Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಸರ್ಕಾರದ ಐದು ಮಹತ್ವಕಾಂಕ್ಷಿ ಯೋಜನೆಗಳಾದ ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನ ಭಾಗ್ಯ, ಶಕ್ತಿ ಮತ್ತು ಯುವನಿಧಿ ಯೋಜನೆಗಳ ಸಮರ್ಪಕ ಅನುಷ್ಠಾನದಿಂದ ರಾಜ್ಯದ ಜನಸಾಮಾನ್ಯರು ನೆಮ್ಮದಿಯ ಜೀವನ ನಡೆಸುವಂತಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ಅವರು ಹೇಳಿದರು. ಅವರು ಇಂದು ಜಿಲ್ಲೆಯ ಸೊರಬ ತಾಲೂಕಿನ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಏರ್ಪಡಿಸಲಾಗಿದ್ದ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಮಹಿಳೆಯರು ತಮ್ಮ ಕೌಟುಂಬಿಕ ನಿರ್ವಹಣೆಯ ಅನೇಕ ಸಂದಿಗ್ಧ ಸಂದರ್ಭಗಳಲ್ಲಿ ಸರ್ಕಾರ ಆರ್ಥಿಕ ನೆರವಿನ ಹಸ್ತ ನೀಡಿ ಸಹಕರಿಸುತ್ತಿದೆ. ಚುನಾವಣಾ ಪೂರ್ವದಲ್ಲಿ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷನಾಗಿದ್ದೆ ಎಂಬ ಸಂತಸದ ಸಂಗತಿ ನನ್ನದಾಗಿದೆ ಎಂದರು. ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಯಂತೆ ಗ್ಯಾರಂಟಿಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಲಾಗುತ್ತಿದೆ. ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಲಾಗುತ್ತಿದೆ. ನಂಬಿಕೆ ಇಡಿ, ತಮ್ಮ ನಂಬಿಕೆಯನ್ನು ಹುಸಿಗೊಳಿಸುವುದಿಲ್ಲ. ಅಂತಯೇ ಇದು ನಿಮ್ಮದೇ ಸರ್ಕಾರ…
ಬೆಂಗಳೂರು: ಬ್ರಾಹ್ಮಣ ವಿದ್ಯಾರ್ಥಿಗಳಇಗೆ ಗುಡ್ ನ್ಯೂಸ್ ಎನ್ನುವಂತೆ ಸಾಂದೀಪನಿ ಶಿಷ್ಯವೇತನಕ್ಕೆ ಅರ್ಜಿ ದಿನಾಂಕ ಮಾರ್ಚ್ 01ರ ವರೆಗೆ ವಿಸ್ತರಣೆ ಮಾಡಲಾಗಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು, ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವನ್ನು ಸಕಾಲದಲ್ಲಿ ನೀಡುವ ಸಾಂದೀಪನಿ ಶಿಷ್ಯವೇತನ ಯೋಜನೆಯನ್ನು ಮಾರ್ಚ್ 01ರ ವರೆಗೆ ವಿಸ್ತರಿಸಲಾಗಿದೆ ಎಂದಿದ್ದಾರೆ. ಸಾಂದೀಪನಿ ಶಿಷ್ಯವೇತನ ಯೋಜನೆಯ ಅಡಿಯಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಅಂದರೆ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ 15,000 ರೂ ವರೆಗೆ ವಿದ್ಯಾರ್ಥಿವೇತನ ನೀಡಲಾಗುವುದು. ಇನ್ನೂ ಸಿಇಟಿ ಸೇರಿದಂತೆ ಸಾಮಾನ್ಯ ಪ್ರವೇಶ ಪರೀಕ್ಷೆಗಳ ಮೂಲಕ ಪದವಿ ಮತ್ತು ಸ್ನಾತಕೋತ್ತರ ಪದವಿಗಳಿಗೆ ದಾಖಲಾತಿ ಪಡೆದ ವಿದ್ಯಾರ್ಥಿಗಳಿಗೆ ಕಾಲೇಜು ಶುಲ್ಕದ ಒಟ್ಟು ಮೊತ್ತದ 2/3 ಭಾಗ ಅಥವಾ ಗರಿಷ್ಠ ರೂ.1 ಲಕ್ಷದ ವರೆಗೆ ಶಿಷ್ಯವೇತನ ನೀಡಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ. ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಸಮುದಾಯದ ಅರ್ಹ ವಿದ್ಯಾರ್ಥಿಗಳು ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬೇಕಾಗಿ ಈ ಮೂಲಕ ತಿಳಿಸಿದ್ದಾರೆ.
ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ಬಾಕಿ ಉಳಿಸಿಕೊಂಡಿರುವ ಆಸ್ತಿ ತೆರಿಗೆ ಮೇಲಿನ ದಂಡದ ಪ್ರಮಾಣ ಶೇಕಡ 50 ರಷ್ಟು ಕಡಿತ ಸೇರಿದಂತೆ ತೆರಿಗೆದಾರರ ಸ್ನೇಹಿ ಬಿಬಿಎಂಪಿ (ತಿದ್ದುಪಡಿ) ವಿಧೇಯಕ 2024 ಅನ್ನು ವಿಧಾನಸಭೆಯಲ್ಲಿ ಬುಧವಾರ ಅಂಗೀಕರಿಸಲಾಯಿತು. ವಿಧಾನಸಭೆಯಲ್ಲಿ ಭೋಜನ ವಿರಾಮದ ನಂತರ ನಡೆದ ಕಲಾಪದಲ್ಲಿ ಬೆಂಗಳೂರು ನಗರಾಭಿವೃದ್ದಿ ಖಾತೆಯನ್ನೂ ಹೊಂದಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬಿಬಿಎಂಪಿ ಆಸ್ತಿ ತೆರಿಗೆ ತಿದ್ದುಪಡಿ ವಿಧೇಯಕವನ್ನು ಮಂಡಿಸಿದರು. ಈ ವಿಧೇಯಕದಿಂದ ಬೆಂಗಳೂರಿನ ನಾಗರಿಕರಿಗೆ ತೆರಿಗೆ ಬಾಬತ್ತು, ದಂಡ ವಿನಾಯಿತಿ ಸೇರಿ ಸುಮಾರು ರೂ. 2,700 ಕೋಟಿ ರೂಪಾಯಿಯಷ್ಟು ಅನುಕೂಲವಾಗಲಿದೆ. ಜತೆಗೆ ಪಾಲಿಕೆಗೆ ಸುಮಾರು ರೂ.1,000 ಕೋಟಿಯಷ್ಟು ಆಸ್ತಿ ತೆರಿಗೆ ಬರಲಿದೆ. ಸುಮಾರು 5.51 ಲಕ್ಷ ತೆರಿಗೆ ಬಾಕಿದಾರರು, ಸುಮಾರು 5- 7 ಲಕ್ಷ ತೆರಿಗೆ ವ್ಯಾಪ್ತಿಗೆ ಬಾರದವರು ಹಾಗೂ 3 ಲಕ್ಷದಷ್ಟು ಮಂದಿ ಭಾಗಶಃ ತೆರಿಗೆ ಪಾವತಿದಾರರಿಗೆ ಒಟ್ಟಾರೆ 13 ರಿಂದ 15 ಲಕ್ಷ ಜನರಿಗೆ ಅನುಕೂಲವಾಗಲಿದೆ. ಈ ವಿಧೇಯಕದಲ್ಲಿ ಬಡ ಹಾಗೂ ದುರ್ಬಲ ವರ್ಗದವರಿಗೆ ವಿಶೇಷ…
ಬೆಂಗಳೂರು : “ಬೆಂಗಳೂರು ಹೊರವಲಯದ 110 ಹಳ್ಳಿಗಳಿಗೆ ಮೇ ವೇಳೆಗೆ ಕುಡಿಯಲು ಕಾವೇರಿ ನೀರು ಪೂರೈಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, “ಕುಡಿಯುವ ನೀರನ್ನು ಮುಂದಿನ ಮೇ ತಿಂಗಳಲ್ಲಿ ಪೂರೈಸಲಾಗುವುದು. ಆದರೆ ಸೀವೇಜ್ ಪ್ಲಾಂಟ್ ಸೇರಿದಂತೆ ಇತರೇ ಕಾಮಗಾರಿಗಳು ಪೂರ್ಣಗೊಳ್ಳಲು 2 ವರ್ಷಗಳು ಬೇಕಾಗಬಹುದು” ಎಂದು ತಿಳಿಸಿದರು. “ಯಶವಂತಪುರ ಕ್ಷೇತ್ರದಲ್ಲಿ ಅರಣ್ಯ ಭೂಮಿಯ ಪಕ್ಕದಲ್ಲಿ ಇರುವ ಬಿಡಿಎ ಬಡಾವಣೆಗಳಿಗೆ ನೀರು ಹರಿಸಲು ಇದ್ದಂತಹ ತೊಡಕುಗಳನ್ನು ನಿವಾರಿಸಲಾಗುವುದು. ಈಗಾಗಲೇ ಅರಣ್ಯ ಇಲಾಖೆಯವರ ಜೊತೆಗೆ ಚರ್ಚೆ ನಡೆಸಲಾಗಿದೆ. ಯಶವಂತಪುರ ಕ್ಷೇತ್ರ ದೊಡ್ಡದಾಗಿದ್ದು, ನಗರ ಭಾಗದಷ್ಟೇ ವಿಸ್ತೀರ್ಣವನ್ನು ಗ್ರಾಮೀಣ ಭಾಗ ಹೊಂದಿದೆ. ಎಲ್ಲಾ ಸಮಸ್ಯೆಗಳನ್ನು ನಾನೇ ಖುದ್ದಾಗಿ ಬಗೆಹರಿಸುತ್ತೇನೆ” ಎಂದರು. ಬೆಂಗಳೂರು ವ್ಯಾಪ್ತಿಯ ಪ್ರತಿ ಶಾಸಕರಿಗೆ 10 ಕೋಟಿ ಅನುದಾನ: 11 ಸಾವಿರ ಕೊಳವೆ ಬಾವಿ ಕೊರೆಯಲು ಆದೇಶ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಕೊಳವೆಬಾವಿಗಳನ್ನು ಕೊರೆಸುವ ಸಂಬಂಧ ಬಿಜೆಪಿ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರಾಣರಾದಂತ ಶಿಕ್ಷಣ ಇಲಾಖೆಯ ನೌಕರರಿಗೆ ಪ್ರೋತ್ಸಾಹ ಧನವನ್ನು ಬಿಡುಗಡೆ ಮಾಡಿದೆ. ಈ ಮೂಲಕ ಶಿಕ್ಷಣ ಇಲಾಖೆಯ ನೌಕರರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ಶಆಲಾ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಕರ್ನಾಟಕ ಸಿವಿಲ್ ಸೇವಾ(ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012 ಜಾರಿಗೆ ಬಂದ ದಿ:22.03.2012 ರಂದು ಸೇವೆಯಲ್ಲಿದ್ದು, ದಿ:17.04.2021 ರೊಳಗೆ ಸದರಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ಸೇವಾನಿರತ ಅರ್ಹ ಸರ್ಕಾರಿ ನೌಕರರಿಗೆ ರೂ.5000/-ಗಳ ಪ್ರೋತ್ಸಾಹ ಧನವನ್ನು ಮಂಜೂರು ಮಾಡಲು ಸದರಿ ನಿಯಮಗಳ ನಿಯಮ-3(3)ರಲ್ಲಿ ಅವಕಾಶ ಕಲ್ಪಿಸಲಾಗಿದೆ. ಸದರಿ ಪ್ರೋತ್ಸಾಹ ಧನವನ್ನು ಸದರಿ “ಸರ್ಕಾರಿ ನೌಕರನು ವೇತನ ಪಡೆಯುವ ಲೆಕ್ಕಶೀರ್ಷಿಕೆಯಡಿ “Subsidiary Suspenses” ಉಪಶೀರ್ಷಿಕೆಯಡಿಯಲ್ಲಿ ಭರಿಸುವುದು” ಎಂದು ಆದೇಶಿಸಲಾಗಿದೆ. ಸದರಿ ಸರ್ಕಾರಿ ಆದೇಶದನ್ವಯ ಪ್ರೋತ್ಸಾಹ ಧನವನ್ನು ನೀಡಲು ಖಜಾನೆ ಆಯುಕ್ತರಿಂದ ಖಜಾನೆ ಇಲಾಖೆಯ ಸಿಬ್ಬಂದಿಗಳಿಗೆ ಪ್ರೋತ್ಸಾಹ ಧನ ಪಾವತಿಸುವ ಬಗ್ಗೆ ಉಲ್ಲೇಖ(2)ರಂತೆ ಪ್ರತ್ಯೇಕವಾಗಿ ಸೂಚಿಸಲಾಗಿರುತ್ತದೆ ಎಂದಿದ್ದಾರೆ. ಶಾಲಾ ಶಿಕ್ಷಣ ಇಲಾಖೆಯಲ್ಲಿ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಐದು ಗ್ಯಾರಂಟಿ ಯೋಜನೆ ಜಾರಿಯ ಬಳಿಕ, ಮತ್ತೊಂದು ಗುಡ್ ನ್ಯೂಸ್ ನೀಡಲಾಗಿದೆ. ಅದೇ ರಾಜ್ಯದ ಜನತೆಯ ಅನಾರೋಗ್ಯ ಸಮಸ್ಯೆ ನಿವಾರಣೆಗಾಗಿ ದಿನಕ್ಕೆ 2 ಬಾರಿ ಉಚಿತ ಯೋಗ ತರಬೇತಿ ನೀಡುವುದಾಗಿದೆ. ಈ ಕುರಿತಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಆಯುಷ್ ಚಿಕಿತ್ಸಾಲಯಗಳಲ್ಲಿ ಆಯುಷ್ಮಾನ್ ಮಂದಿರಗಳ ಮೂಲಕ ನುರಿತ ಯೋಗ ತರಬೇತುದಾರರಿಂದ ದಿನಕ್ಕೆ ಎರಡು ಬಾರಿ ಉಚಿತ ಯೋಗ ತರಬೇತಿ ಕಾರ್ಯಕ್ರಮ ಜಾರಿಗೆ ತರಲಾಗಿದೆ ಎಂದಿದ್ದಾರ. ಒಟ್ಟಾರೆಯಾಗಿ ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರ, ಆಯುಷ್ಮಾನ್ ಚಿಕಿತ್ಸಾಲಯಗಳ ಮೂಲಕ ಜನರಿಗೆ ಯೋಗ ತರಬೇತಿಯನ್ನು ದಿನಕ್ಕೆ 2 ದಿನ ನೀಡಲಾಗುತ್ತದೆ. ಈ ಮೂಲಕ ಅನಾರೋಗ್ಯ ಪೀಡಿತರ ಆರೋಗ್ಯ ಸುಧಾರಣೆಯ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಕ್ರಮ ವಹಿಸಿದೆ.
ನವದೆಹಲಿ: ಸಾರಥಿ ಪೋರ್ಟಲ್ನಲ್ಲಿನ ಮೂಲಸೌಕರ್ಯ ಸಂಬಂಧಿತ ಸಮಸ್ಯೆಗಳಿಂದಾಗಿ ಕಲಿಕಾ ಪರವಾನಗಿ, ಚಾಲನಾ ಪರವಾನಗಿ ಮತ್ತು ಕಂಡಕ್ಟರ್ ಪರವಾನಗಿಯ ಮಾನ್ಯತೆಯನ್ನು 2024ರ ಫೆಬ್ರವರಿ 29ರವರೆಗೆ ವಿಸ್ತರಿಸಿ ಕೇಂದ್ರ ರಸ್ತೆ ಸಚಿವಾಲಯ ಮಂಗಳವಾರ ಆದೇಶ ಹೊರಡಿಸಿದೆ. ಫೆ.25ರೊಳಗೆ LL, DL, ಕಂಡಕ್ಟರ್ ಲೈಸೆನ್ಸ್ ಮುಗಿಯೋರಿಗೆ ಗುಡ್ ನ್ಯೂಸ್: ಫೆ.29ರವರೆಗೆ ಮಾನ್ಯತೆ ವಿಸ್ತರಣೆ ಜನವರಿ 31, 2024 ರಿಂದ ಫೆಬ್ರವರಿ 12, 2024 ರವರೆಗೆ ಸಾರಥಿ ಪೋರ್ಟಲ್ನಲ್ಲಿ ಮೂಲಸೌಕರ್ಯ ಸಂಬಂಧಿತ ಸಮಸ್ಯೆಗಳಿಂದಾಗಿ, ಅರ್ಜಿದಾರರು ಪರವಾನಗಿ ಸಂಬಂಧಿತ ಸೇವೆಗಳನ್ನು ಪಡೆಯುವಲ್ಲಿ ಅಡೆತಡೆಗಳನ್ನು ಎದುರಿಸಿದ್ದಾರೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಸುತ್ತೋಲೆಯಲ್ಲಿ ತಿಳಿಸಿದೆ. ಅದರಂತೆ, ಜನವರಿ 31, 2024 ಮತ್ತು ಫೆಬ್ರವರಿ 15, 2024 ರ ನಡುವೆ ಮುಕ್ತಾಯಗೊಂಡ ಕಲಿಕಾ ಪರವಾನಗಿ, ಚಾಲನಾ ಪರವಾನಗಿ ಮತ್ತು ಕಂಡಕ್ಟರ್ ಪರವಾನಗಿಯ ಸಿಂಧುತ್ವವನ್ನು ಫೆಬ್ರವರಿ 29, 2024 ರವರೆಗೆ ಯಾವುದೇ ದಂಡ ವಿಧಿಸದೆ ಮಾನ್ಯವೆಂದು ಪರಿಗಣಿಸಲಾಗುವುದು ಎಂದು ರಸ್ತೆ ಸಾರಿಗೆ ಸಚಿವಾಲಯ ತಿಳಿಸಿದೆ. ಆನ್ಲೈನ್ ಸೇವೆಗಳ ಭಾಗಶಃ ಸ್ಥಗಿತ…
ಬೆಂಗಳೂರು : ಕೋಲಾರದ ಕೆರೆಗಳಿಗೆ ನೀರುಣಿಸುತ್ತಿರುವ ಕೆಸಿ ವ್ಯಾಲಿ (ಕೋರಮಂಗಲ – ಚಲ್ಲಘಟ್ಟ) ಯೋಜನೆಯ ಬಗ್ಗೆ ಸದನದ ಮೂಲಕ ಜನರಿಗೆ ತಪ್ಪು ಸಂದೇಶ ನೀಡಬೇಡಿ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮನವಿ ಮಾಡಿದರು. ಮಂಗಳವಾರದ ವಿಧಾನಸಭೆ ಅಧಿವೇಶದ ಪ್ರಶ್ನೋತ್ತರ ಅವಧಿಯಲ್ಲಿ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜ್ ಅವರು ಕೆಸಿ ವ್ಯಾಲಿ ಯೋಜನೆಯಡಿ ನೀರಿನ ಗುಣಮಟ್ಟದ ಬಗ್ಗೆ ಪ್ರಶ್ನಿಸಿದ್ದರು. ಬೆಂಗಳೂರಿನ ಕೊಳಚೆ ನೀರನ್ನು ಸರಿಯಾಗಿ ಶುದ್ದೀಕರಣ ಮಾಡದ ಕಾರಣ ಕೋಲಾರದ ಕೆರೆ ಹಾಗೂ ಅಂತರ್ಜಲದ ಗುಣಮಟ್ಟ ಕುಗ್ಗಿದೆ. ಪಶುಗಳೂ ಸಹ ಕೆರೆಯ ನೀರನ್ನು ಸೇವಿಸುತ್ತಿಲ್ಲ. ಹೀಗಾಗಿ ಕೆಸಿ ವ್ಯಾಲಿ ನೀರಿಗೆ ಮೂರನೇ ಹಂತದ ಶುದ್ದೀಕರಣದ ಅಗತ್ಯ ಇದೆ ಎಂದರು. ಈ ವೇಳೆ ಸದನದಲ್ಲಿ ಎದ್ದು ನಿಂತು ಶಾಸಕರ ಪ್ರಶ್ನೆಗೆ ಅಸಮಾಧಾನ ಸೂಚಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, “ಕೆಸಿ ವ್ಯಾಲಿ ನೀರಿಗೆ ಮೂರನೇ ಹಂತದ ಶುದ್ದೀಕರಣ ಅಗತ್ಯವಿದೆ ಎಂಬ ಬಗ್ಗೆ ನಮ್ಮ ಯಾವುದೇ ತಕರಾರು ಇಲ್ಲ. ಆದರೆ, ಕೋಲಾರದ ಜೀವನಾಡಿಯಾಗಿರುವ ಈ ಯೋಜನೆಯ…
ಶಿವಮೊಗ್ಗ: ಶಿವಮೊಗ್ಗ ನಗರ ಗಾಂಧಿಬಜಾರ್, ಭರಮಪ್ಪನಗರ, ಎಂ.ಕೆ.ಕೆ.ರಸ್ತೆಗಳಲ್ಲಿ ಕಂಬಗಳನ್ನು ಬದಲಿಸುವ ಕಾಮಗಾರಿ ಹಮ್ಮಿಕೊಳ್ಳುವುದರಿಂದ ಫೆ. 22 ರಂದು ಬೆಳಗ್ಗೆ 9.00 ರಿಂದ ಸಂಜೆ 6.00 ರವರೆಗೆ ಗಾಂಧಿಬಜಾರ್, ಸೊಪ್ಪಿನ ಮಾರ್ಕೆಟ್, ಕೆ.ಆರ್.ಪುರಂ, ಭರಮಪ್ಪ ನಗರ, ಎಂ.ಕೆ.ಕೆ. ರಸ್ತೆ, ಬಿ.ಹೆಚ್.ರಸ್ತೆ, ನಾಗಪ್ಪ ಕೇರಿ, ತಿರುಪಳ್ಳಯ್ಯನಕೇರಿ, ಸಾವರ್ಕರ್ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಈ ಪ್ರದೇಶಗಳ ಗ್ರಾಹಕರು ಮೆಸ್ಕಾಂನೊಂದಿಗೆ ಸಹಕರಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದೆ. https://kannadanewsnow.com/kannada/breaking-rishabh-pant-ready-to-return-to-cricket-participate-in-ipl-2024-report/ https://kannadanewsnow.com/kannada/bbmp-bill-amendment-will-allow-builders-to-commit-irregularities-bommai/
ಬೆಂಗಳೂರು: ಇಂದು ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾನಿಲಯದ (IGNOU) 37ನೇ ಘಟಿಕೋತ್ಸವವು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಶ್ರೀ ಪುಟ್ಟಣ್ಣ ಚೆಟ್ಟಿ ಟೌನ್ ಹಾಲ್ನಲ್ಲಿ ನಡೆಯಿತು. ಭಾರತದ ಗೌರವಾನ್ವಿತ ಉಪಾಧ್ಯಕ್ಷರಾದ ಶ್ರೀ ಜಗದೀಪ್ ಧಂಖರ್ ಅವರು ಹೊಸ ದೆಹಲಿಯ ಮೈದಾನ್ ಗರ್ಹಿಯಲ್ಲಿ ನಡೆದ Hqrs, ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿದ್ದರು. ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಗೌರವಾನ್ವಿತ ಉಪಕುಲಪತಿ ಪ್ರೊ.ಲಿಂಗರಾಜ ಗಾಂಧಿ ಅವರು ಗೌರವ ಅತಿಥಿಯಾಗಿ ಆಗಮಿಸಿ ಘಟಿಕೋತ್ಸವ ಭಾಷಣ ಮಾಡಿದರು. ಎಲ್ಲಾ ಪದವೀಧರರನ್ನು ಅಭಿನಂದಿಸಿ, ಅವರ ಮುಂದಿನ ಪ್ರಯತ್ನಗಳಲ್ಲಿ ಯಶಸ್ವಿಯಾಗಲಿ ಎಂದು ಹಾರೈಸಿದರು. ಯಾವುದೇ ಮಾರ್ಗವನ್ನು ಆರಿಸಿಕೊಂಡರೂ ಅದನ್ನು ಸಮರ್ಪಣಾ ಮನೋಭಾವ, ಶಿಸ್ತು ಮತ್ತು ಉತ್ಸಾಹದಿಂದ ಮುಂದುವರಿಸಬೇಕು ಎಂದು ಅವರು ಅಭಿಪ್ರಾಯಪಟ್ಟರು. ಸಮಾಜದ ಎಲ್ಲ ವರ್ಗದವರಿಗೂ ಕೈಗೆಟಕುವ ದರದಲ್ಲಿ ಉನ್ನತ ಶಿಕ್ಷಣವನ್ನು ಒದಗಿಸುವ ಮೂಲಕ ಇಗ್ನೋ ಮತ್ತು ಅದರ ಶ್ರೇಷ್ಠ ಸೇವೆಯ ಪ್ರಯತ್ನಗಳನ್ನು ಅವರು ಶ್ಲಾಘಿಸಿದರು. ವ್ಯಕ್ತಿತ್ವದ ಸಮಗ್ರ ಅಭಿವೃದ್ಧಿಗಾಗಿ ಶಿಕ್ಷಣ ವ್ಯವಸ್ಥೆಯಲ್ಲಿ ಸಂಯೋಜಿಸಲು ಕೌಶಲ್ಯ, ಜ್ಞಾನ, ವರ್ತನೆ ಮತ್ತು ಮೌಲ್ಯಗಳನ್ನು ಸುಧಾರಿಸುವಲ್ಲಿ ಎನ್ಇಪಿ…