Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಜೈಲುಪಾಲಾಗಿದ್ದಾರೆ. ಇಂದು ಕೋರ್ಟ್ ಅವರಿಗೆ ಜುಲೈ.4ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಹೀಗಾಗಿ 2011ರ ಬಳಿಕ ನಟ ದರ್ಶನ್ ಮತ್ತೆ ಜೈಲುಪಾಲಾಗಿದ್ದಾರೆ. ಇಂದು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ನಲ್ಲಿ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಆರೋಪಿಗಳಾದಂತ ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯಗೊಂಡ ಹಿನ್ನಲೆಯಲ್ಲಿ ವಿಚಾರಣೆಯನ್ನು ನಡೆಸಲಾಯಿತು. ಈ ವಿಚಾರಣೆಯ ಬಳಿಕ ನಟ ದರ್ಶನ್, ವಿನಯ್, ಪ್ರದೋಷ್ ಹಾಗೂ ಧನರಾಜ್ ಅವರಿಗೆ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಜುಲೈ.4ರವರೆಗೆ ನ್ಯಾಯಾಂಗ ಬಂಧನಕ್ಕೆ ವಿಧಿಸಿ ಆದೇಶಿಸಿದೆ. ಈ ಮೂಲಕ ನಟ ದರ್ಶನ್ ಕೂಡ ಪವಿತ್ರಾ ಗೌಡ ಬಳಿಕ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿದ್ದಾರೆ. https://kannadanewsnow.com/kannada/one-samiji-killed-in-clash-between-two-groups-in-kolar/ https://kannadanewsnow.com/kannada/good-news-for-ii-puc-students-free-travel-allowed-in-ksrtc-bus-on-exam-3/
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ತನಿಖೆಯ ನಂತ್ರ ಎ.1 ಆರೋಪಿ ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಈಗ ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳಿಗೆ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಜುಲೈ.4ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದೆ. ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಪವಿತ್ರಾ ಗೌಡ ಅವರಿಗೆ ಅಶ್ಲೀಸ ಸಂದೇಶ ಕಳುಹಿಸುತ್ತಿದ್ದಂತ ಕಾರಣ ನಟ ದರ್ಶನ್ ಅಂಡ್ ಗ್ಯಾಂಗ್ ಅಪಹರಿಸಿಕೊಂಡು ಬಂದು, ಬೆಂಗಳೂರಲ್ಲಿ ಚಿತ್ರ ಹಿಂಸೆ ನೀಡಿ ಹತ್ಯೆಗೈದಿತ್ತು. ಈ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಈ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಕೋರ್ಟ್ ರೇಣುಕಾಸ್ವಾಮಿ ಪ್ರಕರಣದಲ್ಲಿ ಹೆಚ್ಚಿನ ವಿಚಾರಣೆ, ಸ್ಥಳ ಮಹಜರು ನಡೆಸೋದಕ್ಕೆ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ಇಂದು ಅವರ ಪೊಲೀಸ್ ಕಸ್ಟಡಿ ಅವಧಿ ಮುಗಿದ ಕಾರಣ, ಬೆಂಗಳೂರಿನ 5ನೇ ಎಸಿಎಂಎಂ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದ್ದರು. ಬೆಂಗಳೂರಿನ 5ನೇ ಎಸಿಎಂಎಂ ಕೋರ್ಟ್ ನ ನ್ಯಾಯಾಧೀಶರಾದಂತ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿ ಮುಗಿದ ಕಾರಣ, ಕೋರ್ಟ್ ಗೆ ಹಾಜರುಪಡಿಸಲಾಗಿದೆ. ಈ ಪ್ರಕರಣದ ವಿಚಾರಣೆ ನಡೆಸಲಿರುವಂತ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡುತ್ತೋ ಅಥವಾ ಪೊಲೀಸ್ ಕಸ್ಟಡಿಗೆ ಮತ್ತೆ ನೀಡುತ್ತೋ ಎಂಬುದನ್ನು ಕಾದು ನೋಡಬೇಕಿದೆ. ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಪವಿತ್ರಾ ಗೌಡ ಅವರಿಗೆ ಅಶ್ಲೀಸ ಸಂದೇಶ ಕಳುಹಿಸುತ್ತಿದ್ದಂತ ಕಾರಣ ನಟ ದರ್ಶನ್ ಅಂಡ್ ಗ್ಯಾಂಗ್ ಅಪಹರಿಸಿಕೊಂಡು ಬಂದು, ಬೆಂಗಳೂರಲ್ಲಿ ಚಿತ್ರ ಹಿಂಸೆ ನೀಡಿ ಹತ್ಯೆಗೈದಿತ್ತು. ಈ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಈ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಕೋರ್ಟ್ ರೇಣುಕಾಸ್ವಾಮಿ ಪ್ರಕರಣದಲ್ಲಿ ಹೆಚ್ಚಿನ ವಿಚಾರಣೆ, ಸ್ಥಳ ಮಹಜರು ನಡೆಸೋದಕ್ಕೆ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ಇಂದು ಅವರ ಪೊಲೀಸ್ ಕಸ್ಟಡಿ ಅವಧಿ ಮುಗಿದ ಕಾರಣ, ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದ್ದರು. ಬೆಂಗಳೂರಿನ 5ನೇ ಎಸಿಎಂಎಂ ಕೋರ್ಟ್…
ನವದೆಹಲಿ: ಕೇಂದ್ರ ಸರ್ಕಾರವು ನೀಟ್, ಯುಜಿಸಿ-ನೆಟ್ ಪರೀಕ್ಷೆಯ ವಿವಾದದ ನಡುವೆ ಮುಂದೆ ನೀಟ್, ಯುಜಿಸಿ-ನೆಟ್ ಪರೀಕ್ಷೆಗಳನ್ನು ಪಾರದರ್ಶಕವಾಗಿ, ಸುಗಮವಾಗಿ ನಡೆಸಲು ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ. ನೀಟ್ ಮತ್ತು ಯುಜಿಸಿ-ನೆಟ್ ವಿವಾದದ ನಡುವೆ ಪರೀಕ್ಷೆಗಳನ್ನು ಪಾರದರ್ಶಕ, ಸುಗಮ ಮತ್ತು ನ್ಯಾಯಸಮ್ಮತವಾಗಿ ನಡೆಸುವುದನ್ನು ಖಚಿತಪಡಿಸಿಕೊಳ್ಳಲು ಶಿಕ್ಷಣ ಸಚಿವಾಲಯ ಶನಿವಾರ ಉನ್ನತ ಮಟ್ಟದ ತಜ್ಞರ ಸಮಿತಿಯನ್ನು ಪ್ರಕಟಿಸಿದೆ. https://kannadanewsnow.com/kannada/good-news-for-ii-puc-students-free-travel-allowed-in-ksrtc-bus-on-exam-3/ https://kannadanewsnow.com/kannada/cm-siddaramaiah-pays-last-respects-to-kamala-hampana/ https://kannadanewsnow.com/kannada/one-samiji-killed-in-clash-between-two-groups-in-kolar/
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಎ.1 ಆರೋಪಿ ಪವಿತ್ರಾ ಗೌಡ ಜೈಲುಪಾಲಾಗಿದ್ದರೇ, ಎ2 ಆರೋಪಿ ದರ್ಶನ್ ಗೆ ಜೈಲೋ, ಬೇಲೋ ಎನ್ನುವುದು ಇಂದು ನಿರ್ಧಾರವಾಗಲಿದೆ. ಇದರ ನಡುವೆ ರೇಣುಕಾಸ್ವಾಮಿ ಕೊಲೆ ಕೇಸ್ ಮುಚ್ಚಿ ಹಾಕಲು ನಟ ದರ್ಶನ್ ಎಷ್ಟು ಖರ್ಚು ಮಾಡಿದ್ದಾರೆ ಅನ್ನೋ ಶಾಂಕಿಂಗ್ ಮಾಹಿತಿ ಪೊಲೀಸರ ಮೂಲಗಳಿಂದ ತಿಳಿದು ಬಂದಿದೆ. ಆ ಬಗ್ಗೆ ಮುಂದೆ ಓದಿ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಅವರ ಸಹಚರರು ಮತ್ತು ಇತರ ಆರೋಪಿಗಳಿಂದ ವಶಪಡಿಸಿಕೊಂಡಿರುವ 70.4 ಲಕ್ಷ ರೂ.ಗಳ ಬಗ್ಗೆ ಆದಾಯ ತೆರಿಗೆ (Income Tax -IT) ಇಲಾಖೆಗೆ ಪತ್ರ ಬರೆಯಲು ನಗರ ಪೊಲೀಸರು ನಿರ್ಧರಿಸಿದ್ದಾರೆ. ಜೂನ್ 19 ರಂದು ದರ್ಶನ್ ಅವರ ಮನೆಯಿಂದ 37.4 ಲಕ್ಷ ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರ ಮನೆಯಲ್ಲಿ 3 ಲಕ್ಷ ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಹಿಂದೆ ದರ್ಶನ್ ತನ್ನ ಸಹಚರರಿಗೆ 30 ಲಕ್ಷ…
ಕೋಲಾರ: ಜಿಲ್ಲೆಯಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಈ ಗಲಾಟೆಯಲ್ಲಿ ಓರ್ವ ಸ್ವಾಮೀಜಿಯನ್ನೇ ಭೀಕರವಾಗಿ ಹತ್ಯೆ ಮಾಡಿರೋದಾಗಿ ತಿಳಿದು ಬಂದಿದೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಸಂತಳ್ಳಿ ಬಳಿಯಲ್ಲಿರುವಂತ ಆನಂದ ಮಾರ್ಗ ಆಶ್ರಮದಲ್ಲಿ ಆಚಾರ್ಯ ಧರ್ಮ ಪ್ರಣಾನಂದ ಹಾಗೂ ಆಚಾರ್ಯ ಚಿನ್ಮಯಾನಂದ ಗುಂಪಿನ ನಡುವೆ ಮಾರಾಮಾರಿ ನಡೆದಿದೆ. ಈ ಗಲಾಟೆಯಲ್ಲಿ ಆನಂದ ಮಾರ್ಗ ಆಶ್ರಮದ ಆಚಾರ್ಯ ಚಿನ್ಮಯಾನಂದ ಸ್ವಾಮೀಜಿಯನ್ನು, ಆಚಾರ್ಯ ಧರ್ಮ ಪ್ರಣಾನಂದ ಅವರ ಗುಂಪಿನ ಕಡೆಯವರು ಕೊಲೆ ಮಾಡಿರೋದಾಗಿ ತಿಳಿದು ಬಂದಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಮಾಲೂರು ಠಾಣೆಯ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. https://kannadanewsnow.com/kannada/d-boss-suffers-from-a-mental-disorder-called-ied-prashanth-sambargis-new-bomb-against-actor-darshan/ https://kannadanewsnow.com/kannada/cm-siddaramaiah-pays-last-respects-to-kamala-hampana/
ಬೆಂಗಳೂರು: ಕನ್ನಡದ ಉತ್ತಮ ಸಾಹಿತಿಯನ್ನು ನಾವು ಕಳೆದುಕೊಂಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರವೀಂದ್ರಕಲಾ ಕ್ಷೇತ್ರದಲ್ಲಿ ಹಿರಿಯ ಸಾಹಿತಿ ಡಾ.ಕಮಲ ಹಂಪನಾ ಅವರ ಪ್ರಾರ್ಥಿವ ಶರೀರ ದರ್ಶನ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಕಮಲಾ ಹಂಪನಾ ಅವರನ್ನು ನಾಲ್ಕೈದು ತಿಂಗಳ ಹಿಂದೆ ಭೇಟಿಯಾಗಿದ್ದೆ. ಮಹಿಳಾ ಸಾಹಿತಿಗಳ ಪೈಕಿ ಅತಿ ಹೆಚ್ಚು ಅಂದರೆ 48 ಕೃತಿಗಳನ್ನು ಬರೆದಿದ್ದಾರೆ. ಬೋಧಕರಾಗಿ, ಸಂಶೋಧಕರಾಗಿ, ಸಾಹಿತಿಯಾಗಿ ಕನ್ನಡ ಭಾಷೆಗಾಗಿ ಬಹಳ ಶ್ರಮಿಸಿದ್ದಾರೆ. ಪ್ರಾಕೃತ ಭಾಷೆಯ ಕುರಿತು ಸಂಶೋಧನೆ ಮಾಡಿದ್ದಾರೆ. ಬೆಂಗಳೂರು, ಮೈಸೂರು, ವಿಜಯನಗರಗಳಲ್ಲಿ ಕನ್ನಡ ಬೋಧಕರಾಗಿ ಕೆಲಸ ಮಾಡಿದ್ದಾರೆ ಎಂದರು. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಂಪನಾ ಮತ್ತು ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಎನ್ನು ಭಗವಂತ ನೀಡಲಿ ಎಂದು ಪ್ರಾರ್ಥನೆ ಮಾಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು. https://kannadanewsnow.com/kannada/good-news-for-ii-puc-students-free-travel-allowed-in-ksrtc-bus-on-exam-3/ https://kannadanewsnow.com/kannada/d-boss-suffers-from-a-mental-disorder-called-ied-prashanth-sambargis-new-bomb-against-actor-darshan/
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-3 ಜೂನ್.24ರಿಂದ ಆರಂಭಗೊಳ್ಳಲಿದೆ. ಈ ಪರೀಕ್ಷೆಗೆ ತೆರಳೋದಕ್ಕೆ ವಿದ್ಯಾರ್ಥಿಗಳಿಗೆ ಕೆ ಎಸ್ ಎಸ್ ಟಿಸಿ ತನ್ನ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ಮಾಹಿತಿ ಹಂಚಿಕೊಂಡಿದ್ದಾರೆ. ಅದರಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದಿನಾಂಕ: 24-06-2024 ರಿಂದ 05-07-2024 ರವರೆಗೆ ಕರ್ನಾಟಕದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ-3 ನಡೆಯಲಿವೆ. ಈ ಸಂಬಂಧ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ, ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸುವಂತೆ ಉಲ್ಲೇಖಿತ-1 ರ ಪತ್ರದಲ್ಲಿ ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ರವರು ಕೋರಿರುತ್ತಾರೆ ಎಂದಿದ್ದಾರೆ. ಅದರನ್ವಯ ಕ.ರಾ.ರ.ಸಾ.ನಿಗಮವು, ದ್ವಿತೀಯ ಪಿಯುಸಿ ಪರೀಕ್ಷೆ-3 ನಡೆಯುವ ದಿನಾಂಕಗಳಂದು ಅಂದರೆ, ದಿನಾಂಕ: 24-06-2024 ರಿಂದ 05-07-2024 ರವರೆಗೆ, ಪರೀಕ್ಷೆಗೆ ಹಾಜರಾಗುವ ದ್ವಿತೀಯ ಪಿ.ಯು.ಸಿ…
ಚಿಕ್ಕಬಳ್ಳಾಪುರ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನಂತ್ರ, ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ಕ್ರಿಯೆ ಆರೋಪದಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಏನು ಹೇಳಿದ್ರು ಅಂತ ಮುಂದೆ ಓದಿ. ಈ ಕುರಿತಂತೆ ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್ ಬಳಿಯಲ್ಲಿ ಸುದ್ದಿಗಾರರು ಕೇಳಿದಂತ ಪ್ರಶ್ನೆಗೆ ಗರಂ ಆದಂತ ಅವರು, ದಯವಿಟ್ಟು ಇಂತಹ ವಿಷಯಗಳನ್ನು ನನ್ನ ಬಳಿ ಚರ್ಚೆ ಮಾಡಬೇಡಿ. ಇದನ್ನು ಬಿಟ್ಟು ರಾಜ್ಯದ ಸಮಸ್ಯೆಗಳ ಬಗ್ಗೆ ಪ್ರಶ್ನಿಸಿ, ಚರ್ಚೆ ಮಾಡಿ ಅಂದರು. ಸೂರಜ್ ರೇವಣ್ಣ ಪ್ರಕರಣದ ಬಗ್ಗೆ ಕೇಳುವ ಅವಶ್ಯಕತೆ ಏನಿದೆ.? ಅದಕ್ಕಾಗಿ ಕಾನೂನು ಇದೆ. ಅದರ ಅಡಿಯಲ್ಲಿ ಪೊಲೀಸರು ಕ್ರಮ ವಹಿಸಲಿದ್ದಾರೆ. ಯಾಕೆ ಪ್ರಕರಣ ಬರ್ತಿದೆ ಅನ್ನೋದು ಮುಂದಿನ ದಿನಗಳಲ್ಲಿ ನಿಮಗೆ ಗೊತ್ತಾಗಲಿದೆ. ಇನ್ಮುಂದೆ ನನ್ನ ಬಳಿ ಇಂತಹ ಪ್ರಶ್ನೆಗಳನ್ನು ಕೇಳಬೇಡಿ ಅಂತ ತಿಳಿಸಿದರು. https://kannadanewsnow.com/kannada/d-boss-suffers-from-a-mental-disorder-called-ied-prashanth-sambargis-new-bomb-against-actor-darshan/ https://kannadanewsnow.com/kannada/breaking-cbse-compartment-exam-schedule-announced-check-here/
ನವದೆಹಲಿ: ದಕ್ಷಿಣ ಮುಂಬೈನಿಂದ ನವೀ ಮುಂಬೈಗೆ ಸಂಪರ್ಕ ಕಲ್ಪಿಸುವ ಅತುಲ್ ಸೇತು ಸಮುದ್ರ ಸೇತುವೆಯ ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಶುಕ್ರವಾರ ಆರೋಪಿಸಿದ್ದಾರೆ. ಹಗಲಿನಲ್ಲಿ ಸೇತುವೆಯನ್ನು ಪರಿಶೀಲಿಸಿದ ಪಟೋಲೆ, ಸೇತುವೆಯ ನಿರ್ಮಾಣ ಗುಣಮಟ್ಟ ಕಳಪೆಯಾಗಿದೆ ಮತ್ತು ರಸ್ತೆಯ ಒಂದು ಭಾಗವು ಒಂದು ಅಡಿ ಕುಸಿದಿದೆ ಎಂದು ಹೇಳಿದ್ದಾರೆ. ಆದಾಗ್ಯೂ, ಆಡಳಿತಾರೂಢ ಬಿಜೆಪಿ ಮತ್ತು ಯೋಜನೆಯ ನೋಡಲ್ ಏಜೆನ್ಸಿಯಾಗಿರುವ ಮುಂಬೈ ಮೆಟ್ರೋಪಾಲಿಟನ್ ರೀಜನ್ ಡೆವಲಪ್ಮೆಂಟ್ ಅಥಾರಿಟಿ (ಎಂಎಂಆರ್ಡಿಎ) ಈ ಬಿರುಕುಗಳು ಸೇತುವೆಯ ಮೇಲೆಯೇ ಅಲ್ಲ, ಆದರೆ ನವೀ ಮುಂಬೈನ ಉಲ್ವೆಯಿಂದ ಸಂಪರ್ಕಿಸುವ ರಸ್ತೆಯಲ್ಲಿವೆ ಎಂದು ಹೇಳಿದೆ. ದಕ್ಷಿಣ ಮುಂಬೈಯನ್ನು ಉಪಗ್ರಹ ನಗರವಾದ ನವೀ ಮುಂಬೈಯೊಂದಿಗೆ ಸಂಪರ್ಕಿಸುವ ಮುಂಬೈ ಟ್ರಾನ್ಸ್-ಹಾರ್ಬರ್ ಲಿಂಕ್ (ಎಂಟಿಎಚ್ಎಲ್) ಎಂದೂ ಕರೆಯಲ್ಪಡುವ ‘ಅಟಲ್ ಬಿಹಾರಿ ವಾಜಪೇಯಿ ಸೇವ್ರಿ-ನವಾ ಶೇವಾ ಅಟಲ್ ಸೇತು’ ಅನ್ನು ಈ ವರ್ಷದ ಜನವರಿಯಲ್ಲಿ ಉದ್ಘಾಟಿಸಲಾಯಿತು. 17,840 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾದ ಈ ಆರು ಪಥದ ಸೇತುವೆ 21.8…