Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯದಲ್ಲಿ ಉತ್ಪಾದನೆಯಾಗುವ ಔಷಧಗಳು ಸೇರಿದಂತೆ ಸರ್ಕಾರಿ ಔಷಧಾಲಯಗಳ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನ ವಿಕಾಸ ಸೌಧದಲ್ಲಿ ಇಂದು ಔಷಧ ನಿಯಂತ್ರಣ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಗರಂ ಆದರು. ರಾಜ್ಯದ ಮಾರುಕಟ್ಟೆಯಲ್ಲಿ ಸಾಕಷ್ಟು ಕಳಪೆ ಗುಣಮಟ್ಟದ ಔಷಧಿಗಳು ಪೂರೈಕೆ ಆಗುತ್ತಿದೆ. ಯಾರ ಹಂಗು ಇಲ್ಲದೇ ಮನಬಂದಂತೆ ಔಷಧಿಗಳನ್ನ ಜನರ ಮನೆಗೆ ಪೂರೈಸುತ್ತಿದ್ದಾರೆ. ಇದರಿಂದ ಜನರ ಆರೋಗ್ಯದ ಮೇಲೆ ಸಾಕಷ್ಟು ದಷ್ಪರಿಣಾಮ ಬೀರುತ್ತಿದೆ. ಡ್ರಗ್ ಕಂಟ್ರೋಲ್ ಇಲಾಖೆಯ ಮುಖ್ಯ ಉದ್ದೇಶವೇ ಪಬ್ಲಿಕ್ ಹೆಲ್ತ್. ಸಾರ್ವಜನಿಕರ ಆರೋಗ್ಯವನ್ನ ದೃಷ್ಟಿಯಲ್ಲಿಟ್ಟುಕೊಂಡು ಔಷಧಿಗಳ ಗುಣಮಟ್ಟದ ಬಗ್ಗೆ ಅಧಿಕಾರಿಗಳು ಹೆಚ್ಚಿನ ನಿಗಾ ವಹಿಸಬೇಕು. ಆದರೆ ಆ ರೀತಿಯ ಕಾರ್ಯವೈಖರಿ ಇಲಾಖೆಯ ಅಧಿಕಾರಿಗಳಿಂದ ಕಂಡುಬರುತ್ತಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದರು. ಔಷಧಿಗಳ ಗುಣಮಟ್ಟದ ವಿಚಾರದಲ್ಲಿ ಯಾವ ಕ್ರಮಗಳನ್ನ ಕೈಗೊಳ್ಳುತ್ತಿದ್ದೀರಿ ವಿಸ್ತೃತ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಎಷ್ಟು…
ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಒತ್ತುವರಿ ತೆರವು ಮಾಡಿಸಲಾದ ಸುಮಾರು 500 ಕೋಟಿ ರೂ. ಬೆಲೆ ಬಾಳುವ ಅರಣ್ಯ ಭೂಮಿಯಲ್ಲಿ ವೃಕ್ಷೋಧ್ಯಾನ ಮತ್ತು ಪಕ್ಷಿಲೋಕ (Bird aviary) ನಿರ್ಮಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರಿಂದು ಭೂಮಿಪೂಜೆ ನೆರವೇರಿಸಿದರು. ಇಲಾಖೆ ಮರುವಶ ಪಡಿಸಿಕೊಂಡಿರುವ 17 ಎಕರೆ ಜಮೀನಿನ ಖುದ್ದು ಪರಿಶೀಲನೆಗೆ ಆಗಮಿಸಿದ್ದ ಸಚಿವರು, ಗಿಡ ನೆಡುವ ಮೂಲಕ ವೃಕ್ಷೋಧ್ಯಾನದಲ್ಲಿ 1800 ಸ್ಥಳೀಯ ಪ್ರಭೇದದ ಸಸಿ ನೆಡುವ ಕಾರ್ಯಕ್ರಮಕ್ಕೆ ಹಾಗೂ ಜಮೀನಿನ ಸುತ್ತಲೂ ತಂತಿ ಬೇಲಿ ಹಾಕುವ ಕಾಮಗಾರಿಗೂ ಚಾಲನೆ ನೀಡಿದರು. ಬೆಂಗಳೂರು ನಗರ ಬೃಹದಾಕಾರವಾಗಿ ಬೆಳೆಯುತ್ತಿದ್ದು, ನಗರ ಪ್ರದೇಶದಲ್ಲಿ ಉಸಿರಾಡಲು ಹಸಿರು ಪ್ರದೇಶ (ಲಂಗ್ ಸ್ಪೇಸ್) ಇರಬೇಕು. ಐ.ಟಿ., ಬಿ.ಟಿ. ಕಂಪನಿಗಳಿರುವ ಈ ಪ್ರದೇಶ ಕಾಂಕ್ರೀಟ್ ಕಾಡಿನಂತಿದ್ದು, 17 ಎಕರೆಯಲ್ಲಿ ನಿರ್ಮಾಣವಾಗಲಿರುವ ಈ ವೃಕ್ಷೋಧ್ಯಾನ ಬೆಳಗಿನ ವಾಯು ವಿಹಾರಕ್ಕೆ ಬರುವವರಿಗೆ ಮತ್ತು ವಾರಾಂತ್ಯದಲ್ಲಿ ಮಕ್ಕಳು, ಮೊಮ್ಮಕ್ಕಳೊಂದಿಗೆ ಸಮಯ ಕಳೆಯಲು ಮಾಹಿತಿ ಮತ್ತು ಮನರಂಜನೆಯ ತಾಣವಾಗುವಂತೆ ಅಭಿವೃದ್ಧಿ…
ಢಾಕಾ: ನೊಬೆಲ್ ಪ್ರಶಸ್ತಿ ವಿಜೇತ ಪ್ರೊಫೆಸರ್ ಮುಹಮ್ಮದ್ ಯೂನುಸ್ ನೇತೃತ್ವದ ಮಧ್ಯಂತರ ಸರ್ಕಾರ ಗುರುವಾರ ಪ್ರಮಾಣವಚನ ಸ್ವೀಕರಿಸಲಿದೆ ಎಂದು ಬಾಂಗ್ಲಾದೇಶದ ಸೇನಾ ಮುಖ್ಯಸ್ಥ ಜನರಲ್ ವೇಕರ್-ಉಜ್-ಜಮಾನ್ ಹೇಳಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಜನರಲ್ ವೇಕರ್, ಮಧ್ಯಂತರ ಸರ್ಕಾರ ಗುರುವಾರ ರಾತ್ರಿ 8:00 ಗಂಟೆಗೆ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಹೇಳಿದರು. ಸಲಹಾ ಮಂಡಳಿಯಲ್ಲಿ 15 ಸದಸ್ಯರಿರಬಹುದು ಎಂದು ಅವರು ಹೇಳಿದರು. ಉದ್ಯೋಗಗಳಲ್ಲಿ ವಿವಾದಾತ್ಮಕ ಕೋಟಾ ವ್ಯವಸ್ಥೆಯ ಬಗ್ಗೆ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿ ದೇಶದಿಂದ ಪಲಾಯನ ಮಾಡಿದ ಒಂದು ದಿನದ ನಂತರ 84 ವರ್ಷದ ಅರ್ಥಶಾಸ್ತ್ರಜ್ಞ ಯೂನುಸ್ ಅವರನ್ನು ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಮಂಗಳವಾರ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ನೇಮಿಸಿದ್ದಾರೆ. https://kannadanewsnow.com/kannada/big-shock-to-vacant-plot-owners-in-bengaluru-bbmp-fined-for-not-maintaining-cleanliness/ https://kannadanewsnow.com/kannada/big-shock-to-vacant-plot-owners-in-bengaluru-bbmp-fined-for-not-maintaining-cleanliness/
ಬೆಂಗಳೂರು: ನಗರದ ಖಾಲಿ ನಿವೇಶನ ಮಾಲೀಕರಿಗೆ ಬಿಗ್ ಶಾಕ್ ಎನ್ನುವಂತೆ ಸ್ವಚ್ಥತೆಯನ್ನು ಕಾಪಾಡದೇ ಇರುವಂತವರಿಗೆ ಆಸ್ತಿ ತೆರಿಗೆಯ ಭಾಗಾವಗಿ ದಂಡ ಮತ್ತು ವಿಲೇವಾರಿಗೆ ತಲುವಂತ ವೆಚ್ಚವನ್ನು ವಸೂಲಿ ಮಾಡುವಂತೆ ಬಿಬಿಎಂಪಿ ಆದೇಶಿಸಿದೆ. ಈ ಕುರಿತಂತೆ ಬಿಬಿಎಂಪಿಯ ಮುಖ್ಯ ಆಯುಕ್ತರು ಆದೇಶ ಹೊರಡಿಸಿದ್ದು, ಖಾಲಿ ಇರುವ ತೆರೆದ ಸ್ಥಳಗಳಿಂದ/ಖಾಲಿ ನಿವೇಶನಗಳಿಂದ ತ್ಯಾಜ್ಯ ವಿಲೆವಾರಿಗಾಗಿ ಮಾಲೀಕರಿಂದ ಆಸ್ತಿ ತೆರಿಗೆಯ ಭಾಗವಾಗಿ ದಂಡ ಮತ್ತು ವಿಲೇವಾರಿಗೆ ತಗುಲಿದ ವೆಚ್ಚ ಸಂಗ್ರಹಿಸುವಂತೆ ಸೂಚಿಸಿರುವುದಾಗಿ ತಿಳಿಸಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಖಾಲಿ ಇರುವ ತೆರೆದ ಸ್ಥಳಗಳಿಂದ/ಖಾಲಿ ನಿವೇಶನಗಳಿಂದ ತ್ಯಾಜ್ಯ ವಿಲೆವಾರಿಗಾಗಿ ಮಾಲೀಕರಿಂದ ಆಸ್ತಿ ತೆರಿಗೆಯ ಭಾಗವಾಗಿ ದಂಡ ಮತ್ತು ವಿಲೇವಾರಿಗೆ ತಗುಲಿದ ವೆಚ್ಚ ಸಂಗ್ರಹಿಸುವ ಕುರಿತು ಘನತ್ಯಾಜ್ಯ ನಿರ್ವಹಣೆ ನಿಯಮಗಳು-2016, ಘನತ್ಯಾಜ್ಯ ನಿರ್ವಹಣೆ ಬೈ-ಲಾಸ್ 2020 ಮತ್ತು ಬಿಬಿಎಂಪಿ ಕಾಯಿದೆ 2020ರ ಅಡಿಯಲ್ಲಿ ಹೊಸ ಆದೇಶವನ್ನು ಹೊರಡಿಸಲಾಗಿರುತ್ತದೆ. 1. ವಲಯ ಕಛೇರಿಗಳು ಎಲ್ಲಾ ಖಾಲಿ ನಿವೇಶನಗಳು/ಪ್ಲಾಟ್ಗಳು/ಸ್ಥಳಗಳು ಮತ್ತು ಘನತ್ಯಾಜ್ಯ/ಕಟ್ಟಡ ಮತ್ತು ಭಗ್ನಾವಶೇಷ ತ್ಯಾಜ್ಯ(C & D)ವನ್ನು…
ಶಿವಮೊಗ್ಗ: ಜಿಲ್ಲೆಯಲ್ಲಿ ವಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ಕೆಲ ಪ್ರದೇಶಗಳಲ್ಲಿ ಆಗಸ್ಟ್.9ರಿಂದ 11ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸುವಂತೆ ಮನವಿ ಮಾಡಿದೆ. ಶಿವಮೊಗ್ಗ ಹೊಳಲೂರು 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗಗಳ ಲಿಂಕ್ಲೈನ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆ. 09 ರಿಂದ 11 ರವರೆಗೆ 3 ದಿನಗಳ ಕಾಲ ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಹಾಡೋನಹಳ್ಳಿ, ಹಳೆ/ಹೊಸ ಮಡಿಕೆಚೀಲೂರು, ಬಿ.ಕೆ.ತಾವರೆ ಗ್ರಾಮಗಳ ವ್ಯಾಪ್ತಿಯಲ್ಲಿ ಬರುವ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. https://kannadanewsnow.com/kannada/will-retire-from-politics-if-shantakumarswamys-allegations-against-me-are-proved-belur-gopalakrishna/ https://kannadanewsnow.com/kannada/kengeri-electric-crematorium-temporarily-shut-down/
ಬೆಂಗಳೂರು: ನಾಳೆಯಿಂದ ಬೆಂಗಳೂರಿನ ರಾಜರಾಜೇಶ್ವರಿನಗರ ವಲಯದ ಕೆಂಗೇರಿ ವಿದ್ಯುತ್ ಚಿತಾಗಾರದಲ್ಲಿ ತುರ್ತು ನಿರ್ವಹಣೆ ಕೆಲಸದ ಪ್ರಯುಕ್ತ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ. ರಾಜರಾಜೇಶ್ವರಿನಗರ ವಲಯ ವ್ಯಾಪ್ತಿಯ ಕೆಂಗೇರಿ ವಿದ್ಯುತ್ ಚಿತಾಗಾರದಲ್ಲಿ ತುರ್ತ ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳಬೇಕಾಗಿರುವುದರಿಂದ ದಿನಾಂಕ: 08-08-2024 ರಿಂದ 18- 08-2024 ವರೆವಿಗೂ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದ್ದು, ಈ ಚಿತಾಗಾರಕ್ಕೆ ಮೃತ ದೇಹಗಳನ್ನು ದಹನ ಕ್ರಿಯೆಗಾಗಿ ತರುವ ಸಾರ್ವಜನಿಕರು ಸಮೀಪದಲ್ಲಿರುವ ಸುಮ್ಮನಹಳ್ಳಿ, ಮೇಡಿ ಅಗ್ರಹಾರ ಅಥವಾ ಪೀಣ್ಯ ವಿದ್ಯುತ್ ಚಿತಾಗಾರವನ್ನು ಉಪಯೋಗಿಸಿಕೊಳ್ಳಬಹುದಾಗಿರುತ್ತದೆ ಎಂದು ವಿದ್ಯುತ್ ವಿಭಾಗದ ಕಾರ್ಯಪಾಲಕ ಅಭಿಯಂತರರು ಕೋರಿರುತ್ತಾರೆ. https://kannadanewsnow.com/kannada/muda-scam-r-ashoka-releases-more-documents-against-cm-siddaramaiah/ https://kannadanewsnow.com/kannada/flower-show-to-begin-at-lalbagh-in-bengaluru-from-tomorrow-heres-how-the-ticket-prices-are/
ಶಿವಮೊಗ್ಗ : ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮವು 2024-25ನೇ ಸಾಲಿಗೆ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಗಂಗಾಕಲ್ಯಾಣ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ (ಹೊಸದು ಮತ್ತು ನವೀಕರಣ), ವಿದೇಶಿ ವ್ಯಾಸಂಗ ಯೋಜನೆ (ಹೊಸಬರು ಮತ್ತು ನವೀಕರಣ), ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್ಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆಗಳಡಿ ಸೌಲಭ್ಯ ಪಡೆಯಲು (ಉಪ್ಪಾರ, ಅಂಬಿಗ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಸವಿತಾ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಒಕ್ಕಲಿಗ, ಮರಾಠ ಮತ್ತು ಇದರ ಉಪ ಸಮುದಾಯಗಳನ್ನು ಹೊರತುಪಡಿಸಿ) ಉಳಿದ ಹಿಂದುಳಿದ ವರ್ಗಗಳ ವಿಶ್ವಕರ್ಮ ಸಮುದಾಯಕ್ಕೆ ಸೇರಿದ ಆಸಕ್ತರಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆನ್ನು ಸೀಡ್ ಮಾಡಿರಬೇಕು. ಒಂದು ಕುಟುಂಬದ ಒಬ್ಬರಿಗೆ ಮಾತ್ರ ಈ ಯೋಜನೆಯಲ್ಲಿ ಸೌಲಭ್ಯ…
ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಖರೀದಿಸಿದ ಜಮೀನು ಪಿತ್ರಾರ್ಜಿತ ಆಸ್ತಿಯಾಗಿದ್ದು, ಅದಕ್ಕೆ 27 ಹಕ್ಕುದಾರರಿದ್ದರೂ ಕೇವಲ ಒಬ್ಬರ ಬಳಿ ಸಹಿ ಹಾಕಿಸಿಕೊಳ್ಳಲಾಗಿದೆ. ಇದು ಸಂಪೂರ್ಣ ಅಕ್ರಮ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ನಡೆಸಿದ ಅವರು, ಸಿಎಂ ಸಿದ್ದರಾಮಯ್ಯ ಅವರ ಜಮೀನಿಗೆ ಸಂಬಂಧಿಸಿದ ದಾಖಲೆಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದರು. ಜಮೀನಿನ ಮೂಲ ಹಕ್ಕುದಾರರು, ಇತಿಹಾಸದ ಕುರಿತು ವಿವರಿಸಿದರು. ಸಿಎಂ ಸಿದ್ದರಾಮಯ್ಯ ಖರೀದಿಸಿದ ಜಾಗ ನಿಂಗ ಎಂಬುವರಿಗೆ ಸೇರಿದ ಜಮೀನಾಗಿದ್ದು, 1936 ರಲ್ಲಿ ನಿಂಗ ಜಮೀನು ಖರೀದಿಸಿದ್ದರು. ಅವರು 28 ವರ್ಷಗಳ ಹಿಂದೆ ನಿಧನರಾಗಿದ್ದು, ಅವರ ಪತ್ನಿ ನಿಂಗಮ್ಮ 1990 ರಲ್ಲಿ ಮೃತರಾಗಿದ್ದರು. ಇದು ನಿಂಗ ಮತ್ತು ನಿಂಗಮ್ಮ ಅವರ ಸ್ವಯಾರ್ಜಿತ ಆಸ್ತಿಯಾಗಿದ್ದು, ಅವರ ಮಕ್ಕಳಿಗೆ ಪಿತ್ರಾರ್ಜಿತ ಆಸ್ತಿಯಾಗಿದೆ. ನಿಂಗ ಅವರಿಗೆ ಮೂರು ಮಕ್ಕಳಿದ್ದು, ಅವರ ಕುಟುಂಬದವರು 27 ಜನರಿದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ದೇವರಾಜು ಎಂಬ ಒಬ್ಬ ವ್ಯಕ್ತಿಯಿಂದ ಮಾತ್ರ ಸಹಿ ಹಾಕಿಸಿಕೊಂಡಿದ್ದಾರೆ ಎಂದು ವಿವರಿಸಿದರು. 1968 ರಲ್ಲಿ ಸರ್ವೆ ಸಂಖ್ಯೆ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಯಜಮಾನಿಯರಿಗೆ ಗುಡ್ ನ್ಯೂಸ್ ಎನ್ನುವಂತೆ ಗೃಹಲಕ್ಷ್ಮೀ ಯೋಜನೆಯ ಜೂನ್, ಜುಲೈ ತಿಂಗಳ ಹಣ ಜಮಾ ಮಾಡಲಾಗಿದೆ. ಈ ಬಗ್ಗೆ ಅನೇಕ ಯಜಮಾನಿಯರು ತಮ್ಮ ಬ್ಯಾಂಕ್ ಖಾತೆಗೆ ಜಮಾ ಆಗಿರುವ ಸ್ಕ್ರೀನ್ ಶಾಟ್ ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಹಾಗಾದ್ರೇ ನಿಮಗೆ ಬಂದಿರದೇ ಇದ್ರೇ ತಪ್ಪದೇ ಆ ಕೆಲಸ ಮಾಡಬೇಕಿದೆ. ಅದೇನು ಅಂತ ಮುಂದೆ ಓದಿ. ನಿನ್ನೆಯಷ್ಟೇ ಮಂಡ್ಯದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಕಳೆದ ಎರಡು ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಇಂದೇ ಜಮಾ ಮಾಡಲಾಗುವುದು. ಎರಡು ತಿಂಗಳ ಹಣ ಇಂದು ಮನೆ ಒಡತಿಯರ ಬ್ಯಾಂಕ್ ಅಕೌಂಟ್ ಗೆ ಜಮಾ ಆಗಲಿದ್ದು, ಇದರ ಬಗ್ಗೆ ಗೊಂದಲ ಬೇಡ. ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂದಿದ್ದರು. ಈ ಬೆನ್ನಲ್ಲೇ ಇಂದು ಜೂನ್, ಜುಲೈ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಫಲಾನುಭವಿಗಳಾದಂತ ಯಜಮಾನಿಯರ ಖಾತೆಗೆ ಜಮಾ ಮಾಡಲಾಗಿದೆ. ಒಂದು ವೇಳೆ ಬಂದಿಲ್ಲದೇ ಇದ್ದರೇ ನಾಳೆ ಅಥವಾ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಉಡುವಳ್ಳಿ ಗ್ರಾಮ ಪಂಚಾಯ್ತಿಯಲ್ಲಿನ ಕರ್ಮಕಾಂಡದ ವರದಿಯನ್ನು ನಿಮ್ಮ ಕನ್ನಡ ನ್ಯೂಸ್ ನೌ ( Kannada News Now ) ಆಗಸ್ಟ್.5ರಂದು ರಾಜ್ಯದ ‘ಪಂಚಾಯತ್ ರಾಜ್ ಇಲಾಖೆ’ಯಲ್ಲೊಂದು ‘ಬಹುದೊಡ್ಡ ಕರ್ಮಕಾಂಡ’ ಎಂಬುದಾಗಿ ಪ್ರಕಟಿಸಿತ್ತು. ಈ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದಂತ ಪ್ರಿಯಾಂಕ್ ಖರ್ಗೆ ಅವರ ಗಮನಕ್ಕೂ ತರಲಾಗಿತ್ತು. ಈ ಬೆನ್ನಲ್ಲೇ ಇಂದು ಇಲಾಖೆಯ ಇಬ್ಬರು ಅಧಿಕಾರಿಗಳ ತಂಡ ಉಡುವಳ್ಳಿ ಗ್ರಾಮ ಪಂಚಾಯ್ತಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಉಡುವಳ್ಳಿ ಗ್ರಾಮ ಪಂಚಾಯ್ತಿಯಲ್ಲೇ ಹೀಗೊಂದು ಬಹುದೊಡ್ಡ ಕರ್ಮಕಾಂಡ ನಡೆದಿದೆ. ಅದೆಲ್ಲೋ ಕುರುಚಲು ಗಿಡಗಳ ಮಧ್ಯೆ ಗೋ ಕಟ್ಟೆ ನಿರ್ಮಾಣ ಮಾಡ್ತಿವಿ ಅಂತ ಯಾರಿಗೂ ಗೊತ್ತಾಗದಂತೆ ಪಿಡಿಒ ಹಾಗೂ ಕಾಮಗಾರಿ ಮಾಡಿಸೋರು ಸೇರಿ ಬೋರ್ಡ್ ಹಾಕ್ತಾರೆ ಅಂದ್ರೆ ನೀವೇ ಯೋಚನೆ ಮಾಡಿ ಅನ್ನುವ ಹಾಗೆ ಕಾಮಗಾರಿಯನ್ನು ನಡೆಸಿದ ಬಗ್ಗೆ ಕನ್ನಡ ನ್ಯೂಸ್ ನೌ ಆಗಸ್ಟ್.5ರಂದು ವರದಿಯನ್ನು ಪ್ರಕಟಿಸಿತ್ತು. ಈ ಹಿನ್ನಲೆಯಲ್ಲಿ ಇಂದು…