Author: kannadanewsnow09

ಬೆಳಗಾವಿ ಸುವರ್ಣಸೌಧ : ರಾಜ್ಯದಲ್ಲಿ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವ ಪ್ರಕ್ರಿಯೆಯನ್ನು ಸರಳೀಕರಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ರ ವಿವಿಧ ಉಪ-ಕಲಂಗಳಿಗೆ ತಿದ್ದುಪಡಿಯನ್ನು ಮಾಡಲಾಗಿದೆ. ಅದನ್ನು ಜಾರಿಗೆ ತರಲು ಈಗಾಗಲೇ ವಿವಿಧ ಇಲಾಖೆಗಳೊಂದಿಗೆ ಸಮಾಲೋಚನೆ ನಡೆಸಿ, ಅಭಿಪ್ರಾಯ ಹಾಗೂ ಸಲಹೆಯನ್ನು ಪಡೆದು ಸೂಕ್ತ ನಿಯಮಗಳನ್ನು ಕ್ರಮಕೈಗೊಳ್ಳಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ರಾಮೋಜಿ ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ಪ್ರಸ್ತುತ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸಲು ಕ್ರಮವಹಿಸಲಾಗುತ್ತಿರುವುದರಿಂದ ಜನತೆಗೆ ತೊಂದರೆಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುವುದಿಲ್ಲ. ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ಕ್ಕೆ ಮಾಡಲಾದ ತಿದ್ದುಪಡಿಗಳಿಗೆ ಅನುಗುಣವಾಗಿ ಕರ್ನಾಟಕ ಭೂ ಕಂದಾಯ ನಿಯಮಗಳು, 1966ರ ವಿವಿಧ ನಿಯಮಗಳಿಗೆ ತಿದ್ದುಪಡಿ ಮಾಡಲು ಸರ್ಕಾರವು ದಿನಾಂಕ: 17.09.2025 ರಂದು ಕರಡು ನಿಯಮಗಳ ಅಧಿಸೂಚನೆಯನ್ನು ಹೊರಡಿಸಿದ್ದು, ಶೀಘ್ರದಲ್ಲಿ ಅಂತಿಮ ಅಧಿಸೂಚನೆಯನ್ನು ಹೊರಡಿಸಲಾಗುವುದು ಎಂದರು. ಸಣ್ಣ…

Read More

ದಾವಣಗೆರೆ: ಜಿಲ್ಲೆಯಲ್ಲಿ ಸರ್ಕಾರಿ ಕೆಲಸ ಸಿಗಲಿಲ್ಲವೆಂದು ಮನನೊಂದಂತ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ನಡೆದಿದೆ. ದಾವಣಗೆರೆಯ ಜಗಳೂರು ತಾಲ್ಲೂಕಿನ ಗುಡ್ಡದಲಿಂಗಣ್ಣ ಹಳ್ಳಿಯ ಯುವಕ ಅಂಜಿನಪ್ಪ(26) ಎಂಬಾತನೇ ಆತ್ಮಹತ್ಯೆಗೆ ಶರಣಾದಂತ ಯುವಕನಾಗಿದ್ದಾನೆ. ಸರ್ಕಾರಿ ಕೆಲಸ ಸಿಗದಿದ್ದಕ್ಕೆ ಅಂಜಿನಪ್ಪ ಆತ್ಮಹತ್ಯೆ ಮಾಡಿಕೊಂಡಿರೋದಾಗಿ ಹೇಳಲಾಗುತ್ತಿದೆ. ಅಂದಹಾಗೇ ಮೃತ ಅಂಜಿನಪ್ಪ ಪದವಿ ಮುಗಿಸಿದ ಬಳಿಕ ಸ್ಪರ್ಧಾತ್ಮಕ ಪರೀಕ್ಷೆಗಾಗಿ ತಯಾರಿ ನಡೆಸಿದ್ದರು. ಆದರೇ ಎಷ್ಟೇ ಪ್ರಯತ್ನ ಪಟ್ಟರೂ ಅವರಿಗೆ ಸರ್ಕಾರಿ ಕೆಲಸ ಸಿಕ್ಕಿರಲಿಲ್ಲ. ಇದರಿಂದಾಗಿ ಯುವಕ ಅಂಜಿನಪ್ಪ ನೊಂದುಕೊಂಡು, ತನ್ನ ಬೇಸರವನ್ನು ಸ್ನೇಹಿತರ ಬಳಿಯಲ್ಲಿ ಹೇಳಿಕೊಂಡಿದ್ದನು ಎನ್ನಲಾಗಿದೆ.

Read More

ಬೆಳಗಾವಿ : ರಾಜ್ಯ ಸರ್ಕಾರದ 43 ವಿವಿಧ ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿ ಉಳಿದಿವೆ. ಇವುಗಳಲ್ಲಿ 24,300 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯು ಅನುಮತಿಸಿದೆ ಎಂಬುದಾಗಿ ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. ಈ ಕುರಿತಂತೆ ವಿಧಾನಸಭೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಕೇಳಿದಂತ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರಿಸಿದ್ದಾರೆ. ಅದರಲ್ಲಿ ಆರ್ಥಿಕ ಇಲಾಖೆಯು ಖಾಲಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳು ತಮ್ಮ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳ ಅನ್ವಯ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅನುಮೋದಿಸಿದೆ ಎಂದಿದ್ದಾರೆ. ಇವುಗಳಲ್ಲಿ 16,017 ಹುದ್ದೆಗಳು ಎ ದರ್ಜೆಯ ಹುದ್ದೆಗಳಾಗಿವೆ. 16,734 ಬಿ ದರ್ಜೆಯ ಹುದ್ದೆಗಳು, 1,66,021 ಸಿ ದರ್ಜೆಯ ಹುದ್ದೆಗಳು, 77,614 ಡಿ ದರ್ಜೆಯ ಹುದ್ದೆಗಳು ಖಾಲಿ ಉಳಿದಿವೆ. ಶಿಕ್ಷಣ ಇಲಾಖೆಯಲ್ಲಿ 70727 ಹುದ್ದೆಗಳು ಖಾಲಿ ಇವೆ. ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ 37,572 ಹುದ್ದೆಗಳು ಖಾಲಿ ಇದ್ದು, ಒಳಾಡಳಿತ ಇಲಾಖೆಯಲ್ಲಿ 28,188,…

Read More

ಬೆಂಗಳೂರು: ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ಎನ್ನುವಂತೆ ಆರ್ಥಿಕ ಇಲಾಖೆಯಿಂದ ವಿವಿಧ ಇಲಾಖೆಯಲ್ಲಿ ಖಾಲಿ ಇರುವಂತ ಬರೋಬ್ಬರಿ 24,300 ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಈ ಕುರಿತಂತೆ ವಿಧಾನಸಭೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಕೇಳಿದಂತ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರಿಸಿದ್ದಾರೆ. ಅದರಲ್ಲಿ ಆರ್ಥಿಕ ಇಲಾಖೆಯು ಖಾಲಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳು ತಮ್ಮ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳ ಅನ್ವಯ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅನುಮೋದಿಸಿದೆ ಎಂದಿದ್ದಾರೆ. ಆರ್ಥಿಕ ಇಲಾಖೆಯು ಒಟ್ಟು 24,300 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಮಂಜೂರಾತಿ ನೀಡಿರುತ್ತದೆ. ರಾಜ್ಯದಲ್ಲಿ ಅನೇಕ ವರ್ಷಗಳಿಂದ ನೇಮಕಾತಿಯಾಗದೇ ನಿರುದ್ಯೋಗಿ ಆಗಿರುವ ಬಿಪಿಎಡ್ ಪದವೀಧರರಿಗೂ ಬಿಎಡ್ ಪದವೀಧರರಂತೆ ವಾರ್ಡನ್ ಅಥವಾ ಪರ್ಯಾಯ ಹುದ್ದೆಗೆ ನೇಮಕಾತಿ ಮಾಡುವ ಪ್ರಸ್ತಾವ ಸರ್ಕಾರದ ಮುಂದಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಕರ್ನಾಟಕ ಹಾಗೂ ರೈತರ ವಿಚಾರದಲ್ಲಿ ನುಡಿದಂತೆ ನಡೆದಿಲ್ಲ. ಈ ಸರ್ಕಾರಕ್ಕೆ ಸಂವೇದನೆ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ದೂರಿದರು. ವಿಧಾನಸಭೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಪದೇ ಪದೆ ನುಡಿದಂತೆ ನಡೆದ ಸರ್ಕಾರ ಎಂದು ಹೇಳುತ್ತಾರೆ. 2008 ರ ಮೇ 20 ರಂದು ರೈತರ ಉತ್ಪನ್ನ ವೆಚ್ಚ ಆಧರಿಸಿ ಬೆಲೆ ನಿಗದಿಪಡಿಸಬೇಕು, 5,000 ಕೋಟಿ ರೂ. ಆವರ್ತ ನಿಧಿ ಸ್ಥಾಪಿಸಬೇಕು ಎಂದು ಸಿದ್ದರಾಮಯ್ಯ ಹೇಳಿದ್ದರು. ಎರಡೂವರೆ ವರ್ಷದ ಅವಧಿಯಲ್ಲಿ ಈ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿಲ್ಲ. ಚುನಾವಣೆಗೆ ಮುನ್ನ ಪ್ರಣಾಳಿಕೆಯಲ್ಲಿ, ಪ್ರಕೃತಿ ವಿಕೋಪ ನಿರ್ವಹಣೆಗೆ 5,000 ಕೋಟಿ ರೂ. ನಿಧಿ ಸ್ಥಾಪಿಸಲಾಗುವುದು ಎಂದು ಹೇಳಿದ್ದರು. ಉತ್ತರ ಕರ್ನಾಟಕದ ಬಹಳ ಕಡೆ ಪ್ರವಾಹವಾದರೂ ನಿಧಿ ನೀಡಿಲ್ಲ. ಸಾಲ ಮರುಪಾವತಿ ಮುಂದೂಡಲಾಗುವುದು ಎಂದು ಹೇಳಿದ್ದರು. ಹಾಲಿನ ಪ್ರೋತ್ಸಾಹಧನವನ್ನು 7 ರೂ.ಗೆ ಏರಿಸಲಾಗುವುದು ಎಂದಿದ್ದರು. ಉತ್ತರ ಕರ್ನಾಟಕದಲ್ಲಿ ದ್ರಾಕ್ಷಿ ಬೆಳೆಗಾರರಿಗಾಗಿ 500 ಕೋಟಿ ರೂ. ನೀಡಲಾಗುವುದು ಎಂದಿದ್ದರು. ಆದರೆ…

Read More

ಬೆಳಗಾವಿ ಸುವರ್ಣ ವಿಧಾನಸೌಧ: ಮೋದಿ ಅವರು ಅಧಿಕಾರಕ್ಕೆ ಬಂದರೆ ರೈತರ ಆದಾಯ ದ್ವಿಗುಣ ಮಾಡುತ್ತೇನೆ ಅಂತ ಹೇಳಿದ್ದರು. ಅವರು ಅಧಿಕಾರಕ್ಕೆ ಬಂದು ಇಷ್ಟು ವರ್ಷ ಆಯಿತು. ಆದರೆ ಅನ್ನದಾತರ ಸಮಸ್ಯೆ ಇನ್ನೂ ಬಗೆಹರಿದಿಲ್ಲ. ದೇಶದ ರೈತರ ಕಷ್ಟ ತೀರಿಲ್ಲ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು ವಿಧಾನ ಪರಿಷತ್ತಿನ ಕಲಾಪದಲ್ಲಿ ಹೇಳಿದರು. ಬಿಜೆಪಿ ಸದಸ್ಯ ಸಿ ಟಿ ರವಿ ಅವರು ಎಥೆನಾಲ್‌ ಹಂಚಿಕೆ ಬಗ್ಗೆ ಮಾತನಾಡಿದ್ದಕ್ಕೆ ಪ್ರತಿಕ್ರಿಯೆ ನೀಡಿದ ಲಾಡ್‌ ಅವರು, ಪ್ರಧಾನಿ ಮೋದಿ ಅವರು ಹೇಳಿದಂತೆ ಏನೂ ಮಾಡಲಿಲ್ಲ. ಇಡೀ ದೇಶದ ರೈತರ ಆದಾಯ ಏರಲಿಲ್ಲ. ಅವರ ಸಮಸ್ಯೆ ಹಾಗೇ ಇದೆ. ಈ ದೇಶದ ಸಾಲದ ಬಗ್ಗೆಯೂ ಮಾತನಾಡಬೇಕು ಎಂದು ವಾಗ್ದಾಳಿ ನಡೆಸಿದರು. ಬಿಜೆಪಿ ಸರ್ಕಾರ ಹತ್ತುಪಟ್ಟು ಕೊಟ್ಟಿದೆ ಎಂಬುದಕ್ಕೆ ಸ್ಪಷ್ಟೀಕರಣ ಕೊಡಬೇಕು. ಹಾರಿಕೆ ಉತ್ತರ ಕೊಟ್ಟು ಮನಸ್ಸಿಗೆ ಬಂದಂಗೆ ಮಾತನಾಡುವುದಲ್ಲ ಎಂದು ಲಾಡ್‌ ಅವರು ತಿರುಗೇಟು ನೀಡಿದರು. ದೇಶದಲ್ಲಿ ಸಾಲ ಹತ್ತುಪಟ್ಟು…

Read More

ಬೆಳಗಾವಿ ಸುವರ್ಣ ವಿಧಾನಸೌಧ : ಆಂಧ್ರಪ್ರದೇಶದ ತಿರುಮಲ ತಿರುಪತಿ ದೇವಸ್ಥಾನಕ್ಕೆ ರಾಜ್ಯದ ಶಾಸಕರುಗಳ ಶಿಫಾರಸ್ಸು ಪತ್ರಗಳನ್ನು ಪರಿಗಣಿಸಿ ಸ್ವಾಮಿಯ ದರ್ಶನಕ್ಕೆ ಅವಕಾಶ ಕಲ್ಪಿಸುವಂತೆ ಟಿ.ಟಿ.ಡಿಗೆ ಮನವಿ ಸಲ್ಲಿಸಲಾಗಿದೆ. ಎಸ್.ಆರ್.ವಿಶ್ವನಾಥ್ ಅವರು ಇಂದು ವಿಧಾನಸಭೆಯಲ್ಲಿ ಗಮನ ಸೆಳೆದ ಸೂಚನೆಗೆ ಉತ್ತರಿಸಿದ ಸಾರಿಗೆ ಮತ್ತು ಮುಜರಾಯಿ ಸಚಿವರು ಆಂಧ್ರಪ್ರದೇಶದ ತಿರುಮಲ ತಿರುಪತಿ ದೇವಸ್ಥಾನದ ಸನ್ನಿಧಾನದಲ್ಲಿ ನಿರ್ಮಾಣವಾಗಿರುವ ಕರ್ನಾಟಕ ಭವನ ಕಳಪೆ ಕಾಮಗಾರಿ ಕುರಿತು ಈಗಾಗಲೇ ಭೇಟಿ ನೀಡಿ ಪರಿಶೀಲಿಸಲಾಗಿದೆ. ಪ್ರಸ್ತುತ ನಿರ್ವಹಣೆ ಮಾಡುತ್ತಿರುವ ಸಂಸ್ಥೆ ಕನಿಷ್ಟ 3 ಸ್ಟಾರ್ ಮಾದರಿಯಲ್ಲಿ ಸೌಲಭ್ಯ ನೀಡುವಂತೆ ಕ್ರಮ ವಹಿಸಬೇಕಿದೆ. ರಾಜ್ಯದ ಶಾಸಕರುಗಳು ಶಿಫಾರಸ್ಸು ಪತ್ರವನ್ನು ಪರಿಗಣಿಸಿ ಸ್ವಾಮಿಯ ದರ್ಶನಕ್ಕೆ ಅವಕಾಶ ಕಲ್ಪಿಸುವ ಬಗ್ಗೆ ಟಿ.ಟಿ.ಡಿಯವರಿಗೆ ಹಾಗೂ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ.

Read More

ಬೆಳಗಾವಿ ಸುವರ್ಣಸೌಧ: ಬರುವ 2026ರ ಜನವರಿಯಿಂದ ಕಪ್ಪುತಲೆ ಹುಳುವಿನ ಸಮೀಕ್ಷೆಯನ್ನು ಪುನಾರಂಭಿಸಿ ಬೇಗನೇ ಪೂರ್ಣಗೊಳಿಸಿ ಪರಿಹಾರ ಕಲ್ಪಿಸುವುದಾಗಿ ಗಣಿ ಮತ್ತು ಭೂವಿಜ್ಞಾನ ಹಾಗೂ ತೋಟಗಾರಿಕಾ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ ಅವರು ಭರವಸೆ ನೀಡಿದರು. ಪರಿಷತ್ತಿನಲ್ಲಿ ಡಿ.09ರಂದು ಸದಸ್ಯರಾದ ಮಧು ಜಿ ಮಾದೇಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 30 (235)ರ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಸಚಿವರು, ಕಪ್ಪುತಲೆಹುಳು ಬಾಧಿತ ತೆಂಗಿನ ಬೆಳೆಯ ವೈಜ್ಞಾನಿಕ ಸಮೀಕ್ಷೆಯನ್ನು ಜುಲೈ-2025ರ ಮಾಹೆಯ ಅವಧಿಯಲ್ಲಿಯೇ ಪೂರ್ಣಗೊಳಿಸಬೇಕಿತ್ತು. ಆದರೆ, ಮಳೆ ಹಾಗೂ ಇನ್ನಿತರ ಕಾರಣದಿಂದ ಸಮೀಕ್ಷೆ ಅಪೂರ್ಣವಾಗಿದೆ. ಸಮೀಕ್ಷೆ ಕೈಗೊಳ್ಳಲು ಅನುದಾನದ ಅವಶ್ಯಕತೆ ಇರುವುದರಿಂದ ಸಮೀಕ್ಷೆಗೆ ಅಂದಾಜು 1.94 ಕೋಟಿ ರೂ ಬೇಕಿದೆ ಎಂದು ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಯ ಸಹಮತಿಗೆ ಕಳುಹಿಸಿದ್ದೇವೆ. ಜನವರಿಯಿಂದ ಮೇ ವರೆಗೂ ಹೆಚ್ಚಿನ ಉಷ್ಣಾಂಶದಿAದ ಕಪ್ಪುತಲೆ ಹಾಗೂ ಬಿಳಿನೊಣದ ಹಾನಿ ಹೆಚ್ಚಾಗಲಿದ್ದು, ಈ ಅವಧಿಯಲ್ಲಿ ಸಮೀಕ್ಷೆ ಕೈಗೊಂಡಲ್ಲಿ ನಿಖರವಾದ ಮಾಹಿತಿ ಲಭ್ಯವಾಗಲಿದೆ. ಸಮೀಕ್ಷೆಗೆ ಸರ್ವೇಯರ್‌ಗಳನ್ನು ನಿಯೋಜಿಸಲಾಗಿದೆ. ಪ್ರತಿ ತಾಕಿಗೆ ರೂ. 10…

Read More

ಬೆಳಗಾವಿ ಸುವರ್ಣ ವಿಧಾನಸೌಧ : ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಇ-ಖಾತಾ ಮತ್ತು ಹೊಸ ಖಾತೆಗಾಗಿ ಸ್ವೀಕರಿಸಲಾದ ಒಟ್ಟು 31,274 ಅರ್ಜಿಗಳನ್ನು ವಿಲೇವಾರಿ ಮಾಡಲು ಕ್ರಮ ಜರುಗಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಇಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಗೋಪಾಲಯ್ಯ ಕೆ ಇವರ ಚುಕ್ಕೆ ಗುರುತಿನ ಪ್ರಶ್ನೆಗೆ ಅವರು ಉತ್ತರಿಸಿದರು. ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಇ-ಖಾತಾ ಮತ್ತು ಹೊಸ ಖಾತಾ ಅರ್ಜಿಗಳನ್ನು ಕೆಲಸದ ಹೊರೆ ಮತ್ತು ವಿಳಂಬವನ್ನು ಕಡಿಮೆ ಮಾಡಲು ಹಾಗೂ ಡಿಜಿಟಲ್ ದಾಖಲೆಯಿಂದಾಗಿ ನಾಗರೀಕರಿಗೆ ಟ್ರ್ಯಾಕ್ ಮಾಡುವ ಹಾಗೂ ಭ್ರಷ್ಟಾಚಾರ ರಹಿತವಾಗಿ ಇ-ಖಾತಾ ನೀಡಲು ಸಕ್ಷಮ ಕಂದಾಯ ಅಧಿಕಾರಿ ಮತ್ತ ಸಿಬ್ಬಂದಿಯವರಿಗೆ ಒಂದೇ ಸಂಖ್ಯಾ ಪ್ರಮಾಣದಲ್ಲಿ ಸ್ವಯಂ ಚಾಲಿತ ಮತ್ತು ಖಚಿಟಿಜom ಹಂಚಿಕೆ ಮಾಡುವ ವ್ಯವಸ್ಥೆಯಲ್ಲಿ ಅರ್ಜಿಗಳನ್ನು ವಿಲೇವಾರಿ ಮಾಡಲಾಗುತ್ತಿತ್ತು. ಹೊಸ ಮಾದರಿಯಲ್ಲಿ ಇ-ಖಾತಾ ನೀಡುತ್ತಿರುವುದು ಸಾರ್ವಜನಿಕರಿಗೆ ಕೆಲವೊಂದು ಸಮಸ್ಯೆಗಳು ಎದುರಾಗುತ್ತಿವೆ ಎಂದು ವಿಧಾನಸಭೆಯ ಇನ್ನಿತರ ಸದಸ್ಯರು ಈ ಬಗ್ಗೆ…

Read More

ಬೆಳಗಾವಿ :ಖಾತೆ ವಿಲೇವಾರಿಗೆ ತಂದಿದ್ದ ರೌಂಡ್‌ ರಾಬಿನ್‌ ಪದ್ಧತಿಯನ್ನು ರದ್ದು ಮಾಡಲಾಗಿದೆ. ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತೆ ಹಂಚಿಕೆಗೆ 6,450 ಅರ್ಜಿಗಳು ಮಾತ್ರ ಬಾಕಿಯಿರುವ ಕಾರಣಕ್ಕೆ ಹಳೆ ಪದ್ಧತಿಯಲ್ಲಿಯೇ ಅರ್ಜಿಗಳನ್ನು ವಿಲೇವಾರಿ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ತಿಳಿಸಿದರು. ವಿಧಾನಸಭೆ ಪ್ರಶ್ನೋತ್ತರ ಕಲಾಪದ ವೇಳೆ ಶಾಸಕ ಗೋಪಾಲಯ್ಯ ಅವರು ಜಿಬಿಎ ವ್ಯಾಪ್ತಿಯಲ್ಲಿ ಇ ಖಾತೆಗಳನ್ನು ನೀಡಲು ತಂದಿರುವ ರೌಂಡ್‌ ರಾಬಿನ್‌ ಪದ್ದತಿಯಿಂದ ಅನಾನುಕೂಲವಾಗುತ್ತಿರುವುದು ಗಮನಕ್ಕೆ ಬಂದಿದೆಯೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಇ ಖಾತೆ ಯೋಜನೆಯಡಿ ಜಿಬಿಎ ವ್ಯಾಪ್ತಿಯಲ್ಲಿ ಒಟ್ಟು 43,382 ಅರ್ಜಿಗಳು ಸಲ್ಲಿಕೆಯಾಗಿದ್ದವು. ಇವುಗಳಲ್ಲಿ 31,274 ಅರ್ಜಿಗಳನ್ನು ವಿಲೇ ಮಾಡಲಾಗಿದೆ. 5,448 ಅರ್ಜಿಗಳನ್ನು ತಿರಸ್ಕರಿಸಲಾಗಿದೆ” ಎಂದರು. ಬೆಂಗಳೂರು ನಗರದ ಎರಡು ಕಡೆ ವೈಜ್ಞಾನಿಕ ಕಸ ವಿಲೇವಾರಿ ಘಟಕಗಳು “ಜಿಬಿಎ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ಕಸವನ್ನು ಸಂಸ್ಕರಿಸಲು ನಗರದ ಉತ್ತರ ಹಾಗೂ ದಕ್ಷಿಣ ದಿಕ್ಕುಗಳಲ್ಲಿ ಎರಡು ಘಟಕಗಳನ್ನು ಸ್ಥಾಪಿಸಲಾಗುವುದು. ಹೊಸ ತಂತ್ರಜ್ಞಾನದ ಮೂಲಕ ವೈಜ್ಞಾನಿಕವಾಗಿ ಕಸ ವಿಲೇವಾರಿ ಮಾಡಲಾಗುವುದು” ಎಂದು…

Read More