Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಹರಿಯಾಣದ ಫರಿದಾಬಾದ್ನಲ್ಲಿ ಬಂಧಿಸಲ್ಪಟ್ಟ ಶಂಕಿತ ಅಬ್ದುಲ್ ರೆಹಮಾನ್ ಬಗ್ಗೆ ಪ್ರಮುಖ ಬಹಿರಂಗಪಡಿಸಲಾಗಿದೆ. ಭದ್ರತಾ ಸಂಸ್ಥೆಗಳ ಮೂಲಗಳ ಪ್ರಕಾರ, ಅಯೋಧ್ಯೆಯ ರಾಮ ಮಂದಿರದ ಮೇಲೆ ದಾಳಿ ನಡೆಸಲು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಅಬ್ದುಲ್ ರೆಹಮಾನ್ ಅವರನ್ನು ಬಳಸುತ್ತಿತ್ತು. ಈ ಉದ್ದೇಶಕ್ಕಾಗಿ ಐಎಸ್ಐ ಅಬ್ದುಲ್ ರೆಹಮಾನ್ನನ್ನು ಸಿದ್ಧಪಡಿಸಿತ್ತು. ಅಬ್ದುಲ್ ರೆಹಮಾನ್ ಐಎಸ್ಐ ಜೊತೆ ಸಂಪರ್ಕದಲ್ಲಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ. ಪಡೆದ ಮಾಹಿತಿಯ ಪ್ರಕಾರ, ಭಯೋತ್ಪಾದಕ ಅಬ್ದುಲ್ ಹಲವಾರು ಗುಂಪುಗಳೊಂದಿಗೆ ಸಂಬಂಧ ಹೊಂದಿದ್ದಾನೆ. ಅಬ್ದುಲ್ ರೆಹಮಾನ್ ಫೈಜಾಬಾದ್ನಲ್ಲಿ ಮಟನ್ ಅಂಗಡಿಯೊಂದನ್ನು ನಡೆಸುತ್ತಿದ್ದು, ವೃತ್ತಿಯಲ್ಲಿ ಆಟೋ ಚಾಲಕರಾಗಿದ್ದಾರೆ. ರಾಮ ಮಂದಿರ ನಿರ್ಮಾಣವಾದಾಗಿನಿಂದ ಅಯೋಧ್ಯೆಯನ್ನು ಭಯೋತ್ಪಾದಕರು ನಿರಂತರವಾಗಿ ಗುರಿಯಾಗಿಸಿಕೊಂಡಿದ್ದಾರೆ ಎಂಬುದು ಗಮನಾರ್ಹವಾಗಿದೆ. ಆದರೆ, ಅಬ್ದುಲ್ ನನ್ನು ಬಂಧಿಸುವ ಮೂಲಕ ತನಿಖಾ ಸಂಸ್ಥೆಗಳು ಐಎಸ್ ಐನ ಪ್ರಮುಖ ಪಿತೂರಿಯನ್ನು ವಿಫಲಗೊಳಿಸಿವೆ. ಹ್ಯಾಂಡ್ ಗ್ರೆನೇಡ್ ಬಳಸಿ ಅಯೋಧ್ಯೆ ರಾಮ ದೇವಾಲಯದ ಮೇಲೆ ದಾಳಿ ಮಾಡುವ ಮೂಲಕ ಭಾರಿ ವಿನಾಶವನ್ನು ಸೃಷ್ಟಿಸುವುದು ಭಯೋತ್ಪಾದಕ ಅಬ್ದುಲ್ ರಹಮಾನ್ ಅವರ ಯೋಜನೆಯಾಗಿತ್ತು. ಪಿತೂರಿಯ…
ಬೆಂಗಳೂರು: ರಾಜ್ಯದಲ್ಲಿ ನಾಲ್ಕು ವರ್ಷಗಳ ಕಾಲ ಬಿಜೆಪಿಯವರು ಏನೆಲ್ಲ ಮಾಡಿದ್ದರೆನ್ನವುದು ಎಲ್ಲರಿಗೂ ಗೊತ್ತಿದೆ. ರಾಜ್ಯಪಾಲರ ಭಾಷಣವನ್ನು ಟೀಕಿಸುವುದಕ್ಕೂ ಮುನ್ನ ಬಿಜೆಪಿಯವರು ಮೊದಲು ಕನ್ನಡಿಯಲ್ಲಿ ತಮ್ಮ ಮುಖ ನೋಡಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಕಿಡಿಕಾರಿದ್ದಾರೆ. ಸೋಮವಾರ ಆರಂಭಗೊಂಡ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ಮಾಡಿದ ರಾಜ್ಯಪಾಲರ ಭಾಷಣದ ಬಗ್ಗೆ ಬಿಜೆಪಿ ನಾಯಕರ ಟೀಕೆಗೆ ಪ್ರತಿಕ್ರಿಯಿಸಿದ ಸಚಿವರು, ಬಿಜೆಪಿಯವರ ಆಡಳಿತವನ್ನು ರಾಜ್ಯದ ಜನರು ನೋಡಿದ್ದಾರೆ. ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ಎಷ್ಟು ಜನರಿಗೆ ತಲುಪಿವೆ ಎನ್ನುವುದನ್ನು ಅವರು ಮೊದಲು ಅವಲೋಕನ ಮಾಡಿಕೊಳ್ಳಲಿ ಎಂದು ಅವರು ತಿರುಗೇಟು ನೀಡಿದರು. ಎಥಿಕ್ಸ್ ಕಮಿಟಿ ವಿಚಾರ ಗೊತ್ತಿಲ್ಲ ಸಚಿವರ ವಿರುದ್ಧ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಬಳಸಿದ ಅಶ್ಲೀಲ ಪದ ಪ್ರಯೋಗ ಪ್ರಕರಣವನ್ನು ಎಥಿಕ್ಸ್ ಕಮಿಟಿಗೆ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ನಾನು ಇಂದು ಬೆಂಗಳೂರಿಗೆ ಬಂದಿದ್ದು, ನಿಮಗೆ (ಮಾಧ್ಯಮ) ಎಷ್ಟು ಮಾಹಿತಿ ಇದೆಯೋ, ಅಷ್ಟೇ ಮಾಹಿತಿ ನನಗೂ…
ಬೆಂಗಳೂರು: ನಗರದಲ್ಲಿ ಸ್ವ ಉದ್ಯೋಗ ಕೈಗೊಳ್ಳುವ ಮಹಿಳೆಯರಿಗೆ ಗುಡ್ ನ್ಯೂಸ್ ಎನ್ನುವಂತೆ ಉಚಿತ ಆಟೋ ಚಾಲನಾ ತರಬೇತಿಗೆ ಚಾಲನೆ ನೀಡಲಾಗಿದೆ. ಇಂದು ಸಾವಿರಾರು ಮಹಿಳೆಯರಿಗೆ ಉಚಿತವಾಗಿ ಆಟೋ ಚಾಲನ ತರಬೇತಿ ನೀಡುವ ಉಪಕ್ರಮಕ್ಕೆ ಚಾಲನೆ ನೀಡಲಾಯಿತು. ಬಿ. ಪ್ಯಾಕ್, ಶ್ರೀ ಕೃಷ್ಣ ವೆಲ್ ನೆಸ್ ಸೆಂಟರ್ ಹಾಗೂ ಆದರ್ಶ ಆಟೋ ಯೂನಿಯನ್ ಸಹಭಾಗಿತ್ವದಲ್ಲಿ ಈ ತರಬೇತಿ ನೀಡಲಾಗುತ್ತಿದೆ. ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುವ ಉದ್ದೇಶ ಇದಾಗಿದೆ. ಶ್ರೀ ಕೃಷ್ಣ ವೆಲ್ನೇಸ್ ಸೆಂಟರ್ ನ ಮುಖ್ಯಸ್ಥೆ ಮಿಮಿ ಪಾರ್ಥಸಾರಥಿ, ಬಿ. ಪ್ಯಾಕ್ ಸಂಸ್ಥೆಯ ಡಾ.ಸಿ. ಸಂಪತ್, ರಾಘವೇಂದ್ರ ಪೂಜಾರಿ , ಹರ್ಷಿತ ವಿ ಕಾವೇರಿ ಕೇದಾರಾನಾಥ್, ಮಂಜುನಾಥ್ ಉಪಸ್ಥಿತರಿದ್ದರು. https://kannadanewsnow.com/kannada/champions-trophy-2025-india-to-take-on-australia-in-semi-finals/ https://kannadanewsnow.com/kannada/breaking-kalaburagi-man-commits-suicide-after-wifes-harassment/
ನವದೆಹಲಿ: ಕಾಯುವಿಕೆ ಮುಗಿದಿದೆ. ಭಾರತದ ಮುಂದಿನ ಹಾದಿ ಸೇರಿದಂತೆ ಸೆಮಿಫೈನಲ್ ಪಂದ್ಯಗಳು ಸಜ್ಜಾಗಿವೆ. ‘ಎ’ ಗುಂಪಿನ ತನ್ನ ಕೊನೆಯ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ತಂಡವನ್ನು 44 ರನ್ ಗಳಿಂದ ಮಣಿಸಿತು. ದುಬೈ ಕ್ರಿಕೆಟ್ ಸ್ಟೇಡಿಯಂನಲ್ಲಿ ಮಂಗಳವಾರ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಸೆಮಿಫೈನಲ್ ಪಂದ್ಯ ನಡೆಯಲಿದೆ. ಲಾಹೋರ್ನ ಗಡಾಫಿ ಕ್ರೀಡಾಂಗಣದಲ್ಲಿ ಬುಧವಾರ ನಡೆಯಲಿರುವ ಮತ್ತೊಂದು ಸೆಮಿಫೈನಲ್ನಲ್ಲಿ ನ್ಯೂಜಿಲೆಂಡ್ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ. ಭಾರತ ಮತ್ತು ನ್ಯೂಜಿಲೆಂಡ್ ಎರಡೂ ಈಗಾಗಲೇ ತಮ್ಮ ಸೆಮಿಫೈನಲ್ ಸ್ಥಾನಗಳನ್ನು ಭದ್ರಪಡಿಸಿಕೊಂಡಿವೆ. ಒಂದು ವೇಳೆ ಭಾರತ ಫೈನಲ್ ಪ್ರವೇಶಿಸಿದರೆ ದುಬೈನಲ್ಲಿ ಫೈನಲ್ ಪಂದ್ಯ ನಡೆಯಲಿದೆ. https://twitter.com/BCCI/status/1896236425106067909 ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ರ ಅಭಿಯಾನವನ್ನು ಭಾರತವು ಬಾಂಗ್ಲಾದೇಶದ ವಿರುದ್ಧ ಆರು ವಿಕೆಟ್ಗಳ ಜಯದೊಂದಿಗೆ ಪ್ರಾರಂಭಿಸಿತು, ನಂತರ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಆರು ವಿಕೆಟ್ಗಳ ಗೆಲುವು ಸಾಧಿಸಿತು. ಅಂತಿಮ ಗ್ರೂಪ್ ಹಂತದ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಪ್ರಬಲ ಗೆಲುವು ಸಾಧಿಸಿತು. ಟೂರ್ನಿಯ ಆರಂಭಿಕ ಪಂದ್ಯದಲ್ಲಿ ಶುಬ್ಮನ್ ಗಿಲ್ ಅವರ…
ಬೆಂಗಳೂರು: ಬಜೆಟ್ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಮಾಡಿರುವ ಭಾಷಣದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರಕಾರವು ರಾಜ್ಯದ ಅಭಿವೃದ್ಧಿ ಮತ್ತು ಸಮಗ್ರ ಬೆಳವಣಿಗೆಯ ಬಗ್ಗೆ ಹೊಂದಿರುವ ದೂರದೃಷ್ಟಿ ವ್ಯಕ್ತವಾಗಿದೆ ಎಂದು ಬೃಹತ್ ಮತ್ತು ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಸರಕಾರವು ಕ್ವಿನ್ ಸಿಟಿ, ವಿಮಾನ ನಿಲ್ದಾಣಗಳ ನಿರ್ಮಾಣ, ಏರ್-ಸ್ಟ್ರಿಪ್ ಅಭಿವೃದ್ಧಿ, ಸಿಗ್ನೇಚರ್ ಪಾರ್ಕ್ ಮುಂತಾದ ಮಹತ್ವದ ಯೋಜನೆಗಳ ಬಗ್ಗೆ ಹೊಂದಿರುವ ಬದ್ಧತೆ ಯನ್ನು ರಾಜ್ಯಪಾಲರ ಭಾಷಣದಲ್ಲಿ ಕಾಣಬಹುದು’ ಎಂದಿದ್ದಾರೆ. ಸರಕಾರವು ಸಮಗ್ರ ಕೈಗಾರಿಕಾ ಪ್ರಗತಿಗೆ ಸಂಕಲ್ಪ ಮಾಡಿದ್ದು, ಮೂಲಸೌಕರ್ಯ ಅಭಿವೃದ್ಧಿಗೂ ಅದ್ಯತೆ ನೀಡುತ್ತಿದೆ. ಇವುಗಳ ಜತೆಗೆ ತೋಟಗಾರಿಕೆ ವಲಯದ ವಿಸ್ತರಣೆ, ಹೊಸ ತಳಿಗಳ ಸಂಶೋಧನೆ ಮೂಲಕ ರೈತ ಸಮುದಾಯದ ಏಳ್ಗೆಯತ್ತಲೂ ಚಿತ್ತ ನೆಟ್ಟಿದೆ. ಇದು ನಮ್ಮ ಸಮತೋಲನದ ದೃಷ್ಟಿಯನ್ನು ಸಂಕೇತಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಸರಕಾರವು ಐದು ಗ್ಯಾರಂಟಿ ಯೋಜನೆಗಳ ಮೂಲಕ ನಾಡಿನ ಜನರಿಗೆ ಭದ್ರತೆಯ ಭಾವನೆ ಒದಗಿಸಿದೆ. ಕಲ್ಯಾಣ…
ಶಿವಮೊಗ್ಗ : ರಸ್ತೆ ಅಗಲೀಕರಣ ಕಾಮಗಾರಿ ನಿಮಿತ್ತ ಕಂಬ ಸ್ಥಳಾಂತರ ಕಾಮಗಾರಿ ಇರುವುದರಿಂದ ಎಂಆರ್‌ಎಸ್ ವಿದ್ಯುತ್ ವಿತರಣಾ ಕೇಂದ್ರದ ಪುರಲೆ ಫೀಡರ್-3 11 ಕೆವಿ ಮಾರ್ಗ ಮುಕ್ತತೆ ನೀಡಲು ಮಾ.5 ರ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗು ವಿದ್ಯುತ್ ಕೆಳಕಂಡ ಪ್ರದೇಶಗಳಲ್ಲಿ ವ್ಯತ್ಯಯವಾಗಲಿದೆ. ನಗರದ ಗುರುಪುರ, ಪುರಲೆ, ಸುಬ್ಬಯ್ಯ ಆಸ್ಪತ್ರೆ, ಮಂಜುನಾಥ ಬಡಾವಣೆ, ವೆಂಕಟೇಶ ನಗರ, ಹಸೂಡಿ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಾವಾಗಲಿದ್ದು, ಈ ಪ್ರದೇಶದ ಗ್ರಾಹಕರು ಇಲಾಖೆಯೊಂದಿಗೆ ಸಹಕರಿಸಬೇಕೆಂದು ನಗರ ಉಪವಿಭಾಗ-1 ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ.
ಬೆಂಗಳೂರು: “ಅಧಿಕಾರ ಹಂಚಿಕೆ ವಿಚಾರವಾಗಿ ಚರ್ಚೆ ಮಾಡದಂತೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಸೂಚನೆ ನೀಡಿದ್ದು, ನಾನು ಅವರ ಮಾತಿಗೆ ಬದ್ಧನಾಗಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. ಡಿ.ಕೆ. ಶಿವಕುಮಾರ್ ಸಿಎಂ ಆಗುವುದನ್ನು ಯಾರಿಂದಲೂ ತಪ್ಪಿಸಲು ಆಗುವುದಿಲ್ಲ ಎಂಬ ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ವೀರಪ್ಪ ಮೊಯ್ಲಿ ಅವರು ತಮ್ಮ ಅಭಿಪ್ರಾಯ ಹೇಳಿದ್ದಾರೆ. ನಾನು ಅದರ ಬಗ್ಗೆ ಚರ್ಚೆ ಮಾಡುವುದಿಲ್ಲ. ಅದರ ಅಗತ್ಯವಿಲ್ಲ” ಎಂದು ಪ್ರತಿಕ್ರಿಯಿಸಿದರು.
ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರಾಗಿ ಎಂ ಎಲ್ ಸಿ ಎನ್.ರವಿ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಇಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸಭಾಪತಿಗಳಿಗೆ ಪತ್ರ ಬರೆದು ಮಾಹಿತಿ ನೀಡಿದ್ದಾರೆ. ಛಲವಾದಿ ನಾರಾಯಣಸ್ವಾಮಿ ಬರೆದಿರುವಂತ ಪತ್ರದಲ್ಲಿ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದಂತ ರವಿಕುಮಾರ್. ಎನ್ ಅವರನ್ನು ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರಾಗಿ ನೇಮಿಸಿರುವುದಾಗಿ ತಿಳಿಸಿದ್ದಾರೆ.
ಬೆಂಗಳೂರು : ರಾಜ್ಯಪಾಲರು ಉಭಯ ಸದನ ಉದ್ದೇಶಿಸಿ ಇಂದು ಮಾಡಿದ ಭಾಷಣ ಯಶಸ್ವೀ ಸರ್ಕಾರದ ಯಶೋಗಾಥೆಯಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ರಾಜ್ಯಪಾಲರ ಭಾಷಣಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇದು ಸರ್ಕಾರದ ಸಾಧನೆಗಳನ್ನು ಸಮರ್ಥವಾಗಿ ತೆರೆದಿಟ್ಟಿರುವುದಲ್ಲದೇ, ಹೊಸ ಯೋಜನೆಗಳ ಮೂಲಕ ರಾಜ್ಯದ ಅಭಿವೃದ್ಧಿಗೆ ದಿಕ್ಸೂಚಿಯಾಗಿದೆ ಎಂಬುದನ್ನು ಭಾಷಣ ಸ್ಪಷ್ಟವಾಗಿ ಸಾರಿದೆ ಎಂದು ಹೇಳಿದ್ದಾರೆ. ಗ್ಯಾರಂಟಿಗಳು ಮತ್ತು ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನದಿಂದ ಅಸಮಾನತೆ ತಗ್ಗಿದ್ದರೆ, ರಾಜ್ಯವನ್ನು 1 ಟ್ರಿಲಿಯನ್ ಡಾಲರ್ ಆರ್ಥಿಕ ರಾಜ್ಯ ಮಾಡುವ ನಿಟ್ಟಿನಲ್ಲಿ ಸಮಗ್ರ ಹಾಗೂ ಸಮರ್ಥ ಪ್ರಯತ್ನ ಮಾಡುವ ಸಂಕಲ್ಪ ರಾಜ್ಯದ ಜನರಲ್ಲಿ ಮತ್ತು ಹೂಡಿಕೆದಾರರಲ್ಲಿ ಹೊಸ ಹುಮ್ಮಸ್ಸು ಮೂಡಿಸಿದೆ ಎಂದು ಖಂಡ್ರೆ ಹೇಳಿದ್ದಾರೆ. ಕಲ್ಯಾಣ ಕರ್ನಾಟಕ ಪ್ರದೇಶವೂ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳು ಪ್ರಾದೇಶಿಕ ಅಸಮತೋಲದಿಂದ ನಲುಗಿವೆ. ಪ್ರಾದೇಶಿಕ ಅಸಮಾನತೆ ಹೋಗಲಾಡಿಸಲು 2002ರಲ್ಲಿ ರಚಿಸಲಾಗಿದ್ದ ಡಾ. ಡಿ.ಎಂ. ನಂಜುಂಡಪ್ಪ ವರದಿ ಆಧರಿಸಿ ಈವರೆಗೆ ಬಿಡುಗಡೆ ಮಾಡಲಾಗಿರುವ 37662 ಕೋಟಿ ರೂಪಾಯಿ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಆರ್ಥಿಕ ಹೊರೆ ತಗ್ಗಿಸೋ ಸಂಬಂಧ ಮತ್ತೊಂದು ಸುತ್ತಿನಲ್ಲಿ ಅನರ್ಹರ ಬಿಪಿಎಲ್ ಕಾರ್ಡ್ ( BPL Ration Card ) ರದ್ದುಪಡಿಸೋದಕ್ಕೆ ಮುಂದಾಗಿದೆ. ಪಂಚಾಯ್ತಿ ಮಟ್ಟದಲ್ಲೇ ಅನರ್ಹರ ಬಿಪಿಎಲ್ ಕಾರ್ಡ್ ಪತ್ತೆ ಅಭಿಯಾನ ಆರಂಭಗೊಳ್ಳಲಿದೆ. ಶೀಘ್ರವೇ ಈ ಪ್ರಕ್ರಿಯೆಗೆ ಚಾಲನೆ ನೀಡುತ್ತಿದ್ದು, ಹಲವು ಅನರ್ಹರ ಬಿಪಿಎಲ್ ಕಾರ್ಡ್ ರದ್ದಾಗಲಿದೆ ಎನ್ನಲಾಗುತ್ತಿದೆ. ರಾಜ್ಯದ ಅನೇಕ ಜಿಲ್ಲೆಯಲ್ಲಿ ಬಡತನ ರೇಖೆಗಿಂತ ಮೇಲಿದ್ದವರೂ ಬಿಪಿಎಲ್ ಕಾರ್ಡ್ ಪಡೆದಿದ್ದಾರೆ. ಬಡತನ ಪ್ರಮಾಣ ಕಡಿಮೆ ಇರುವ ಜಿಲ್ಲೆಗಳಲ್ಲಿ ಅತಿ ಹೆಚ್ಚು ಬಿಪಿಎಲ್ ಕಾರ್ಡ್ ಹಂಚಿಕೆಯಾಗಿರೋದೇ ಸರ್ಕಾರಕ್ಕೆ ಮತ್ತೊಂದು ತಲೆ ಬಿಸಿಯಾಗಿದೆ. ರಾಜ್ಯದ ಯಾವ ಜಿಲ್ಲೆಯಲ್ಲಿ ಬಡತನ ಪ್ರಮಾಣ ಶೇ.1ರಿಂದ 5ರಷ್ಟು ಇದೆಯೋ ಅಲ್ಲೇ ಶೇ.80ಕ್ಕಿಂತ ಅಧಿಕ ಬಿಪಿಎಲ್ ಕಾರ್ಡ್ ಹಂಚಿಕೆಯಾಗಿರೋದಾಗಿ ತಿಳಿದು ಬಂದಿದೆ. ಈ ಕಾರಣಕ್ಕೆ ರಾಜ್ಯ ಸರ್ಕಾರದ ಮೇಲೆ ಆರ್ಥಿಕ ಹೊರೆ ಕೂಡ ಹೆಚ್ಚಾಗಿದ್ದು, ದೊಡ್ಡ ಆರ್ಥಿಕ ಹೊಡೆತವೇ ಬಿದ್ದಿದೆ. ಈ ಕಾರಣದಿಂದಾಗಿ ಅನರ್ಹ ಬಿಪಿಎಲ್ ಕಾರ್ಡ್ ರದ್ದತಿಗೆ ಆಹಾರ ಇಲಾಖೆಯಿಂದ ಅಭಿಯಾನವನ್ನು ಕೈಗೊಳ್ಳಲಾಗುತ್ತಿದೆ.…














