Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: 2023-243 ಸಾಲಿಗೆ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು KPSC ಹೊರಡಿಸಿರುವ ಅಧಿಸೂಚನೆಯಲ್ಲಿ 2017-183e ಸಾಲಿನ ಗೆಜೆಟೆಡ್ ಪ್ರೊಬೇಷನರಿ (ಕೆಎಎಸ್) ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಸೀಮಿತಗೊಳಿಸಿ (One time measure) ಅರ್ಜಿ ಸಲ್ಲಿಸಲು ಹೆಚ್ಚುವರಿ ವಿಶೇಷ ಅವಕಾಶವನ್ನು ನೀಡುವ ಕುರಿತು ಆದೇಶವನ್ನು ಹೊರಡಿಸಿದೆ. ಆದೇಶಲ್ಲಿ ಲವು ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆ ಆಕಾಂಕ್ಷಿಗಳು ಸರ್ಕಾರಕ್ಕೆ ಮನವಿಗಳನ್ನು ಸಲ್ಲಿಸಿ, ರಾಜ್ಯ ಸರ್ಕಾರವು 2023-24ನೇ ಸಾಲಿಗೆ ಈಗಾಗಲೇ ಮೇಲೆ ಓದಲಾದ ಆದೇಶದಲ್ಲಿ ಕೆಎಎಸ್ ಪರೀಕ್ಷೆ ಬರೆಯಲು ಒಂದು ಬಾರಿ ಎಂಬಂತೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ನೀಡಿದ್ದು, ಇದರಿಂದ ಕೆಲವು ಅಭ್ಯರ್ಥಿಗಳಿಗೆ ಮಾತ್ರ ಅವಕಾಶ ದೊರೆಯಲಿದ್ದು ಉಳಿದ ಅಭ್ಯರ್ಥಿಗಳು ಅವಕಾಶ ವಂಚಿತರಾಗುತ್ತಿರುವ ಹಿನ್ನಲೆಯಲ್ಲಿ, 2017-18 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆ ನೇಮಕಾತಿಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ 2023-24 ನೇ ಸಾಲಿನ ಅಧಿಸೂಚನೆಯಲ್ಲಿ ಪರೀಕ್ಷೆ ಬರೆಯಲು ವಯಸ್ಸಿನ ನಿರ್ಬಂಧವಿಲ್ಲದ ಹೆಚ್ಚುವರಿ ವಿಶೇಷ ಅವಕಾಶ ನೀಡುವಂತೆ ಕೋರಿರುತ್ತಾರೆ.…
ಬೆಂಗಳೂರು: “ಸುಗಮ ಸಂಚಾರ ಹಾಗೂ ಸಂಚಾರಿ ದಟ್ಟಣೆ ನಿಯಂತ್ರಣಕ್ಕೆ ಗಾಂಧಿನಗರದ 1 ಕಿ.ಮೀ ಪ್ರಮುಖ ರಸ್ತೆಗಳಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬ್ರಾಂಡ್ ಬೆಂಗಳೂರು ಪರಿಕಲ್ಪನೆಯಡಿಯಲ್ಲಿ ಫ್ರೀಡಂ ಪಾರ್ಕ್ ಸಮೀಪ ಬಹುಮಹಡಿ ವಾಹನ ನಿಲುಗಡೆ ಸಂಕೀರ್ಣದ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ಶುಕ್ರವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರು ಹೇಳಿದ್ದಿಷ್ಟು; “ಬೆಂಗಳೂರು ಡಿಸಿ ಹಾಗೂ ಪೊಲೀಸ್ ಆಯುಕ್ತರು ಸೇರಿ ಗಾಂಧಿನಗರದ ಪ್ರಮುಖ ರಸ್ತೆಗಳಲ್ಲಿ ಸುಮಾರು 1 ಕಿ.ಮೀ ವ್ಯಾಪ್ತಿಯಲ್ಲಿ ವಾಹನ ನಿಲುಗಡೆ ನಿರ್ಬಂಧ ಮಾಡಿದ್ದಾರೆ. ಇಲ್ಲಿನ ರಸ್ತೆ ವಿಶಾಲವಾಗಿರಬೇಕು. ಎಲ್ಲಾ ವ್ಯಾಪಾರಿಗಳಿಗೆ ಲಾಭವಾಗಬೇಕು ಎಂದು ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಬಹುಮಹಡಿ ವಾಹನ ನಿಲುಗಡೆ ಸಂಕೀರ್ಣದ ಮೂಲಕ ಬೆಂಗಳೂರು ನಗರ ಇಂದು ಹೊಸ ಇತಿಹಾಸ ಪುಟಕ್ಕೆ ಸೇರಿದೆ. ಅಲ್ಲದೆ ಇಡೀ ರಾಜ್ಯಕ್ಕೆ ಸಂದೇಶ ರವಾನೆಯಾಗಿದೆ. ಇಲ್ಲಿ ಪ್ರತಿ ಗಂಟೆಗೆ ವಾಹನ ನಿಲುಗಡೆಗೆ 20-30 ರೂ. ನಿಗದಿ ಮಾಡಿದ್ದು, ಎರಡು ಮೂರು ಕಾರು ಹೊಂದಿರುವವರು ಕೂಡ ಇಲ್ಲಿ ವಾಹನ ನಿಲುಗಡೆ…
ಶಿವಮೊಗ್ಗ: ಸರ್ಕಾರಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವಂತ ರೈತರಿಗೆ ಸರ್ಕಾರದಿಂದ ಸಾಗುವಳಿ ಪತ್ರವನ್ನು ನೀಡೋ ಕೆಲಸ ಮಾಡುತ್ತಿದೆ. ಇದರ ಜೊತೆ ಜೊತೆಗೆ ಇದೇ ಭೂಮಿಯ ಅರ್ಧ ಎಕರೆಯಲ್ಲಿ ಕಾಡು ಬೆಳೆಸೋದಕ್ಕೆ ಮೀಸಲಿಡುವಂತ ನಿಯಮವನ್ನು ಜಾರಿಗೊಳಿಸಬೇಕು ಅಂತ ಶಾಸಕ ಬೇಳೂರು ಗೋಪಾಲಕೃಷ್ಣ ಅಭಿಪ್ರಾಯ ಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಬಾಳೆಹಳ್ಳಿಯಲ್ಲಿ ಸಾಗರ ಅರಣ್ಯಾಧಿಕಾರಿಗಳ ಸಹಕಾರದಿಂದ ವನ ಮಹೋತ್ಸವದಲ್ಲಿ ಗಿಡ ನೆಟ್ಟ ಬಳಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ನನಗೆ ಬಹಳ ಖುಷಿ ಆಯ್ತು ಇವತ್ತಿನ ಕಾರ್ಯಕ್ರಮ. ಮಲೆನಾಡು ಅಂದರೆ ನಮಗೆ ಜೀವ ರಕ್ಷಣೆ ಇರೋದೆ ಕಾಡಿನಲ್ಲಿ. ಕಳೆದ ವರ್ಷ ಮಳೆಯ ಅಭಾವ ಎಷ್ಟು ಆಗಿತ್ತು ಅಂತ ಗೊತ್ತಿದೆ ಎಂದರು. ಕಾಡು ಸಂರಕ್ಷಣೆ ಮಾಡುವ ಕೆಲಸ ಮಾಡಬೇಕು. ನಾವು ಜಾಗೃತರಾಗಬೇಕು. ಆ ಕೆಲಸ ಮಾಡಲಿಲ್ಲ ಅಂದರೆ ತಾಪಮಾನದಲ್ಲಿ ವ್ಯತ್ಯಾಸ ಆಗಲಿದೆ ಎಂದರು. ಒಂದು ಗಿಡ ಕಡಿದರೆ ಮತ್ತೊಂದು ಗಿಡ ನೆಡಬೇಕು. ಆ ಕೆಲಸವನ್ನು ವಿದ್ಯಾರ್ಥಿಗಳು ಮಾಡಬೇಕು. ಕಾಡು ಪ್ರಾಣಿಗಳು ನಾಡಿಗೆ ಬರುತ್ತಿವೆ. ಅದಕ್ಕೆ ಕಾಡು…
ಬೆಂಗಳೂರು : ಸರ್ಕಾರಿ ಉದ್ಯೋಗಕ್ಕೆ ಸೇರುವ ಅಧಿಕಾರಿಗಳು ತಮ್ಮ ಕುಟುಂಬಕ್ಕೆ ಒಳ್ಳೆಯ ಹೆಸರನ್ನು ತರುವದರೊಂದಿಗೆ ಯಾವುದೇ ಹಗರಣಗಳನ್ನು ಮಾಡದೆ ಸರ್ಕಾರಕ್ಕೆ ಹಾಗೂ ಸಮಾಜಕ್ಕೆ ಉತ್ತಮ ಸೇವೆಯನ್ನು ಸಲ್ಲಿಸುವಂತಾಗಬೇಕು ಎಂದು ಗ್ರಾಮೀಣಾಭಿವೃದ್ಧಿಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಗೆ ಒಂದೇ ಬಾರಿಗೆ ಲೋಕಸೇವಾ ಆಯೋಗದ ಮೂಲಕ ನೇಮಕಗೊಂಡ 347 ಎಂಜನಿಯರುಗಳಿಗೆ ಇಂದು ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ನಡೆದ ಸಮಾರಂಭದಲ್ಲಿ ಉದ್ಯೋಗ ನೇಮಕಾತಿ ಪತ್ರಗಳನ್ನು ವಿತರಿಸಿದ ಸಚಿವರು ಸೇವಾ ಮನೋಭಾವದಿಂದ ಉದ್ಯೋಗ ಮಾಡುವವರು ರಾಜಕೀಯದಿಂದ ದೂರ ಇರಬೇಕಾದುದು ಅತಿ ಮುಖ್ಯ ಎಂದು ಹೇಳಿದರಲ್ಲದೆ, ಇಷ್ಟೂ ಅಭ್ಯರ್ಥಿಗಳನ್ನು ಕೌನ್ಸೆಲಿಂಗ್ ಮೂಲಕ ಅನುಕೂಲವಾಗುವಂತಹ ಸ್ಥಳಗಳಿಗೆ ನೇಮಕ ಮಾಡಲಾಗಿದೆ ಎಂದು ತಿಳಿಸಿದರು. ʼಉದ್ಯೋಗ ಕೇಳ್ತಾರ, ಉದ್ಯೋಗ ಕೊಟ್ಟರೆ ಮನೆ ಬಗಲಿಗೆ ಬೇಕು ಅಂತಾರ, ಅದೂ ಮಾಡಿದ್ರೆ ಪಗಾರ ಸಾಲದು ಅಂತಾರʼ ಎಂದು ಸಚಿವರು ಹಾಸ್ಯ ಚಟಾಕಿ ಹಾರಿಸಿದರು. ಸಚಿವರ ಬದ್ಧತೆಯಿಂದ ತ್ವರಿತ ಗತಿಯಲ್ಲಿ ನೇಮಕ…
ರಾಯಚೂರು: ವೈದ್ಯಕೀಯ ಪ್ರವೇಶಾತಿಗೆ ನಡೆಯುವ ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದ್ದು, ಪ್ರಧಾನಿ ನರೇಂದ್ರಮೋದಿ ಸರ್ಕಾರದ ಬಹುದೊಡ್ಡ ಹಗರಣ ಇದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿನದಿಂದ ದಿನಕ್ಕೆ ನೀಟ್ ಪರೀಕ್ಷೆಯಲ್ಲಿ ಹೊಸ ಹೊಸ ಪ್ರಕರಣಗಳು ಆಚೆಗೆ ಬರುತ್ತಿವೆ. ಕೇಂದ್ರ ಸರ್ಕಾರದ ವೈಫಲ್ಯಗಳಿಂದಾಗಿ ಇತಿಹಾಸದಲ್ಲಿ ಮೊದಲ ಬಾರಿಗೆ ನೀಟ್ ಪರೀಕ್ಷೆಯಲ್ಲೂ ಅಕ್ರಮ ನಡೆದಿರುವುದು ಆಶ್ಚರ್ಯ ತಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನೀಟ್-ಯುಜಿ ಹಾಗೂ ಯುಜಿಸಿ-ನೆಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕೆಂದು ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತವೆ. ಆದರೂ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸದಿರುವುದು ಅತ್ಯಂತ ನೋವಿನ ಸಂಗತಿ ಎಂದು ವಿಷಾದಿಸಿದರು. ಕೇಂದ್ರ ಸರ್ಕಾರದ ನಡೆವಳಿಕೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಯಾರನ್ನೋ ರಕ್ಷಣೆ ಮಾಡಲು ಹೊರಟಂತಿದೆ. ಇದರಲ್ಲಿ ಪಕ್ಷ ರಾಜಕಾರಣ ಬೇಡವೇ ಬೇಡ. ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಅಡಗಿರುವುದರಿಂದ ಸಿಬಿಐ ತನಿಖೆಗೆ…
ಹೊಸಪೇಟೆ: ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಜಮೀರ್ ಅಹ್ಮದ್ ಖಾನ್ ಅವರನ್ನು ನೇಮಕ ಮಾಡಲಾಗಿದೆ. ಬಿ.ನಾಗೇಂದ್ರ ಅವರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಸದ್ಯಕ್ಕೆ ಜಮೀನ್ ಅಹ್ಮದ್ ಖಾನ್ ಅವರನ್ನೇ ನೇಮಕ ಮಾಡಿರುವುದಾಗಿ ಸಿಎಂ ಸಿದ್ಧರಾಮಯ್ಯ ಮಾಹಿತಿ ನೀಡಿದರು. ಇಂದು ಅವರು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು. ಜಿಲ್ಲೆಯಲ್ಲಿ ಪ್ರಸ್ತುತ 200 ಬೆಡ್ ಆಸ್ಪತ್ರೆ ಕಾರ್ಯ ನಡೆಯುತ್ತಿದೆ. ಆದರೆ ಬೇಡಿಕೆ ಹಿನ್ನೆಲೆಯಲ್ಲಿ ಇದನ್ನು 400 ಬೆಡ್ ಆಸ್ಪತ್ರೆಯನ್ನಾಗಿ ಉನ್ನತೀಕರಿಸಲು ಪ್ರಸ್ತಾವನೆ ಸಲ್ಲಿಸಲು ಸೂಚಿಸಿದ್ದಾರೆ. ನರೇಗಾದಲ್ಲಿ ಸಮಯಕ್ಕೆ ಸರಿಯಾಗಿ ಮಾನವ ದಿನಗಳ ಕೂಲಿ ಹಣ ಪಾವತಿಯಾಗಬೇಕು. ಅನಗತ್ಯ ಲೇಟ್ ಆಗಬಾರದು ಎನ್ನುವ ಸೂಚನೆ ನೀಡಿದರು. ನರೇಗಾದಲ್ಲಿ ಅಂಗನವಾಡಿ ಕಟ್ಟಡಗಳು, ಶಾಲೆ ಕೊಠಡಿಗಳು, ಕಾಂಪೌಂಡ್ ಬೇಡಿಕೆಗಳು, ಊಟದ ಗುಣಮಟ್ಟ , ಅಡುಗೆ ಕೋಣೆಗಳು ಮತ್ತು ಶೌಚಾಲಯಗಳ ನಿರ್ಮಾಣಕ್ಕೆ ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳ ಪ್ರಮಾಣಕ್ಕೆ ತಕ್ಕಂತೆ ಸವಲತ್ತುಗಳನ್ನು ಒದಗಿಸುವಂತೆ ಸೂಚನೆ ನೀಡಿದರು. ಕಲುಶಿತ ನೀರು ಕುಡಿದ ಜನರ ಆರೋಗ್ಯ ಮತ್ತು…
ಬೆಂಗಳೂರು: ದ್ವಿತೀಯ ಪಿಯುಸಿ ತೇರ್ಗಡೆಯಾದಂತ ವಿದ್ಯಾರ್ಥಿಗಳಿಗೆ ಮುಂದಿನ ಭವಿಷ್ಯ ರೂಪಿಸಿಕೊಳ್ಳೋ ನಿಟ್ಟಿನಲ್ಲಿ, ಜಿ.ಎನ್.ಎಂ. ನರ್ಸಿಂಗ್ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. 2024-2025 ನೇ ಸಾಲಿನ ಶೈಕ್ಷಣೆಕ ವರ್ಷಕ್ಕೆ ಸರ್ಕಾರಿ ನರ್ಸಿಂಗ್ ಶಾಲೆ ಹಾಗೂ ಖಾಸಗಿ ನರ್ಸಿಂಗ್ ಶಾಲೆಗಳಲ್ಲಿನ ಶೇಖಡ 10ರಷ್ಟು ಸರ್ಕಾರಿ ಕೋಟಾದ ಸೀಟುಗಳ ಪ್ರವೇಶಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೋರ್ಸಿಗೆ ದಿನಾಂಕ: 21-06-2024ರ ಇಂದಿನಿಂದ ಆರಂಭಗೊಂಡಿದೆ. ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ: 05-07-2024 ಆಗಿದೆ. https://kannadanewsnow.com/kannada/renukaswamy-murder-case-bbmp-officials-issue-notice-to-pattanagere-shet-for-non-payment-of-taxes/ https://kannadanewsnow.com/kannada/98-indians-not-68-died-during-haj-pilgrimage-mea/
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ನಟ ದರ್ಶನ್ ಬಂಧಿಸಲ್ಪಟ್ಟು ಪೊಲೀಸರ ಕಸ್ಟಡಿಯಲ್ಲಿದ್ದಾರೆ. ಎ1 ಆರೋಪಿ ಪವಿತ್ರಾ ಗೌಡ ಅವರು ಜೈಲುಪಾಲಾಗಿದ್ದಾರೆ. ಈ ಪ್ರಕರಣ ಸಂಬಂಧ ರೇಣುಕಾಸ್ವಾಮಿ ಹತ್ಯೆ ನಡೆಸಿದಂತ ಸ್ಥಳದ ಶೆಡ್ ಮಾಲಿಕರು ತೆರಿಗೆ ಪಾವತಿ ಮಾಡದೇ ಇರೋದಾಗಿ ತಿಳಿದು ಬಂದಿದೆ. ಹೀಗಾಗಿ ಬಿಬಿಎಂಪಿ ಅಧಿಕಾರಿಗಳು ಶೆಡ್ ಮಾಲೀಕರಿಗೆ ನೋಟಿಸ್ ನೀಡಿದ್ದಾರೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಶೆಡ್ ಒಂದಕ್ಕೆ ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿಕೊಂಡು ಬರಲಾಗಿತ್ತು. ಪಟ್ಟಣಗೆರೆ ಬಳಿಯ ಶೆಡ್ ನಲ್ಲಿ ಚಿತ್ರಹಿಂಸೆ ನೀಡಿ, ಆತನನ್ನು ಹತ್ಯೆಗೈಯ್ಯಲಾಗಿತ್ತು. ಈ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಪಟ್ಟಣಗೆರೆ ಶೆಡ್ ಮಾಲೀಕ ಆಸ್ತಿ ತೆರಿಗೆ ಪಾವತಿಸದೇ ಇರುವ ವಿಚಾರ ಬೆಳಕಿಗೆ ಬಂದಿದೆ. 2008ರಿಂದ ಪಟ್ಟಣಗೆರೆಯ ಶೆಡ್ ಮಾಲೀಕ ತೆರಿಗೆಯನ್ನು ಪಾವತಿಸದೇ ವಂಚಿಸಿರೋ ಆರೋಪ ಕೇಳಿಬಂದಿದೆ. ಹೀಗಾಗಿ ಬಿಬಿಎಂಪಿ ಆಡಳಿತಾಧಿಕಾರಿ ಇಷ್ಟು ದಿನ ಹೇಗೆ ತೆರಿಗೆ ಕಟ್ಟಿಸಿಕೊಳ್ಳದೇ ಬಾಕಿ ಬಿಟ್ಟಿದ್ದೀರಿ ಅಂತ ತರಾಟೆಗೆ…
ಬೆಂಗಳೂರು: ಖ್ಯಾತ ಗಾಯಕ ಲಕ್ಕಿ ಆಲಿ ಅವರು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ, ಅವರ ಪತಿ ಹಾಗೂ ಬಾಮೈದನ ವಿರುದ್ಧ ಕರ್ನಾಟಕ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದಾರೆ. ಹೀಗಾಗಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮತ್ತೊಂದು ಸಂಕಷ್ಟ ಎದುರಾದಂತೆ ಆಗಿದೆ. ಈ ಕುರಿತಂತೆ ಕರ್ನಾಟಕ ಲೋಕಾಯುಕ್ತ ಪೊಲೀಸರಿಗೆ ಸಲ್ಲಿಸಿರುವಂತ ದೂರಿನ ಪ್ರತಿಯನ್ನು ಎಕ್ಸ್ ನಲ್ಲಿ ಖ್ಯಾತ ಗಾಯಕ ಲಕ್ಕಿ ಆಲಿ ಅವರು ಪೋಸ್ಟ್ ಮಾಡಿದ್ದಾರೆ. ಅದರಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ, ಅವರ ಪತಿ ಸುಧೀರ್ ರೆಡ್ಡಿ ಹಾಗೂ ಬಾಮೈದ ಮಧುಸೂಧನ ರೆಡ್ಡಿ ವಿರುದ್ಧ ದೂರು ನೀಡಿದ್ದಾರೆ. https://twitter.com/luckyali/status/1803762086457053653 ಅವರು ನೀಡಿರುವಂತ ದೂರಿನಲ್ಲಿ ಯಲಹಂಕ ನ್ಯೂ ಟೌನ್ ವ್ಯಾಪ್ತಿಯಲ್ಲಿರುವಂತ ತಮ್ಮ ಟ್ರಸ್ಟ್ ಗೆ ಸಂಬಂಧಿಸಿದ ಭೂಮಿಯನ್ನು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ, ಅವರ ಭಾಮೈದ ಮಧುಸೂಧನ ಅವರು ಒತ್ತುವರಿ ಮಾಡಿಕೊಂಡಿದ್ದಾರೆ ಎಂಬುದಾಗಿ ಆರೋಪಿಸಿದ್ದಾರೆ. ಇದೇ ವಿಚಾರಕ್ಕೆ ಖ್ಯಾತ ಗಾಯಕ ಲಕ್ಕಿ ಆಲಿ ಅವರು 2022ರಲ್ಲಿಯೂ ದೂರು ಸಲ್ಲಿಸಿದ್ದರು. ಅದರಲ್ಲಿ ಯಲಹಂಕ ನ್ಯೂ…
ನವದೆಹಲಿ: ಲೋಕಸಭಾ ಚುನಾವಣೆ 2024 ರ ಫಲಿತಾಂಶದ ನಂತರ ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ ಇಂದು (ಜೂನ್ 21) ಪಶ್ಚಿಮ ಬಂಗಾಳದ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮೂಲಗಳ ಪ್ರಕಾರ, ಚೌಧರಿ ಅವರು ಲೋಕಸಭಾ ಚುನಾವಣೆಯಲ್ಲಿ ತಮ್ಮ ಸೋಲನ್ನು ಒಪ್ಪಿಕೊಂಡಿದ್ದಾರೆ ಮತ್ತು ಬಂಗಾಳದಲ್ಲಿ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷದ ಕಳಪೆ ಪ್ರದರ್ಶನವನ್ನು ಒಪ್ಪಿಕೊಂಡಿದ್ದಾರೆ. ಅಧೀರ್ ರಂಜನ್ ಚೌಧರಿ ಅವರ ರಾಜೀನಾಮೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಮೂಲಗಳು ತಿಳಿಸಿವೆ. ಇದಕ್ಕೂ ಮುನ್ನ, ರಾಜಕೀಯ ರೂಕಿ ಯೂಸುಫ್ ಪಠಾಣ್ ಅವರ ಕೈಯಲ್ಲಿ ಅವರ ಸೋಲಿನ ಬಗ್ಗೆ ಕೇಳಿದಾಗ, ಹಿರಿಯ ಕಾಂಗ್ರೆಸ್ ಮುಖಂಡ ಅಧೀರ್ ಚೌಧರಿ ಅವರು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರನ್ನು ಸೋಲಿಸುವ ತಮ್ಮ ಆಟದ ಯೋಜನೆಯಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಿದ್ದಾರೆ. ಧಾರ್ಮಿಕ ಆಧಾರದ ಮೇಲೆ ಮತದಾರರನ್ನು ತನ್ನಿಂದ ದೂರವಿರಿಸಲು ತಮ್ಮ ವಿರೋಧಿಗಳು ಪ್ರಯತ್ನಿಸಿದರೂ, ಎಲ್ಲಾ ಧರ್ಮಗಳ ಹೆಚ್ಚಿನ ಸಂಖ್ಯೆಯ…