Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯದ 8.65 ಲಕ್ಷ ಹಾಲು ಉತ್ಪಾದಕರಿಗೆ 757 ಕೋಟಿ ರೂ. ಪ್ರೋತ್ಸಾಹ ಧನ ನೇರವಾಗಿ ವರ್ಗಾವಣೆ ಮಾಡಲಾಗಿದೆ ಎಂದು ರಾಜ್ಯಪಾಲರಿಂದ ಸುಳ್ಳು ಹೇಳಿಸಿದ್ದು, ಆರು ತಿಂಗಳಿಂದ ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ಬಿಡುಗಡೆ ಮಾಡಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಉತ್ತರ ನೀಡುತ್ತ ರಾಜ್ಯಪಾಲರಿಂದ ಯಾವುದೇ ಸುಳ್ಳು ಹೇಳಿಸಿಲ್ಲ, ಸುಳ್ಳು ಹೇಳಿಸಿದ್ದರೆ ತೋರಿಸಿ ಎಂದು ಸವಾಲು ಹಾಕಿದರು. ಅವರ ಸವಾಲಿಗೆ ಪ್ರತ್ಯುತ್ತರ ನೀಡಿದ ಬಸವರಾಜ ಬೊಮ್ಮಾಯಿ, ಹಾಲು ಉತ್ಪಾದಕರು ಕಳೆದ ಆರು ತಿಂಗಳಿನಿಂದ ಯಾವುದೇ ಪ್ರೋತ್ಸಾಹ ಧನ ಬಂದಿಲ್ಲ ಅಂತ ಪ್ರತಿಭಟನೆ ಮಾಡುತ್ತಿದ್ದಾರೆ. ಸರ್ಕಾರ ಈ ವಿಚಾರದಲ್ಲೂ ರಾಜ್ಯಪಾಲರಿಂದ ಸುಳ್ಳು ಹೇಳಿಸಿದ್ದೀರಿ ಎಂದು ಹೇಳಿದರು. ಅಲ್ಲದೇ ಐದು ಗ್ಯಾರೆಂಟಿ ಯೋಜನೆಗಳ ಜೊತೆಗೆ ಬಜೆಟ್ ನಲ್ಲಿ ಘೋಷಿಸಿರುವ ಶೇ 97 ರಷ್ಟು ಘೋಷಣೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ ಅಂತ ಹೇಳಿಸಿದ್ದೀರಿ. ಸರ್ಕಾರ ಅಧಿಸೂಚನೆ ಹೊರಡಿಸಿರುವ ಯೋಜನೆಗಳು ಆರಂಭವೇ ಆಗಿಲ್ಲ ಅದು ಸಳ್ಳಲ್ಲವಾ ಎಂದು…
ಬೆಂಗಳೂರು: ರಾಜ್ಯ ಸರ್ಕಾರದಿಂದ ಬಗರ್ ಹುಕುಂ ರೈತರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಅದೇ ಸರ್ಕಾರಿ ಜಮೀನು ಸಾಗುವಳಿಗಾಗಿ ಅರ್ಜಿ ಸಲ್ಲಿಸಿ, ತಿರಸ್ಕೃತಗೊಂಡ ಅರ್ಜಿಯನ್ನು ಪುನರ್ ಪರಿಶೀಲಿಸುವುದಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವಂತ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು, ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವ ಬಗರ್ ಹುಕುಂ ಯೋಜನೆಯಡಿಯಲ್ಲಿ ತಿರಸ್ಕೃತಗೊಂಡಿರುವ ಅರ್ಜಿಗಳನ್ನು ಪುನರ್ ಪರಿಶೀಲಿಸುವುದಾಗಿ ತಿಳಿಸಿದ್ದಾರೆ. ಕೆಲವರು ಬಗರ್ ಹುಕುಂ ಜಮೀನು ಮಂಜೂರಾತಿಗೆ 25ಕ್ಕೂ ಹೆಚ್ಚು ಅರ್ಜಿಗಳನ್ನು ಸಲ್ಲಿಸಿದ್ದಾರೆ. ಕಾನೂನಿನ ಪ್ರಕಾರ ಅರ್ಜಿದಾರರಿಗೆ 2005ಕ್ಕೆ ಕನಿಷ್ಠ 18 ವರ್ಷವಾಗಿರಬೇಕು. ಆದರೆ, ಈಗ 18 ವರ್ಷವಾದವರೂ ಅರ್ಜಿ ಸಲ್ಲಿಸಿದ್ದಾರೆ. ನಮೂನೆ 57ರ ಅಡಿಯಲ್ಲಿ ಒಟ್ಟಾರೆ 9,85,000 ಅರ್ಜಿಗಳು ಸಲ್ಲಿಕೆಯಾಗಿವೆ. ಈ ಎಲ್ಲರಿಗೂ ಜಮೀನು ಮಂಜೂರು ಮಾಡಬೇಕೆಂದರೆ 54 ಲಕ್ಷ ಎಕರೆ ಜಮೀನಿನ ಅಗತ್ಯವಿದೆ. ಆದರೆ, ರಾಜ್ಯದಲ್ಲಿ ಸರ್ಕಾರಿ ಜಮೀನೆ ಅಷ್ಟಿಲ್ಲ. ಅನರ್ಹರಿಗೆ ಭೂ ಮಂಜೂರುಗೊಳಿಸಬಾರದು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಹೀಗಾಗಿ ಅನೇಕರ ಅರ್ಜಿಗಳು ಅನರ್ಹಗೊಂಡಿವೆ. ಆದರೆ, ಅರ್ಜಿಗಳನ್ನು ತಿರಸ್ಕೃತಗೊಳಿಸುವ ಸಂದರ್ಭದಲ್ಲಿ…
ಶಿವಮೊಗ್ಗ : ಭದ್ರಾ ನಾಲಾ, ನದಿ ಪಾತ್ರ ಪ್ರದೇಶದಲ್ಲಿ ಅನಧಿಕೃತ ಪಂಪ್‍ಸೆಟ್ ಮತ್ತು ತೂಬುಗಳ ಮೂಲಕ ನೀರನ್ನು ಎತ್ತುವಳಿ ಮಾಡುವುದನ್ನು ನಿಷೇಧಿಸಿ ಭದ್ರಾ ನಾಲಾ ಮತ್ತು ನದಿಯ ಪಾತ್ರಗಳ ಸುತ್ತಮುತ್ತ 100 ಮೀ ವ್ಯಾಪ್ತಿಯಲ್ಲಿ ನಿಬಂಧನೆಗಳನ್ನು ವಿಧಿಸಿ ಫೆ.19 ರಿಂದ 26 ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿರುತ್ತಾರೆ. ಫೆ.5 ರ ರಾತ್ರಿಯಿಂದ ಕುಡಿಯುವ ನೀರಿನ ಉದ್ದೇಶಕ್ಕಾಗಿ ಹಾವೇರಿ ಮತ್ತು ಗದಗ ಜಿಲ್ಲೆಯ ಪಟ್ಟಣಗಳಿಗೆ ಇದುವರೆಗೂ ಒಟ್ಟು 1.00 ಟಿಎಂಸಿ ನೀರನ್ನು ಭದ್ರಾ ಜಲಾಶಯದಿಂದ ಹರಿಸಲಾಗಿರುತ್ತದೆ. ಆದರೆ ಸದರಿ ಜಿಲ್ಲೆಗಳ ನೀರು ಒದಗಿಸುವ ಜಾಕ್‍ವೆಲ್ ಸ್ಥಳವನ್ನು ನೀರು ತಲುಪಿರುವುದಿಲ್ಲವೆಂದು ತಿಳಿದುಬಂದಿದೆ. ನದಿಯ ಪಾತ್ರದಲ್ಲಿ ಸುಮಾರು 20 ಸಾವಿರಕ್ಕೂ ಹೆಚ್ಚು ಪಂಪ್‍ಸೆಟ್‍ಗಳನ್ನು ಅಳವಡಿಸಿ ಅಕ್ರಮವಾಗಿ ನೀರನ್ನೆತ್ತಿ ಬಳಸಿಕೊಳ್ಳುತ್ತಿರುವುದರಿಂದ ಹಾಗೂ ನದಿ ಪಾತ್ರದಲ್ಲಿ ಕೆಲವು ಗ್ರಾಮಗಳಲ್ಲಿ ನದಿಗೆ ಅಡ್ಡಲಾಗಿ ಅನಧಿಕೃತ ಮಣ್ಣಿನ/ಮರಳಿನ ಏರಿಯನ್ನು ನಿರ್ಮಿಸಿ ನೀರನ್ನು ಎತ್ತುತ್ತಿರುವುದರಿಂದ ನಿಗದಿತ ಪ್ರದೇಶಕ್ಕೆ ಜಲಾಶಯದಿಂದ ನೀರು ತಲುಪಿರುವುದಿಲ್ಲ. 2023-24 ನೇ ಸಾಲಿಗೆ ಭದ್ರಾ ಕಾಲುವೆಯಲ್ಲಿ…
ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಗಾಗಿ ನಡೆದಂತ ಮತಏಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಉಪಚುನಾವಣೆಗೆ ಇತ್ತೀಚೆಗೆ ಮತದಾನ ನಡೆದಿತ್ತು. ಆ ಮತಗಳ ಏಣಿಕೆ ಕಾರ್ಯ ಇಂದು ಬೆಂಗಳೂರಲ್ಲಿ ನಡೆಸಲಾಗಿತ್ತು. ಇಂತಹ ಮತಗಳ ಏಣಿಕೆ ಕಾರ್ಯ ಮುಕ್ತಾಯವಾಗಿದ್ದು ಫಲಿತಾಂಶ ಕೂಡ ಹೊರಬಿದ್ದಿದೆ. ಆರಂಭದಿಂದಲೂ ಮುನ್ನಡೇ ಕಾಯ್ದುಕೊಂಡಿದ್ದಂತ ಪುಟ್ಟಣ್ಣ ಅವರು, 1506 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. 1506 ಮತಗಳಿಂದ ಜೆಡಿಎಸ್ ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿ ಎ.ಪಿ ರಂಗನಾಥ್ ಅವರು ಸೋಲು ಕಂಡರೇ, ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ವಿಧಾನಪರಿಷತ್ ಉಪ ಚುನಾವಣೆಯ ಫಲಿತಾಂಶದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರು ಭರ್ಜರಿ ಗೆಲುವು ಸಾಧಿಸಿರೋದಾಗಿ ತಿಳಿದು ಬಂದಿದೆ. ಎಷ್ಟು ಮತಗಳಿಂದ ಗೆಲುವು ಸಾಧಿಸಿದ್ದಾರೆ ಎನ್ನುವ ಅಂತಿಮ ಫಲಿತಾಂಶವನ್ನು ಚುನಾವಣಾ ಆಯೋಗ ಅಧಿಕೃತವಾಗಿ ಪ್ರಕಟಿಸಿದಾಗ ತಿಳಿದು ಬರಲಿದೆ. https://kannadanewsnow.com/kannada/now-for-every-rs-100-we-pay-only-rs-12-13-is-coming-back-from-the-centre-cm-siddaramaiah/…
ಬೆಂಗಳೂರು: ತೆರಿಗೆ, ಅನುದಾನ ತಾರತಮ್ಯದ ಬಗ್ಗೆ ಕೇಂದ್ರದ ನರೇಂದ್ರ ಮೋದಿ ಸರಕಾರದ ವಿರುದ್ಧ ನಿರಂತರ ಆರೋಪ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಚರ್ಚೆಗೆ ಬರುವಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಸವಾಲು ಹಾಕಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳ ಜತೆ ಮಾತನಾಡಿದರು ಅವರು, ರಾಷ್ಟ್ರದ ಹಿರಿಯ, ನುರಿತ ಆರ್ಥಿಕ ತಜ್ಞರನ್ನು, ಮಾಧ್ಯಮಗಳನ್ನು ಕೂಡಿಸಿಕೊಂಡು ಎಲ್ಲರ ಎದುರು ಬಹಿರಂಗ ಚರ್ಚೆ ಮಾಡೋಣ ಬನ್ನಿ. ಕೇಂದ್ರದಿಂದ ಅನ್ಯಾಯ ಆಗುತ್ತಿದೆ ಎಂದು ನೀವು ನಿರೂಪಿಸಿದರೆ ನಿಮ್ಮ ಜತೆ ನಾವೂ ದನಿ ಎತ್ತುತ್ತೇವೆ. ನಿಮ್ಮಲ್ಲಿರುವ ಮಾಹಿತಿಯನ್ನು ನಾಡಿನ ಮುಂದೆ ಇಡಿ. ಚರ್ಚೆ ಮಾಡಲು ನಾನು ತಯಾರಿದ್ದೇನೆ ಎಂದು ಸವಾಲು ಹಾಕಿದರು. ವೀರಾವೇಷದಿಂದ ಸದನದ ಒಳಗೆ ಭಾಷಣ ಮಾಡುತ್ತಿದ್ದಾರೆ ಮುಖ್ಯಮಂತ್ರಿ. ಕನ್ನಡಿಗರಿಗೆ ಅನ್ಯಾಯ ಆಯಿತು ಎನ್ನುತ್ತಾರೆ. ಕೇಂದ್ರ ಸರ್ಕಾರದಿಂದ ಹಣ ಬರಲಿಲ್ಲ, ಬರಪೀಡಿತ ರೈತರಿಗೆ ಪರಿಹಾರ ಕೊಡಿ ಎಂದರೆ 2000 ರೂ. ಕೊಡುತ್ತಾರೆ. ಈ 2000 ರೂ.ನಲ್ಲಿ 25% ರಾಜ್ಯದ್ದು, ಉಳಿದ 75% ಕೇಂದ್ರದ್ದು. 2624 ಕೋಟಿ ರೂ. ಎಸ್…
ಬೆಂಗಳೂರು: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು, ಚಾಲಕನೊಬ್ಬ ಹೆದ್ದಾರಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿದಂತ ಘಟನೆ ಬೆಂಗಳೂರಲ್ಲಿ ನಡೆದಿದೆ. ಬೆಂಗಳೂರಿನ ಹೊಸಕೋಟೆ ಟೋಲ್ ಪ್ಲಾಜಾ ಬಳಿಯಲ್ಲಿ ಈ ಘಟನೆ ನಡೆದಿದೆ. ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಚಾಲಕ ಆತ್ಮಹತ್ಯೆಗೆ ಯತ್ನಿಸಿದಂತ ವೇಳೆಯಲ್ಲಿ ಆತನನ್ನು ಸ್ಥಳೀಯರು, ಬಸ್ ನಲ್ಲಿದ್ದಂತ ಪ್ರಯಾಣಿಕರು ರಕ್ಷಿಸಿದ್ದಾರೆ. ಆತ್ಮಹತ್ಯೆಗೆ ಬಿಎಂಟಿಸಿ ಚಾಲಕ ಯತ್ನಿಸಿದ್ದರಿಂದ ಕೆಲ ಕಾಲ ಪ್ರಯಾಣಿಕರು, ಸಾರ್ವಜನಿಕರು ವಿಚಲಿತರಾಗಿದ್ದಾರೆ. ಸ್ಥಳಕ್ಕೆ ಆಗಮಿಸಿದಂತ ಪೊಲೀಸರು, ಚಾಲಕನನ್ನು ಮನವೊಲಿಸಿ, ಅಲ್ಲಿಂದ ಬಸ್ಸನ್ನು ಕಳುಹಿಸಿದ್ದಾರೆ. ಈ ಇಡೀ ಘಟನೆ ಹೊಸಕೋಟೆ ಹೊರವಲಯದ ಟೋಲ್ ಪ್ಲಾಜಾ ಬಳಿಯಲ್ಲಿ ನಡೆದಿದ್ದು, ಕೆಲ ಕಾಲ ಸ್ಥಳದಲ್ಲಿ ಆತಂಕದ ವಾತಾವರಣಕ್ಕೂ ಕಾರಣವಾಗಿತ್ತು ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. https://kannadanewsnow.com/kannada/breaking-sonia-gandhi-elected-unopposed-as-rajya-sabha-candidate/ https://kannadanewsnow.com/kannada/ipl-set-for-march-22-start-says-league-chairman-arun-dhumal/
ಬೆಂಗಳೂರು: ನನ್ನದು ಧಮ್ಕಿ ಸಂಸ್ಕೃತಿ ಅಲ್ಲ, ಸೆಟ್ಲಮೆಂಟ್ ಮಾಡುವ ಸಂಸ್ಕೃತಿ ಅಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ತಿರುಗೇಟು ನೀಡಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ರಾಜ್ಯಸಭೆ ಚುನಾವಣೆಗೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ ಅವರು ಆರೋಪಗಳಿಗೆ ಖಾರವಾದ ಉತ್ತರ ನೀಡಿದರಲ್ಲದೆ, ಅಂಥಾ ಸಂಸ್ಕೃತಿಯಿಂದ ಬಂದವರು ಯಾರು? ಎಂದರು. ಧಮ್ಕಿ ಸಂಸ್ಕೃತಿಯಿಂದ ಬಂದವರು ಯಾರು? ಸೆಟ್ಲ್ ಮೆಂಟ್ ಮಾಡುತ್ತೇನೆ ಎಂದು ಹೇಳಿದವರು ಯಾರು? ಧಮ್ಕಿ ಹಾಕುವ, ಸೆಟ್ಲ್ ಮೆಂಟ್ ಮಾಡುವ ಸಂಸ್ಕೃತಿ ನಮ್ಮದಲ್ಲ. ಧಮ್ಕಿ ಹಾಕಿ, ಸಿಕ್ಕ ಸಿಕ್ಕ ಜಾಗದಲ್ಲಿ ಬೇಲಿ ಹಾಕೋದು ನಮ್ಮ ಜಾಯಮಾನದಲ್ಲಿ ಇಲ್ಲ ಎಂದರು ಕುಮಾರಸ್ವಾಮಿ ಅವರು. ನಾನು ಯಾರಿಗೂ ಧಮ್ಕಿ ಹಾಕಿಲ್ಲ, ಹಾಕುವುದೂ ಇಲ್ಲ. ರಾಜ್ಯಸಭಾ ಚುನಾವಣೆ ನಡೆಯುತ್ತಿದೆ. ಆತ್ಮಸಾಕ್ಷಿಯ ಮತ ಕೇಳುವುದಾಗಿ ಹೇಳಿದ್ದೇವೆ. ಇವರು ಯಾರೋ ಬಿಜೆಪಿ ಶಾಸಕರನ್ನು ಅಕ್ಕಪಕ್ಕ ಕೂರಿಸಿಕೊಂಡಿದ್ರಲ್ಲ, ಅದು ತಪ್ಪಲ್ಲವೇ? ಜೆಡಿಎಸ್ ಪಕ್ಷದ ಇಬ್ಬರು ಶಾಸಕರ ಮತ ಬರಲಿದೆ ಅಂತ ಹೇಳಿದ್ದಾರೆ, ಅದು ತಪ್ಪಲ್ಲವೇ?…
ಬೆಂಗಳೂರು: ಕಾಂಗ್ರೆಸ್ ಸರ್ಕಾರವು ರಾಜ್ಯಪಾಲರ ಭಾಷಣದಲ್ಲಿ ಕೇಂದ್ರ ಸರ್ಕಾರವನ್ನು ಬಯ್ಯುವುದು ಬಿಟ್ಟರೆ ತಾವು ಮಾಡಿದ ಅಭಿವೃದ್ಧಿ ಕಾರ್ಯ ಏನೆಂದು ತಿಳಿಸಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರದ್ದು ಸುಳ್ಳಿನ ಆರ್ಥಿಕತೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಟೀಕಿಸಿದರು. ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಂದಿದ್ದ ರೈತ ವಿದ್ಯಾನಿಧಿ, ಬಿ.ಎಸ್.ಯಡಿಯೂರಪ್ಪನವರು ತಂದಿದ್ದ ಕಿಸಾನ್ ಸಮ್ಮಾನ್ ರದ್ದು ಮಾಡಿರುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ನೀಡಿಲ್ಲ. 5 ಸಾವಿರ ರೂ. ನಿಂದ 50 ಸಾವಿರ ರೂ. ವರೆಗೆ ನೀಡುತ್ತಿದ್ದ ವಿದ್ಯಾರ್ಥಿವೇತನವನ್ನು1,200 ರೂ.ಗೆ ಇಳಿಸಲಾಗಿದೆ. ಕಳೆದ ಬಜೆಟ್‌ನಲ್ಲಿ ನೀರಾವರಿ, ಲೋಕೋಪಯೋಗಿ ಇಲಾಖೆಯಿಂದ ಹಣ ಕಡಿತಗೊಳಿಸಲಾಗಿದೆ. ಈ ಬಗ್ಗೆಯೂ ಸರ್ಕಾರ ಉತ್ತರ ನೀಡಿಲ್ಲ. ರೈತರಿಗೆ ನೀಡುವ ಸಹಾಯಧನದ ಬಗ್ಗೆಯೂ ಪ್ರತಿಕ್ರಿಯೆ ನೀಡದೆ ಕಾಗೆ ಗುಬ್ಬಕ್ಕ ಕಥೆ ಹೇಳಲಾಗುತ್ತಿದೆ. ಇದೇ ಸಿದ್ದರಾಮಯ್ಯ ಅವರ ಎಕನಾಮಿಕ್ಸ್, ಸುಳ್ಳು ಎಕನಾಮಿಕ್ಸ್ ಎಂದರೆ ಅದು ಸಿದ್ದು ಎಕನಾಮಿಕ್ಸ್ ಎಂದು ಟೀಕಿಸಿದರು. ಬಿಜೆಪಿ ಸರ್ಕಾರ ಇದ್ದಾಗ…
ನವದೆಹಲಿ: ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ ಮಾರ್ಚ್ 22 ರಂದು ಪ್ರಾರಂಭವಾಗಲಿದೆ. ಸಾರ್ವತ್ರಿಕ ಚುನಾವಣೆಗಳ ಹೊರತಾಗಿಯೂ ಸಂಪೂರ್ಣವಾಗಿ ದೇಶದಲ್ಲಿ ನಡೆಯಲಿದೆ ಎಂದು ಲೀಗ್ ಅಧ್ಯಕ್ಷ ಅರುಣ್ ಧುಮಾಲ್ ಮಂಗಳವಾರ ಪಿಟಿಐಗೆ ತಿಳಿಸಿದ್ದಾರೆ. ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಚುನಾವಣೆಗಳು ನಡೆಯುವ ನಿರೀಕ್ಷೆಯಿದೆ. ಐಪಿಎಲ್ನ 17 ನೇ ಆವೃತ್ತಿಯ ವೇಳಾಪಟ್ಟಿಯನ್ನು ಇನ್ನೂ ಅನಾವರಣಗೊಳಿಸಲಾಗಿಲ್ಲ. ಪಿಟಿಐ ಜೊತೆ ಮಾತನಾಡಿದ ಧುಮಾಲ್, ಮೊದಲಿಗೆ, ಮೊದಲ 15 ದಿನಗಳ ವೇಳಾಪಟ್ಟಿಯನ್ನು ಮಾತ್ರ ಘೋಷಿಸಲಾಗುವುದು. ಉಳಿದ ಪಂದ್ಯಗಳ ರೋಸ್ಟರ್ ಅನ್ನು ಸಾರ್ವತ್ರಿಕ ಚುನಾವಣಾ ದಿನಾಂಕಗಳ ಘೋಷಣೆಯ ನಂತರ ನಿರ್ಧರಿಸಲಾಗುವುದು ಎಂದು ಹೇಳಿದರು. ಲೋಕಸಭಾ ಚುನಾವಣೆಯ ದಿನಾಂಕಗಳನ್ನು ಮುಂದಿನ ತಿಂಗಳ ಆರಂಭದಲ್ಲಿ ಘೋಷಿಸುವ ನಿರೀಕ್ಷೆಯಿದೆ. “ನಾವು ಮಾರ್ಚ್ 22ರಂದು ಟೂರ್ನಿಯ ಆರಂಭವನ್ನು ಎದುರು ನೋಡುತ್ತಿದ್ದೇವೆ. ನಾವು ಸರ್ಕಾರಿ ಸಂಸ್ಥೆಗಳೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದ್ದೇವೆ. ನಾವು ಮೊದಲು ಆರಂಭಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡುತ್ತೇವೆ. ಇಡೀ ಪಂದ್ಯಾವಳಿ ಭಾರತದಲ್ಲಿ ನಡೆಯಲಿದೆ, “ಎಂದು ಧುಮಾಲ್ ಹೇಳಿದರು. 2009 ರಲ್ಲಿ ಮಾತ್ರ, ಐಪಿಎಲ್, ಸಂಪೂರ್ಣವಾಗಿ ವಿದೇಶದಲ್ಲಿ…
ಬೆಂಗಳೂರ : ಪತ್ರಕರ್ತರು ಮತ್ತು ಪತ್ರಿಕೆಗೆ ಸಂಬಂಧಿಸಿದ ಯಾವುದೇ ವೃತ್ತಿಯ ಸಮಸ್ಯೆಗಳಿದ್ದರೂ ಕೂಡ ನಾನು ಸ್ಪಂದಿಸಲು ಸದಾ ಸಿದ್ದ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್ ಪುನರುಚ್ಚರಿಸಿದರು. ಬೆಂಗಳೂರಿನ ಗಾಂಧಿಭವನದಲ್ಲಿ ನಡೆದ ವಿಪ್ರ ಪತ್ರಕರ್ತರ ಗೌರವ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಸಣ್ಣ ಪತ್ರಿಕೆಗಳ ಸಮಸ್ಯೆ ಕುರಿತು ನನಗೆ ಅರಿವಿದೆ. ನಾನೂ ಕೂಡ ಪೇಪರ್ ಹಾಕುವ ಕೆಲಸ ಮಾಡಿಕೊಂಡು ತಳಮಟ್ಟದಿಂದ ಈ ಸ್ಥಾನದವರೆಗೂ ಬಂದಿದ್ದೇನೆ. ಸ್ಥಳೀಯ ಪತ್ರಿಕೆಗಳಲ್ಲಿ ಕೆಲಸ ಮಾಡಿದ ಅನುಭವವೂ ನನಗಿದೆ. ಹೀಗಾಗಿ ಪತ್ರಿಕೆಗಳ ಮತ್ತು ಪತ್ರಕರ್ತರ ವೃತ್ತಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ನ್ಯಾಯವಾಗಿ ಸ್ಪಂದಿಸಲು ಪ್ರಯತ್ನಿಸುತ್ತಿದ್ದೇವೆ ಎಂದರು. ಪತ್ರಿಕೆಗಳ ಜಾಹೀರಾತು ದರ ಪರಿಸ್ಕರಣೆ ಕುರಿತು ಈಗಾಗಲೇ ಇಲಾಖೆಯ ಕಾರ್ಯದರ್ಶಿ ಹಾಗೂ ಆಯುಕ್ತರೊಂದಿಗೆ ಚರ್ಚಿಸಲಾಗಿದೆ. ಸಕಾರತ್ಮಕವಾಗಿ ಸ್ಪಂದನೆ ಸಿಕ್ಕಿದೆ ಎಂದರು. ಡಿಜಿಟಲ್ ಮಾಧ್ಯಮಗಳಿಗೂ ಜಾಹಿರಾತು ನೀತಿಯ ಕರಡು ಸಿದ್ದಗೊಳ್ಳುತ್ತಿದೆ. ಶೀಘ್ರದಲ್ಲಿ ಅದು ಕೂಡ ಜಾರಿಗೆ ಬರುವ ವಿಶ್ವಾಸ ವ್ಯಕ್ತಪಡಿಸಿದರು. ಬ್ರಾಹ್ಮಣ ಸಮಾಜದ ಪತ್ರಿಕೆಗಳಿಗೆ ಜಾಹೀರಾತು ಕೊಡುವಲ್ಲಿ ಉಂಟಾಗಿದ್ದ ತಾಂತ್ರಿಕ…