Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯ ಸರ್ಕಾರದಿಂದ ಹೊಳೆನರಸೀಪುರ ಉಪ ನೋಂದಣಾಧಿಕಾರಿ ಭಾಸ್ಕರ್ ಚೌರ ಅವರನ್ನು ಸರ್ಕಾರಿ ಸೇವೆಯಿಂದ ವಜಾಗೊಳಿಸಿ ಆದೇಶಿಸಿದೆ. ಈ ಕುರಿತಂತೆ ನೋಂದಣಿ ಮಹಾಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಭಾಸ್ಕರ್ ಚೌರ, ಹಿಂದಿನ ಉಪ ನೋಂದಣಾಧಿಕಾರಿ, ಜಾಲ ಹಾಲಿ ಉಪನೋಂದಣಾಧಿಕಾರಿ, ಉಪ ನೋಂದಣಿ ಕಚೇರಿ, ಹೊಳೆನರಸೀಪುರ ಇವರು ಈ ಹಿಂದೆ ಜಾಲ ಉಪ ನೋಂದಣಿ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾಗ ಇವರ ಮೇಲೆ ಹಿಂದಿನ ಭ್ರಷ್ಟಾಚಾರ ನಿಗ್ರಹದಳ ಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಸರ್ಕಾರಿ ಸೇವೆಯಿಂದ ವಜಾಗೊಳಿಸುತ್ತಿರುವುದಾಗಿ ತಿಳಿಸಿದ್ದಾರೆ. ಅಂದಹಾಗೇ ಹೊಳೆನರಸೀಪುರ ಉಪ ನೋಂದಣಾಧಿಕಾರಿ ಭಾಸ್ಕರ್ ಚೌರ ಅವರು, ಜಾಲ ಉಪ ನೋಂದಣಾಧಿಕಾರಿಯಾಗಿದ್ದಂತ ಸಂದರ್ಭದಲ್ಲಿ ವ್ಯಕ್ತಿಯೊಬ್ಬರಿಂದ ದಾಸ್ತಾವೇಜಿನ ನೋಂದಣಿಗಾಗಿ 25,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಎಸಿಬಿಗೆ ಅಂದು ದೂರು ನೀಡಿದ್ದರು. 25000 ಲಂಚದ ಹಣದಲ್ಲಿ 15000 ನೀಡುವಾಗ ಎಸಿಬಿ ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಸಿಕ್ಕಿಬಿದ್ದಿದ್ದರು. ಅವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಕೇಸ್ ದಾಖಲಾಗಿತ್ತು. ಈ ಕಾರಣಕ್ಕಾಗಿ…
ಬೆಂಗಳೂರು: ರಾಜ್ಯ ಸರ್ಕಾರದಿಂದ ರಾಜ್ಯಾಧ್ಯಂತ ಎಲ್ಲಾ ವಿವಿಧ ಮಾದರಿಯ ಟ್ಯಾಕ್ಸಿಗಳ ಪ್ರಯಾಣ ದರಗಳನ್ನು ಒಂದೇ ಮಾದರಿಯಲ್ಲಿ ನಿಗದಿಗೊಳಿಸಿ ಆದೇಶ ಹೊರಡಿಸಿದೆ. ಈ ಕುರಿತಂತೆ ಸಾರಿಗೆ ಮತ್ತು ರಸ್ತೆ ಸುರಕ್ಷತೆಯ ಆಯುಕ್ತರು ರಾಜ್ಯದ ಎಲ್ಲಾ ಉಪ ಸಾರಿಗೆ ಆಯುಕ್ತರು, ಹಿರಿಯ ಪ್ರಾದೇಶಿಕ, ಪ್ರಾದೇಶಿಕ, ಸಹಾಯಕ ಪ್ರಾದೇಶಿಕ, ಸಾರಿಗೆ ಅಧಿಕಾರಿಗಳು ಮತ್ತು ಕಾರ್ಯದರ್ಶಿಗಳು, ಹೆಚ್ಚುವರಿ ಕಾರ್ಯದರ್ಶಿಗಳು, ಪ್ರಾದೇಶಿಕ ಸಾರಿಗೆ ಪ್ರಾಧಿಕಾರಿಗಳಿಗೆ ಪತ್ರ ಬರೆದು ಸೂಚಿಸಿದ್ದಾರೆ. ಸಾರಿಗೆ ಇಲಾಖೆಯ ಆಯುಕ್ತರು ಹೊರಡಿಸಿರುವಂತ ಆದೇಶದಲ್ಲಿ ಕರ್ನಾಟಕ ರಾಜ್ಯದಲ್ಲಿ ವಿಶೇಷವಾಗಿ ಬೆಂಗಳೂರು ನಗರ ಮಿತಿಯೊಳಗೆ ಆಚರಣೆ ಮಾಡುವ ಎಲ್ಲಾ ಟ್ಯಾಕ್ಸಿ ಸೇವೆಗಳಿಗೆ “ಒಂದು ನಗರ ಒಂದು ದರ” ನೀತಿಯನ್ನು ಅನುಷ್ಠಾಗೊಳಿಸುವಂತೆ ಪತ್ರದಲ್ಲಿ President, Federation of Karnataka State Private Transport Associations, Bangalore ಇವರು ಕೋರಿರುತ್ತಾರೆ ಎಂದಿದ್ದಾರೆ. ಪರಿಶೀಲಿಸಲಾಗಿ, ಈಗಾಗಲೇ ಸರ್ಕಾರವು ಅಧಿಸೂಚನೆಯಲ್ಲಿ ಕರ್ನಾಟಕ ರಾಜ್ಯಾದ್ಯಂತ (ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸಹ ಒಳಗೊಂಡಂತೆ) ಮತ್ತು ಅಗ್ರಿಗೇಟರ್ ನಿಯಮಗಳಡಿ ಆಚರಣೆ ಮಾಡುವ ಎಲ್ಲಾ ವಿವಿಧ ಮಾದರಿಯ ಟ್ಯಾಕ್ಸಿಗಳ ಪ್ರಯಾಣ…
ಮಂಡ್ಯ : ಈ ಬಾರಿ ಶ್ರೀರಂಗಪಟ್ಟಣ ದಸರಾ ಕಾರ್ಯಕ್ರಮವನ್ನು ಕಳೆದ ವರ್ಷಕ್ಕಿಂತ ಈ ಬಾರಿ ಬಹಳ ಅದ್ದೂರಿಯಾಗಿ, ಸಾಂಪ್ರದಾಯಿಕವಾಗಿ, ಸಂಭ್ರಮ ಹಾಗೂ ವಿಜೃಂಭಣೆಯಿಂದ ಆಚರಿಸೋಣ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ತಿಳಿಸಿದರು. ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಶ್ರೀರಂಗಪಟ್ಟಣ ದಸರಾ – 2023 ರ ಆಚರಣೆಯ ಸಂಬಂಧ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. 2024 ನೇ ಸಾಲಿನ ಶ್ರೀರಂಗಪಟ್ಟಣದ ದಸರಾ ಆಚರಣೆ ಕಾರ್ಯಕ್ರಮವನ್ನು ಪ್ರತಿ ವರ್ಷವೂ ಬಹಳ ಅರ್ಥಪೂರ್ಣವಾಗಿ ಆಚರಣೆ ಮಾಡಲಾಗುತ್ತಿದೆ. ಅಕ್ಟೋಬರ್ 4 ರಿಂದ 6 ರವರೆಗೆ 3 ದಿನಗಳ ಕಾಲ ಅಥವಾ ಅಕ್ಟೋಬರ್ 4 ರಿಂದ 8 ರವರೆಗೆ 5 ದಿನಗಳ ಕಾಲ ಕಾರ್ಯಕ್ರಮವನ್ನು ನಡೆಸಬೇಕೇಂದಿದ್ದು, ಇದರಲ್ಲಿ ಎಷ್ಟು ದಿನ ಆಚರಣೆ ಮಾಡಬೇಕು ಎಂದು ಶೀಘ್ರವೇ ನಿರ್ಧರಿಸಲಾಗುವುದು ಎಂದರು. ಈಗಾಗಲೇ ಶ್ರೀರಂಗಪಟ್ಟಣ ದಸರಾ ಆಚರಣೆ 2024 ಕ್ಕೆ ಸಂಬಂಧಿಸಿದಂತೆ ಸ್ವಾಗತ ಸಮಿತಿ, ವೇದಿಕೆ ಸಮಿತಿ, ಆರೋಗ್ಯ ಮತ್ತು ವೈದ್ಯಕೀಯ ಸೇವಾ ಸಮಿತಿ, ಆಹಾರ ಸಮಿತಿ, ಮೆರವಣಿಗೆ…
ಮಂಡ್ಯ : ಸದಾ ವಿದ್ಯಾರ್ಥಿಗಳ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳ ಬಗ್ಗೆ ಯೋಚಿಸುವ ಶಿಕ್ಷಕರಿಗೆ ಶಿಕ್ಷಕರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಹೆಚ್ಚಿನ ಚೈತನ್ಯ ನೀಡುತ್ತದೆ ಎಂದು ಮದ್ದೂರು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಚ್.ಕಾಳೀರಯ್ಯ ಹೇಳಿದರು. ಮದ್ದೂರು ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಸೋಮವಾರ ಶಿಕ್ಷಣ ಇಲಾಖೆಯ ವಿವಿಧ ಸಂಘಗಳಿಂದ ಆಯೋಜಿಸಿದ್ದ ಶಾಲಾ ಶಿಕ್ಷಕರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು. ಶಿಕ್ಷಕರು ಶಾಲೆಯಲ್ಲಿ ಮಕ್ಕಳ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದಲ್ಲಿ ಹೆಚ್ಚಿನ ಗಮನವಿರಿಸುವುದರಿಂದ ಬಹುತೇಕ ಸಂದರ್ಭಗಳಲ್ಲಿ ತಮ್ಮ ಆಸಕ್ತಿಯ ಕ್ರೀಡೆ, ಹವ್ಯಾಸಗಳನ್ನು ಮರೆತು ಬಿಟ್ಟಿರುತ್ತಾರೆ. ಹೀಗಾಗಿ ಇಂತಹ ಕ್ರೀಡಾಕೂಟಗಳು ವೃತ್ತಿ ಜೀವನದಲ್ಲಿ ಚಿರಸ್ಮರಣಿಯವಾಗಿ ಉಳಿಯುತ್ತವೆ. ಹೀಗಾಗಿ ಕ್ರೀಡಾಕೂಟದಲ್ಲಿ ಶಿಕ್ಷಕರು ಉತ್ಸಾಹದಿಂದ ಪಾಲ್ಗೊಂಡಿರುವುದು ಒಳ್ಳೆಯ ಬೆಳವಣಿಗೆ ಎಂದರು. ಕ್ರೀಡೆ ಪರಸ್ಪರರಲ್ಲಿ ಸ್ಪರ್ಧಾತ್ಮಕ ಮನೋಭಾವನೆ ಮೂಡಿಸುವುದಲ್ಲದೆ, ಒತ್ತಡ ನಿಯಂತ್ರಣಕ್ಕೆ ಅವಕಾಶ ಮಾಡಿಕೊಡುತ್ತದೆ. ಇಂದು ಶಿಕ್ಷಕರು ಮಾಡದ ಕೆಲಸವಿಲ್ಲ. ಜನಗಣತಿ, ಚುನಾವಣೆ ಸೇರಿದಂತೆ 42ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ಶಿಕ್ಷಕರು ನಿರ್ವಹಿಸಬೇಕಾಗಿದ್ದು, ಒತ್ತಡ ಹೆಚ್ಚಿರುತ್ತದೆ.…
ಬೆಂಗಳೂರು: ಎನಿವೇರ್ ರಿಜಿಸ್ಟ್ರೇಷನ್ ಸೇವೆ ಈಗ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಲಭ್ಯವಿದೆ. ನಿಮ್ಮ ಜಿಲ್ಲೆಯ ಸಮೀಪವಿರುವ ಯಾವುದೇ ಸಬ್‌ರಿಜಿಸ್ಟ್ರಾರ್ ಕಚೇರಿಯಲ್ಲಿ ನಿಮ್ಮ ದಾಖಲೆಯನ್ನು ನೋಂದಾಯಿಸಿ. ಹಾಗಾದ್ರೇ ಎನಿವೇರ್ ರಿಜಿಸ್ಟ್ರೇಷನ್ ಸೇವೆಯ ಪ್ರಯೋಜನ ಏನು ಎನ್ನುವ ಬಗ್ಗೆ ಮುಂದೆ ಓದಿ. ಸೆಪ್ಟಂಬರ್.2ರ ಇಂದಿನಿಂದ “ಎನಿವೇರ್ ನೋಂದಣಿ” ವ್ಯವಸ್ಥೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆಯೂ ಮಾಹಿತಿ ನೀಡಿದ ಅವರು, “ರಾಜ್ಯದಲಿ 252 ಉಪ ನೋಂದಣಾಧಿಕಾರಿ (ಸಬ್ ರಿಜಿಸ್ಟ್ರಾರ್) ಕಚೇರಿ ಇದೆ. ಆದರೆ, ಈ ಪೈಕಿ 50 ಕಚೇರಿಗಳಲ್ಲಿ ಮಾತ್ರ ಸಿಬ್ಬಂದಿಗಳಿಗೆ ಹೆಚ್ಚು ಕೆಲಸದ ಒತ್ತಡ ಇದೆ. ಹೀಗಾಗಿ ಆ ಕಚೇರಿಗಳಿಗೆ ಬರುವ ಜನರಿಗೆ ಅನಾನುಕೂಲವಾಗುತ್ತಿದೆ. ಸಮಯಕ್ಕೆ ಸರಿಯಾಗಿ ಕೆಲಸ ಆಗಲ್ಲ, ಕಾಯಬೇಕು, ಮಧ್ಯವರ್ತಿಗಳ ಕಾಟ ಇದೆ ಎಂಬ ದೂರುಗಳಿವೆ. ಇದೇ ಕಾರಣಕ್ಕೆ “ಎನಿವೇರ್ ನೋಂದಣಿ” ವ್ಯವಸ್ಥೆಗೆ ಚಾಲನೆ ನೀಡಲಾಗಿದೆ ಎಂದರು. ಆಸ್ತಿ ನೋಂದಣಿಗೆ ಮುಂದಾಗುವ ವ್ಯಕ್ತಿ ತನ್ನ ಜಿಲ್ಲೆ ವ್ಯಾಪ್ತಿಯ, ತನಗೆ ಅನುಕೂಲವಾಗುವ ಹಾಗೂ…
ಬೆಂಗಳೂರು : “ಐದು ಗ್ಯಾರಂಟಿ ಯೋಜನೆಗಳ ಜೊತೆಯಲ್ಲಿ ಆರೋಗ್ಯ ಮತ್ತು ಶಿಕ್ಷಣದ ಗ್ಯಾರಂಟಿಯನ್ನು ಕಾಂಗ್ರೆಸ್ ಸರ್ಕಾರ ನೀಡುತ್ತಿದೆ. ಗ್ಯಾರಂಟಿಗಳನ್ನು ನೀಡಿದ್ದು ಚುನಾವಣೆಗಲ್ಲ. ಜನರ ಬದುಕಿನಲ್ಲಿ ಬದಲಾವಣೆ ತರಲು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಶಿವಾಜಿನಗರದ ಚರಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಕರ್ನಾಟಕವನ್ನು ಹಸಿವು, ಬಡತನ ಮತ್ತು ಅಸಮಾನತೆ ಮುಕ್ತ ರಾಜ್ಯ ಮಾಡಬೇಕೆಂಬುದು ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಗುರಿ” ಎಂದರು. “ಸಿದ್ದರಾಮಯ್ಯ ಅವರು ಆರೋಗ್ಯ ಇಲಾಖೆಗೆ ಸಾಕಷ್ಟು ಅನುದಾನ ನೀಡುತ್ತಿದ್ದಾರೆ. ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಶರಣ ಪ್ರಕಾಶ ಪಾಟೀಲರು ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ಭಾವನೆಗೆ ಕೆಲಸ ಮಾಡುತ್ತಿಲ್ಲ. ಬದುಕಿಗಾಗಿ ಮಾಡುತ್ತಿದೆ. ರಾಜ್ಯದ ಪ್ರತಿ ಕುಟುಂಬಕ್ಕೆ ತಿಂಗಳಿಗೆ 5 ಸಾವಿರ ಹಣ ಉಳಿಸುತ್ತಿದ್ದೇವೆ” ಎಂದರು. ಹೆಲ್ತ್ ಟೂರಿಸಂಗೆ ಕರ್ನಾಟಕ ಹೆಸರಾಗುತ್ತಿದೆ “ನಮ್ಮ ರಾಜ್ಯದಲ್ಲಿ 70 ಕ್ಕೂ ಹೆಚ್ಚು ವೈದ್ಯಕೀಯ ಕಾಲೇಜುಗಳಿವೆ. ಸುಮಾರು 1 ಸಾವಿರಕ್ಕೂ…
ಬೆಂಗಳೂರು: ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ಓಣಂ ಹಬ್ಬದ ಸಂದರ್ಭದಲ್ಲಿ ಹೆಚ್ಚುವರಿ ಪ್ರಯಾಣಿಕರ ದಟ್ಟಣೆಯನ್ನು ನಿವಾರಿಸಲು, ದಕ್ಷಿಣ ರೈಲ್ವೆ ಎರ್ನಾಕುಲಂ ಮತ್ತು ಯಲಹಂಕ ನಡುವೆ ವಿಶೇಷ ರೈಲುಗಳನ್ನು ಓಡಿಸಲಾಗುತ್ತಿದೆ. ರೈಲು ಸಂ. 06101 ಎರ್ನಾಕುಲಂ – ಯಲಹಂಕ ವಿಶೇಷ ರೈಲು ಎರ್ನಾಕುಲಂನಿಂದ 04.09 2024 ಮತ್ತು 06.09.2024 ರಂದು ಮಧ್ಯಾಹ್ನ 12.40 ಕ್ಕೆ ಹೊರಟು ಅದೇ ದಿನ ರಾತ್ರಿ 11 ಗಂಟೆಗೆ ಯಲಹಂಕವನ್ನು ತಲುಪುತ್ತದೆ. ರೈಲು ಸಂ. 06102 ಯಲಹಂಕ – ಎರ್ನಾಕುಲಂ ವಿಶೇಷ ರೈಲು ಯಲಹಂಕದಿಂದ 05.09.2024 ಮತ್ತು 07.09.2024 ರಂದು ಬೆಳಿಗ್ಗೆ 05 ಗಂಟೆಗೆ ಹೊರಟು ಅದೇ ದಿನ ಮಧ್ಯಾಹ್ನ 02.20 ಕ್ಕೆ ಎರ್ನಾಕುಲಂ ತಲುಪುತ್ತದೆ. ಈ ವಿಶೇಷ ರೈಲುಗಳು ಎರಡೂ ದಿಕ್ಕುಗಳಲ್ಲಿ ತ್ರಿಶೂರ್, ಪಾಲಕ್ಕಾಡ್, ಪೋದನೂರ್, ತಿರುಪ್ಪೂರ್, ಈರೋಡ್, ಸೇಲಂ, ವೈಟ್‌ಫೀಲ್ಡ್ ಮತ್ತು ಕೃಷ್ಣರಾಜಪುರಂ ನಿಲ್ದಾಣಗಳಲ್ಲಿ ನಿಲುಗಡೆಯನ್ನು ಹೊಂದಿದೆ. ಈ ವಿಶೇಷ ರೈಲು 09- ಎ.ಸಿ. 3ಟಯರ್ ಕೋಚ್‌ಗಳು, 02- ಎ.ಸಿ. ಚೇರ್ ಕಾರ್ ಮತ್ತು 02- ಎ.ಸಿ ಅಂಗವಿಕಲ…
ಇಂದು ನಾವು ಒಂದು ಪರಿಹಾರವನ್ನು ನೋಡಲಿದ್ದೇವೆ ಆದರೆ ನಿಮಗೆ ಸಾಧ್ಯವಾದಷ್ಟು ಬೇಗ ಉತ್ತಮ ಕೆಲಸವನ್ನು ಪಡೆಯಲು ಎರಡು ಶಕ್ತಿಶಾಲಿ ಪರಿಹಾರಗಳನ್ನು ನೋಡೋಣ. ಒಂದು ರೂಪಾಯಿ ಕೂಡ ಖರ್ಚು ಮಾಡಬೇಕಿಲ್ಲ. ಪ್ರತಿದಿನ ನಂಬಿಕೆಯಿಂದ ಒಂದು ಟಂಬ್ಲರ್ ನೀರನ್ನು ತೆಗೆದುಕೊಂಡು ಜಪಿಸುವ ಮಂತ್ರವನ್ನು ಪಠಿಸುವ ಮೂಲಕ ಭೂಮಿಗೆ ಸುರಿಯಿರಿ. ಸೋಮವಾರ ಮತ್ತು ಗುರುವಾರ ದುರ್ಗಾ ಅಮ್ಮನವರ ದೇಗುಲದಲ್ಲಿ ನಿಂತು ನನಗೆ ಕೆಲಸ ಕೊಡಿಸಿ ಎಂದು ನ್ಯಾಯವಾಗಿ ಕೇಳಿಕೊಳ್ಳಿ. ಅಷ್ಟೆ, ಈ ಎರಡು ಉಪಾಯಗಳನ್ನು ಸರಿಯಾಗಿ ಹೇಗೆ ಮಾಡಬೇಕು, ದಿನನಿತ್ಯ ಹೇಳಬೇಕಾದ ಮಂತ್ರವೇನು ಎಂಬ ವಿವರವಾದ ಮಾಹಿತಿಯನ್ನು ಈ ಆಧ್ಯಾತ್ಮಿಕ ದಾಖಲೆಯ ಮೂಲಕ ತಿಳಿಯಲಿದ್ದೇವೆ . ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು…
ಬೆಂಗಳೂರು: ರಾಜ್ಯಾಧ್ಯಂತ ಮತ್ತೆ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ಆರಂಭವಾಗಲಿದೆ. ಇದಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು, ಹೋಂ ಸ್ಟೇ ಸೇರಿದಂತೆ ಎಲ್ಲಾ ಅರಣ್ಯ ಒತ್ತುವರಿಗಳನ್ನು ತೆರವುಗೊಳಿಸುವಂತೆ ಖಡಕ್ ಆದೇಶ ಮಾಡಿದ್ದಾರೆ. ಈ ಕುರಿತಂತೆ ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಪತ್ರ ಬರೆದಿರುವಂತ ಸಚಿವ ಈಶ್ವರ್ ಖಂಡ್ರೆ, ಅದರಲ್ಲಿ ರಾಜ್ಯದ 10 ಜಿಲ್ಲೆಗಳಲ್ಲಿ ವ್ಯಾಪಿಸಿರುವ ಪಶ್ಚಿಮ ಘಟ್ಟ ಮತ್ತು ಇತರ ಘಟ್ಟ ಪ್ರದೇಶಗಳಲ್ಲಿ 2015ರ ನಂತರದ ಅರಣ್ಯ ಒತ್ತುವರಿ ತೆರವುಗೊಳಿಸಲು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಮತ್ತು ಅರಣ್ಯ ಕಾರ್ಯಪಡೆ ಮುಖ್ಯಸ್ಥರ ನೇತೃತ್ವದ ಕಾರ್ಯಪಡೆ ರಚಿಸಲಾಗಿದ್ದು, ಮೊದಲಿಗೆ ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿರುವ ರೆಸಾರ್ಟ್ ಗಳು, ಹೋಂಸ್ಟೇಗಳನ್ನು ಹಾಗೂ ಕರ್ನಾಟಕ ಅರಣ್ಯ ಕಾಯಿದೆ 19630 64ಎ ಪ್ರಕ್ರಿಯೆ ಪೂರ್ಣಗೊಂಡಿರುವ ಮತ್ತು ನ್ಯಾಯಾಲಯದ ತಡೆಯಾಜ್ಞೆ, ವಿಚಾರಣೆ ಬಾಕಿ ಇಲ್ಲದ ದೊಡ್ಡ ಒತ್ತುವರಿಗಳನ್ನು ತೆರವು ಮಾಡಲು ಸೂಚಿಸಲಾಗಿರುತ್ತದೆ. ಈ…
ಮಂಡ್ಯ: ‘ಆತಿಥ್ಯ’ದ ನೆಲವೆಂಬ ಖ್ಯಾತಿ ಪಡೆದಿರುವ ಮಂಡ್ಯ ಜಿಲ್ಲೆಯಲ್ಲಿ ಡಿಸೆಂಬರ್ ತಿಂಗಳಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಎಲ್ಲರ ಒಗ್ಗಟ್ಟು ಹಾಗೂ ಶ್ರಮ ಅಗತ್ಯವೆಂದು ಶಾಸಕರು ಹಾಗೂ ಸಮ್ಮೇಳನ ಮಾಧ್ಯಮ ಸಮನ್ವಯ ಸಮಿತಿ ಅಧ್ಯಕ್ಷ ದಿನೇಶ್ ಗೂಳಿಗೌಡ ಅಭಿಪ್ರಾಯಿಸಿದರು. ಡಿಸೆಂಬರ್ 20, 21 ಹಾಗೂ 22ರಂದು ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕುರಿತು ನಗರದ ಹೊರ ವಲಯದಲ್ಲಿರುವ ಅಮರಾವತಿ ಹೋಟೇಲ್ ನಲ್ಲಿ ಆಯೋಜನೆಗೊಂಡಿದ್ದ ಮಾಧ್ಯಮ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಾಡ ಭಾಷೆ ಕನ್ನಡದ ಹಬ್ಬ ಜಿಲ್ಲೆಯಲ್ಲಿ ಮೂರನೇ ಬಾರಿಗೆ ಆಯೋಜನೆಗೊಳ್ಳುತ್ತಿರುವುದು ನಮ್ಮೆಲ್ಲರಿಗೂ ಸಂತಸದ ವಿಚಾರ. ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟಕ್ಕೆ ಕನ್ನಡ ಸಾಹಿತ್ಯ ಸಮ್ಮೇಳನದ ಸವಿ ಹರಡಬೇಕು. ಆ ಮೂಲಕ ಮಂಡ್ಯ ಜಿಲ್ಲೆಯ ಸೊಗಡು ವಿಶ್ವವ್ಯಾಪಿ ಪಸರಿಸಲು ಶ್ರಮಿಸಬೇಕೆಂದು ಕರೆ ನೀಡಿದರು. ಮಂಡ್ಯ ಎಂದರೆ ಇಂಡಿಯಾ ಎಂದು ಸಂಬೋಧಿಸುತ್ತಾರೆ, ಆ ಅನ್ವರ್ಥ ಪದಕ್ಕೆ ಅರ್ಥ…