Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯ ಸರ್ಕಾರ ವಸತಿ ಶಾಲೆಗಳಲ್ಲಿ ಇದುವರೆಗೂ ಇದ್ದ ಜ್ಞಾನ ದೇಗುಲವಿದು ಕೈಮುಗಿದು ಬಾ ಎಂಬ ವಾಕ್ಯವನ್ನು ಜ್ಞಾನ ದೇಗುಲವಿದು ಪ್ರಶ್ನೆ ಮಾಡಿ ಎಂದು ಮಕ್ಕಳ ಮನಸಲ್ಲಿ ಸಂಘರ್ಷ ಮೂಡಿಸುವ ಕೆಲಸ ಮಾಡಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ವಿಧಾನಸೌಧದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಸರ್ಕಾರ ಸಮಾಜದಲ್ಲಿ ಮಕ್ಕಳಿಂದ ಹಿಡಿದು ಎಲ್ಲರಲ್ಲಿಯೂ ಸಂಘರ್ಷ ಉಂಟು ಮಾಡಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಸರ್ಕಾರದ ವಸತಿ ಶಾಲೆಗಳಲ್ಲಿ ಅಕ್ಕಿ ಸಿಗುತ್ತಿಲ್ಲ. ಅದೇ ಕಾರಣಕ್ಕೆ ನಾವು ಖಜಾನೆ ಖಾಲಿ ಇದೆ ಅಂತ ಹೇಳುತ್ತಿದ್ದೇವೆ. ಅಭಿವೃದ್ಧಿಗೆ ಹಣ ಕೊಡುವುದಿಲ್ಲ. ಹಸಿವು ಮುಕ್ತ ಕರ್ನಾಟಕ ಅಂತ ಬೋರ್ಡ್ ಹಾಕಿಕೊಂಡಿದ್ದಾರೆ. ಮೊದಲು ನಿಮ್ಮ ಶಾಲಾ ಮಕ್ಕಳಿಗೆ ಅನ್ನ ಕೊಡಿ ವಿದ್ಯೆ ಕೊಡಿ. ಬಡವರಿಗೆ ಅಕ್ಕಿಯನ್ನು ನರೇಂದ್ರ ಮೋದಿ ಸರ್ಕಾರ ಕೊಡುತ್ತಿದೆ. ಅದನ್ನೂ ಕಾಳ ಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಅದೇ ರೀತಿ ವಿದ್ಯಾರ್ಥಿಗಳಿಗೆ ನೀಡುವ ಅಕ್ಕಿಯನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಹೇಳಿದರು.…
ಬೆಂಗಳೂರು: ನಗರದ ಜಾಲಹಳ್ಳಿ ಕ್ರಾಸ್ ಬಳಿಯಲ್ಲಿರುವಂತ ರಾಕ್ ಲೈನ್ ಮಾಲ್ ಗೆ ಬಿಬಿಎಂಪಿಯಿಂದ ತೆರಿಗೆ ಪಾವತಿಸದ ಕಾರಣ ಬೀಗ ಮುದ್ರೆ ಜಡಿಯಲಾಗಿತ್ತು. ಇಂತಹ ಬೀಗ ಮುದ್ರೆಯನ್ನು ತೆರವುಗೊಳಿಸುವಂತೆ ಹೈಕೋರ್ಟ್ ಆದೇಶಿಸಿದೆ. ದಿನಾಂಕ 14-02-2024ರಂದು ಬೆಂಗಳೂರಿನ ದಾಸರಹಳ್ಳಿ ವಲಯ ವ್ಯಾಪ್ತಿಯಲ್ಲಿ ಬರುವ ರಾಕ್ಲೈನ್ ಮಾಲ್ ಬಾಕಿ ತೆರಿಗೆ ಪಾವತಿಸದ ಕಾರಣ ಪಾಲಿಕೆ ಕಂದಾಯ ಅಧಿಕಾರಿಗಳು ಸೀಜ್ ಮಾಡಿದ್ದರು. ರಾಕ್ ಲೈನ್ ಮಾಲ್ ನಿಂದ 2011 ರಿಂದ 2022-23 ರವರೆಗೆ ಬಾಕಿ ಉಳಿಸಿಕೊಂಡಿರುವ 11.51 ಕೋಟಿ ರೂ. ಆಸ್ತಿ ತೆರಿಗೆಯನ್ನು ಪಾಲಿಕೆಗೆ ಪಾವತಿಸಬೇಕಿದೆ. ಬಾಕಿ ತೆರಿಗೆ ಪಾವತಿಸಲು ಈಗಾಗಲೇ ಡಿಮಾಂಡ್ ನೋಟೀಸ್ ನೀಡಿದ್ದರು ತೆರಿಗೆಯನ್ನು ಪಾವತಿಸಿರುವುದಿಲ್ಲ. ಹೀಗಾಗಿ ದಾಸರಹಳ್ಳಿ ವಲಯ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ರಾಕ್ ಲೈನ್ ಮಾಲ್ ಅನ್ನು ಸೀಜ್ ಮಾಡಿದ್ದರು. ಬಿಬಿಎಂಪಿ ಅಧಿಕಾರಿಗಳ ಕ್ರಮವನ್ನು ಪ್ರಶ್ನಿಸಿ ರಾಕ್ ಲೈನ್ ಮಾಲ್ ಮಾಲೀಕರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಬಿಬಿಎಂಪಿ ಬೀಗ ಮುದ್ರೆಯನ್ನು ತೆರವುಗೊಳಿಸುವಂತೆ ಅರ್ಜಿಯಲ್ಲಿ ಕೋರಿದ್ದರು. ಇದೀಗ ಹೈಕೋರ್ಟ್ ರಾಕ್ ಲೈನ್…
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರಿಗೆ ಅಪಘಾತ ವಿಮಾ ಪರಿಹಾರವನ್ನು 1 ಕೋಟಿಗೆ ಹೆಚ್ಚಳ ಮಾಡಲಾಗಿತ್ತು. ಈ ಬೆನ್ನಲ್ಲೇ ಬಿಎಂಟಿಸಿ ನೌಕರರಿಗೂ 3 ಲಕ್ಷ ಇದ್ದಂತ ಅಪಘಾತ ವಿಮಾ ಪರಿಹಾರ ಮೊತ್ತವನ್ನು 1 ಕೋಟಿಗೆ ಹೆಚ್ಚಳ ಮಾಡಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಬಿಎಂಟಿಸಿ ಎಂ.ಡಿ ರಾಮಚಂದ್ರನ್ ಅವರು, ಬಿಎಂಟಿಸಿ ನೌಕರರಿಗೆ ಅಪಘಾತ ವಿಮಾ ಪರಿಹಾರದ ಮೊತ್ತವನ್ನು 1 ಕೋಟಿಗೆ ಹೆಚ್ಚಳ ಮಾಡಲಾಗಿದೆ ಎಂಬುದಾಗಿ ತಿಳಿಸಿದ್ದಾರೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಕೆಎಸ್ ಆರ್ ಟಿಸಿ ನೌಕರರಂತೆ ಬಿಎಂಟಿಸಿ ನೌಕರರಿಗೂ ಅಪಘಾತ ವಿಮಾ ಪರಿಹಾರದ ಮೊತ್ತವನ್ನು 1 ಕೋಟಿಗೆ ಹೆಚ್ಚಿಸೋದಕ್ಕೆ ಸೂಚಿಸಿದ್ದರು. ಅವರ ಸೂಚನೆ ಮೇರೆಗೆ ಹೆಚ್ಚಳ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಅಂದಹಾಗೇ ಈಗಾಗಲೇ ಕೆ ಎಸ್ ಆರ್ ಟಿ ಸಿ ನೌಕರರಿಗೆ ಕರ್ತವ್ಯ ನಿರತರಾದಂತ ಸಂದರ್ಭದಲ್ಲಿಯೇ ಅಪಘಾತದಿಂದ ಮೃತಪಟ್ಟರೇ ಅವರ ಅವಲಂಬಿತರು, ಕುಟುಂಬಸ್ಥರಿಗೆ 1 ಕೋಟಿ ಅಪಘಾತ ವಿಮಾ ಪರಿಹಾರವನ್ನು ಜಾರಿಗೊಳಿಸಲಾಗಿದೆ. ಆ…
ಬೆಂಗಳೂರು: ನಾವು ಕುವೆಂಪು ಅವರ ತತ್ವ ಸಿದ್ಧಾಂತ ಪಾಲನೆ, ಪ್ರಚಾರ ಮಾಡುತ್ತಿರುವವರು. ಈ ಘೋಷವಾಕ್ಯ ಬದಲಾವಣೆ ಅಗತ್ಯವೇನಿದೆ ಎಂದು ಕೇಳಿದಾಗ, “ಶಾಲೆಗಳಿಗೆ ಕೈಮುಗಿದು ಹೋಗುವುದರಲ್ಲಿ ತಪ್ಪೇನಿಲ್ಲ. ಹನುಮಂತಯ್ಯನವರು ಸರ್ಕಾರಿ ಕೆಲಸ ದೇವರ ಕೆಲಸ ಎಂದು ಹೇಳಿದ್ದಾರೆ. ಬಿಜೆಪಿಯವರು ಅನಗತ್ಯವಾಗಿ ಅಪಪ್ರಚಾರ ಮಾಡುತ್ತಿದ್ದಾರೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಶಾಲೆಗಳಲ್ಲಿ ಘೋಷವಾಕ್ಯ ಬದಲಾವಣೆ ವಿಚಾರವಾಗಿ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ, “ನನಗೆ ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ನಾವು ಕುವೆಂಪು ಅವರ ಆಚಾರ, ವಿಚಾರ ಪ್ರಚಾರ ಮಾಡುತ್ತಿದ್ದೇವೆ. ಕುವೆಂಪು ಅವರ “ಭಾರತ ಜನನಿಯ ತನುಜಾತೆ…”, “ಸರ್ವಜನಾಂಗದ ಶಾಂತಿಯ ತೋಟ…” ಸಂದೇಶವನ್ನು ಪ್ರತಿನಿತ್ಯ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ರಾಜ್ಯದ ಜನರಿಗೆ ಹೇಳುತ್ತಾ ಬಂದಿದ್ದೇವೆ. ಕುವೆಂಪು ಅವರ ತತ್ವ ಸಿದ್ಧಾಂತಗಳನ್ನು ನಾವು ಪಾಲಿಸಿ ಅದಕ್ಕೆ ಶಕ್ತಿ ತುಂಬುವ ಕೆಲಸ ಮಾಡಿದ್ದೇವೆ. ಬಿಜೆಪಿಯವರಿಗೆ ಮಾಡಲು ಕೆಲಸವಿಲ್ಲ. ಹೀಗಾಗಿ ಎಲ್ಲದರಲ್ಲೂ ತಪ್ಪು ಹುಡುಕುವ ಪ್ರಯತ್ನ ಮಾಡುತ್ತಿದ್ದಾರೆ. ಅವರು ಜನರ ಬದುಕಿನ ಬಗ್ಗೆ…
ಬೆಂಗಳೂರು: ಸಾಗುವಳಿ ಭೂ ಮಂಜೂರಾತಿಗಾಗಿ ಬಗರ್ ಹುಕುಂ (ಅಕ್ರಮ ಸಕ್ರಮ) ಯೋಜನೆಯ ಅಡಿ ತಿರಸ್ಕೃತಗೊಂಡ ಅರ್ಜಿಗಳನ್ನು ಪುನರ್ ಪರಿಶೀಲಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸದನದಲ್ಲಿ ಭರವಸೆ ನೀಡಿದರು. ಅಲ್ಲದೇ ಬಗರ್ ಹುಕುಂ ಅಡಿ ಒಬ್ಬರಿಂದಲೇ 25 ಅರ್ಜಿ ಸಲ್ಲಿಸಿರೋ ಶಾಕಿಂಗ್ ಮಾಹಿತಿಯನ್ನು ಸದನದ ಮುಂದೆ ಬಿಚ್ಚಿಟ್ಟರು. ಸೋಮವಾರ ಪ್ರಶ್ನೋತ್ತರ ಅವಧಿಯ ವೇಳೆ ಬೈಂದೂರು ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ, ಬಗರ್ ಹುಕುಂ ಯೋಜನೆ ಅಡಿ ಸಲ್ಲಿಕೆಯಾಗಿರುವ ಅರ್ಜಿಗಳ ಪೈಕಿ ಅನರ್ಹಗೊಂಡ ಅರ್ಜಿಗಳ ಸಂಖ್ಯೆ ಎಷ್ಟು? ಮತ್ತು ಅನರ್ಹಗೊಳಿಸಲು ಕಾರಣವೇನು? ಎಂದು ಪ್ರಶ್ನಿಸಿದ್ದರು. ಬಗರ್ ಹುಕುಂ ದುರುಯೋಗ: ಸಚಿವರು ವಿಷಾದ ಬಡವರಿಗೆ ಅನುಕೂಲವಾಗಲಿ ಎಂಬ ಕಾರಣಕ್ಕೆ ಜಾರಿಗೆ ತಂದಿರುವ ಬಗರ್ ಹುಕುಂ ಯೋಜನೆಯನ್ನು ಅನೇಕರು ಉದ್ದೇಶಪೂರ್ವಕವಾಗಿ ದುರುಪಯೋಗಗೊಳಿಸುತ್ತಿದ್ದಾರೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ವಿಷಾದ ವ್ಯಕ್ತಪಡಿಸಿದರು. ಕೆಲವರು ಬಗರ್ ಹುಕುಂ ಜಮೀನು ಮಂಜೂರಾತಿಗೆ 25ಕ್ಕೂ ಹೆಚ್ಚು ಅರ್ಜಿಗಳನ್ನು ಸಲ್ಲಿಸಿದ್ದಾರೆ. ಕಾನೂನಿನ ಪ್ರಕಾರ ಅರ್ಜಿದಾರರಿಗೆ 2005ಕ್ಕೆ ಕನಿಷ್ಠ 18 ವರ್ಷವಾಗಿರಬೇಕು.…
ಬೆಂಗಳೂರು: ಬೆಂಗಳೂರು – ಕೃಷ್ಣಗಿರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಿನಿ ಬಸ್ ವೊಂದು ಪಲ್ಟಿಯಾದ ಪರಿಣಾಮ, 15 ಜನರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಬೆಂಗಳೂರು – ಕೃಷ್ಣಗಿರಿ ರಾಷ್ಟ್ರೀಯ ಹೆದ್ದಾರಿಯ ಚಿನ್ನಾರ್ ಬಳಿಯಲ್ಲಿ ಹೆದ್ದಾರಿಯಲ್ಲಿ ಮಿನಿ ಬಸ್ ವೊಂದು ಹೆದ್ದಾರಿಯಲ್ಲಿ ಪೇಯಿಂಟಿಂಗ್ ಮಾಡುತ್ತಿದ್ದಂತ ಸಿಬ್ಬಂದಿಗೆ ಡಿಕ್ಕಿಯಾಗಿ, ಚಾಲಕನ ನಿಯಂತ್ರಣ ತಪ್ಪಿ ಬ್ರಿಡ್ಜ್ ಮೇಲಿನಿಂದ ಕೆಳಗೆ ಉರುಳಿ ಬಿದ್ದಿದೆ. ಮಿನಿ ಬಸ್ ಬ್ರಿಡ್ಜ್ ಮೇಲಿನಿಂದ ಕೆಳಗೆ ಉರುಳಿ ಬಿದ್ದ ಪರಿಣಾಮ, ಬಸ್ಸಿನಲ್ಲಿದ್ದಂತ 15 ಜನರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಗಾಯಾಳುಗಳನ್ನು ಕೃಷ್ಣಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಕೃಷ್ಣಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/two-couples-killed-as-car-collides-with-bike-in-hassan/ https://kannadanewsnow.com/kannada/tata-value-higher-than-pak/
ಹಾಸನ: ಕಾರೊಂದು ಬೈಕ್ ಗೆ ಡಿಕ್ಕಿಯಾದ ಪರಿಣಾಮ, ಬೈಕಿನಲ್ಲಿ ತೆರಳುತ್ತಿದ್ದಂತ ದಂಪತಿಗಳಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಚನ್ನರಾಯಪಟ್ಟಣದ ಬರಗೂರು ಹ್ಯಾಂಡ್ ಪೋಸ್ಟ್ ನಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬರಗೂರು ಹ್ಯಾಂಡ್ ಪೋಸ್ಟ್ ಬಳಿಯಲ್ಲಿ ಸಂಬಂಧಿಕರೊಬ್ಬರ ಮದುವೆಯನ್ನು ಮುಗಿಸಿಕೊಂಡು ಚಂದ್ರಶೇಖರ್ ಹಾಗೂ ಹೇಮಲತಾ ದಂಪತಿ ಬೈಕಿನಲ್ಲಿ ತೆರಳುತ್ತಿದ್ದರು. ಇಂತಹ ಇವರ ಬೈಕಿಗೆ ಕಾರೊಂದು ಡಿಕ್ಕಿಯಾದ ಪರಿಣಾಮ, ದಂಪತಿಗಳಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರು ಬೈಕಿಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದಂತ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಚನ್ನರಾಯಪಟ್ಟಣ ಸಂಚಾರಿ ಠಾಣೆಯ ಪೊಲೀಸರು, ಪ್ರಕರಣ ದಾಖಲಿಸಿಕೊಂಡಿದ್ದಾರೆ. https://kannadanewsnow.com/kannada/tata-value-higher-than-pak/ https://kannadanewsnow.com/kannada/bigg-news-nameplate-controversy-ias-officer-p-manivannan-transferred/
ಬೆಂಗಳೂರು : “ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ನಮ್ಮ ಶಾಸಕರಿಗೆ ಕರೆ ಮಾಡಿ ಆಫರ್ ನೀಡುತ್ತಿರುವುದು, ಧಮಕಿ ಹಾಕುತ್ತಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಇಂದು ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಕುಮಾರಸ್ವಾಮಿ ಯಾರಿಗೆ ಫೋನ್ ಮಾಡಿ, ಏನು ಮಾತನಾಡುತ್ತಿದ್ದಾರೆ, ಯಾರಿಗೆ ಧಮಕಿ ಹಾಕುತ್ತಿದ್ದಾರೆ, ಎಲ್ಲವೂ ನಮಗೆ ತಿಳಿಯುತ್ತಿದೆ. ಕುಮಾರಸ್ವಾಮಿ ಯಾರಿಗೆ, ಯಾವೆಲ್ಲಾ ಆಫರ್ ಕೊಟ್ಟಿದ್ದಾರೆ ಎಂದು ಶಾಸಕರು ನಮಗೆ ಮಾಹಿತಿ ನೀಡಿದ್ದಾರೆ. ಬಿಜೆಪಿ ತಂತ್ರಗಾರಿಕೆ ಬಗ್ಗೆಯೂ ಗೊತ್ತಿದೆ. ಮೊದಲು ಅವರು ತಮ್ಮ ಮನೆ ಸರಿಪಡಿಸಿಕೊಳ್ಳಲಿ. ಈಗ ಇದರ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ ಎಂದರು. ವಿರೋಧ ಪಕ್ಷಗಳು ಅಡ್ಡಮತದಾನದ ಪ್ರಯತ್ನ ಮಾಡುತ್ತಿದ್ದಾರಾ ಎಂದು ಕೇಳಿದಾಗ, “ಸುಮ್ಮನೇ ಐದನೇ ಅಭ್ಯರ್ಥಿ ಕಣಕ್ಕಿಳಿಸುತ್ತಾರಾ? ಒಂದು ಪ್ರಯತ್ನ ಮಾಡೋಣ ಎಂದು ಹಾಕಿದ್ದಾರೆ. ಮತದಾನದ ದಿನ ಎಲ್ಲವೂ ಗೊತ್ತಾಗಲಿದೆ” ಎಂದರು. ವಿರೋಧ ಪಕ್ಷಗಳ ತಂತ್ರಕ್ಕೆ ಪ್ರತಿತಂತ್ರ ರೂಪಿಸುತ್ತೀರಾ ಎಂದು ಕೇಳಿದಾಗ, “ನಮಗೆ ಅದರ ಅಗತ್ಯವಿಲ್ಲ.…
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ಫೆ.22ರಂದು ನಿಗದಿಯಾಗಿದೆ. ಈ ಮೂಲಕ ಮಹತ್ವದ ಯೋಜನೆಗಳಿಗೆ ಅನುಮೋದನೆ ನೀಡುವ ಸಾಧ್ಯತೆ ಇದೆ. ಈ ಕುರಿತಂತೆ ಸಚಿವ ಸಂಪುಟದ ಸರ್ಕಾರದ ಜಂಟಿ ಕಾರ್ಯದರ್ಶಿ ಆರ್ ಚಂದ್ರಶೇಖರ್ ಮಾಹಿತಿ ನೀಡಿದ್ದು ದಿನಾಂಕ 22-02-2024ರಂದು ಗುರುವಾರ ಸಂಜೆ 6 ಗಂಟೆಗೆ ಸಚಿವ ಸಂಪುಟದ 2024ನೇ ಸಾಲಿನ 6ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ ಎಂದು ತಿಳಿಸಿದ್ದಾರೆ. ಫೆ.22ರಂದು ನಡೆಯಲಿರುವಂತ ರಾಜ್ಯಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಯೋಜನೆಗಳಿಗೆ ಅನುಮೋದನೆ ನೀಡುವ ಸಾಧ್ಯತೆ ಇದೆ. ಆ ಬಗ್ಗೆ ಫೆ.22ರ ಸಂಜೆ 6 ಗಂಟೆಯವರೆಗೆ ಕಾದು ನೋಡಬೇಕಿದೆ. https://kannadanewsnow.com/kannada/note-state-level-job-fair-to-be-held-in-bengaluru-on-february-26-and-27-register-this-way/ https://kannadanewsnow.com/kannada/tata-value-higher-than-pak/
ಪರೀಕ್ಷೆಯ ತಯಾರಿಗಾಗಿ ತಮ್ಮ ಮಕ್ಕಳು ಚೆನ್ನಾಗಿ ಓದಿ ಜೀವನದಲ್ಲಿ ಉತ್ತಮ ಸ್ಥಾನಮಾನ ಪಡೆಯಬೇಕು ಎಂಬುದು ಎಲ್ಲ ತಂದೆ ತಾಯಿಯರ ಒಂದೇ ಕನಸು. ಮಕ್ಕಳ ಶ್ರೀಮಂತ ಜೀವನಕ್ಕಾಗಿ ಅವರು ತಮ್ಮ ಎಲ್ಲಾ ವೈಯಕ್ತಿಕ ಆಸೆಗಳನ್ನು ಬದಿಗಿಟ್ಟು ತಮ್ಮ ಜೀವನದುದ್ದಕ್ಕೂ ಶ್ರಮಿಸುತ್ತಾರೆ. ಅಂತಹ ಬದುಕು ಕಟ್ಟಿಕೊಳ್ಳಲು ಹಗಲಿರುಳು ಶ್ರಮಿಸುತ್ತಾರೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ…