Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಹಿರಿಯ ನಟಿ ಸಂಧ್ಯಾ ಶಾಂತಾರಾಮ್ 94 ನೇ ವಯಸ್ಸಿನಲ್ಲಿ ನಿಧನರಾದರು. ಅವರ ಅಂತ್ಯಕ್ರಿಯೆಯನ್ನು ಇಂದು ಶಿವಾಜಿ ಪಾರ್ಕ್‌ನಲ್ಲಿರುವ ವೈಕುಂಠ ಧಾಮದಲ್ಲಿ ನಡೆಸಲಾಯಿತು. ಅವರ ಸಾವಿಗೆ ಕಾರಣವೇನೆಂದು ಸ್ಪಷ್ಟತೆ ಇಲ್ಲವಾದರೂ, ಅವರು ವೃದ್ಧಾಪ್ಯದ ಸಮಸ್ಯೆಗಳಿಂದ ಬಳಲುತ್ತಿದ್ದರು ಎಂದು ಮೂಲಗಳು ಇಂಡಿಯಾಟುಡೇ.ಇನ್‌ಗೆ ತಿಳಿಸಿವೆ. ತಮ್ಮ ಆಕರ್ಷಕ ಅಭಿನಯ ಮತ್ತು ಪ್ರತಿಯೊಂದು ಪಾತ್ರಕ್ಕೂ ಆಳವನ್ನು ತರುವ ಸಾಮರ್ಥ್ಯಕ್ಕೆ ಹೆಸರುವಾಸಿಯಾದ ಸಂಧ್ಯಾ, ಭಾರತೀಯ ಚಿತ್ರರಂಗದ ಸುವರ್ಣ ಯುಗವನ್ನು ವ್ಯಾಖ್ಯಾನಿಸುವ ಪರಂಪರೆಯನ್ನು ಬಿಟ್ಟು ಹೋಗಿದ್ದಾರೆ. ಚಲನಚಿತ್ರ ನಿರ್ಮಾಪಕ ವಿ ಶಾಂತಾರಾಮ್ ಅವರನ್ನು ವಿವಾಹವಾದ ಸಂಧ್ಯಾ ಅವರ ಸಂಗೀತಗಾರ ಮತ್ತು ತಮ್ಮದೇ ಆದ ರೀತಿಯಲ್ಲಿ ಪ್ರಮುಖ ನಟಿಯಾಗಿದ್ದರು. ಸಂಕೀರ್ಣ ಭಾವನೆಗಳನ್ನು ಸುಲಭವಾಗಿ ವ್ಯಕ್ತಪಡಿಸುವ ಸಾಮರ್ಥ್ಯವನ್ನು ಪ್ರದರ್ಶಿಸಿದ ಮರಾಠಿ ಕ್ಲಾಸಿಕ್ ‘ಪಿಂಜಾರ’ದಲ್ಲಿನ ಅವರ ಕೆಲಸಕ್ಕಾಗಿ ಅವರು ವ್ಯಾಪಕವಾಗಿ ಗುರುತಿಸಲ್ಪಟ್ಟರು. ‘ದೋ ಆಂಖೇನ್ ಬಾರಾ ಹಾತ್’ ನಲ್ಲಿ, ಅವರು ನಟನೆ ಮತ್ತು ನೃತ್ಯವನ್ನು ಸಂಯೋಜಿಸಿದರು, ಅವರ ಬಹುಮುಖ ಪ್ರತಿಭೆಗೆ ವಿಮರ್ಶಾತ್ಮಕ ಮೆಚ್ಚುಗೆಯನ್ನು ಗಳಿಸಿದರು. ಅವರ ವೃತ್ತಿಜೀವನವು ಬಹು ಭಾಷೆಗಳು ಮತ್ತು ಪ್ರಕಾರಗಳನ್ನು…
ಶಿವಮೊಗ್ಗ: ಜಿಲ್ಲೆಯ ಸಾಗರದ ಪ್ರಸಿದ್ಧ ಅಂಗಡಿ ಮಾಲೀಕರಿಗೆ ಬ್ಲಾಕ್ ಮೇಲ್ ಮಾಡಿ ಬರೋಬ್ಬರಿ 36 ಲಕ್ಷ ಪೀಕಿರುವಂತ ಘಟನೆ ಸಾಗರ ಪಟ್ಟಣದಲ್ಲಿ ನಡೆದಿದೆ. ಈ ಸಂಬಂಧ ಇಬ್ಬರ ವಿರುದ್ಧ FIR ದಾಖಲಾಗಿದ್ದು, ಆರೋಪಿಗಳಾದಂತ ಓರ್ವ ಯುವತಿ, ಆಕೆಯ ಬಾಯ್ ಫ್ರೆಂಡ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ರಾಜಶ್ರೀ ಎಲೆಕ್ಟ್ರಾನಿಕ್ಸ್ ಅಂದ್ರೆ ತುಂಬಾನೇ ಪ್ರಸಿದ್ಧಿ. ಇಂತಹ ಅಂಗಡಿ ಮಾಲೀಕರಿಗೆ ಬ್ಲಾಕ್ ಮೇಲ್ ಮಾಡಿ ಅಂಗಡಿಯಲ್ಲೇ ಕೆಲಸ ಮಾಡುತ್ತಿದ್ದಂತ ಯುವತಿ ಹಾಗೂ ಬಾಯ್ ಫ್ರೆಂಡ್ ಹಂತ ಹಂತವಾಗಿ 36 ಲಕ್ಷ ಹಣ ಪಡೆದಿದ್ದಾರೆ. ಈ ಸಂಬಂಧ ಅಂಗಡಿ ಮಾಲೀಕರು ನೀಡಿದಂತ ದೂರಿನ ಅನ್ವಯ ಸಾಗರ ಪೇಟೆ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ 2023ರ ಕಲಂ 329(4), 308(2), 351(2) ಹಾಗೂ 3(5) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ‘FIR’ನಲ್ಲಿ ಏನಿದೆ.? ದಿನಾಂಕ:-01/10/2025 ರಂದು 9-30.ಎ.ಎಂ ಗಂಟೆಗೆ ಪಿರ್ಯಾದಿದಾರರು ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶವೇನೆಂದರೆ, ಪಿರ್ಯಾದಿದಾರರು ಈಗೆ 50 ವರ್ಷಗಳಿಂದ ಸಾಗರ…
ಬೆಂಗಳೂರು: ನಗರದ ನಮ್ಮ ಮೆಟ್ರೋ ರೈಲು ಹಳಿಗೆ ಹಾರಿ ಪ್ರಯಾಣಿಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದಂತ ಮತ್ತೊಂದು ಘಟನೆ ನಡೆದಿದೆ. ಬೆಂಗಳೂರಿನ ಮೆಜೆಸ್ಟಿಕ್ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಮಾದವಾರ-ರೇಷ್ಮೆ ಸಂಸ್ಥೆ ಹಸಿರು ಮಾರ್ಗದ ಹಳಿಗೆ ವ್ಯಕ್ತಿಯೊಬ್ಬ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಪ್ರಸ್ತುತ ನಮ್ಮ ಮೆಟ್ರೋ ರೈಲಿನ ಅಡಿಯಲ್ಲಿ ಪ್ರಯಾಣಿಕ ಸಿಲುಕಿದ್ದಾನೆ. ಆತನನ್ನು ಹೊರಗೆ ತರಲು ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/two-arrested-for-blackmailing-a-well-known-shop-owner-in-the-state/
ಮಂಡ್ಯ: ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ. ನವೆಂಬರ್ ಗೆ ಯಾವ ಕ್ರಾಂತಿ ಆಗಲ್ಲ ಎಂಬುದಾಗಿ ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಇಂದು ಮಡ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನವೆಂಬರ್ ಗೆ ಯಾವ ಕ್ರಾಂತಿ ಇಲ್ಲ, ಮುಖ್ಯಮಂತ್ರಿ ಕುರ್ಚಿಯಲ್ಲಿ ಸಿದ್ದರಾಮಯ್ಯ ಕುಳ್ತಿದ್ದಾರೆ. 5 ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿರ್ತಾರೆ. ಸ್ವತಃ ಡಿಕೆ ಶಿವಕುಮಾರ್ ಕೂಡ ಹೇಳಿದ್ದಾರೆ ಎಂದರು. ಮೈಸೂರಿನಲ್ಲಿ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ 5 ವರ್ಷನಾನೇ ಸಿಎಂ. ನಮ್ಮ ಪಕ್ಷ ಹೈಕಾಮಂಡ್ ಪಕ್ಷ ತೀರ್ಮಾನ ಎಲ್ಲ ಹೈಕಾಮಂಡ್ ಮಾಡುತ್ತೆ. ಹೈಕಾಮಂಡ್ ತೀರ್ಮಾನಕ್ಕೆ ನಾವು ಬದ್ದವಾಗಿದ್ದೇವೆ ಎಂದರು. ಅವರವರ ಬೆಂಬಲಿಗರಿಗೆ ಮುಖ್ಯಮಂತ್ರಿ ಆಗಬೇಕು ಅನ್ನೋದು ಆಸೆ ಇರುತ್ತೆ. ನಮ್ಮ ಅಧ್ಯಕ್ಷರೆ ಯಾರ ಬಗ್ಗೆ ಮಾತನಾಡಬಾರದು ಅಂತ ಸೂಚನೆ ಕೊಟ್ಟಿದ್ದಾರೆ. ವ್ಯಕ್ತಿಗಿಂತ ಪಕ್ಷ ಮುಖ್ಯ. ಯಾರಾದರೂ ಮಾತನಾಡಿದ್ರೆ ಕ್ರಮಕ್ಕೆ ಸೂಚನೆ ಕೊಟ್ಟಿದ್ದಾರೆ. ಈಗಾಗಲೇ ಹಲವರಿಗೆ ನೋಟೀಸ್ ಕೊಟ್ಟಿದ್ದಾರೆ. ಸದ್ಯಕ್ಕೆ ಸಿದ್ದರಾಮಯ್ಯ ಅವರೇ 5 ವರ್ಷ…
ಮಂಡ್ಯ: ಸ್ಲಂ ಬೋರ್ಡ್, ರಾಜೀವ್ ಗಾಂಧಿ ಯೋಜನೆಯಲ್ಲಿ ಒಂದು ಮನೆಯನ್ನ ಬಿಜೆಪಿ ಕೊಟ್ಟಿದ್ರೆ ನಾನು ದೇವರಾಣೆ ರಾಜಕೀಯ ನಿವೃತ್ತಿ ತಗೊಳ್ಳುತ್ತೇನೆ. ಬಿಜೆಪಿ ಸಾಬೀತು ಮಾಡಿದ್ರೆ ಸಾಯಂಕಾಲ ರಾಜ್ಯಪಾಲರ ಮನೆಗೆ ಹೋಗಿ ರಾಜಿನಾಮೆ ಕೊಡ್ತೇನೆ ಎಂಬುದಾಗಿ ಸಚಿವ ಜಮೀರ್ ಅಹಮದ್ ಹೇಳುವ ಮೂಲಕ ವಿಜಯೇಂದ್ರ, ಅಶೋಕ್ ಗೆ ಓಪನ್ ಚಾಲೆಂಜ್ ಹಾಕಿದ್ದಾರೆ. ಮಂಡ್ಯದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಅಶೋಕ್ ತಾಕತ್ ಧಮ್ ಇದ್ಯಾ ನಿಮಗೆ? ಬಿಜೆಪಿಯವರಿಗೆ ಕೆಲಸ ಇಲ್ಲ ಬರಿ ಟಿಕೇ ಮಾಡೋದೆ ಕೆಲಸ. ಯಾವುದಾದರೂ ಅಭಿವೃದ್ಧಿ ಕೆಲಸ ಮಾಡಿದ್ದಾರಾ? ಸಿದ್ದರಾಮಯ್ಯ ಮಾಡಿರುವ ಭಾಗ್ಯದ ಬಗ್ಗೆ ನಾವು ಹೇಳ್ತೇವೆ. ಬಿಜೆಪಿಯವರ ಕಾರ್ಯಕ್ರಮ ಸೋನ್ನೆ ಅವರು ಬರಿ ಹಿಂದು-ಮುಸ್ಲಿಂ ಅಷ್ಟೆ. ಅವರಿಗೆ ಹಿಂದೂ ಮುಸ್ಲಿಂ ಬೇಕಾಗಿಲ್ಲ ಬರಿ ಕುರ್ಚಿ ಬೇಕಷ್ಟೆ ಎಂದು ಕಿಡಿಕಾರಿದರು. ಪ್ರಧಾನಿ ನರೇಂದ್ರ ಮೋದಿ 15 ಲಕ್ಷ ಎಲ್ಲಿ? ಗ್ಯಾರಂಟಿ ಗಳ ಬಗ್ಗೆ ಟಿಕೆ ಮಾಡಿದ್ರು ನಮ್ಮ ಸರ್ಕಾರ ಗ್ಯಾರಂಟಿ ಸಕ್ಸಸ್ ಅಗಿದೆ. ಸಿದ್ದರಾಮಯ್ಯ ಹಿಂದೆ ಸ್ಲಂ ಬೋರ್ಟ್ 1.80…
ಮಂಡ್ಯ: ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಅಂತ ಬಯಸುತ್ತೇನೆ ಎಂಬುದಾಗಿ ಡಿಸಿಎಂ ಡಿಕೆಶಿ ಪರವಾಗಿ ವಸತಿ ಸಚಿವ ಜಮೀರ್ ಅಹಮದ್ ಖಾನ್ ಬ್ಯಾಟ್ ಬೀಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಡಿಕೆ ಶಿವಕುಮಾರ್ ಗೂ ಮುಖ್ಯಮಂತ್ರಿ ಆಗಬೇಕು ಅನ್ನೋ ಆಸೆ ಇದೆ. ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಅಂತ ಬಯಸುತ್ತೇನೆ. ಈ 5 ವರ್ಷ ಸಿದ್ದರಾಮಯ್ಯ ಅವರೇ ಇರ್ತಾರೆ ಎಂದರು. ನವೆಂಬರ್ ಗೆ ಸಚಿವ ಸಂಪುಟ ಪುನರ್ ರಚನೆಯಾಗಲಿದೆ. ಎಲ್ಲರಿಗೂ ಆಸೆ ಇದೆ. ಸೀನಿಯರ್ ಗಳು ಇದ್ದಾರೆ ಅವರಿಗೆಲ್ಲ ಮಂತ್ರಿ ಆಸೆ ಇದೆ. ನಮಗೂ ಅವಕಾಶ ಸಿಗಬೇಕು ಅನ್ನೋದು ತಪ್ಪಲ್ಲ. ಇದರ ತೀರ್ಮಾನ ಹೈಕಾಮಂಡ್ ಗೆ ಬಿಟ್ಟಿದ್ದು ಎಂದರು. https://kannadanewsnow.com/kannada/a-heartbreaking-incident-in-the-state-an-elder-brother-also-died-of-a-heart-attack-after-hearing-the-news-of-his-younger-brothers-death/ https://kannadanewsnow.com/kannada/note-do-you-know-how-many-days-you-can-store-water-in-your-home/
ಬೆಳಗಾವಿ: ರಾಜ್ಯದಲ್ಲೊಂದು ಮನಕಲಕುವ ಘಟನೆ ಎನ್ನುವಂತೆ ತಮ್ಮನ ಸಾವಿನ ಸುದ್ದಿಯನ್ನು ಕೇಳಿದಂತ ಅಣ್ಣ ಕೂಡ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಈ ಮೂಲಕ ಬೆಳಗಾವಿಯಲ್ಲಿ ಸಾವಿನಲ್ಲೂ ಸಹೋದರರು ಒಂದಾಗಿದ್ದಾರೆ. ಬೆಳಗಾವಿಯ ಕಪರಟ್ಟಿ ಗ್ರಾಮದ ಸತೀಶ್ ಬಾಗನ್ನವರ(16) ಎಂಬ ಯುವಕ ಅನಾರೋಗ್ಯಕ್ಕೆ ಒಳಗಾಗಿದ್ದರು. ಈ ಕಾರಣದಿಂದ ನಿಧನರಾಗಿದ್ದಾರೆ. ಈ ವಿಷಯವನ್ನು ಅಣ್ಣ ಬಸವರಾಜ್(24)ಗೆ ತಿಳಿಸಲಾಗಿದೆ. ಈ ಸುದ್ದಿ ಕೇಳುತ್ತಿದ್ದಂತ ಬಸವರಾಜ್ ಗೆ ಹೃದಯಾಘಾತವಾಗಿದೆ. ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗ ಮಧ್ಯದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಮಕ್ಕಳನ್ನು ಕಳೆದುಕೊಂಡ ತಂದೆ-ತಾಯಿಗಳು ಆಘಾತಗೊಂಡಿದ್ದಾರೆ. ಅಣ್ಣ-ತಮ್ಮದಿಂರ ಸಾವಿನಿಂದ ಇಡೀ ಕಪರಟ್ಟಿ ಗ್ರಾಮವೇ ಕಣ್ಣೀರಿಟ್ಟಿದೆ. https://kannadanewsnow.com/kannada/government-orders-funeral-of-senior-journalist-t-j-s-george-with-full-state-honours/ https://kannadanewsnow.com/kannada/note-do-you-know-how-many-days-you-can-store-water-in-your-home/
ಬೆಂಗಳೂರು: ನಿನ್ನೆ ಹಿರಿಯ ಪತ್ರಕರ್ತ ಟಿ.ಜೆ.ಎಸ್ ಜಾರ್ಜ್ ನಿಧನರಾಗಿದ್ದರು. ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಟಿ.ಜೆ.ಎಸ್ ಜಾರ್ಜ್ ದಿನಾಂಕ 03-10-2025ರಂದು ನಿಧನರಾಗಿರುತ್ತಾರೆ. ಅವರ ನಿಧನಕ್ಕೆ ಸರ್ಕಾರವು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತದೆ ಎಂದಿದ್ದಾರೆ. ಇನ್ನೂ ಮೃತರ ಗೌರವಾರ್ಥ ಹಿರಿಯ ಪತ್ರಕರ್ತ ಹಾಗೂ ಪದ್ಮ ಭೂಷಣ ಪ್ರಶಸ್ತಿ ಪುರಸ್ಕೃತ ಟಿ.ಜೆ.ಎಸ್ ಜಾರ್ಜ್ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ಆದೇಶಿಸಿದ್ದಾರೆ.
ಬೆಳಗಾವಿ: ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರನ್ನು ಆತಂಕಗೊಳಿಸಿದೆ.ಕಾಂಗ್ರೆಸ್ ಸರ್ಕಾರವು ನುಡಿದಂತೆ ನಡೆದು ಗ್ಯಾರಂಟಿಗಳನ್ನು ತಪ್ಪದೇ ನೀಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎನ್ ಡಿ ಆರ್ ಎಫ್ ಅನುದಾನವನ್ನು ಗ್ಯಾರಂಟಿಗಳಿಗೆ ಬಳಸಿಕೊಳ್ಳಲಾಗುತ್ತಿದೆ ಎಂಬ ವಿಪಕ್ಷ ನಾಯಕ ಆರ್.ಅಶೋಕ್ ಅವರ ಹೇಳಿಕೆಗೆ ಉತ್ತರಿಸುತ್ತಾ, ಎನ್ ಡಿ ಆರ್ ಎಫ್ ಅನುದಾನವನ್ನು ಗ್ಯಾರಂಟಿಗಳಿಗೆ ಬಳಸುತ್ತಿಲ್ಲ. ಬಿಜೆಪಿಯವರು ಕಾಮಾಲೆಕಣ್ಣಿನಿಂದ ಎಲ್ಲವನ್ನೂ ನೋಡುತ್ತಿದ್ದು, ಗ್ಯಾರಂಟಿ ಯೋಜನೆಗಳ ಯಶಸ್ಸು ಅವರಲ್ಲಿ ಆತಂಕವನ್ನುಂಟು ಮಾಡಿದೆ. ನಮ್ಮ ಗ್ಯಾರಂಟಿಗಳನ್ನು ಬಿಹಾರ , ದೆಹಲಿ, ಮಹಾರಾಷ್ಟ್ರ, ಮದ್ಯಪ್ರದೇಶ, ಹರಿಯಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಅನುಕರಿಸಿದ್ದಾರೆ. ಪ್ರಧಾನಿ ಮೋದಿಯವರು , ಗ್ಯಾರಂಟಿಗಳ ಅನುಷ್ಠಾನ ಸಾಧ್ಯವೇ ಇಲ್ಲ ಎಂದಿದ್ದರು. ಆದರೆ ಕಾಂಗ್ರೆಸ್ ಸರ್ಕಾರ , ನುಡಿದಂತೆ ನಡೆದು ಗ್ಯಾರಂಟಿಗಳನ್ನು ತಪ್ಪದೇ ನೀಡುತ್ತಿದ್ದೇವೆ ಎಂದರು. ಬಿಮ್ಸ್ ಆಸ್ಪತ್ರೆ-ಖಾಸಗಿ ನಿರ್ವಹಣೆ ಇಲ್ಲ ಇಂದು ಬೆಳಗಾವಿಯ ಬಿಮ್ಸ್ ನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು 2017 ರಲ್ಲಿ ಶಂಕುಸ್ಥಾಪನೆ ಹಾಗೂ ಇಂದು ಉದ್ಘಾಟನೆ…
ಬೆಂಗಳೂರು : “ಎಲ್ಲಾ ಸಮಾಜದ ಮುಂದಿನ ಪೀಳಿಗೆಗೆ ನ್ಯಾಯ ಒದಗಿಸಲು ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸಲಾಗುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸಿ ಅಗತ್ಯ ಮಾಹಿತಿಗಳನ್ನು ನೀಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಾರ್ವಜನಕರಿಗೆ ಮನವಿ ಮಾಡಿದರು. ಜಿಬಿಎ ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಸಮೀಕ್ಷೆಗೆ ಚಾಲನೆ ನೀಡಿದ ನಂತರ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸದಾಶಿವನಗರ ನಿವಾಸದ ಬಳಿ ಶನಿವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಇಂದಿನಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭವಾಗುತ್ತಿದ್ದು, ನನ್ನ ಮನೆಯಲ್ಲೂ ಸಮೀಕ್ಷೆ ನಡೆಸಿದ್ದಾರೆ. ನಾನು ಎಲ್ಲಾ ಮಾಹಿತಿ ನೀಡಿದ್ದೇನೆ. ಸಾರ್ವಜನಿಕರು ಕೂಡ ತಾಳ್ಮೆಯಿಂದ ನಿಮ್ಮ ಮಾಹಿತಿ ಒದಗಿಸಿಕೊಡಬೇಕು. ಈ ಸಮೀಕ್ಷೆಗೆ ಎಲ್ಲಾ ಜಾತಿ ಸಮುದಾಯದವರು ಸಹಕಾರ ನೀಡಬೇಕು ಎಂದು ಮನವಿ ಮಾಡುತ್ತೇನೆ” ಎಂದರು. ಹೆಚ್ಚು ಪ್ರಶ್ನೆಗಳಿದ್ದು ಸರಳೀಕರಣ ಮಾಡಬೇಕಿತ್ತು ಎಂದು ಕೇಳಿದಾಗ, “ನಾನು ಕೂಡ ಇಂದೇ ಈ ಪ್ರಶ್ನೆಗಳನ್ನು ನೋಡಿದೆ. ಇವುಗಳನ್ನು ಸರಳೀಕರಣ ಮಾಡಬೇಕಿತ್ತು. ನಗರ…














