Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯ ಸರ್ಕಾರದಿಂದಲೇ ನಿರುದ್ಯೋಗಿಗಳಿಗೆ ಉದ್ಯೋಗ ದೊರಕಿಸಿಕೊಡುವ ನಿಟ್ಟಿನಲ್ಲಿ ಬೆಂಗಳೂರಲ್ಲಿ ಫೆಬ್ರವರಿ 26, 27ರಂದು ಉದ್ಯೋಗ ಮೇಳವನ್ನು ಆಯೋಗಿಸಲಾಗುತ್ತಿದೆ. ಈ ಉದ್ಯೋಗ ಮೇಳದಲ್ಲಿ ನೀವು ಭಾಗವಹಿಸೋದಕ್ಕೆ ಮೊದಲು ನೋಂದಣಿ ಮಾಡಿಕೊಳ್ಳುವುದು ಮುಖ್ಯವಾಗಿದೆ. ಹಾಗಾದ್ರೇ ಹೇಗೆ ನೋಂದಣಿ ಮಾಡಿಕೊಳ್ಳಬೇಕು ಎನ್ನುಬ ಬಗ್ಗೆ ಮುಂದೆ ಓದಿ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಮಾಹಿತಿ ಹಂಚಿಕೊಂಡಿದ್ದು, ಯುವ ಸಮೃದ್ಧಿ ಸಮ್ಮೇಳನದ ಭಾಗವಾಗಿ ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಫೆಬ್ರಪರಿ.26, 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ. ಹೀಗೆ ಮಾಡುವುದು ಕಡ್ಡಾಯ ಫೆಬ್ರವರಿ.26, 27ರಂದು ನೀವು ಉದ್ಯೋಗ ಮೇಳದಲ್ಲಿ ಭಾಗವಹಿಸೋದಾದರೇ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ನೋಂದಣಿ ಮಾಡಿಕೊಂಡವರಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸೋದಕ್ಕೆ ಅವಕಾಶ ನೀಡಲಾಗುತ್ತಿದೆ. ಹೀಗೆ ನೋಂದಣಿ ಮಾಡಿ ಉದ್ಯೋಗಾಕಾಂಕ್ಷಿಗಳು ಈ ಕೆಳಗಿನ ಹಂತಗಳನ್ನು ಅನುಸರಿಸುವ ಮೂಲಕ, ಉದ್ಯೋಗ ಮೇಳದಲ್ಲಿ ಭಾಗಿಯಾಗಬಹುದಾಗಿದೆ. https://skillconnect.kaushalkar.com/ ಗೆ ಭೇಟಿ ನೀಡಿ ರಿಜಿಸ್ಟರ್ ಮೇಲೆ ಕ್ಲಿಕ್ ಮಾಡಿ ಉದ್ಯೋಗ ಮೇಳ ಮೇಲೆ ಕ್ಲಿಕ್ ಮಾಡಿ ಅಭ್ಯರ್ಥಿ ನೋಂದಣಿ ಮೇಲೆ ಕ್ಲಿಕ್ ಮಾಡಿ…
ನಮ್ಮ ಕರ್ನಾಟಕದಲ್ಲಿ ಸಾವಿರಾರು ದೇವಾಲಯಗಳಿವೆ. ಕೆಲವು ದೇವಾಲಯಗಳು ತಮ್ಮ ಸಾಂಸ್ಕೃತಿಕ ಹಿನ್ನೆಲೆ, ಪೌರಾಣಿಕ ಮತ್ತು ಐತಿಹಾಸಿಕ ಹಿನ್ನೆಲೆ ಕಾರಣದಿಂದಾಗಿ ಪ್ರಖ್ಯಾತಿಯಾಗಿದ್ದರೆ ಇನ್ನು ಕೆಲವು ಸ್ಥಳ ಮಹಾತ್ಮೆ ಕಾರಣದಿಂದಾಗಿ ಜಗತ್ ವಿಖ್ಯಾತಗೊಂಡಿವೆ. ನಮ್ಮ ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲೂ ಕೂಡ ಇಂತಹ ಶಕ್ತಿಶಾಲಿ ದೈವ ಬಲವುಳ್ಳ ಸಾಕಷ್ಟು ದೇವಸ್ಥಾನಗಳು ನೆಲೆಗೊಂಡಿರುವುದು ಮತ್ತು ಅಲ್ಲಿ ಪ್ರತಿನಿತ್ಯವೂ ಭಕ್ತರ ಸಮೂಹ ತುಂಬಿರುವುದನ್ನು ನಾವು ಕಾಣಬಹುದು. ಅಂತಹದ್ದೇ ಒಂದು ವಿಶೇಷ ಧಾರ್ಮಿಕ ಸ್ಥಳದ ಬಗ್ಗೆ ನಾವು ಈ ಅಂಕಣದಲ್ಲಿ ಮಾಹಿತಿ ತಿಳಿಸಿ ಕೊಡುತ್ತಿದ್ದೇವೆ. ಈ ಸ್ಥಳದ ಮಹಾತ್ಮೆಯನ್ನು ತಿಳಿದ ಮೇಲೆ ನೀವು ಕೂಡ ಈ ದೇವಸ್ಥಾನಕ್ಕೆ ಹೋಗಲು ಬಯಸುವುದರಲ್ಲಿ ಎರಡು ಮಾತಿಲ್ಲ. ಈಗ ನಾವು ಹೇಳುತ್ತಿರುವುದು ಹಾಸನ ಜಿಲ್ಲೆಯಲ್ಲಿರುವ ಪ್ರತಿಮನೆಯ ಆರಾಧ್ಯ ದೈವವಾಗಿ ಕಾಯುತ್ತಾ ಮನೆಮನೆ ಮಾತಾಗಿರುವ ತಾಯಿ ಪುರದಮ್ಮ ವಾಸವಿರುವ ದೇವಸ್ಥಾನದ ಬಗ್ಗೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ…
ಬೆಂಗಳೂರು: ವಿಧಾನಸಭೆಯಲ್ಲಿ ಇಂದು ಮಹತ್ವದ ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧರ್ಮದಾಯ ದತ್ತಿ ತಿದ್ದುಪಡಿ ವಿಧೇಯಕ ಅಂಗೀಕಾರಗೊಂಡಿದೆ. ಈ ತಿದ್ದುಪಡಿ ವಿದೇಯಕದ ಮೂಲಕ ರಾಜ್ಯದ ಮುಜರಾಯಿ ದೇವಸ್ಥಾನಗಳು ಕೊಡುತ್ತಿರುವಂತ ಆದಾಯವನ್ನು ದ್ವಿಗುಣಮಾಡಲಾಗಿದೆ. ಇದಷ್ಟೇ ಅಲ್ಲದೇ ಮುಜರಾಯಿ ಇಲಾಖೆಯ ದೇಗುಲಗಳಲ್ಲಿ 10 ಲಕ್ಷದಿಂದ 1 ಕೋಟಿ ರೂ ಆದಾಯ ಹೊಂದಿರೋ ದೇಗುಲಗಳು ಶೇ.5ರಷ್ಟು ಹಣ ಸಲ್ಲಿಸಬೇಕು. 1 ಕೋಟಿಗೂ ಹೆಚ್ಚು ಆದಾಯ ಮೀರಿದ ದೇಗುಲಗಳು ಶೇ.10ರಷ್ಟು ಹಣ ಸಲ್ಲಿಸಬೇಕು ಎಂಬುದಾಗಿ ತಿದ್ದುಪಡಿ ವಿದೇಯಕದಲ್ಲಿ ತಿಳಿಸಲಾಗಿದೆ. ಮುಜರಾಯಿ ಇಲಾಖೆಯ ದೇಗುಲಗಳ ಅರ್ಚಕರು, ಸಿಬ್ಬಂದಿಗೆ ಗುಡ್ ನ್ಯೂಸ್ ಎನ್ನುವಂತೆ ಸಿ-ಗ್ರೇಡ್ ದೇವಾಲಯದವರಿಗೆ ವಿಮೆ ಸೌಕರ್ಯ ಒದಗಿಸಲು ಬಿಲ್ ನಲ್ಲಿ ಅವಕಾಶವನ್ನು ಕಲ್ಪಿಸಲಾಗಿದೆ. ಅರ್ಚಕರು, ದೇಗುಲದ ಸಿಬ್ಬಂದಿಗಳಿ ಈ ವಿಮೆ ಸೌಲಭ್ಯ ಜಾರಿಯಾದ ನಂತ್ರ ಮೃತಪಟ್ಟಾಗ 5 ಲಕ್ಷ ರೂ ಪರಿಹಾರ ಸೀಗಲಿದೆ. ಈ ಮೂಲಕ 35000 ಸಾವಿರದಿಂದ ವಿಮಾ ಪರಿಹಾರವನ್ನು 5 ಲಕ್ಷಕ್ಕೆ ಹೆಚ್ಚಳ ಮಾಡಿದಂತೆ ಆಗಿದೆ. ದೇಗುಲದ ಸಿಬ್ಬಂದಿ, ಅರ್ಚಕರಿಗೆ ಗುಡ್ ನ್ಯೂಸ್ ಎನ್ನುವಂತೆ…
ಕೋಲಾರ: ವಿದ್ಯುತ್ ನಿರ್ವಹಣಾ ಕಾಮಗಾರಿ ನಡೆಸುತ್ತಿದ್ದಂತ ವೇಳೆಯಲ್ಲಿ ವಿದ್ಯುತ್ ಶಾಕ್ ನಿಂದಾಗಿ ಬೆಸ್ಕಾಂ ಗುತ್ತಿಗೆ ನೌಕರರನೊಬ್ಬ ಕಂಬದಲ್ಲೇ ಸಾವನ್ನಪ್ಪಿರೋ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಮಾಗೇರಿ ಬಳಿಯಲ್ಲಿ ಬೆಸ್ಕಾಂ ಗುತ್ತಿಗೆ ನೌಕರ ಮಂಜುನಾಥ್(45) ವಿದ್ಯುತ್ ದುರಸ್ತಿ ಮಾಡೋದಕ್ಕೆ ಕಂಬ ಹತ್ತಿದ್ದನು. ಈ ವೇಳೆಯಲ್ಲಿ ವಿದ್ಯುತ್ ಶಾಕ್ ಹೊಡೆದು, ಕಂಬದಲ್ಲೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಈ ಸಂಬಂಧ ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/bmtc-gives-good-news-to-students-appearing-for-ii-puc-exams/ https://kannadanewsnow.com/kannada/icc-test-ranking-jaiswal-breaks-into-top-20/
ಬೆಂಗಳೂರು: ನೋಂದಣಿ ಪ್ರಕ್ರಿಯೆಯಲ್ಲಿ ನಾಗರೀಕ ಸೇವೆಯನ್ನು ಮತ್ತಷ್ಟು ಸರಳ ಮತ್ತು ಜನಸ್ನೇಹಿಗೊಳಿಸುವ ಉದ್ದೇಶದಿಂದ ಸ್ಟ್ಯಾಂಪ್ ತಿದ್ದುಪಡಿ ವಿಧೇಯಕ-2024 ಮಂಡಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಬುಧವಾರ ವಿಧಾನಸಭೆಯಲ್ಲಿ ಸ್ಟ್ಯಾಂಪ್ ತಿದ್ದುಪಡಿ ವಿಧೇಯಕ-2024 ಅನ್ನು ಮಂಡಿಸಿ ಮಾತನಾಡಿದ ಅವರು, “ನೋಂದಣಿ ಕಚೇರಿಗಳಲ್ಲಿ ಜನಸಂದಣಿಯನ್ನು ನಿಯಂತ್ರಿಸುವ ಸಲುವಾಗಿ ಎರಡು ಮಹತ್ವದ ತಿದ್ದುಪಡಿಗಳನ್ನು ತರಲಾಗಿದೆ. ಆ ಪೈಕಿ ಮೊದಲ ತಿದ್ದುಪಡಿ ಆಸ್ತಿ ಮಾರಾಟಗಾರರು ಹಾಗೂ ಕೊಳ್ಳುವವರು ಇಬ್ಬರ ಉಪಸ್ಥಿತಿಯೂ ಇಲ್ಲದೆ ತಾವಿದ್ದಲ್ಲಿದಂಲೇ ತಾಂತ್ರಿಕವಾಗಿ ಆಸ್ತಿ ನೋಂದಣಿ ಮಾಡಿಸಿಕೊಳ್ಳಲು ವಿಧೇಯಕದಲ್ಲಿ ಅವಕಾಶ ಕಲ್ಪಿಸಲಾಗಿದೆ” ಎಂದು ಮಾಹಿತಿ ನೀಡಿದರು. ಮುಂದುವರೆದು, “ಈ ಹಿಂದೆ ಉಪ ನೋಂದಣಾಧಿಕಾರಿ ಕಚೇರಿಗೆ ಎರಡೂ ಕಡೆಯವರ ಉಪಸ್ಥಿತಿ ಅನಿವಾರ್ಯವಾಗಿತ್ತು. ಹೀಗಾಗಿ ಸರ್ಕಾರಿ ಕಚೇರಿಯಲ್ಲಿ ಜನಸಂದಣಿ ಹೆಚ್ಚಾಗಿತ್ತು. ಎಲ್ಲರಿಗೂ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವುದು ಅಸಾಧ್ಯವಾಗಿತ್ತು. ಹೀಗಾಗಿ ಜನಸಾಮಾನ್ಯರು ಅನಗತ್ಯವಾಗಿ ಉಪ ನೋಂದಣಾಧಿಕಾರಿ ಕಚೇರಿಗೆ ಓಡಾಡುವುದನ್ನು ತಪ್ಪಿಸುವ ಸಲುವಾಗಿ ತಾಂತ್ರಿಕ ನೋಂದಣಿಗೆ ಅಂಕಿತ ಹಾಕಲಾಗಿದೆ. ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ), ಕರ್ನಾಟಕ ಹೌಸಿಂಗ್ ಬೋರ್ಡ್,…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 15 ಬಾರಿ ಬಜೆಟ್ ಮಂಡನೆ ಮಾಡಿ, ರಾಜ್ಯದಲ್ಲಿ ಅಭಿವೃದ್ಧಿಗೆ ಆದ್ಯತೆ ನೀಡದೇ ಗ್ಯಾರೆಂಟಿ ಹೆಸರಿನಲ್ಲಿ ಕೇವಲ ಕಲ್ಯಾಣ ಕಾರ್ಯಗಳಿಗೆ ಹಣ ಖರ್ಚು ಮಾಡುತ್ತಿರುವುದು ಕಾಯಕವಿಲ್ಲದೇ ದಾಸೋಹ ಮಾಡುವುದರಿಂದ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮುಖ್ಯಮಂತ್ರಿಗಳು 15ನೇ ಬಾರಿ ಬಜೆಟ್ ಮಂಡನೆ ಮಾಡಿ ಅದನ್ನು ಹೇಗೆ ನಿರ್ವಹಣೆ ಮಾಡುತ್ತಾರೆ ಎನ್ನುವುದು ನಮಗೆ ಕುತೂಹಲ ಇದೆ. ಕಾಯಕ ಮತ್ತು ದಾಸೋಹದ ಬಗ್ಗೆ ಮಾತನಾಡಿದ್ದಾರೆ. ಇದು ನಮ್ಮ ನಾಡಿನ ಸಂಸ್ಕೃತಿ. ಕಾಯಕ ಇದ್ದರೆ ಮಾತ್ರ ದಾಸೋಹ. ಕೇವಲ ದಾಸೋಹ ಮಾಡಿಕೊಂಡು ಹೋದರೆ ಉಪಯೋಗವಿಲ್ಲ. ಕಾಯಕಕ್ಕೆ ಪೂರಕವಾದ ಯೋಜನೆಗಳನ್ನು ಜಾರಿಗೊಳಿಸಬೇಕು. ಕಾಯಕದಿಂದ ಬಂದ ಆದಾಯದಿಂದ ದಾಸೋಹ ಮಾಡಿದ್ದರೆ ತಪ್ಪಿಲ್ಲ. ಇವರ ಬಜೆಟ್ಟನ್ನು ನೋಡಿದಾಗ ಕಾಯಕ ಎಷ್ಟು ಆಗಬೇಕೊ ಅಷ್ಟು ಆಗುತ್ತಿಲ್ಲ. ಉತ್ಪಾದನೆ ಮತ್ತು ಹಂಚಿಕೆಯನ್ನು ಸರಿಯಾಗಿ ತೆಗೆದುಕೊಂಡು ಹೋಗದಿದ್ದರೆ, ಕಾಯಕ ಮತ್ತು ದಾಸೋಹಕ್ಕೆ ಮಹತ್ವ ಇಲ್ಲ ಎಂದು…
ಬೆಂಗಳೂರು: ಕೇಂದ್ರಿದಿಂದ ಅನುದಾನ ಹಾಗೂ ತೆರಿಗೆ ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಯಾವುದೇ ರೀತಿಯ ಅನ್ಯಾಯವಾಗಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳ ಮೂಲಕವೂ ರಾಜ್ಯಕ್ಕೆ ಸಾಕಷ್ಟು ಅನುದಾನ ಹರಿದು ಬರುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮುಖ್ಯಮಂತ್ರಿಗಳು ಹಣಕಾಸಿನ ವಿಚಾರದಲ್ಲಿ ಕೇಂದ್ರ ಸರ್ಚಾರ್ಜ್, ಸೆಸ್ ತೆಗೆದುಕೊಳ್ಳುತ್ತದೆ. ಅದರಲ್ಲೂ ರಾಜ್ಯಕ್ಕೆ ಪಾಲು ಕೊಡಬೇಕು ಎಂದು ಹೇಳುತ್ತಾರೆ. ಸರ್ಚಾರ್ಜ್ ಮತ್ತು ಸೆಸ್ಸು 1958 ನಿಂದಲೇ ಇವೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸರ್ಚಾರ್ಜ್ ಸೆಸ್ ಹಾಕಬಹುದು. ರಾಜ್ಯ ಸರ್ಕಾರ ಬೆಂಗಳೂರಿನ ಮೂಲ ಸೌಕರ್ಯ ಕಲ್ಪಿಸಲು ಸರ್ಚಾರ್ಜ್ ಸೆಸ್ ಹಾಕುತ್ತಿದ್ದಾರೆ. ಅದು ಬಂಡವಾಳವಾಗಿ ಪರಿವರ್ತನೆಯಾಗಿರುವುದರಿಂದ ರಾಜ್ಯದ ಅಭಿವೃದ್ಧಿಗೆ ಹಣ ಬಳಕೆಯಾಗುತ್ತಿದೆ ಎಂದು ಹೇಳಿದರು. ಕೇಂದ್ರ ಸರ್ಕಾರ ಕಳೆದ ಆರೇಳು ವರ್ಷದಿಂದ ತಂಬಾಕು, ಸಿಗರೇಟ್, ದುಬಾರಿ ಕಾರು, ಎಲೆಕ್ಟ್ರಾನಿಕ್ ವಸ್ತುಗಳ ಮೇಲೆ ಸೆಸ್ ಹಾಕಿ ರಾಜ್ಯಗಳಿಗೆ ಜಿಎಸ್ಟಿ ಪರಿಹಾರ ನೀಡುತ್ತದೆ. ಕೇಂದ್ರ ಸರ್ಕಾರ ಹಾಕಿರುವ ಸೆಸ್ನಲ್ಲಿ ಕರ್ನಾಟಕಕ್ಕೆ ೪೫…
ಬೆಂಗಳೂರು : ಯುವಜನರು ಸೇರಿದಂತೆ ಪದವಿ, ಇಂಜನಿಯರಿಂಗ್, ಡಿಪ್ಲೊಮಾ ಹಾಗೂ ವೃತ್ತಿಪರ ಕೋರ್ಸ್ಗಳನ್ನು ಪೂರ್ಣಗೊಳಿಸಿರುವವರಿಗೆ ಉದ್ಯೋಗ ಅವಕಾಶ ಕಲ್ಪಿಸುವ ಬೃಹತ್ ಯುವ ಸಮೃದ್ಧಿ ಸಮ್ಮೇಳ ಇದೇ ತಿಂಗಳ 26ರಿಂದ ಎರಡು ದಿನಗಳ ಕಾಲ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಕೌಶಲ್ಯಾಭಿವೃದ್ದಿ ಹಾಗೂ ಜೀವನೋಪಾಯ ಇಲಾಖೆ ಸಹಭಾಗಿತ್ವದಲ್ಲಿ ನಡೆಯಲಿರುವ ಯುವ ಸಮೃದ್ಧಿ ಸಮ್ಮೇಳನದ ಉದ್ಯೋಗ ಮೇಳ ಕುರಿತು ಬುಧವಾರ ವಿಧಾನಸೌಧದ ಸಮ್ಮೇಳನದ ಸಭಾಂಗಣದಲ್ಲಿ ಸಚಿವರಾದ ಡಾ. ಶರಣ ಪ್ರಕಾಶ್ ಪಾಟೀಲ್ ಹಾಗೂ ಐಟಿ- ಬಿಟಿ ಸಚಿವರಾದ ಪ್ರಿಯಾಂಕ್ ಖರ್ಗೆ ಯವರು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಮಾತನಾಡಿ, ಇದೇ ತಿಂಗಳ 26 ಮತ್ತು 27ರಂದು ಬೆಂಗಳೂರಿನ ಅರಮನೆಯಲ್ಲಿ ಯುವ ಸಮೃದ್ಧಿ ಸಮ್ಮೇಳನ ಎಂಬ ಹೆಸರಿನಡಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಪದವಿ, ಎಂಜಿನಿಯರಿಂಗ್, ಡಿಪ್ಲೊಮಾ, ಐಟಿಐ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳನ್ನು ಮುಗಿಸಿರುವ ಉದ್ಯೋಗ ಆಕಾಂಕ್ಷಿಗಳಿಗೆ ಉದ್ಯೋಗ ಒದಗಿಸಿಕೊಡುವ ಮೇಳ ಇದಾಗಿದೆ ಎಂದು ಹೇಳಿದರು. ಈಗಾಗಲೇ ಈ ಮೇಳಕ್ಕೆ ರಾಜ್ಯಾದ್ಯಂತ…
ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಹುಕ್ಕಾಬಾರ್ ನಿಷೇಧ ಮಾಡಲಾಗಿದೆ. ಇದನ್ನು ಅಧಿಕೃತವಾಗಿ ವಿಧಾನಸಭೆಯಲ್ಲಿ ಮಸೂದೆ ಮಂಡಿಸಿ, ಇಂದು ಅಂಗೀಕಾರ ಪಡೆಯಲಾಗಿದೆ. ಇದಲ್ಲದೇ 21 ವರ್ಷದೊಳಗಿನವರಿಗೆ ಸಿಗರೇಟ್ ಮಾರಾಟ ಮಾಡುವುದನ್ನು ನಿಷೇಧಿಸುವ ಮಸೂದೆಗೂ ಅಂಗೀಕಾರದ ಮುದ್ರೆಯನ್ನು ಒತ್ತಲಾಗಿದೆ. ಇಂದು ಕರ್ನಾಟಕ ವಿಧಾನಸಭೆಯಲ್ಲಿ ಕೋಟ್ಪಾ ಕಾಯ್ದೆಗೆ (ಸಿಗರೇಟುಗಳು ಮತ್ತು ಇತರ ತಂಬಾಕು ಉತ್ಪನ್ನಗಳು) ತಿದ್ದುಪಡಿ ಮಸೂದೆ ಅಂಗೀಕಾರಗೊಂಡಿದೆ. ಈ ಮೂಲಕ ರಾಜ್ಯದಾದ್ಯಂತ ಎಲ್ಲಾ ಹುಕ್ಕಾ ಬಾರ್ ಗಳನ್ನು ನಿಷೇಧಿಸಿದಿಸಲಾಗಿದೆ. 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಸಿಗರೇಟುಗಳು ಮತ್ತು ಇತರ ತಂಬಾಕು ಉತ್ಪನ್ನಗಳ ಮಾರಾಟವನ್ನು ರಾಜ್ಯವು ನಿಷೇಧಿಸಿದೆ. https://kannadanewsnow.com/kannada/bmtc-gives-good-news-to-students-appearing-for-ii-puc-exams/ https://kannadanewsnow.com/kannada/icc-test-ranking-jaiswal-breaks-into-top-20/
ಶಿವಮೊಗ್ಗ: ಸರ್ಕಾರದ ಮಹತ್ವಕಾಂಕ್ಷಿ ಐದು ಗ್ಯಾರಂಟಿ ಯೋಜನೆ ಫಲಾನುಭವಿಗಳ ಜಿಲ್ಲಾ ಮಟ್ಟದ ಸಮಾವೇಶವನ್ನು ಫೆಬ್ರವರಿ 24ರಂದು ನಗರದ ಫ್ರೀಡಂ ಪಾರ್ಕ್ನಲ್ಲಿ ಆಯೋಜಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ತಿಳಿಸಿದರು. ಅವರು ಇಂದು ನಗರದ ಫ್ರೀಡಂ ಪಾರ್ಕ್ನಲ್ಲಿ ನಡೆದಿರುವ ಫೆ. 24ರ ಕಾರ್ಯಕ್ರಮದ ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿ ನಂತರ ಮಾಧ್ಯಮದ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ ಈ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಸರ್ಕಾರದ ಗ್ಯಾರಂಟಿ ಸೌಲಭ್ಯ ಪಡೆದ ಎಲ್ಲಾ ಫಲಾನುಭವಿಗಳು ಆಗಮಿಸಲಿದ್ದಾರೆ ಎಂದವರು ನುಡಿದರು. ಜಿಲ್ಲಾ ಮಟ್ಟದಲ್ಲಿ ಆಯೋಜನೆಗೊಳ್ಳುತ್ತಿರುವ ಈ ಕಾರ್ಯಕ್ರಮಕ್ಕೆ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಗಮಿಸಿ, ಫಲಾನುಭವಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಲ್ಲದೆ ಸಚಿವ ಸಂಪುಟದ ಕೆಲ ಸಚಿವರು ಹಾಗೂ ನಿಗಮ ಮಂಡಳಿಗಳ ಅಧ್ಯಕ್ಷರುಗಳು ಆಗಮಿಸಲಿದ್ದಾರೆ ಎಂದು ತಿಳಿಸಿದರು. ಜಿಲ್ಲೆಯಲ್ಲಿರುವ ಐದು ಗ್ಯಾರೆಂಟಿ ಯೋಜನೆಗಳ ಎಲ್ಲಾ ಪಲಾನುಭವಿಗಳ ಅನುಕೂಲಕ್ಕಾಗಿ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳ ಜೊತೆಗೆ ಮಧ್ಯಾಹ್ನದ ಉಪಹಾರದ ವ್ಯವಸ್ಥೆ…