯಕ್ಷಗಾನ ಪ್ರಸಂಗಕರ್ತ, ಕನ್ನಡ, ತುಳು ಭಾಷೆ ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದ ಸಮಾಜಮುಖಿ ಚಿಂತಕ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಪ್ರೊ. ಅಮೃತ ಸೋಮೇಶ್ವರ ಅವರು ನಿಧನರಾಗಿದ್ದಾರೆ. ಈ ಮೂಲಕ ಜಾನಪದ ವಿದ್ವಾಂಸ ಪ್ರೊ.ಅಮೃತ ಸೋಮೇಶ್ವರ್ ಇನ್ನಿಲ್ಲವಾಗಿದ್ದಾರೆ. ಅವರ ನಿಧನ ಕುರಿತಂತೆ ಸಂತಾಪ ಸೂಚಿಸಿ ಟ್ವಿಟ್ ಮಾಡಿರುವಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಪ್ರೊ. ಅಮೃತ ಸೋಮೇಶ್ವರ ಅವರು ನಿಧನ ಹೊಂದಿದ ವಿಷಯ ತಿಳಿದು ಅತ್ಯಂತ ದುಃಖವಾಯಿತು ಎಂದಿದ್ದಾರೆ. ನೂರಾರು ಮಂದಿ ಕಲೆ, ಸಾಹಿತ್ಯ, ಸಂಶೋಧನಾಸಕ್ತರಿಗೆ ಸದಾ ಕಾಲ ಪ್ರೇರಕ, ಮಾರ್ಗದರ್ಶಕರಾಗಿದ್ದ, ಜಾನಪದ ವಿದ್ವಾಂಸ ಪ್ರೊ. ಅಮೃತ ಸೋಮೇಶ್ವರ ಅವರ ಅಗಲಿಕೆಯು ನಾಡಿಗೆ ತುಂಬಲಾರದ ನಷ್ಟ. ಮೃತರ ಕುಟುಂಬ, ಶಿಷ್ಯ ವೃಂದಕ್ಕೆ ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಅಂತ ಹೇಳಿದ್ದಾರೆ. https://twitter.com/dineshgrao/status/1743518664006242343?t=wNqYSJbj7TlqSZShw3R8uA&s=08 https://kannadanewsnow.com/kannada/brand-bemgaluru-republic-day/ https://kannadanewsnow.com/kannada/there-is-not-even-the-slightest-difference-of-opinion-between-me-and-ashok-former-minister-v-somanna/

Read More

ಬೆಂಗಳೂರು : ಬೆಂಗಳೂರು ನಗರದ ಜಾರಕಬಂಡೆ ಕಾವಲ್ ಶ್ರೀಗಂಧದ ಮೀಸಲು ಅರಣ್ಯದ ಸರ್ವೆ ನಂ. 18 ಮತ್ತು 19ರಲ್ಲಿ 15 ಎಕರೆ ಅರಣ್ಯ ಭೂಮಿಯನ್ನು ಇಂದು ಮರು ವಶಕ್ಕೆ ಪಡೆಯಲಾಗಿದೆ. 2017ರಲ್ಲೇ ಸದರಿ ಭೂಮಿ ಅರಣ್ಯ ಇಲಾಖೆಗೆ ಸೇರಿದ್ದು ಎಂದು ತೀರ್ಪು ನೀಡಲಾಗಿತ್ತು. ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಬೆಂಗಳೂರು ಸುತ್ತಮುತ್ತ ಬೆಲೆಬಾಳುವ ಅರಣ್ಯ ಭೂಮಿಯ ಒತ್ತುವರಿ ತೆರವು ಮಾಡಿಸಬೇಕು ಎಂದು ನಿರ್ದೇಶನ ಕೊಟ್ಟ ತರುವಾಯ ನಡೆದ ಎರಡನೇ ಒತ್ತುವರಿ ತೆರವು ಕಾರ್ಯಾಚರಣೆ ಇದಾಗಿದೆ. 1932ರ ಆಗಸ್ಟ್ 10ರಂದು ಸಂಖ್ಯೆನಂ. ಜಿ 1053-ಎಫ್.ಟಿ 42-32-2ರಂತೆ 444 ಎಕರೆ 12 ಗುಂಟೆ ಪ್ರದೇಶ ಜಾರಕಬಂಡೆ ಶ್ರೀಗಂಧ ಮೀಸಲು – ಕಾಯ್ದಿಟ್ಟ ಅರಣ್ಯ ಪ್ರದೇಶ ಎಂದು ಅಧಿಸೂಚಿಸಲಾಗಿತ್ತು. ಆದರೆ ಸದರಿ ಜಮೀನನ್ನು 1987ರಲ್ಲಿ ಕಾನೂನು ಬಾಹೀರವಾಗಿ ಭಾರತೀಯ ವಾಯುಪಡೆಗೆ ಹಂಚಿಕೆ ಮಾಡಿತ್ತು, ಆದರೆ ಸದರಿ ಜಮೀನು ಎಚ್.ಎಂ.ಟಿ. ವಶದಲ್ಲಿತ್ತು. ಆದರೆ, ಅರಣ್ಯ ಭೂಮಿಯನ್ನು ಯಾವುದೇ ವ್ಯಕ್ತಿಗೆ, ಸಂಸ್ಥೆಗೆ ಮಂಜೂರು…

Read More

ಬೆಂಗಳೂರು : ಹುಲಿ ಉಗುರು, ಆನೆ ದಂತ, ಜಿಂಕೆಕೊಂಬು ಸೇರಿದಂತೆ ಅಕ್ರಮವಾಗಿಟ್ಟುಕೊಂಡಿರುವ ಯಾವುದೇ ವನ್ಯ ಜೀವಿಯ ಅಂಗಾಂಗ, ಟ್ರೋಫಿಯನ್ನು ಸರ್ಕಾರಕ್ಕೆ ಹಿಂತಿರುಗಿಸಲು ಒಂದು ಬಾರಿ ಕಾಲಾವಕಾಶ ನೀಡಲು ಇಂದು ನಡೆದ ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಪ್ರಸ್ತಾಪಕ್ಕೆ ಅನುಮೋದನೆ ನೀಡಲಾಯಿತು. ಅಕ್ರಮವ ಸಂರಕ್ಷಣಾ ಅಧಿನಿಯಮ 1972 ಮತ್ತು ಇತ್ತೀಚೆಗೆ ಅಂದರೆ 2022ರಲ್ಲಿ ಕೇಂದ್ರ ಸರ್ಕಾರ ಈ ಕಾಯಿದೆಗೆ ಮಾಡಿರುವ ತಿದ್ದುಪಡಿಯನ್ವಯ ಯಾವುದೇ ವನ್ಯಜೀವಿಯ ಅಂಗಾಂಗವನ್ನು ಅಕ್ರಮವಾಗಿ ದಾಸ್ತಾನು ಮಾಡುವುದು, ಸಾಗಾಟ ಮಾಡುವುದು, ಮನೆಯಲ್ಲಿ ಇಟ್ಟುಕೊಳ್ಳುವುದು, ಮಾರಾಟ ಮಾಡುವುದು, ಧರಿಸುವುದು, ವನ್ಯಜೀವಿಗಳ ಮಾಂಸ ಭಕ್ಷಿಸುವುದು ಶಿಕ್ಷಾರ್ಹ ಅಪರಾಧವಾಗಿದೆ. ವನ್ಯಜೀವಿ (ಸಂರಕ್ಷಣಾ) (ಕರ್ನಾಟಕ ನಿಯಮಗಳು) 1973 ರ ನಿಯಮ 34 (1) ರಡಿಯಲ್ಲಿ ನಿಯಮ ಜಾರಿಯಾದ ಸಂದರ್ಭದಲ್ಲಿ 1973ರಲ್ಲಿ 30 ದಿನಗಳ ಕಾಲ ನಂತರ 2003 ರಲ್ಲಿ ಮತ್ತೊಮ್ಮೆ 180 ದಿನಗಳ ಕಾಲಾವಕಾಶ ನೀಡಿ ತಲತಲಾಂತರದಿಂದ ತಮ್ಮಲ್ಲಿರುವ ವನ್ಯಜೀವಿ/ಪ್ರಾಣಿಗಳ ಅಂಗಾಂಗಗಳ ಪದಾರ್ಥಗಳು,…

Read More

ಬೆಂಗಳೂರು: ಎಲ್ಲ ಐಎಲ್ಐ, ಸಾರಿ ಪ್ರಕರಣಗಳಿಗೆ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಲು ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನ ವಿಕಾಸ ಸೌಧದಲ್ಲಿ ಶುಕ್ರವಾರ ಕೋವಿಡ್ ಕುರಿತಂತೆ ಹಿರಿಯ ಆರೋಗ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಟೆಸ್ಟಿಂಗ್ ಮಾಡಲಾಗುತ್ತಿದೆ ಎಂದರು. ಪ್ರತಿನಿತ್ಯ 7 ಸಾವಿರಕ್ಕೂ ಹೆಚ್ಚು ಟೆಸ್ಟ್ ಗಳನ್ನ ಮಾಡಲಾಗುತ್ತಿದೆ. ಕೋವಿಡ್ ಪಾಸಿಟಿವಿಟಿ ದರ ಶೇ 3.82 ರಷ್ಟಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಇನ್ನೂ ಇಳಿಮುಖಗೊಂಡಿಲ್ಲ. ಕೇರಳ ರಾಜ್ಯದಲ್ಲಿ ಈಗಾಗಲೇ ಕೋವಿಡ್ ನಲ್ಲಿ ಇಳಿಕೆಯ ಟ್ರೆಂಡ್ ಆರಂಭವಾಗಿದೆ. ಹೀಗಾಗಿ ಕೋವಿಡ್ ಪಾಸಿಟಿವ್ ಹೊಂದಿರುವವರ ಮೇಲೆ ಹೆಚ್ಚಿನ ನಿಗಾ ವಹಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು. ವಿಶೇಷವಾಗಿ ವಯಸ್ಕರಲ್ಲಿ ಐಎಲ್ಐ ಸಾರಿ ಆರೋಗ್ಯ ಸಮಸ್ಯೆಗಳು ಕಂಡು ಬಂದರೆ ಕಡ್ಡಾಯವಾಗಿ ಕೋವಿಡ್ ತಪಾಸಣೆ ನಡೆಸಲು ಸೂಚಿಸಲಾಗಿದೆ. ಈ ಮೊದಲು ಈ ಪ್ರಕರಣಗಳಲ್ಲಿ 20 ರಲ್ಲಿ ಒಂದು ಮಾತ್ರ ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗುತ್ತಿತ್ತು. ಇನ್ಮುಂದೆ ಎಲ್ಲ ಐ.ಎಲ್.ಐ ಇರೋರಿಗೆ…

Read More

ನವದೆಹಲಿ: ಅಪಹರಣಕ್ಕೊಳಗಾದ ಲೈಬೀರಿಯನ್ ಹಡಗಿನ ವೀರೋಚಿತ ರಕ್ಷಣೆಯ ಸಮಯದಲ್ಲಿ ಗಣ್ಯ ‘ಮಾರ್ಕೋಸ್’ ಕಾರ್ಯಾಚರಣೆಯ ತುಣುಕನ್ನು ನೌಕಾಪಡೆ ಬಿಡುಗಡೆ ಮಾಡಿದೆ. ಭಾರತೀಯ ನೌಕಾಪಡೆಯ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಿದ ಗಣ್ಯ ಮಾರ್ಕೋಸ್ ಕಮಾಂಡೋಗಳು ಲೈಬೀರಿಯನ್ ಧ್ವಜ ಹೊಂದಿರುವ ಸರಕು ಹಡಗು ಎಂವಿ ಲೀಲಾ ನಾರ್ಫೋಕ್ನಲ್ಲಿನ ಸಿಬ್ಬಂದಿಯ ರಕ್ಷಣಾ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಮುಕ್ತಾಯಗೊಳಿಸಿದರು. ಅರೇಬಿಯನ್ ಸಮುದ್ರದ ಮಧ್ಯದಲ್ಲಿ ದೈತ್ಯ ಸರಕು ಹಡಗಿನಲ್ಲಿ ಭಾರತದ ಸಾಗರ ವಿಶೇಷ ಪಡೆಯ ಕಮಾಂಡೋಗಳ ವೀಡಿಯೊ ತುಣುಕನ್ನು ಭಾರತೀಯ ನೌಕಾಪಡೆ ಬಿಡುಗಡೆ ಮಾಡಿದೆ. ಪ್ರಸ್ತುತ ಸಾಮಾಜಿಕ ಮಾಧ್ಯಮದಲ್ಲಿ ಟ್ರೆಂಡಿಂಗ್ ಆಗಿದೆ. ಮೊದಲ ವೀಡಿಯೊದಲ್ಲಿ, ಸಾಗರ ಸಿಬ್ಬಂದಿ ಹಡಗಿನಲ್ಲಿ ಪ್ರವೇಶವನ್ನು ಖಚಿತಪಡಿಸಿಕೊಳ್ಳಲು ಹೈಸ್ಪೀಡ್ ಮೋಟಾರು ದೋಣಿಯಲ್ಲಿ ಹಡಗನ್ನು ಸಮೀಪಿಸುತ್ತಿರುವುದು ಕಂಡುಬಂದಿದೆ. ರಕ್ಷಣಾ ಕರೆಗೆ ಹಾಜರಾಗುವ ಹೆಲಿಕಾಪ್ಟರ್ನಿಂದ ತೆಗೆದ ತುಣುಕುಗಳು, ವ್ಯಾಪಾರಿ ಹಡಗಿಗೆ ಸಾಕಷ್ಟು ಹತ್ತಿರ ಬಂದ ಕೂಡಲೇ ಸ್ಪೀಡ್ ಬೋಟ್ನಿಂದ ಜಿಗಿಯುವಾಗ ಕಮಾಂಡೋಗಳ ಸನ್ನದ್ಧತೆಯ ಒಂದು ನೋಟವನ್ನು ಒದಗಿಸಿತು. https://twitter.com/ANI/status/1743286896300904462 ಮತ್ತೊಂದು ವೀಡಿಯೊದಲ್ಲಿ, ಶಸ್ತ್ರಾಸ್ತ್ರಗಳನ್ನು ಹೊಂದಿರುವ ಮಾರ್ಕೋಸ್ ವಿಶೇಷ ಪಡೆಗಳ ಕಾರ್ಯಕರ್ತರು ಹಡಗಿನಲ್ಲಿ…

Read More

ಬೆಂಗಳೂರು: ನಮ್ಮ ಮೆಟ್ರೋ ಹಸಿರು ಮಾರ್ಗದ ಜಾಲಹಳ್ಳಿ ಮೆಟ್ರೊ ನಿಲ್ದಾಣದಲ್ಲಿ ಶುಕ್ರವಾರ ರಾತ್ರಿ ವ್ಯಕ್ತಿಯೊಬ್ಬರು ಹಳಿಗೆ ಜಿಗಿದಿದ್ದು, ರೈಲು ಸಂಚಾರ ವ್ಯತ್ಯಯಗೊಂಡಿತ್ತು. ಈ ಘಟನೆಯ ಕುರಿತಂತೆ ಬಿಎಂಆರ್ ಸಿಎಲ್ ಏನು ಹೇಳಿದೆ ಅಂತ ಮುಂದೆ ಓದಿ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ BMRCL, ಇಂದು  ರಾತ್ರಿ 07.12 ಗಂಟೆಗೆ ಪ್ಲಾಟ್‌ಫಾರ್ಮ್ ಕೊನೆಯಲ್ಲಿ ಕಾಯುತ್ತಿದ್ದ ಪ್ರಯಾಣಿಕರೊಬ್ಬರು ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಬರುವ ರೈಲಿನ ಮುಂದೆ ಜಿಗಿದಿದ್ದಾರೆ. ತಕ್ಷಣ ಬಿಎಂಆರ್‌ಸಿಎಲ್ ಸಿಬ್ಬಂದಿ  ರಕ್ಷಿಸಿ ಹೆಚ್ಚಿನ ಚಿಕಿತ್ಸೆಗಾಗಿ ಸಮೀಪದ ಸಂಜೀವಿನಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿಸಿದೆ. ಮೇಲಿನ ಘಟನೆಯ ಸಮಯದಲ್ಲಿ ನಾಲ್ಕು ರೈಲುಗಳನ್ನು ಇತರ ನಿಲ್ದಾಣದ ಪ್ಲಾಟ್‌ಫಾರ್ಮ್‌ಗಳಲ್ಲಿ ಸ್ಥಗಿತಗೊಂಡ ರೈಲುಗಳಿಂದ ಎಲ್ಲಾ ಪ್ರಯಾಣಿಕರನ್ನು ರೈಲಿನಿಂದ ಸುರಕ್ಷಿತವಾಗಿ ಹೊರತರಲಾಯಿತು . ಮೇಲಿನ ಅವಧಿಯಲ್ಲಿ ಯಶವಂತಪುರ ಮತ್ತು ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ಹಸಿರು ಮಾರ್ಗದ ಕಾರ್ಯಾಚರಣೆ ನಡೆಸಲಾಯಿತು ಎಂದಿದೆ. ರಾತ್ರಿ 8 .00 ಗಂಟೆಯಿಂದ ಸಂಪೂರ್ಣ ಹಸಿರು ಮಾರ್ಗದಲ್ಲಿ ಕಾರ್ಯಾಚರಣೆ ಪುನರಾರಂಭಿಸಲಾಗಿದೆ ಎಂಬುದಾಗಿ…

Read More

ಶಿವಮೊಗ್ಗ: ರಾಜ್ಯ ಸರ್ಕಾರದ ಕ್ರಮ ಸೇರಿದಂತೆ ರೈತ ವಿರೋಧಿ ನೀತಿಗಳ ವಿರುದ್ಧ ಸಾಗರ ತಾಲೂಕಿನ ತಾಳಗುಪ್ಪದಲ್ಲಿ ರೈತರಿಂದ ಕಪ್ಪು ದಿನವನ್ನು ಆಚರಿಸಲಾಯಿತು. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತಾಳಗುಪ್ಪ ಬಸ್ ನಿಲ್ದಾಣದ ಬಳಿಯಲ್ಲಿ, ಜಿಲ್ಲೆಯ ಶರಾವತಿ ಮುಳುಗಡೆ ಸಂತ್ರಸ್ಥರು, ಚಕ್ರಾ, ವರಾಹಿ, ಸಾವೆಹಕ್ಕು, ಸಂತ್ರಸ್ಥರು, ಬಗರ್ ಹುಕುಂ ಸಂತ್ರಸ್ಥರು, ಅರಣ್ಯ ಭೂಮಿ ಸಂತ್ರಸ್ಥರ ವಿಚಾರದಲ್ಲಿ ಸರ್ಕಾರ ಮತ್ತು ಶಿವಮೊಗ್ಗ ಜಿಲ್ಲೆಯ ಜನ ಪ್ರತಿನಿಧಿಗಳ ನಿರ್ಲಕ್ಷ್ಯ ಮತ್ತು ಈ ವಿಚಾರದಲಿ 1973 ರಲ್ಲಿ ರದ್ದಾಗಿದ್ದ ಟಾಸ್ಕ್ ಪೋರ್ಸ್ ಅನ್ನು ರಚನೆ ಮಾಡುವಂತೆ ಹಲವಾರು ಬಾರಿ ಮನವಿ ಮಾಡಿಕೊಂಡರೂ ಟಾಸ್ಕ್ ಪೋರ್ಸ್ ರಚನೆ ಮಾಡಲು ಮುಂದಾಗದ ಸರ್ಕಾರದ ನಡೆ ಖಂಡಿಸಲಾಯಿತು. ಇದಲ್ಲದೇ ಅಧಿಕಾರಿಗಳ ಅಸಹಕಾರ ಮತ್ತು ದೌರ್ಜನ್ಯದಿಂದ ಬೇಸತ್ತು ಹಾಗೂ ಸಾಗರ ತಾಲ್ಲೂಕಿನ ಕಂದಾಯ ಇಲಾಖೆಯ ಕಚೇರಿಗಳಲ್ಲಿ ರೈತರ ಭೂಮಿಗೆ ಸಂಬಂಧಿಸಿದ ದಾಖಲಾತಿ ಕಡತಗಳು ನಾಪತ್ತೆಯಾಗುತ್ತಿರುವುದನ್ನು ಖಂಡಿಸಲಾಯಿತು. ರಾಜ್ಯ ಸರ್ಕಾರದ ಆದೇಶವಿದ್ದರೂ ಆದೇಶದ ಪ್ರಕಾರ ರೈತರ ಕೆಲಸಗಳನ್ನು ಮಾಡದ ಅಧಿಕಾರಿಗಳ ನಡೆಯನ್ನು ಖಂಡಿಸಿ ದಿನಾಂಕ…

Read More

ಬೆಂಗಳೂರು: ನಮ್ಮ ಮೆಟ್ರೋ ಹಳಿಯ ಮೇಲೆ ಧುಮುಕಿ ಆತ್ಮಹತ್ಯೆಗೆ ವ್ಯಕ್ತಿಯೊಬ್ಬ ಯತ್ನಿಸಿದ್ದರಿಂದ, ಕೆಲ ಕಾಲ ಹಸಿರು ಮಾರ್ಗದ ನಮ್ಮ ಮೆಟ್ರೋ ಸಂಚಾರ ಸ್ಥಗಿತಗೊಳಿಸಿರುವಂತ ಘಟನೆ ಬೆಂಗಳೂರಿನ ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಮೆಟ್ರೋ ಸಂಚಾರ ಕೆಲಕಾಲ ಸ್ಥಗಿತಗೊಂಡ ಪರಿಣಾಮ, ಪ್ರಯಾಣಿಕರು ಪರದಾಡಿದ್ದಾರೆ. ಬೆಂಗಳೂರಿನ ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ರೈಲು ಹಳಿಗಳ ಮೇಲೆ ಧುಮುಕಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಕಾರಣದಿಂದ ಕೆಲ ಕಾಲ ರೈಲು ಹಳಿಗಳ ವಿದ್ಯುತ್ ಸ್ಥಗಿತಗೊಳಿಸಲಾಗಿದೆ. ಅಲ್ಲದೇ ಮುಂಜಾಗ್ರತಾ ಕ್ರಮವಾಗಿ ಮೆಟ್ರೋ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಹಸಿರು ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರ ಸ್ಥಗಿತಗೊಂಡಿದ್ದರಿಂದ ಯಶವಂತಪುರ ಮೆಟ್ರೋ ನಿಲ್ದಾಣದಲ್ಲಿ ಜನರು ಮೆಟ್ರೋ ವಿಳಂಬದಿಂದಾಗಿ ಪರದಾಡುವಂತೆ ಆಗಿದೆ. ಆತ್ಮಹತ್ಯೆಗೆ ಯತ್ನಿಸಿದಂತ ವ್ಯಕ್ತಿಯನ್ನು ಮನವೊಲಿಸಿದ ಬಳಿಕ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/ksrtc-releases-provisional-selection-list-for-technical-assistant-post/ https://kannadanewsnow.com/kannada/breaking-navy-seizes-hijacked-cargo-ship-warning-to-pirates/

Read More

ಬೆಂಗಳೂರು: ಈಗಾಗಲೇ ರಾಜ್ಯ ಪಠ್ಯಕ್ರಮದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಖಾಸಗಿ ಶಾಲೆಗಳ 5, 8 ಮತ್ತು 9ನೇ ತರಗತಿ ಮಕ್ಕಳಿಗೆ 2023-24ನೇ ಸಾಲಿನ ಸಂಕಲನಾತ್ಮಕ ಮೌಲ್ಯಾಂಕನ ( SA-2) ಪರೀಕ್ಷೆಗೆ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿತ್ತು. ಇದೀಗ ಅಂತಿಮ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತಿನಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, 2023-24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5. 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಾಂಕನ (Summative Assessment-(SA-2) ಶಾಲಾ ಪರೀಕ್ಷೆ & ಮೌಲ್ಯ ನಿರ್ಣಯ ಮಂಡಲಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ನಡೆಸಲಾಗುತ್ತಿದೆ. ಸದರಿ ಮೌಲ್ಯಾಂಕನಕ್ಕೆ ಸಂಬಂಧಿಸಿದಂತೆ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ವೆಬ್‌ಸೈಟ್‌ನಲ್ಲಿ https://kseab.karnataka.gov.in/ ನಲ್ಲಿ ಪ್ರಕಟಿಸಲಾಗಿದೆ. ಮುಂದುವರೆದು ರಾಜ್ಯದ ಎಲ್ಲಾ ಜಿಲ್ಲಾ ಉಪನಿರ್ದೇಶಕರು (ಆಡಳಿತ ಮತ್ತು ಅಭಿವೃದ್ಧಿ) ಹಾಗೂ ಎಲ್ಲಾ…

Read More

ಈಗಿನ ಕಾಲದಲ್ಲೂ ಸಹ ಮಂತ್ರಗಳ ಸಹಾಯದಿಂದ ಎಷ್ಟೇ ಕಠಿಣವಾದ ಕೆಲಸಗಳನ್ನು ಬೇಕಾದರೂ ಮಾಡಬಹುದು, ಇಲ್ಲಿ ಒಬ್ಬ ಹಿಮಾಲಯದ ಗುರುಗಳಿಗೆ ವಾಯು ಗಮನ ಸಿದ್ಧಿ ಕೂಡ ಇತ್ತು. ಅಂದರೆ ಆ ದಿನಗಳಲ್ಲಿ ಇವರು ಗಾಳಿಯಂತೆ ವೇಗವಾಗಿ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಹೋಗುತ್ತಿದ್ದರು. ಇಂದು ನಾವು ತಿಳಿಸುವ ಈ ಒಂದು ಮಂತ್ರವನ್ನು ಜಪ ಮಾಡಿದರೆ ಹಣದ ಹರಿವು ಹೆಚ್ಚಾಗುವುದು ಖಚಿತ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ,…

Read More