Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 15ನೇ ಬಜೆಟ್ ಮಂಡಿಸಿದ್ದು, ಶಾಲಾ/ಕಾಲೇಜುಗಳ ಕೊಠಡಿ ನಿರ್ಮಾಣ, ದುರಸ್ತಿ, ಶೌಚಾಲಯ ನಿರ್ಮಾಣದಂತಹ ಕಾಮಗಾರಿಗಳಿಗೆ 850 ಕೋಟಿ ರೂ. ಅನುದಾನ ನೀಡಿರುವುದಕ್ಕೆ. ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಈ ಬಾರಿ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ 44,422 ಕೋಟಿ ರೂಪಾಯಿ ಮೀಸಲಿಟ್ಟಿದ್ದು, ಶಾಲಾ/ಕಾಲೇಜುಗಳ ಕೊಠಡಿ ನಿರ್ಮಾಣ, ದುರಸ್ತಿ, ಶೌಚಾಲಯ ನಿರ್ಮಾಣದಂತಹ ಕಾಮಗಾರಿಗಳಿಗೆ 850 ಕೋಟಿ ರೂ. ಅನುದಾನ ಘೋಷಣೆ ಮಾಡಿದ್ದಾರೆ. ”ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ಮತ್ತು ಅಗತ್ಯ ಮೂಲಸೌಕರ್ಯ ಒದಗಿಸಲು ಸಿ.ಎಸ್.ಆರ್. ಅನುದಾನದಡಿ, ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಆಯ್ದ ಶಾಲೆಗಳ ಉನ್ನತೀಕರಣ: 3 ರಿಂದ 5 ನೇ ತರಗತಿ ವಿದ್ಯಾರ್ಥಿಗಳಿಗೆ ಗಣಿತ-ಗಣಕ ಕಾರ್ಯಕ್ರಮ. 10 ಕೋಟಿ ರೂ. ವೆಚ್ಚದಲ್ಲಿ ಮರು ಸಿಂಚನ ಕಾರ್ಯಕ್ರಮ; ಆಯ್ದ ಪ್ರೌಢ ಶಾಲೆಗಳಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ವಿಜ್ಞಾನ ಹಾಗೂ…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ 15 ನೇ ಆಯವ್ಯಯ ಐತಿಹಾಸಿಕ ಬಜೆಟ್ ಆಗಿದ್ದು, ದೂರದೃಷ್ಟಿಯುಳ್ಳ ಅಭಿವೃದ್ಧಿಗೆ ಪೂರಕವಾದ ಬಜೆಟ್ ಎಂದು ಕನ್ನಡ ಮತ್ತು ಸಂಸ್ಖೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಹೇಳಿದ್ದಾರೆ. ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವರು, ಬಜೆಟ್ ಆರ್ಥಿಕ ಶಿಸ್ತಿನಿಂದ ಕೂಡಿದ್ದು, ಆಶಾದಾಯಕ ಬಜೆಟ್ ಆಗಿದೆ. ಮುಖ್ಯಮಂತ್ರಿಗಳು ಪ್ರಸಕ್ತ ಸಾಲಿನಲ್ಲಿ ಐದು ಗ್ಯಾರಂಟಿಗಳಿಗೆ 52 ಸಾವಿರ ಕೋಟಿ ಮೀಸಲಿಟ್ಟಿದ್ದು, ಬಡವರ, ದೀನದಲಿತರ, ಅಲ್ಪಸಂಖ್ಯಾತರ ಅಭಿವೃದ್ಧಿ ಬಜೆಟ್ ಮಂಡಿಸಿದ್ದಾರೆ ಎಂದು ಶ್ಲಾಘಿಸಿದರು. ದೇಶದ ಪ್ರತಿಷ್ಠಿತ ಇಂಜಿನಿಯರಿಂಗ್ ಹಾಗೂ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು ಪ್ರಸಕ್ತ ಸಾಲಿನಲ್ಲಿ 500 ಪ್ರತಿಭಾವಂತ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ತರಬೇತಿ ಸಂಸ್ಥೆಗಳಿಂದ ಎರಡು ವರ್ಷ ಉಚಿತ ಜೆಇಇ/ಎನ್ಇಇಟಿ ತರಬೇತಿ ನೀಡುವ ಯೋಜ ಘೋಷಣೆ ಮಾಡಿರುವುದು ಸ್ವಾಗತರ್ಹ. ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಆರ್ಥಿಕ ಹಾಗೂ ಸಾಮಾಜಿಕ ಸ್ಥಿತಿಗತಿಗಳ ಅಧ್ಯಯನಕ್ಕೆ ‘ಕರ್ನಾಟಕ ಅಲೆಮಾರಿ ಮತ್ತು ಅರೆ…
ಬೆಂಗಳೂರು : ವಿದ್ಯಾರ್ಥಿಗಳಿಗೆ ಟೆಲಿಸ್ಕೋಪ್, ಸೈನ್ಸ್ ಸಿಟಿ ಸ್ಥಾಪನೆ, ನೀರಿನ ಸದ್ಬಳಕೆ ಹಾಗೂ ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ ನೀಡುವಂತಹ ಮತ್ತು ಎಲ್ಲಾ ವರ್ಗದ ಜನರ ಆಶೋತ್ತರಗಳಿಗೆ ಧ್ವನಿಯಾಗುವಂತಹ ಕ್ರಾಂತಿಕಾರಿ ಆಯವ್ಯಯವನ್ನ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಮಂಡಿಸಿದ್ದಾರೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ಹೇಳಿದ್ದಾರೆ. ಸರ್ವೋದಯ ದೃಷ್ಟಿ ಮತ್ತು ಸಮನ್ವಯ ದೃಷ್ಟಿ ಎಲ್ಲೆಡೆ ತಾಂಡವವಾಡಬೇಕು, ನಿಷ್ಪಕ್ಷಪಾತ ಮತ್ತು ನ್ಯಾಯಯತ ಸಮಾಜ ನಿರ್ಮಾಣಕ್ಕಾಗಿ ಸಂಪತ್ತಿನ ಮರುಹಂಚಿಕೆ ಮಾಡುವುದು ಇಂದಿನ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಚುನಾವಣೆಗೂ ಮುನ್ನ ಘೋಷಿಸಿದ್ದ 5 ಗ್ಯಾರೆಂಟಿ ಯೋಜನೆಗಳನ್ನ ಚಾಚೂ ತಪ್ಪದೆ ಅನುಷ್ಠಾನಗೊಳಿಸಿ ಇಡೀ ದೇಶದಲ್ಲಿ ಮಾದರಿ ರಾಜ್ಯವಾಗಿದ್ದೇವೆ. ಬಸವಣ್ಣವರ ಆಶಯದಂತೆ ನುಡಿದಂತೆ ನಡೆದ ಸರಕಾರ ನಮ್ಮದಾಗಿದೆ. ಈ ಬಾರಿ ಬಜೆಟ್ ನಲ್ಲಿ 52 ಸಾವಿರ ಕೋಟಿ ಗ್ಯಾರೆಂಟಿ ಯೋಜನೆಗಳಿಗೆ ಅನುದಾನ ನೀಡಿದ್ದು, ಇಡೀ ದೇಶದಲ್ಲೆ ನಮ್ಮ ಸರಕಾರ ಮಾದರಿಯಾಗಿ ಹೊರಹೊಮ್ಮಿದೆ. ನಮ್ಮದು ಮುಂದಿನ 10 ವರ್ಷಗಳ ದೂರದೃಷ್ಟಿಯನ್ನು ಹೊಂದಿರುವಂತಹ ಅಭಿವೃದ್ದಿ ಪೂರಕ…
ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ಐತಿಹಾಸಿಕ ಹಾಗೂ ರಚನಾತ್ಮಕ ಬಜೆಟ್ ಮಂಡಿಸಿದ್ದು, ರಾಜ್ಯದ ಅಭಿವೃದ್ಧಿಗೆ ಪೂರಕವಾಗಿದೆ. ಎಲ್ಲಾ ವರ್ಗದವರಿಗೆ ಸಲ್ಲುವ ಬಜೆಟ್ ಇದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಮುಖ್ಯಮಂತ್ರಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ. 2024-25ನೇ ಸಾಲಿನಲ್ಲಿ ಮಹಿಳಾ ಉದ್ದೇಶಿತ ಯೋಜನೆಗಳಿಗೆ 86,423 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಇಲಾಖೆಯ ಬಹುತೇಕ ಬೇಡಿಕೆಗಳಿಗೆ ಮುಖ್ಯಮಂತ್ರಿಗಳು ಸ್ಪಂದಿಸಿದ್ದಾರೆ. ಮಕ್ಕಳ ಉದ್ದೇಶಿತ ಯೋಜನೆಗಳಿಗೆ ಬಜೆಟ್‌ನಲ್ಲಿ 54,617 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದರು. ಪ್ರಸಕ್ತ ಸಾಲಿನಲ್ಲಿ ಇಲಾಖೆ ನಿರೀಕ್ಷಿಸಿದಷ್ಟು ಬಜೆಟ್ ದಕ್ಕಿದ್ದು, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಗೃಹಲಕ್ಷ್ಮಿಗೆ ಈ ಸಾಲಿನಲ್ಲಿ 28,608 ಕೋಟಿ ರೂ. ಒದಗಿಸಲಾಗಿದೆ. ಇದರಿಂದ ಕುಟುಂಬ ನಿರ್ವಹಣೆಯ ಜೊತೆಗೆ ಆದಾಯೋತ್ಪನ್ನ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಮಹಿಳೆಯರಿಗೆ ಈ ಯೋಜನೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು. ಸ್ಮಾರ್ಟ್ ಫೋನ್‌ಗಳಿಗೆ 90 ಕೋಟಿ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಮೇಲ್ವಿಚಾರಕಿಯರ ಬಹುದಿನಗಳ ಬೇಡಿಕೆಯಾಗಿದ್ದ ಸ್ಮಾರ್ಟ್ ಫೋನ್‌ಗಾಗಿ…
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ತಮ್ಮ ಚೊಚ್ಚರ ರಾಜ್ಯ ಬಜೆಟ್ 2024-25 ಅನ್ನು ವಿಧಾನಸಭೆಯಲ್ಲಿ ಮಂಡಿಸಿದರು. ವಿವಿಧ ಹೊಸ ಯೋಜನೆಯನ್ನು ಸೇರಿದಂತೆ, ಗ್ಯಾರಂಟಿ ಸ್ಕೀಂಗಳಿಗೆ ಯಾವುದೇ ಅಡೆತಡೆಯಾಗದಂತೆ ತಮ್ಮ ಅಯವ್ಯಯವನ್ನು ಮಂಡಿಸಿದ್ದಾರೆ. ಹಾಗಾದ್ರೇ ಇಂದು ಸಿಎಂ ಸಿದ್ಧರಾಮಯ್ಯ ಮಂಡಿಸಿದಂತ ರಾಜ್ಯ ಬಜೆಟ್ ನ ಇಲಾಖೆ, ಕ್ಷೇತ್ರವಾರು ಸಂಪೂರ್ಣ ಹೈಲೈಟ್ಸ್ ಮುಂದೆ ಓದಿ. ನಾನು 2024-25ನೇ ಸಾಲಿನ ಆಯವ್ಯಯವನ್ನು ಸದನದ ಮುಂದೆ ಮಂಡಿಸುತ್ತಿದ್ದೇನೆ. ಭಾರತ ದೇಶ ಗಣರಾಜ್ಯವಾಗಿ 75ನೇ ವರ್ಷಕ್ಕೆ ಕಾಲಿಟ್ಟಿದೆ. ಈ ಸುಸಂದರ್ಭದಲ್ಲಿ ನನ್ನ 1೫ನೇ ಆಯವ್ಯಯವನ್ನು ಮಂಡಿಸಲು ಹರ್ಷಿಸುತ್ತೇನೆ. ಡಾ|| ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರೂಪಿಸಿದ ಸಂವಿಧಾನದ ಆಶಯದಂತೆ ನ್ಯಾಯ, ಸಮಾನತೆ ಹಾಗೂ ಭ್ರಾತೃತ್ವದ ತಳಹದಿಯ ಮೇಲೆ ಕರ್ನಾಟಕ ಮಾದರಿ ಅಭಿವೃದ್ಧಿಯ ಹೊಸ ದೃಷ್ಟಾಂತವನ್ನು ರೂಪಿಸಲು ನಾವು ಹೆಜ್ಜೆಯಿಟ್ಟಿದ್ದೇವೆ ಎಂದರು. ಸಾಮಾಜಿಕ ನ್ಯಾಯ ಎನ್ನುವುದು ನಮ್ಮ ನಂಬಿಕೆ ಮಾತ್ರವಲ್ಲ; ಅದು ಉದಾತ್ತ ಜೀವನ ದೃಷ್ಟಿಕೋನ. ಸಮ ಸಮಾಜ ನಿರ್ಮಾಣದಲ್ಲಿ ಬಸವಾದಿ ಶರಣರ ಕಾಯಕ ಮತ್ತು ದಾಸೋಹ ತತ್ವಗಳು…
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ಮಂಡಿಸಿದಂತ ರಾಜ್ಯ ಬಜೆಟ್ 2024-25ರಲ್ಲಿ ಪ್ರವಾಸೋದ್ಯಮಕ್ಕೆ ಬಂಫರ್ ಗಿಫ್ಟ್ ನೀಡಿದ್ದಾರೆ. ರಾಜ್ಯದ ಪ್ರಮುಖ 10 ಪ್ರವಾಸಿ ತಾಣಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಕೇಬಲ್ ಕಾರ್/ ರೋಪ್ ವೇ ಸೌಲಭ್ಯ ಅಭಿವೃದ್ಧಿಪಡಿಸಲಾಗುತ್ತದೆ ಎಂದು ಘೋಷಣೆ ಮಾಡಿದ್ದಾರೆ. ಆ ಎಲ್ಲಾ ಸಂಪೂರ್ಣ ಮಾಹಿತಿ ಮುಂದೆ ಓದಿ. ಪ್ರವಾಸೋದ್ಯಮ ಇಂದು ರಾಜ್ಯ ಬಜೆಟ್ ಮಂಡಿಸಿ ಮಾತನಾಡಿದಂತ ಅವರು, ರಾಜ್ಯದ ಪ್ರವಾಸೋದ್ಯಮ ಕ್ಷೇತ್ರದಲ್ಲಿನ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಪ್ರಸ್ತುತ ಜಾರಿಯಲ್ಲಿರುವ ಕರ್ನಾಟಕ ಪ್ರವಾಸೋದ್ಯಮ ನೀತಿಯನ್ನು ಮತ್ತಷ್ಟು ಹೂಡಿಕೆದಾರರ ಹಾಗೂ ಪ್ರವಾಸಿಗರ ಸ್ನೇಹಿಯಾಗಿ ಮಾಡಲು, ಪರಿಷ್ಕೃತ ಪ್ರವಾಸೋದ್ಯಮ ನೀತಿ 2024-29 ಅನ್ನು ಜಾರಿಗೆ ತರಲಾಗುವುದು ಎಂದರು. ಪೌರಾಣಿಕ ಹಾಗೂ ಐತಿಹಾಸಿಕವಾಗಿ ಪ್ರಖ್ಯಾತಿ ಹೊಂದಿರುವ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಪ್ರವಾಸಿ ಸೌಲಭ್ಯ ಅಭಿವೃದ್ಧಿಪಡಿಸಲು 100 ಕೋಟಿ ರೂ.ಗಳನ್ನು ಒದಗಿಸಲಾಗುವುದು. ರಾಜ್ಯದ ಪ್ರಮುಖ ಜಲಾಶಯಗಳಲ್ಲಿನ ಹಿನ್ನೀರಿನಲ್ಲಿ ಮತ್ತು ಕಡಲ ತೀರಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಜಲಕ್ರೀಡೆಗಳು ಮತ್ತು…
ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯ ಬಜೆಟ್ ನಲ್ಲಿ ಕಂದಾಯ ಇಲಾಖೆಯ ಅಡಿಯಲ್ಲಿ ವಿವಿಧ ಮಹತ್ವದ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವ ಘೋಷಣೆ ಮಾಡಿದ್ದಾರೆ. ಅದರಲ್ಲೂ ರಾಜ್ಯದಲ್ಲಿನ ಸುಮಾರು 30,700 ಗ್ರಾಮ ಠಾಣಾ ಪ್ರದೇಶಗಳನ್ನು ಹಂತ ಹಂತವಾಗಿ ಡ್ರೋನ್ ಮುಖಾಂತರ ಸರ್ವೆ ಮಾಡಿಸಿ ಆಸ್ತಿ ಮತ್ತು ಹಕ್ಕು ದಾಖಲಾತಿಗಳನ್ನು ಭೂ ಮಾಲೀಕರಿಗೆ ವಿತರಿಸುವ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಹಾಗಾದ್ರೇ ಕಂದಾಯ ಇಲಾಖೆಗೆ ರಾಜ್ಯ ಬಜೆಟ್ ನಲ್ಲಿ ಸಿಕ್ಕಿದ್ದು ಏನು ಎಂಬುದಾಗಿ ಮುಂದೆ ಓದಿ. ಕಂದಾಯ ಕಂದಾಯ ಇಲಾಖೆಯ ಭೂಮಿ, ಸರ್ವೆ ಮತ್ತು ನೋಂದಣಿ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಗಣಕೀಕರಣಗೊಳಿಸಿ, ಶಿಥಿಲಾವಸ್ಥೆಯಲ್ಲಿರುವ ದಾಖಲೆಗಳನ್ನು ಶಾಶ್ವತವಾಗಿ ಉಳಿಸಿ, ನಕಲಿ ದಾಖಲೆಗಳನ್ನು ಸೃಷ್ಟಿಸಲು ಅವಕಾಶವಿರದಂತೆ ಗಣಕೀಕೃತ ದಾಖಲೆಗಳನ್ನು ನಾಗರಿಕರು, ಸ್ವತಃ ಆನ್ಲೈನ್ನಲ್ಲಿ ಪಡೆದುಕೊಳ್ಳಲು ಅನುವಾಗುವಂತೆ ಭೂ ಸುರಕ್ಷಾ ಯೋಜನೆಯನ್ನು ಪ್ರಾಯೋಗಿಕವಾಗಿ ಆರಂಭಿಸಲಾಗುವುದು. ಆಕಾರ್‌ಬಂದ್ ಮತ್ತು ಆರ್.ಟಿ.ಸಿ. ಯಲ್ಲಿನ ವಿಸ್ತೀರ್ಣವನ್ನು ಹೊಂದಾಣಿಕೆ ಮಾಡುವ ಮೂಲಕ ಹಿಡುವಳಿದಾರರಿಗೆ ತ್ವರಿತ ಸೇವೆ ಒದಗಿಸಲು ಆಕಾರ್‌ಬಂದ್‌ಗಳ ಗಣಕೀಕರಣ…
ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯ ಬಜೆಟ್ 2024-25 ಅನ್ನು ವಿಧಾನಸಭೆಯಲ್ಲಿ ಮಂಡಿಸುತ್ತಿದ್ದಾರೆ. ಇಂದು ಮಂಡಿಸಿದಂತ ರಾಜ್ಯ ಬಜೆಟ್ ನಲ್ಲಿ ನಗರಾಭಿವೃದ್ಧಿ, ಪೌರಾಡಳಿತ ಇಲಾಖೆಗೆ ಸಿಕ್ಕಿದ್ದೇನು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ಮುಂದೆ ಓದಿ. ನಗರಾಭಿವೃದ್ಧಿ ಬೆಂಗಳೂರು ನಗರವನ್ನು ವಿಶ್ವದರ್ಜೆಯ ನಗರವಾಗಿ ಅಭಿವೃದ್ಧಿಪಡಿಸಲು ನಾವು ಬ್ರಾಂಡ್ ಬೆಂಗಳೂರು ಪರಿಕಲ್ಪನೆಯನ್ನು ರೂಪಿಸಿ ಜಾರಿಗೊಳಿಸುತ್ತಿದ್ದೇವೆ. ಜನರ ಬದುಕಿನ ಗುಣಮಟ್ಟ ಸುಧಾರಣೆಗಾಗಿ ಹಾಗೂ ಹೂಡಿಕೆದಾರರನ್ನು ಆಕರ್ಷಿಸಲು ವಿವಿಧ ವಲಯಗಳಲ್ಲಿ ಗಣನೀಯ ಸುಧಾರಣೆಗಳನ್ನು ತರಲು ಹಲವಾರು ದಿಟ್ಟ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಪ್ರಸಕ್ತ ಸಾಲಿನಲ್ಲಿ ಸಂಪನ್ಮೂಲಗಳ ಹೆಚ್ಚಳ, ಸಂಚಾರ ದಟ್ಟಣೆ ನಿವಾರಣೆ, ಗುಣಮಟ್ಟದ ರಸ್ತೆಗಳ ನಿರ್ಮಾಣ, ಶುದ್ಧ ಕುಡಿಯುವ ನೀರು ಪೂರೈಕೆ, ಉತ್ತಮ ಸಾರ್ವಜನಿಕ ಸಾರಿಗೆ ಮತ್ತು ಸ್ವಚ್ಛ-ಸುಂದರ ಬೆಂಗಳೂರು ನಿರ್ಮಾಣದ ಕುರಿತು ಹೆಚ್ಚಿನ ಗಮನ ಹರಿಸುತ್ತೇವೆ ಎಂದರು. ಬಿ.ಬಿ.ಎಂ.ಪಿ ಯಲ್ಲಿ ತೆರಿಗೆ ಮತ್ತು ತೆರಿಗೆಯೇತರ ಸಂಪನ್ಮೂಲಗಳನ್ನು ಕ್ರೊಢೀಕರಿಸಲು ಸರ್ಕಾರವು ಹಲವು ಉಪಕ್ರಮಗಳನ್ನು ಕೈಗೊಳ್ಳಲಿದೆ; 2023-24ನೇ ಸಾಲಿನಲ್ಲಿ 4,300 ಕೋಟಿ ರೂ. ತೆರಿಗೆ ಸಂಗ್ರಹ ಮಾಡುವ ಮುಖಾಂತರ…
ಬೆಂಗಳೂರು: ಗ್ರಾಮೀಣ ಪ್ರದೇಶದಲ್ಲಿ ಸ್ಥಳೀಯ ಆಹಾರವನ್ನುಶುಚಿ-ರುಚಿಯಾಗಿ ಕೈಗೆಟುಕುವ ದರದಲ್ಲಿ ಒದಗಿಸುವ ಸದುದ್ದೇಶದಿಂದಮಹಿಳೆಯರೇ ನಡೆಸುವ ಕೆಫೆ ಸಂಜೀವಿನಿ ಕ್ಯಾಂಟೀನ್‍ಗಳನ್ನು ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಣೆ ಮಾಡಿದ್ದಾರೆ. ಈ ಘೋಷಣೆ ಮಾಡಿರುವುದಕ್ಕೆ ವೈದ್ಯಕೀಯ ಶಿಕ್ಷಣ ಜೀವನೋಪಾಯ ಹಾಗೂ ಕೌಶಲ್ಯಾಭಿವೃಧಿ ಮತ್ತು ರಾಯಚೂರು ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಶುಕ್ರವಾರ ವಿಧಾನಸಭೆಯಲ್ಲಿ 2024-25ನೇ ಸಾಲಿನ ಬಜೆಟ್ ಮಂಡನೆಮಾಡಿದ ಅವರು, ಮಹಿಳೆಯರ ಸ್ವಾವಲಂಬನೆ ಮತ್ತುಸಬಲೀಕರಣಕ್ಕಾಗಿ ಗ್ರಾಮೀಣ ಪ್ರದೇಶದಲ್ಲಿ ಕೆಫೆ ಸಂಜೀವಿನಿಸ್ಥಾಪನೆಗಾಗಿ ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ 7.50 ಕೋಟಿ ರೂ. ವೆಚ್ಚಮಾಡಿ 50 ಕೆಫೆಗಳನ್ನು ಸ್ಥಾಪನೆ ಮಾಡಲಾಗುವುದೆಂದು ಆಶ್ವಾಸನೆನೀಡಿದರು. ಕಾಫಿ ಮಂಡಳಿಯ ಸಹಭಾಗಿತ್ವದಲ್ಲಿ ಸ್ವಸಹಾಯ ಗುಂಪುಗಳಸದಸ್ಯರಾಗಿರುವ ಒಂದು ಲಕ್ಷ ಮಹಿಳೆಯರಿಗೆ ಕಾಫಿಉದ್ಯಮಿಗಳಾಗಲು ತರಬೇತಿ ನೀಡಲಾಗುವುದು. 2500 ಕಾಫಿಕಿಯೋಕ್ಸ್‍ಗಳನ್ನ 25 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಿ ಇದರಸಂಪೂರ್ಣ ನಿರ್ವಹಣೆಯನ್ನು ಮಹಿಳೆಯರೇ ಮಾಡಲಿದ್ದಾರೆಎಂದರು. ವಿದ್ಯಾರ್ಥಿನಿಯರು ಮತ್ತು ಉದ್ಯೋಗಸ್ಥ ಮಹಿಳೆಯರಿಗೆ ಕೈಗೆಟುಕುವದರದಲ್ಲಿ ರಾತ್ರಿ ತಂಗುವ ವ್ಯವಸ್ಥೆಯನ್ನು ಐದು ನಗರಗಳಲ್ಲಿ 2 ಕೋಟಿರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು. ಈ ವಸತಿ…
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು 7ನೇ ವೇತನ ಆಯೋಗ ಜಾರಿ ಹಾಗೂ ಅದರಂತೆ ವೇತನ ಪರಿಷ್ಕರಣೆ ಬಗ್ಗೆ ಎದುರು ನೋಡುತ್ತಿದ್ದಾರೆ. ಇಂತಹ ಸರ್ಕಾರಿ ನೌಕರರಿಗೆ ರಾಜ್ಯ ಬಜೆಟ್ ನಲ್ಲಿ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ. ಆ ಬಗ್ಗೆ ಮುಂದೆ ಓದಿ. ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕ ಪತ್ರ ಇಲಾಖೆಯು ವಿವಿಧ ಕಾನೂನಿನಡಿಯಲ್ಲಿ 7214 ಸಂಸ್ಥೆಗಳ ಶಾಸನಬದ್ಧ ಲೆಕ್ಕಪರಿಶೋಧಕರಾಗಿರುತ್ತದೆ. ಈ ಸಂಸ್ಥೆಗಳ ಲೆಕ್ಕಪರಿಶೋಧನೆಯಲ್ಲಿ ಏಕರೂಪತೆಯನ್ನು ತರಲು ಲೆಕ್ಕಪರಿಶೋಧನಾ ಕಾಯ್ದೆಯನ್ನು ಜಾರಿಗೆ ತರಲಾಗುವುದು ಎಂದರು. ಸಾರ್ವಜನಿಕರ ಕುಂದುಕೊರತೆ ಹಾಗೂ ಅಹವಾಲುಗಳಿಗೆ ನೇರ ಪರಿಹಾರ ಒದಗಿಸುವ ದೃಷ್ಟಿಯಿಂದ ಜನಸ್ಪಂದನ ಕಾರ್ಯಕ್ರಮವನ್ನು ರಾಜ್ಯ, ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ನಿಯಮಿತವಾಗಿ ಆಯೋಜಿಸಲಾಗುತ್ತಿದೆ ಎಂದರು. ಈ ವರೆಗೆ ರಾಜ್ಯಮಟ್ಟದ ಎರಡು ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಒಟ್ಟಾರೆ 18,000 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಮೊದಲ ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ ಅಹವಾಲುಗಳ ಪೈಕಿ ಶೇ.94ರಷ್ಟು ಅರ್ಜಿಗಳ್ನು ವಿಲೇವಾರಿ ಮಾಡಲಾಗಿದೆ ಎಂದರು. ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ 7ನೇ…