Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಮಕ್ಕಳ ಅಚ್ಚುಮೆಚ್ಚಿನ ಕ್ಯಾಂಡಿಯಲ್ಲಿ ಬೆಚ್ಚಿ ಬೀಳಿಸೋ ಕ್ಯಾನ್ಸರ್ ಕಾರಕ ಅಂಶ ಪರೀಕ್ಷೆಯಲ್ಲಿ ಪತ್ತೆಯಾಗಿದೆ. ಈ ಹಿನ್ನಲೆಯಲ್ಲಿ ಕರ್ನಾಟಕದಲ್ಲೂ ಮಕ್ಕಳ ಫೇವರಿಟ್ ಬಾಂಬೆ ಮಿಠಾಯಿ ನಿಷೇಧಕ್ಕೆ ಚಿಂತನೆಯನ್ನು ಸರ್ಕಾರ ನಡೆಸಿದೆ ಎಂಬುದಾಗಿ ಹೇಳಲಾಗುತ್ತಿದೆ. ತಮಿಳುನಾಡು ಹಾಗೂ ಪುದುಚೇರಿಯಲ್ಲಿ ಈಗಾಗಲೇ ಬಣ್ಣದ ಬಾಂಬೆ ಮಿಠಾಯಿಯನ್ನು ಬ್ಯಾನ್ ಮಾಡಲಾಗಿದೆ. ಇದಕ್ಕೆ ಕಾರಣ ತಮಿಳುನಾಡು ಸರ್ಕಾರ ನಡೆಸಿದಂತ ಪರೀಕ್ಷೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿರೋದಾಗಿದೆ. ಈ ಹಿನ್ನಲೆಯಲ್ಲೇ ತಮಿಳುನಾಡು, ಪುದುಚೇರಿ ಸರ್ಕಾರದಿಂದ ಬಣ್ಣದ ಬಾಂಬೆ ಮಿಠಾಯಿ ಮಾರಾಟವನ್ನು ನಿಷೇಧಿಸಲಾಗಿದೆ. ಈ ಬೆನ್ನಲ್ಲೇ ಕರ್ನಾಟಕದಲ್ಲೂ ಕ್ಯಾಂಡಿ ನಿಷೇಧಕ್ಕೆ ಚಿಂತನೆ ನಡೆಸಿರೋದಾಗಿ ಹೇಳಲಾಗುತ್ತಿದೆ. ಇದಕ್ಕೂ ಮುನ್ನಾ ಬಾಂಬೆ ಮಿಠಾಯಿಯಲ್ಲಿ ಕ್ಯಾನ್ಸರ್ ಕಾರಕ ಅಂಶ ಇದ್ಯಾ ಎಂಬುದಾಗಿ ಪತ್ತೆ ಹಚ್ಚೋದಕ್ಕೆ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೂ ಕಳುಹಿಸಲಾಗಿದೆ ಸರ್ಕಾರ ಎನ್ನಲಾಗುತ್ತಿದೆ. ಈ ಪ್ರಯೋಗಾಲಯದ ಪರೀಕ್ಷೆಯ ವರದಿಯ ಬಳಿಕ ಕರ್ನಾಟಕದಲ್ಲೂ ಕ್ಯಾಂಡಿ ಬ್ಯಾನ್ ಆಗೋದು ಫಿಕ್ಸ್ ಎನ್ನಲಾಗುತ್ತಿದೆ. ಆ ಬಗ್ಗೆ ಕಾದು ನೋಡಬೇಕಿದೆ. https://kannadanewsnow.com/kannada/ghazni-then-siddaramaiah-government-looted-temples-today-bjp/ https://kannadanewsnow.com/kannada/breaking-%e0%b2%b6%e0%b2%be%e0%b2%b2%e0%b2%be-%e0%b2%ae%e0%b2%95%e0%b3%8d%e0%b2%95%e0%b2%b3%e0%b2%bf%e0%b2%97%e0%b3%86-%e0%b2%b0%e0%b2%be%e0%b2%97%e0%b2%bf-%e0%b2%ae%e0%b2%be%e0%b2%b2%e0%b3%8d/
ಬೆಂಗಳೂರು: ಇತಿಹಾಸದ ಪುಟಗಳಲ್ಲಿ ಸೇರಿರುವಂತ ಘಜ್ನಿ ಮೊಹಮ್ಮದ್ ಅಂದು ದೇವಸ್ಥಾನಗಳನ್ನು ನಿರಂತರವಾಗಿ ಲೂಟಿ ಮಾಡಿದ್ದರು. ಇದೀಗ ಸಿದ್ಧರಾಮಯ್ಯ ಸರ್ಕಾರ ದೇವಾಲಗಳನ್ನು ಲೂಟಿ ಮಾಡುತ್ತಿದೆ ಎಂಬುದಾಗಿ ಕರ್ನಾಟಕ ಬಿಜೆಪಿ ಕಿಡಿಕಾರಿದೆ. ಈ ಕುರಿತಂತೆ ಎಕ್ಸ್ ಮಾಡಿರುವಂತ ರಾಜ್ಯ ಬಿಜೆಪಿ ಘಟಕವು, ಅಂದು ಘಜ್ನಿ ದೇವಸ್ಥಾನಗಳನ್ನು ನಿರಂತರವಾಗಿ ಲೂಟಿ ಮಾಡಿದ್ದ. ಇಂದು ಸಿದ್ಧರಾಮಯ್ಯ ಸರ್ಕಾರ ದೇವಾಲಯಗಳ ಲೂಟಿಗಿಳಿದು ತಮ್ಮ ಕುರ್ಚಿಯನ್ನು ಭದ್ರ ಮಾಡಿಕೊಳ್ಳಲು ನೋಡುತ್ತಿದೆ. ಭಕ್ತರ ಕಾಣಿಕೆ ಹುಂಡಿಗೆ ಕನ್ನ ಹಾಕಿದ ಕಾಂಗ್ರೆಸ್ ಸರ್ಕಾರ ಶಾಪಗ್ರಸ್ಥವಾಗುವುದು ನಿಶ್ಚಿತ ಎಂಬುದಾಗಿ ಭವಿಷ್ಯ ನುಡಿದಿದೆ. https://twitter.com/BJP4Karnataka/status/1760573171982324215 ರಾಜ್ಯದ ಕಾಂಗ್ರೆಸ್ ಸರ್ಕಾರದ ಎಡವಟ್ಟುಗಳಿಗೆ ಮಿತಿ ಇಲ್ಲ – ಭ್ರಷ್ಟಾಚಾರಕ್ಕೆ ಕೊನೆಯಿಲ್ಲ. ಶಾಲಾ ಮಕ್ಕಳು ಪರೀಕ್ಷಾ ಶುಲ್ಕವೆಂದು ₹50 ನೀಡಿದರೂ, ಪೂರ್ವ ಸಿದ್ಧತಾ ಪರೀಕ್ಷೆಗೆ ಮನೆಯಿಂದಲೇ ಉತ್ತರ ಪತ್ರಿಕೆ ತರಬೇಕು ಎಂದು ಆದೇಶಿಸಿದೆ. ಮಕ್ಕಳಿಗೆ ಉತ್ತರ ಪತ್ರಿಕೆ ನೀಡಲು ಸಹ ಸಾಧ್ಯವಾಗದ ರೀತಿಯಲ್ಲಿ ಕರ್ನಾಟಕವನ್ನು ದಿವಾಳಿ ಮಾಡಿದೆ ಕಾಂಗ್ರೆಸ್. ಸರ್ಕಾರವೊಂದು ಈ ಪರಿ ದಿವಾಳಿಯಾಗಿರುವುದು ಕರ್ನಾಟಕದ ಇತಿಹಾಸದಲ್ಲಿ ಇದೇ ಮೊದಲು. ಸಿಎಂ…
ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಎಡ ಪಾದದ ಗಾಯದಿಂದಾಗಿ ಭಾರತದ ವೇಗದ ಬೌಲರ್ ಮೊಹಮ್ಮದ್ ಶಮಿ ಐಪಿಎಲ್ 2024 ರಿಂದ ಹೊರಗುಳಿದಿದ್ದಾರೆ. ಇದಕ್ಕಾಗಿ ಇಂಗ್ಲೆಂಡ್ನಲ್ಲಿ ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ಬಿಸಿಸಿಐ ಮೂಲಗಳು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿವೆ. ಎಡ ಪಾದದ ಗಾಯದಿಂದಾಗಿ ಹಿರಿಯ ವೇಗಿ ಮೊಹಮ್ಮದ್ ಶಮಿ ಮುಂದಿನ ತಿಂಗಳು ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ನಿಂದ ಹೊರಗುಳಿದಿದ್ದು, ಇದಕ್ಕಾಗಿ ಅವರು ಇಂಗ್ಲೆಂಡ್ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ಬಿಸಿಸಿಐ ಮೂಲಗಳು ಗುರುವಾರ ಪಿಟಿಐಗೆ ತಿಳಿಸಿವೆ. ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯ ಭಾಗವಾಗಿಲ್ಲದ 33 ವರ್ಷದ ಯುವರಾಜ್ ಸಿಂಗ್, ನವೆಂಬರ್ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ವಿಶ್ವಕಪ್ ಫೈನಲ್ನಲ್ಲಿ ಕೊನೆಯ ಬಾರಿಗೆ ಭಾರತಕ್ಕಾಗಿ ಆಡಿದ್ದರು. “ಶಮಿ ಜನವರಿ ಕೊನೆಯ ವಾರದಲ್ಲಿ ವಿಶೇಷ ಪಾದದ ಚುಚ್ಚುಮದ್ದನ್ನು ತೆಗೆದುಕೊಳ್ಳಲು ಲಂಡನ್ನಲ್ಲಿದ್ದರು ಮತ್ತು ಮೂರು ವಾರಗಳ ನಂತರ, ಅವರು ಲಘು ಓಟವನ್ನು ಪ್ರಾರಂಭಿಸಬಹುದು ಮತ್ತು ಅಲ್ಲಿಂದ ಅದನ್ನು ತೆಗೆದುಕೊಳ್ಳಬಹುದು ಎಂದು ಅವರಿಗೆ ತಿಳಿಸಲಾಯಿತು. ಆದರೆ ಚುಚ್ಚುಮದ್ದು ಕೆಲಸ ಮಾಡಲಿಲ್ಲ ಮತ್ತು…
ಬೆಂಗಳೂರು: ಬೆಂಗಳೂರಿನ ಖ್ಯಾತ ಉದ್ಯಮಿ ಸುನಿತಾ ತಿಮ್ಮೇಗೌಡ ಮತ್ತು ಅಶೋಕ್ ಶಂಕರ್ ಅವರ ಪುತ್ರ ಯುವ ಉದ್ಯಮಿ ಆರ್ಯಮನ್ ಅವರು, ಅಜ್ಜಿ ದಿ. ಸಾವಿತ್ರಮ್ಮ ತಿಮ್ಮೇಗೌಡ ಅವರ ಸ್ವಂತ ಊರಾದ ಕೊಳ್ಳೆಗಾಲದ ಸೆವೆನ್ತ್-ಡೇ ಅಡ್ವೆಂಟಿಸ್ಟ್ ಸ್ಕೂಲ್ ಫಾರ್ ಸ್ಪೀಚ್ ಆ್ಯಂಡ್ ಹಿಯರಿಂಗ್ (Seventh-Day Adventist School for Speech and Hearing) ಶಾಲೆಗೆ ಕ್ರೀಡಾ ಪರಿಕರಗಳು ಸೇರಿದಂತೆ ಹಲವು ವಸ್ತುಗಳನ್ನು ವಿತರಿಸಿದರು. ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ತಮ್ಮ ಸಹಪಾಠಿಗಳೊಂದಿಗೆ ಕೊಳ್ಳೆಗಾಲಕ್ಕೆ ತೆರಳಿದ ಆರ್ಯಮನ್ ಅವರು ಕಾವೇರಿಪುರದಲ್ಲಿ ಬಂದಿಳಿದರು. ಅಲ್ಲಿಂದ ಅವರು ರಸ್ತೆ ಮಾರ್ಗವಾಗಿ ಸೆವೆನ್ತ್-ಡೇ ಅಡ್ವೆಂಟಿಸ್ಟ್ ಸ್ಕೂಲ್ ಫಾರ್ ಸ್ಪೀಚ್ ಆ್ಯಂಡ್ ಹಿಯರಿಂಗ್ ಶಾಲೆಗೆ ಭೇಟಿ ನೀಡಿ ಅವರೊಂದಿಗೆ ಸಮಯ ಕಳೆದರು. ಬಳಿಕ ಅಗತ್ಯ ಪರಿಕರಗಳನ್ನು ಆಶ್ರಮದ ಮಕ್ಕಳಿಗಾಗಿ ವಿತರಿಸಿದರು. ಯುವ ಉದ್ಯಮಿ ಆರ್ಯಮನ್ ಅವರು 11ನೇ ವರ್ಷದಲ್ಲಿ ಸಿಂಗಾಪುರಕ್ಕೆ ಶಿಕ್ಷಣಕ್ಕಾಗಿ ತೆರಳಿದ್ದರು. ವಿದ್ಯಾಭ್ಯಾಸದ ಅವಧಿಯಲ್ಲೇ ಅವರು ಉದ್ಯಮ ಕ್ಷೇತ್ರಕ್ಕೆ ಧುಮುಕಿದ್ದರು. 13ನೇ ವರ್ಷದಲ್ಲಿ ಅವರು ಲಿಮಿಟೆಡ್ ಎಡಿಷನ್ ಶೂಗಳ ಉದ್ಯಮ…
ಬೆಂಗಳೂರು : ಅರಣ್ಯದಲ್ಲಿ ಸಸ್ಯಹಾರಿ ಪ್ರಾಣಿಗಳಿಗೆ ಮಾರಕವಾಗಿರುವ ಲಾಂಟನಾ ಕಳೆಯಿಂದ ಆನೆ, ಕಾಡೆಮ್ಮೆ, ಪೀಠೋಪಕರಣ ಮತ್ತು ಅಲಂಕಾರಿಕ ವಸ್ತುಗಳನ್ನು ತಯಾರಿಸುವ ಆದಿವಾಸಿ ಸಮುದಾಯದವರಿಗೆ ತರಬೇತಿ ಮತ್ತು ಪೋತ್ಸಾಹ ನೀಡಲು 1 ಕೋಟಿ ರೂ. ನೆರವು ನೀಡುವ ಬಗ್ಗೆ ಪರಿಶೀಲಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಬೆಂಗಳೂರಿನ ಲಾಲ್ ಬಾಗ್ ನಲ್ಲಿಂದು ಲಾಂಟನಾ ಕಡ್ಡಿಗಳಿಂದ ತಯಾರಿಸಿದ ಕಾಡೆಮ್ಮೆ ಮತ್ತು ಆನೆಯ ಆಕೃತಿಗಳನ್ನು ಅನಾವರಣ ಮಾಡಿ ಮಾತನಾಡಿದ ಅವರು, ಮುಳ್ಳಿನಿಂದ ಕೂಡಿದ ಲಾಂಟನಾ ರಾಜ್ಯದ ಬಂಡೀಪುರ, ನಾಗರಹೊಳೆ, ಬಿಳಿಗಿರಿ ರಂಗನ ಬೆಟ್ಟ ಮೊದಲಾದ ಅರಣ್ಯ ಪ್ರದೇಶಗಳಲ್ಲಿ ವ್ಯಾಪಕವಾಗಿ ವ್ಯಾಪಿಸಿದ್ದು, ಇದರಿಂದ ಆನೆ, ಜಿಂಕೆ ಇತ್ಯಾದಿ ಸಸ್ಯಹಾರಿ ಪ್ರಾಣಿಗಳಿಗೆ ಹುಲ್ಲೂ ಸಿಗದಂತಾಗಿದೆ. ಹೀಗಾಗಿ ಈ ಕಳೆಯನ್ನು ತೆಗೆಯುವುದು ಅನಿವಾರ್ಯವಾಗಿದ್ದು, ಆದಿವಾಸಿಗಳ ನೆರವಿನಿಂದ ಈ ಕಳೆ ತೆಗೆಸಿ, ಅಲಂಕಾರಿಕ ವಸ್ತು ತಯಾರಿಸಿದರೆ ಅದರಿಂದ ಜೀವನೋಪಾಯವೂ ಆಗುತ್ತದೆ, ಕಾಡಿನ ಕಳೆಯ ಸಮಸ್ಯೆಗೂ ಪರಿಹಾರ ಲಭಿಸುತ್ತದೆ ಎಂದು ಅಭಿಪ್ರಾಯಪಟ್ಟರು. ಲಾಂಟನಾದಿಂದ ತಯಾರಿಸಿದ ಪೀಠೋಪಕರಣ,…
ಬೆಂಗಳೂರು: ಆರ್ಥಿಕ ಪರಿಸ್ಥಿತಿ ಸಂಕಷ್ಟದಲ್ಲಿರುವ ಸರಕಾರ, ಶ್ರೀಮಂತ ದೇವಾಲಯಕ್ಕೂ ಕನ್ನ ಹಾಕುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದರು. ವಿಧಾನಸೌಧದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ದೇವಸ್ಥಾನದ ಹಣಕ್ಕೆ ಕನ್ನ ಹಾಕುವ ಬದಲು ವಿಧಾನಸೌಧದ ಮುಂದೆ ಒಂದು ಹುಂಡಿ ಇಡಿ. ‘ಸರಕಾರ ನಡೆಸಲು ನಮ್ಮ ಕೈಯಲ್ಲಿ ಆಗುತ್ತಿಲ್ಲ; ಹಣಕಾಸಿನ ತೊಂದರೆ ಇದೆ’ ಎಂದು ತಿಳಿಸಿ ಬಂದ ದಾನಿಗಳಿಂದ ಹಣ ಸಂಗ್ರಹಿಸಬಹುದು ಎಂದು ಮುಖ್ಯಮಂತ್ರಿಗಳಿಗೆ ಸಲಹೆ ನೀಡುವುದಾಗಿ ತಿಳಿಸಿದರು. ಅತ್ಯಂತ ಶ್ರೀಮಂತ ರಾಜ್ಯಗಳಲ್ಲಿ ಕರ್ನಾಟಕವೂ ಒಂದು. ಅತ್ಯಂತ ಹೆಚ್ಚು ತೆರಿಗೆಯನ್ನು ಅದು ಸಂಗ್ರಹ ಮಾಡುತ್ತದೆ. ಇಂಥ ಕರ್ನಾಟಕ ರಾಜ್ಯದ ಪರಿಸ್ಥಿತಿ ಹೀಗಾಗಿದೆ ಎಂಬುದು ನಿಜಕ್ಕೂ ದುರದೃಷ್ಟ. ಸರಕಾರ ಈ ಮಟ್ಟಕ್ಕೆ ಇಳಿದಿರುವುದು ನಿಜಕ್ಕೂ ತಲೆತಗ್ಗಿಸುವ ವಿಚಾರ ಎಂದು ಆಕ್ಷೇಪ ಸೂಚಿಸಿದರು. ಗ್ಯಾರಂಟಿಗೆ ನಮ್ಮ ಟೀಕೆ ಇಲ್ಲ. ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವು ಗ್ಯಾರಂಟಿಗಳನ್ನು ಘೋಷಿಸಿದ್ದು, ಅದನ್ನು ಅನುಷ್ಠಾನಕ್ಕೆ ತರುವುದು ಅವರ ಕರ್ತವ್ಯವಾಗಿದೆ. ಅವರು…
ಬೆಂಗಳೂರು: ಫೆಬ್ರವರಿ.23ರಂದು ಕರ್ನಾಟಕ ಸರ್ಕಾರಿ ಮಹಿಳಾ ನೌಕರರ ಸಂಘದಿಂದ ವಿಚಾರ ಸಂಕೀರ್ಣ ಹಮ್ಮಿಕೊಳ್ಳಲಾಗಿದೆ. ಈ ವಿಚಾರ ಸಂಕೀರ್ಣದಲ್ಲಿ ಭಾಗಿಯಾಗೋದಕ್ಕೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ಮಹಿಳಾ ಸರ್ಕಾರಿ ನೌಕರರಿಗೆ ಅರ್ಧ ದಿನ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ ಆದೇಶಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ದಿನಾಂಕ 23-02-2024ರಂದು ಅಖಿಲ ಕರ್ನಾಟಕ ಸರ್ಕಾರಿ ನೌಕರರ ಮಹಿಳಾ ಸಂಘದ ವತಿಯಿಂದ ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಪುಟ್ಟಣ್ಣಚೆಟ್ಟಿ ಪುರಭವನ ಅಂದರೆ ಟೌನ್ ಹಾಲ್ ನಲ್ಲಿ ವಿಚಾರ ಸಂಕೀರ್ಣ ನಡೆಯಲಿದೆ ಎಂದಿದ್ದಾರೆ. ಈ ಹಿನ್ನಲೆಯಲ್ಲಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವಿಧ ಇಲಾಖೆಯ ಮಹಿಳಾ ನೌಕರರು ಭಾಗವಹಿಸಲು ಅನುಕೂಲವಾಗುವಂತೆ ಅರ್ಧ ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಖಾಲಿ ಇರುವಂತ 1000 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳ ನೇರ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಸಂಬಂಧ ಕೆಇಎಯಿಂದ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ರಾಜ್ಯದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವಂತ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕು ಎಂದಿದೆ. ಹುದ್ದೆಗಳ ವಿವರ – 1000 ಹುದ್ದೆಗಳು ವೇತನ ಶ್ರೇಣಿ – ರೂ.21,400 ರಿಂದ 42,000 ಶೈಕ್ಷಣಿಕ ವಿದ್ಯಾರ್ಹತೆ – ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಿಂಚಣಿ ಸೌಲಭ್ಯ – NPS ವಯೋಮಿತಿ ಸಾಮಾನ್ಯ ವರ್ಗದವರಿಗೆ 35 ವರ್ಷಗಳು. ಪ್ರವರ್ಗ 2ಎ, 2ಬಿ, 3ಬಿ ಅಭ್ಯರ್ಥಿಗಳಿಗೆ 38 ವರ್ಷಗಳು. ಎಸ್ಸಿ, ಎಸ್ಟಿ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷಗಳು. ಅರ್ಜಿ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಮಹತ್ವದ ಕ್ರಮ ಕೈಗೊಂಡಿದೆ. ಇದರ ಭಾಗವಾಗಿ ಗ್ಯಾರಂಟಿ ಸ್ವಯಂ ಸೇವಕರನ್ನು ನೇಮಕ ಮಾಡಿ ಆದೇಶಿಸಿದೆ. ಇವರು ಮನೆ ಮನೆಗಳಿಗೆ ಭೇಟಿ ನೀಡಿ, ಸಮೀಕ್ಷೆ ನಡೆಸುವಂತೆ ಆದೇಶ ಹೊರಡಿಸಿದೆ. ಈ ಸಂಬಂಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದು, ಪ್ರಸ್ತಾವನೆಯಲ್ಲಿ ಸರ್ಕಾರವು ಬಡವರ ಹಾಗೂ ದುರ್ಬಲ ವರ್ಗದವರ ಕಲ್ಯಾಣಕ್ಕಾಗಿ ಐದು ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಶಕ್ತಿ ಯೋಜನೆ, ಯುವನಿಧಿ ಯೋಜನೆ, ಗ್ರಹಜ್ಯೋತಿ ಯೋಜನೆ ಮತ್ತು ಅನ್ನಭಾಗ್ಯ ಯೋಜನೆಗಳನ್ನು ರೂಪಿಸಿದೆ. ರಾಜ್ಯದ ಪ್ರತಿ ಮನೆ ಮನೆಗೂ ಈ ಐದು ಗ್ಯಾರಂಟಿ ಯೋಜನೆಗಳು ಸರಿಯಾದ ರೀತಿಯಲ್ಲಿ ತಲುಪಿವೆಯೇ ಎಂಬ ಬಗ್ಗೆ ರಾಜ್ಯ ವ್ಯಾಪ್ತಿ ಸಮೀಕ್ಷೆ ಮಾಡಲು “ಗ್ಯಾರಂಟಿ ಸ್ವಯಂ-ಸೇವಕರನ್ನು ನೇಮಕ ಮಾಡಲು ನಿರ್ಧರಿಸಲಾಗಿದೆ ಎಂದಿದೆ. ಮುಂದುವರೆದು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಇತರೆ ಇಲಾಖೆಗಳ ಸಿಬ್ಬಂದಿಗಳನ್ನು ಗ್ಯಾರಂಟಿ ಸ್ವಯಂ-ಸೇವಕರಾಗಿ…
ಬೆಂಗಳೂರು: ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ ಎನ್ನುವಂತೆ ಇಂದಿನಿಂದ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ಮಿಶ್ರಿತ ಹಾಲು ವಿತರಣೆ ಮಾಡಲಾಗುತ್ತಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸರ್ಕಾರದ ಕ್ಷೀರಭಾಗ್ಯ ಯೋಜನೆಯಡಿ ಪ್ರಸ್ತುತ ವಾರದಲ್ಲಿ ಐದು ದಿನ ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ಕೆನೆಭರಿತ ಹಾಲು ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇನ್ಮುಂದೆ ವಾರದಲ್ಲಿ ಮೂರು ದಿನ ಹಾಲಿಗೆ ನಿರ್ದಿಷ್ಟ ಪ್ರಮಾಣದ ರಾಗಿ ಮಾಲ್ಟ್ ಮಿಶ್ರಣ ಮಾಡಿ ಕೊಡಲಾಗುತ್ತದೆ. ಉಳಿದ ಎರಡು ದಿನಗಳಲ್ಲಿ ಹಾಲನ್ನು ಮಾತ್ರ ನೀಡಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ. ಒಟ್ಟಾರೆಯಾಗಿ ಸರ್ಕಾರದ ಕ್ಷೀರಭಾಗ್ಯ ಯೋಜನೆಯಡಿ ಪ್ರಸ್ತುತ ವಾರದಲ್ಲಿ ಐದು ದಿನ ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ಕೆನೆಭರಿತ ಹಾಲು ನೀಡಲಾಗುತ್ತದೆ. ಇನ್ನು ಮುಂದೆ ವಾರದಲ್ಲಿ ಮೂರು ದಿನ ಹಾಲಿಗೆ ನಿರ್ದಿಷ್ಟ ಪ್ರಮಾಣದ ರಾಗಿ ಮಾಲ್ಟ್ ಮಿಶ್ರಣ ಮಾಡಿ ಕೊಡಲಾಗುತ್ತದೆ. ಉಳಿದ ಎರಡು ದಿನಗಳಲ್ಲಿ ಹಾಲನ್ನು ಮಾತ್ರ ನೀಡಲಾಗುವುದು ಎಂದಿದ್ದಾರೆ.