Author: kannadanewsnow09

ಬೆಂಗಳೂರು; ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸಾಲ ಸೌಲಭ್ಯಗಳ ವಿವರ ಶ್ರೀ. ಶಹಜೀರಾಜೇ ಸಮೃದ್ಧಿ ಯೋಜನೆಯಡಿ ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ. ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ರಾಜಶ್ರೀ ಶಾಹುಮಹಾರಾಜ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ, ಮರಾಠ ಮಿಲ್ಟಿç ಹೋಟೆಲ್ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಾತಂತ್ರö್ಯ ಅಮೃತ್ ಮೊಹೋತ್ಸವ ಮುನ್ನಡೆ ಯೋಜನೆಗಳ ಸಾಲ ಸೌಲಭ್ಯ ಒದಗಿಸಲಾಗುವುದು. ಅರ್ಹತೆ ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಎಲ್ಲಾ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ ಅಡಿಯಲ್ಲಿ 2(ಎ) ಯಿಂದ 2(ಎಫ್)ವರೆಗೆ ಬರುವ ಸಮುದಾಯಕ್ಕೆ ಸೇರಿರಬೇಕು, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-3ಬಿ ಯಲ್ಲಿ ಪಡೆದಿರಬೇಕು. (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು),ಅರ್ಜಿದಾರರು ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸ…

Read More

ಬೆಂಗಳೂರು; ನಿಜಶರಣ ಅಂಬಿಗರ ಚೌಡಯ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಜನಾಂಗದ ಸಮುದಾಯಕ್ಕೆ ಪ್ರಸಕ್ತ ಸಾಲಿನಲ್ಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಯಂ ಉದ್ಯೋಗ ಸಾಲ ಮತ್ತು ಸಹಾಯಧನ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆಗಳಡಿ ಸಾಲ ಸೌಲಭ್ಯ ಒದಗಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಸೇವಾ ಸೇವಾ ಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮಒನ್, ಬೆಂಗಳೂರು ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರದಲ್ಲಿ ಆಗಸ್ಟ್ 30 ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿಗಾಗಿ ನಿಗಮದ ವೆಬ್‌ಸೈಟ್ https://kvldc.karnataka.gov.in ಅಥವಾ ನಿಗಮದ ಸಹಾಯವಾಣಿ ಸಂಖ್ಯೆ: 08192-230934 ಗೆ ಸಂಪರ್ಕಿಸಬಹುದು. https://kannadanewsnow.com/kannada/vishwakarma-community-invites-applications-for-loan-facility-under-various-schemes/ https://kannadanewsnow.com/kannada/important-decision-from-rbi-now-your-cheque-will-be-cleared-from-the-bank-soon/

Read More

ಬೆಂಗಳೂರು ; ಕರ್ನಾಟಕ ವಿಶ್ವಕರ್ಮ ಸಮುದಾಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಾದ ಪಂಚವೃತ್ತಿ ಅಭಿವೃದ್ಧಿಗೆ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರಸಾಲ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಾತಂತ್ರ‍್ಯ ಅಮೃತ್ ಮಹೋತ್ಸವ ಮುನ್ನಡೆ ಯೋಜನೆಗಳ ಸಾಲ ಸೌಲಭ್ಯಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 10ನೇ ತರಗತಿ, ದ್ವೀತಿಯ ಪಿ.ಯು.ಸಿ, ಡಿಪ್ಲೋಮ, ಪದವಿ, ಇಂಜಿನಿಯರಿಂಗ್ ವ್ಯಾಸಂಗವನ್ನು ಪೂರ್ಣಗೊಳಿಸಿರಬೇಕು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾತಿ ಪಟ್ಟಿಯಲ್ಲಿ ನಮೂದಿಸಿದ ನಿಗಮದ ವ್ಯಾಪ್ತಿಗೆ ಒಳಪಡುವ ಜಾತಿಗಳಿಗೆ ಸೇರಿದವರಾಗಿರಬೇಕು. ಅಸಕ್ತರು 18 ರಿಂದ 25 ವರ್ಷದೊಳಗಿನವರಾಗಿರಬೇಕು. ಅರ್ಜಿಯನ್ನು ಸಲ್ಲಿಸಲು https://www.kaushalkar.com ಜಾಲತಾಣದಲ್ಲಿ ಸಲ್ಲಿಸಬಹುದಾಗಿದೆ. ಹಾಗೂ 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವ ಅರ್ಜಿದಾರರು ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ಆಗಸ್ಟ್.31…

Read More

ಬೆಂಗಳೂರು: ಪ್ರಯಾಣಿಕರ ಅನುಕೂಲಕ್ಕಾಗಿ ತಮಿಳುನಾಡಿನ ವೆಲಂಕಣಿಯಲ್ಲಿ ನಡೆಯಲಿರುವ ಹಬ್ಬದ ಪ್ರಯುಕ್ತ & ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ವಾಸ್ಕೋ-ಡ-ಗಾಮಾ ಮತ್ತು ತಮಿಳುನಾಡಿನ ವೆಲಂಕಣಿ ನಿಲ್ದಾಣಗಳ ನಡುವೆ ವಿಶೇಷ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆಯು ನಿರ್ಧರಿಸಿದೆ. ರೈಲು ಸಂಖ್ಯೆ 07361/07362 ವಾಸ್ಕೋ-ಡ-ಗಾಮಾ ಮತ್ತು ವೆಲಂಕಣಿ ನಿಲ್ದಾಣಗಳ ನಡುವೆ ವಿಶೇಷ ರೈಲುಗಳನ್ನು ಎರಡು ದಿಕ್ಕಿನಲ್ಲಿ ಒಟ್ಟು 3 ಟ್ರಿಪ್‌ ಓಡಿಸಲಾಗುತ್ತಿದೆ. ರೈಲು ಸಂಖ್ಯೆ 07361 ಆಗಸ್ಟ್ 27 ಮತ್ತು ಸೆಪ್ಟೆಂಬರ್ 2 & 6 ರಂದು ವಾಸ್ಕೋ-ಡ-ಗಾಮಾ ನಿಲ್ದಾಣದಿಂದ ರಾತ್ರಿ 09:55 ಗಂಟೆಗೆ ಹೊರಟು, ಮೂರನೇ ದಿನ ಮಧ್ಯರಾತ್ರಿ 01:30 ಗಂಟೆಗೆ ವೆಲಂಕಣಿ ನಿಲ್ದಾಣವನ್ನು ತಲುಪಲಿದೆ. ಅದೇ ರೀತಿ ರೈಲು ಸಂಖ್ಯೆ 07362 ಆಗಸ್ಟ್ 29, ಸೆಪ್ಟೆಂಬರ್‌ 4 ಮತ್ತು 8 ರಂದು ರಾತ್ರಿ 11:55 ಗಂಟೆಗೆ ವೆಲಂಕಣಿ ನಿಲ್ದಾಣದಿಂದ ಹೊರಟು, ಮೂರನೇ ದಿನ ಮಧ್ಯರಾತ್ರಿ 12:15 ಗಂಟೆಗೆ ವಾಸ್ಕೋ-ಡ-ಗಾಮಾ ನಿಲ್ದಾಣಕ್ಕೆ ಆಗಮಿಸಲಿದೆ. ಈ ರೈಲು ಎರಡು ಮಾರ್ಗದಲ್ಲಿ ಮಡಗಾಂವ್, ಸ್ಯಾನ್ವೋರ್ಡಮ್‌, ಕುಲೆಂ, ಕ್ಯಾಸಲ್ ರಾಕ್, ಲೋಂಡಾ,…

Read More

ಬೆಂಗಳೂರು: ಕಟ್ಟಡ ಕಾರ್ಮಿಕರಿಗೆ ಸೇರಿದಂತ ಅರ್ಜಿ ಸಲ್ಲಿಕೆ ಸೇರಿದಂತೆ ಸೌಲಭ್ಯಗಳಿಗಾಗಿ ಕಾರ್ಮಿಕ ಇಲಾಖೆಗೆ ಅಲೆದಾಡಬೇಕಿತ್ತು. ಶೀಘ್ರವೇ ಇದಕ್ಕೆ ಮುಕ್ತಿ ಹಾಡಲಿದ್ದು, ನಿಮಗಾಗಿ ಅಂಬೇಡ್ಕರ್ ಸೇವಾ ಕೇಂದ್ರವನ್ನು ರಾಜ್ಯ ಸರ್ಕಾರ ಆರಂಭಿಸಲಿದೆ. ಈ ಮೂಲಕ ಕಟ್ಟಡ ಕಾರ್ಮಿಕರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌  ಅವರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಕಾರ್ಮಿಕರ ನೋಂದಣಿ, ಫಲಾನುಭವಿಗಳ ಆಯ್ಕೆ, ನೈಜತೆ ಪರಿಶೀಲನೆ ಮತ್ತಿತರ ಕೆಲಸಗಳನ್ನು ನಿರ್ವಹಿಸಲು ಪ್ರತ್ಯೇಕವಾಗಿ ʼಅಂಬೇಡ್ಕರ್‌ ಸೇವಾ ಕೇಂದ್ರʼವನ್ನು ಅಸ್ತಿತ್ವಕ್ಕೆ ತರಲು ನಿರ್ಧರಿಸಲಾಗಿದೆ ಎಂದಿದ್ದಾರೆ. ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಮಂಡಳಿಯ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. “ರಾಜ್ಯದಲ್ಲಿ 58 ಲಕ್ಷ ಮಂದಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಕಾರ್ಮಿಕರು ಎಂಬುದಾಗಿ ನೋಂದಣಿ ಮಾಡಿಕೊಂಡಿದ್ದರು. ನೈಜತೆ ಪರಿಶೀಲನೆ ಬಳಿಕ 20 ಲಕ್ಷ ಮಂದಿಯ ನೋಂದಣಿ ರದ್ದುಗೊಳಿಸಲಾಗಿದೆ. ಉಳಿದಿರುವ 38 ಲಕ್ಷ ಮಂದಿಯ…

Read More

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧದ 8 ವರ್ಷಗಳ ಹಿಂದಿನ ಅಕ್ರಮ ಗಣಿಗಾರಿಕೆ ಕೇಸ್ ಮರು ಜೀವ ಪಡೆದುಕೊಂಡಿದೆ. ಈ ಪ್ರಕರಣ ಸಂಬಂಧ ಕಾಂಗ್ರೆಸ್ ಪಕ್ಷವು, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಕೆಲ ಗಂಭೀರ ಆರೋಪವನ್ನು ಮಾಡಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಕರ್ನಾಟಕ ಕಾಂಗ್ರೆಸ್ ಪಕ್ಷವು, ಕರ್ನಾಟಕ ಕಂಡ ಅತ್ಯಂತ ಸಾಚಾ ರಾಜಕಾರಿಣಿ ನಾನು ಎಂದುಕೊಳ್ಳುವ HD ಕುಮಾರಸ್ವಾಮಿ ಅವರ ವಿರುದ್ಧ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ತನಿಖೆಗೆ ರಾಜ್ಯಪಾಲರ ಅನುಮತಿ ಕೋರಿತ್ತು ಕರ್ನಾಟಕ ಲೋಕಾಯುಕ್ತ ಎಂದಿದೆ. ಬ್ರದರ್ ಸ್ವಾಮಿಗಳೇ, ಕರ್ನಾಟಕದ ಭೂಮಿಯ ಒಡಲನ್ನು ಭಗೆಯಲು ನಿಮಗೆ ಎಲ್ಲಿಲ್ಲದ ಆಸಕ್ತಿ ಎನ್ನುವುದು ಬಹಳ ಹಿಂದೆಯೇ ನಿರೂಪಿತವಾಗಿದೆಯಲ್ಲವೇ? ಈಗ ಮತ್ತೆ ಕೇಂದ್ರ ಗಣಿ ಸಚಿವರಾಗಲು ಅದೆಷ್ಟು ಲಾಭಿ ನಡೆಸಿದ್ದಿರೋ ಆ ದೇವರಿಗೇ ಗೊತ್ತು ಎಂದು ಹೇಳುವ ಮೂಲಕ ಗಂಭೀರ ಆರೋಪವನ್ನು ಮಾಡಿದೆ. ಗಣಿಗಾರಿಕೆಯ ವಿಷಯ ಎಂದರೆ ಕುಮಾರಸ್ವಾಮಿಯವರಿಗೆ ಅಷ್ಟೊಂದು ಆಸಕ್ತಿ ಇರುವುದರ ಹಿಂದೆ ಗಣಿಗಾರಿಕೆಯಲ್ಲಿ ಲೂಟಿಗಾರಿಕೆಗೆ ಹೆಚ್ಚು ಅವಕಾಶವಿದೆ…

Read More

ಬೆಂಗಳೂರು: “ಜನಪರ ಉದ್ದೇಶ, ಅರ್ಥಗರ್ಭಿತ ಕಾರಣವಿಲ್ಲದ ಬಿಜೆಪಿ, ಜೆಡಿಎಸ್ ಪಾದಯಾತ್ರೆಗೆ ಜನರ ಸ್ಪಂದನೆಯಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಉತ್ತರಿಸಿದರು. “ಎಸ್.ಎಂ ಕೃಷ್ಣ ಅವರು ಕಾವೇರಿ ನೀರಿಗಾಗಿ ಪಾದಯಾತ್ರೆ ಮಾಡಿದ್ದರು. ಭಾರತವನ್ನು ಒಂದುಗೂಡಿಸಲು, ಬೆಲೆ ಏರಿಕೆ, ನಿರುದ್ಯೋಗ ಖಂಡಿಸಿ, ಭ್ರಷ್ಟಾಚಾರ ವಿರುದ್ಧ ರಾಹುಲ್ ಗಾಂಧಿ ಅವರು ಭಾರತ ಜೋಡೋ ಯಾತ್ರೆ ಮಾಡಿದ್ದರು. ನಾವು ಗಣಿ ಲೂಟಿ ಖಂಡಿಸಿ ರಾಜ್ಯ ಹಾಗೂ ದೇಶದ ಸಂಪತ್ತು ರಕ್ಷಣೆಗೆ ಬಳ್ಳಾರಿ ಪಾದಯಾತ್ರೆ ಮಾಡಿದೆವು. ಕಾವೇರಿ ಜಲಾನಯನದ 10 ಜಿಲ್ಲೆಗಳಿಗೆ ನೀರು ಒದಗಿಸುವ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ನಾವು ಪಾದಯಾತ್ರೆ ಮಾಡಿದ್ದೆವು” ಎಂದು ತಿಳಿಸಿದರು. “ಈಗ ಬಿಜೆಪಿ, ಜೆಡಿಎಸ್ ಮಾಡುತ್ತಿರುವ ಪಾದಯಾತ್ರೆ ಸದ್ದಿದೆಯಾ? ಅವರ ಪಾದಯಾತ್ರೆಯ ವಿಚಾರವೇನು? ಹಿಂದುಳಿದ ವರ್ಗದ ನಾಯಕ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದನ್ನು ಸಹಿಸಲಾಗದೇ ಅವರು ಪಾದಯಾತ್ರೆ ಮಾಡುತ್ತಿದ್ದಾರೆ. ಅವರ ಪಾದಯಾತ್ರೆಯಲ್ಲಿ ಬೇರೆ ಏನಾದರೂ ಮಹತ್ವದ ವಿಚಾರವಿದೆಯೇ? ಅವರ ತಟ್ಟೆಯಲ್ಲೇ ಹೆಗ್ಗಣ…

Read More

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ಸಹೋದರರಿಗೆ ಸಂಬಂಧಿಸಿದಂತ ದಾಖಲೆಗಳನ್ನು ಖಂಡಿತವಾಗಿಯೂ ಬಿಡುಗಡೆ ಮಾಡಲೇ ಬೇಕು. ಅದಕ್ಕೆ ಶುಭ ದಿನ, ಗಳಿಗೆ, ನಕ್ಷೆತ್ರ ನೋಡಿಕೊಂಡು ಬಿಡುಗಡೆ ಮಾಡಬೇಕು ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕುಮಾರಸ್ವಾಮಿ ಸಹೋದರನ ಆಶ್ತಿ ದಾಖಲೆ ಬಿಡುಗಡೆ ಮಾಡುತ್ತೀರಾ ಎಂದು ಕೇಳಿದಾಗ, “ಖಂಡಿತವಾಗಿಯೂ ಮಾಡಲೇಬೇಕು. ಅದಕ್ಕೆ ಶುಭದಿನ, ಶುಭ ಗಳಿಗೆ, ಶುಭ ನಕ್ಷತ್ರ ನೋಡಿ ಬಿಡುಗಡೆ ಮಾಡಬೇಕು. ಅದಕ್ಕಿಂತ ಮುಂಚೆ ನಮ್ಮ ಬಗ್ಗೆ ಮಾಡುತ್ತಿರುವ ಆರೋಪಗಳ ಬಗ್ಗೆ ದಾಖಲೆ ಬಿಚ್ಚಿ ಎಂದು ಹೇಳಿದ್ದೇನೆ” ಎಂದು ತಿಳಿಸಿದರು. ಸದನದಲ್ಲಿ ಚರ್ಚೆ ಮಾಡಲು ನೀವು ಆಹ್ವಾನ ಕೊಟ್ಟರೂ ಅವರು ಬರಲಿಲ್ಲ ಎಂದು ಕೇಳಿದಾಗ, “ಈ ವಿಚಾರವಾಗಿ ಚರ್ಚೆ ಮಾಡಲು ಎರಡು ಬಾರಿ ಅಧಿವೇಶನಕ್ಕೆ ಬನ್ನಿ ಎಂದು ಆಹ್ವಾನ ನೀಡಿದೆ. ಅವರು ಬರಲಿಲ್ಲ. ಈಗ ಅವರ ಅಣ್ಣನ ಬಳಿ ದಾಖಲೆ ಕೊಟ್ಟು ಕಳಿಸಿ ಚರ್ಚೆ ಮಾಡಲಿ. ನಾನು ಸುಮ್ಮನೆ ಮಾಧ್ಯಮಗಳ ಮುಂದೆ ಮಾತನಾಡಿದರೆ ಅದು ಒಂದೆರಡು…

Read More

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ನನ್ನ ವಿರುದ್ಧದ ಕುಮಾರಸ್ವಾಮಿ ಆರೋಪಕ್ಕೆ ದಾಖಲೆ ಎಲ್ಲಿವೆ? ಎಂಬುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಉತ್ತರಿಸಿದರು. “ಈಗ ಅವರ ಪಾದಯಾತ್ರೆ ವೇಳೆ ಬಿಜೆಪಿ ಕಾಲದಲ್ಲಿ ಆಗಿರುವ ಭ್ರಷ್ಟಾಚಾರದ ಆರೋಪಗಳ ಬಗ್ಗೆ ನಾವು ಕೇಳಿರುವ ಪ್ರಶ್ನೆಗಳಿಗೆ ಅವರು ಉತ್ತರಿಸಿಲ್ಲ. ಕುಮಾರಸ್ವಾಮಿ ಅವರಿಗೆ ಪ್ರತ್ಯೇಕವಾಗಿ ಒಂದಷ್ಟು ಪ್ರಶ್ನೆ ಮಾಡಿದ್ದೇವೆ. ಅವರು ನನ್ನ ಬಗ್ಗೆ ನಮ್ಮ ಕುಟುಂಬದವರ ಬಗ್ಗೆ ಏನಾದರೂ ಟೀಕೆ ಮಾಡಲಿ. ಅವರು ನನ್ನ ಯಾವುದೇ ಪ್ರಶ್ನೆಗಳಿಗೆ ಉತ್ತರ ನೀಡುತ್ತಿಲ್ಲ. ನಾನು ಅವರ ಸಹೋದರನ ಆಸ್ತಿ ಹೇಗೆ ಬಂತು, ಎಲ್ಲಿಂದ ಬಂತು ಎಂಬುದನ್ನು ಬಿಚ್ಚಿಡಬೇಕಲ್ಲವೇ? ನನ್ನ ಮೇಲೆ ಅವರು ಅನೇಕ ಆರೋಪ ಮಾಡುತ್ತಿದ್ದಾರೆ. ಆ ಆರೋಪಗಳಿಗೆ ದಾಖಲೆ ಬೇಕಲ್ಲವೇ? ಅವರ ಅಕ್ರಮಗಳ ಬಗ್ಗೆ ಮಾಧ್ಯಮಗಳೇ ವರದಿ ಮಾಡುತ್ತಿವೆಯಲ್ಲ” ಎಂದು ಕಿಡಿಕಾರಿದರು. ಕುಮಾರಸ್ವಾಮಿ ಪಲಾಯನವಾದಿಯಾಗಿದ್ದಾರಾ ಎಂದು ಕೇಳಿದಾಗ, “ಹಾಗೆಂದು ನಾನು ಹೇಳುತ್ತಿಲ್ಲ. ಕುಮಾರಸ್ವಾಮಿ ಅವರ ಬಾಯಲ್ಲಿ…

Read More

ಹಾವೇರಿ: ಮಳೆಯಿಂದಾಗಿ ಶಿಥಿಲಾವಸ್ಥೆಗೊಂಡಿದ್ದಂತ ಪ್ರಾಥಮಿಕ ಆರೋಗ್ಯ ಕೇಂದ್ರದ ಹೊಸ ಕಟ್ಟಡಕ್ಕೆ ಮನವಿ ಮಾಡಿದ್ದರೂ, ಮಂಜೂರು ಮಾಡದ ಕಾರಣ ಅದೇ ಕಟ್ಟಡದಲ್ಲಿ ರೋಗಿಗಳ ಚಿಕಿತ್ಸೆ ಮುಂದುವರೆಸಲಾಗಿತ್ತು. ಶಿಥಿಲಾವಸ್ಥೆಯಲ್ಲಿದ್ದಂತ ಪಾಥಮಿಕ ಆರೋಗ್ಯ ಕೇಂದ್ರದ ಮೇಲ್ಛಾವಣಿ ವೈದ್ಯರ ಮೇಲೆಯೇ ಕುಸಿದು ಬಿದ್ದಿರುವಂತ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲ್ಲೂಕಿನ ಕೋಡಾ ಗ್ರಾಮದ ವ್ಯಾಪ್ತಿಯಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರ ಮಳೆಯಿಂದಾಗಿ ಶಿಥಿಲಾವಸ್ಥೆಯನ್ನು ತಲುಪಿತ್ತು. ಈ ಕಟ್ಟಡವನ್ನು ಬದಲಾಯಿಸಿ ಹೊಸ ಕಟ್ಟಡವನ್ನು ನೀಡುವಂತೆ ಆರೋಗ್ಯ ಇಲಾಖೆಗೆ ಮನವಿ ಸಲ್ಲಿಸಿದ್ದರೂ ಅದು ಸಾಧ್ಯವಾಗಿರಲಿಲ್ಲ. ಶಿಥಿಲಾವಸ್ಥೆಯಲ್ಲಿದ್ದಂತ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲೇ ರೋಗಿಗಳಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಂತ ವೇಳೆಯಲ್ಲೇ ಮೇಲ್ಛಾವಣಿ ಕುಸಿದು ಬಿದ್ದಿರುವುದಾಗಿ ತಿಳಿದು ಬಂದಿದೆ. ಕುಸಿತದ ನಂತ್ರ ಎಚ್ಚೆತ್ತುಕೊಂಡು ಪ್ರತ್ಯೇಕ ಶೆಡ್ ನಿರ್ಮಿಸಿ, ಅಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕೋಟಾ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುಮಾರು 25 ಗ್ರಾಮದ ಜನರು ಚಿಕಿತ್ಸೆಗಾಗಿ ಆಗಮಿಸುತ್ತಿರುವುದಾಗಿ ಹೇಳಲಾಗುತ್ತಿದೆ. ಸದ್ಯ ಎರಡೇ ಕೊಠಡಿಯಲ್ಲಿ ರೋಗಿಗಳಿಗೆ ಚಿಕಿತ್ಸೆ, ಔಷಧಿ, ಹಾರೈಕೆಯಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಗಳು…

Read More