Author: kannadanewsnow09

ಬೆಂಗಳೂರು: ಕಟ್ಟಡ ಕಾರ್ಮಿಕರಿಗೆ ಸೇರಿದಂತ ಅರ್ಜಿ ಸಲ್ಲಿಕೆ ಸೇರಿದಂತೆ ಸೌಲಭ್ಯಗಳಿಗಾಗಿ ಕಾರ್ಮಿಕ ಇಲಾಖೆಗೆ ಅಲೆದಾಡಬೇಕಿತ್ತು. ಶೀಘ್ರವೇ ಇದಕ್ಕೆ ಮುಕ್ತಿ ಹಾಡಲಿದ್ದು, ನಿಮಗಾಗಿ ಅಂಬೇಡ್ಕರ್ ಸೇವಾ ಕೇಂದ್ರವನ್ನು ರಾಜ್ಯ ಸರ್ಕಾರ ಆರಂಭಿಸಲಿದೆ. ಈ ಮೂಲಕ ಕಟ್ಟಡ ಕಾರ್ಮಿಕರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌  ಅವರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಕಾರ್ಮಿಕರ ನೋಂದಣಿ, ಫಲಾನುಭವಿಗಳ ಆಯ್ಕೆ, ನೈಜತೆ ಪರಿಶೀಲನೆ ಮತ್ತಿತರ ಕೆಲಸಗಳನ್ನು ನಿರ್ವಹಿಸಲು ಪ್ರತ್ಯೇಕವಾಗಿ ʼಅಂಬೇಡ್ಕರ್‌ ಸೇವಾ ಕೇಂದ್ರʼವನ್ನು ಅಸ್ತಿತ್ವಕ್ಕೆ ತರಲು ನಿರ್ಧರಿಸಲಾಗಿದೆ ಎಂದಿದ್ದಾರೆ. ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಮಂಡಳಿಯ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. “ರಾಜ್ಯದಲ್ಲಿ 58 ಲಕ್ಷ ಮಂದಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಕಾರ್ಮಿಕರು ಎಂಬುದಾಗಿ ನೋಂದಣಿ ಮಾಡಿಕೊಂಡಿದ್ದರು. ನೈಜತೆ ಪರಿಶೀಲನೆ ಬಳಿಕ 20 ಲಕ್ಷ ಮಂದಿಯ ನೋಂದಣಿ ರದ್ದುಗೊಳಿಸಲಾಗಿದೆ. ಉಳಿದಿರುವ 38 ಲಕ್ಷ ಮಂದಿಯ…

Read More

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧದ 8 ವರ್ಷಗಳ ಹಿಂದಿನ ಅಕ್ರಮ ಗಣಿಗಾರಿಕೆ ಕೇಸ್ ಮರು ಜೀವ ಪಡೆದುಕೊಂಡಿದೆ. ಈ ಪ್ರಕರಣ ಸಂಬಂಧ ಕಾಂಗ್ರೆಸ್ ಪಕ್ಷವು, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಕೆಲ ಗಂಭೀರ ಆರೋಪವನ್ನು ಮಾಡಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಕರ್ನಾಟಕ ಕಾಂಗ್ರೆಸ್ ಪಕ್ಷವು, ಕರ್ನಾಟಕ ಕಂಡ ಅತ್ಯಂತ ಸಾಚಾ ರಾಜಕಾರಿಣಿ ನಾನು ಎಂದುಕೊಳ್ಳುವ HD ಕುಮಾರಸ್ವಾಮಿ ಅವರ ವಿರುದ್ಧ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ತನಿಖೆಗೆ ರಾಜ್ಯಪಾಲರ ಅನುಮತಿ ಕೋರಿತ್ತು ಕರ್ನಾಟಕ ಲೋಕಾಯುಕ್ತ ಎಂದಿದೆ. ಬ್ರದರ್ ಸ್ವಾಮಿಗಳೇ, ಕರ್ನಾಟಕದ ಭೂಮಿಯ ಒಡಲನ್ನು ಭಗೆಯಲು ನಿಮಗೆ ಎಲ್ಲಿಲ್ಲದ ಆಸಕ್ತಿ ಎನ್ನುವುದು ಬಹಳ ಹಿಂದೆಯೇ ನಿರೂಪಿತವಾಗಿದೆಯಲ್ಲವೇ? ಈಗ ಮತ್ತೆ ಕೇಂದ್ರ ಗಣಿ ಸಚಿವರಾಗಲು ಅದೆಷ್ಟು ಲಾಭಿ ನಡೆಸಿದ್ದಿರೋ ಆ ದೇವರಿಗೇ ಗೊತ್ತು ಎಂದು ಹೇಳುವ ಮೂಲಕ ಗಂಭೀರ ಆರೋಪವನ್ನು ಮಾಡಿದೆ. ಗಣಿಗಾರಿಕೆಯ ವಿಷಯ ಎಂದರೆ ಕುಮಾರಸ್ವಾಮಿಯವರಿಗೆ ಅಷ್ಟೊಂದು ಆಸಕ್ತಿ ಇರುವುದರ ಹಿಂದೆ ಗಣಿಗಾರಿಕೆಯಲ್ಲಿ ಲೂಟಿಗಾರಿಕೆಗೆ ಹೆಚ್ಚು ಅವಕಾಶವಿದೆ…

Read More

ಬೆಂಗಳೂರು: “ಜನಪರ ಉದ್ದೇಶ, ಅರ್ಥಗರ್ಭಿತ ಕಾರಣವಿಲ್ಲದ ಬಿಜೆಪಿ, ಜೆಡಿಎಸ್ ಪಾದಯಾತ್ರೆಗೆ ಜನರ ಸ್ಪಂದನೆಯಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಉತ್ತರಿಸಿದರು. “ಎಸ್.ಎಂ ಕೃಷ್ಣ ಅವರು ಕಾವೇರಿ ನೀರಿಗಾಗಿ ಪಾದಯಾತ್ರೆ ಮಾಡಿದ್ದರು. ಭಾರತವನ್ನು ಒಂದುಗೂಡಿಸಲು, ಬೆಲೆ ಏರಿಕೆ, ನಿರುದ್ಯೋಗ ಖಂಡಿಸಿ, ಭ್ರಷ್ಟಾಚಾರ ವಿರುದ್ಧ ರಾಹುಲ್ ಗಾಂಧಿ ಅವರು ಭಾರತ ಜೋಡೋ ಯಾತ್ರೆ ಮಾಡಿದ್ದರು. ನಾವು ಗಣಿ ಲೂಟಿ ಖಂಡಿಸಿ ರಾಜ್ಯ ಹಾಗೂ ದೇಶದ ಸಂಪತ್ತು ರಕ್ಷಣೆಗೆ ಬಳ್ಳಾರಿ ಪಾದಯಾತ್ರೆ ಮಾಡಿದೆವು. ಕಾವೇರಿ ಜಲಾನಯನದ 10 ಜಿಲ್ಲೆಗಳಿಗೆ ನೀರು ಒದಗಿಸುವ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ನಾವು ಪಾದಯಾತ್ರೆ ಮಾಡಿದ್ದೆವು” ಎಂದು ತಿಳಿಸಿದರು. “ಈಗ ಬಿಜೆಪಿ, ಜೆಡಿಎಸ್ ಮಾಡುತ್ತಿರುವ ಪಾದಯಾತ್ರೆ ಸದ್ದಿದೆಯಾ? ಅವರ ಪಾದಯಾತ್ರೆಯ ವಿಚಾರವೇನು? ಹಿಂದುಳಿದ ವರ್ಗದ ನಾಯಕ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದನ್ನು ಸಹಿಸಲಾಗದೇ ಅವರು ಪಾದಯಾತ್ರೆ ಮಾಡುತ್ತಿದ್ದಾರೆ. ಅವರ ಪಾದಯಾತ್ರೆಯಲ್ಲಿ ಬೇರೆ ಏನಾದರೂ ಮಹತ್ವದ ವಿಚಾರವಿದೆಯೇ? ಅವರ ತಟ್ಟೆಯಲ್ಲೇ ಹೆಗ್ಗಣ…

Read More

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ಸಹೋದರರಿಗೆ ಸಂಬಂಧಿಸಿದಂತ ದಾಖಲೆಗಳನ್ನು ಖಂಡಿತವಾಗಿಯೂ ಬಿಡುಗಡೆ ಮಾಡಲೇ ಬೇಕು. ಅದಕ್ಕೆ ಶುಭ ದಿನ, ಗಳಿಗೆ, ನಕ್ಷೆತ್ರ ನೋಡಿಕೊಂಡು ಬಿಡುಗಡೆ ಮಾಡಬೇಕು ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕುಮಾರಸ್ವಾಮಿ ಸಹೋದರನ ಆಶ್ತಿ ದಾಖಲೆ ಬಿಡುಗಡೆ ಮಾಡುತ್ತೀರಾ ಎಂದು ಕೇಳಿದಾಗ, “ಖಂಡಿತವಾಗಿಯೂ ಮಾಡಲೇಬೇಕು. ಅದಕ್ಕೆ ಶುಭದಿನ, ಶುಭ ಗಳಿಗೆ, ಶುಭ ನಕ್ಷತ್ರ ನೋಡಿ ಬಿಡುಗಡೆ ಮಾಡಬೇಕು. ಅದಕ್ಕಿಂತ ಮುಂಚೆ ನಮ್ಮ ಬಗ್ಗೆ ಮಾಡುತ್ತಿರುವ ಆರೋಪಗಳ ಬಗ್ಗೆ ದಾಖಲೆ ಬಿಚ್ಚಿ ಎಂದು ಹೇಳಿದ್ದೇನೆ” ಎಂದು ತಿಳಿಸಿದರು. ಸದನದಲ್ಲಿ ಚರ್ಚೆ ಮಾಡಲು ನೀವು ಆಹ್ವಾನ ಕೊಟ್ಟರೂ ಅವರು ಬರಲಿಲ್ಲ ಎಂದು ಕೇಳಿದಾಗ, “ಈ ವಿಚಾರವಾಗಿ ಚರ್ಚೆ ಮಾಡಲು ಎರಡು ಬಾರಿ ಅಧಿವೇಶನಕ್ಕೆ ಬನ್ನಿ ಎಂದು ಆಹ್ವಾನ ನೀಡಿದೆ. ಅವರು ಬರಲಿಲ್ಲ. ಈಗ ಅವರ ಅಣ್ಣನ ಬಳಿ ದಾಖಲೆ ಕೊಟ್ಟು ಕಳಿಸಿ ಚರ್ಚೆ ಮಾಡಲಿ. ನಾನು ಸುಮ್ಮನೆ ಮಾಧ್ಯಮಗಳ ಮುಂದೆ ಮಾತನಾಡಿದರೆ ಅದು ಒಂದೆರಡು…

Read More

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ನನ್ನ ವಿರುದ್ಧದ ಕುಮಾರಸ್ವಾಮಿ ಆರೋಪಕ್ಕೆ ದಾಖಲೆ ಎಲ್ಲಿವೆ? ಎಂಬುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಉತ್ತರಿಸಿದರು. “ಈಗ ಅವರ ಪಾದಯಾತ್ರೆ ವೇಳೆ ಬಿಜೆಪಿ ಕಾಲದಲ್ಲಿ ಆಗಿರುವ ಭ್ರಷ್ಟಾಚಾರದ ಆರೋಪಗಳ ಬಗ್ಗೆ ನಾವು ಕೇಳಿರುವ ಪ್ರಶ್ನೆಗಳಿಗೆ ಅವರು ಉತ್ತರಿಸಿಲ್ಲ. ಕುಮಾರಸ್ವಾಮಿ ಅವರಿಗೆ ಪ್ರತ್ಯೇಕವಾಗಿ ಒಂದಷ್ಟು ಪ್ರಶ್ನೆ ಮಾಡಿದ್ದೇವೆ. ಅವರು ನನ್ನ ಬಗ್ಗೆ ನಮ್ಮ ಕುಟುಂಬದವರ ಬಗ್ಗೆ ಏನಾದರೂ ಟೀಕೆ ಮಾಡಲಿ. ಅವರು ನನ್ನ ಯಾವುದೇ ಪ್ರಶ್ನೆಗಳಿಗೆ ಉತ್ತರ ನೀಡುತ್ತಿಲ್ಲ. ನಾನು ಅವರ ಸಹೋದರನ ಆಸ್ತಿ ಹೇಗೆ ಬಂತು, ಎಲ್ಲಿಂದ ಬಂತು ಎಂಬುದನ್ನು ಬಿಚ್ಚಿಡಬೇಕಲ್ಲವೇ? ನನ್ನ ಮೇಲೆ ಅವರು ಅನೇಕ ಆರೋಪ ಮಾಡುತ್ತಿದ್ದಾರೆ. ಆ ಆರೋಪಗಳಿಗೆ ದಾಖಲೆ ಬೇಕಲ್ಲವೇ? ಅವರ ಅಕ್ರಮಗಳ ಬಗ್ಗೆ ಮಾಧ್ಯಮಗಳೇ ವರದಿ ಮಾಡುತ್ತಿವೆಯಲ್ಲ” ಎಂದು ಕಿಡಿಕಾರಿದರು. ಕುಮಾರಸ್ವಾಮಿ ಪಲಾಯನವಾದಿಯಾಗಿದ್ದಾರಾ ಎಂದು ಕೇಳಿದಾಗ, “ಹಾಗೆಂದು ನಾನು ಹೇಳುತ್ತಿಲ್ಲ. ಕುಮಾರಸ್ವಾಮಿ ಅವರ ಬಾಯಲ್ಲಿ…

Read More

ಹಾವೇರಿ: ಮಳೆಯಿಂದಾಗಿ ಶಿಥಿಲಾವಸ್ಥೆಗೊಂಡಿದ್ದಂತ ಪ್ರಾಥಮಿಕ ಆರೋಗ್ಯ ಕೇಂದ್ರದ ಹೊಸ ಕಟ್ಟಡಕ್ಕೆ ಮನವಿ ಮಾಡಿದ್ದರೂ, ಮಂಜೂರು ಮಾಡದ ಕಾರಣ ಅದೇ ಕಟ್ಟಡದಲ್ಲಿ ರೋಗಿಗಳ ಚಿಕಿತ್ಸೆ ಮುಂದುವರೆಸಲಾಗಿತ್ತು. ಶಿಥಿಲಾವಸ್ಥೆಯಲ್ಲಿದ್ದಂತ ಪಾಥಮಿಕ ಆರೋಗ್ಯ ಕೇಂದ್ರದ ಮೇಲ್ಛಾವಣಿ ವೈದ್ಯರ ಮೇಲೆಯೇ ಕುಸಿದು ಬಿದ್ದಿರುವಂತ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲ್ಲೂಕಿನ ಕೋಡಾ ಗ್ರಾಮದ ವ್ಯಾಪ್ತಿಯಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರ ಮಳೆಯಿಂದಾಗಿ ಶಿಥಿಲಾವಸ್ಥೆಯನ್ನು ತಲುಪಿತ್ತು. ಈ ಕಟ್ಟಡವನ್ನು ಬದಲಾಯಿಸಿ ಹೊಸ ಕಟ್ಟಡವನ್ನು ನೀಡುವಂತೆ ಆರೋಗ್ಯ ಇಲಾಖೆಗೆ ಮನವಿ ಸಲ್ಲಿಸಿದ್ದರೂ ಅದು ಸಾಧ್ಯವಾಗಿರಲಿಲ್ಲ. ಶಿಥಿಲಾವಸ್ಥೆಯಲ್ಲಿದ್ದಂತ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲೇ ರೋಗಿಗಳಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಂತ ವೇಳೆಯಲ್ಲೇ ಮೇಲ್ಛಾವಣಿ ಕುಸಿದು ಬಿದ್ದಿರುವುದಾಗಿ ತಿಳಿದು ಬಂದಿದೆ. ಕುಸಿತದ ನಂತ್ರ ಎಚ್ಚೆತ್ತುಕೊಂಡು ಪ್ರತ್ಯೇಕ ಶೆಡ್ ನಿರ್ಮಿಸಿ, ಅಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕೋಟಾ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುಮಾರು 25 ಗ್ರಾಮದ ಜನರು ಚಿಕಿತ್ಸೆಗಾಗಿ ಆಗಮಿಸುತ್ತಿರುವುದಾಗಿ ಹೇಳಲಾಗುತ್ತಿದೆ. ಸದ್ಯ ಎರಡೇ ಕೊಠಡಿಯಲ್ಲಿ ರೋಗಿಗಳಿಗೆ ಚಿಕಿತ್ಸೆ, ಔಷಧಿ, ಹಾರೈಕೆಯಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಗಳು…

Read More

ಬೆಂಗಳೂರು: ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಹಾಗೂ ನಟ ಪವನ್ ಕಲ್ಯಾಣ್ ಅವರು ಇಂದು ವಿಧಾನಸೌಧಕ್ಕೆ ಆಗಮಿಸಿದ್ದರು. ಅಲ್ಲಿ ನಡೆದಂತ ಸಭೆಯಲ್ಲಿ ಭಾಗಿಯಾಗಿ ವಾಪಾಸ್ ತೆರಳುತ್ತಿದ್ದಂತ ವೇಳೆಯಲ್ಲಿ ನೂಕು ನುಗ್ಗಲು ಉಂಟಾದ ಪರಿಣಾಮ ಸಿಎಸ್ ಕಚೇರಿ ಗ್ಲಾಸ್ ಪುಡಿ ಪುಡಿಯಾಗಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ವಿಧಾನಸೌಧದಲ್ಲಿನ ಸಭೆಯೊಂದರಲ್ಲಿ ಭಾಗಿಯಾಗುವುದಕ್ಕೆ ಆಂಧ್ರ ಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ ಆಗಮಿಸಿದ್ದರು. ಇಂದಿನ ಸಭೆಯಲ್ಲಿ ಭಾಗಿಯಾದ ಬಳಿಕ, ವಿಧಾನಸೌಧದಲ್ಲಿ ತೆರಳುತ್ತಿದ್ದಂತ ವೇಳೆಯಲ್ಲಿ ಭಾರೀ ನೂಕು ನುಗ್ಗಲೇ ಉಂಟಾಗಿದೆ. ಪವನ್ ಕಲ್ಯಾಣ್ ವಿಧಾನಸೌಧದಿಂದ ಹೊರಗೆ ತೆರಳುತ್ತಿದ್ದಂತ ವೇಳೆಯಲ್ಲಿ ನೂಗು ನುಗ್ಗಲು ಉಂಟಾಗಿದೆ. ಈ ವೇಳೆಯಲ್ಲಿ ಸಿಎಸ್ ಕಚೇರಿಯ ಕಿಟಕಿಯ ಗ್ಲಾಸ್ ಪುಡಿ ಪುಡಿಯಾಗಿರುವುದಾಗಿ ತಿಳಿದು ಬಂದಿದೆ. ಅರಣ್ಯ ಸಂರಕ್ಷಣೆ- ಈಶ್ವರ ಖಂಡ್ರೆ ಕಾರ್ಯಕ್ಕೆ ಪವನ್ ಕಲ್ಯಾಣ್ ಮೆಚ್ಚುಗೆ ಬೆಂಗಳೂರು : ಪರಿಸರ, ಪ್ರಕೃತಿ ಮತ್ತು ಅರಣ್ಯ ಸಂರಕ್ಷಣೆಗೆ ಕರ್ನಾಟಕದ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಗಿರುವ ಒಲವು ಪ್ರೀತಿ ಮತ್ತು ಬದ್ಧತೆಗೆ ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್…

Read More

ಬೆಂಗಳೂರು : ಅಂಬೇಡ್ಕರ್ ರವರು ಎಂದೆಂದಿಗೂ ಪ್ರಸ್ತುತ. ಈ ಬಾರಿಯ ಫಲಪುಷ್ಪ ಪ್ರದರ್ಶನ ಜನರು ಸಂವಿಧಾನಗಳ ಆಶಯಗಳನ್ನರಿಯಲು ಅಪೂರ್ವ ಅವಕಾಶ ಒದಗಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಿಷಯಾಧಾರಿತ ಸ್ವಾತಂತ್ರ್ಯೋತ್ಸವ 216ನೇ ಫಲಪುಷ್ಪ ಪ್ರದರ್ಶನ ಉದ್ಘಾಟಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು. ಯಾವುದೇ ಜಾತಿ, ಧರ್ಮ,ಭಾಷೆ, ಪ್ರದೇಶಗಳಿಗೆ ಸೇರಿದ ಎಲ್ಲ ಜನರಿಗೂ ಸಮಾನ ಅವಕಾಶಗಳು ದೊರೆಯಬೇಕು. ಜನರಿಗೆ ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ದೊರೆತಾಗ ಮಾತ್ರ ರಾಜಕೀಯ ಸ್ವಾತಂತ್ರ್ಯ ಗಳಿಸಲು ಸಾಧ್ಯ ಎಂಬುದರಲ್ಲಿ ನಂಬಿಕೆಯಿರಿಸಿದ್ದರು. ಅಂಬೇಡ್ಕರ್ ರವರ ಬಾಲ್ಯದಿಂದ ತಮ್ಮ ಜೀವಿತಾವಧಿಯಲ್ಲಿನ ಪ್ರಮುಖ ಸಾಧನೆಗಳನ್ನು ವಿವಿಧ ರೂಪದಲ್ಲಿ ಪ್ರದರ್ಶನದಲ್ಲಿ ಬಿಂಬಿಸಲಾಗಿದ್ದು, ಜನರು ಅವರ ಆಶಯಗಳ ಬಗ್ಗೆ ಅರಿಯಬಹುದಾಗಿದೆ. ಜನರು ಸಂವಿಧಾನದ ಬಗ್ಗೆ ಅರಿವು ಪಡೆದಾಗ ಮಾತ್ರ ಸಂವಿಧಾನದ ರೀತ್ಯ ನಡೆದುಕೊಳ್ಳಲು ಸಾಧ್ಯ. ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿದ್ದ ಅಂಬೇಡ್ಕರ್ ರವರನ್ನು ಸಂವಿಧಾನ ಶಿಲ್ಪಿ ಎಂದು ಕರೆಯಲಾಗುತ್ತದೆ.ಅಂಬೇಡ್ಕರ್ ರವರು ಎಂದೆಂದಿಗೂ ಪ್ರಸ್ತುತ ಎಂದರು. ಆಗಸ್ಟ್ 8 ರಿಂದ 19 ವರೆಗೆ ಲಾಲ್…

Read More

ನವದೆಹಲಿ: ಒಲಿಂಪಿಕ್ ಕ್ರೀಡಾಕೂಟದಲ್ಲಿ ಅಶಿಸ್ತಿನ ವರ್ತನೆ ತೋರಿದ್ದಕ್ಕಾಗಿ ಕುಸ್ತಿಪಟು ಆಂಟಿಮ್ ಪಂಗಲ್ ಅವರನ್ನು ಭಾರತೀಯ ಒಲಿಂಪಿಕ್ ಸಂಸ್ಥೆ ಮೂರು ವರ್ಷಗಳ ಕಾಲ ನಿಷೇಧಿಸಿದೆ ಎಂದು ಪಿಟಿಐ ವರದಿ ಮಾಡಿದೆ. https://twitter.com/PTI_News/status/1821484667649876028 ಇದಕ್ಕೂ ಮೊದಲು, ಪ್ರಮುಖ ಶಿಸ್ತು ಉಲ್ಲಂಘನೆಗಾಗಿ ಅವರನ್ನು ಪ್ಯಾರಿಸ್ನಿಂದ ಗಡೀಪಾರು ಮಾಡಲಾಯಿತು. ಅಲ್ಲಿ ಯುವ ಕುಸ್ತಿಪಟು ತನ್ನ ಅಧಿಕೃತ ಮಾನ್ಯತೆ ಕಾರ್ಡ್ ಅನ್ನು ತನ್ನ ಸಹೋದರಿಗೆ ಹಸ್ತಾಂತರಿಸಿದರು. ಅವರು ಗೇಮ್ಸ್ ವಿಲೇಜ್ನಿಂದ ಹೊರಡುವಾಗ ಭದ್ರತಾ ಸಿಬ್ಬಂದಿಗೆ ಸಿಕ್ಕಿಬಿದ್ದರು. ಈ ಹಿನ್ನಲೆಯಲ್ಲಿ ಭಾರತೀಯ ಒಲಂಪಿಕ್ ಸಂಸ್ಥೆಯು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಒಲಿಂಪಿಕ್ ಕ್ರೀಡಾಕೂಟದಲ್ಲಿ ಅಶಿಸ್ತಿನ ವರ್ತನೆ ತೋರಿದ್ದಕ್ಕಾಗಿ ಕುಸ್ತಿಪಟು ಆಂಟಿಮ್ ಪಂಗಲ್ ಅವರನ್ನು ಮೂರು ವರ್ಷಗಳ ಕಾಲ ನಿಷೇಧಿಸಿ ಆದೇಶ ಹೊರಡಿಸಿದೆ. https://kannadanewsnow.com/kannada/court-summons-110-congress-leaders-including-cm-deputy-cm-to-appear-before-it/ https://kannadanewsnow.com/kannada/big-news-karnataka-high-court-stays-mandatory-service-order-of-pg-doctors-karnataka-high-court/

Read More

ಬೆಂಗಳೂರು: ರಾಹುಲ್ ಗಾಂಧಿಗೆ ಇಡಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದನ್ನು ಖಂಡಿಸಿ ಬೆಂಗಳೂರಿನ ಇಡಿ ಕಚೇರಿಯ ಎದುರು ಸಿಎಂ, ಡಿಸಿಎಂ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದರು. ಈ ಹಿನ್ನಲೆಯಲ್ಲಿ ಅವರ ವಿರುದ್ಧ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ 110 ಕಾಂಗ್ರೆಸ್ ನಾಯಕರು ಖುದ್ಧು ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಸಮನ್ಸ್ ನೀಡಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಇಡಿ ವಿಚಾರಣೆಗೆ ಹಾಜರಾಗುವಂತೆ ನೀಡಿದಂತ ನೋಟಿಸ್ ಖಂಡಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ವಿವಿಧ ಸಚಿವರನ್ನು ಒಳಗೊಂಡು, ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಬೆಂಗಳೂರಲ್ಲಿ ಪ್ರತಿಭಟನೆಯನ್ನ ಇಡಿ ಕಚೇರಿ ಎದುರು ನಡೆಸಿದ್ದರು. ಈ ಪ್ರತಿಭಟನೆ ಸಂಬಂಧ ಕಾನೂನು ಬಾಹಿರವಾಗಿ ಪ್ರತಿಭಟನೆ ನಡೆಸಿದ್ದಕ್ಕಾಗಿ ದೂರು ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವ ಎಂ.ಬಿ ಪಾಟೀಲ್ ಸೇರಿದಂತೆ 110 ಕಾಂಗ್ರೆಸ್ ಮುಖಂಡರಿಗೆ ಆಗಸ್ಟ್.29ರಂದು ಖುದ್ದು ವಿಚಾರಣೆಗೆ…

Read More