Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಟಿಕೆಟ್ ಇಲ್ಲದೇ ಪ್ರಯಾಣಿಸಿದಂತ ಪ್ರಯಾಣಿಕರಿಗೆ ಕೆ ಎಸ್ ಆರ್ ಟಿಸಿ ಬಿಗ್ ಶಾಕ್ ಎನ್ನುವಂತೆ, ಬರೋಬ್ಬರಿ 3754 ಮಂದಿಗೆ ದಂಡವನ್ನು ವಿಧಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು, ಮೇ-2024 ರ ಮಾಹೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತನ್ನ ತನಿಖಾ ತಂಡಗಳಿಂದ ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿ ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 42,680 ವಾಹನಗಳನ್ನು ತನಿಖೆಗೊಳಪಡಿಸಿ 3708 ಪ್ರಕರಣಗಳನ್ನು ಪತ್ತೆಹಚ್ಚಿ, 3754 ಟಿಕೇಟ್ ರಹಿತ ಪ್ರಯಾಣಿಕರಿಂದ 6,54,738/-ರೂಗಳನ್ನು ದಂಡದ ರೂಪದಲ್ಲಿ ವಸೂಲಿ ಮಾಡಲಾಗಿದೆ ಅಂತ ತಿಳಿಸಿದೆ. ಇನ್ನೂ ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ 88,429/- ರೂಗಳನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ, ಹಾಗೂ ತಪ್ಪಿತಸ್ಥರ ವಿರುದ್ದ ಇಲಾಖಾ ರೀತ್ಯಾ ಸೂಕ್ತ ಶಿಸ್ತಿನ ಕ್ರಮವನ್ನು ಜರುಗಿಸಲಾಗಿದೆ ಎಂಬುದಾಗಿ ಹೇಳಿದೆ. ಆದ್ದರಿಂದ ಸಾರ್ವಜನಿಕ ಪ್ರಯಾಣಿಕರು, ಬಸ್ಸಿನಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೇಟ್/ ಪಾಸ್ ಪಡೆದು ಪ್ರಯಾಣ ಮಾಡುವಂತೆ, ನಿಗಮವು ಈ ಮೂಲಕ ಪ್ರಯಾಣಿಕರಲ್ಲಿ ಕೋರಿದೆ. https://kannadanewsnow.com/kannada/chitradurga-age-is-not-important-for-learning-yoga-one-should-have-a-willingness-to-learn-shivalingappa/ https://kannadanewsnow.com/kannada/ration-card-holders-note-check-your-name-on-the-ration-card-like-this/
ಚಿತ್ರದುರ್ಗ: ಯೋಗ ಕಲಿಯಲು ವಯಸ್ಸು ಮುಖ್ಯವಲ್ಲ,ಆಸಕ್ತಿಯಿಂದ ಕಲಿಯುವ ಮನಸಿರಬೇಕು ಎಂದು ಐಯುಡಿಪಿ ಬಡಾವಣೆಯ ನಿಸರ್ಗ ಯೋಗಕೇಂದ್ರದ ಯೋಗಗುರು ಶಿವಲಿಂಗಪ್ಪ ಹೇಳಿದರು. ನಗರದ ಐಯುಡಿಪಿ ಬಡಾವಣೆಯಲ್ಲಿರುವ ಪ್ರಶಾಂತಿ ವಿದ್ಯಾಲಯದಲ್ಲಿ 10 ನೇ ಅಂತರರಾಷ್ಟ್ರೀಯ ಯೋಗಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಯೋಗಪ್ರದರ್ಶನದಲ್ಲಿ ಭಾಗಿಯಾಗಿದ್ದ ಅವರು, ನರ್ಸರಿ,ಎಲ್ ಕೆಜಿ ವಿದ್ಯಾರ್ಥಿಗಳು ಸೇರಿದಂತೆ ಪ್ರಾಥಾಮಿಕ ಶಾಲೆಯ ಮಕ್ಕಳಿಗೆ ಯೋಗತರಭೇತಿ ಕುರಿತು ತಿಳಿಸಿದರು. ಶಾಲೆಯ ಸಭಾಂಗಣದಲ್ಲಿ ನಡೆದ ಯೋಗಾಭ್ಯಾಸದಲ್ಲಿ ಮಾತನಾಡಿದ ಅವರು,ಯೋಗ ಅನ್ನೋದು ಇಂದು ಹೆಮ್ಮರವಾಗಿ ಬೆಳೆದಿದೆ.ವೈದ್ಯಕೀಯ ಲೋಕಕ್ಕೆ ಸವಾಲಾಗಿದೆ.ಔಶಧೋಪಚಾರದಿಂದ ಗುಣವಾಗದ ರೋಗರುಜಿನಗಳು ನಿತ್ಯ ಯೋಗಭ್ಯಾಸದಿಂದ ಸುಧಾರಿಸಿವೆ.ಹೀಗಾಗಿ ದೇಶ ವಿದೇಶಗಳಲ್ಲು ಯೋಗ ಬಹುಪ್ರಾಮುಖ್ಯತೆ ಪಡೆದಿದೆ ಎಂದರು. ಈ ವೇಳೆ ಹವ್ಯಾಸಿ ಯೋಗ ಪಟುಗಳ ಜಯ್ಯಣ್ಣ,ಪುಷ್ಪ,ಸಂಯುಕ್ತ,ದಿವ್ಯ ಯೋಗ ಪ್ರದರ್ಶನ ನೀಡಿದರು.ವಿದ್ಯಾರ್ಥಿಗಳು ಆಕರ್ಷಕ ಯೋಗ ಭಂಗಿಗಳನ್ನು ನೋಡಿ ಪುಳಕಿತರಾದರು.ಈ ವೇಳೆ ಪ್ರಶಾಂತಿ ಶಾಲೆಯ ಮುಖ್ಯಸ್ಥರಾದ ರಮೇಶ್ ಇಟಗಿ, ಶಿಕ್ಷಕಿಯಾದ ಸಂಪದ,ಸಂದ್ಯ ಮೇಡಂ ಇದ್ದರು. https://kannadanewsnow.com/kannada/panchaghataks-will-happen-this-time-kodimatha-sri-explosive-prediction/ https://kannadanewsnow.com/kannada/breaking-bmtc-employees-call-off-strike-state-govt-notifies-not-to-protest-for-6-months/
ಚಿಕ್ಕಬಳ್ಳಾಪುರ: ರಾಜ್ಯ, ದೇಶದಲ್ಲಿ ಈ ಬಾರಿ ಪಂಚಘಾತಕಗಳು ಸಂಭವಿಸಲಿದ್ದಾವೆ. ಇವುಗಳನ್ನು ಗೆಲ್ಲೋದು ತುಂಬಾನೇ ಕಷ್ಟ ಎಂಬುದಾಗಿ ಶಾಕಿಂಗ್ ಭವಿಷ್ಯವನ್ನು ಕೋಡಿಮಠದ ಶ್ರೀಗಳು ನುಡಿದಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಕೋಡಿಮಠದ ಶಿವಾನಂದ ಸ್ವಾಮೀಜಿಯವರು, ಕ್ರೋಧಿನಾಮ ಸಂವಸ್ತರದಲ್ಲಿ ಕ್ರೋಧ, ದ್ವೇಷ, ಮಧ, ಅಸೂಯೆಗಳು ಹೆಚ್ಚಾಗಲಿವೆ ಅಂತ ತಿಳಿಸಿದ್ದಾರೆ. ಪಂಚಾಘಾತಕಗಳು ಅಂದ್ರೆ ಭೂಕಂಪ, ಅಗ್ನಿ, ಜಲಕಂಟಕ, ವಾಯುವಿನಿಂದಲೂ ಆಪತ್ತು ದೇಶ, ರಾಜ್ಯಕ್ಕೆ ಎದುರಾಗಲಿದೆ. ಈ ಕ್ರೋಧಿನಾಮ ಸಂವತ್ಸರದಲ್ಲಿ ಗುರು ಶಿಷ್ಯನಾಗುತ್ತಾನೆ. ಶಿಷ್ಯ ಗುರುವಾಗುತ್ತಾನೆ. ದೇಶದಲ್ಲಿ ಹೆಣ್ಣುಮಕ್ಕಳ ಪ್ರಾಬಲ್ಯ ಹೆಚ್ಚಾಗುತ್ತದೆ. ಅದರಿಂದ ಸುಖ-ದುಖ ಎರಡೂ ಇದೆ ಅಂತ ಹೇಳಿದರು. ಈ ಹಿಂದೆ ಕೋಠಿಮಠ ಶ್ರೀಗಳು ರಾಜ್ಯ, ದೇಶದ ರಾಜಕೀಯ, ಅವಘಡಗಳ ಬಗ್ಗೆ ಮಹತ್ವದ ಭವಿಷ್ಯ ನುಡಿದಿದ್ದರು. ಅವುಗಳಲ್ಲಿ ಅನೇಕವು ನಿಜ ಕೂಡ ಆಗಿದ್ದವು. ಈಗ ಮತ್ತೊಂದು ಸ್ಪೋಟಕ ಭವಿಷ್ಯ ನುಡಿದಿದ್ದಾರೆ. https://kannadanewsnow.com/kannada/ration-card-holders-note-check-your-name-on-the-ration-card-like-this/ https://kannadanewsnow.com/kannada/state-govt-allows-pre-primary-classes-to-start-in-578-schools/
ಬೆಂಗಳೂರು: ಕೇಂದ್ರ ಸರ್ಕಾರದ ಶಿಕ್ಷಣ ಮಂತ್ರಾಲಯದ ವಾರ್ಷಿಕ ಯೋಜನಾ ಮಂಡಳಿಯಲ್ಲಿ ಅನುಮೋದನೆಗೊಂಡಂತೆ ರಾಜ್ಯದ ಆಯ್ದ 578 ಸರ್ಕಾರಿ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಲು ಅನುಮತಿಸಿ ಆದೇಶಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಕೇಂದ್ರ ಸರ್ಕಾರದ ಶಿಕ್ಷಣ ಮಂತ್ರಾಲಯದ ವಾರ್ಷಿಕ ಯೋಜನಾ ಮಂಡಳಿಯಲ್ಲಿ ಅನುಮೋದನೆಗೊಂಡಂತೆ ರಾಜ್ಯದ ಆಯ್ದ 578 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಲು ಅನುಮತಿ ನೀಡುವ ಕುರಿತು.. 1. ಕೇಂದ್ರ ಸರ್ಕಾರದ ಶಿಕ್ಷಣ ಮಂತ್ರಾಲಯದ 2023-24 ಹಾಗೂ 2024 25ನೇ ಸಾಲಿನ ವಾರ್ಷಿಕ ಯೋಜನಾ ಮಂಡಳಿ ಅನುಮೋದನೆಯ 3:17-04-2023 3 15-04-2024. 2. ರಾಜ್ಯ ಯೋಜನಾ ನಿರ್ದೇಶಕರು, ಸಮಗ್ರ ಶಿಕ್ಷಣ ಕರ್ನಾಟಕ ಇವರ ಏಕ ಕಡತ ಸಂಖ್ಯೆ: SSK/Prpy/PAB/4/2024-JDQ. ಕೇಂದ್ರ ಸರ್ಕಾರದ ಶಿಕ್ಷಣ ಮಂತ್ರಾಲಯದ ವಾರ್ಷಿಕ ಯೋಜನಾ ಮಂಡಳಿಯಲ್ಲಿ 2023-24 ಹಾಗೂ 2024-25ನೇ ಸಾಲಿನಲ್ಲಿ ಕ್ರಮವಾಗಿ ರಾಜ್ಯದ 262 ಮತ್ತು 316 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ…
ಮಂಡ್ಯ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಯ ಅವರನ್ನು ನಿಂದಿಸಿದ ಹಿನ್ನಲೆಯಲ್ಲಿ, ನಟ ದರ್ಶನ್ ಅವರ ಮಹಿಳಾ ಅಭಿಮಾನಿಯೊಬ್ಬರ ವಿರುದ್ಧ ಜೆಡಿಎಸ್ ಪೊಲೀಸರಿಗೆ ದೂರು ನೀಡಿದೆ. ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ಟೌನ್ ಪೊಲೀಸ್ ಠಾಣೆಗೆ ತೆರಳಿದಂತ ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಜಾನಿಕೀರಾಮ್ ಅವರು, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ನಟ ದರ್ಶನ್ ಅವರ ಮೇಲೆ ಕೊಲೆ ಆರೋಪ ಬರುವಂತೆ ಮಾಡಿದ್ದಾರೆ. ದುಡ್ಡು ಕೊಟ್ಟು ನಟ ದರ್ಶನ್ ಅವರ ವಿರುದ್ಧ ಧಿಕ್ಕಾರ ಕೂಗಿಸುತ್ತೀಯಾ.? ಸುಮಲತಾ ಅಂಬರೀಶ್ ಮಂಡ್ಯದಲ್ಲಿ ನಿನಗೆ ಸ್ಪರ್ಧಿಸಲು ಅವಕಾಶ ಕೊಟ್ಟಿರುವುದಕ್ಕೆ ಡಿ ಬಾಸ್ ವಿರುದ್ಧವೇ ಸ್ಕೆಚ್ ಹಾಕುತ್ತೀಯಾ? ನೀನು ಸುಮಲತಾ ಅವರಿಂದ ಭಿಕ್ಷೆ ಹಾಕಿಸಿಕೊಂಡ ಮಗ ಎಂಬುದಾಗಿ ನಿಂದಿಸಿದ್ದಾರೆ ಅಂತ ದೂರಿನಲ್ಲಿ ಹೇಳಿದ್ದಾರೆ. ನಟ ದರ್ಶನ್ ಅವರ ಮಹಿಳಾ ಅಭಿಮಾನಿ ಎನ್ನಲಾಗುವಂತ ಮಂಗಳಾ ಎಂಬುವರು ಹೀಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ನಿಂದಿಸಿರುವಂತ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಏಕ ವಚನದಲ್ಲೇ ಹೆಚ್.ಡಿ…
ದೊಡ್ಡಬಳ್ಳಾಪುರ: ಇಲ್ಲಿನ ಕೆಸ್ತೂರು ಗೇಟ್ ಬಳಿಯಲ್ಲಿ ಬೈಕ್ ಗೆ ಲಾರಿಯೊಂದು ಡಿಕ್ಕಿಯಾದ ಪರಿಣಾಮ, ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ 3 ವರ್ಷದ ಬಾಲಕ ಸಾವನ್ನಪ್ಪಿದ್ದು, ತಂದೆ-ತಾಯಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕೆಸ್ತೂರು ಗೇಟ್ ನಲ್ಲಿ ಬೈಕ್ ನಲ್ಲಿ ದಂಪತಿಗಳು ಹಾಗೂ ಮಗು ತೆರಳುತ್ತಿದ್ದರು. ಈ ವೇಳೆಯಲ್ಲಿ ಲಾರಿಯೊಂದು ಬೈಕ್ ಗೆ ಡಿಕ್ಕಿಯಾಗಿದೆ. ಈ ಪರಿಣಾಮ ಸ್ಥಳದಲ್ಲೇ ಧನ್ವಿತ್(3) ಬಾಲಕ ಸಾವನ್ನಪ್ಪಿದ್ದಾನೆ. ಅವರ ತಂದೆ ತಾಯಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡಿರುವಂತ ತಂದೆ ಆಂಜನೇಯ ಹಾಗೂ ತಾಯಿ ಮಮತಾಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಅಪಘಾತದ ಬಳಿಕ ಚಾಲಕ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಈ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/supreme-court-dismisses-plea-seeking-release-of-hamare-bara/ https://kannadanewsnow.com/kannada/ration-card-holders-note-check-your-name-on-the-ration-card-like-this/
ನವದೆಹಲಿ: ಎರಡು ದಿನಗಳ ಹಿಂದೆ ಬಾಂಬೆ ಹೈಕೋರ್ಟ್ನಿಂದ ಹಸಿರು ನಿಶಾನೆ ಪಡೆದ ಹಮಾರೆ ಬಾರಾ ಇನ್ನೂ ಕಾನೂನು ಹೋರಾಟದಲ್ಲಿ ಸಿಲುಕಿದೆ. ಚಲನಚಿತ್ರಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಮತ್ತೊಂದು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ ಎಂದು ಲೈವ್ ಲಾ ಶುಕ್ರವಾರ ವರದಿ ಮಾಡಿದೆ. ಈ ಚಿತ್ರವು ಇಂದು, ಜೂನ್ 21 ರಂದು ರೊಮ್ಯಾಂಟಿಕ್-ಕಾಮಿಡಿ ಡ್ರಾಮಾ ಇಷ್ಕ್ ವಿಶ್ಕ್ ರೀಬೌಂಡ್ ಜೊತೆಗೆ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು. ಹಮಾರೆ ಬಾರಾಹ್ ವಿವಾದ ಇಸ್ಲಾಮಿಕ್ ನಂಬಿಕೆ ಮತ್ತು ಭಾರತದಲ್ಲಿ ವಿವಾಹಿತ ಮುಸ್ಲಿಂ ಮಹಿಳೆಯರನ್ನು ಅವಮಾನಿಸಲಾಗಿದೆ ಎಂದು ಆರೋಪಿಸಲಾದ #HamareBaarah ಚಿತ್ರಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಮತ್ತೊಂದು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ ಎಂದು ಲೈವ್ ಲಾದ ಅಧಿಕೃತ ಎಕ್ಸ್ ಹ್ಯಾಂಡಲ್ ಹಂಚಿಕೊಂಡಿದೆ. ನ್ಯಾಯಪೀಠದ ಸದಸ್ಯರಲ್ಲಿ ಒಬ್ಬರಾದ ನ್ಯಾಯಮೂರ್ತಿ ವಿಕ್ರಮ್ ನಾಥ್, “ನಾವು ಈ ಅರ್ಜಿಯನ್ನು ಏಕೆ ಪರಿಗಣಿಸಬೇಕು? ಹೈಕೋರ್ಟ್ ಇದನ್ನು ನೋಡಿದೆ… ಮತ್ತು ಅದನ್ನು ಪ್ರದರ್ಶಿಸಲು ಅವಕಾಶ ಮಾಡಿಕೊಟ್ಟಿತು… ನೀವು ಆ ಆದೇಶವನ್ನು ಪ್ರಶ್ನಿಸುತ್ತೀರಿ. ನೀವು ಅರ್ಜಿಯನ್ನು ತಿದ್ದುಪಡಿ ಮಾಡಲು…
ಹಾಸನ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣ ಸಂಬಂಧ ಅವರ ನಿವಾಸದಲ್ಲಿ ಇಂದು ಎಸ್ಐಟಿಯಿಂದ ಸ್ಥಳ ಮಹಜರು ನಡೆಸಲಾಗಿದೆ. ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. ಈ ಪ್ರಕರಣದಲ್ಲಿ ಇಂದು ಎಸ್ಐಟಿಯಿಂದ ಬಾಡಿ ವಾರಂಟ್ ಪಡೆದು, ಪ್ರಜ್ವಲ್ ರೇವಣ್ಣ ಅವರೊಂದಿಗೆ ಹಾಸನದ ನಿವಾಸದಲ್ಲಿ ಸ್ಥಳ ಮಹಜರು ನಡೆಸಿದರು. ಹಾಸನ ಜಿಲ್ಲೆಯ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಅತ್ಯಾಚಾರ ಪ್ರಕರಣದಲ್ಲಿ, ಇಂದು ಪ್ರಜ್ವಲ್ ರೇವಣ್ಣ ಸಮ್ಮುಖದಲ್ಲಿ ಹಾಸನದ ನಿವಾಸದಲ್ಲಿ ಎಸ್ಐಟಿ ಅಧಿಕಾರಿಗಳು ಸ್ಥಳ ಮಹಜರು ಮಾಡಿದರು. ಅಂದಹಾಗೇ ಪ್ರಜ್ವಲ್ ರೇವಣ್ಣ ಅವರಿಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಜೂನ್.24ರವರೆಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಹೀಗಾಗಿ ಅವರು ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. https://kannadanewsnow.com/kannada/ration-card-holders-note-check-your-name-on-the-ration-card-like-this/ https://kannadanewsnow.com/kannada/breaking-bmtc-employees-call-off-strike-state-govt-notifies-not-to-protest-for-6-months/
ವಿಜಯನಗರ: DDPI ಮತ್ತು BEO ಅಮಾನತ್ತಿಗೆ ಸಿಎಂ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಖಡಕ್ ಸೂಚನೆಯನ್ನು ಇಂದಿನ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ನೀಡಿದ್ದಾರೆ. ಇಂದು ವಿಜಯನಗರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆಸಲಾಯಿತು. ಈ ಸಭೆ ಮಧ್ಯದಲ್ಲೇ ದೂರವಾಣಿ ಮೂಲಕ ಕಾರ್ಯದರ್ಶಿ ಅವರನ್ನು ಸಂಪರ್ಕಿಸಿ ಅಮಾನತ್ತಿಗೆ ಸೂಚಿಸಿದರು. ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಶೈಕ್ಷಣಿಕವಾಗಿ ಜಿಲ್ಲೆ 10ನೇ ಸ್ಥಾನದಿಂದ 27ನೇ ಸ್ಥಾನಕ್ಕೆ ಕುಸಿದಿರುವುದಕ್ಕೆ ಸಿಕ್ಕಾಪಟ್ಟೆ ಸಿಟ್ಟಾದ ಸಿಎಂ, ಇದಕ್ಕೆ ನಿಮ್ಮನ್ನು ಏಕೆ ಹೊಣೆ ಮಾಡಬಾರದು ಎಂದು ಡಿಡಿಪಿಐ ಅವರನ್ನು ಪ್ರಶ್ನಿಸಿದರು. ಎಸ್ಎಸ್ಎಸ್ಸಿ ಯಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಿಲಿತಾಂಶ ಪ್ರಮಾಣ ಕುಸಿದಿರುವುದಕ್ಕೆನೀವೇ ಕಾರಣ. ನಿಮ್ಮ ಬಿಇಒ ಗಳು, ಶಿಕ್ಷಕರ ಪ್ರಯತ್ನ ಏನು? ಯಾವ ದಿಕ್ಕಿನಲ್ಲಿದೆ? ಈ ಕಳಪಡೆ ಸಾಧನೆಗೆ ನಿಮ್ಮ ಮೇಲೆ ಏನು ಕ್ರಮ ತೆಗೆದುಕೊಳ್ಳಬೇಕು ಎಂದು ನೀವೇ ಹೇಳಿ ಎಂದು ಸಿಎಂ ಡಿಡಿಪಿಐ ಗೆ ಪ್ರಶ್ನಿಸಿದರು. ಈ ಬಾರಿ ಶೇ.20 ರಷ್ಟು ಗ್ರೇಸ್ ಅಂಕಗಳನ್ನು ಕೊಟ್ಟರೂ…
ಬಳ್ಳಾರಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಸಮಸ್ಯೆ ನಿವಾರಣೆಗಾಗಿ ಸಿಎಂ ಸಿದ್ಧರಾಮಯ್ಯ ಸೋಮವಾರ ಮಹತ್ವದ ಸಭೆಯನ್ನು ಕರೆದಿದ್ದಾರೆ. ಹೀಗಾಗಿ ಸೋಮವಾರ ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ ಸಿಗುತ್ತಾ ಅಂತ ಕಾದು ನೋಡಬೇಕಿದೆ. ಅವರು ಇಂದು ಬಳ್ಳಾರಿ ಜಿಲ್ಲೆಯ ತೋರಣಗಲ್ಲಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಂಗನವಾಡಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಂಬಂಧಿಸಿದಂತೆ ಎರಡೂ ಇಲಾಖೆಗಳು ಸಭೆ ಸೇರಿ ಪರಿಹಾರವನ್ನು ಕಂಡುಕೊಳ್ಳಬೇಕು ಎಂದು ಸೂಚಿಸಿದ್ದು ಸೋಮವಾರ ಇದಕ್ಕೆ ಸಂಬಂಧಿಸಿದಂತೆ ಸಭೆ ಕರೆಯಲಾಗುವುದು ಎಂದರು. ನಾಳೆ ವಿಜಯನಗರ ಜಿಲ್ಲೆ ಪ್ರಗತಿ ಪರಿಶೀಲನಾ ಸಭೆ ನಗರದಲ್ಲಿ ಇಂದು ವಿಶ್ವ ಯೋಗ ದಿನಾಚರಣೆ ಯೋಗ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದು ನಾಳೆ ವಿಜಯನಗರ ಜಿಲ್ಲೆ ಪ್ರಗತಿ ಪರಿಶೀಲನಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು.