Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಸ್ಯಾಂಡಲ್ವುಡ್ ನಟ ದರ್ಶನ್ ತೂಗುದೀಪ ಕೊಲೆ ಪ್ರಕರಣದ ಕೇಂದ್ರಬಿಂದುವಾಗಿದ್ದಾರೆ. 33 ವರ್ಷದ ರೇಣುಕಾಸ್ವಾಮಿ ಅವರ ಶವಪರೀಕ್ಷೆ ವರದಿಯು ಅವರು ಸಾಯುವ ಮೊದಲು ಅನುಭವಿಸಿದ ಚಿತ್ರಹಿಂಸೆಯ ಭಯಾನಕ ವಿವರಗಳನ್ನು ಬಹಿರಂಗಪಡಿಸುತ್ತದೆ. ವರದಿಯ ಪ್ರಕಾರ, ರೇಣುಕಾಸ್ವಾಮಿ ಅನೇಕ ಮೊಂಡು ಗಾಯಗಳ ಪರಿಣಾಮವಾಗಿ ಆಘಾತ ಮತ್ತು ರಕ್ತಸ್ರಾವದಿಂದ ಸಾವನ್ನಪ್ಪಿದ್ದಾರೆ. ವರದಿಯು ಅವನನ್ನು ಒದೆಯಲಾಯಿತು, ಇದು ವೃಷಣವನ್ನು ಛಿದ್ರಗೊಳಿಸಿತು ಮತ್ತು ಅವನ ಸಾವಿಗೆ ಮೊದಲು ಅವನಿಗೆ ವಿದ್ಯುತ್ ಆಘಾತಗಳನ್ನು ನೀಡಲಾಯಿತು ಎಂದು ಸೂಚಿಸುತ್ತದೆ. ವಿಧಿವಿಜ್ಞಾನ ಪುರಾವೆಗಳ ಪ್ರಕಾರ, ರೇಣುಕಾಸ್ವಾಮಿ ಅವರ ದೇಹದಾದ್ಯಂತ 15 ಗಂಭೀರ ಗಾಯಗಳಾಗಿವೆ. ಶವಪರೀಕ್ಷೆಯು ಅವರ ಕೈಗಳು, ಕಾಲುಗಳು, ಬೆನ್ನು ಮತ್ತು ಎದೆಯಲ್ಲಿ ಗಮನಾರ್ಹ ರಕ್ತಸ್ರಾವವಾಗಿದೆ ಎಂದು ಎತ್ತಿ ತೋರಿಸುತ್ತದೆ. ತೀವ್ರ ಹಲ್ಲೆಯಿಂದ ಉಂಟಾದ ರಕ್ತ ಹೆಪ್ಪುಗಟ್ಟುವಿಕೆಗೆ ಅವರು ಬಲಿಯಾದರು. ರೇಣುಕಾಸ್ವಾಮಿಯನ್ನು ಮರದ ಕೋಲು ಮತ್ತು ಬೆಲ್ಟ್ ನಿಂದ ಥಳಿಸಲಾಗಿದೆ ಎಂದು ವರದಿಯಾಗಿದೆ. ಆಘಾತಕಾರಿ ಸಂಗತಿಯೆಂದರೆ, ಮರಣೋತ್ತರ ವರದಿಯು ಅವರ ಸಾವಿನ ನಂತರ ಅವರ ಮುಖದ ಭಾಗಗಳು ಮತ್ತು ದೇಹದ ಇತರ ಭಾಗಗಳನ್ನು…
ಬೆಂಗಳೂರು: ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಇದೇ ಮೊದಲ ಬಾರಿಗೆ ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕೆಗಳಿಗೂ ಆದ್ಯ ಗಮನ ಹರಿಸಲಾಗುತ್ತಿದೆ. ಜೊತೆಗೆ ಕಳೆದ ಬಾರಿಯಂತೆ ಈ ಸಲವೂ ನವೋದ್ಯಮಗಳಿಗೆ ಬಂಡವಾಳ ಸೆಳೆಯಲು ವಿಶೇಷ ಉಪಕ್ರಮ ಅಳವಡಿಸಿಕೊಳ್ಳುತ್ತಿದ್ದೇವೆ. ಇದರ ಭಾಗವಾಗಿ ‘ಎಸ್ಎಂಇ ಕನೆಕ್ಟ್- 25’ ಮತ್ತು ‘ವೆಂಚರೈಸ್- 24’ ಪರಿಕಲ್ಪನೆಗಳನ್ನು ರೂಪಿಸಲಾಗಿದೆ ಎಂಬುದಾಗಿ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಮುಂಬರುವ ಫೆಬ್ರವರಿ 12, 13 ಮತ್ತು 14ರಂದು ಬೆಂಗಳೂರಿನಲ್ಲಿ ನಡೆಯಲಿರುವ ಪ್ರತಿಷ್ಠಿತ ‘ಜಾಗತಿಕ ಹೂಡಿಕೆದಾರರ ಸಮಾವೇಶ’ದ ಭಾಗವಾಗಿ ಬುಧವಾರ ಇಲ್ಲಿ ನಡೆದ ಕರ್ಟನ್ ರೈಸರ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಾಗತಿಕ ಹೂಡಿಕೆದಾರರ ಸಮಾವೇಶದ ಭಾಗವಾಗಿ ರಾಜ್ಯದ ತಯಾರಿಕಾ ವಲಯದ ಕಾರ್ಯ ಪರಿಸರವನ್ನು ಜಾಗತಿಕ ಮಟ್ಟದ ಉದ್ದಿಮೆಗಳಿಗೆ ತೋರಿಸಲು ನಾಲ್ಕು ರೋಡ್ ಶೋ ನಡೆಸಲಾಗುವುದು. ಅಲ್ಲದೆ, ಗಣ್ಯ ಉದ್ಯಮಿಗಳನ್ನು ಖುದ್ದಾಗಿ ಆಹ್ವಾನಿಸಲು ಜೂನ್ 24ರಿಂದ 28ರವರೆಗೆ ಜಪಾನಿನ ಟೋಕಿಯೋ, ನಗೋಯ ಮತ್ತು ಒಸಾಕ ನಗರಗಳಿಗೆ ಹಾಗೂ ಜುಲೈ ಮೊದಲ ವಾರದಲ್ಲಿ…
ಬೆಂಗಳೂರು: 2032ರ ಹೊತ್ತಿಗೆ 1 ಟ್ರಿಲಿಯನ್ ಡಾಲರ್ ಜಿಡಿಪಿ ಸಾಧಿಸಲು ವಾರ್ಷಿಕ ಶೇ 15-16ರಷ್ಟು ಕೈಗಾರಿಕಾ ಬೆಳವಣಿಗೆ ಸಾಧಿಸುವ ಗುರಿ ನಮ್ಮದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮುಂಬರುವ ಫೆಬ್ರವರಿ 12, 13 ಮತ್ತು 14ರಂದು ಬೆಂಗಳೂರಿನಲ್ಲಿ ನಡೆಯಲಿರುವ ಪ್ರತಿಷ್ಠಿತ ‘ಜಾಗತಿಕ ಹೂಡಿಕೆದಾರರ ಸಮಾವೇಶ’ದ ಭಾಗವಾಗಿ ಬುಧವಾರ ಇಲ್ಲಿ ನಡೆದ ಕರ್ಟನ್ ರೈಸರ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರಾಜ್ಯ ಸರಕಾರವು ಗ್ರಾಮೀಣಾಭಿವೃದ್ಧಿ ಮತ್ತು ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಸಾಧಿಸಲು ಪಣ ತೊಟ್ಟಿದೆ. ಇದಕ್ಕಾಗಿ ರಾಜ್ಯದ ಎಲ್ಲಾ ಭಾಗಗಳಲ್ಲೂ ಕೈಗಾರಿಕಾ ಕ್ಲಸ್ಟರ್ ಗಳನ್ನು ಬೆಳೆಸಲು ತೀರ್ಮಾನಿಸಲಾಗಿದೆ. ಮಹಾನಗರಗಳ ಆಚೆಗೂ ಆರ್ಥಿಕ ಪ್ರಗತಿಯನ್ನು ಕೊಂಡೊಯ್ಯಬೇಕು ಎನ್ನುವುದು ನಮ್ಮ ಸಂಕಲ್ಪವಾಗಿದೆ ಎಂದು ಅವರು ನುಡಿದರು. ಸ್ಥಳೀಯ ಪ್ರತಿಭೆ ಮತ್ತು ಸಂಪನ್ಮೂಲಗಳನ್ನು ಬಳಸಿಕೊಂಡು, ವಿಶೇಷ ಪರಿಣತ ಉದ್ದಿಮೆಗಳನ್ನು ಬೆಳೆಸಲು ಸರಕಾರ ಬದ್ಧವಾಗಿದೆ. ಇದಕ್ಕಾಗಿ ಎಲೆಕ್ಟ್ರಾನಿಕ್ಸ್, ಆಟೋ ಮತ್ತು ಇ.ವಿ., ಫಾರ್ಮಸುಟಿಕಲ್ಸ್, ಜವಳಿ ಮುಂತಾದ ವಲಯಗಳಿಗೆ ಆದ್ಯತೆ ನೀಡಲಾಗುತ್ತಿದೆ. ಹೆಚ್ಚುಹೆಚ್ಚು ಹೂಡಿಕೆ ಆಕರ್ಷಣೆ ಮತ್ತು ಉದ್ಯೋಗಸೃಷ್ಟಿ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ಕರ್ನಾಟಕದ ಕರಾವಳಿ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಈಗ ಮುಂದಿನ 5 ದಿನಗಳ ಕಾಲ ಕೆಲ ಜಿಲ್ಲೆಗಳಲ್ಲಿ ಮತ್ತೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಕುರಿತಂತೆ ರಾಜ್ಯ ಹವಾಮಾನ ಇಲಾಖೆಯು ಮಾಹಿತಿ ಹಂಚಿಕೊಂಡಿದ್ದು, ಮುಂದಿನ ಐದು ದಿನಗಳ ಕಾಲ ಕರಾವಳಿ ಜಿಲ್ಲೆಗಳಾದಂತ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಅಲ್ಲದೇ ಜೂನ್.21 ಹಾಗೂ 22ರಂದು ಆರೆಂಜ್ ಅಲರ್ಟ್, ಜೂನ್.23ರಂದು ರೆಡ್ ಅಲರ್ಟ್ ಅನ್ನು ಈ ಜಿಲ್ಲೆಗಳಲ್ಲಿ ಘೋಷಣೆ ಮಾಡಿದೆ. ಇನ್ನೂ ಉತ್ತರ ಒಳನಾಡಿನ ಧಾರವಾಡ ಜಿಲ್ಲೆ, ಬೀದರ್ ಹಾಗೂ ಹಾವೇರಿ ಜಿಲ್ಲೆಯಲ್ಲೂ ಜೂನ್.22 ಮತ್ತು 23ರಂದು ಮಳೆಯಾಗಲಿದೆ. ಭಾರೀ ಮಳೆಯಾಗುವ ಮುನ್ಸೂಚನೆ ಇರುವ ಕಾರಣ, ಯೆಲ್ಲೋ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಣೆ ಮಾಡಿದೆ. ದಕ್ಷಿಣ ಒಳನಾಡಿನ ಚಾಮರಾಜನಗರದಲ್ಲಿ ಜೂನ್.22ರಂದು ಭಾರೀ ಮಳೆಯಾಗುವ…
ಬೆಂಗಳೂರು: ಸರ್ಕಾರಿ ಶಾಲಾ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕು ಅಂದ್ರೆ ಟಿಇಟಿ ಪರೀಕ್ಷೆ ತೇರ್ಗಡೆ ಹೊಂದಿರುವುದು ಕಡ್ಡಾಯವಾಗಿದೆ. ಈ ಟಿಇಟಿ ಪರೀಕ್ಷೆಯನ್ನು ಜೂನ್.30ರಂದು ನಿಗಿದಿ ಪಡಿಸಲಾಗಿದೆ. ಇಂತಹ TET ಪರೀಕ್ಷೆಗೆ ( TET Exam-2024) ಪ್ರವೇಶ ಪತ್ರ ಬಿಡುಗಡೆ ಮಾಡಲಾಗಿದೆ. ಅದನ್ನು ಡೌನ್ ಲೋಡ್ ಹೇಗೆ ಮಾಡಿಕೊಳ್ಳಬೇಕು ಅನ್ನೋ ಬಗ್ಗೆ ಮುಂದೆ ಓದಿ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET-2024) ದಿನಾಂಕ:30/06/2024ರ ಭಾನುವಾರದಂದು ರಾಜ್ಯಾದ್ಯಂತ ಎರಡು ಅಧಿವೇಶನಗಳಲ್ಲಿ (ಪ್ರತ್ರಿಕೆ-1 ಮೊದಲ ಅಧಿವೇಶನ ಮತ್ತು ಪತ್ರಿಕೆ-2 ಮಧ್ಯಾಹ್ನದ ಅಧಿವೇಶನ) ನಡೆಯಲಿದೆ ಅಂತ ತಿಳಿಸಿದೆ. ಟಿಇಟಿ ಪರೀಕ್ಷೆಗೆ ಪ್ರವೇಶ ಪತ್ರ ಈ ರೀತಿ ಡೌನ್ ಲೋಡ್ ಮಾಡಿಕೊಳ್ಳಿ ಈ ಪರೀಕ್ಷೆಗೆ ನಿಗದಿತ ಶುಲ್ಕ ಪಾವತಿಸಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಎಲ್ಲಾ ಅಭ್ಯರ್ಥಿಗಳ ಪ್ರವೇಶ ಪತ್ರವನ್ನು ದಿನಾಂಕ:20/06/2024 ರಿಂದ ಇಲಾಖಾ ವೆಬ್‌ಸೈಟ್ https://schooleducation.karnataka.gov.in ನಲ್ಲಿ ಲಭ್ಯವಿರಿಸಿದೆ. ಅಭ್ಯರ್ಥಿಗಳು ತಮ್ಮ User…
ಬೆಂಗಳೂರು: ರಾಜ್ಯದ ಮುಂಬರುವಂತ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ರಣತಂತ್ರ ರೂಪಿಸಿದೆ. ಇದಕ್ಕಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಉಪ ಸಮಿತಿಯನ್ನು ರಚಿಸಿ ಆದೇಶಿಸಿದ್ದಾರೆ. ಇಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಾಗೂ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸಮಿತಿಯನ್ನು ರಚಿಸಿ ಆದೇಶಿಸಿದ್ದಾರೆ. ಇದಲ್ಲದೇ ಮಂಗಳೂರು-ಉಡುಪಿ ಕ್ಷೇತ್ರದ ಎಂಎಲ್ಸಿ ಕ್ಷೇತ್ರದ ಉಪ ಚುನಾವಣೆಗೂ ಕೆಪಿಸಿಸಿ ಕಮಿಟಿಯನ್ನು ರಚಿಸಿ ಆದೇಶಿಸಿದ್ದಾರೆ. ಅಂದಹಾಗೇ ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸಚಿವ ಜಮೀರ್ ಅಹ್ಮದ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ್ದು, ಸದಸ್ಯರನ್ನಾಗಿ ನಾಸೀರ್ ಹುಸೇನ್, ಇ.ತುಕಾರಾಂ, ಬಿ.ನಾಗೇಂದ್ರ, ಡಾ.ಎನ್ ಟಿ ಶ್ರೀನಿವಾಸ್, ಪಿಟಿ ಪರಮೇಶ್ವರ ನಾಯಕ್ ಹಾಗೂ ಬಳ್ಳಾರಿಯ ಡಿಸಿಸಿ ಅಧ್ಯಕ್ಷ ಶಿವಯೋಗಿ ಅವರನ್ನು ನೇಮಿಸಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸಚಿವ ಚಲುವರಾಯ ಸ್ವಾಮಿ ಅವರನ್ನು…
ಬೆಂಗಳೂರು: ರಾಜ್ಯದಲ್ಲಿ ವಾಹನಗಳಿಗೆ ಕಣ್ಣು ಕುಕ್ಕುವ ಹೆಡ್ ಲೈಟ್ ಅಳವಡಿಕೆಗೆ ಪೊಲೀಸ್ ಇಲಾಖೆ ಬ್ರೇಕ್ ಹಾಕಿದೆ. ಇನ್ಮುಂದೆ ಕಣ್ಣು ಕುಕ್ಕುವಂತ ಪ್ರಖರ ದೀಪ ಅಳವಡಿಸದಂತೆ ಎಚ್ಚರಿಸಿದೆ. ಒಂದು ವೇಳೆ ವಾಹನಗಳಿಗೆ ಈ ರೀತಿಯ ಹೆಡ್ ಲೈನ್ ಅಳವಡಿಸಿದ್ರೇ, ಕೇಸ್ ಹಾಕೋದಾಗಿ ಪೊಲೀಸ್ ಇಲಾಖೆ ಖಡಕ್ ಎಚ್ಚರಿಕೆ ನೀಡಿದೆ. ಈ ಕುರಿತಂತೆ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗ) ಅಲೋಕ್ ಕುಮಾರ್ ಮಾಹಿತಿ ಹಂಚಿಕೊಂಡಿದ್ದು, ಇತ್ತೀಚಿನ ದಿನಗಳಲ್ಲಿ ಹೆಚ್ಚು ಬೆಳಕು ಹೊರಹಾಕುವ ಎಲ್‌ಇಡಿ ದೀಪಗಳನ್ನು ವಾಹನಗಳಿಗೆ ಅಳವಡಿಸುತ್ತಿದ್ದು, ಇದರಿಂದ ಎದುರು ಮುಖದಲ್ಲಿ ಸಂಚರಿಸುವ ಇತರೆ ವಾಹನ ಸವಾರರಿಗೆ ತೀವ್ರ ತೊಂದರೆ ಆಗುತ್ತಿದೆ ಎಂದು ಹೇಳಿದ್ದಾರೆ. ಕೇಂದ್ರ ಮೋಟಾರು ಕಾಯ್ದೆ (ಸಿಎಂವಿ) ಯಲ್ಲಿ ನಮೂದಿಸಿರುವ ಮಾನದಂಡದಂತೆ ವಾಹನ ಸವಾರರು ಹೆಡ್‌ಲೈಟ್ ಅಳವಡಿಕೆ ಮಾಡಿಕೊಳ್ಳಬೇಕು. ಕಾಯ್ದೆ ಉಲ್ಲಂಘಿಸಿದರೆ ಅಂತಹ ವಾಹನ ಸವಾರರ ವಿರುದ್ಧ ಪ್ರಕರಣ ದಾಖಲು ಮಾಡಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. https://twitter.com/KarnatakaVarthe/status/1803364322308944020 https://kannadanewsnow.com/kannada/will-farmers-get-relief-if-electricity-poles-and-transformers-are-installed-in-their-fields-heres-the-real-truth/ https://kannadanewsnow.com/kannada/icse-isc-improvement-exam-2024-schedule-out/
ಬೆಂಗಳೂರು: ರಾಜ್ಯಾಧ್ಯಂತ ಕನ್ನಡ ನಾಮಫಲಕವನ್ನು ಅಂಗಡಿ-ಮುಂಗಟ್ಟುಗಳಿಗೆ ಅಳವಡಿಸುವುದು ಕಡ್ಡಾಯಗೊಳಿಸಲಾಗಿದೆ. ಒಂದು ವೇಳೆ ಹಾಕದೇ ಇದ್ರೆ ಈ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ, ದೂರು ನೀಡಬಹುದಾಗಿದೆ. ರಾಜ್ಯ ಸರ್ಕಾರದಿಂದ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ರಾಜ್ಯಾದ್ಯಂತ ಕನ್ನಡ ನಾಮಫಲಕ ಅಳವಡಿಸುವುದು ಕಡ್ಡಾಯವಾಗಿದೆ. ತಪ್ಪಿಲ್ಲದೆ ಸರಿಯಾದ ಕನ್ನಡದಲ್ಲಿ ನಾಮಫಲಕ ಅಳವಡಿಸಲು ಸಲಹೆ, ಮಾರ್ಗದರ್ಶನದ ಅಗತ್ಯವಿದ್ದರೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಹಾಯವಾಣಿ 080-22286773 ಅಥವಾ 080-22256365 ಗೆ ಕರೆ ಮಾಡಬಹುದು. ಇನ್ನೂ ನೀವು ಕನ್ನಡ ನಾಮಫಲಕ ಅಳವಡಿಸದ ಬಗ್ಗೆ ಇ-ಮೇಲ್ ಮೂಲಕವೂ ದೂರು ನೀಡಬಹುದಾಗಿದೆ. chairman.kanpra@gmail.com ಅಥವಾ secretary.kanpra@gmail.com ಗೆ ದೂರು ಸಲ್ಲಿಸಬಹುದಾಗಿದೆ. https://twitter.com/KarnatakaVarthe/status/1803414089395327316 https://kannadanewsnow.com/kannada/will-farmers-get-relief-if-electricity-poles-and-transformers-are-installed-in-their-fields-heres-the-real-truth/ https://kannadanewsnow.com/kannada/the-government-has-instructed-the-state-government-employees-to-do-this-without-fail/
ಬೆಂಗಳೂರು: ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ನಾಳೆ (ಜೂನ್ 20) ಜಗನ್ನಾಥ ಭವನದಿಂದ ವಿಧಾನಸೌಧಕ್ಕೆ ಸೈಕಲ್ ಜಾಥಾ ನಡೆಸಲಾಗುವುದು ಎಂದು ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಹರೀಶ್ ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬೆಂಗಳೂರು ಬಿಜೆಪಿಯ 3 ಜಿಲ್ಲೆಗಳೂ ಸೇರಿ ಈ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಿದ್ದೇವೆ ಎಂದು ವಿವರಿಸಿದರು. ಜಾಥಾದ ಬಳಿಕ ಮಹಾತ್ಮ ಗಾಂಧಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಗುವುದು ಎಂದು ತಿಳಿಸಿದರು. ಬೆಳಿಗ್ಗೆ 9.00 ಗಂಟೆಗೆ ಜಗನ್ನಾಥ ಭವನದಿಂದ ಜಾಥಾ ಆರಂಭವಾಗಲಿದ್ದು, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಉಪ ಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ್, ವಿಧಾನಪರಿಷತ್ ನೂತನ ಸದಸ್ಯ ಸಿ.ಟಿ.ರವಿ ಅವರು ನೇತೃತ್ವ ವಹಿಸಲಿದ್ದಾರೆ. ಸುಮಾರು 250-300 ಸೈಕಲ್‍ಗಳ ಜಾಥಾ ನಡೆಯಲಿದೆ ಎಂದು ಮಾಹಿತಿ ನೀಡಿದರು. ಬೆಂಗಳೂರಿನ ಮಾಜಿ ಸಚಿವರು, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಬಿಬಿಎಂಪಿ ಮಾಜಿ ಸದಸ್ಯರು, ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್,…
ಬೆಂಗಳೂರು : ಜಮೀನಿನಲ್ಲಿರುವ ವಿದ್ಯುತ್ ಕಂಬ ಅಥವಾ ಟ್ರಾನ್ಸ್‌ಫಾರ್ಮರ್‌ಗೆ ಸರ್ಕಾರದಿಂದ ರೈತರಿಗೆ ಪರಿಹಾರ ನೀಡಲಾಗುತ್ತದೆ ಎಂಬ ಸುಳ್ಳು ಮಾಹಿತಿ ಇರುವ ವೀಡೀಯೋವನ್ನು ಸಾಮಾಜಿಕ ಜಾಲ ತಾಣದಲ್ಲಿ ಹರಿಬಿಟ್ಟವರ ವಿರುದ್ಧ ಬೆಸ್ಕಾಂ ದೂರು ಸಲ್ಲಿಸಿದೆ. ರೈತರು ತಮ್ಮ ಜಮೀನಿನಲ್ಲಿ ವಿದ್ಯುತ್ ಕಂಬ ಅಥವಾ ಟ್ರಾನ್ಸ್‌ಫಾರ್ಮರ್ ಅಳವಡಿಸಿಕೊಂಡಿದ್ದರೆ ಸರ್ಕಾರ ದಿನಕ್ಕೆ 50 ರೂ. ಪರಿಹಾರ ನೀಡಲಿದೆ. ಗೃಹಬಳಕೆದಾರರು ಪ್ರತಿನಿತ್ಯ 2000 ರಿಂದ 5000 ಯೂನಿಟ್ ವಿದ್ಯುತ್ ಬಳಸಿಕೊಳ್ಳಬಹುದು. ಅದಕ್ಕೆ ಸರ್ಕಾರ 5000 ರೂ. ಪರಿಹಾರ ಧನ ನೀಡಲಿದೆ ಎಂಬ ಸಂದೇಶ ನೀಡುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದು ಸತ್ಯಕ್ಕೆ ದೂರವಾದುದು ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ. ಶೋಭಾ ಪ್ರಭಾಕರ್ ಎಂಬುವವರು ‘ಶೋಭಾ ಪ್ರೈಮ್ ಟ್ಯೂಬ್ @ ಪ್ರೈಮ್ ಟ್ಯೂಬ್-ಶೋಭಾ’ ಎಂಬ ಚಾನಲ್‌ನಲ್ಲಿ, ಇಂಧನ ಇಲಾಖೆಗೆ ಸಂಬಂಧಿಸಿದಂತೆ ಸುಳ್ಳು ಮಾಹಿತಿಗಳನ್ನೊಳಗೊಂಡ 5 ನಿಮಿಷ ಅವಧಿಯ ಒಂದು ವಿಡಿಯೋ ತುಣುಕನ್ನು ಹರಿಬಿಟ್ಟಿದ್ದಾರೆ. ಇದರ ವಿರುದ್ಧ ವಿಧಾನಸೌಧ ಠಾಣೆ ಪೊಲೀಸರಿಗೆ ದೂರು ನೀಡಲಾಗಿದೆ. ವೀಡಿಯೋದಲ್ಲಿರುವ ಸುಳ್ಳು ಮಾಹಿತಿ:…